Subscribe to Updates
Get the latest creative news from FooBar about art, design and business.
- ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
- ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
- ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
- ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
- ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
- ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
- ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
Author: admin
ಚಿಕ್ಕಮಗಳೂರು: 6 ವರ್ಷದ ಬಾಲಕಿ ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಸಾನಿಯಾ ಎಂದು ಗುರುತಿಸಲಾಗಿದೆ. ಕಳೆದ 4 ದಿನಗಳ ಹಿಂದೆ ಸೋಂಕಿಗೆ ತುತ್ತಾಗಿದ್ದ ಬಾಲಕಿಯನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿ ಚೇತರಿಸಿಕೊಳ್ಳದ ಕಾರಣ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ಬಾಲಕಿಯನ್ನ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಜೂ.29 ರಾತ್ರಿ ಮೃತಪಟ್ಟಿದ್ದಾಳೆ. ಡೆಂಗ್ಯೂ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ಸಿಗದ ಕಾರಣದಿಂದ ತನ್ನ ಮಗಳು ಸಾವಿಗೀಡಾಗಿದ್ದಾಳೆಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ಮಗಳ ಚಿಕಿತ್ಸೆಗಾಗಿ ಬಾಲಕಿ ಪೋಷಕರು 4 ಲಕ್ಷ ರೂ. ಖರ್ಚು ಮಾಡಿದ್ದರು. ಆದರೂ ಬಾಲಕಿಯನ್ನು ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಂದೆ ಕಣ್ಣೀರಿಟ್ಟಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಸೋಂಕಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಇದರಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದೆ. ಸಕಾಲದಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಕ್ಕಿದ್ದರೆ ಮಗಳು ಬದುಕುತ್ತಿದ್ದಳು ಎಂದು ಬಾಲಕಿ ತಂದೆ ಅಳಲು ತೋಡಿಕೊಂಡಿದ್ದಾರೆ.…
ಚೆನ್ನೈ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ವಿರುದುನಗರದ ಸತ್ತೂರಿನಲ್ಲಿ ನಡೆದಿದೆ. ಸತ್ತೂರು ನಗರದಲ್ಲಿರುವ ಖಾಸಗಿ ಒಡೆತನದ ಪಟಾಕಿ ತಯಾರಿಕಾ ಘಟಕದಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚಿನ ರಾಸಾಯನಿಕಗಳನ್ನು ಬೆರೆಸಿದ ಪರಿಣಾಮ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ವಿರುದುನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಫೋಟವಾಗುತ್ತಿದ್ದಂತೆ ಬೆಂಕಿಯು ಭಾರೀ ಮಟ್ಟದಲ್ಲಿ ವ್ಯಾಪಿಸಿಕೊಂಡಿತ್ತು. ಬ್ಲಾಸ್ಟ್ ಆದ ರಭಸಕ್ಕೆ ಕಾರ್ಖಾನೆಯ ಒಂದು ಭಾಗದ ಕಟ್ಟಡವೂ ಸಂಪೂರ್ಣ ಕುಸಿದಿದೆ. ಅಕ್ಕಪಕ್ಕದ ಬಿಲ್ಡಿಂಗ್ಗಳು ಹಾನಿಗೊಳಗಾಗಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಮೂವರು ಮಕ್ಕಳು ಹಾಗೂ ಗಂಡನನ್ನು ತೊರೆದ ಮಹಿಳೆ, ನವವಧುವಿನಂತೆ ಸಿಂಗಾರಗೊಂಡು ಪ್ರಿಯತಮನ ಮನೆಗೆ ಬಂದ ಘಟನೆ ಉತ್ತರಪ್ರದೇಶದ ಸೋನ್ ಭದ್ರ ಎಂಬಲ್ಲಿ ಈ ಘಟನೆ ನಡೆದಿದೆ. ವಿಭಾ ತನ್ನ ಗಂಡ ಹಾಗೂ ಮಕ್ಕಳನ್ನು ತೊರೆದು ಪ್ರಿಯತಮನ ಮನೆಗೆ ಬಂದಿದ್ದು, ವಧುವಿನಂತೆ ಶೃಂಗರಿಸಿಕೊಂಡು ಬಂದು ನಿಂದ ವಿಭಾಳನ್ನು ಕಂಡು ಸಂದೀಪ್ ಹಾಗೂ ಕುಟುಂಬಸ್ಥರು ಶಾಕ್ ಆಗಿದ್ದಾರೆ., ಮದುವೆಗೂ ಮೊದಲು ವಿಭಾ ಹಾಗೂ ಸಂದೀಪ್ ನಡುವೆ ಪ್ರೀತಿ ಇತ್ತು. ಆದ್ರೆ ವಿಭಾಳನ್ನು ಮನೆಯವರು ಬೇರೆ ಯುವಕನ ಜೊತೆಗೆ ವಿವಾಹ ಮಾಡಿಕೊಟ್ಟಿದ್ದಾರೆ. ಇಷ್ಟಾದರೂ ವಿಭಾಳ ಹಿಂದೆ ಸಂದೀಪ್ ಬಿದ್ದಿದ್ನಂತೆ. ಅಲ್ಲದೇ ತಮ್ಮ ಪ್ರೀತಿಯ ಸಂದರ್ಭದಲ್ಲಿ ಜೊತೆಗಿದ್ದ ಫೋಟೋ ಹಾಗೂ ಖಾಸಗಿ ವಿಡಿಯೋಗಳನ್ನು ನಿನ್ನ ಪತಿ ಹಾಗೂ ಸಹೋದರನಿಗೆ ಕಳುಹಿಸುವುದಾಗಿ ಸಂದೀಪ್ ನಿರಂತರವಾಗಿ ವಿಭಾಳನ್ನು ಪೀಡಿಸುತ್ತಿದ್ದನಂತೆ. ಸಂದೀಪ್ ನ ವರ್ತನೆಯಿಂದ ಅತ್ತ ಪತಿಯೊಂದಿಗೆ ನೆಮ್ಮದಿಯಾಗಿ ಸಂಸಾರ ಮಾಡಲಾಗದೇ, ಇತ್ತ ಪ್ರಿಯಕರನನ್ನೂ ಸಮಾಧಾನ ಪಡಿಸಲಾಗದ ವಿಭಾ, ಸಂದೀಪ್ ಗೆ ಪಾಠ ಕಲಿಸಲು ಮುಂದಾಗಿದ್ದಾಳೆ. ವಧುವಿನಂತೆ ಸಿಂಗರಿಸಿಕೊಂಡು ನೇರವಾಗಿ ಸಂದೀಪ್…
ನಟಿ ತಮನ್ನಾ ಭಾಟಿಯಾ ಬಗ್ಗೆ ಬೆಂಗಳೂರಿನ ಸಿಂಧಿ ಶಾಲೆಯೊಂದರಲ್ಲಿ ಪಠ್ಯ ವಿಷಯವಾಗಿ ಸೇರಿಸಲಾಗಿದೆ. ಇದರ ವಿರುದ್ಧ ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಹೆಬ್ಬಾಳದಲ್ಲಿರುವ ʼಸಿಂಧಿ ಹೈಸ್ಕೂಲ್’ನಲ್ಲಿನ ಪಠ್ಯದಲ್ಲಿ ತಮನ್ನಾ ಬಗೆಗಿನ ಪಠ್ಯ ಸೇರಿಸಲಾಗಿದೆ. ಇದು ವಿವಾದಕ್ಕೆ ಕಾರಣವಾಗಿದೆ. ಸಿಂಧಿ ಮಹನೀಯರ ಕುರಿತು ಸೇರಿಸಲಾದ ಅಧ್ಯಾಯದಲ್ಲಿ ತಮನ್ನಾ ಭಾಟಿಯಾ ಕುರಿತ ವಿವರವೂ ಇದೆ. ಇದಕ್ಕೆ ಇಲ್ಲಿ ಓದುತ್ತಿರುವ ಏಳನೇ ತರಗತಿ ಮಕ್ಕಳ ಪೋಷಕರು ಆಕ್ರೋಶ ಹೊರ ಹಾಕಿದ್ದು,ದೂರು ದಾಖಲಿಸಿದ್ದಾರೆ. ಅಧ್ಯಾಯ ಸೇರ್ಪಡೆ ಕುರಿತು ಪೋಷಕರು ಶಾಲೆಯ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಆದರೆ ಶಾಲಾ ಆಡಳಿತ ಮಂಡಳಿ, ʼಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್’ ಅನ್ನು ಸಂಪರ್ಕಿಸುವಂತೆ ತಿಳಿಸಿದೆ ಎನ್ನಲಾಗಿದೆ. ಸಿಂಧಿ ಸಮುದಾಯದ ಹಿರಿಯ ಕಲಾವಿದರ ಕುರಿತ ಅಧ್ಯಾಯಗಳ ಬೋಧನೆ ಬಗ್ಗೆ ಸಮಸ್ಯೆ ಇಲ್ಲ. ಆದರೆ ತಮನ್ನಾ ಭಾಟಿಯಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹುಡುಕಿದರೆ ಅರೆಬರೆ ಬಟ್ಟೆಯ, ಅಸೂಕ್ತವಾದ ವಿಷಯ ಕಾಣಿಸುತ್ತದೆ. ಹೀಗಾಗಿ…
ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು, “ಚಾಂಪಿಯನ್! ನಮ್ಮ ತಂಡವು ಟಿ20 ವಿಶ್ವಕಪ್ ಅನ್ನು ಮನೆಗೆ ತರುತ್ತಿದೆ! ನಾವು ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಪಡುತ್ತೇವೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ, ಪೋಸ್ಟ್ ಮಾಡಿದ್ದಾರೆ. ಜೊತೆಗೆ ಭಾರತ ಕ್ರಿಕೆಟ್ ತಂಡವನ್ನು ಅಭಿನಂದಿಸುವ ವೀಡಿಯೊ ಸಂದೇಶದಲ್ಲಿ ಪ್ರಧಾನಿ ಮೋದಿ, ಭಾರತ ತಂಡವು ವಿಶ್ವಕಪ್ ಗೆದ್ದಿದೆ. ಜೊತೆಗೆ ಕೋಟ್ಯಂತರ ಭಾರತೀಯರ ಹೃದಯವನ್ನು ಗೆದ್ದಿದೆ. ಇಡೀ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೇ ಅಜೇಯ ಸಾಧನೆ ಮಾಡಿರುವುದು ಸಣ್ಣ ಸಾಧನೆಯಲ್ಲ ಎಂದು ಹೇಳಿದ್ದಾರೆ. ಐಸಿಸಿ ಟಿ20 ವಿಶ್ವಕಪ್‌ನ ಫೈನಲ್ ನಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ ಗಳಿಂದ ಸೋಲಿಸಿತು. ರೋಹಿತ್ ಶರ್ಮಾ ನೇತೃತ್ವದ ತಂಡವು 11 ವರ್ಷಗಳ ನಂತರ ಐಸಿಸಿ ಟ್ರೋಫಿ ಗೆದ್ದಿತು. 2011 ರ ವಿಶ್ವಕಪ್ ಬಳಿಕ ಇದು ಭಾರತದ ಮೊದಲ ವಿಶ್ವಕಪ್ ಗೆಲುವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್ 2024 ರ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಟೀಮ್ ಇಂಡಿಯಾ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಗೆಲುವಿನ ಬಳಿಕ ನಾಯಕ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಪಂದ್ಯಕ್ಕೆ ವಿದಾಯ ಹೇಳಿದ್ದಾರೆ. ಈ ವೇಳೆ ಮಾತನಾಡಿದ ರೋಹಿತ್ ಶರ್ಮಾ, “ಕಳೆದ 3–4 ವರ್ಷಗಳಲ್ಲಿ ನಾವು ಏನನ್ನು ಅನುಭವಿಸಿದ್ದೇವೆ ಎಂಬುದನ್ನು ಸಂಕ್ಷಿಪ್ತವಾಗಿ ಹೇಳುವುದು ತುಂಬಾ ಕಷ್ಟ, ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾವು ವೈಯಕ್ತಿಕವಾಗಿ ಮತ್ತು ತಂಡವಾಗಿ ತುಂಬಾ ಶ್ರಮಿಸಿದ್ದೇವೆ ಎಂದಿದ್ದಾರೆ. ಒಂದು ತಂಡ, ಮೈದಾನದಲ್ಲಿ ಒಂದು ಗುಂಪಾಗಿ ಇದ್ದೆವು. ನಾವು ಅದನ್ನು ಗೆಲ್ಲಲು ಬಯಸಿದ್ದೇವೆ. ಈ ರೀತಿಯ ಪಂದ್ಯಾವಳಿಯನ್ನು ಗೆಲ್ಲಲು, ಬಹಳಷ್ಟು ಪ್ರಯತ್ನಗಳು ನಡೆಯುತ್ತವೆ. ಎಲ್ಲಾ ಮನಸ್ಸುಗಳು ಒಂದಾಗುತ್ತವೆ. ನಮಗೆ ಆಟವಾಡಲು, ಅನುಸರಿಸಲು, ನಮ್ಮಲ್ಲಿ ಪ್ರತಿಯೊಬ್ಬರನ್ನು ನಂಬಲು ಸ್ವಾತಂತ್ರ್ಯವನ್ನು ನೀಡಿದ ಮ್ಯಾನೇಜ್ ಮೆಂಟ್ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಇದು ಮ್ಯಾನೇಜ್‌ಮೆಂಟ್, ಕೋಚ್, ಕ್ಯಾಪ್ಟನ್ ನಿಂದ ಪ್ರಾರಂಭವಾಗಿದ್ದು ಮತ್ತು ನಂತರ ಆಟಗಾರರು ಅಲ್ಲಿಗೆ ಹೋಗಿ ಅದನ್ನು ಸಾಧಿಸುತ್ತಾರೆ” ಎಂದು…
ಚಿಕ್ಕೋಡಿ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಿದೆ. ಈ ನಡುವೆ ಕಾಂಗ್ರೆಸ್ ನ ಪ್ರಬಲ ನಾಯಕ, ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸ ಬಾಂಬ್ ಸಿಡಿಸಿದ್ದು, 2028ಕ್ಕೆ ನಾನೇ ರಾಜ್ಯದ ಸಿಎಂ ಆಗುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಕೆಂಪೇಗೌಡ ಜಯಂತಿ ದಿನ ಚಂದ್ರಶೇಖರನಾಥ ಸ್ವಾಮೀಜಿಗಳು ನೀಡಿದ ರಾಜಕೀಯ ಪ್ರೇರಿತ ಹೇಳಿಕೆ ಸಿಎಂ ಬದಲಾವಣೆಯ ಚರ್ಚೆ ಹುಟ್ಟು ಹಾಕಿತ್ತು. ಇದರಿಂದಾಗಿ ಇದೀಗ ಬೇರೆ ಬೇರೆ ಸಮುದಾಯಗಳ ಸ್ವಾಮೀಜಿಗಳು ತಮ್ಮ ಜಾತಿಯವರನ್ನು ಸಿಎಂ ಮಾಡಿ ಎಂದು ಬೇಡಿಕೆಯಿಟ್ಟಿದ್ದಾರೆ. ಇದರ ಬೆನ್ನಲ್ಲೇ, ಮುಂದಿನ ಚುನಾವಣೆ ಬಳಿಕ ನಾನೇ ಸಿಎಂ ಎಂದು ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ಡಿ.ಕೆ.ಶಿವಕುಮಾರ್ ಗೆ ಟಾಂಗ್ ನೀಡಿದ್ದಾರೆ. ಚಿಕ್ಕೋಡಿಯಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು ‘2028ರಲ್ಲಿ ನಾನು ಕೂಡ ಮುಖ್ಯಮಂತ್ರಿಯಾಗಲು ಹಕ್ಕು ಮಂಡಿಸುತ್ತೇನೆ. ಆಗಿನ ಚುನಾವಣೆ ಫಲಿತಾಂಶದ ಬಳಿಕದ ಪರಿಸ್ಥಿತಿ ನೋಡಿಕೊಂಡು ಏನು ಮಾಡಬೇಕು ಅದನ್ನು ಮಾಡುವೆ ಎಂದಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ವಿಚಾರ ಮುಗಿದುಹೋಗಿದೆ. ಸಿಎಂ ಬದಲಾವಣೆ ವಿಚಾರವು ಹೈಕಮಾಂಡ್ ತೀರ್ಮಾನವಾಗಿದೆ.…
ಮಂಡ್ಯ: ಕೆಎಸ್ ಆರ್ ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ಶನಿವಾರ ನಡೆದಿದೆ. ಬೆಂಗಳೂರು–ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಸರ್ವಿಸ್ ರಸ್ತೆಯಲ್ಲಿದ್ದ ಕಾರು, ಬೈಕ್ ಗಳಿಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ನುಗ್ಗಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ 8 ಪ್ರಯಾಣಿಕರಿಗೆ ಗಾಯವಾಗಿದ್ದು, ಚಾಲಕನ ಕಾಲು ಮುರಿದಿದೆ. ಗಾಯಾಳುಗಳನ್ನು ಮಂಡ್ಯ, ಮೈಸೂರು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ನಲ್ಲಿ 30 ಜನ ಪ್ರಯಾಣಿಕರಿದ್ದರು ಎನ್ನಲಾಗಿದೆ. ಇನ್ನೂ ಅಪಘಾತದಲ್ಲಿ 1 ಕಾರು ಹಾಗೂ 4ಕ್ಕೂ ಹೆಚ್ಚು ಬೈಕ್ ಗಳು ಜಖಂಗೊಂಡಿದೆ. ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…
ರಾಯಚೂರು: ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೋರ್ವ ಸಾವಿಗೆ ಶರಣಾದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕನಸಾವಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆಗೂ ಮೊದಲು ನಾನು ಒಬ್ಬ ಹುಚ್ಚು ಪ್ರೇಮಿ ಎಂದು ವಾಟ್ಸಪ್‌ನಲ್ಲಿ ಸ್ಟೇಟಸ್ ಹಾಕಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಸಂತೋಷ್ (22) ನೇಣುಬಿಗಿದುಕೊಂಡು ಸಾವಿಗೆ ಶರಣಾದ ಯುವಕ ಎಂದು ವರದಿ ತಿಳಿಸಿದೆ. ಮನೆಯಲ್ಲಿನ ಫ್ಯಾನ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಂತೋಷ್ ಅತ್ತಿಗೆಯ ತಂಗಿಯನ್ನು ಪ್ರೀತಿಸುತ್ತಿದ್ದ. ಮದುವೆಗೆ ಯುವತಿಯಿಂದ ಒಪ್ಪಿಗೆ ಸಿಗದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ಈಗ 113ನೇ ಜನ್ಮದಿನದ ಸಂಭ್ರಮ. 113 ನೇ ವಯಸ್ಸಿಗೆ ಕಾಲಿಟ್ಟ ಸಾಲುಮರದ ತಿಮ್ಮಕ್ಕ, ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್‌ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ. ತಿಮ್ಮಕ್ಕ ಅವರು ಮೂಲತಃ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನವರು. ತಂದೆ ಚಿಕ್ಕರಂಗಯ್ಯ. ತಾಯಿ ವಿಜಯಮ್ಮ. ಇವರಿಗೆ ಕೌಟುಂಬಿಕ ಮತ್ತು ಸಾಮಾಜಿಕ ಕಾರಣಗಳಿಂದಾಗಿ ಯಾವುದೇ ಔಪಚಾರಿಕ ಶಿಕ್ಷಣ ಸಿಕ್ಕಿಲ್ಲ. ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿದ್ದರು. ಇವರು ಚಿಕ್ಕಯ್ಯ…