Subscribe to Updates
Get the latest creative news from FooBar about art, design and business.
- ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
- ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
- ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
- ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
- ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
- ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
- ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
Author: admin
ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಜನ್ 10 ಮುಗಿದು ಅನೇಕ ತಿಂಗಳು ಕಳೆದರೂ ಸಹ ಈ ಸೀಜನ್ ನ ಸ್ಪರ್ಧಿಗಳು ಸದಾ ಸುದ್ದಿಯಲ್ಲಿ ಇರುತ್ತಾರೆ. ಈ ಪೈಕಿ ವರ್ತೂರ್ ಸಂತೋಷ್ ಹಾಗೂ ಬೆಂಕಿ ಖ್ಯಾತಿಯ ತನಿಷಾ ಕುಪ್ಪಂಡ ಬಗ್ಗೆ ಆಗಾಗ ಸುದ್ದಿಗಳು ಹರಿದಾಡುತ್ತಿರುತ್ತಿದೆ. ವರ್ತೂರ್ ಸಂತೋಷ್ ಹಾಗೂ ತನಿಷಾ ಯಾವಾಗಲೂ ಜೊತೆಯಾಗಿ ಬಿಗ್ ಬಾಸ್ ನಲ್ಲೂ ಕಾಣಿಸಿಕೊಂಡಿದ್ದರು. ಈಗಲೂ ಜೊತೆಯಾಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಹೀಗಾಗಿ ಇವರಿಬ್ಬರ ಮಧ್ಯೆ ಪ್ರೀತಿ ಇದೆ ಎನ್ನುವ ಗುಸು ಗುಸು ಮಾತುಗಳು ಆಗಾಗ ಕೇಳಿ ಬರುತ್ತಿರುತ್ತದೆ. ಹೀಗಾಗಿ ಬಗ್ಗೆ ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ಹಳ್ಳಿಕಾರ್ ವರ್ತೂರ್ ಸಂತೋಷ್ ನೇರವಾಗಿ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ. ನಿಮಗೂ ಬೆಂಕಿಗೂ ಲವ್ ಇದೆಯಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ವರ್ತೂರ್ ಸಂತೋಷ್, ನಮ್ಮ ನಡುವೆ ಒಳ್ಳೆ ಗೆಳೆತನ ಇದೆ. ನನಗೆ ಬೆಂಕಿ ಒಳ್ಳೆ ಫ್ರೆಂಡ್. ಹೇಗೆ ಅಂದರೆ ಅವರ ಶೋ ಮುಗಿದಿದ್ದರೂ ನಾನು ಬರುವವರೆಗೂ ಕಾದಿದ್ದರು. ಅದರಲ್ಲೇ ಗೊತ್ತಾಗುತ್ತದೆ ಅವರು ನನಗೆ ಕೊಡುವ…
ಬೆಂಗಳೂರು: ರಾಜ್ಯದಲ್ಲಿ ಬರ, ಆರ್ಥಿಕ ಮುಗ್ಗಟ್ಟು, ಅಭಿವೃದ್ಧಿ ಸ್ಥಗಿತವಾಗಿದ್ದರೂ ಮತ್ತೊಂದೆಡೆ ಶಾಸಕರು ಹಾಗೂ ಇತರ ಸಮಿತಿ ಅಧ್ಯಕ್ಷರು ವಿದೇಶ ಪ್ರವಾಸ ಕೈಗೊಳ್ಳುವಂತೆ ಸ್ಪೀಕರ್ ಯು.ಟಿ.ಖಾದರ್ ಗೆ ಪತ್ರ ಬರೆದಿದ್ದಾರೆ. ಸ್ಪೀಕರ್ ಗೆ ಪತ್ರ ಬರೆದು ಆಗ್ರಹಿಸಿರುವವರಲ್ಲಿ ಬಹುತೇಕ ಬಿಜೆಪಿ ಶಾಸಕರೇ ಹೆಚ್ಚಾಗಿದ್ದಾರೆ ಎಂಬ ಮಾತುಗಳೂ ಕೇಳಿಬಂದಿವೆ. ಈ ಹಿನ್ನೆಲೆ ವಿದೇಶ ಪ್ರವಾಸಕ್ಕೆ ತೆರಳುವ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ವಿಧಾನ ಸಭೆ ಕಾರ್ಯದರ್ಶಿ ಗೆ ಸ್ಪೀಕರ್ ನಿರ್ದೇಶನ ನೀಡಿದ್ದಾರೆ. ಈ ಹಿನ್ನಲೆ ಖಾಸಗಿ ಏಜೆನ್ಸಿಯಿಂದ ವಿದೇಶಿ ಪ್ರಯಾಣದ ಖರ್ಚು ವೆಚ್ಚ ವಿವರವುಳ್ಳ ದರ ಪಟ್ಟಿಯನ್ನು ಕೂಡ ಸರ್ಕಾರದ ಕಾರ್ಯದರ್ಶಿಗಳು ಕಲೆ ಹಾಕಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಯುಜಿಸಿ–ನೆಟ್, ಜಂಟಿ ಸಿಎಸ್ ಐಆರ್ ಯುಜಿಸಿ ನೆಟ್, ಎನ್ ಸಿಇಟಿ ಪರೀಕ್ಷೆಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಹೊಸ ದಿನಾಂಕಗಳನ್ನು ಪ್ರಕಟಿಸಿದೆ. UGC NET ಜೂನ್ 2024 ಪರೀಕ್ಷೆಗಳನ್ನು ಆಗಸ್ಟ್ 21 ಮತ್ತು ಸೆಪ್ಟೆಂಬರ್ 4 ರ ನಡುವೆ ನಡೆಸಲಾಗುವುದು ಎಂದು ಹೇಳಿದೆ. ಜಂಟಿ CSIR UGC NET ಅನ್ನು ಜುಲೈ 25 ರಿಂದ ಜುಲೈ 27 ರವರೆಗೆ ಮತ್ತು NCET ಪರೀಕ್ಷೆಗಳನ್ನು ಜುಲೈ 10 ರಂದು ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಅಖಿಲ ಭಾರತ ಆಯುಷ್ ಸ್ನಾತಕೋತ್ತರ ಪ್ರವೇಶ ಪರೀಕ್ಷೆ (AIAPGET) 2024 ಈಗಾಗಲೇ ನಿಗದಿಪಡಿಸಿದಂತೆ ಜುಲೈ 6ರಂದು ನಡೆಯಲಿದೆ. ಯುಜಿಸಿ–ನೆಟ್ ಪರೀಕ್ಷೆ ಸೇರಿದಂತೆ ಎಲ್ಲಾ ಪರೀಕ್ಷೆಗಳು ಕಂಪ್ಯೂಟರ್ ಆಧಾರಿತವಾಗಿರುತ್ತವೆ. ಈ ಹಿಂದೆ, ಯುಜಿಸಿ ನೆಟ್ ಜೂನ್ 2024 ಪರೀಕ್ಷೆ ಆಫ್‌ಲೈನ್‌ನಲ್ಲಿ ನಡೆದಿತ್ತು. ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ದೆಹಲಿಯ ಜಂತರ್‌ಮಂತರ್‌ನಲ್ಲಿ ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು, ಮರು ಪರೀಕ್ಷೆಗೆ ವಿದ್ಯಾರ್ಥಿಗಳು…
ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆಯೇ ದಾಳಿ ಮಾಡಿದ ಘಟನೆ ಗದಗದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ. ಅಮ್ಜಾದ್ ಅಲಿ ಇರಾನಿ ಎಂಬ ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಗದಗ ರೈಲ್ವೆ ಬ್ರಿಡ್ಜ್ ಬಳಿ ಪೊಲೀಸ್ ವಾಹನ ಅಡ್ಡಗಟ್ಟಿದ್ದಾರೆ. ಬಳಿಕ ಪೊಲೀಸರ ಮೇಲೆ ಹಲ್ಲೆ ನಡೆಸಿ ಆರೋಪಿಯನ್ನು ಕರೆದುಕೊಂಡು ಹೋಗಿದ್ದಾರೆ. 392 ಕೇಸ್‌ನಲ್ಲಿ ಆರೋಪಿ ಅಮ್ಜದ್ ಅಲಿ ಗಂಗಾವತಿ ಶಹರ ಪೊಲೀಸರಿಗೆ ಬೇಕಿದ್ದ. ಈ ವೇಳೆ ಬಂದ ದುಷ್ಕರ್ಮಿಗಳು ಪೊಲೀಸರ ಮೇಲೆ ಅಟ್ಯಾಕ್ ಮಾಡಿ ಆರೋಪಿಯನ್ನು ಬಿಡಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ದುಷ್ಕರ್ಮಿಗಳು ನಾಲ್ವರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು, ಗಾಯಾಳು ಪೊಲೀಸರನ್ನು ಬೆಟಗೇರಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗದಗದ ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆಸ್ಪತ್ರೆಗೆ ಎಸ್.ಪಿ, ಬಿ.ಎಸ್ ನೇಮಗೌಡ, ಡಿವೈಎಸ್ಪಿ ಭೇಟಿ ನೀಡಿ ಗಾಯಾಳು ಪೊಲೀಸರ ಆರೋಗ್ಯ ವಿಚಾರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂಗೆ ಇಬ್ಬರು ಬಲಿಯಾಗಿದ್ದಾರೆ. ಈವರೆಗೂ ರಾಜ್ಯದಲ್ಲಿ ಡೆಂಗ್ಯೂಗೆ ಒಟ್ಟು 7 ಜನ ಬಲಿಯಾಗಿದ್ದು ಈಗ ಬೆಂಗಳೂರಿನಲ್ಲಿ 27 ವರ್ಷದ ಯುವಕ ಹಾಗೂ 80 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ. ಈ ಎರಡೂ ಪ್ರಕರಣಗಳು ಬಿಬಿಎಂಪಿಯ ಪೂರ್ವ ವಲಯದಲ್ಲಿ ದಾಖಲಾಗಿವೆ. ಜ್ವರದಿಂದ ಬಳಲುತ್ತಿದ್ದ ಸಿ.ವಿ. ರಾಮನ್ ನಗರದ ವಾಸಿ ಅಭಿಲಾಷ್ (27) ಜೂನ್ 25 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಅವರಿಗೆ ಡೆಂಗ್ಯೂ ಸೋಂಕು ಇರುವುದು ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೇ ಜೂನ್ 27 ರಂದು ಅಭಿಲಾಷ್ ಮೃತಪಟ್ಟರು. ಇನ್ನೊಂದು ಪ್ರಕರಣದಲ್ಲಿ ತಮಿಳುನಾಡಿನ ಮೂಲದ ನೀರಜಾದೇವಿ (80) ಡೆಂಗ್ಯೂಗೆ ಬಲಿಯಾಗಿದ್ದಾರೆ. ಇವರು ಸ್ತನ ಕ್ಯಾನ್ಸರ್ ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿದ್ದರು. ಜೂನ್ 20 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಈ ವೇಳೆ ಇವರಿಗೂ ಡೆಂಗ್ಯೂ ಇರುವುದು ತಿಳಿದು ಬಂದಿತ್ತು. ಇವರಿಗೆ ಚಿಕಿತ್ಸೆ ನೀಡಲಾಗಿತ್ತಾದರೂ ಫಲಕಾರಿಯಾಗದೇ ಜೂನ್ 23ರಂದು ಮೃತಪಟ್ಟರು. ರಾಜ್ಯದಲ್ಲಿ ಈವರೆಗೆ ಒಟ್ಟು 5,749 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ ಬಿಬಿಎಂಪಿ ಹೊರತು…
ರಾಮನಗರ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ನೌಕರ ಏಕಾಏಕಿ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಶುಕ್ರವಾರ ರಾಮನಗರದಲ್ಲಿ ನಡೆದಿದೆ. ಯೋಗ್ಯ ಕುಮಾರ್(45) ಮೃತ ನೌಕರ. ಡಿ ಗ್ರೂಪ್ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಗ್ಯ ಕುಮಾರ್ ಮಧ್ಯಾಹ್ನ ಊಟ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಇದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಕ್ಷಣವೇ ಇತರ ಸಹೋದ್ಯೋಗಿಗಳು ಯೋಗ್ಯ ಕುಮಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ನಿರ್ಮಾಣ ಹಂತದ ಸೇತುವೆಗಳು ಕುಸಿದು ಬೀಳುವ ವಿಚಾರದಲ್ಲಿ ಬಿಹಾರ ರಾಜ್ಯ ಕುಖ್ಯಾತವಾಗಿದೆ. ಕಳೆದ 9 ದಿನಗಳ ಅವಧಿಯಲ್ಲಿ ಬಿಹಾರ ರಾಜ್ಯಾದ್ಯಂತ ಐದು ಸೇತುವೆ ಕುಸಿತ ಕಂಡಿದೆ. ಶುಕ್ರವಾರ ಬಿಹಾರದ ಮಧುಬನಿ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದಿದೆ. ಮಧುಬನಿ ಜಿಲ್ಲೆಯ ಭೇಜಾ ಪೊಲೀಸ್ ಠಾಣೆಯ ಮಾದೇಪುರ್ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. ಬಿಹಾರ ಸರ್ಕಾರದ ಗ್ರಾಮೀಣ ಕಾಮಗಾರಿ ಇಲಾಖೆಯು 2021 ರಿಂದ 3 ಕೋಟಿ ವೆಚ್ಚದಲ್ಲಿ ಈ ಸೇತುವೆ ನಿರ್ಮಿಸುತ್ತಿತ್ತು. ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ತೇಜಸ್ವಿ ಯಾದವ್ ಇತ್ತೀಚಿನ ಪತನವನ್ನು ಗುರುತಿಸಿ ಬೇಸರ ವ್ಯಕ್ತಪಡಿಸಿದ್ದಾರೆ. ಜೂನ್ 19 ರಂದು, ಅರಾರಿಯಾದಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಒಂದು ಭಾಗವು ಕುಸಿದಿತ್ತು. ಕೋಟಿಗಟ್ಟಲೆ ಖರ್ಚು ಮಾಡಿ ಬಕ್ರಾ ನದಿಗೆ ನಿರ್ಮಿಸಿದ ಕಾಂಕ್ರೀಟ್ ಸೇತುವೆ ಸೆಕೆಂಡ್ ಗಳಲ್ಲಿ ಬೇರ್ಪಟ್ಟಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್…
ಗೋಡೆ ಕುಸಿದು ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದ್ದು, ಘಟನೆಯಲ್ಲಿ 5 ಮಂದಿ ಗಾಯಗೊಂಡಿದ್ದಾರೆ. ಭಾರೀ ಮಳೆ, ಪ್ರವಾಹ ಹಾಗೂ ಗಾಳಿಗೆ ಗೋಡೆ ಕುಸಿದಿದೆ. ನಾಲ್ಕು ವರ್ಷದ ಅಹದ್, ಎಂಟು ವರ್ಷದ ಆದಿಲ್ ಮತ್ತು ಎರಡು ವರ್ಷದ ಅಲ್ಫಿಸಾ ಮೃತಪಟ್ಟವರಾಗಿದ್ದಾರೆ. ಆಯಿಷಾ, ಹುಸೇನ್, ಸೋಹ್ನಾ, ವಾಸಿಲ್ ಮತ್ತು ಸಮೀರ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರೇಟರ್ ನೋಯ್ಡಾದ ಖೋಡ್ನಾ ಕಲಾನ್ ಗ್ರಾಮದಲ್ಲಿ ಶುಕ್ರವಾರ ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಅಗ್ನಿಶಾಮಕ ದಳದ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇದೇ ವೇಳೆ ಉತ್ತರ ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಅಸ್ಸಾಂನಲ್ಲಿ ಭಾರೀ ಮಳೆ ಮುಂದುವರಿದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತಮಿಳುನಾಡಿನ ಕೊಯಮತ್ತೂರು ಸಮೀಪದ ಹಳ್ಳಿಯೊಂದರಲ್ಲಿ ವಿಚಿತ್ರ ಪದ್ಧತಿ ಇದ್ದು, ಈ ಗ್ರಾಮದಲ್ಲಿ ಯಾರಾದ್ರೂ ಪ್ರೀತಿಸಿ ಮದುವೆಯಾದರೆ ಕಡ್ಡಾಯವಾಗಿ ಲವ್ ಟ್ಯಾಕ್ಸ್ ಕಟ್ಟಲೇಬೇಕು. ಇಲ್ಲದಿದ್ದರೆ ಗ್ರಾಮದಿಂದ ಅವರಿಗೆ ಬಹಿಷ್ಕಾರ ಹಾಕಲಾಗುತ್ತದೆ. ಈ ತೆರಿಗೆ ಪದ್ಧತಿಯನ್ನು ‘ಕುಟ್ರಮ್ ವರಿ’ ಎಂದು ಕರೆಯುತ್ತಾರೆ. ತಮಿಳಿನಲ್ಲಿ ʻಕುಟ್ರಮ್ ʼ ಎಂದರೆ ಅಪರಾಧ, ʻವರಿʼ ಎಂದರೆ ತೆರಿಗೆ ಎಂದರ್ಥ. ಕೊಯಮತ್ತೂರು ಜಿಲ್ಲೆ ಅಣ್ಣೂರು ಸಮೀಪದ ವಡಕ್ಕಲೂರು ಎಂಬ ಗ್ರಾಮದಲ್ಲಿ ಇಂತಹದ್ದೊಂದು ವಿಚಿತ್ರ ಆಚರಣೆ ಇದೆ. ಈ ಗ್ರಾಮದಲ್ಲಿ ಪ್ರೀತಿಸಿ ಮದುವೆಯಾದ ಜೋಡಿಗಳಿಗೆ ಗ್ರಾಮಸ್ಥರು ಊರಿಗೆ ಸೇರಿಸಿಕೊಳ್ಳುತ್ತಿಲ್ಲ. ಊರಿಗೆ ಎಂಟ್ರಿ ಸಿಗಬೇಕೆಂದರೆ ಟ್ಯಾಕ್ಸ್ ಕಟ್ಟಬೇಕು..ಪ್ರೇಮ ವಿವಾಹವಾದ ಜೋಡಿಗಳನ್ನು ‘ಕುಟ್ರಮ್ ವರಿ’ (ಅಪರಾಧ ತೆರಿಗೆ) ಪಾವತಿಸಿ ಗ್ರಾಮಕ್ಕೆ ಪ್ರವೇಶಿಸುವ ಪರಿಪಾಠ ದಶಕಗಳಿಂದ ನಡೆಯುತ್ತಾ ಬಂದಿದೆ. ವಡಕ್ಕಲೂರು ಗ್ರಾಮದಲ್ಲಿ ಬಹುತೇಕ ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರೇ ಹೆಚ್ಚಿದ್ದಾರೆ.. ಈಗಲೂ ಅಲ್ಲಿ ಅನಕ್ಷರತೆ ಬಡತನ ತಾಂಡವವಾಡುತ್ತಿದೆ. ಹೀಗಾಗಿ ದಶಕಗಳಿಂದ ಬಂದ ಆಚರಣೆಯನ್ನು ಈಗಲೂ ಮುಂದುವರೆಸಿದ್ದಾರೆ. ಈ ಗ್ರಾಮದಲ್ಲಿ 220 ಮನೆಗಳಿದ್ದು, ಊರಿನಲ್ಲಿ ಯಾರಾದರೂ ಪ್ರೇಮ…
ವಿಶ್ವವಿಖ್ಯಾತ ಮೈಸೂರು ಅರಮನೆಗೆ ಈಗ ವಿಚಿತ್ರ ಸಮಸ್ಯೆ ಎದುರಾಗಿದೆ. ಅರಮನೆಗೆ ಪಾರಿವಾಳದ ಹಿಕ್ಕೆಗಳಿಂದ ಕಂಟಕ ಎದುರಾಗಿದೆ. ಇದರಿಂದ ಕಟ್ಟಡಕ್ಕೆ ಧಕ್ಕೆಯಾಗಲಿದೆ ಎಂದು ಇತಿಹಾಸ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಏಕೆಂದರೆ ಪಾರಿವಾಳದ ಹಿಕ್ಕೆಗಳಲ್ಲಿ ಯೂರಿಕ್ ಆಮ್ಲವನ್ನು ಹೊಂದಿರುತ್ತವೆ. ಯೂರಿಕ್ ಆಸಿಡ್ ಇರುವ ಈ ಪಾರಿವಾಳಗಳ ಹಿಕ್ಕೆ ಪಾರಂಪರಿಕ ಕಟ್ಟಡಗಳ ಮೇಲೆ ಬೀಳಿಸುವುದರಿಂದ ಕಟ್ಟಡಕ್ಕೆ ಹಾನಿಯಾಗುತ್ತದೆ ಎಂದು ಇತಿಹಾಸ ತಜ್ಞ ಪ್ರೊ. ರಂಗರಾವ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರೊ.ರಂಗರಾವ್ ಮಾತನಾಡಿದ್ದು, ಯಾವುದೇ ತಾಮ್ರ ಅಥವಾ ಉಕ್ಕಿನ ಪಾತ್ರೆಯಲ್ಲಿ ಪಾರಿವಾಳದ ಹಿಕ್ಕೆಗಳನ್ನು ಕೆಲವು ದಿನಗಳ ಕಾಲ ಇಟ್ಟರೆ ಅವುಗಳಿಗೆ ತೂತು ಬೀಳುತ್ತದೆ. ಅಂತೆಯೇ, ಅಮೃತಶಿಲೆಯ ರಚನೆಯ ಮೇಲೆ ಪಾರಿವಾಳದ ಹಿಕ್ಕೆಗಳು ಬಿದ್ದರೂ, ಅಮೃತಶಿಲೆಗೂ ಹಾನಿಯಾಗುವ ಅಪಾಯವಿದೆ.. ಹಾಗಾಗಿ ಈ ಪಾರಿವಾಳದ ಹಿಕ್ಕೆಗಳಿಂದ ಅರಮನೆಗೆ ಸಾಕಷ್ಟು ಹಾನಿಯಾಗಲಿದೆ ಎಂದು ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್…