Subscribe to Updates
Get the latest creative news from FooBar about art, design and business.
- ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
- ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
- ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
- ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
- ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
- ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
- ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
Author: admin
ಕೇರಳ : ನೆರೆಯ ರಾಜ್ಯ ಕೇರಳದಲ್ಲಿ ಕಳೆದ ಆರು ತಿಂಗಳಲ್ಲಿ 27 ಮಂದಿ ಕಾಮಾಲೆಗೆ ಬಲಿಯಾಗಿದ್ದಾರೆ. ಜೂನ್ ತಿಂಗಳೊಂದರಲ್ಲೇ ಐದು ಸಾವು ಸಂಭವಿಸಿದೆ. ಬಾಧಿತರಾದವರಲ್ಲಿ ಹೆಚ್ಚಿನವರು ಯುವಕರಾಗಿದ್ದಾರೆ. ಪ್ರತಿನಿತ್ಯ ಜ್ವರ ಪೀಡಿತರ ಸಂಖ್ಯೆ ಹತ್ತು ಸಾವಿರ ದಾಟಿದೆ. ಈ ತಿಂಗಳೊಂದರಲ್ಲೇ 690 ಮಂದಿಗೆ ಜಾಂಡೀಸ್ ಇರುವುದು ಪತ್ತೆಯಾಗಿದೆ. ಸೋಂಕಿತರಲ್ಲಿ ಹೆಚ್ಚಿನವರು ಉತ್ತರದ ಜಿಲ್ಲೆಗಳಿಂದ ಬಂದವರಾಗಿದ್ದಾರೆ. ಜ್ವರ ಪೀಡಿತರ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, ಪ್ರತಿನಿತ್ಯ ಜ್ವರ ಪೀಡಿತರ ಸಂಖ್ಯೆ ಹತ್ತು ಸಾವಿರ ದಾಟಿದೆ. ಇದರ ಜೊತೆಗೆ ಡೆಂಗ್ಯೂ ಮತ್ತು ರೇಬಿಸ್ ಪ್ರಕರಣಗಳೂ ಹೆಚ್ಚುತ್ತಿರುವುದರಿಂದ ಕೇರಳ ಆರೋಗ್ಯ ಇಲಾಖೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ. ಮಲಪ್ಪುರಂ ವಲ್ಲಿಕುಂ ಪ್ರದೇಶದಲ್ಲಿ ಹಳದಿ ಜ್ವರ ಹರಡುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಕಲಬುರಗಿ: ತಾಲ್ಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ ಸಿಡಿಲಿನಿಂದಾಗಿ ಮನೆಯೊಂದಕ್ಕೆ ಬೆಂಕಿ ಹತ್ತಿಕೊಂಡ ಘಟನೆ ನಡೆದಿದ್ದು, ಘಟನೆಯಿಂದ ಮನೆಯಿಡೀ ಹೊತ್ತಿ ಉರಿದಿದೆ. ಹೊನ್ನಕಿರಣಗಿ ಗ್ರಾಮದ ರಾಜ್‌ಕುಮಾರ್ ನಿಂಗಯ್ಯ ಕೋಣಿನ್ ಎಂಬುವವರ ಮನೆಗೆ ಸಿಡಿಲಿನಿಂದಾಗಿ ಬೆಂಕಿ ಬಿದ್ದಿದೆ. ಪರಿಣಾಮವಾಗಿ ಇಡೀ ಮನೆ ಸುಟ್ಟುಹೋಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಇತರ ಮನೆಗಳಿಗೂ ಬೆಂಕಿ ಹರಡುವ ಅಪಾಯವಿತ್ತು. ಆದ್ರೆ ಅದನ್ನು ತಡೆಯಲಾಗಿದೆ. ಮನೆಯಲ್ಲಿದ್ದವರನ್ನು ರಕ್ಷಣೆ ಮಾಡಲಾಗಿದ್ದು, ಅವರು ಸೇಫಾಗಿದ್ದಾರೆ.. ಆದ್ರೆ ಮನೆಯಲ್ಲಿ ಎಲ್ಲಾ ವಸ್ತುಗಳೂ ಬೆಂಕಿಗೆ ಆಹುತಿಯಾಗಿವೆ. ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿ ಈ ಘಟನೆ ನಡೆದಿದ್ದು, ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಡೆಂಘಿ ಹಾವಳಿ ಹೆಚ್ಚಾಗಿದ್ದು, ರಾಜ್ಯದಲ್ಲಿ ಕಳೆದ ಆರು ತಿಂಗಳಲ್ಲಿ ಸುಮಾರು 2,457 ಮಂದಿಗೆ ಡೆಂಘೀ ಕಾಣಿಸಿಕೊಂಡಿದೆ. ಕೆಲ ದಿನಗಳಿಂದ ಡೆಂಘಿ ಹರಡುವಿಕೆ ಹೆಚ್ಚಾಗಿದ್ದು, ಅನಾರೋಗ್ಯದಿಂದ ನೂರಾರು ಜನ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮಾಹಿತಿ ಪ್ರಕಾರ ಬೆಂಗಳೂರು ನಗರವೊಂದರಲ್ಲೇ ಪ್ರತಿ ಎರಡು ಗಂಟೆಗೆ ಇಬ್ಬರಲ್ಲಿ ಡೆಂಘಿ ಲಕ್ಷಣಗಳು ಕಂಡುಬರುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲೂ ಇದರ ಹಾವಳಿ ಹೆಚ್ಚಾಗುತ್ತಿದೆ. ಆದ್ರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟೆಸ್ಟಿಂಗ್ ಕಿಟ್ ಗಳ ಕೊರತೆ ಇರುವುದರಿಂದ ಪರದಾಟ ಹೆಚ್ಚಾಗುತ್ತಿದೆ. ಬಡವರು ಖಾಸಗಿ ಆಸ್ಪತ್ರೆಗಳಿಗೆ ಹೋಗಲಾಗದೇ ಒದ್ದಾಡುತ್ತಿದ್ದಾರೆ. ಬೆಂಗಳೂರಿನ ಆರೋಗ್ಯ ಕೇಂದ್ರಗಳಲ್ಲಿ ಟೆಸ್ಟಿಂಗ್ ಕಿಟ್ ಗಳ ದಾಸ್ತಾನಿಲ್ಲ. ನಗರದ ಆಸ್ಪತ್ರೆಗಳಲ್ಲಿ ದಿನಕ್ಕೆ ಈಗ ಕೇವಲ 200 ರಿಂದ 250 ಟೆಸ್ಟ್ ಗಳನ್ನಷ್ಟೇ ಮಾಡಲಾಗುತ್ತಿದೆ. ಇದೀಗ 30 ಸಾವಿರ ಟೆಸ್ಟಿಂಗ್ ಕಿಟ್ ಪೂರೈಸುವಂತೆ ಕೆಎಸ್ ಎಂಸಿಗೆ ಪಾಲಿಕೆ ಬೇಡಿಕೆ ಇಟ್ಟಿದೆ. ಇನ್ನು ಮೈಸೂರು, ಹಾಸನ, ಗದಗ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೂಡಾ ಡೆಂಘೀ ಹಾವಳಿ ಜಾಸ್ತಿಯಾಗಿದೆ. ನಮ್ಮತುಮಕೂರಿನ ಕ್ಷಣ…
ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಹಾಗೂ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಇಂದು ಬೆಂಗಳೂರು ಸೇರಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟಕ್ಕೆ ಕರೆ ನೀಡಲಾಗಿದೆ. ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ‘ಸಿ ಮತ್ತು ಡಿ’ ದರ್ಜೆಯ ಹುದೆಗಳಲ್ಲಿ ಶೇ.100ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಖಾಸಗಿ ಸಂಸ್ಥೆಗಳ ಇತರೆ ಹುದ್ದೆಯಲ್ಲಿ ಶೇ.80ರಷ್ಟು ಕನ್ನಡಿಗರಿಗೆ ಮೀಸಲಿಡಬೇಕು ಎಂದು ಕರವೇ ಆಗ್ರಹಿಸಿದೆ. ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946ರ ಅನ್ವಯ ಬಲಿಷ್ಠ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು. 15 ವರ್ಷ ರಾಜ್ಯದಲ್ಲಿದ್ದವರಿಗೆ ಕನ್ನಡಿಗರೆಂದು ಪರಿಗಣಿಸುವ ನಿಯಮವಿದ್ದು, ಅಂತವರಿಗೆ ಕನ್ನಡ ಪರೀಕ್ಷೆ ನಡೆಸಿ ಉತ್ತೀರ್ಣರಾದರೆ ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು ಎಂದು…
ಬೆಂಗಳೂರು: ಅಪಹರಣ ಪ್ರಕರಂಕ್ಕೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆಯೊಂದರ ಅಧ್ಯಕ್ಷ ಸೇರಿದಂತೆ ಆರು ಜನರ ವಿರುದ್ಧ ಇಲ್ಲಿನ ಶಂಕರಪುರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿರುವುದಾಗಿ ವರದಿಯಾಗಿದೆ. ಮಂಜುನಾಥ್ ಎಂಬಾತನನ್ನು ಅಪಹರಿಸಿದ್ದ ಆರೋಪದಡಿ ಕನ್ನಡ ಪರ ಸಂಘಟನೆಯೊಂದರ ಅಧ್ಯಕ್ಷ ಪ್ರಕಾಶ್, ಮಂಜುಳಾ ಎಂಬಾಕೆ ಸೇರಿದಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬ್ಯಾಂಕ್ ಉದ್ಯೋಗಿಯಾಗಿರುವ ಮಂಜುನಾಥ್, ಆರೋಪಿ ಮಂಜುಳಾ ಬಳಿ 8 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ವಾಪಸ್ ನೀಡಲಾಗದಿದ್ದಾಗ ಮಂಜುನಾಥ್ ವಿರುದ್ಧ ಮಂಜುಳಾ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಎ.4ರಂದು ಕೊರಿಯರ್ ಬಂದಿರುವುದಾಗಿ ಮಂಜುನಾಥ್ ಗೆ ಕರೆ ಮಾಡಿದ್ದ ಆರೋಪಿಗಳು, ಶಂಕರಮಠ ರಸ್ತೆಯ ಬಳಿ ಕರೆಸಿಕೊಂಡಿದ್ದಾರೆ. ಈ ವೇಳೆ ಮಂಜುಳಾ ಸೇರಿದಂತೆ ಕೆಲ ಮಹಿಳೆಯರು ಕಾರಿನಲ್ಲಿ ಬಂದು ಮಂಜುನಾಥ್ ಅವರನ್ನು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕಾರಿನಲ್ಲಿದ್ದ ಪ್ರಕಾಶ್ ಮತ್ತು ಆತನ ಚಾಲಕ ವೆಂಕಟಾಚಲಪತಿ, ಮಹಿಳೆಯರೊಂದಿಗೆ ಸೇರಿ ತನ್ನ ಕಚೇರಿಗೆ ಕರೆದೊಯ್ದು ಥಳಿಸಿದ್ದಾರೆ. ಬಳಿಕ ಹಣ,…
ಬೆಂಗಳೂರು: ಯುವಕನನ್ನು ಅಪಹರಿಸಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಇಲ್ಲಿನ ಹಲಸೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಜೂ.16ರಂದು ಅಜ್ಮೀರಾ ರಾಜು ಎಂಬಾತನನ್ನು ಕಾರಿನಲ್ಲಿ ತೆಲಂಗಾಣಕ್ಕೆ ಕರೆದೊಯ್ದು ಹಲ್ಲೆಗೈದ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಕೆಲಸ ಮಾಡಿಕೊಂಡಿದ್ದ ಅಜ್ಮೀರಾ ರಾಜು ಎಂಬಾತ, ಐಷಾರಾಮಿ ಕಾರು, ವಿದೇಶ ಪ್ರವಾಸ, ಕ್ರಿಕೆಟರ್ಸ್ ಜೊತೆ ಫೋಟೋಸ್ ಎಂದೆಲ್ಲಾ ವಿಲಾಸಿ ಜೀವನ ಶೈಲಿ ಹೊಂದಿದ್ದ ಎಂದು ತಿಳಿದುಬಂದಿದೆ. ಆರೇಳು ತಿಂಗಳುಗಳಿಂದ ಬೆಂಗಳೂರಿನ ಎಂ.ಜಿ.ರಸ್ತೆಯ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದ. ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯನಾಗಿದ್ದ ಅಜ್ಮೀರಾ ರಾಜು ಜೀವನ ಶೈಲಿ ಗಮನಿಸಿದ್ದ ಆರೋಪಿಗಳು ಅಪಹರಿಸಲು ಸಂಚು ರೂಪಿಸಿದ್ದರು. ಜೂ.16ರಂದು ರಾತ್ರಿ ಸ್ನೇಹಿತನೊಂದಿಗೆ ಊಟಕ್ಕೆಂದು ತೆರಳಿದ್ದ ಅಜ್ಮೀರಾ ರಾಜುನನ್ನು ಆರೋಪಿಗಳು ಕಾರಿನಲ್ಲಿ ಹಿಂಬಾಲಿಸಿದ್ದರು. ಇದನ್ನು ಗಮನಿಸಿದ್ದ ಅಜ್ಮೀರಾ ರಾಜು, ದ್ವಿಚಕ್ರ ವಾಹನ ನಿಲ್ಲಿಸಿ ಆರೋಪಿಗಳ ಕಾರಿನ ಬಳಿ ಹೋದಾಗ ಆತನನ್ನು ಬಲವಂತವಾಗಿ ಕಾರಿನಲ್ಲಿ ಅಪಹರಿಸಿಕೊಂಡು ತೆರಳಿದ್ದರು. ತೆಲಂಗಾಣಕ್ಕೆ ಕರೆದೊಯ್ದು ಫಾರ್ಮ್ ಹೌಸ್…
ಜುಲೈ ತಿಂಗಳು ಆರಂಭವಾಗಿದೆ. ತಿಂಗಳ ಮೊದಲ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ನವೀಕರಿಸಿವೆ. ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ಬೆಲೆಯನ್ನು 30 ರೂ. ಇಳಿಕೆ ಮಾಡಿದೆ. ಸತತ ಮೂರನೇ ತಿಂಗಳು ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆಯಾಗಿದೆ. ದೇಶೀಯ ಸಿಲಿಂಡರ್ ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಸಿಲಿಂಡರ್‌ಗಳ ಹೊಸ ದರಗಳು ಇಂದಿನಿಂದ ಜಾರಿಗೆ ಬಂದಿವೆ. ಇಂದಿನಿಂದ ವಾಣಿಜ್ಯ ಸಿಲಿಂಡರ್‌ಗಳು ಹೊಸ ದರದಲ್ಲಿ ಲಭ್ಯವಾಗಲಿದೆ. ವಾಣಿಜ್ಯ ಸಿಲಿಂಡರ್ ನ ಇತ್ತೀಚಿನ ದರಗಳು: * ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1676 ರೂ. ಇಂದಿನಿಂದ ಅವುಗಳ ಬೆಲೆ 1646 ರೂ. * ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1756 ರೂ.. * ಮುಂಬೈನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1598 ರೂ. * ಚೆನ್ನೈನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1840.50 ರೂ. ಇಂದಿನಿಂದ ಅವುಗಳ ಬೆಲೆ 1809.50 ರೂ. ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ದರ್ಶನ್ ನನ್ನ ಮುಂದೆಯೇ ರೇಣುಕಾಸ್ವಾಮಿಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿ ಪವಿತ್ರಾಗೌಡ ಪೊಲೀಸರ ಮುಂದೆ ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿಯಾಗಿದ್ದು, ಕೇಸ್ ಗೆ ಸಂಬಂಧಿಸಿಸಿದಂತೆ ಪ್ರಮುಖ ವಿಚಾರಗಳನ್ನು ತನಿಖೆ ವೇಳೆ ಬಾಯ್ಬಿಟ್ಟಿರುವುದಾಗಿ ವರದಿ ತಿಳಿಸಿದೆ. ಸದ್ಯ 17 ಜನ ಆರೋಪಿಗಳನ್ನು ಈ ಕೇಸಿನಲ್ಲಿ ವಿಚಾರಣಾಧೀನ ಕೈದಿಗಳಾಗಿ ಜೈಲಿನಲ್ಲಿರಿಸಲಾಗಿದೆ. ಪವಿತ್ರಾ ಗೌಡ ಅವರು ಒಂದು ವಾರದಲ್ಲೇ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಈ ಮೂಲಕ ನಟ ದರ್ಶನ್ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಪಟ್ಟಣಗೆರೆ ಶೆಡ್ ನಲ್ಲಿ ರೇಣುಕಾಸ್ವಾಮಿಯನ್ನು ಕೂಡಿಹಾಕಿದ್ದು, ನಂತರ ನಾನು ಒಂದು ಏಟು ಚಪ್ಪಲಿಯಲ್ಲಿ ಹೊಡೆದಿದ್ದು, ಅನಂತರ ನನ್ನ ಎದುರಿನಲ್ಲಿಯೇ ರೇಣುಕಾಸ್ವಾಮಿಯ ಮೇಲೆ ನಟ ದರ್ಶನ್ ಹಲ್ಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಈ ಮೂಲಕ ನಟ ದರ್ಶನ್ ವಿರುದ್ಧವಾಗಿಯೇ ನಟಿ ಪವಿತ್ರಾ ಗೌಡ ಹೇಳಿಕೆ ನೀಡಿದ್ದಾಳೆ. ದರ್ಶನ್ ರೇಣುಕಾಸ್ವಾಮಿಯ ಮೇಲೆ ಹಲ್ಲೆ ಮಾಡಿದ್ದು ನಿಜ, ನಾನು ಶೆಡ್…
ಉತ್ತರ ಪ್ರದೇಶದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಏನು ಎನ್ನುವುದಕ್ಕೆ ಬಿಜೆಪಿಯ ಮಾತೃ ಸಂಸ್ಥೆ ಆರ್ ಎಸ್ ಎಸ್ ಉತ್ತರ ನೀಡಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗಲು ದಲಿತ ಮತ್ತು ಹಿಂದುಳಿದ ವರ್ಗಗಳ ಮತಬ್ಯಾಂಕ್ ವಿಭಜನೆಯಾಗಿದ್ದೇ ಪ್ರಮುಖ ಕಾರಣವಂತೆ ಅಲ್ಲದೇ ಹಲವು ಕಾರಣಗಳನ್ನು ಆರ್ ಎಸ್ ಎಸ್ ನೀಡಿದೆ. * ದಲಿತ ಮತ್ತು ಹಿಂದುಳಿದ ವರ್ಗದ ಮತಗಳನ್ನು ಸೆಳೆಯುವಲ್ಲಿ ಕಾಂಗ್ರೆಸ್–ಸಮಾಜವಾದಿ ಮೈತ್ರಿಕೂಟ ಯಶಸ್ವಿಯಾಗಿದ್ದು ಬಿಜೆಪಿ ಹಿನ್ನಡೆಗೆ ಕಾರಣವಾಯ್ತು. * ನಿರುದ್ಯೋಗ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಯುವಕರಲ್ಲಿ ಹೆಚ್ಚುತ್ತಿರುವ ಕೋಪವೇ ಬಿಜೆಪಿಯ ಹಿನ್ನಡೆಗೆ ಮತ್ತೊಂದು ಕಾರಣ ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಬಿಜೆಪಿಯ ಚುನಾವಣಾ ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಮೂರು ದಿನಗಳ ಕಾಲ ನಡೆಸಿದ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೀನಾಯ ಸೋಲಿನಿಂದ ಪಾಠ ಕಲಿತ ಬಿಜೆಪಿ ಮಾತೃ ಸಂಸ್ಥೆಯಾದ ಸಂಘವು ಈಗ ಉದ್ಯೋಗ ಹೆಚ್ಚಿಸುವಂತಹ ವಿಷಯಗಳಲ್ಲಿ ಕೆಲಸ…
ತುಮಕೂರು: ಸರ್ಕಾರವೇ ನೇರವಾಗಿ ಜನರ ಬಳಿಗೆ ಬಂದು ಅವರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಜನ ಸ್ಪಂದನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದ್ದು, ರೈತರನ್ನು ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸದೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ತಿಪಟೂರು ಶಾಸಕ ಕೆ. ಷಡಕ್ಷರಿ ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ತಿಪಟೂರು ತಾಲ್ಲೂಕು ನೊಣವಿನಕೆರೆ ಗ್ರಾಮದ ಉಡಿಸಲ ಕೆಂಪಮ್ಮದೇವಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಾರ್ವಜನಿಕರ ಸಮಸ್ಯೆಗಳನ್ನು ತಳಮಟ್ಟದಲ್ಲೇ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಮಹತ್ವದ ಕಾರ್ಯಕ್ರಮ ಇದಾಗಿದ್ದು, ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ತಿಳಿಸುವ ಮೂಲಕ ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು. ತಾಲ್ಲೂಕಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಪವತಿ ಖಾತೆ, ಪಹಣಿ, ನಕಾಶೆ ರಸ್ತೆ, ವಾಡಿಕೆ ರಸ್ತೆ, ಜಮೀನು ಒತ್ತುವರಿಯಂತಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಅವುಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ನಂತರ ಮಾತನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು,…