Author: admin

ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನೂತನವಾಗಿ ಆಯ್ಕೆಯಾದ 17 ಮಂದಿ ವಿಧಾನ ಪರಿಷತ್ ಸದಸ್ಯರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಶಿಕ್ಷಕ ಮತ್ತು ಪದವೀಧರ ಕ್ಷೇತ್ರದಿಂದ ಆಯ್ಕೆಯಾದ 17 ಜನ ಪರಿಷತ್ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ, ನೂತನ ಪರಿಷತ್ ಸದಸ್ಯರನ್ನ ಮಾತನಾಡಿಸಿ ಕುಶಲೋಪರಿ ವಿಚಾರಿಸಿದರು.ಈ ವೇಳೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ನಂತರ ನಡೆದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಹೆಚ್.ಕೆ ಪಾಟೀಲ್ ವೇದಿಕೆಯಲ್ಲಿದ್ದರು. ನೂತನ ಪರಿಷತ್ ಸದಸ್ಯರಾದ ಬೋಸರಾಜು, ಗೋವಿಂದರಾಜ್ (ಕಾಂಗ್ರೆಸ್), ಐವಾನ್ ಡಿಸೋಜ (ಕಾಂಗ್ರೆಸ್), ಜವರಾಯಿಗೌಡ (ಜೆಡಿಎಸ್), ಎಂ.ಜಿ. ಮೂಳೆ (ಬಿಜೆಪಿ), ಯತೀಂದ್ರ ಸಿದ್ದರಾಮಯ್ಯ (ಕಾಂಗ್ರೆಸ್), ಸಿ.ಟಿ ರವಿ (ಬಿಜೆಪಿ), ರವಿಕುಮಾರ್ (ಬಿಜೆಪಿ), ವಸಂತ್ ಕುಮಾರ್ (ಕಾಂಗ್ರೆಸ್), ಡಾ.ಚಂದ್ರಶೇಖರ ಪಾಟೀಲ್ (ಕಾಂಗ್ರೆಸ್ ಪದವೀಧರ…

Read More

ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಕುರಿತು ನಿರ್ಮಾಪಕ ಮತ್ತು ನಿರ್ದೇಶಕ ಓಂ ಪ್ರಕಾಶ್ ರಾವ್ ಪ್ರತಿಕ್ರಿಯಿಸಿದ್ದಾರೆ. ಸಣ್ಣ ವಿಷಯಕ್ಕೆ ಹೀಗೆಲ್ಲ ಮಾಡಿಕೊಂಡದ್ದು ಬೇಸರದ ಸಂಗತಿ. ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು, ಅಂಬರೀಶ್ ಇರುತ್ತಿದ್ದರೆ ದರ್ಶನ್ ಕಪಾಳಕ್ಕೆ ಬಾರಿಸಿ ಕೇಳುತ್ತಿದ್ದರು ಎಂದಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಸ್ಯಾಂಡಲ್ ವುಡ್ ನಲ್ಲಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇಷ್ಟು ಸಣ್ಣ ವಿಷಯಕ್ಕೆ ಅವರು ಕೊಲೆ ಮಾಡುವ ನಿರ್ಧಾರ ಮಾಡಬಾರದಿತ್ತು. ಈಗ ಆರೋಪಿ ಸ್ಥಾನದಲ್ಲಿ ನಿಂತಿದ್ದಾರೆ. ಅವರಿಗೆ ಇದೆಲ್ಲ ಬೇಕಿರಲಿಲ್ಲ ಎಂದು ಹೇಳಿದ್ದಾರೆ. ನಟ ದಿ.ಅಂಬರೀಶ್ ಅವರಿಗೆ ನಟ ದರ್ಶನ್ ತುಂಬಾ ಗೌರವ ಕೊಡುತ್ತಿದ್ದರು. ಅವರ ಈ ವೇಳೆ ಇದ್ದಿದ್ದರೆ ದರ್ಶನ್ ಕರೆದು ಕಪಾಳಕ್ಕೆ ಹೊಡೆಯುತ್ತಿದ್ದರು. ಇದು ತಪ್ಪು, ಹೀಗೆ ಮಾಡುವುದು ಸರಿಯಲ್ಲ ಎಂದು ಬುದ್ಧಿ ಹೇಳುತ್ತಿದ್ದರು. ಸುಮಲತಾ ಅವರು ಸಹ ದರ್ಶನ್ ಪ್ರಕರಣದಿಂದ ನೊಂದಿರುತ್ತಾರೆ ಎಂದು ಅವರು ಅಭಿಪ್ರಾಯಪಟ್ಟರು. ಚಿತ್ರದುರ್ಗದ ರೇಣುಕಾಸ್ವಾಮಿ ಮೇಲೆ ನಡೆದ ಹಿಂಸಾ ಪ್ರಯೋಗ ತುಂಬಾ…

Read More

ತನ್ನ ವೃತ್ತಿಯ ವಿಡಿಯೋ ವೈರಲ್ ಆದ ಕಾರಣಕ್ಕೆ ಮನನೊಂದು ಹಿರಿಯ ತ್ಯಾಜ್ಯ ಸಂಗ್ರಾಹಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೈಪುರದಲ್ಲಿ ನಡೆದಿದೆ. ಪ್ಲಾಸ್ಟಿಕ್ ಬಾಟಲಿಗಳು ಹಾಗೂ ಇನ್ನಿತರ ತ್ಯಾಜ್ಯಗಳನ್ನು ತನ್ನ ಕೈಗಾಡಿಯಲ್ಲಿ ಸಂಗ್ರಹಿಸುತ್ತಿದ್ದ ಆ ಹಿರಿಯ ತ್ಯಾಜ್ಯ ಸಂಗ್ರಾಹಕ, ತನ್ನ ಜೀವನೋಪಾಯಕ್ಕಾಗಿ ಆ ತ್ಯಾಜ್ಯಗಳನ್ನು ಮಾರಾಟ ಮಾಡಿಕೊಂಡಿದ್ದರು ಎನ್ನಲಾಗಿದೆ. ಲೌಹಾತ್ ಗ್ರಾಮದ ಕೆಲವು ಯುವಕರು ಆತನ ವೃತ್ತಿಯನ್ನು ಅಣಕವಾಡಿ, ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದರು ಎನ್ನಲಾಗಿದೆ. ಈ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು. ಇದರಿಂದ ಆ ಹಿರಿಯ ವ್ಯಕ್ತಿಯನ್ನು ಅನೇಕರು ಗುರುತಿಸಲು ಪ್ರಾರಂಭಿಸಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸರು, “ತ್ಯಾಜ್ಯ ಸಂಗ್ರಾಹಕನ ಮೃತದೇಹ ಹೆದ್ದಾರಿ ಬಳಿಯ ಮರವೊಂದರಲ್ಲಿ ನೇತಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಪ್ರಗತಿಯಲ್ಲಿದೆ” ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಕನ್ನಡದ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಸೇರಿದ್ದಾರೆ. ಇಡೀ ವಿಶ್ವವನ್ನೇ ಎದುರಿಸಿ ನಿಲ್ತೇನೆ ಕೇವಲ ಡಿ ಬಾಸ್ ಗಾಗಿ ಎಂದಿದ್ದ ವಿನೋದ್ ಪ್ರಭಾಕರ್ ಈಗ ಎಲ್ಲಿದ್ದಾರೆ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಇದೀಗ ಅವರನ್ನು ನಟ ವಿನೋದ್ ಪ್ರಭಾಕರ್ ಭೇಟಿಯಾಗಿ ಮಾತನಾಡಿಸಿ ಬಂದಿದ್ದಾರೆ. ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಕಾನೂನಿಗಿಂತ ಯಾರು ದೊಡ್ಡವರಿಲ್ಲ, ನ್ಯಾಯ ಸಿಗಬೇಕು ಎಂದು ವಿನೋದ್ ಹೇಳಿದ್ದಾರೆ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಬೇಕು. ಅವರ ಕುಟುಂಬಕ್ಕೆ ಭಗವಂತ ಧೈರ್ಯ ಕೊಡಲಿ ಅಂತ ಕೇಳಿಕೊಳ್ಳುತ್ತೇನೆ. ಹೀಗೆಲ್ಲಾ ಆಗಬಾರದಿತ್ತು. ನಿಮಗೆಲ್ಲಾ ಎಷ್ಟು ತಿಳಿದಿದೆಯೋ ನನಗೂ ಅಷ್ಟೇ ತಿಳಿದಿರೋದು. ನಾನು ದರ್ಶನ್ ಸರ್ ಅವರನ್ನು ಮೀಟ್ ಮಾಡದೇ 4 ತಿಂಗಳು ಆಗಿತ್ತು. ಅವರ ಹುಟ್ಟುಹಬ್ಬಕ್ಕೆ ಮೀಟ್ ಆಗಿದ್ದು ಆ ನಂತರ ಸುದ್ದಿ ನೋಡಿ ತಿಳಿಯಿತು ಎಂದು ದರ್ಶನ್ ಆಪ್ತ ನಟ ವಿನೋದ್ ಪ್ರಭಾಕರ್ ಮಾತನಾಡಿದ್ದಾರೆ. ಅನ್ನಪೂರ್ಣೇಶ್ವರಿ ಠಾಣೆಯಲ್ಲಿದ್ದಾಗ ಭೇಟಿ ಮಾಡಲು ಪ್ರಯತ್ನಿಸಿದೆ ಆದರೆ ಅಂದು…

Read More

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಡಿ ಬಾಸ್ ಗ್ಯಾಂಗ್ ನ 17 ಸದಸ್ಯರ ಪೈಕಿ ನಾಲ್ವರನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ವರ್ಗಾಯಿಸಲು ಕೋರ್ಟ್ ಅನುಮತಿ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ಒಂದೇ ಕಡೆ ಇಡುವುದು ಸುರಕ್ಷಿತವಲ್ಲ. ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಆರೋಪಿಗಳ ಜೈಲು ಬದಲಾವಣೆಗೆ ಪೊಲೀಸರು ನ್ಯಾಯಾಲಯದಲ್ಲಿ ಕೇಳಿದ್ದರು. ಈ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಇದಕ್ಕೆ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಯಾಕೆ ಆರೋಪಿಗಳ ವರ್ಗಾವಣೆ ಅಗತ್ಯ ಎನ್ನುವುದರ ಕುರಿತು ವಿವರಣೆ ನೀಡಿದ್ದು, ಎ8 ರವಿ, ಎ15 ಕಾರ್ತಿಕ್, ಎ16 ಕೇಶವ ಮೂರ್ತಿ, ಎ17 ನಿಖಿಲ್ ನಾಯಕ್ ನನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು ಅನುಮತಿ ನೀಡಿದೆ. ರೇಣುಕಾಸ್ವಾಮಿ ಮೃತದೇಹ ಸುಮ್ಮನಹಳ್ಳಿ ಬಳಿಯ ಕಾಲುವೆ ಬಳಿ ಪತ್ತೆಯಾಗಿದ್ದು, ಆ ಸಂದರ್ಭದಲ್ಲಿ ನಟ ದರ್ಶನ್‌ನಿಂದ 30 ಲಕ್ಷ ರೂ ಹಣ ಪಡೆದು ತಾವೇ ಕೊಲೆ ಮಾಡಿದ್ದೆಂದು ನಾಲ್ವರು ಆರೋಪಿಗಳು ಸರೆಂಡರ್ ಆಗಿದ್ದು, ಈ ಕುರಿತು ಪೊಲೀಸರು ವಿಚಾರಣೆ ನಡೆಸಿದಾಗ…

Read More

ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್ ನಲ್ಲಿ ಕೃತಕ ಬಣ್ಣ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಆಯುಕ್ತರು ರಾಜ್ಯಾದ್ಯಂತ ಕೃತಕ ಬಣ್ಣ ಬಳಕೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ರಾಜ್ಯದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್ ಗೆ ಕಳುಹಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡು ಬಂದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತುಮಕೂರು: ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅದರಲ್ಲಿ ಚಿನ್ನು ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಇನ್ನೊಂದೆಡೆ ರಿಜ್ವಾನ್ ಎಂಬಾತನ ಮಾಹಿತಿ ಪಡೆದ ಪೊಲೀಸರು ಹೊಸಪೇಟೆಯಲ್ಲಿ ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇಬ್ಬರು ಸೇರಿ ಮಧುಗಿರಿ ಕೊರಟಗೆರೆ ಭಾಗದ ಗ್ರಾಮೀಣ ಭಾಗದಲ್ಲಿ ಮಹಿಳೆಯರನ್ನು ಮೇಲಿದ್ದ ಚಿನ್ನಾಭರಣವನ್ನು ದೋಚಿ ಪರಾರಿಯಾಗುತ್ತಿದ್ದರು. ತನಿಖೆ ಚುರುಕುಗೊಳಿಸಿದ್ದ ಪೊಲೀಸರು ಆರೋಪಿಗಳು ಚಿನ್ನಾಭರಣವನ್ನು ಸ್ಥಳೀಯ ಚಿನ್ನದ ಅಂಗಡಿಗೆ ಮಾರಾಟ ಮಾಡುತ್ತಿದ್ದ ವಿಷಯ ಬೆಳಕಿಗೆ ಬಂದಿತ್ತು. ಈ ನಡುವೆ ಪೋಲಿಸ್ ವಿಶೇಷ ತಂಡವು ಪ್ರಮುಖ ಆರೋಪಿ ಚಿನ್ನು ಎಂಬತನನ್ನು ಬಂಧಿಸಿ ನಂತರ ವಿಚಾರಣೆ ವೇಳೆ ಆತನ ಸಹಚರ ರಿಜ್ವಾನ್ ಎಂಬತನನ್ನು ಕೂಡ ವಶಕ್ಕೆ ತೆಗೆದುಕೊಂಡು ಮಧುಗಿರಿ ಪೊಲೀಸ್ ಠಾಣೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ರಿಜ್ವಾನ್ ಎಂಬಾತನು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದನು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿಯೇ ಆತನ ಕೈಗೆ ಗುಂಡು ಹಾರಿಸಿದರು. ಅಲ್ಲದೆ ಹೆಚ್ಚಿನ ಅನಾಹುತ ಆಗದಂತೆ ತಡೆಗಟ್ಟಿದ್ದರು. ಇದೀಗ ಗುಂಡು…

Read More

ತುಮಕೂರು : ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಜೂನ್ 25ರಂದು ತುಮಕೂರು ಜಿಲ್ಲಾ ಬಂದ್’ಗೆ ಕರೆ ನೀಡಲಾಗಿದ್ದು, ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿಲ್ಲ. ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವುದೇ ಸರ್ಕಾರಿ ಶಾಲಾಕಾಲೇಜುಗಳಿಗೆ ರಜೆ ಘೋಷಿಸಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಖಾಸಗಿಗೆ ರಜೆ: ಖಾಸಗಿ ಮತ್ತು ಅನುದಾನಿತ ರಹಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ರೂಪ್ಪಾ(ಖಾಸಗಿ ಮತ್ತು ಅನುದಾನ ರಹಿತ ಶಾಲೆಗಳ ಒಕ್ಕೂಟ) ಅಧ್ಯಕ್ಷ ಹಾಲನೂರು ಲೇಪಾಕ್ಷ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲಾ ಬಂದ್ ಬೆಂಬಲಿಸಿ ಖಾಸಗಿ ಮತ್ತು ಅನುದಾನ ರಹಿತ ಶಾಲೆಗಳಿಗೆ ಜೂನ್ 25ರಂದು ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತಿಪಟೂರು: ರಾಜ ಕಾಲುವೆ ಒತ್ತುವರಿ ತೆರವುಕಾರ್ಯಚರಣೆ ಮುಂದುವರಿದಿದ್ದು ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಒಂದು ಇಂಚು ಜಾಗ ಅನ್ಯರಪಾಲಾಗಲು ಬಿಡುವುದಿಲ್ಲ ಎಂದು ಶಾಸಕ ಷಡಕ್ಷರಿ ಪುನರ್ ಉಚ್ಚರಿಸಿದರು. ತಿಪಟೂರು ನಗರದ ಶಾಸಕರ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಮಾತನಾಡಿದ ಅವರು, ದಿನದ ಬಾಡಿಗೆ ಆಧಾರದ ಮೇಲೆ ಕೆಲ ದಿನಗಳ ಮಟ್ಟಿಗೆ ಅಯ್ಯಪ್ಪ ಪೂಜೆ ಮಾಡುತ್ತೇವೆ ಎಂದು ಲಿಖಿತ ಬರೆದು ಕೊಟ್ಟಿದ್ದರು. ಈಗ ಜಾಗ ನಮಗೆ ಸೇರಬೇಕೆಂದು ಬಯಸಿ ಮುಜರಾಯಿ ಇಲಾಖೆ ಜಾಗದ ಮೇಲೆ ಹಕ್ಕು ಸಾಧಿಸಲು ಮುಂದಾಗಿದ್ದಾರೆ. ಒಂದು ವೇಳೆ ಮಂದಿರ ಕಟ್ಟಲೇ ಬೇಕೆಂದಿದ್ದರೆ ನಗರ ಸಭೆ ಸಿಎ ನಿವೇಶನವನ್ನು ಕಡಿಮೆ ಬೆಲೆಗೆ ಕೊಡಿಸುವ ಭರವಸೆ ಕೊಡುತ್ತೇನೆ. ಜೊತೆಗೆ ನನ್ನಿಂದಾದ ಅನುದಾನವನ್ನು ಒದಗಿಸುವೆ, ಆದರೆ ಮುಜರಾಯಿ ಇಲಾಖೆಯ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದರು. ದೇವಸ್ಥಾನದ ಪೋಳಿಯನ್ನು ಕ್ರಮಬದ್ಧವಾಗಿ ಮತ್ತು ಶಾಸನಬದ್ಧವಾಗಿ ನಿರ್ಮಿಸಬೇಕೆಂದು ಅನಧಿಕೃತವಾಗಿ ನಿರ್ಮಿಸ ಲಾಗಿರುವ ಶೆಡ್ ಅನ್ನು ತೆರವಿಗೆ ಆದೇಶ ನೀಡಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಮೂರು ಕೋಟಿ ರೂಪಾಯಿ…

Read More

ಶ್ರವಣಬೆಳಗೊಳ: ಜಗತ್ತನ್ನೇ ತನ್ನತ್ತ ಸೆಳೆಯುವ ದಿವ್ಯಶಕ್ತಿ ಹೊಂದಿರುವ, ತ್ಯಾಗ, ಅಹಿಂಸೆ, ನಿಸ್ವಾರ್ಥತೆಯನ್ನು ಸಾರುವ ಶ್ರವಣಬೆಳಗೊಳದ ಭಗವಾನ್ ಬಾಹುಬಲಿಯ ವೀಕ್ಷಣೆಗಾಗಿ ಬಹುದಿನಗಳ ಬಯಕೆಯಿಂದ ಬಂದಿದ್ದೇವೆ ಎಂದು ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು. ಬೆಂಗಳೂರಿನ ರಾಜಾಜಿನಗರ ಪೆಡಲ್ ಪವರ್ ಸಂಘದ ವತಿಯಿಂದ ಶನಿವಾರ ಸಂಜೆ ಸೈಕಲ್ ಜಾಥಾ ಮೂಲಕ ಶ್ರವಣಬೆಳಗೊಳಕ್ಕೆ ಆಗಮಿಸಿದ ಅವರು, ಹುಣ್ಣಿಮೆಯ ದಿನ ಶ್ರವಣಬೆಳಗೊಳಕ್ಕೆ ಭೇಟಿ ನೀಡಿ ಬೆಳದಿಂಗಳಲ್ಲಿ ಬಾಹುಬಲಿ ಮೂರ್ತಿಯನ್ನು ಕಣ್ತುಂಬಿಕೊಳ್ಳಬೇಕು ಎಂಬ ಅಪೇಕ್ಷೆ ಹೊಂದಿದ್ದೆವು ಎಂದರು. ನಮ್ಮ ತಂಡವು ಪ್ರತಿ ತಿಂಗಳು 350 ರಿಂದ 400 ಕಿಲೋಮೀಟರ್ ಸೈಕಲ್ ಮೂಲಕ ವಿವಿಧ ಪ್ರೇಕ್ಷಣೀಯ ಸ್ಥಳಗಳಿಗೆ ಆಗಮಿಸುತ್ತೇವೆ. ಅದೇ ರೀತಿ ಈಗಾಗಲೇ ಧರ್ಮಸ್ಥಳ, ಪಾಂಡಿಚೆರಿಗೆ ಭೇಟಿ ನೀಡಿದ್ದು ಈ ವರ್ಷದ ಕೊನೆಯಲ್ಲಿ ಕನ್ಯಾಕುಮಾರಿಗೆ ಸೈಕಲ್ ಮೂಲಕ ತೆರಳುವ ಉದ್ದೇಶ ಹೊಂದಿದ್ದೇವೆ ಎಂದರು. 2018ರ ಮಹಾಮಸ್ತಕಾಭಿಷೇಕದಲ್ಲಿ ನಾನು ಶ್ರವಣಬೆಳಗೊಳಕ್ಕೆ ಭೇಟಿ ನೀಡಿದ್ದೆ, ಹಿಂದಿನ ಚಾರುಕೀರ್ತಿ ಶ್ರೀಗಳ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸೇವೆ ಅಪಾರವಾದುದು ಎಂದರು. ಈ ಸಂದರ್ಭದಲ್ಲಿ ಶ್ರೀಕ್ಷೇತ್ರದ…

Read More