Author: admin

ಬೆಂಗಳೂರು: ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ. ಜಾತ್ಯಾತೀತರಾಗಿ ಅವರು ಬದುಕಿದಂತೆ ಸಮಾಜದ ಎಲ್ಲಾ ಜನರು ಬದುಕಿ ಅವರನ್ನು ಸ್ಮರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಾಡಪ್ರಭು ಕೆಂಪೇಗೌಡ ಪಾಪಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರ, ಬಿಬಿಎಂಪಿ ಹಾಗೂ ಕನ್ನಡ ಸಂಸ್ಕøತಿ ಇಲಾಖೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾಡಿನ ಜನತೆ ಕೆಂಪೇಗೌಡರ ದಿನಾಚರಣೆಯನ್ನು ಆಚರಿಸಿ ಸಂಭ್ರಮಿಸುವುದಲ್ಲದೇ ಕೆಂಪೇಗೌಡರು ಸಮಾಜಮುಖಿಯಾಗಿ ಕೆಲಸ ಮಾಡಿದಂತೆ ಪ್ರತಿಯೊಬ್ಬರೂ ಸಮಾಜಮುಖಿಯಾಗಿ, ವಿಶ್ವಮಾನವರಾಗಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂಬ ಕಾರಣದಿಂದ ಕೆಂಪೇಗೌಡರ ಜಯಂತಿ ಆಚರಿಸಲಾಗುತ್ತಿದೆ ಎಂದರು. ಕೆಂಪೇಗೌಡರು ಜಾತ್ಯಾತೀತ ವ್ಯಕ್ತಿ: ಕೆಂಪೇಗೌಡರು ನಮ್ಮೆಲ್ಲರಿಗೂ ಪ್ರೇರಣೆಯಾಗಬೇಕು. ಅವರು ಈ ನಾಡಿನ ದೊರೆಯಾಗಿ ಮಾದರಿ ಆಡಳಿತವನ್ನು ನೀಡಿದ್ದರು. ರೈತ ಸಮುದಾಯದಲ್ಲಿ ಜನಿಸಿದ್ದರೂ ಕೂಡ ಅವರ ಆಡಳಿತದ ಅವಧಿಯಲ್ಲಿ ಜಾತಿ, ಧರ್ಮ ಎಂದು ವಿಂಗಡನೆ ಮಾಡಲಿಲ್ಲ. ಎಲ್ಲಾ ಜನಾಂಗ, ಜಾತಿಯವರನ್ನು ಅಭಿವೃದ್ಧಿಗೊಳಿಸಲು ಪ್ರಯತ್ನಿಸಿದರು. ಅವರ ಆಡಳಿತ ಕಾಲದಲ್ಲಿ ಅವರು ಕೈಗೊಂಡ ಅಭಿವೃದ್ಧಿಯನ್ನು…

Read More

ಬೆಂಗಳೂರು: ರಾಜ್ಯ ಗೃಹ ಇಲಾಖೆಯ ಆಧುನೀಕರಣಗೊಳಿಸಲು ವಿಶೇಷ ಅನುದಾನಕ್ಕಾಗಿ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆಯ ಕೆಲ ಯೋಜನೆಗಳು ಬಾಕಿ ಉಳಿದಿವೆ. ಹೀಗಾಗಿ ಮುಖ್ಯಮಂತ್ರಿಯವರು ಮತ್ತು ಉಪಮುಖ್ಯಮಂತ್ರಿಯವರು ನನ್ನನ್ನು ದೆಹಲಿಗೆ ಕರೆದಿದ್ದಾರೆ ಎಂದರು. ಪೊಲೀಸ್ ಗೃಹ ಯೋಜನೆಯಡಿ 10 ಸಾವಿರ ಮನೆ ನಿರ್ಮಾಣ ಮಾಡಲಾಗಿದೆ. ರಾಜ್ಯ ಸರ್ಕಾರವು ಶೇ. 75ರಷ್ಟು ಪೊಲೀಸರಿಗೆ ಮನೆ ನಿರ್ಮಿಸಿಕೊಡುವ ಗುರಿ ಇಟ್ಟುಕೊಂಡಿದ್ದೇವೆ. ಪ್ರಸ್ತುತ ಶೇ. 40ರಷ್ಟು ಮನೆ ನಿರ್ಮಿಸಲಾಗಿದೆ. ಅಲ್ಲದೇ, ಇಲಾಖೆಯ ಆಧುನೀಕರಣಕ್ಕೆ ಅನುದಾನ ನೀಡುವಂತೆಯೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ರಾಜ್ಯಕ್ಕೆ ಬರಬೇಕಾದ ಅನುದಾನದ ಬಗ್ಗೆ ಸಿಎಂ ಅವರು ಪ್ರಧಾನ ಮಂತ್ರಿಯ ಸಮಯ ಕೇಳಿದ್ದಾರೆ. ಅಲ್ಲಿಯೂ ಪ್ರಸ್ತಾಪ ಮಾಡಲಾಗುವುದು ಎಂದು ಹೇಳಿದರು. ದೆಹಲಿಯಲ್ಲಿ ನಡೆಯಲಿರುವ ಸಭೆಗೆ ಕೇಂದ್ರದ ಎಲ್ಲ ಸಚಿವರನ್ನು ಹಾಗೂ ಎಲ್ಲ ಸಂಸದರನ್ನು ಆಹ್ವಾನಿಸಲಾಗಿದೆ. ರಾಜ್ಯದ ಸಮಸ್ಯೆಗಳನ್ನು ಗಮನಕ್ಕೆ…

Read More

ಕೊರಟಗೆರೆ : ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ವಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಆಚರಣೆ ಮಾಡಲಾಯಿತು. ತಾಲೂಕು ಪಂಚಾಯತಿಯ ಸಮುದಾಯ ಭವನದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಅದ್ದೂರಿಯಾಗಿ ಆಚರಿಸಲಾಯಿತು. ತಹಶೀಲ್ದಾರ್ ಮಂಜುನಾಥ್ ಕೆ. ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ವಕ್ಕಲಿಗರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಮತ್ತು ನಿರ್ದೇಶಕರು ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಹಶೀಲ್ದಾರ್ ಮಂಜುನಾಥ್ ಕೆ., ರಾಜ್ಯ ಸರ್ಕಾರದ ಆದೇಶದಂತೆ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ ಪರಮೇಶ್ವರ್ ಅವರ ಮಾರ್ಗದರ್ಶನದಂತೆ ಈ ಬಾರಿ ವಿಭಿನ್ನವಾಗಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಿದ್ದೇವೆ. ತಾಲೂಕಿನ ಸರ್ಕಾರಿ ಶಾಲೆಗಳ ಮಕ್ಕಳಿಂದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಸ್ಪರ್ಧೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಿ,ಸನ್ಮಾನಿಸಿ, ಕೆಂಪೇಗೌಡರ ಆಶಯದಂತೆ ಅವರ ಜೀವನದ ಮೌಲ್ಯದಾರಿತ ಗುಣಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ವಿದ್ಯಾಭ್ಯಾಸ…

Read More

ಪಾವಗಡ: ಬೆಳೆ ವಿಮೆ ಸಮೀಕ್ಷೆ, ಬೆಳೆ ವಿಮೆ ನೋಂದಣಿ ವಿಚಾರವಾಗಿ ಸಿ.ಕೆ.ಪುರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಹಾಯಕ ಕೃಷಿ ನಿರ್ದೇಶಕ ಬೀರೆದ್ರ ಬಾಬು ರೈತರಿಗೆ ತರಬೇತಿ ನೀಡಿದರು. ಪಾವಗಡ ತಾಲೂಕಿನ ಸಿ.ಕೆ.ಪುರ ಗ್ರಾಮ ಪಂಚಾಯತಿ ಆವರಣದಲ್ಲಿತರಬೇತಿ ನೀಡಿದ ಅವರು, ರೈತರಿಗೆ ಕೃಷಿ ಬೆಳೆಗಳಲ್ಲಿ ಬಿತ್ತನೆ ಹಂತದಿಂದ ಕಟಾವು ಹಂತದ ವರೆಗೆ ಬರ, ಆಲಿಕಲ್ಲುಮಳೆ, ಭೂಕುಸಿತ ಮುಂತಾದ ಪ್ರಕೃತಿ ವಿಕೋಪಗಳಿಂದ ಇಳುವರಿ ನಷ್ಟ ಸಂಭವಿಸಿದಲ್ಲಿ ಸಮಗ್ರ ವಿಮಾ ಭದ್ರತೆಯನ್ನು ಒದಗಿಸುವ ಸಲುವಾಗಿ 2024 ರ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗುತ್ತದೆ ಎಂದರು. ಸದರಿ ಯೋಜನೆ ಇಡೀ ವಿಮಾ ಪರಿಹಾರ ಮೊತ್ತವನ್ನು ಪಡೆಯಲು ಬೆಳೆ ಸಮೀಕ್ಷೆ ಕಾರ್ಯಕ್ರಮದಲ್ಲಿ ರೈತರು ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ಬೆಳೆಗಳು ದಾಖಲಾಗುವುದು ಕಡ್ಡಾಯವಾಗಿರುತ್ತದೆ ಆದ್ದರಿಂದ ಪ್ರಸ್ತುತ ಹಂಗಾಮಿನ ಬೆಳೆ ವಿಮೆ ಯೋಜನೆಯಲ್ಲಿ ವಿಮೆಗೆ ಒಳಪಡುವ ವಿಮಾ ಘಟಕಗಳು ಬೆಳೆಗಳು ಪ್ರೀಮಿಯಂ ಮೊತ್ತ ಬೆಳೆವಾರು ವಿಮಾ ಮೊತ್ತ ಹಾಗೂ…

Read More

ತುರುವೇಕೆರೆ: ಜಿಲ್ಲೆಯಲ್ಲಿ ಸುಮಾರು 300 ಮಿಲಿ ಮೀಟರ್ ಮಳೆಯಾಗಿದ್ದು ರೈತರಿಗೆ ಬಿತ್ತನೆಗೆ ಯಾವುದೇ ತೊಂದರೆಯಾಗದಂತೆ ಗೊಬ್ಬರ ಬಿತ್ತನೆ ಬೀಜಗಳಿಗೆ ಕೊರತೆಯಾಗದಂತೆ 11 ಹೆಚ್ಚುವರಿ ಮಳಿಗೆಗಳನ್ನು ತೆರೆಯಲಾಗಿದ್ದು ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅಭಿಪ್ರಾಯಪಟ್ಟರು. ಪಟ್ಟಣದ ವೈ ಟಿ ರಸ್ತೆಯ ಗಣಪತಿ ಪೆಂಡಾಲ್ನಲ್ಲಿ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿಮಾತನಾಡಿದ ಅವರು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಏಳು ಜನ ಸ್ಪಂದನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮುಗಿಸಿದ್ದೇವೆ ಇದು ಎಂಟನೇ ಕಾರ್ಯಕ್ರಮ ಪ್ರಮುಖವಾಗಿ ಕೃಷಿ ಇಲಾಖೆಯಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಈ ಬಾರಿ ಜಿಲ್ಲೆಯಲ್ಲಿ ಸುಮಾರು 300 ಮಿಲಿ ಮೀಟರ್ ಮಳೆಯಾಗಿದ್ದು ರೈತರಿಗೆ ಬಿತ್ತನೆಗೆ ಯಾವುದೇ ತೊಂದರೆಯಾಗದಂತೆ ಗೊಬ್ಬರ ಬಿತ್ತನೆ ಬೀಜಗಳಿಗೆ ಕೊರತೆಯಾಗದಂತೆ 11 ಹೆಚ್ಚುವರಿ ಮಳಿಗೆಗಳನ್ನು ತೆರೆಯಲಾಗಿದ್ದು ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದರು. ನಮ್ಮ ಜಿಲ್ಲೆಯಲ್ಲಿ ಕಳೆದ ವರ್ಷದ ಬೆಳೆ ವಿಮೆ 70 ಕೋಟಿ ರೂಪಾಯಿಗಳನ್ನು ಈಗಾಗಲೇ ರೈತರ ಖಾತೆಗಳಿಗೆ ಜಮೆ ಮಾಡಲಾಗಿದ್ದು ಕಳೆದ ಸಾಲಿನಲ್ಲಿ ಕೇವಲ 70000…

Read More

ಸ್ಯಾಂಡಲ್ ವುಡ್ ಸದ್ಯ ಸಿನಿಮಾಗಳ ಬದಲಿಗೆ ಕೊಲೆ ಪ್ರಕರಣ, ಡೈವೋರ್ಸ್ ಸುದ್ದಿಗೆ ಇದೀಗ ಭಾರೀ ಸದ್ದು ಮಾಡಿಕೊಂಡಿದೆ. ಈಗ ಈ ಡಿವೋರ್ಸ್ ತಮಿಳು ಚಿತ್ರರಂಗದ ಖ್ಯಾತ ನಟನಿಗೂ ತಟ್ಟಿದೆ ಎನ್ನಲಾಗಿದೆ. ಈ ಕುರಿತು ಇದೀಗ ಸಾಕಷ್ಟು ಚರ್ಚೆಯಾಗುತ್ತಿದೆ. ಕಾಲಿವುಡ್ ಅಂಗಳದಲ್ಲಿ ಜಯಂ ರವಿ ಮತ್ತು ಆರತಿ ರವಿ ಅವರ ದಾಂಪತ್ಯದಲ್ಲಿ ಬಿರುಕು ಮಾಡಿದೆ ಎನ್ನುವ ಸುದ್ದಿ ಬಹಳ ಬೇಗ ಹರಡುತ್ತಿದೆ. ಏಕೆಂದರೆ ಆರತಿ ರವಿ ಅವರು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ತಮ್ಮ ಗಂಡ ಜಯಂ ರವಿ ಅವರ ಜೊತೆಗಿರುವ ಎಲ್ಲಾ ಫೋಟೋಗಳನ್ನು ಅಳಿಸಿ ಹಾಕಿದ್ದು, ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ. ಈ ಊಹಾಪೋಹಗಳು ನಿಜವೇ? ಅಥವಾ ಸುಳ್ಳೂಆಗಬಹುದೇ ಎಂಬುವುದನ್ನು ಮುಂದಿನ ದಿನಗಳಲ್ಲಿ ಅಧಿಕೃತ ಮಾಹಿತಿ ಸಿಗುತ್ತೆ ಕಾದು ನೋಡಬೇಕು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿಕೊಂಡಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಅವರ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಅವರನ್ನು ಭೇಟಿ ಮಾಡಿ ಬಂದಿದ್ದರು. ಈ ಬೆನ್ನಲ್ಲೇ ವಿಜಯಲಕ್ಷ್ಮೀ ಅವರು ಇನ್’ಸ್ಟಾಗ್ರಾಮ್ ಖಾತೆಯಲ್ಲಿ ಒಂದು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ನಟ ದರ್ಶನ್ ಅವರಿಗೆ ಕೇಡು ಬಯಸಿದವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾರೆ. ಆದರೆ, ದರ್ಶನ್ ಅಭಿಮಾನಿಗಳು ತಾಳ್ಮೆ ಕಳೆದುಕೊಂಡು ಮಾತನಾಡದೇ ಶಾಂತಿಯಿಂದ ಇರಬೇಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ವಿಜಯಲಕ್ಷ್ಮೀ ನಮಗೆ ನ್ಯಾಯ ಸಿಕ್ಕೇ ಸಿಗುತ್ತೆ ಎಂದು ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ. ಪೋಸ್ಟ್ ನಲ್ಲಿ ಏನಿದೆ?: ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ.…

Read More

ಚಿನ್ನ ಬೆಳ್ಳಿ ಎರಡೂ ಬೆಲೆ ಇಂದು ಇಳಿಕೆ ಕಂಡಿದೆ. ಭಾರತದಲ್ಲಿ ಬೆಳ್ಳಿ ಬೆಲೆ ಗ್ರಾಮ್ ಗೆ 10 ಪೈಸೆ ಕಡಿಮೆ ಆಗಿದೆ. ಈ ವಾರದ ಆರಂಭದಿಂದಲೂ ಬೆಳ್ಳಿ ಬೆಲೆ ಸತತವಾಗಿ ಕುಸಿಯುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,000 ರುಪಾಯಿ ಇದೆ. ಪ್ರತಿ ಗ್ರಾಂ ಚಿನ್ನದ ರೇಟ್ ಏನು?: ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ, 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 5,400 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 6,600 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,200 ಆಗಿದೆ. ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 43,200 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 52,800 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,600…

Read More

ಬಿಜೆಪಿಯ ಹಿರಿಯ ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಡ್ವಾಣಿ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು, ರಾಮ ಮಂದಿರ ಹೋರಾಟದಲ್ಲಿ ಮುಂಚೂಣಿ ನಾಯಕರಲ್ಲಿ ಒಬ್ಬರಾಗಿದ್ದ ಅಡ್ವಾಣಿ, ಇತ್ತೀಚೆಗೆ ನಡೆದ ರಾಮಮಂದಿರ ಉದ್ಘಾಟನೆಗೂ ಆಗಮಿಸಿರಲಿಲ್ಲ. 96 ವರ್ಷದ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬುಧವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಡ್ವಾಣಿ ಅವರ ತಪಾಸಣೆ ಮಾಡುತ್ತಿರುವ ಏಮ್ಸ್ ವೈದ್ಯರು ಕಾರಣವನ್ನು ಬಹಿರಂಗಪಡಿಸಿಲ್ಲ. ಮೂತ್ರಶಾಸ್ತ್ರದ ವಿಭಾಗದ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ. ಪ್ರಸ್ತುತ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ. ಅಡ್ವಾಣಿಯವರು ವೃದ್ಧಾಪ್ಯ ವಿಭಾಗದ ತಜ್ಞರ ಅಡಿಯಲ್ಲಿ ವಯೋಸಹಜ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಕೀಯ, ದೇಶದ ಆಡಳಿತ, ದೇಶಕ್ಕಾಗಿ ಅವರ ಅಘಮ್ಯ ಸೇವೆಗಾಗಿ ಈ ಬಾರಿಯ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿಯಾಗ ಭಾರತ ರತ್ನವನ್ನು ನೀಡಿ ಅಡ್ವಾಣಿಯವರನ್ನು ಗೌರವಿಸಲಾಗಿದೆ. 2024ರ ಮಾರ್ಚ್…

Read More

ಮಹಿಳೆಯರು ಹಾಗೂ ಕೆಲ ಪುರುಷರು ಬಿಳಿ ಕೂದಲನ್ನು ಮರೆ ಮಾಚಲು ಮೆಹಂದಿ ಹಚ್ಚುತ್ತಾರೆ. ಮೆಹಂದಿ ದೇಹಕ್ಕೆ ತಂಪು ಎಂಬ ಭಾವನೆ ಹಲವರಲ್ಲಿ ಇದೆ. ನಿಮ್ಮ ಕೂದಲನ್ನು ಕಪ್ಪಾಗಿಸಿಕೊಳ್ಳಲು ನೀವು ಕೂಡ ಮೆಹಂದಿ ಬಳಸುತ್ತಿದ್ದರೆ, ಮೊದಲು ಅದರಿಂದಾಗುವ ಹಾನಿಯ ಬಗ್ಗೆ ತಿಳಿದುಕೊಳ್ಳುವುದು ಮುಖ್ಯ. ಮೆಹಂದಿಯು ಜನಪ್ರಿಯ ನೈಸರ್ಗಿಕ ಕೂದಲು ಬಣ್ಣ ಮತ್ತು ಕಂಡಿಷನರ್ ಆಗಿದ್ದರೂ, ಅದರ ಸಂಭಾವ್ಯ ಅಡ್ಡಪರಿಣಾಮಗಳ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯ. ಮೆಹಂದಿಯು ಅದರ ಕಂಡೀಷನಿಂಗ್ ಗುಣಲಕ್ಷಣಗಳಿಂದ ಮೆಚ್ಚುಗೆ ಪಡೆದರೂ, ಕೆಲವರಲ್ಲಿ ಇದರಿಂದ ಕೂದಲು ಒರಟಾಗುವುದನ್ನು ನಾವು ಗಮನಿಸಬಹುದು. ನಿಮ್ಮ ಕೂದಲಿಗೆ ಮೆಹಂದಿ ಆಗಾಗ ಹಚ್ಚುವುದರಿಂದ ನಿಮ್ಮ ಕೂದಲಿನ ನೈಸರ್ಗಿಕ ಕೂದಲಿನ ಬಣ್ಣವನ್ನು ಹಾನಿಗೊಳಿಸುತ್ತದೆ. ಅಲ್ಲದೇ ಈ ಮೆಹಂದಿ ಬಣ್ಣ ಮಾಸಿದಾಗ ನಿಮ್ಮ ಕೂದಲು ಕೆಂಪು ಬಣ್ಣಕ್ಕೆ ತಿರುಗಲು ಪ್ರಾರಂಭಿಸುತ್ತದೆ. ನಿಮ್ಮ ಕೂದಲಿಗೆ ಮೆಹಂದಿ ಹಚ್ಚುವುದರಿಂದ ಕೂದಲಿನ ನೈಸರ್ಗಿಕ ತೈಲಗಳು ಹೊರಹೋಗುತ್ತವೆ. ಇದರಿಂದ ನಿಮ್ಮ ಕೂದಲು ಶುಷ್ಕವಾಗಿರುತ್ತದೆ. ಮೆಹಂದಿಯನ್ನು ನೆತ್ತಿಗೆ ಹಚ್ಚಿದ ನಂತರ ಕೂದಲನ್ನು ಸರಿಯಾಗಿ ತೊಳೆಯದಿದ್ದರೆ, ಮೆಹಂದಿ…

Read More