Author: admin

ತುಮಕೂರು: ತುಮಕೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎದುರು, “ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ,”ನಮ್ಮೂರ ಸರ್ಕಾರಿ ಶಾಲೆ ಉಳಿಸಿ” ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಪೂರ್ವ, ರಾಜ್ಯ ಉಪಾಧ್ಯಕ್ಷರು, “ರಾಜ್ಯ ಸರ್ಕಾರದ ‘ಕೆಪಿಎಸ್–ಮ್ಯಾಗ್ನೆಟ್’ ಯೋಜನೆಯಡಿ ರಾಜ್ಯದ 40,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ ಮುಚ್ಚಲು ಹೊರಟಿರುವ ಕ್ರಮವನ್ನು ಖಂಡಿಸಿ, 01 ಮಾರ್ಚ್ 2026 ರಂದು ತುಮಕೂರಿನ ಟೌನ್ ಹಾಲ್ ಎದುರು ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು. ನಗರದಲ್ಲಿ ಮಾತನಾಡಿದ ಅವರು, ಈ ಯೋಜನೆಯಿಂದ ರಾಜ್ಯದ 47,174 ಶಾಲೆಗಳ ಪೈಕಿ ಕೇವಲ 5,900 ಶಾಲೆಗಳು ಮಾತ್ರ ಉಳಿಯಲಿದ್ದು, ತುಮಕೂರು ಜಿಲ್ಲೆಯಲ್ಲೇ 1,500ಕ್ಕೂ ಹೆಚ್ಚು ಶಾಲೆಗಳು ಅಸ್ತಿತ್ವ ಕಳೆದುಕೊಳ್ಳಲಿವೆ. ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್‌ ನಿಂದ ಸಾಲ ಪಡೆದು ಕಾರ್ಪೊರೇಟ್ ಹಿತಾಸಕ್ತಿಗಾಗಿ ಬಡವರ ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುವ ಈ ಹುನ್ನಾರದ ವಿರುದ್ಧ ಈಗಾಗಲೇ ಜಿಲ್ಲೆಯ ಮಸ್ಕಲ್, ಹೆಗ್ಗೆರೆ, ಸಮುದ್ರನಹಳ್ಳಿ, ಬ್ರಹ್ಮಸಂದ್ರ, ಕೊರಟಗೆರೆ ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ ಪ್ರತಿ ಹಳ್ಳಿಗಳಲ್ಲಿ ಪ್ರತಿಭಟನೆ…

Read More

ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ತಾಲ್ಲೂಕಿನ ಹೊಳವನಹಳ್ಳಿ ಗ್ರಾ.ಪಂ. ಕೇಂದ್ರ ಸ್ಥಾನದಲ್ಲಿಯೇ ಸ್ವಚ್ಚತೆಯೇ ಮರಿಚೀಕೆಯಾಗಿದ್ದು, ಸಾಮಾನ್ಯ ಜನರು ಸಾಂಕ್ರಮಿಕ ರೋಗದ ಭೀತಿಯಲ್ಲಿ ವಾಸಿಸುವಂತಹ ಪ್ರಸಂಗ ಎದುರಾಗಿದೆ. ಹೊಳವನಹಳ್ಳಿ ಗ್ರಾ.ಪಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸ್ವಚ್ಛತೆ ಮಾಯಾವಾಗಿದ್ದು, ಗ್ರಾಮದಲ್ಲಿ ಚರಂಡಿ ಸ್ವಚ್ಛತೆ, ಜನಸಂದಣಿ ಪ್ರದೇಶಗಳಲ್ಲಿ ಕಸದ ರಾಶಿ, ದಿನಸಿ ಅಂಗಡಿಗಳ ಪ್ಲಾಸ್ಟಿಕ್ ವಸ್ತುಗಳು, ಬೇಕರಿ ಪದಾರ್ಥ, ತರಕಾರಿ ಅಂಗಡಿಗಳ ತ್ಯಾಜ್ಯ ಕಸ, ಹೋಟೆಲ್‌ ಗಳ ಪ್ಲಾಸ್ಟಿಕ್ ವಸ್ತುಗಳೇ ಹೆಚ್ಚು. ಆದರೆ, ಪಂಚಾಯ್ತಿ ಕೇಂದ್ರ ಸ್ಥಾನದಲ್ಲಿಯೇ ಸ್ವಚ್ಛತೆ ಮರೀಚಿಕೆಯಾಗಿದೆ ಇನ್ನೂ ಸಾರ್ವಜನಿಕರ ಕೆಲಸ ಹೇಗೆ ನಡೆಯುತ್ತಿದೆ ಎಂದು ಪ್ರಜ್ಞಾವಂತ ನಾಗರೀಕರು ಪ್ರಶ್ನಿಸುತ್ತಿದ್ದಾರೆ. ಎಲ್ಲೆಲ್ಲಿ ಸಮಸ್ಯೆ: ಮುಖ್ಯವಾಗಿ ರೈತ ಸಂಪರ್ಕ ಕೇಂದ್ರ, ಪ.ಜಾತಿ ಸಮುದಾಯ ಭವನ, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಕಚೇರಿ ಮುಂಭಾಗ, ಸರ್ಕಾರಿ ಪಿಯು ಕಾಲೇಜು ಮುಂಭಾಗ, ಹಿಂದಿನ ಎಸ್‌ಬಿಐ ಬ್ಯಾಂಕ್ ವೃತ್ತ ಈಗೇ ಹಲವು ಜನಸಂದಣಿ ಪ್ರದೇಶಗಳಲ್ಲಿ ಸ್ವಚ್ಚಗೊಳಿಸಿ ಸುಮಾರು ವರ್ಷಗಳೇ ಕಳೆಯುತ್ತಲೇ ಬಂದಿದೆ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ…

Read More

ಬೀದರ್: ಜಿಲ್ಲೆಯ ಹೋಳಿ ಹಾಗೂ ರಮಝಾನ್ ಹಬ್ಬದಲ್ಲಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಆಚರಿಸಬೇಕು ಎಂದು ಎಸ್ಪಿ ಪ್ರದೀಪ್ ಗುಂಟಿ ಹೇಳಿದರು ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮಾಜದ ಮುಖಂಡರ ಸಭೆ ನಡೆಸಿ ಮಾತನಾಡಿದ ಅವರು, ಮಾ.2 ರಿಂದ 5ರವರಗೆ ಹೋಳಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಹಾಗೆಯೇ ಮಾ.21 ರಂದು ರಂಜಾನ್ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಬ್ಬಗಳ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ನೋಡಿಕೊಳ್ಳಬೇಕು ಎಂದು   ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಪ್ರತಿಯೊಬ್ಬರು ಹಬ್ಬವನ್ನು ಸಂಭ್ರಮದಿಂದ ಆಚರಿಸಬೇಕು. ಯಾವುದೇ ಜಾತಿ, ಧರ್ಮದ ಜನರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಶಾಂತಿಯುತವಾಗಿ ಆಚರಿಸಬೇಕು. ಹಬ್ಬ ಆಚರಣೆಯ ಕಾಲಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಶಾಂತಿಯುತವಾಗಿ ಆಚರಿಸಬೇಕು. ಹಬ್ಬ ಆಚರಣೆಯ ಕಾಲಕ್ಕೆ ಯಾವುದೇ ರೀತಿಯ ಅಹಿತಕರ ಘಟನೆ ಕಂಡು ಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಉಭಯ ಸಮಾಜದ ಮುಖಂಡರಿಗೆ ಸೂಚಿಸಿದರು. ಈ…

Read More

ತುಮಕೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳು ಕೇವಲ ಮಹಿಳೆಯರು, ಬಡವರ ಜೀವನ ಸುಧಾರಿಸುವ ಕಾರ್ಯಕ್ರಮ ಮಾತ್ರ ಆಗಿಲ್ಲ, ವಿಶೇಷವಾಗಿ ಹಿಂದಿನ ಸರ್ಕಾರದ ಅವಧಿಯಲ್ಲಿ ಹೆಚ್ಚಿದ್ದ ರೈತರ ಆತ್ಮಹತ್ಯೆ ಪ್ರಕರಣಗಳನ್ನು ನಿಯಂತ್ರಿಸಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ತುಮಕೂರಿನ ಗಾಜಿನ ಮನೆ ಆವರಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ರೈತ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಪಂಚ ಗ್ಯಾರಂಟಿಗಳಿಂದಾಗಿ ಸುಧಾರಿಸಿದ್ದು, ಯುವ ಜನರನ್ನು ಭಾವನಾತ್ಮಕವಾಗಿ ಎತ್ತಿಕಟ್ಟುವ ಕೆಲಸವನ್ನು ವಿಪಕ್ಷಗಳು ಬಿಡಬೇಕು. ವಿದ್ಯಾವಂತ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದ್ದು, ಇದಕ್ಕಾಗಿಯೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 56 ಸಾವಿರ ಹುದ್ದೆಗಳ ಭರ್ತಿಗೆ ತೀರ್ಮಾನಿಸಲಾಗಿದೆ ಎಂದರು. ಯಾರೇ ಅಧಿಕಾರಕ್ಕೆ ಬಂದರೂ ಜನಪರ ಯೋಜನೆಗಳನ್ನು ಜಾರಿಗೆ ತರುತ್ತಾರೆ. ಆದರೆ ಹಸಿದ ಜನರಿಗೆ…

Read More

ಬಳ್ಳಾರಿ: ದೈಹಿಕ ಅಂಗವೈಕಲ್ಯಕ್ಕಿಂತ ಮಾನಸಿಕ ವೈಕಲ್ಯತೆ ದೊಡ್ಡದು. ವಿಶೇಷ ಚೇತನರನ್ನು ಕೀಳರಿಮೆಯಿಂದ ನೋಡದೆ, ಅವರಲ್ಲಿರುವ ವಿಶೇಷ ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಸಂಡೂರು ಶಾಸಕರಾದ ಈ.ಅನ್ನಪೂರ್ಣ ಅವರು ಹೇಳಿದರು. ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಆರೋಗ್ಯ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ವಿವಿಧ ಕೈಗಾರಿಕೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್) ಅಡಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬಳ್ಳಾರಿ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದೇವರು ಒಂದು ಅಂಗವನ್ನು ವಿಕಲತೆ ಮಾಡಿದಾಗ ಮತ್ತೊಂದು ವಿಶೇಷ ಸಾಮರ್ಥ್ಯವನ್ನು ನೀಡಿರುತ್ತಾನೆ, ಅದನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ. ಪೋಷಕರು ಮತ್ತು ಕುಟುಂಬದ ಸದಸ್ಯರು ವಿಶೇಷಚೇತನರನ್ನು ಮೂಲೆ ಗುಂಪು ಮಾಡದೆ ಅವರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು. ಸರ್ಕಾರವು ಇವರ…

Read More

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿಯಿಂದ ಸಿರಿವಂತರು ಹೊರಬರುವ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. “ಆರ್ಥಿಕವಾಗಿ ಸಬಲರಾಗಿರುವವರು ಮತ್ತು ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?” ಎಂದು ಅವರು ಪ್ರಶ್ನಿಸಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ನೌಕರರು ಮತ್ತು ದೊಡ್ಡ ಐಟಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಅನೇಕರು ತಮಗೆ ಗ್ಯಾರಂಟಿ ಯೋಜನೆಗಳ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ. 200 ಯೂನಿಟ್ ಉಚಿತ ವಿದ್ಯುತ್ ಯೋಜನೆ ಬಗ್ಗೆಯೂ ಹಲವರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಬಗ್ಗೆ ಸರ್ಕಾರ ವಿಮರ್ಶೆ ನಡೆಸುತ್ತಿದೆ ಎಂದು ಡಿ.ಕೆ.ಶಿ ತಿಳಿಸಿದರು. ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ: ಗ್ಯಾರಂಟಿ ಯೋಜನೆಗಳು ನಿಲ್ಲಲಿವೆ ಎಂಬ ವದಂತಿಗಳನ್ನು ತಳ್ಳಿಹಾಕಿದ ಅವರು, “ಯಾವುದೇ ಕಾರಣಕ್ಕೂ ಯೋಜನೆಗಳು ನಿಲ್ಲುವುದಿಲ್ಲ. ಎಷ್ಟೇ ಕಷ್ಟವಿದ್ದರೂ ಸರ್ಕಾರ ಇವುಗಳನ್ನು ಮುಂದುವರಿಸಲಿದೆ. ಗ್ಯಾರಂಟಿಗಳಿಂದ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ ಎಂಬುದು ಸುಳ್ಳು” ಎಂದು ಸ್ಪಷ್ಟಪಡಿಸಿದರು. ತಾಂತ್ರಿಕ ಲೋಪ ಮತ್ತು ಮೃತರ ಖಾತೆಗೆ ಹಣ:…

Read More

ಯಾದಗಿರಿ: ಏಳು ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ಮತ್ತು ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಯಾದಗಿರಿಯ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಎಂಬಾತನ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಮಲ್ಲಿಕಾರ್ಜುನ ಮುತ್ಯಾ ಬಾಲಕಿಯೊಬ್ಬಳನ್ನು ಹಿಡಿದುಕೊಂಡು, ಆಕೆಯ ಪೋಷಕರ ಸಮ್ಮುಖದಲ್ಲೇ ಅನುಚಿತವಾಗಿ ಸ್ಪರ್ಶಿಸಿ, ಚುಂಬಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು, ತನಿಖೆ ನಡೆಸುವಂತೆ ಯಾದಗಿರಿ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದೆ. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ನೀಡಿದ ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕಿಯ ಪೋಷಕರ ಹೇಳಿಕೆಗಳನ್ನು ಪಡೆಯಲಾಗಿದ್ದು, 26 ವರ್ಷದ ಆರೋಪಿ ಮಲ್ಲಿಕಾರ್ಜುನ ಮುತ್ಯಾಗೆ ನೋಟಿಸ್ ಜಾರಿ ಮಾಡಲಾಗಿದೆ. ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್: ಪ್ರಕರಣ ದಾಖಲಾಗುತ್ತಿದ್ದಂತೆ ಬಂಧನದ ಭೀತಿಯಿಂದ ಮಲ್ಲಿಕಾರ್ಜುನ ಮುತ್ಯಾ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಆದರೆ,…

Read More

ಬೆಂಗಳೂರು: ಮಹಿಳೆಯರು ಮತ್ತು ಮಂಗಳಮುಖಿಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಉಚಿತ ಆಟೋ ಚಾಲನಾ ತರಬೇತಿ ಕಾರ್ಯಕ್ರಮಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು. ಬಿ.ಪ್ಯಾಕ್‌ (B.PAC) ಹಾಗೂ ಸಿಜಿಐ (CGI) ಸಹಯೋಗದಲ್ಲಿ ಬಿಟಿಎಂ ಲೇಔಟ್‌ನಲ್ಲಿ ಆಯೋಜಿಸಲಾಗಿದ್ದ ಈ ‘ಕೌಶಲ್ಯ ಮತ್ತು ಆಟೋ ಚಾಲನಾ ತರಬೇತಿ’ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು. ಮಹಿಳೆಯರು ಮತ್ತು ಮಂಗಳಮುಖಿಯರನ್ನು ಆರ್ಥಿಕವಾಗಿ ಬಲಪಡಿಸಲು ಇಂತಹ ತರಬೇತಿಗಳು ಅಗತ್ಯವಾಗಿದ್ದು, ಸಂಘಟಕರು ಕೈಗೊಂಡಿರುವ ಈ ಕಾರ್ಯ ಶ್ಲಾಘನೀಯ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಆಟೋ ಚಾಲಕರು ಬೆಂಗಳೂರಿನ ಸಾರಿಗೆ ವ್ಯವಸ್ಥೆಯ ಬೆನ್ನೆಲುಬಾಗಿದ್ದಾರೆ. ಈ ಸಮುದಾಯಕ್ಕೆ ಹೆಚ್ಚಿನ ಸೌಲಭ್ಯ ಒದಗಿಸುವ ಕುರಿತು ಬಜೆಟ್ ನಂತರ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಯೋಜನೆಯಡಿ ಈಗಾಗಲೇ ಒಂಬತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 500ಕ್ಕೂ ಹೆಚ್ಚು ಮಹಿಳೆಯರು ಮತ್ತು ಮಂಗಳಮುಖಿಯರಿಗೆ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮವನ್ನು ನಗರದ ಎಲ್ಲಾ ವಿಧಾನಸಭಾ…

Read More

ರಾಘವೇಂದ್ರ ಅಡಿಗ ಎಚ್ಚೆನ್ ಇತ್ತೀಚಿಗೆ ಹೊಸಬರ ಚಿತ್ರಗಳು ಸಾಕಷ್ಟು ಸದ್ದು ಮಾಡುತ್ತಿದ್ದು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಮೈಲುಗಲ್ಲನ್ನು ಸೃಷ್ಟಿಸುತ್ತಿದೆ ಅದೇ ರೀತಿ ಒಂದು ರಹಸ್ಯ ಕಥೆಯೊಂದಿಗೆ ಬಿಡುಗಡೆ ಸಜ್ಜಾಗಿದೆ.  ಟೀಸರ್ ಹಾಗೂ ಒಂದು ಸಾಂಗ್ ಅನ್ನು ಬಿಡುಗಡೆ ಮಾಡಿ ಕುತೂಹಲ ಮೂಡಿಸಿದ ಚಿತ್ರ “ಸಿಂಹಪುರಿಯ ಸಿಂಹ” ಒಂದು ರಹಸ್ಯ ಕಥೆಯೊಂದಿಗೆ ಬಿಡುಗಡೆ ಸಜ್ಜಾಗಿದೆ ಸಿಂಹಪುರಿಯ ಚಿತ್ರತಂಡ. ಚಿತ್ರದ ನಾಯಕ ನಟರಾಗಿ ಕೆ.ವೈ.ಮೂರ್ತಿಯವರು ಅಭಿನಯಿಸಿದ್ದು, ನಾಯಕಿಯಾಗಿ ಸೌಜನ್ಯ ಅಭಿನಯಿಸಿದ್ದಾರೆ ಇನ್ನ ಚಿತ್ರದ ವಿಲನ್ಗಳಾಗಿ ಸುಧೀನ್ ಕುಮ್ಟ & ನಿಲೇಶ್ ಗೌಡ ಅಭಿನಯಿಸಿದ್ದು . ಸಹಕಲಾವಿದರಾಗಿ ಶಂಕರ್ ಭಟ್, ಉಮೇಶ್, ಬ್ಯಾಂಕ್ ಜನಾರ್ಧನ್, ಜೂನಿಯರ್ ದ್ವಾರಕೀಶ್ , ಪದ್ಮ ವಸಂತಿ, ರೇಖಾದಾಸ್ , ಪ್ರಸನ್ನ ಹಾಗೂ ಮುತ್ತುರಾಜ್ ಇನ್ನು ಹಲವು ಕಲಾವಿದರು ಅಭಿನಯಿಸಿದ್ದಾರೆ. ಸಿಂಹಪುರಿಯ ಚಿತ್ರದ , ಕಥೆಚಿತ್ರಕಥೆ , ನಿರ್ದೇಶನ, ನಿರ್ಮಾಪಕರು  ಕೆ.ವೈ.ಮೂರ್ತಿಯವರು ಮಾಡಿದ್ದು.  ಛಾಯಾಗ್ರಾಹಣ ಗುರುದತ್ ಮುಸುರಿ, ಮನೋಹರ್, ಸಿ.ಎಸ್.ಸತೀಶ್ ಸಂಗೀತ ಕೃಪಾಕರ್ , ಸಂಕಲನ ಅರುಣ್ ಬೆಂಗಳೂರು ಮೂವೀಸ್…

Read More

ಶಿವಮೊಗ್ಗ:  ರೇಡಿಯೋ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ಸಂವಹನ ಮಾಧ್ಯಮವಾಗಿದ್ದು ನೂತನವಾಗಿ ಭದ್ರಾವತಿ ಆಕಾಶವಾಣಿಗೆ ಎಫ್.ಎಂ ಅಳವಡಿಸುವ ಮೂಲಕ ಕಡೆಯ ವ್ಯಕ್ತಿಯನ್ನು ತಲುಪುವ ದೃಢ ಹೆಜ್ಜೆಯನ್ನು ಇಡಲಾಗಿದೆ ಎಂದು ಕೇಂದ್ರದ ಮಾಹಿತಿ ಹಾಗೂ ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ಖಾತೆಯ ರಾಜ್ಯ ಸಚಿವರಾದ ಎಲ್.ಮುರುಗನ್ ತಿಳಿಸಿದರು. ಶಿವಮೊಗ್ಗದ ವಿದ್ಯಾನಗರದಲ್ಲಿ ಗುರುವಾರ ಭದ್ರಾವತಿ ಆಕಾಶವಾಣಿಗೆ ನೂತನವಾಗಿ ಅಳವಡಿಸಲಾದ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಭದ್ರಾವತಿ ಆಕಾಶವಾಣಿಗೆ ಇದೊಂದು ಉಡುಗೊರೆಯಾಗಿದ್ದು, ಜಿಲ್ಲೆಯ ಮೂಲೆ ಮೂಲೆ ಸೇರಿದಂತೆ 8 ಜಿಲ್ಲೆಗಳನ್ನು ತಲುಪಲಿದೆ. ರೇಡಿಯೋ ಒಂದು ಶಕ್ತಿಯುತವಾದ ಸಂವಹನ ಮಾಧ್ಯವಾಗಿದ್ದು ಕೇಂದ್ರ ಸರ್ಕಾರವು ಡಿಜಿಟಲ್ ಮತ್ತು ಸಂವಹನ ಮಾಧ್ಯಮಗಳ ಮೂಲಭೂತ ಸೌಕರ್ಯಗಳ ಅಭಿವೃದ್ದಿ ಮತ್ತು ಗುಣಮಟ್ಟ ವೃದ್ದಿಗಾಗಿ ರೂ.2000 ಕೋಟಿ ಖರ್ಚು ಮಾಡುತ್ತಿದೆ. ರೇಡಿಯೋ ಆಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಂಡು ಅತಿ ಹೆಚ್ಚು ಜನರನ್ನು ತಲುಪುತ್ತಿದ್ದು ಶೇ.92 ಭಾಗವನ್ನು ತಲುಪುತ್ತಿರುವ ಬಹುದೊಡ್ಡ ಪ್ರಸಾರ ಮಾಧ್ಯಮವಾಗಿದೆ. ಕೇಂದ್ರವು ಕಲೆ, ಸಂಸ್ಕೃತಿ, ವಿನ್ಯಾಸ,…

Read More