Author: admin

ತುಮಕೂರು: ಗ್ರಾಮ ಮಟ್ಟದಲ್ಲಿ ಗ್ರಾಮ ಲೆಕ್ಕಾಧಿಕಾರಿ ಹಾಗೂ ಕಂದಾಯ ನಿರೀಕ್ಷಕರುಗಳು ತಮ್ಮ ವ್ಯಾಪ್ತಿಯ ಸಮಸ್ಯೆಗಳನ್ನು ಸ್ಥಳೀಯವಾಗಿ ಪರಿಹರಿಸಿದಲ್ಲಿ ಜನರು ಸರ್ಕಾರವನ್ನು ದೂರುವುದು ತಪ್ಪುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು. 15 ದಿನದೊಳಗೆ ಅರ್ಜಿ ವಿಲೇವಾರಿಗೆ ಸೂಚನೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ತುರುವೇಕೆರೆ ಪಟ್ಟಣದ ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿಂದು ಆಯೋಜಿಸಿದ್ದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆ ಸೇರಿದಂತೆ ಪಂಚಾಯಿತಿ ಮಟ್ಟದ ಅಧಿಕಾರಿ, ಸಿಬ್ಬಂದಿಗಳು ಜನರಿಂದ ವಿವಿಧ ಸೌಲಭ್ಯ ಕೋರಿ ಸ್ವೀಕೃತವಾದ ಅರ್ಜಿಗಳು ಅರ್ಹವೇ? ಅನರ್ಹವೇ? ಎಂದು ಪರಿಶೀಲಿಸಿ ೧೫ ದಿನಗಳೊಳಗಾಗಿ ವಿಲೇವಾರಿ ಮಾಡಬೇಕು. ಸ್ಥಳೀಯ ಅಧಿಕಾರಿಗಳು ನಿಗಧಿತ ಸಮಯದೊಳಗೆ ವಿಲೇವಾರಿ ಮಾಡದೇ ಹೋದರೆ ಜನರು ಜಿಲ್ಲಾ ಕೇಂದ್ರಕ್ಕೆ ಬರುತ್ತಾರೆ. ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಬಿಟ್ಟು ದೂರದ ಜಿಲ್ಲಾ ಕೇಂದ್ರಕ್ಕೆ ಬರುವುದನ್ನು ತಪ್ಪಿಸಬೇಕು ಎಂದು ತಿಳಿಸಿದರು. ಪಿಂಚಣಿ ಸೌಲಭ್ಯ ಮನೆ ಬಾಗಿಲಿಗೆ ತಲುಪಿಸಿ: ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುವ ವಿಧವಾ…

Read More

ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿ ಕಡಿತಕ್ಕೊಳಗಾಗುವ ನಾಗರೀಕರಿಗೆ ದಾಖಲೆಗಳ ಪರಿಶೀಲನಾ ಮತ್ತು ಪರಿಹಾರಧನ ವಿತರಣೆಗೆ ಸಂಬಂಧಿಸಿದಂತೆ ಸಮಿತಿ ರಚನೆ ಮಾಡಲಾಗಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೊಳಗಾಗುವ ವ್ಯಕ್ತಿಗಳಿಗೆ ತಗುಲುವ ಚಿಕಿತ್ಸಾ ವೆಚ್ಚ, ಪರಿಹಾರ ಧನ ಹಾಗೂ ಮರಣ ಸಂಭವಿಸಿದ್ದಲ್ಲಿ ಮರಣ ಹೊಂದಿದವರ ಸಂಬಂಧಿತರಿಗೆ ಮರಣೋತ್ತರ ಪರಿಹಾರಕ್ಕೆ ಸಂಬಂಧಿಸಿದಂತೆ ಪರಿಹಾರ ನೀಡಲು ಸಮಿತಿ ರಚಿಸುವಂತೆ ಸರ್ಕಾರ ಆದೇಶಿಸಿರುವ ಹಿನ್ನೆಲೆಯಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ. ಆಯುಕ್ತರಿಂದ 5 ಮಂದಿಗೆ ಪರಿಹಾರ ಧನ ವಿತರಣೆ : ರೇಬಿಸ್ ನಾಯಿಯ ದಾಳಿಗೆ ಒಳಗಾದ ರಾಮಕೃಷ್ಣ ರಾವ್ ಬಿನ್ ನಾಗಪ್ಪ(೬೫ ವರ್ಷ), ಸಂಜೀವಿನಿ ಬಿನ್ ರಮೇಶ್(೯ ವರ್ಷ), ಶಿವಮ್ಮ ಕೋಂ ರಾಜಶೇಖರ್(೫೨ ವರ್ಷ), ಜಾಹೀದ್ ಖಾನ್ ಬಿನ್ ನಯಾಜ್ ಖಾನ್(೧೪ ವರ್ಷ) ಮತ್ತು ಬಾಬಾ ಜಾನ್ ಎಂ ಬಿನ್ ಮೆಹಬೂಬ್ ಪಾಷ (೩೦ ವರ್ಷ) ಅವರಿಗೆ ತಲಾ ೫,೦೦೦ ರೂ.ಗಳಂತೆ ಪಾಲಿಕೆ ವತಿಯಿಂದ ಆಯುಕ್ತ…

Read More

ಬೆಂಗಳೂರು: ನಾಡದೊರೆ ಕೆಂಪೇಗೌಡ ಜಯಂತಿ ಆಚರಣೆ ಸಂದರ್ಭ, ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರನ್ನು ಕೈಬಿಟ್ಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಈಗ ಚರ್ಚೆಗೆ ಗ್ರಾಸವಾಗಿದೆ. ದೆಹಲಿಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಕೆಂಪೇಗೌಡ ಇಡೀ ರಾಜ್ಯಕ್ಕೆ ಸೇರಿದವರಾಗಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ನಮ್ಮ ಹೆಸರನ್ನು ಕೈಬಿಡಲಾಗಿದೆ ಎಂಬ ಮಾಹಿತಿ ಗೊತ್ತಾಗಿದೆ. ಆದರೆ ನಾನು ಹೆಚ್ಚಿನ ಮಹತ್ವ ನೀಡುವುದಿಲ್ಲ. ಆಹ್ವಾನ ಪತ್ರಿಕೆಗಳಲ್ಲಿ ಹೆಸರು ಹಾಕದೇ ಇರುವುದನ್ನು ನಾನು ದೊಡ್ಡ ವಿಷಯ ಮಾಡುವುದಿಲ್ಲ ಎಂದು ಹೇಳಿದ್ದಾರೆ. ‘ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬೆಂಗಳೂರು ನಗರದ ಬೆಳವಣಿಗೆಗೆ ಕೊಡುಗೆ ನೀಡಿದ್ದೇನೆ. ಕೆಂಪೇಗೌಡರಿಗೆ ಗೌರವ ತರುವ ಕೆಲಸಗಳನ್ನು ಮಾಡಿದ್ದೇನೆ. ಈಗ ಅವರು ನನ್ನ ಹೆಸರನ್ನು ಸೇರಿಸಿದರೆ, ನಾನು ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಿಲ್ಲ. ನಾಳೆ, ರಾಷ್ಟ್ರಪತಿಗಳು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಆಗ ನಾನು ಇಲ್ಲಿ ದೆಹಲಿಯಲ್ಲೀ ಹಾಜರಿರಬೇಕು.…

Read More

ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ. ಯಾವುದೇ ಆತಂಕವಿಲ್ಲ ಎಂದು ಎಐಐಎಂಎಸ್ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ. ಮಾಜಿ ಉಪಪ್ರಧಾನಿ ಅವರನ್ನು ಕಳೆದ ದಿನ ದೆಹಲಿಯ ಏಮ್ಸ್‌ ಗೆ ದಾಖಲಿಸಲಾಗಿತ್ತು. ವಯೋಸಹಜ ಕಾಯಿಲೆಗಳಿಂದ ಅಡ್ವಾಣಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಲ್‌.ಕೆ.ಅಡ್ವಾಣಿ ಅವರು ಪ್ರಸ್ತುತ ಏಮ್ಸ್‌ನ ಜೆರಿಯಾಟ್ರಿಕ್ ವಾರ್ಡ್‌ನಲ್ಲಿ ನಿಗಾದಲ್ಲಿದ್ದಾರೆ. ಈ ವರ್ಷ ರಾಷ್ಟ್ರವು 96 ವರ್ಷದ ಎಲ್‌.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್.ಕೆ.ಅಡ್ವಾಣಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು. ಅಡ್ವಾಣಿ ಅವರ ಕುಟುಂಬ ಸದಸ್ಯರಿಗೆ ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ, ತಜ್ಞರ ಚಿಕಿತ್ಸೆಗೆ ಏಮ್ಸ್‌ ಎಲ್ಲಾ ಸೌಲಭ್ಯಗಳನ್ನು ಸಿದ್ಧಪಡಿಸಲಿದೆ ಎಂದು ಕುಟುಂಬ ಸದಸ್ಯರಿಗೆ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್…

Read More

ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರವಲ್ಲ, ಪಟ್ಟಣ ಮತ್ತು ನಗರಗಳಲ್ಲಿಯೂ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ಸಾರ್ವಜನಿಕರಿಂದ 10 ಮತ್ತು 20 ರೂ.ಗಳ ನಾಣ್ಯಗಳನ್ನು ತೆಗೆದುಕೊಳ್ಳಲು ಆಸಕ್ತಿ ವಹಿಸುತ್ತಿಲ್ಲ! 10, 20 ರೂಪಾಯಿ ನಾಣ್ಯಗಳು ಅಮಾನ್ಯ ಎಂಬ ಅಭಿಪ್ರಾಯ ಜನರಲ್ಲಿದೆ. ಈ ಬಗ್ಗೆ ರಿಸರ್ವ್ ಬ್ಯಾಂಕ್ ಹಲವಾರು ಪ್ರಕಟಣೆಗಳನ್ನು ಹೊರಡಿಸಿದ್ದರೂ, ವ್ಯಾಪಾರಿಗಳು 10 ಮತ್ತು 20 ರೂ.ಗಳ ನಾಣ್ಯಗಳು ಅಮಾನ್ಯವಾಗಿವೆ ಎಂದು ಸುಳ್ಳು ಮಾಹಿತಿಯನ್ನ ಹರಡುತ್ತಿದ್ದಾರೆ. ಸರ್ಕಾರಿ ಮಾನ್ಯತೆ ಪಡೆದ ಕರೆನ್ಸಿಯನ್ನು ಖರೀದಿಸಲು ನಿರಾಕರಿಸುವುದು ಕಾನೂನಿನ ಅಡಿಯಲ್ಲಿ ಅಪರಾಧವಾಗಿದೆ. ಭಾರತ ಸರ್ಕಾರವು ಅನುಮೋದಿಸಿದ 10 ಮತ್ತು 20 ರೂ.ಗಳ ನಾಣ್ಯಗಳನ್ನ ಅಮಾನ್ಯಗೊಳಿಸುವುದು ಅಥವಾ ಸ್ವೀಕರಿಸಲು ನಿರಾಕರಿಸುವುದು ಅಥವಾ ಹಣಕ್ಕೆ ಪ್ರತಿಯಾಗಿ ನೀಡುವುದು ಕಾನೂನಿನ ಅಡಿಯಲ್ಲಿ ಅಪರಾಧವಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ ಪ್ರಕಾರ, ಭಾರತ ಸರ್ಕಾರ ಅನುಮೋದಿಸಿದ ನಾಣ್ಯಗಳನ್ನ ಖರೀದಿಸಲು ನಿರಾಕರಿಸುವುದು ಅಪರಾಧವಾಗಿದೆ. ಈ ಅಪರಾಧಕ್ಕೆ ದಂಡದ ಜೊತೆಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು. ಭಾರತ ಸರ್ಕಾರ ಅನುಮೋದಿಸಿದ ಕರೆನ್ಸಿಯನ್ನ…

Read More

ಹೈದರಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿಗಳ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದಕ್ಕೆ  ಮಲಯಾಳಿ ವಿದ್ಯಾರ್ಥಿಗಳು ಸೇರಿದಂತೆ ಐವರನ್ನು ಅಮಾನತುಗೊಳಿಸಲಾಗಿದೆ. ಅಲ್ಲದೇ  ಮಲಯಾಳಿ ಮತ್ತು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೃಪಾ ಮರಿಯಾ ಜಾರ್ಜ್, ಒಕ್ಕೂಟದ ಅಧ್ಯಕ್ಷ ಅತೀಕ್ ಅಹಮದ್, ಮೋಹಿತ್, ಸೊಹೈಲ್ ಅಹಮದ್ ಮತ್ತು ಆಸಿಕಾ ವಿ.ಎಂ. ಉಪಕುಲಪತಿಗಳ ನಿವಾಸದ ಮೇಲೆ ಅತಿಕ್ರಮ ಪ್ರವೇಶ ಹಾಗೂ ದಾಳಿಗೆ ಯತ್ನಿಸಿದ ವಿದ್ಯಾರ್ಥಿಗಳ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದು ಸೇಡಿನ ಕ್ರಮ ಎಂದು ವಿದ್ಯಾರ್ಥಿಗಳು ಪ್ರತಿಕ್ರಿಯಿಸಿದ್ದಾರೆ. ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿ ಸಂಘಕ್ಕೆ ಅನುದಾನ ನೀಡುವಲ್ಲಿ ವಿಳಂಬ ಹಾಗೂ ವಾರ್ಷಿಕ ಸಂಭ್ರಮಾಚರಣೆ ಕಾರ್ಯಕ್ರಮ ‘ಸುಕೂಂ’ ನಡೆಸಲು ಅವಕಾಶ ನೀಡದಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ವಿಶ್ವವಿದ್ಯಾನಿಲಯ ಒಕ್ಕೂಟವು ಎಸ್‌ ಎಫ್‌ ಐ ನೇತೃತ್ವದಲ್ಲಿದೆ. ಜುಲೈ 1 ರಿಂದ ಆರು ತಿಂಗಳ ಕಾಲ ತರಗತಿಗಳಿಂದ ದೂರ ಉಳಿಯಲು ಮತ್ತು ಹಾಸ್ಟೆಲ್ ಖಾಲಿ ಮಾಡಲು ಕ್ರಮ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ತಿಳಿಸಿದೆ. ಅಂತಹ ಕ್ರಮದ ಸಂದರ್ಭದಲ್ಲಿ, ವಿದ್ಯಾರ್ಥಿಯ ಫೆಲೋಶಿಪ್ ಅನ್ನು ರದ್ದುಗೊಳಿಸಲಾಗುತ್ತದೆ.…

Read More

ಬೆಳಗಾವಿ: ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧ ಸಭಾಂಗಣದಲ್ಲಿ ಕೃಷಿ ಮತ್ತು ಜಲಾನಯನ ಇಲಾಖೆಗಳ ವಿಭಾಗ ಮಟ್ಟದ ಸಭೆ ನಡೆಸಿ ಮಾತನಾಡಿದ ಅವರು, “ಕೃಷಿಕರಿಗೆ ಯೋಜಿತ ತರಬೇತಿ ನೀಡಿ‌ ಸಾಮರ್ಥ್ಯ ಅಭಿವೃದ್ಧಿಗೆ ಕ್ರಮವಹಿಸಲಾಗುತ್ತಿದೆ . ವಿಜಯನಗರ,  ಯಾದಗಿರಿ ,ಗದಗ ,ಕೋಲಾರ, ಚಾಮರಾಜನಗರ, ರಾಮನಗರ,ಉಡುಪಿ ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಪ್ರಾರಂಭ ಮಾಡಲಾಗುವುದು” ಎಂದರು. ಕಬ್ಬಿನಲ್ಲಿ ಕೀಟ ನಿಯಂತ್ರಣಕ್ಕೆ ಅವಶ್ಯ ವಿರುವ ಟ್ರೈಕೋಗ್ರಾಮಾ ಪರತಂತ್ರ ಜೀವಿಯ ಉತ್ಪಾದನೆಯಲ್ಲಿ ನೂತನ ತಾಂತ್ರಿಕತೆ ಅಳವಡಿಕೆಗೆ ಸೂಚಿಸಿದ ಕೃಷಿ ಸಚಿವರು, ಮುಂದಿನ 6 ತಿಂಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಿ ರೈತರಿಗೆ ಒದಗಿಸುವಂತೆ ನಿರ್ದೇಶನ ನೀಡಿದರು. ಕೃಷಿ ಆಯುಕ್ತರಾದ ವೈ.ಎಸ್ ಪಾಟೀಲ್, ಜಲಾನಯನ ಇಲಾಖೆ ಆಯುಕ್ತರಾದ ಗಿರೀಶ್, ನಿರ್ದೇಶಕರಾದ ಪದ್ಮಯ್ಯ ನಾಯಕ್,ಕೃಷಿ ನಿರ್ದೇಶಕರಾದ  ಜಿ.ಟಿ ಪುತ್ರ ಅಪರ ನಿರ್ದೇಶಕರಾದ ವೆಂಕಟರಮಣ ರೆಡ್ಡಿ ಮತ್ತಿತರರು ಈ‌ ಸಂದರ್ಭದಲ್ಲಿ ಹಾಜರಿದ್ದರು. ನಮ್ಮತುಮಕೂರಿನ…

Read More

ಕರ್ನಾಟಕ ಕಾಂಗ್ರೆಸ್ ನಲ್ಲಿ ಡಿ.ಕೆ.ಶಿವಕುಮಾರ್ ಪ್ರಭಾವ ಕಡಿಮೆ ಮಾಡುವ ನಿಟ್ಟಿನಲ್ಲಿ ಸಿದ್ದರಾಮಯ್ಯನವರ ಕಡೆಯ ಸಚಿವರು ರಾಜ್ಯ ಸರ್ಕಾರದಲ್ಲಿ  ಹೆಚ್ಚಿನ ಉಪಮುಖ್ಯಮಂತ್ರಿಗಳ ಬೇಡಿಕೆ ಇಟ್ಟಿದ್ದಾರೆ. ಅಲ್ಪಸಂಖ್ಯಾತ ಮತ್ತು ದಲಿತ ಸಮುದಾಯದ ಉಪಮುಖ್ಯಮಂತ್ರಿಗಳನ್ನು ಆಯ್ಕೆ ಮಾಡುವಂತೆ ಹೈಕಮಾಂಡ್‌ಗೆ ಮನವಿ ಮಾಡಲಾಗಿದೆ. ಸಚಿವರ ಬೇಡಿಕೆಗಳಿಗೆ ಡಿ.ಕೆ. ಶಿವಕುಮಾರ್ ತೃಪ್ತಿ ಇಲ್ಲ ಎಂದು ಆಪ್ತ ಮೂಲಗಳು ತಿಳಿಸಿವೆ. ಇನ್ನೂ ಉಪ ಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂಬ ನಿಲುವಿನಲ್ಲಿ ಸಿದ್ದರಾಮಯ್ಯ ಇದ್ದಾರೆ ಎನ್ನಲಾಗಿದೆ. ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ನಿರೀಕ್ಷಿತ ಗೆಲುವು ಸಾಧಿಸದಿದ್ದಕ್ಕೆ ಡಿ.ಕೆ.ಶಿವಕುಮಾರ್ ಅವರೇ ಸಂಪೂರ್ಣ ಹೊಣೆ ಎಂದು ಸಿದ್ದರಾಮಯ್ಯ ಅವರ ಕಡೆಯ ಕೆಲ ಸಚಿವರು ಸಾರ್ವಜನಿಕವಾಗಿ ಪ್ರತಿಕ್ರಿಯಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತಷ್ಟು ಉಪಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಕಾರವಾರ: ಎರಡನೇ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಆಡಳಿತದಲ್ಲಿ ಪಾರದರ್ಶಕತೆ, ಸರಳತೆ ಹಾಗೂ ಸಕಾಲದಲ್ಲಿ ನಾಗರಿಕ ಸೇವೆಗಳನ್ನು ಕಡಿಮೆ ಖರ್ಚಿನಲ್ಲಿ ಒದಗಿಸಲು ಮಾಡಬೇಕಾದ ಸುಧಾರಣೆಗಳನ್ನು ಹಾಗೂ ಇಲಾಖೆಗಳ ಒಟ್ಟಾರೆ ಕಾರ್ಯನಿರ್ವಹಣೆಯನ್ನು ಸುಧಾರಿಸಲು ಆದ್ಯತೆಯನ್ನು ನೀಡಿದ್ದು, ಜನವರಿ 2024 ರ ಅಂತ್ಯಕ್ಕೆ 39 ಇಲಾಖೆಗಳಿಗೆ ಸಂಬ0ಧಿಸಿದ 7 ವರದಿಗಳನ್ನು ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿದ್ದು, ಈ ವರದಿಗಳಲ್ಲಿ ಒಟ್ಟು 5039 ಶಿಫಾರಸ್ಸುಗಳನ್ನು ಮಾಡಲಾಗಿದೆ ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ, ಆಡಳಿತ ಸುಧಾರಣೆಯ ಬಗ್ಗೆ ಸಲಹೆಗಳನ್ನು ಸ್ವೀಕರಿಸಿ ಮಾತನಾಡಿದರು. ಮೇ 2024 ರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಮತ್ತು ಸರ್ಕಾರದ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಆ.ಸು) ಯವರೊಂದಿಗೆ ಸಭೆ ನಡೆಸಿ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಆಡಳಿತ ಸುಧಾರಣಾ ಆಯೋಗದ ಶಿಫಾರಸ್ಸುಗಳ ಅನುಷ್ಠಾನÀದ…

Read More

ತುಮಕೂರು‌: ನಟ ದರ್ಶನ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಾಲ್ವರು ಆರೋಪಿಗಳನ್ನ ತುಮಕೂರಿನ ಕಾರಾಗೃಹಕ್ಕೆ  ಸ್ಥಳಾಂತರಿಸಲಾಗಿದೆ. 24ನೇ ಎಸಿಎಂಎಂ ಕೋರ್ಟ್ ಆದೇಶ ಹಿನ್ನೆಲೆ‌ ರೇಣುಕಾಸ್ವಾಮಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಯಿತು. ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವ್, ನಿಖಿಲ್ ತುಮಕೂರು ಜೈಲಿಗೆ ತಂದು ಇರಿಸಲಾಗಿದೆ. ತುಮಕೂರಿನ ಊರುಕೆರೆ ಬಳಿಯ ರಂಗಾಪುರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ  ಬಿಗಿ ಪೊಲೀಸ್ ಭದ್ರತೆಯಲ್ಲಿ ನಾಲ್ವರು ಆರೋಪಿಗಳನ್ನ ಸ್ಥಳಾಂತರ ಮಾಡಲಾಯಿತು. ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್  ಮಾಡಲಾಗಿತ್ತು. ಭದ್ರತಾ ದೃಷ್ಟಿಯಿಂದ ಈ ನಾಲ್ವರು ಆರೋಪಿಗಳನ್ನ ಪ್ರತ್ಯೇಕವಾಗಿಡಲು ಕೋರ್ಟ್ ಆದೇಶಿಸಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More