Subscribe to Updates
Get the latest creative news from FooBar about art, design and business.
- ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
- ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
- ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
- ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
- ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
- ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
- ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
Author: admin
ತುಮಕೂರು: ಜಿಲ್ಲೆ ತಿಪಟೂರು ನಗರದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಸದಸ್ಯ ಬನಶಂಕರಿ ನಗರ ನಾರಾಯಣರಾಜು ವಿಧಿವಶರಾದ ಹಿನ್ನೆಲೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟ ಕರ್ನಾಟಕ ಮಾದಿಗ ದಂಡೋರ ಸಮಿತಿಯಿಂದ ಭಾವಪೂರ್ಣಶ್ರದ್ಧಾಂಜಲಿ ಅರ್ಪಿಸಲಾಯಿತು . ನಾರಾಯಣರಾಜು ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ದಲಿತ ಮುಖಂಡರು ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಜಿಲ್ಲಾಪಂಚಾಯ್ತಿ ಸದಸ್ಯ ಕೊಪ್ಪ ಶಾಂತಪ್ಪ ಬನಶಂಕರಿ ನಗರ, ನಾರಾಯಣರಾಜು ರವರು ನ್ಯಾಯಾಂಗ ಇಲಾಖೆಯ ನೌಕರರಾಗಿ ವೃತ್ತಿ ನಿರ್ವಹಿಸುವ ಜೊತೆಗೆ, ಸದಾ ಶೋಷಣೆ, ಅಸಮಾನತೆಯಿಂದ, ನೊಂದು ಬೆಂದ ಜನರಿಗೆ , ನೆರವು ನೀಡುವ ಕೆಲಸ ಮಾಡಿದವರಾಗಿದ್ದಾರೆ. ಅಲ್ಲದೇ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಸದಸ್ಯರಾಗಿ ಪ್ರೊಫೆಸರ್ ಬಿ.ಕೃಷ್ಣಪ್ಪ ನವರ ಆತ್ಮೀಯ ಒಡನಾಡಿಯಾಗಿದ ಎಂದು ತಿಳಿಸಿದರು. ಗ್ರಾಮೀಣ ಭಾಗದಲ್ಲಿ ದಲಿತಪರಚಳುವಳಿ ಕಟ್ಟುವ ನಿಟ್ಟಿನಲ್ಲಿ ಅನೇಕ ನಾಯಕರಿಗೆ ಮಾರ್ಗದರ್ಶಕರಾಗಿ, ಗ್ರಾಮೀಣ ಭಾಗದ ಬಡವಿದ್ಯಾರ್ಥಿಗಳಿಗೆ ಆರ್ಥಿಕ…
ತುಮಕೂರು: ಜಿಲ್ಲೆಯಲ್ಲಿ ಬರೋಬ್ಬರಿ 18 ಕಡೆ ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರೂ ಆರೋಪಿಗಳನ್ನು ಬಂಧಿಸಿರುವ ತುಮಕೂರು ಜಿಲ್ಲಾ ಪೊಲೀಸರು 29 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ಜಿ.ಆರ್. ಚಿನ್ನ ಮತ್ತು ರಿಜ್ವಾನ್ ಭಾಷಾ ಎಂಬುವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸರಗಳ್ಳತನ ಆರೋಪಿಗಳು, ಜಿಲ್ಲೆಯ ಮಿಡಿಗೇಶಿ, ಕೊಡಿಗೇನಹಳ್ಳಿ, ಮಧುಗಿರಿ ಉಪವಿಭಾಗದ ಕೊರಟಗೆರೆ, ಪಟ್ಟನಾಯಕನಹಳ್ಳಿ ಬಡವನಹಳ್ಳಿ ಗೌರಿಬಿದನೂರು ಗ್ರಾಮಾಂತರ ಮಂಚೇನಹಳ್ಳಿ ಮಡಕಶಿರಾ ಠಾಣಾ ಸರಹದ್ದಿನಲ್ಲಿ ಒಂಟಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಹೆಂಗಸಿರ ಕೊರಳಿನಲ್ಲಿದ್ದ ಚಿನ್ನದ ಸರ, ಕಿವಿ ಒಲೆ ಮತ್ತು ಮೊಬೈಲ್ ಕಿತ್ತುಕೊಂಡು ಪರಾರಿ ಯಾಗುತ್ತಿದ್ದರು. ಮಾರ್ಚ್ 12ರಂದು ಅಂಬಿಕಾ ಎಂಬುವರು ಮಿಡಿಗೇಶಿ– ಐಡಿಹಳ್ಳಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿರುವಾಗ ಅದೇ ಸಮಯಕ್ಕೆ ಮಿಡಿಗೇಶಿ ಕಡೆಯಿಂದ ಐ.ಡಿ. ಹಳ್ಳಿ ಕಡೆಗೆ ಸುಮಾರು 35–40 ವರ್ಷ ವಯಸ್ಸಿನ ಇಬ್ಬರು ಅಪರಿಚಿತ ವ್ಯಕ್ತಿಗಳು ಒಂದು ಸ್ಕೂಟಿಯಲ್ಲಿ ಬಂದು ಇಬ್ಬರೂ ಹಿಂಬದಿಯಿಂದ ಬಂದು, ಒಬ್ಬ ವ್ಯಕ್ತಿಯು ನನ್ನ ಬಾಯಿಯನ್ನು ಹಿಂದಿನಿಂದ ಮುಚ್ಚಿಕೊಂಡು ಇಬ್ಬರೂ ಸೇರಿಕೊಂಡು ಅವ್ರ ಕೊರಳಲ್ಲಿದ್ದ…
ಕಾಡು ಪ್ರಾಣಿಗಳನ್ನು ಬೇಟೆಯಾಡಲು ಹೋಗಿದ್ದ ತಂಡದಲ್ಲಿ ಒಬ್ಬನಿಗೆ ಹಾವು ಕಚ್ಚಿದ್ದು ಈ ವೇಳೆ ಬೇಟೆಗಾರರು ಅರಣ್ಯಾಧಿಕಾರಿಗಳ ಕೈಯಲ್ಲಿ ಲಾಕ್ ಅದ ಘಟನೆ ಚಾಮರಾಜನಗರದ ಕಾವೇರಿ ವನ್ಯಧಾಮದಲ್ಲಿ ನಡೆದಿದೆ. ಹನೂರು ತಾಲೂಕಿನ ಮರಿಯ ಮಂಗಲ ಗ್ರಾಮದ ಸೆಲ್ವನಾಥ್, ವಿನ್ಸೆಂಟ್, ಲೂಯಿಸ್ ಬಂಧಿತ ಆರೋಪಿಗಳು ಎನ್ನಲಾಗಿದೆ. ಆರೋಪಿಗಳು ನಿನ್ನೆ ರಾತ್ರಿ ಕಾವೇರಿ ವನ್ಯಧಾಮದಲ್ಲಿ ಜಿಂಕೆ, ಸಾರಂಗದ ಬೇಟೆಗೆ ಮೂವರು ಕಾಡುಗಳ್ಳರು ಹೋಗಿದ್ದರು, ಈ ವೇಳೆ ಲ್ವನಾಥ್ ಎಂಬಾತನಿಗೆ ಹಾವು ಕಚ್ಚಿದೆ. ಹಾವು ಕಚ್ಚುತ್ತಿದ್ದಂತೆ ಕಾಡಿನಿಂದ ಆಚೆ ಬರುವ ವೇಳೆ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಆರೋಪಿಗಳನ್ನು ಕೂಡಲೇ ಬಂಧಿಸಿದ್ದಾರೆ. ಬಂಧಿತರಿಂದ ಎರಡು ನಾಡ ಬಂದೂಕು, ಟಾರ್ಚ್ ಮಚ್ಚು ಜಪ್ತಿ ಮಾಡಲಾಗಿದೆ. ಸದ್ಯ ಹಾವು ಕಚ್ಚಿದ ಆರೋಪಿಯನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ರವಾನೆ ಮಾಡಿದ್ದು, ಮಿಕ್ಕ ಆರೋಪಿಗಳನ್ನ ಅರಣ್ಯ ಇಲಾಖಾ ಸಿಬ್ಬಂದಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಸಿಕ್ಕಿಂನ ರಾಜಧಾನಿ ಗ್ಯಾಂಗ್ ಟಾಕ್ ನ ಡಿಕ್ಚು– ಸಂಕ್ಲಾಂಗ್ ರಸ್ತೆಯಲ್ಲಿ 70 ಅಡಿ ಬೈಲಿ ಸೇತುವೆಯನ್ನು 72 ಗಂಟೆಗಳೊಳಗೆ ಸೇನೆಯ ಎಂಜಿನಿಯರ್ ಗಳು ನಿರ್ಮಿಸಿದ್ದಾರೆ. ರಾಜ್ಯದಲ್ಲಿ ಇತ್ತೀಚಿನ ಪ್ರವಾಹದಿಂದ ಬಹುತೇಕ ಸ್ಥಳಗಳಲ್ಲಿ ಸಂಪರ್ಕ ಕಡಿದುಹೋಗಿದ್ದು, ಭಾರತೀಯ ಸೇನೆ ಪ್ರವಾಹ ಪೀಡಿತ ಪ್ರದೇಶಗಳ ಜನರು ಸಹಜ ಸ್ಥಿತಿಗೆ ಮರಳು ಸಹಾಯ ಮಾಡುತ್ತಿದೆ. ತ್ರಿಶಕ್ತಿ ಕಾರ್ಪ್ಸ್ ಆರ್ಮಿ ಎಂಜಿನಿಯರ್ ಗಳು ಜೂನ್ 23 ರಂದು ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಿದ್ದರು ಎಂದು ಮೂಲಗಳು ತಿಳಿಸಿವೆ. ಸಂಪರ್ಕವನ್ನು ಮರುಸ್ಥಾಪಿಸಲು ಮತ್ತು ಪ್ರತ್ಯೇಕವಾದ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಹಜ ಸ್ಥಿತಿಗೆ ತರಲು ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ಮತ್ತು ಸ್ಥಳೀಯ ಆಡಳಿತ ಸಹಕರಿಸಿದೆ ಎಂದು ಡಿಫೆನ್ಸ್ ಪಿಆರ್ ಒ ಹೇಳಿದ್ದಾರೆ. ದಿಕ್ಚು-ಸಂಕ್ಲಾಂಗ್ ರಸ್ತೆಯಲ್ಲಿ ಡೆಟ್ ಖೋಲಾದಲ್ಲಿ ನಿರ್ಮಿಸಲಾದ ಸೇತುವೆಯು ಡಿಕ್ಚುದಿಂದ ಸಂಕ್ಲಾಂಗ್ ಗೆ ಚುಂಗ್ ಥಾಂಗ್ ಕಡೆಗೆ ವಾಹನ ಸಂಚಾರವನ್ನು ಸಕ್ರಿಯಗೊಳಿಸಲು ಮಹತ್ವದ ಕೊಂಡಿಯಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಕ್ಕಿಂನ ಅರಣ್ಯ ಮತ್ತು ಪರಿಸರ ಸಚಿವ ಪಿಂಟ್ಸೊ ನಮ್ಗ್ಯಾಲ್ ಲೆಪ್ಚಾ…
70 ವರ್ಷ ಮೇಲ್ಪಟ್ಟ ಎಲ್ಲಾ ಭಾರತೀಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಹೇಳಿದ್ದಾರೆ. ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, ‘ಸರ್ಕಾರವು ಆರೋಗ್ಯ ಕ್ಷೇತ್ರದಲ್ಲಿ ಮತ್ತೊಂದು ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಅದರನ್ವಯ 70 ವರ್ಷ ಕ್ಕಿಂತ ಮೇಲ್ಪಟ್ಟ ಎಲ್ಲಾ ವೃದ್ಧರು ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆಯ ಪ್ರಯೋಜನ ಪಡೆಯುತ್ತಾರೆ’ ಎಂದರು. ಈಗಾಗಲೇ ಆಯುಷ್ಮಾನ್ ಭಾರತ್- ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿ 55 ಕೋಟಿ ಜನರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ. ದೇಶದಲ್ಲಿ 25,000 ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುವ ಕೆಲಸವೂ ತ್ವರಿತಗತಿಯಲ್ಲಿ ಸಾಗುತ್ತಿದೆ ಎಂದರು. ಆಯುಷ್ಮಾನ್ ಭಾರತವು ವಿಶ್ವದಲ್ಲೇ ಅತಿ ದೊಡ್ಡ ಸರ್ಕಾರಿ ಆರೋಗ್ಯ ವಿಮಾ ಯೋಜನೆ ಆಗಿದೆ. 12 ಕೋಟಿ ಕುಟುಂಬಗಳಿಗೆ ಪ್ರತಿ ವರ್ಷಕ್ಕೆ ತಲಾ 5 ಲಕ್ಷರೂ. ಆರೋಗ್ಯ ವಿಮಾ ರಕ್ಷಣೆಯನ್ನು ಒದಗಿಸುವ ಗುರಿ ಹೊಂದಿದೆ ಎಂದು ಮಾಹಿತಿ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ…
ಉತ್ತರ ಪ್ರದೇಶದಲ್ಲಿ ಹಲವು ಯುವಕರನ್ನು ಮದುವೆಯಾಗಿ ಅವರಿಂದ ಬೆಲೆಬಾಳುವ ವಸ್ತುಗಳನ್ನು ಪಡೆದು ಪರಾರಿಯಾಗುತ್ತಿದ್ದ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ್ದು, ಬಂಧನದ ಬಳಿವೂ ಈ ಮಹಿಳೆ ಈಕೆಯ ಮೋಸದ ವಿವಾಹದಿಂದ ವಂಚನೆಗೊಳಗಾದವರಿಗೆ ಶಾಕ್ ನೀಡಿದ್ದಾಳೆ. ಬಂಧನಕ್ಕೊಳಗಾಗಿದ್ದ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆ ನಡೆಸುವ ವೇಳೆ ಇನ್ನೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಬಂಧಿತ ಮಹಿಳೆ ಎಚ್ ಐವಿ ಪಾಸಿಟಿವ್ ಆಗಿದ್ದು, ಈಕೆಯನ್ನು ವಿವಾಹವಾಗಿ ದೈಹಿಕ ಸಂಬಂಧ ಹೊಂದಿದವರು ಇದೀಗ ಆತಂಕದಲ್ಲಿದ್ದಾರೆ. ಮಹಿಳೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಹಲವರನ್ನು ಈ ಮಹಿಳೆ ಬಲೆಗೆ ಕೆಡವಿದ್ದಾಳೆ. ಯುವತಿ ಮದುವೆಯಾಗುವುದಾಗಿ ಭರವಸೆ ನೀಡಿ ಯುವಕರಿಂದ ಬೆಲೆಬಾಳುವ ವಸ್ತುಗಳು ಹಾಗೂ ಹಣ ವಸೂಲಿ ಮಾಡುತ್ತಿದ್ದರು. ಸುಮಾರು ಇಪ್ಪತ್ತೈದು ವರ್ಷ ವಯಸ್ಸಿನ ಯುವತಿ ಈ ಕೃತ್ಯ ಎಸಗುತ್ತಿದ್ದಳು. ಈಕೆಯ ಜೊತೆಗೆ ಸಂಬಂಧಿಕರು ಎಂದು ಪರಿಚಯಿಸಿಕೊಳ್ಳುವ ಕೆಲವರು ಜೊತೆಗಿದ್ದರು. ಮಹಿಳೆಗೆ ಎಚ್ ಐವಿ ಪಾಸಿಟಿವ್ ಕಂಡು ಬಂದ ಕೂಡಲೇ ಉತ್ತರ ಪ್ರದೇಶದ ಆರೋಗ್ಯ ಇಲಾಖೆ ವಂಚನೆಗೊಳಗಾದ ಯುವಕನನ್ನು ಪತ್ತೆ ಹಚ್ಚುವ ಕಾರ್ಯಕ್ಕೆ ಮುಂದಾಗಿದೆ.…
ಎಐಎಂಐಎಂ ಅಧ್ಯಕ್ಷ ಓವೈಸಿ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ ಬೆನ್ನಲ್ಲೇ ಐವರು ಪುಂಡರ ಗುಂಪೊಂದು ಅವರ ದೆಹಲಿಯ ನಿವಾಸದ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿ ವೇಳೆ ಓವೈಸಿ ಅವರ ನಾಮಫಲಕಕ್ಕೆ ಕಪ್ಪು ಶಾಯಿ ಹಾಕಲಾಗಿದ್ದು, ಇಸ್ರೇಲ್ ಪರ ಪೋಸ್ಟರ್ ಹಾಕಲಾಗಿದ್ದು, ‘ಐ ಸ್ಟ್ಯಾಂಡ್ ವಿತ್ ಇಸ್ರೇಲ್’ ಎಂಬ ಶೀರ್ಷಿಕೆ ಪೋಸ್ಟ್ ನಲ್ಲಿ ಪತ್ತೆಯಾಗಿದೆ. ಓವೈಸಿ ಅವರು ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ‘ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್’ ಎಂದು ಹೇಳುವ ಮೂಲಕ ತಮ್ಮ ಪ್ರಮಾಣ ವಚನವನ್ನು ಮುಗಿಸಿದರು. ಈ ಘೋಷಣೆ ವಿರೋಧಿಸಿ ಆಡಳಿತ ಪಕ್ಷದ ಪೀಠದಿಂದ ಭಾರೀ ಪ್ರತಿಭಟನೆ ನಡೆಯಿತು. ಇದೀಗ ಓವೈಸಿ ಮನೆ ಮೇಲೆ ದಾಳಿ ನಡೆಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ:…
ಛತ್ತೀಸ್ ಗಢದಲ್ಲಿ ಮನೆಗೆ ನುಗ್ಗಿದ ಕಳ್ಳನೊಬ್ಬ ಬೆಡ್ ರೂಮ್ ನಲ್ಲಿ ಮಲಗಿದ್ದ ದಂಪತಿಯ ಅಶ್ಲೀಲ ಫೋಟೋ, ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕಳ್ಳತನದ ಉದ್ದೇಶದಿಂದ ಯುವಕ ಮನೆಗೆ ಎಂಟ್ರಿ ನೀಡಿದ್ದ. ಆದರೆ ಬೆಡ್ ರೂಮ್ ನಲ್ಲಿ ದಂಪತಿ ನೋಡಬಾರದ ಸ್ಥಿತಿಯಲ್ಲಿ ಪತ್ತೆಯಾದಾಗ ವಿಡಿಯೋ ಮಾಡಿಕೊಂಡು ಸ್ಥಳದಿಂದ ತೆರಳಿದ್ದ. ಬಳಿಕ ಮನೆಯ ಯಜಮಾನನ ವಾಟ್ಸಾಪ್ ನಂಬರ್ ಸಂಗ್ರಹಿಸಿ, ಫೋಟೊ, ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡಿದ್ದು, ವಿಡಿಯೋ ವೈರಲ್ ಮಾಡದಿರಲು 10 ಲಕ್ಷ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾನೆ. ಬ್ಲ್ಯಾಕ್ ಮೇಲ್ ನಿಂದ ಕಂಗಾಲಾದ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ತನಿಖೆ ನಡೆಸಿದ ಪೊಲೀಸರು ವಿನಯ್ ಕುಮಾರ್ ಎಂಬ ಆರೋಪಿಯನ್ನು ಬಂಧಿಸಿದ್ದು, ಪೊಲೀಸರು ತಮ್ಮ ಶೈಲಿಯಲ್ಲಿ ವಿಚಾರಿಸಿದಾಗ ಆರೋಪಿ ನಿಜ ವಿಷಯ ಬಾಯ್ಬಿಟ್ಟಿದ್ದಾನೆ. ಆರೋಪಿಯು ಸಿವಿಲ್ ಪರೀಕ್ಷೆ ಬರೆದಿದ್ದರೂ ಪಾಸ್ ಆಗಿರಲಿಲ್ಲ, ಹೀಗಾಗಿ ಕಳ್ಳತನಕ್ಕೆ ಇಳಿದಿದ್ದ. ಕಳ್ಳತನಕ್ಕೆ ಎಂದು ಮನೆಗೆ ನುಗ್ಗಿದ ವೇಳೆ ದಂಪತಿ ಖಾಸಗಿ ಕ್ಷಣದಲ್ಲಿ…
ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ 13 ಜನ ಸಾವಿಗೀಡಾಗಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ– ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದವರು ಎಂದು ತಿಳಿದು ಬಂದಿದೆ. ಇವರು ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ಭದ್ರಾವತಿಗೆ ಮರಳಿ ಹೋಗುತ್ತಿರುವ ಸಂದರ್ಭದಲ್ಲಿ ತಡರಾತ್ರಿ 3.30ಗಂಟೆಗೆ ಈ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಟಿಟಿ ವಾಹನ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿ ಸಿಲುಕಿಕೊಂಡಿದ್ದ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರ ತೆಗೆದು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ಟಿ ವಾಹನದಲ್ಲಿ 17 ಜನರು ಪ್ರಯಾಣ ಮಾಡುತ್ತಿದ್ದು, ಇದರಲ್ಲಿ ಒಟ್ಟು 13 ಜನರು ಮೃತಪಟ್ಟಿದ್ದಾರೆ. ಗಾಯಗೊಂಡ ನಾಲ್ವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕರ್ನಾಟಕದಲ್ಲಿ ಕಾಟನ್ ಕ್ಯಾಂಡಿ, ಗೋಬಿ ಹಾಗೂ ಕಬಾಬ್ ಗೆ ಕೃತಕ ಬಣ್ಣ ಬಳಕೆ ನಿರ್ಬಂಧಿಸಿರುವ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಪಾನಿಪುರಿ ಕೂಡ ಬ್ಯಾನ್ ಆಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಜನರು ಮುಗಿಬಿದ್ದು ತಿನ್ನುವ ಪಾನಿಪೂರಿಯಲ್ಲೂ ಕೂಡ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ. ಪಾನಿಪೂರಿಗೆ ಬಳಸೋ ಐದು ಮಾದರಿಯ ಸಾಸ್ ಗಳು ಹಾಗೂ ಮೀಟಾ ಖಾರದಲ್ಲಿ ಐದು ಬಗೆಯ ರಾಸಾಯನಿಕ ಅಂಶಗಳು ಪತ್ತೆಯಾಗಿವೆ. ಹೀಗಾಗಿ ಕ್ಯಾನ್ಸರ್ ಕಾರಕ ಇರೋ ಸಾಸ್, ಮೀಟಾ ಖಾರದ ಪುಡಿ ಬ್ಯಾನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇತ್ತೀಚೆಗೆ ಬೆಂಗಳೂರಿನ 49 ಪ್ರದೇಶಗಳಿಂದ ಈ ಕುರಿತಂತೆ ಮಾಹಿತಿ ಸಂಗ್ರಹಿಸಲಾಗಿದೆ. 49 ಕಡೆ ಪಾನಿಪೂರಿ ತಯಾರಿಕೆ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಇರೋದು ಪತ್ತೆಯಾಗಿದೆ. ಶೀಘ್ರದಲ್ಲೆ ಪಾನಿಪೂರಿಗೆ ಬಳಸೋ ಕ್ಯಾನ್ಸರ್ ಕಾರಕ ಅಂಶಗಳು ಬ್ಯಾನ್ ಮಾಡಲು ನಿರ್ಧಾರ ಮಾಡಲಾಗಿದೆ. ಅಂದಹಾಗೆ ಕೆಲವು ದಿನಗಳ ಹಿಂದೆ ಕಬಾಬ್ ತಯಾರಿಕೆಯಲ್ಲಿ ಬಳಸುವ ಕಲರ್‌ನಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ…