Author: admin

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಅವರ ಹಿರಿಯ ಸಹೋದರ ಕೂಡಾ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಪರಪ್ಪನ ಅಗ್ರಹಾರ ಸೇರಿದ್ದಾರೆ. ಇಬ್ಬರೂ ಕೂಡಾ ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದೇ ಸೆಲ್ ನಲ್ಲಿದ್ದಾರೆ. ಸದ್ಯ ಇಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಎರಡು ದಿನಗಳ ಹಿಂದಷ್ಟೇ ಪ್ರಜ್ವಲ್ ರೇವಣ್ಣರನ್ನು ಸೂರಜ್ ರೂಮಿಗೆ ಶಿಫ್ಟ್ ಮಾಡಲಾಗಿದೆ. ಆ ಕೊಠಡಿಯಲ್ಲಿ ಯಾವುದೇ ಸೌಲಭ್ಯಗಳಿಲ್ಲ. ಇಬ್ಬರೂ ಕೂಡಾ ಸಾಮಾನ್ಯ ಕೈದಿಗಳಂತೆ ಇದ್ದಾರೆ. ಇವರಿರುವ ರೂಮಿನಲ್ಲಿ ಟಿವಿ, ಮಂಚ ಏನೂ ಇಲ್ಲ. ಕೇವಲ ಚಾಪೆ ಹಾಗೂ ದಿಂಬು ಮಾತ್ರ ಇದೆ ಎಂದು ತಿಳಿದುಬಂದಿದೆ. ಅಣ್ಣ, ತಮ್ಮ ಇಬ್ಬರೂ ಆಕಡೆ ಮೂಲೆಗೊಂದು ಚಾಪೆ, ಈ ಕಡೆ ಮೂಲೆಗೊಂದು ಚಾಪೆ ಹಾಕಿಕೊಂಡು ಅದರ ಮೇಲೆ ಕುಳಿತು ಹರಟೆ ಹೊಡೆಯುತ್ತಿದ್ದಾರೆ ಎಂದು ಗೊತ್ತಾಗಿದೆ. ಹೊರಗೆ ಏನು ನಡೆಯುತ್ತಿದೆ. ರಾಜಕೀಯ ಹೇಗಿದೆ..? ಹೊರಗೆ ಜನ ಏನು ಮಾತನಾಡುತ್ತಿದ್ದಾರೆ ಇತ್ಯಾದಿಯ ಬಗ್ಗೆ ಮಾತುಕತೆ ನಡೆದಿದೆ ಎಂದು ವರದಿಯಾಗಿದೆ.…

Read More

ಚನ್ನಪಟ್ಟಣಕ್ಕೆ ಶಾಸಕರು ಇಲ್ಲದ ಕಾರಣ, ಈಗ ನಾನೇ ನಿಮ್ಮ ಮನೆ ಮಗ, ನಾನೇ ಸೇವಕ, ನಾನೇ ಶಾಸಕ, ನಾನೇ ಮಂತ್ರಿ, ನಾನೇ ಡಿಸಿಎಂ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ವಿರುಪಾಕ್ಷಿಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಅರಳಾಳುಸಂದ್ರದ ಶಾಲಾ ಆವರಣದಲ್ಲಿ ಸೋಮವಾರ ನಡೆದ ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಜನರ ಸೇವೆ ಮಾಡಲು ಉಪಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿದ್ದೇನೆ. ಜನಸೇವೆ ಮಾಡಲು ಮೊದಲು ಅವಕಾಶ ನೀಡಿದವರು ಚನ್ನಪಟ್ಟಣದ ಮತದಾರರು. ನಾನು ಜಾತಿ ನೋಡಿ ಜನಸೇವೆ ಮಾಡಿಲ್ಲ ನೀತಿ ನೋಡಿ ಕೆಲಸ ಮಾಡಿದ್ದೇನೆ” ಎಂದು ಹೇಳಿದರು. ನಿಮ್ಮ ಮನೆ ಬಾಗಿಲಿಗೆ ಅವಕಾಶ ಬಂದಿದೆ. ಯಾವುದೇ ಕಾರಣಕ್ಕೂ ಬಿಡಲು ಹೋಗಬೇಡಿ. ನಿಮ್ಮ ಮನೆ ಬಾಗಿಲಿಗೆ ಅಧಿಕಾರಿಗಳು, ಜನಪ್ರತಿನಿದಿಗಳು ಬಂದಿದ್ದಾರೆ. ನೀವು ನನ್ನ ಸೇವೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ನಿಮ್ಮ ಸೇವೆಗೆ ನನ್ನ ಕಚೇರಿ ಸದಾ ತೆರೆದಿರುತ್ತದೆ. ನನ್ನ ಕಚೇರಿಗೆ ಬಂದು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು” ಎಂದರು.…

Read More

ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋವಕಾಶ ನೀಡಲಾಗುತ್ತಿದ್ದು, ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಅದಕ್ಕಾಗಿ ಕನ್ನಡಿಗರಿಗೆ ಎಲ್ಲ ವಲಯದಲ್ಲಿ ಉದ್ಯೋಗ ಮೀಸಲಾತಿ ಕಲ್ಪಿಸುವ ಕಾಯ್ದೆ ಹಾಗೂ ಡಾ.ಸರೋಜಿ ಮಹಿಷಿ ವರದಿಯನ್ನು ಅನುಷ್ಟಾನಕ್ಕೆ ಕ್ರಮ ವಹಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ. ಸೋಮವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಕರವೇ ವತಿಯಿಂದ ನಡೆದ ಬೃಹತ್ ಧರಣಿಯಲ್ಲಿ ಮಾತನಾಡಿದ ಅವರು, ‘ಬೇರೆ ರಾಜ್ಯಗಳಿಂದ ಉದ್ಯೋಗಕ್ಕಾಗಿ ಬೆಂಗಳೂರಿಗೆ ವಲಸೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಅದಕ್ಕಾಗಿ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಲ್ಲಿ ಶೇ.100ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಮೇಲ್ದರ್ಜೆ ಹುದ್ದೆಗಳಲ್ಲಿ ಶೇ.80ರಷ್ಟು ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು. ಎಲ್ಲ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು ಎನ್ನುವ ಸರೊಜಿನಿ ಮಹಿಷಿ ವರದಿ 40 ವರ್ಷಗಳ ಹಿಂದೆ ಜಾರಿಯಾಗಬೇಕಿತ್ತು. ಆದರೆ ಅದು ಜಾರಿಯಾಗಿಲ್ಲ. ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು ಯಾವುದಕ್ಕೆ ಮಣಿದರೋ ಗೊತ್ತಿಲ್ಲ. ಅದಕ್ಕಾಗಿ ನಿರಂತರ ಹೋರಾಟ ಮಾಡುತ್ತಿದ್ದೇವೆ. ಎಲ್ಲ ಸರಕಾರದ ಮುಂದೆ…

Read More

ಲೋಕಸಭಾ ಚುನಾವಣೆಯಲ್ಲಿ ನಮಗೆ ಸೋಲಾಗಲು ಪ್ರಧಾನಿ ಮೋದಿಯವರ ಮೇಲಿನ ನಮ್ಮ ಅತಿಯಾದ ಆತ್ಮ ವಿಶ್ವಾಸ ಹಾಗೂ ಕಾರ್ಯಕರ್ತರ ಕಡಗಣನೆಯೇ ಕಾರಣ ಎಂದು ಮಾಜಿ ಸಿಎಂ ಡಿ.ವಿ ಸದಾನಂದಗೌಡ ಅಭಿಪ್ರಾಯಪಟ್ಟಿದ್ದಾರೆ. ನಾವು ವಿಧಾನಸಭಾ ಫಲಿತಾಂಶದ ಹಿನ್ನೆಡೆಯನ್ನು ಗಂಭೀರವಾಗಿ ಪರಿಗಣಿಸಬೇಕಿತ್ತು. ಕಾರ್ಯಕರ್ತರನ್ನು ಉತ್ತೇಜಿಸಿ ಚುನಾವಣೆ ಮಾಡುವ ಕೆಲಸ ಆಗಲಿಲ್ಲ. ಮೋದಿ ಹೆಸರಿನಲ್ಲಿ ಅತಿಯಾದ ಆತ್ಮವಿಶ್ವಾಸ ಬಿಜೆಪಿ 8 ಸೀಟ್ ಕಳೆದುಕೊಳ್ಳಲು ಕಾರಣವಾಯಿತು ಎಂದು ಅವರು ಹೇಳಿದ್ದಾರೆ. ಅಲ್ಲದೆ ಕಾಂಗ್ರೆಸ್ ಪವರ್ ಫುಲ್ ಆಗಿ ಕಾರ್ಯಾಚರಣೆಗೆ ಇಳಿದಿದೆ ಎಂಬುದನ್ನು ಊಹಿಸಲು ನಮ್ಮ ರಾಜ್ಯದ ಸಂಘಟನೆ ವಿಫಲವಾಯಿತು. ಜೆಡಿಎಸ್ ಜೊತೆಗಿದ್ದ ಕಾರಣಕ್ಕೆ ಹಳೇ ಮೈಸೂರು ಕಡೆ ನಮಗೆ ಗೆಲುವಾಗಿದೆ ಎಂದು ಜನ ಮಾತಾಡಲು ಆರಂಭಿಸಿದ್ದು ಬಿಜೆಪಿಗೆ ಸವಾಲಾಗಿದೆ ಎಂಬುದನ್ನೂ ಅವರು ಎಚ್ಚರಿಸಿದ್ದಾರೆ. ಇಷ್ಟೇ ಅಲ್ಲದೆ ರಾಜ್ಯ ನಾಯಕರ ವಿರುದ್ಧ ಸಿಡಿದೆದ್ದ ಅವರು ವಿಪಕ್ಷ ನಾಯಕ ಆರ್.ಅಶೋಕ್‍ಗೆ ಅಧ್ಯಯನದ ಕೊರತೆ ಇದೆ. ಸದನಕ್ಕೆ ಅಧ್ಯಯನ ಮಾಡಿ ಬರಬೇಕು. ಅಂಕಿ ಅಂಶಗಳ ಬಗ್ಗೆ ಮಾಹಿತಿ ಇರಬೇಕು. ವಿಪಕ್ಷ ನಾಯಕ ಅಂದರೆ…

Read More

ಬಿಹಾರ: ದೈಹಿಕ ಸಂಪರ್ಕ ಓಕೆ, ಈ ಮದುವೆ ಎಲ್ಲ ಯಾಕೆ ಎಂದು ಕೇಳಿದ ಪ್ರಿಯಕರನ ಖಾಸಗಿ ಅಂಗವನ್ನು ಕತ್ತರಿಸಿ ಟಾಯ್ಲೆಟ್ ಗೆ ಹಾಕಿ ಫ್ಲಶ್ ಮಾಡಿದ ಘಟನೆಯೊಂದು ಬಿಹಾರದ ಸರನ್ ಜಿಲ್ಲೆಯಲ್ಲಿ ನಡೆದಿದೆ. ಪಾಟ್ನಾದ ಮಧೌರದ 12ನೇ ವಾರ್ಡ್ನ ಕೌನ್ಸಿಲರ್ ವೇದ ಪ್ರಕಾಶ್ ನರ್ಸಿಂಗ್ ಹೋಮ್ ಮಾಲಕಿ ಜೊತೆ ಪ್ರೀತಿಯಲ್ಲಿದ್ದ. ಆಕೆಯ ಹಿಂದೆ ಬಿದ್ದು ಆಕೆಗೆ ತನ್ನ ಪ್ರೀತಿ ನಿವೇದನೆ ಮಾಡಿ ನಂತರ ಆಕೆ ಒಪ್ಪಿಗೆ ಕೊಟ್ಟು, ಇಬ್ಬರೂ ಒಬ್ಬರನ್ನೊಬ್ಬರು ಬಿಟ್ಟಿರಲಾರದ ಸ್ಥಿತಿಗೆ ಬಂದಿದ್ದಾರೆ. ಪ್ರೀತಿ, ಲೈಂಗಿಕ ಸಂಪರ್ಕ ಸುದೀರ್ಘ ವರ್ಷಗಳಿಂದ ಮುಂದುವರಿದಿದೆ. ಹೀಗಿರುವಾಗ ಗೆಳತಿ ಮದುವೆಯಾಗಬೇಕು ಎಂದು ಬೇಡಿಕೆಯಿಟ್ಟಿದ್ದಳು. ಆಕೆಯ ಒತ್ತಾಯದ ಸಹಿಸಲಾಗದೇ ಮದುವೆಗೆ ವೇದ ಪ್ರಕಾಶ್ ಒಪ್ಪಿಗೆ ನೀಡಿದ್ದಾನೆ. ಮದುವೆ ದಿನಾಂಕ ಫಿಕ್ಸ್ ಆಗಿದೆ. ಎಲ್ಲಾ ತಯಾರಿ ಮಾಡಲಾಗಿದೆ. ಮನೆಯಲ್ಲಿ ಸಂಭ್ರಮದ ವಾತಾವರಣ. ಮದುವೆ ದಿನಾಂಕ ಹತ್ತಿರ ಬರುತ್ತಿದ್ದಂತೆ ನಾನು ಮದುವೆಯಾಗಲ್ಲ ಎಂದು ಹೇಳಿದ್ದಾನೆ. ಹೀಗೇ ಇರೋಣ, ಮದುವೆ ಯಾಕೆ ಎಂದು ಪ್ರಶ್ನೆ ಮಾಡೋಕೆ ಶುರು ಮಾಡಿದ್ದಾನೆ. ಗೆಳತಿ…

Read More

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಹುಡುಗಿಯನ್ನು ಯುವಕನೊಬ್ಬ ಅಪಹರಿಸಿರುವ ಬಗ್ಗೆ ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ಪೊಲೀಸರು ದೂರು ನೀಡಿರುವ ಘಟನೆ ವರದಿಯಾಗಿದೆ. ಶಂಕರ್ ಎಂಬ ಯುವಕ 16 ರ ಹರೆಯದ ಬಾಲಕಿಯನ್ನು ಕಿಡ್ನಾಪ್ ಮಾಡಿರುವುದಾಗಿ ದೂರಲ್ಲಿ ತಿಳಿಸಲಾಗಿದೆ. ಬಾಲಕಿ ಕಿಡ್ನಾಪ್ ಆಗಿ 14 ದಿನಗಳಾಗಿದ್ದು, ಪೋಷಕರು ಚಿಂತಾಕ್ರಾಂತರಾಗಿದ್ದಾರೆ. ಕಾಲೇಜಿಗೆಂದು ಹೋದ ಮಗಳು ನಂತರ ಕಾಲೇಜಿನಿಂದ ವಾಪಸ್ ಬಾರದ ಕಾರಣ ಕುಟುಂಬಸ್ಥರಿಂದ ಹುಡುಕಾಟ ನಡೆದಿದೆ. ಮೊಬೈಲ್ ಫೋನ್ ಗೆ ಕರೆ ಮಾಡಿದರೆ ಸ್ವಿಚ್ ಆಫ್ ಆಗಿದೆ ಎಂದು ಪೋಷಕರು ದೂರಿನಲ್ಲಿ ಪೊಲೀಸರಿಗೆ ತಿಳಿಸಿದ್ದಾರೆ. ಶಂಕರ್ ಮೊಬೈಲ್ ಟ್ರೇಸ್ ಮಾಡಿದಾಗ ಚಿಕ್ಕಬಳ್ಳಾಪುರದಲ್ಲಿ ಶಂಕರ್ ಬೈಕ್ ಪತ್ತೆಯಾಗಿದೆ. ಸಿಸಿಟಿವಿ ಪರಿಶೀಲನೆಯಲ್ಲಿ ಆಂಧ್ರದ ಕರ್ನೂಲ್ ಬಸ್ಸು ಹತ್ತಿ ತೆರಳಿರುವುದು ಕಂಡು ಬಂದಿದೆ. ಹೀಗಾಗಿ ಆಂಧ್ರಪ್ರದೇಶಕ್ಕೆ ತೆರಳಿ ತಲೆ ಮರೆಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ:…

Read More

ಲೋನಾವಾಲಾದ ಭೂಶಿ ಅಣೆಕಟ್ಟಿನ ನೀರಿನಲ್ಲಿ ಕೊಚ್ಚಿ ಹೋಗಿ ನಾಲ್ವರು ಮಕ್ಕಳು ಮತ್ತು ಮಹಿಳೆ ಸೇರಿದಂತೆ ಐದು ಜನರು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದು, ಇನ್ನೂ ಐವರು ಈಜಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಳಕಿಗೆ ಬಂದಿದೆ. ಭಾನುವಾರ ಪುಣೆಯ ಹಡಪ್ಸರ್‌ ನ ಲಿಯಾಕತ್ ಅನ್ಸಾರಿ ಮತ್ತು ಯೂನಸ್ ಖಾನ್ ಅವರ ಕುಟುಂಬ ಸದಸ್ಯರು ಭೂಶಿ ಅಣೆಕಟ್ಟಿಗೆ ಭೇಟಿ ನೀಡಿದ್ದರು. ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಏಕಾಏಕಿ ನೀರಿನ ಮಟ್ಟ ಹೆಚ್ಚಾದ ಪರಿಣಾಮ 10 ಮಂದಿ ಕುಟುಂಬದವರು ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.  ಈ ಪೈಕಿ ಐವರು ಈಜಿ ಪ್ರಾಣ ಕಾಪಾಡಿಕೊಂಡಿದ್ದು, 5 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮಾಹಿತಿಯ ಪ್ರಕಾರ, ಮೃತರನ್ನು ಸಹಿಸ್ತಾ ಲಿಯಾಕತ್ ಅನ್ಸಾರಿ (36), ಅಮಿಮಾ ಆದಿಲ್ ಅನ್ಸಾರಿ (13), ಉಮೇರಾ ಅಲಿಯಾಸ್ ಸಲ್ಮಾನ್ ಆದಿಲ್ ಅನ್ಸಾರಿ (8) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನೂ ಇಬ್ಬರು ಕಾಣೆಯಾಗಿದ್ದಾರೆ. ನಾಪತ್ತೆಯಾದವರನ್ನು ಅದ್ನಾನ್ ಶಾಬತ್ ಅನ್ಸಾರಿ (4), ಮತ್ತು ಮರಿಯಾ ಅನ್ಸಾರಿ (9) ಎಂದು…

Read More

ವಿಪರೀತ ಮಳೆಯಿಂದ ಆಗುಂಬೆ ಘಾಟ್‌ ನಲ್ಲಿ ಭೂಕುಸಿತದ ಭೀತಿ ಎದುರಾಗಿದ್ದು, ಈ ಹಿನ್ನೆಲೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಮತ್ತು ಭಾರೀ ವಾಹನಗಳ ದಟ್ಟಣೆಯಿಂದ ಉಂಟಾದ ಸುರಕ್ಷತಾ ಕಾಳಜಿಗಳನ್ನು ಉಲ್ಲೇಖಿಸಿ ಆಗುಂಬೆ ಘಾಟ್‌ನಲ್ಲಿ  ಭಾರೀ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಮೋಟಾರು ವಾಹನ ಕಾಯ್ದೆ 1988ರ ಸೆಕ್ಷನ್ 115 ಮತ್ತು ಕರ್ನಾಟಕ ಮೋಟಾರು ವಾಹನ ಕಾಯ್ದೆ 1989ರ ಸೆಕ್ಷನ್ 221(ಎ)(2) ಅಡಿಯಲ್ಲಿ ಈ ಆದೇಶ  ಹೊರಡಿಸಲಾಗಿದ್ದು, ಸೆಪ್ಟೆಂಬರ್ 15ರವರೆಗೆ ಆಗುಂಬೆ ಘಾಟ್‌ನಲ್ಲಿ ವಾಹನ ಸಂಚಾರ ನಿಷೇಧ ಜಾರಿಯಲ್ಲಿರಲಿದೆ. ಆಗುಂಬೆ ಘಾಟ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎಯ ತೀರ್ಥಹಳ್ಳಿ-ಮಲ್ಪೆ ರಸ್ತೆಯಲ್ಲಿ ಲಘು ವಾಹನಗಳಿಗೆ ಮಾತ್ರ ಅನುಮತಿ ನೀಡಲಾಗುತ್ತದೆ. ತೀರ್ಥಹಳ್ಳಿಯಿಂದ ಉಡುಪಿಗೆ ತೆರಳುವ ಭಾರಿ ವಾಹನಗಳು ತೀರ್ಥಹಳ್ಳಿ-ಮಾಸ್ತಿಕಟ್ಟೆ-ಸಿದ್ದಾಪುರ-ಕುಂದಾಪುರ ಮಾರ್ಗವಾಗಿ ಸಂಚರಿಸುವಂತೆ ಸೂಚಿಸಲಾಗಿದೆ. ವ್ಯತಿರಿಕ್ತವಾಗಿ ಉಡುಪಿಯಿಂದ ತೀರ್ಥಹಳ್ಳಿಗೆ ತೆರಳುವ ಭಾರಿ ವಾಹನಗಳು ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ ಮಾರ್ಗವಾಗಿ ಸಂಚರಿಸಬೇಕು ಎಂದು ತಿಳಿಸಲಾಗಿದೆ. ಒಂದು ವೇಳೆ ಭೂಕುಸಿತಗಳು ಆದಲ್ಲಿ ಅಪಾಯಗಳನ್ನು ತಗ್ಗಿಸಲು, ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಹಾನಿಯನ್ನು ಕಡಿಮೆ ಮಾಡಲು, ಅಧಿಕಾರಿಗಳು…

Read More

ರಾಜ್ಯದಲ್ಲಿ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ  ದಿನಾಂಕ ಫಿಕ್ಸ್ ಆಗಿದ್ದು ಜುಲೈ 15ರಿಂದ 26ರವರೆಗೆ  ಅಧಿವೇಶನ ನಡೆಯಲಿದೆ. ಈ ಬಾರಿ 10 ದಿನಗಳ ಕಾಲ ಮುಂಗಾರು ಅಧಿವೇಶನ ನಡೆಯಲಿದ್ದು ಹಲವು ವಿಚಾರಗಳು ಚರ್ಚೆಗೆ ಬರಲಿವೆ.  ಈ ಕುರಿತು ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾಹಿತಿ ನೀಡಿದ್ದು , ಕರ್ನಾಟಕ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವನ್ನು ದಿನಾಂಕ: 15.07.2024 ರಿಂದ 26.07.2024 ರವರೆಗೆ ಕರೆಯಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಜೂನ್ 20 ರಂದು  ನಡೆದ ಸಚಿವ ಸಂಪುಟ ಸಭೆಯಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಅಧಿವೇಶನದ ದಿನಾಂಕ ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಅಧಿಕಾರ ನೀಡಲಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅಧಿವೇಶನದ ದಿನಾಂಕವನ್ನ ಅಂತಿಮಗೊಳಿಸಿದ್ದು ಜುಲೈ 15ರಿಂದ ಅಧಿವೇಶನ ಆರಂಭವಾಗಿ ಜುಲೈ 26 ರಂದು ಕೊನೆಗೊಳ್ಳಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಸಂಸತ್ತಿನ ಕೆಳಮನೆ, ಲೋಕಸಭೆಯಲ್ಲಿ ಸೋಮವಾರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮೊಂದಿಗೆ ಭಗವಾನ್ ಶಿವ ಮತ್ತು ಸಿಖ್ ಗುರು ಶ್ರೀ ಗುರುನಾನಕ್ ದೇವ್ ಅವರ ಪೋಸ್ಟರ್‌ ಪ್ರದರ್ಶಿಸುವ ಮೂಲಕ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ  “ವ್ಯವಸ್ಥಿತ ಮತ್ತು ಪೂರ್ಣ ಪ್ರಮಾಣದ ಆಕ್ರಮಣ” ನಡೆಸಿದರು. 18ನೇ ಲೋಕಸಭೆಯ ಅಧಿವೇಶನದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, “ಭಾರತದ ಕಲ್ಪನೆ, ಸಂವಿಧಾನ ಮತ್ತು ಸಂವಿಧಾನದ ಮೇಲಿನ ದಾಳಿಯನ್ನು ವಿರೋಧಿಸಿದ ಜನರ ಮೇಲೆ ವ್ಯವಸ್ಥಿತ ಮತ್ತು ಪೂರ್ಣ ಪ್ರಮಾಣದ ದಾಳಿ ನಡೆದಿದೆ” ಎಂದು ದೂಷಿಸಿದರು. ಕೆಲವು ನಾಯಕರು ಇನ್ನೂ ಜೈಲಿನಲ್ಲಿದ್ದಾರೆ ಎಂದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ,  “ಅಧಿಕಾರ ಮತ್ತು ಸಂಪತ್ತಿನ ಕೇಂದ್ರೀಕರಣ, ಬಡವರು ಮತ್ತು ದಲಿತರು ಮತ್ತು ಅಲ್ಪಸಂಖ್ಯಾತರ ಮೇಲಿನ ಆಕ್ರಮಣದ ಕಲ್ಪನೆಯನ್ನು ವಿರೋಧಿಸುವ ಸರ್ವರನ್ನು ಹತ್ತಿಕ್ಕಲಾಯಿತು” ಎಂದರು. ಭಾರತ ಸರ್ಕಾರದ ಆದೇಶದಿಂದ ಭಾರತದ ಪ್ರಧಾನ ಮಂತ್ರಿಯ ಆದೇಶದ ಮೇರೆಗೆ ನನ್ನ ಮೇಲೆ ದಾಳಿ ಮಾಡಲಾಯಿತು. ಅದರಲ್ಲಿ ಅತ್ಯಂತ ಆನಂದದಾಯಕ ಭಾಗವೆಂದರೆ ED ಯ…

Read More