Subscribe to Updates
Get the latest creative news from FooBar about art, design and business.
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
- ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
- ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
- ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
- ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
Author: admin
ರಾಷ್ಟ್ರೀಯ ಶಿಕ್ಷಣ ನೀತಿ–2020 ಜಾರಿಯಾದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಕಲೆ, ಕ್ರೀಡೆ ಮತ್ತು ಕೌಶಲ್ಯ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ದೊರೆತಿದೆ. ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವ ಕಲಾ ಶಿಕ್ಷಣವನ್ನು ಬಲಪಡಿಸುವುದು ಸರ್ಕಾರದ ಉದ್ದೇಶವೂ ಆಗಿದೆ. ಆದರೆ ಈ ಆಶಯವನ್ನು ಕಾರ್ಯರೂಪಕ್ಕೆ ತರುವಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಚಿತ್ರಕಲಾ ಶಿಕ್ಷಕರ ಕೊರತೆ ಗಂಭೀರ ಸಮಸ್ಯೆಯಾಗಿ ಉಳಿದಿದೆ. ಹಲವು ವರ್ಷಗಳಿಂದ ಚಿತ್ರಕಲಾ ಶಿಕ್ಷಕರ ನೇಮಕಾತಿ ನಡೆಯದ ಕಾರಣ ಸಾವಿರಾರು ಅರ್ಹ ಅಭ್ಯರ್ಥಿಗಳು ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ. ಇನ್ನೊಂದೆಡೆ ಅನೇಕ ಶಾಲೆಗಳಲ್ಲಿ ಚಿತ್ರಕಲೆ ಬೋಧನೆ ಸಮರ್ಪಕವಾಗಿ ನಡೆಯುತ್ತಿಲ್ಲ. ಕೆಲವೆಡೆ ಈ ವಿಷಯವನ್ನು ಇತರ ಶಿಕ್ಷಕರು ನಿರ್ವಹಿಸುತ್ತಿದ್ದರೆ, ಇನ್ನೂ ಕೆಲವು ಶಾಲೆಗಳಲ್ಲಿ ಚಿತ್ರಕಲೆ ಪಠ್ಯವೇ ಕಡೆಗಣನೆಗೆ ಒಳಗಾಗಿದೆ. ಇದರ ಪರಿಣಾಮ ವಿದ್ಯಾರ್ಥಿಗಳ ಸೃಜನಶೀಲತೆ, ಕಲಾತ್ಮಕ ಅಭಿವ್ಯಕ್ತಿ ಮತ್ತು ಕಲ್ಪನಾ ಶಕ್ತಿಯ ಬೆಳವಣಿಗೆಯ ಮೇಲೆ ಬೀಳುತ್ತಿದೆ. ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಚಿತ್ರಕಲೆ ಕೇವಲ ಒಂದು ಪಠ್ಯ ವಿಷಯವಲ್ಲ. ಅದು ಮಕ್ಕಳಲ್ಲಿ ಸೌಂದರ್ಯಪ್ರಜ್ಞೆ, ಏಕಾಗ್ರತೆ, ಆತ್ಮವಿಶ್ವಾಸ, ಸಮಸ್ಯೆ ಪರಿಹರಿಸುವ ಸಾಮರ್ಥ್ಯ…
ತುಮಕೂರು: ಮತದಾರರ ಪಟ್ಟಿಯನ್ನು ಅತ್ಯಂತ ನಿಖರವಾಗಿಡುವ ನಿಮಿತ್ತ ಎಸ್.ಐ.ಆರ್. ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಿ 15 ದಿನಗಳು ಕಳೆದಿವೆ. ಬಿ.ಎಲ್.ಓ.ಗಳು ಅವರ ಪರಿಮಿತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ವಿದ್ಯಾನಗರ ಬಡಾವಣೆಯ ಪ್ರತಿ ರಸ್ತೆಯ ನಿವಾಸಿಗಳಲ್ಲಿ ಸರಿಯಾದ ಮಾಹಿತಿ ಇಲ್ಲದೆ ಅರ್ಜಿಗಳನ್ನು ನಿಖರವಾಗಿ ತುಂಬಲು ಹೆಣಗಾಡುತ್ತಿದ್ದಾರೆ. 2002ರ ಮತದಾನ ಮಾಡಿರುವ ಮಾಹಿತಿ ದೊರೆತಿಲ್ಲ. ಭಾಗ-1, 2 ಮತ್ತು 3ರಲ್ಲಿ ತುಂಬುವ ವಿಧಾನ ಹೇಗೆ ನೂರಕ್ಕೆ ನೂರು ನಿಖರ ಮಾಹಿತಿ ತುಂಬಿಕೊಡಲು ಸಾಧ್ಯವಾಗದೆ ಸರ್ಕಾರ ತೆರೆದಿರುವ ವಿವಿಧ ಸೇವಾ ಕೇಂದ್ರಗಳಿಗೆ ಭೇಟಿ ನೀಡಿದಾಗ ಸೂಕ್ತ ತಿಳುವಳಿಕೆ ಸಿಗದೆ, ಕೆಲವರು ಭರ್ತಿ ಮಾಡುವುದೇ ಬೇಡ ಎನ್ನುವ ಅಸಹಾಯಕತೆ ತೋರ್ಪಡಿಸಿದ್ದಾರೆ. ಕುಟುಂಬದ ಸದಸ್ಯರು ಆಯಾ ಬಡಾವಣೆಯ ಮತಗಟ್ಟೆಯಲ್ಲಿ ಮತ ಚಲಾಯಿಸಲು ವ್ಯವಸ್ಥೆ ಆಗಬೇಕು. ಒಂದು ಕುಟುಂಬದ ಎಲ್ಲ ಸದಸ್ಯರ ಹೆಸರು ಒಂದೇ ಮತ ಕೇಂದ್ರದಲ್ಲಿ ಇರದೆ, ದಿಕ್ಕಾಪಾಲಾಗಿರುವುದನ್ನು ಸರಿಪಡಿಸಿ, ಹತ್ತಿರದ ಒಂದೇ ಮತ ಕೇಂದ್ರದಲ್ಲಿ ಸೇರ್ಪಡೆಯಾಗಿರಲಿ. 2002ರ ಮಾಹಿತಿ ಸಿಗದಿದ್ದರೆ ಕ್ರಮ ಏನು ಎನ್ನುವ ಮಾಹಿತಿಯನ್ನು ಮಾನ್ಯ ಆಯುಕ್ತರು,…
ತುಮಕೂರು: ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವವರಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಜುಲೈ 22ರಂದು ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರವನ್ನು ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದ ಬಳಿಯಿರುವ ಸಿಡಾಕ್ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವ ಆಸಕ್ತರಿಗೆ ಉದ್ಯಮಶೀಲತೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ಪ್ರೋತ್ಸಾಹ, ಯೋಜನೆಗಳ ಆಯ್ಕೆ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ಮತ್ತು ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ಧಿ ತರಬೇತಿ ಬಗ್ಗೆ ಮಾಹಿತಿ ನೀಡಲಾಗುವುದು. ಸ್ವಂತ ಉದ್ಯಮ ಸ್ಥಾಪಿಸಲು ಆಸಕ್ತಿ ಇರುವ ತುಮಕೂರು ಜಿಲ್ಲೆಯ ವಿದ್ಯಾವಂತ ಯುವಕ/ಯುವತಿಯರು ಹಾಗೂ ನಿರುದ್ಯೋಗಿಗಳು ಈ ಶಿಬಿರದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬಹುದಾಗಿದೆ. ಕನಿಷ್ಠ 18 ವರ್ಷ ಮೇಲ್ಪಟ್ಟ ಹಾಗೂ ಕನಿಷ್ಠ 10ನೇ ತರಗತಿ ವ್ಯಾಸಂಗ ಮಾಡಿರುವ ಆಸಕ್ತರು ಜುಲೈ 20ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.…
ಚಿಕ್ಕನಾಯಕನಹಳ್ಳಿ: ತಾಲ್ಲೂಕಿನಲ್ಲಿರುವ ಬೋರನಕಣಿವೆ ಜಲಾಶಯದಲ್ಲಿ ಮೀನುಗಾರಿಕೆಗೆ ಉತ್ತೇಜನ ನೀಡುವುದು ಸೇರಿದಂತೆ ಮೀನುಗಾರಿಕೆ ಕುರಿತ ತರಬೇತಿ ಕೇಂದ್ರ ಹಾಗೂ ಮೀನುಮರಿ ಉತ್ಪಾದಕ ಘಟಕವನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು. ಅವರು ಪಟ್ಟಣದ ಮೀನುಗಾರಿಕೆ ಇಲಾಖೆಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು. ಮೀನುಗಾರಿಕೆಯು ಒಂದು ಲಾಭದಾಯಕ ಕೆಲಸವಾಗಿದ್ದು, ತಾಲ್ಲೂಕಿನ ಜನರಿಗೆ ಮಾಹಿತಿ ನೀಡಿ, ತರಬೇತಿ ನೀಡುವಂತಹ ಕೆಲಸವಾಗಬೇಕು. ಹುಳಿಯಾರಿನಲ್ಲಿ ಬೀದಿ ಬದಿಯಲ್ಲಿ ಮೀನು ಮಾರಾಟ ಮಾಡಲಾಗುತ್ತಿದೆ. ಮೀನು ಮಾರಾಟಕ್ಕೆ ಒಂದು ಕೇಂದ್ರವನ್ನು ತೆರೆಯಲು ಕ್ರಮ ಕೈಗೊಳ್ಳಿ. ಬೋರನಕಣಿವೆ ಜಲಾಶಯದಲ್ಲಿ ಹೆಚ್ಚು ಮೀನುಗಾರಿಕೆ ನಡೆಸುವುದು, ಒಂದು ಪ್ರಯೋಗಾಲಯ ಸ್ಥಾಪನೆ, ತರಬೇತಿ ಕೇಂದ್ರ, ಮಾರಾಟ ಕೇಂದ್ರ, ಹೆಚ್ಚು ಲಾಭ ತರುವಂತಹ ಮೀನುಗಳ ಸಾಕಣೆಗೆ ಉತ್ತೇಜನ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ನಂಜುಂಡಪ್ಪ ಮಾಹಿತಿ ನೀಡಿ, ತಾಲ್ಲೂಕಿನಲ್ಲಿ 2025-26ನೇ ಸಾಲಿನಲ್ಲಿ 39 ಕೆರೆಗಳಿಗೆ ಒಟ್ಟು 35 ಲಕ್ಷ ಮೀನು ಮರಿಗಳನ್ನು ಬಿತ್ತನೆ ಮಾಡಿದೆ. ಇದರೊಂದಿಗೆ…
ಕೊರಟಗೆರೆ: ತಾಲೂಕಿನ ಕೊರಟಗೆರೆ ಹೊಬಳಿಯ ವಡೇರಹಳ್ಳಿ ಗ್ರಾಮದಲ್ಲಿ ವಿಷಪೂರಿತ ಆಹಾರ ಸೇವನೆಯ ಪರಿಣಾಮ 75 ಕುರಿಗಳ ಪೈಕಿ 59 ಉತ್ತಮ ತಳಿಯ ಕುರಿಗಳು ಮೃತಪಟ್ಟಿಡುವ ಘಟನೆ ಬುಧವಾರ ನಡೆದಿದೆ. ಘಟನೆಯಿಂದ ರೈತ ಶಶಿಕಿರಣ್ ಅವರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಸಾವಿಗೀಡಾದ ಕುರಿಗಳಲ್ಲಿ ನಾರಿ ಸುವರ್ಣ, ಡಾರ್ಪರ್, ರಾಮ್ ಬುಲೆಟ್ ಹಾಗೂ ಬನ್ನೂರು ತಳಿಯ ಕುರಿಗಳು ಸೇರಿವೆ. ಮಾಹಿತಿ ತಿಳಿದ ಕೂಡಲೇ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತ ಕುರಿಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಾಥಮಿಕ ವರದಿ ಸಿದ್ಧಪಡಿಸಿದರು. ತುಮಕೂರು ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಉಪನಿರ್ದೇಶಕ ಡಾ. ಎಚ್.ಎಂ. ಶಿವಪ್ರಸಾದ್ ಮಾತನಾಡಿ, ಪ್ರಾಥಮಿಕ ಪರಿಶೀಲನೆಯಲ್ಲಿ ಕುರಿಗಳು ಸೇವಿಸಿದ ಆಹಾರ ವಿಷಪೂರಿತವಾಗಿರುವುದು ಕಂಡುಬಂದಿದ್ದು, ಇದೇ ಕಾರಣದಿಂದ ಸಾವು ಸಂಭವಿಸಿರುವ ಸಾಧ್ಯತೆ ಇದೆ ಎಂದು ತಿಳಿಸಿದರು. ಸರ್ಕಾರದ ನಿಯಮಾನುಸಾರ ರೈತರಿಗೆ ದೊರೆಯಬೇಕಾದ ಪರಿಹಾರ ಮಂಜೂರು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇಂತಹ…
ತುಮಕೂರು: ಗಮಕ ಭಾರತೀ ಚಾರಿಟಬಲ್ ಟ್ರಸ್ಟ್ ತುಮಕೂರು, ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು, ಜಿಲ್ಲಾ ಸಮಿತಿ ತುಮಕೂರು, ಸಂಸ್ಕಾರ ಭಾರತೀ ಕರ್ನಾಟಕ ಬೆಂಗಳೂರು, ಮಹಾನಗರ ಸಮಿತಿ, ತುಮಕೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಗಮಕ ಹಬ್ಬ–2026 ಕಾರ್ಯಕ್ರಮವು ಜು.18 ರಿಂದ 26ರವರೆಗೆ ಪ್ರತಿದಿನ ಸಂಜೆ 6.30ಕ್ಕೆ ಶ್ರೀ ಕನ್ಯಕಾ ಪರಮೇಶ್ವರಿ ದೇವಾಲಯ, 1ನೇ ಅಡ್ಡರಸ್ತೆ, ಸೋಮೇಶ್ವರಪುರಂ, ತುಮಕೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ. ಜು.18 ರಂದು ಸಂಜೆ 5.30ಕ್ಕೆ ನಡೆಯಲಿರುವ ಉದ್ಘಾಟನಾ ಸಮಾರಂಭ ಹಾಗೂ ಗಮಕ ಕಲಾಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಮಕಭಾರತೀ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಟಿ.ಹೆಚ್.ಜೈಪ್ರಕಾಶ್ ವಹಿಸುವರು. ಉದ್ಘಾಟನೆಯನ್ನು ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ.ಆರ್. ಲಕ್ಷ್ಮೀನಾರಾಯಣ ವಹಿಸುವರು. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕರಾದ ಮುಕ್ತಾ ಭಾಸ್ಕರ್ ಆಗಮಿಸುವರು. ಹಿರಿಯ ಗಮಕಿಗಳಾದ ಪದ್ಮಾ ಸೂರ್ಯನಾರಾಯಣ ಅವರು ಗಮಕ ಕಲಾಶ್ರೀ ಪ್ರಶಸ್ತಿ ಪ್ರದಾನ ಮಾಡುವರು. ಗಮಕ ವಾಚನ-ವ್ಯಾಖ್ಯಾನ ಕಾರ್ಯಕ್ರಮ. ಕಾವ್ಯಭಾಗ: ಕರ್ಣ-ದ್ರೋಣ ಸಂವಾದ. ವಾಚನ: ಉಮಾಶ್ರೀ ಸಂತೋಷ್, ವ್ಯಾಖ್ಯಾನ: ತರಂಗಿಣಿ ಜಗದೀಶ್. ಜು.26ರ ಸಂಜೆ…
ತುಮಕೂರು: ಇಪಿಎಸ್–95 ಪಿಂಚಣಿದಾರರು ಕೇಂದ್ರ ಸರ್ಕಾರದ ಮುಂದೆ ತಮ್ಮ ಬೇಡಿಕೆ ಈಡೇರಿಕೆಗಾಗಿ ಕಳೆದ ಹತ್ತು ವರ್ಷಗಳಿಂದ ಮನವಿ ಮಾಡಿದ್ದಾರೆ. ಬೇಡಿಕೆ ಈಡೇರಿಸುವಂತೆ ಹೋರಾಟವನ್ನೂ ಮಾಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಮಾತ್ರ, ಇಪಿಎಸ್-95 ಪಿಂಚಣಿದಾರರ ಬೇಡಿಕೆ ಈಡೇರಿಸುವಲ್ಲಿ ಮುಂದಾಗಿಲ್ಲ ಎಂಬ ಆಕ್ರೋಶದ ಕಿಚ್ಚು ಪಿಂಚಣಿದಾರರಿಂದ ಕೇಳಿಬಂದಿದೆ. ಹತ್ತು ವರ್ಷಗಳಿಂದಲೂ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಪಿಂಚಣಿದಾರರು ಹೋರಾಟಕ್ಕಿಳಿಯುವ ಪರಿಸ್ಥಿತಿ ಅನಿವಾರ್ಯವಾಗಿದ್ದು, ಇದರ ಭಾಗವಾಗಿ ತುಮಕೂರಿನ ಇಪಿಎಸ್-95 ಪಿಂಚಣಿದಾರರು ತುಮಕೂರಿನ ಪಾಲಿಕೆ ಆವರಣದ ಅಂಬೇಡ್ಕರ್ ಪ್ರತಿಮೆ ಮುಂದೆ ತಮ್ಮ ಪ್ರತಿಭಟನೆ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಎನ್ ಎಸಿಎ ಸಹ ಕಾರ್ಯದರ್ಶಿ ಕೆ.ಎಸ್.ರಾಜಣ್ಣ ಪ್ರತಿಭಟನೆಯಲ್ಲಿ ಮಾತನಾಡಿ, ಇಪಿಎಸ್–95 ಪಿಂಚಣಿದಾರರು ಕನಿಷ್ಠ ಮಾಸಿಕ ಪಿಂಚಣಿಯನ್ನು 7500ಕ್ಕೆ ಹೆಚ್ಚಿಸಬೇಕು. ವಿಧವಾ ಪಿಂಚಣಿ ಕೊಡಬೇಕು ಎಂಬುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಕಳೆದ 10 ವರ್ಷಗಳಿಂದ ಪಿಂಚಣಿದಾರರು ನಿರಂತರ ಹೋರಾಟ ನಡೆಸುತ್ತಾ, ತಮ್ಮ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದಿದ್ದರೂ ಯಾವುದೇ ಶಾಶ್ವತ ಪರಿಹಾರ ಸಿಕ್ಕಿಲ್ಲ. ಅಲ್ಪ…
ತುಮಕೂರು: ಕರ್ನಾಟಕ ಲೋಕಸೇವಾ ಆಯೋಗವು 2026ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯನ್ನು ಜಿಲ್ಲಾ ಕೇಂದ್ರಗಳಲ್ಲಿ ಜುಲೈ 17 ರಿಂದ 19ರವರೆಗೆ ನಡೆಸಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷ ಹಾಗೂ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆಯು ಜುಲೈ 17, 18 ಹಾಗೂ 19ರಂದು ಬೆಳಿಗ್ಗೆ 9.30 ರಿಂದ ಸಂಜೆ 4.30 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘಿಸಿದವರನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ತುಮಕೂರು: 80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ–2026ರ ಅಂಗವಾಗಿ ಜಿಲ್ಲಾ ಮಟ್ಟದ ಪೂರ್ವಭಾವಿ ಸಿದ್ಧತೆ, ಸಭೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ, ಶಿಸ್ತುಬದ್ಧವಾಗಿ ಹಾಗೂ ಯಾವುದೇ ಲೋಪದೋಷಗಳಿಲ್ಲದೆ ಯಶಸ್ವಿಯಾಗಿ ಆಚರಿಸಲು ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು. ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮುಖ್ಯ ಕಾರ್ಯಕ್ರಮಕ್ಕೆ ಅಗತ್ಯ ವೇದಿಕೆ ನಿರ್ಮಾಣ, ಗಣ್ಯ ಅತಿಥಿಗಳು ಹಾಗೂ ಆಹ್ವಾನಿತರಿಗೆ ಆಸನ ವ್ಯವಸ್ಥೆ, ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಾಲಯ, ವೈದ್ಯಕೀಯ ನೆರವು, ಸ್ವಚ್ಛತೆ ಮತ್ತು ಭದ್ರತಾ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು. ಕಾರ್ಯಕ್ರಮದ ಸ್ಥಳದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಮೂಲಸೌಕರ್ಯಗಳನ್ನು ಮುಂಚಿತವಾಗಿ ಸಿದ್ಧಪಡಿಸಬೇಕು ಎಂದು ತಿಳಿಸಲಾಯಿತು. ಪೆರೇಡ್ ಸಮಿತಿಯು ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮವು ಭಾರತ ಸರ್ಕಾರದ ನಿಯಮಾನುಸಾರ ನಡೆಯುವಂತೆ ನೋಡಿಕೊಳ್ಳಬೇಕು. ರಾಷ್ಟ್ರಧ್ವಜ, ಧ್ವಜಸ್ತಂಭ ಹಾಗೂ ವೇದಿಕೆಯ ವ್ಯವಸ್ಥೆಯನ್ನು ಪೂರ್ವಭಾವಿಯಾಗಿ ಪರಿಶೀಲಿಸಿ, ಪಥಸಂಚಲನ ಮತ್ತು ಗೌರವ ವಂದನೆ ಕಾರ್ಯಕ್ರಮಗಳನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು. ಅಲ್ಲದೇ, ಎಲ್ಲಾ ಕಾರ್ಯಕ್ರಮಗಳು…
ಬಳ್ಳಾರಿ: ಎಸ್ ಐಆರ್ ಅಂಗವಾಗಿ ಮನೆ ಮನೆಗೆ ವಿತರಿಸಲಾಗಿರುವ ಪ್ರಿ–ಪ್ರಿಂಟೆಡ್ ಭಾವಚಿತ್ರ ಹೊಂದಿರುವ ‘ಗಣತಿ ನಮೂನೆ’ ಅನ್ನು ಭರ್ತಿ ಮಾಡಿ ಸಲ್ಲಿಸುವುದು ಅತ್ಯಂತ ಕಡ್ಡಾಯವಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರ್ಕು ಹೇಳಿದರು. ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಚುನಾವಣಾ ಸಾಕ್ಷರತಾ ಕ್ಲಬ್ ಸಹಯೋಗದೊಂದಿಗೆ ನಗರದ ಮೊಹಮ್ಮದಿಯಾ ಹೈಸ್ಕೂಲ್ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಗುರುವಾರ ಹಮ್ಮಿಕೊಂಡಿದ್ದ ‘ವಿಶೇಷ ತೀವ್ರ ಪರಿಷ್ಕರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಳ್ಳಾರಿಯಲ್ಲಿ ಸದ್ಯ ಶೇ. 30 ರಿಂದ 40 ರಷ್ಟು ಮಾತ್ರ ಫಾರ್ಮ್ ಗಳು ಸಲ್ಲಿಕೆಯಾಗಿದ್ದು, ಉಳಿದ ಶೇ. 60 ರಷ್ಟು ಜನರು ಇನ್ನೂ ಫಾರ್ಮ್ ಗಳನ್ನು ಮನೆಯಲ್ಲೇ ಇಟ್ಟುಕೊಂಡಿದ್ದಾರೆ. ಒಂದು ವೇಳೆ ಈ ಫಾರ್ಮ್ ಅನ್ನು ಸಲ್ಲಿಸದಿದ್ದರೆ, ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾಗುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದರು. ಕಾಲಾವಕಾಶ ವಿಸ್ತರಣೆ: ಕರ್ನಾಟಕದಲ್ಲಿ ಈ ಗಣತಿ ನಮೂನೆಗಳನ್ನು ಸಲ್ಲಿಸಲು…