Author: admin

ದೆಹಲಿ: ದೇಶದ ಅತಿದೊಡ್ಡ ವಿಮಾನ ನಿಲ್ದಾಣವಾದ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೀಕರ ಅಪಘಾತ ಸಂಭವಿಸಿದೆ. ವಿಮಾನ ನಿಲ್ದಾಣದ ಟರ್ಮಿನಲ್-1ರ ಮೇಲ್ಛಾವಣಿಯ ಒಂದು ಭಾಗ ಕುಸಿದಿದ್ದು, ಪರಿಣಾಮವಾಗಿ 6 ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆಯಿಂದಾಗಿ   ಅನೇಕ ಕಾರುಗಳು ಮತ್ತು ಟ್ಯಾಕ್ಸಿಗಳು ಜಖಂ ಗೊಂಡಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲ್ಛಾವಣಿಯ ಶೀಟ್‌ ನ ಹೊರತಾಗಿ ಸಪೋರ್ಟ್ ಬೀಮ್ ಕೂಡ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಬ್ಬಿಣ ಸರಳುಗಳು ಬಿದ್ದ ಕಾರಿನಿಂದ ಆರು ಮಂದಿಯಲ್ಲಿ ಒಬ್ಬರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅಪಘಾತದ ನಂತರ, ಟರ್ಮಿನಲ್ 1 ರಿಂದ ಹೊರಡುವ ಮತ್ತು ಟರ್ಮಿನಲ್ 1 ಗೆ ಆಗಮಿಸುವ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಭಾರೀ ಮಳೆಯೇ ಮೇಲ್ಛಾವಣಿ ಕುಸಿತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ದೆಹಲಿಯಲ್ಲಿ ಭಾರೀ ಪ್ರವಾಹ ಮತ್ತು ರಸ್ತೆಗಳು ಮತ್ತು ಇತರ ಪ್ರದೇಶಗಳಲ್ಲಿ ನೀರು ನಿಂತಿದೆ. ನಮ್ಮತುಮಕೂರಿನ ಕ್ಷಣ…

Read More

ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಸುಳ್ಳು ದೂರು ಕೊಟ್ಟಿದ್ದ ದೂರುದಾರೆ ಸೇರಿ 13 ಮಂದಿ ಜೈಲು ಪಾಲಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದ್ದು,  ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಮಹತ್ವದ ಆದೇಶ ಹೊರಡಿಸಿದೆ. ಸುಳ್ಳು ಅತ್ಯಾಚಾರದ ದೂರು ನೀಡಿದ ಬಿ.ವಿ.ಸಿಂಧೂ ಸೇರಿದಂತೆ 13 ಜನರಿಗೆ 3 ವರ್ಷ 6 ತಿಂಗಳು ಜೈಲು ಶಿಕ್ಷೆ ಹಾಗೂ 13 ಆರೋಪಿಗಳಿಗೂ ತಲಾ 86 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶೆ ಮಹತ್ವದ ತೀರ್ಪು ನೀಡಿದ್ದಾರೆ. 2014ರ ಹೆಸ್ಕಾಂ ಸಹಾಯಕ ಅಧೀಕ್ಷಕ ಅಭಿಯಂತರ ತುಕಾರಾಮ್ ಮಜ್ಜಿಗೆ ಎಂಬವರ ವಿರುದ್ಧ ಬಿ.ವಿ ಸಿಂಧೂ ಅತ್ಯಾಚಾರ ಹಾಗೂ ಜೀವ ಬೆದರಿಕೆ ಕೇಸ್ ದಾಖಲಿಸಿದ್ದಳು. 2014 ನವೆಂಬರ್ 19ರಂದು ಮಾಳಮಾರುತಿ ಠಾಣೆಯಲ್ಲಿ ಅತ್ಯಾಚಾರ, ಜೀವ ಬೆದರಿಕೆ, ಆತ್ಮಹತ್ಯೆ ಪ್ರಚೋದನೆ ಕೇಸ್‌ ದಾಖಲಾಗಿತ್ತು. ಈ ಪ್ರಕರಣದಲ್ಲಿ ವಿಚಾರಣೆ ನಡೆಸಿದ ಮಾಳಮಾರುತಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ತನಿಖೆಯಲ್ಲಿ ಅತ್ಯಾಚಾರ, ಜೀವಬೆದರಿಕೆ ಹಾಕಿದ್ದು ಸುಳ್ಳು ಎಂದು ಬಯಲಾಗಿತ್ತು. ಆ ನಂತರ…

Read More

ಕೋಲಾರ : ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಪ್ರಯುಕ್ತ ಕೋಲಾರದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಿದ ವೇಳೆ ಮಸೀದಿ ಎದುರು ಡಿಜೆ ಸೌಂಡ್ ಹಾಕಿರುವ ವಿಚಾರಕ್ಕೆ  ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ವಿವಿಧ ವಾದ್ಯಗಳೊಂದಿಗೆ ಕೆಂಪೇಗೌಡರ ಪಲ್ಲಕ್ಕಿಯನ್ನು ಕೋಲಾರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಗಿದೆ. ಈ ವೇಳೆ ಕೋಲಾರ ನಗರದ ಅರಹಳ್ಳಿ ಗೇಟಿ ಬಳಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಕೂಡಲೇ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎನ್ನಲಾಗಿದೆ. ಇನ್ನು ಇದೇ ಕೋಲಾರದಲ್ಲಿ ನಡೆದ ಕೆಂಪೇಗೌಡ ಜಯಂತಿ ಮೆರವಣಿಗೆಯಲ್ಲಿ ಮಂಗಳಮುಖಿಯರು ಅಸಭ್ಯ ನೃತ್ಯ ಮಾಡಿದ್ದಾರೆ. ಸಾರ್ವಜನಿಕವಾಗಿ ಅರ್ಧಂಬರ್ಧ, ತುಂಡು ಬಟ್ಟೆ ತೊಟ್ಟು ಯುವಕರೊಂದಿಗೆ ಅಶ್ಲೀಲ ನೃತ್ಯ ಮಾಡಿದ್ದಾರೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು : ತಾತನೇ ತನ್ನ 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ವಿಚಾರ ಬಾಲಕಿ ಮನೆಯಲ್ಲಿ ಗೊತ್ತಾಗುತ್ತಿದ್ದಂತೆಯೇ ಯಾರಿಗೂ ಹೇಳದಂತೆ ಬಾಲಕಿ ತಾಯಿಗೆ(ಸೊಸೆ) ಬಂಗಾರ, ಮನೆ ಆಮಿಷವೊಡ್ಡಿದ್ದಾನೆ. ಆದ್ರೆ, ಅತ್ಯಾಚಾರಕ್ಕೆ ಒಳಗಾದ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಮನೆಯಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಆರೋಪಿ ಪರಾರಿಯಾಗಲು ಬಾಲಕಿ ತಂದೆಯೇ ಸಹಕರಿಸಿದ್ದಾನೆ ಎನ್ನಲಾಗಿದ್ದು, ಈ ಘಟನೆ ನಂತರ ಮೊಮ್ಮಗಳ ತಾಯಿ ಮತ್ತು ತಂದೆಗೆ ನಿನ್ನ ಮಗಳ ಹೆಸರಿಗೆ ಮನೆ ಬರೆದು ಕೊಡುತ್ತೇನೆ ಪೊಲೀಸರಿಗೆ ದೂರು ಕೊಡಬೇಡಿ ಎಂದು ಆಮಿಷವೊಡಿದ್ದಾನೆ. ಇದಾದ ನಂತರ ಸುಮ್ಮನಿದ್ದ ಬಾಲಕಿಯ ತಾಯಿ ನಾನು ಕೆಲಸಕ್ಕೆ ಹೊರಡುತ್ತೇನೆ ಎಂದು ಸಬೂಬು ಹೇಳಿ ಮನೆಯಿಂದ ಆಚೆಗೆ ಬಂದು ಅಕ್ಕಪಕ್ಕದವರ ಸಹಾಯ ಪಡೆದು ಮಗಳನ್ನು ಆಸ್ಪತ್ರೆಗೆ ಸೇರಿಸಿದ್ದಾಳೆ. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ನಂತರ ಅಲ್ಲಿಗೆ…

Read More

ಲೋಕಸಭಾ ಸದಸ್ಯರಾಗಿ ಚುನಾಯಿತರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕನ್ನಡ ಮತ್ತು ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಕರ್ನಾಟಕ ವಿಕಾಸ ರಂಗ ವಿರೋಧ ವ್ಯಕ್ತಪಡಿಸಿದೆ. ಕರುನಾಡಿನ ಮತದಾರರಿಂದ ಆಯ್ಕೆಯಾದ ರಾಜ್ಯದ ಎಲ್ಲ ಸಂಸದರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರೆಲ್ಲರಿಗೂ ಅಭಿನಂದನೆಗಳು. ಆದರೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕನ್ನಡವನ್ನು ಕಡೆಗಣಿಸಿ, ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದಕ್ಕಾಗಿ ಅವರಿಗೆ ಧಿಕ್ಕಾರ ಹೇಳುತ್ತೇವೆ ಎಂದು ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ.ಚನ್ನೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಬಿಜೆಪಿ ನಾಯಕಿ ದಿವಂಗತ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್  ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ತಾಯಿಯ ಸಂಪ್ರದಾಯವನ್ನು ಮುಂದುವರಿಸಿದ್ದರು. ಈ ಸಂದರ್ಭದಲ್ಲಿ, ತಾಯಿ ಸುಷ್ಮಾ ಸ್ವರಾಜ್ ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದ ಬಗ್ಗೆ ನೆನಪಿಸಿಕೊಂಡಿದ್ದರು. ಈಗ ವಿಶ್ವೇಶ್ವರ ಹೆಗಡೆ ಕಾಗೇರಿ ಅದೇ ರೀತಿ ಅನುಸರಿಸಲು ಹೋಗಿ ಕನ್ನಡ ಸಂಘಟನೆಗಳು ಮತ್ತು ಕರ್ನಾಟಕ ವಿಕಾಸ ರಂಗ ವಿರೋಧ ವ್ಯಕ್ತಪಡಿಸಿವೆ.…

Read More

ದೆಹಲಿ: ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೋರಲಿನಿಂದ ಒಂದೇ ಧ್ವನಿಯಲ್ಲಿ ಪ್ರಯತ್ನಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ನಡೆದ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಮಂತ್ರಿಗಳು ತಮ್ಮ ಪ್ರಸ್ತಾವಿಕ ಮಾತುಗಳಲ್ಲಿ ಮಂಡಿಸಿದ ವಿಚಾರಗಳ ಹೈಲೈಟ್ಸ್ ಗಳು… ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆ. ಭದ್ರಾ ಯೋಜನೆ ಬಗ್ಗೆಯೂ ಪ್ರಯತ್ನ ಮುಂದುವರೆಸಬೇಕಾಗಿದೆ. ಕೇಂದ್ರದ ಹಣಕಾಸು ಮಂತ್ರಿ ತಮ್ಮ ಬಜೆಟ್ ನಲ್ಲೇ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ. ಆ ಹಣ ಕೊಡಿಸಿ ಕೊಡಲು ಸಭೆಯಲ್ಲಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಮನವಿ ಮಾಡಿದರು * ಕಲ್ಯಾಣ ಕರ್ನಾಟಕದ ರಾಯಚೂರಿಗೆ ಏಮ್ಸ್ ನೀಡಲು ಮನವಿ ಸಲ್ಲಿಸಿದ್ದೇವೆ. ಇದರ ಈಡೇರಿಕೆ ಅಗತ್ಯವಿದೆ * ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದಿದೆ. ಏಮ್ಸ್ ಬಂದರೆ ಅಭಿವೃದ್ಧಿ ಸಾಧ್ಯ. * 18172 ಕೋಟಿ ಬರ ಪರಿಹಾರ ಕೇಳಿದ್ದೆವು.…

Read More

ಔರಾದ: ಬಸ್ ಪಾಸ್ ವಿಳಂಬ ಸಕಾಲಕ್ಕೆ ಬಸ್ ಗಳನ್ನು ಓಡಿಸಲು ಆಗ್ರಹಿಸಿ ಬೀದರ್ ಜಿಲ್ಲಾ ಔರಾದ ಪಟ್ಟಣದಲ್ಲಿ ಎಬಿವಿಪಿ ಬೃಹತ್ ಪ್ರತಿಭಟನೆ ನಡೆಸಿತು. ಬಸ್ ವಿಳಂಬ ಹಾಗೂ ಸಕಾಲಕ್ಕೆ ಬಸ್ ಪಾಸ್ ವಿತರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರಲ್ಲದೇ ಈ ಬಗ್ಗೆ ಸಿಎಂಗೆ ಬರೆದ ಪತ್ರವನ್ನು ಬಸ್ ಡಿಪೋ ವ್ಯವಸ್ಥಾಪಕ  ಎಸ್. ಟಿ. ರಾಠೋಡ್ ಅವರಿಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ  ಶಶಿಕಾಂತ, ರಾಕಲೆ, ಅಶೋಕ ಶೆಂಬೆಳ್ಳ, ಅನೀಲ, ಇಂದ್ರಾಣಿ, ಪೂಜಾ ಇತರರಿದ್ದರು.  ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್‌ ಥ್ರೆಟ್‌ ಬಂದಿದೆ. ಎರಡು ದಿನದ ಹಿಂದೆಯಷ್ಟೇ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಬಂದಿದೆ. ವಿಮಾನ ನಿಲ್ದಾಣ ನಿರ್ದೇಶಕ ರೂಪೇಶ್​​​​ ಕುಮಾರ್​​​​ಗೆ ಅನಾಮಧೇಯ ವ್ಯಕ್ತಿಯೊಬ್ಬನಿಂದ ಇ-ಮೇಲ್​ ಮೂಲಕ ಜೀವಬೆದರಿಕೆ ಸಂದೇಶ ಬಂದಿದೆ. ಲಾಂಗ್​ ಲೀವ್​​​​ ಪ್ಯಾಲೆಸ್ತೇನ್​​​​ ಎಂಬ ಹೆಸರಿನ ಮೇಲ್​ ಐಡಿಯಿಂದ ನಿರ್ದೇಶಕರ ಕಚೇರಿಯ ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ನಾವು ನಿಮ್ಮನ್ನು ನಾಶ ಮಾಡುತ್ತೇವೆ. ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರ. ಬೆಂಕಿಯಲ್ಲಿ ಎಸೆಯುತ್ತೇವೆ, ಉಸಿರುಗಟ್ಟಿ ಸಾಯುತ್ತೀರ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಲ್ದಾಣ ಆವರಣ ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಮತ್ತು ಸಾರ್ವಜನಿಕರನ್ನು ಪರಿಶೀಲಿಸಲಾಗುತ್ತಿದೆ. ಬಾಂಬ್‌ ಬೆದರಿಕೆ ತಪಾಸಣಾ ದಳ, ಬಾಂಬ್‌ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ ಅಲ್ಲದೇ ಪೊಲೀಸ್‌ ಅಧಿಕಾರಿಗಳು,…

Read More

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12 ರಂದು ಮುಂಬೈನಲ್ಲಿ ವಿವಾಹವಾಗಲಿದ್ದಾರೆ. ಅದ್ದೂರಿಯಾಗಿ ವಿವಾಹ ಪೂರ್ವ ಕಾರ್ಯಕ್ರಮ ಮಾಡಿಕೊಂಡಿದ್ದ ಜೋಡಿ ಈಗ ಮದುವೆ ತಯಾರಿಯಲ್ಲಿದೆ. ಈ ಅದ್ದೂರಿ ಮದುವೆಯ ಆಹ್ವಾನ ಪತ್ರಿಕೆ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಪ್ರಾರಂಭವಾಗಿದೆ. ಅನಂತ್ ಅಂಬಾನಿಯ ಪ್ರತಿ ಮದುವೆ ಕಾರ್ಡ್ ಬೆಲೆ ಎಷ್ಟು ಗೊತ್ತಾ? ಭಾರತದ ಅತ್ಯಂತ ದುಬಾರಿ ಮದುವೆ ಎಂದೇ ಹೆಸರಾಗಿರುವ ಈ ಮದುವೆಗೆ ವೈರಲ್ ಆಗುತ್ತಿರುವ ಆಮಂತ್ರಣ ಪತ್ರಿಕೆಯ ಬೆಲೆ ಅಕ್ಷರಶಃ ರೂ. 6.5 ಲಕ್ಷ. ಇದು 3 ಕೆಜಿ ಬೆಳ್ಳಿಯ ದೇವಾಲಯದಲ್ಲಿ 24 ಕ್ಯಾರೆಟ್ ಚಿನ್ನದ ವಿಗ್ರಹಗಳೊಂದಿಗೆ ಮದುವೆ ಕಾರ್ಡ್ ಆಗಿದೆ. ಅಂಬಾನಿಯವರ ಮದುವೆಯ ಆಮಂತ್ರಣ ಪತ್ರಿಕೆಯು ಮತ್ತೊಂದು ಬೆಳ್ಳಿಯ ಪೆಟ್ಟಿಗೆಯನ್ನು ಒಳಗೊಂಡಿದೆ. ಅದರ ಮುಂದೆ ವಿಷ್ಣುವಿನ ಆಕೃತಿಯಿದೆ. ಪೆಟ್ಟಿಗೆಯನ್ನು ತೆರೆಯುವಾಗ, ಅದರಲ್ಲಿ ಒಂದು ಶಾಲು ಇತ್ತು, ಅದರ ಮೇಲೆ ಓಂ ಕಸೂತಿ ಮಾಡಿದ ನೆಟ್ ಹ್ಯಾಂಕಿ ಇತ್ತು. ಪೆಟ್ಟಿಗೆಯಲ್ಲಿ ಚಿನ್ನದಿಂದ ಅಲಂಕರಿಸಲ್ಪಟ್ಟ ವಿವಿಧ ಹಿಂದೂ ವಿಗ್ರಹಗಳೂ ಇದೆ. ಬೆಳ್ಳಿಯಿಂದ…

Read More

ರತನ್ ಟಾಟಾ ಶ್ರೀಮಂತ ಉದ್ಯಮಿ. ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ರೂಪಾಯಿ ಹಣವನ್ನು ದೇಣಿಯಾಗಿ ನೀಡಿದ್ದಾರೆ. ಇದೊಂದೆ ಅಲ್ಲ ಪ್ರತಿ ಭಾರಿ ಭಾರತಕ್ಕೆ ಸಂಕಷ್ಟ ಎದುರಾದಾಗ ರತನ್ ಟಾಟಾ ನೆರವು ನೀಡಿದ್ದಾರೆ.ಆದರೆ ಇದೇ ಮೊದಲ ಬಾರಿಗೆ ರತನ್ ಟಾಟಾ ಸಾರ್ವಜನಿಕರಲ್ಲಿ ನರೆವು ಕೇಳಿದ್ದಾರೆ. ಒಂದು ನಾಯಿಯ ಪ್ರಾಣ ಉಳಿಸಲು ರತನ್ ಟಾಟಾ ಸಾರ್ವಜನಿಕರಲ್ಲಿ ವಿಶೇಷ ಮನವಿ ಮಾಡಿದ್ದಾರೆ. ರತನ್ ಟಾಟಾ ತಮ್ಮ ಇನ್’ಸ್ಟಾಗ್ರಾಂ ಖಾತೆ ಮೂಲಕ ಸಹಾಯ ಕೋರಿದ್ದಾರೆ. 7 ತಿಂಗಳ ನಾಯಿ ಮರಿಯೊಂದನ್ನು ಆಸ್ಪತ್ರೆ ದಾಖಲಿಸಲಾಗಿದೆ. ಈ ನಾಯಿ ಪ್ರಾಣ ಉಳಿಸಲು ಯಾರಾದರೂ ನಾಯಿ ರಕ್ತ ದಾನ ಮಾಡಬೇಕಿದೆ. ತುರ್ತಾಗಿ ರಕ್ತದ ಅವಶ್ಯಕತೆ ಇದೆ ಎಂದು ರತನ್ ಟಾಟಾ ಮನವಿ ಮಾಡಿದ್ದಾರೆ. ಜ್ವರ ಹಾಗೂ ಇತರ ಕೆಲ ಆರೋಗ್ಯ ಸಮಸ್ಯೆಯಿಂದ ನಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಮಗೆ ಈಗ ಮುಂಬೈನಲ್ಲಿ ತುರ್ತಾಗಿ ನಾಯಿಯ ರಕ್ತದಾನ ಮಾಡುವರು ಬೇಕಾಗಿದ್ದಾರೆ. ರಕ್ತದಾನ ಮಾಡುವ ನಾಯಿ ಆರೋಗ್ಯವಾಗಿರಬೇಕ. 1 ರಿಂದ 8 ವರ್ಷದೊಳಗಿರಬೇಕು. ಕನಿಷ್ಠ 25…

Read More