Author: admin

ಬೆಂಗಳೂರು: ಕಾರುಗಳನ್ನು ಬಾಡಿಗೆಗೆ ಪಡೆದು ಬಳಿಕ ಜಿಪಿಎಸ್ ಕಿತ್ತೆಸೆದು ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಅಥವಾ ಗಿರವಿ ಇಡುತ್ತಿದ್ದ ಪ್ರಕರಣದಡಿ ಆರೋಪಿಯೊಬ್ಬನನ್ನು ಇಲ್ಲಿನ ಹುಳಿಮಾವು ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಲಗ್ಗೆರೆ ನಿವಾಸಿ ಶ್ರೀನಿವಾಸ್(35) ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆತನಿಂದ ವಿವಿಧ ಕಂಪೆನಿಗಳ 9 ಕಾರುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಕಾಳೇನ ಅಗ್ರಹಾರದ ಎಂಎಲ್‍ ಎ ಲೇಔಟ್ ನಿವಾಸಿ ಮಹೇಶ್ ಎಂಬುವವರ ಕಾರನ್ನು ಒಂದು ತಿಂಗಳ ಮಟ್ಟಿಗೆ ಬಾಡಿಗೆಗೆ ಪಡೆದು ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಶಿವಮೊಗ್ಗದಲ್ಲಿ ಆರೋಪಿಯನ್ನು ಬಂಧಿಸಿ ಕರೆತರಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಶ್ರೀನಿವಾಸ್, ಫೇಸ್‍ಬುಕ್, ಒಎಲ್‍ ಎಕ್ಸ್ ಸೇರಿದಂತೆ ಇತರೆ ಜಾಲತಾಣಗಳಲ್ಲಿ ಕಾರು ಬಾಡಿಗೆಗೆ ಇರುವ ಅಥವಾ ಮಾರಾಟಕ್ಕೆ ಇರುವ ಜಾಹೀರಾತು ಹಾಕುವ ವ್ಯಕ್ತಿಗಳನ್ನು ಸಂಪರ್ಕಿಸುತ್ತಿದ್ದ. ಕಾರಿನ ಸಾಲದ ಕಂತು ಪಾವತಿಸಲು ಪರದಾಡುವ ವ್ಯಕ್ತಿಗಳನ್ನು ಗುರುತಿಸಿ,…

Read More

ಕೋಲಾರ:  ಆನಂದಮಾರ್ಗ ಆಶ್ರಮಕ್ಕೆ ಸೇರಿದ ಆಸ್ತಿ ವಿವಾದ ಹಿನ್ನೆಲೆ, ಇಬ್ಬರು ಸ್ವಾಮೀಜಿಗಳ ನಡುವೆ ಮಾರಾಮಾರಿ ನಡೆದು ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ(76) ಹತ್ಯೆಯಾಗಿದೆ. ಜಿಲ್ಲೆಯ ಮಾಲೂರು ತಾಲೂಕಿನ ಸಂತಹಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ಶನಿವಾರ ಉಭಯ ಸ್ವಾಮೀಜಿಗಳ ಗುಂಪುಗಳ ನಡುವೆ ಆದ ಜಗಳ ಸ್ವಾಮೀಜಿಯೊಬ್ಬರ ಕೊಲೆಯಲ್ಲಿ ಅಂತ್ಯಗೊಂಡಿದೆ. ಶನಿವಾರ ಬೆಳಗ್ಗೆ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ಅದೇ ಆಶ್ರಮದ ಆಚಾರ್ಯ ಧರ್ಮ ಪ್ರಾಣಾನಂದ ಹಾಗೂ ಸಹಚರರು ಸ್ನಾನದ ಕೋಣೆಯಿಂದ ಹೊರಗೆಡೆ ಎಳೆದಾಡಿ ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.ಇದನ್ನು ಗಮನಿಸಿದ ಆಶ್ರಮದಲ್ಲಿನ ಕೆಲವರು ಕೂಡಲೇ ಗಾಯಗೊಂಡಿದ್ದ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ ಅವರನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ಸಾಗಿಸಿದರು.  ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಆನಂದ ಮಾರ್ಗ ಆಶ್ರಮಕ್ಕೆ ಸೇರಿರುವ ಪಾಲಿಟೆಕ್ನಿಕ್​ ಕಾಲೇಜು ಆಸ್ತಿ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ 22 ವರ್ಷಗಳಿಂದ ನ್ಯಾಯಾಲಯದಲ್ಲಿ ವ್ಯಾಜ್ಯ ನಡೆಯುತ್ತಿದೆ. ಜೂ.24ರಂದು ವಿಚಾರಣೆಯು ಇತ್ತು, ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದ…

Read More

ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು ಕೃತಿಗಳನ್ನು ಕಮಲಾ ಹಂಪನಾ ಬರೆದಿದ್ದಾರೆ. ಆದರೆ ನಾವು ಕನ್ನಡದ ಉತ್ತಮ ಸಾಹಿತಿಯನ್ನು  ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ರವೀಂದ್ರಕಲಾ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಕಮಲ ಹಂಪನಾ ಅವರ ಪ್ರಾರ್ಥಿವ ಶರೀರದ ದರ್ಶನ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. “ಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು ಅಂದರೆ 48 ಕೃತಿಗಳನ್ನು ಬರೆದಿದ್ದಾರೆ. ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಪ್ರಾಕೃತ ಭಾಷೆಯ ಕುರಿತು ಸಂಶೋಧನೆ ಮಾಡಿದ್ದಾರೆ. ಬೆಂಗಳೂರು, ಮೈಸೂರು, ವಿಜಯನಗರಗಳಲ್ಲಿ ಕನ್ನಡ ಬೋಧಕರಾಗಿ ಕೆಲಸ ಮಾಡಿದ್ದಾರೆ” ಎಂದರು. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ, ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಎನ್ನು ಭಗವಂತ ನೀಡಲಿ ಎಂದು ಪ್ರಾರ್ಥನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಕೊಲೆ ಆರೋಪ ಪ್ರಕರಣಗಳನ್ನು ಪ್ರಸ್ತಾಪಿಸಿ ನಟ ದರ್ಶನ್‌, ಪ್ರಜ್ವಲ್‌ ರೇವಣ್ಣ, ಬಿಜೆಪಿ ಹಿರಿಯ ನಾಯಕ ಬಿ.ಎಸ್‌.ಯಡಿಯೂರಪ್ಪ, ಸೂರಜ್‌ ರೇವಣ್ಣ ವಿರುದ್ದ ನಟಿ ರಮ್ಯಾ ಹರಿ ಹಾಯ್ದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ನಲ್ಲಿ ವಿವರವಾಗಿ ಬರೆದುಕೊಂಡಿದ್ದಾರೆ.ಇತ್ತೀಚೆಗೆ ಬೆಳಕಿಗೆ ಬಂದ ಹೆಚ್ಚಿನ ಪ್ರಕರಣಗಳಲ್ಲಿ ಶ್ರೀಮಂತರು, ಶಕ್ತಿಶಾಲಿಗಳು ಕಾನೂನು ಉಲ್ಲಂಘಿಸಿ ಕೃತ್ಯವೆಸಗಿದ್ದಾರೆ. ಇವರಿಂದಾಗಿ ಬಡವರು, ಮಹಿಳೆಯರು ಮತ್ತು ಮಕ್ಕಳ ಭವಿಷ್ಯ ಮಂಕಾಗುತ್ತಿದೆ. ಈ ಅಪರಾಧ ಕೃತ್ಯಗಳನ್ನು ಬೆಳಕಿಗೆ ತಂದ ಪೊಲೀಸರು ಮತ್ತು ಮಾಧ್ಯಮಗಳಿಗೆ ಅಭಿನಂದನೆಗಳು. ಈ ಎಲ್ಲಾ ಅಪರಾಧ ಕೃತ್ಯಗಳು ಶೀಘ್ರ ವಿಚಾರಣೆಯಾಗಿ ಪ್ರಕರಣ ತಾರ್ಕಿಕ ಅಂತ್ಯ ಕಂಡಾಗ ಮಾತ್ರ ನ್ಯಾ ಗೆಲ್ಲುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ, ನಾವು ಸಾರ್ವಜನಿಕರಿಗೆ ಯಾವ ಸಂದೇಶ ನೀಡುತ್ತೇವೆ?’ ಎಂದು ಪೋಸ್ಟ್‌ ಮಾಡಿದ್ದಾರೆ. ಮಹಿಳೆಯರು ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ. ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಬಿಜೆಪಿಯ…

Read More

ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಬಹಿರ್ದೆಸೆಗೆ ತೆರಳಿದ್ದಾಗ ಆಕೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಪ್ರಕರಣ ಮುಚ್ಚಿ ಹಾಕಲು ಆಕೆಯನ್ನು ಕೊಲೆಗೈಯಲು ಯತ್ನಿಸಿದ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನ ಗುಂಡಸಾಗರ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಬಸವರಾಜ ಎಂದು ಗುರುತಿಸಲಾಗಿದೆ. ಈತ ಶಾಲಾ ಬಾಲಕಿಯೋರ್ವಳು ಬಹಿರ್ದೆಸೆಗೆಂದು ಹೋಗಿದ್ದಾಗ ಆಕೆಯನ್ನು ಹಿಂಬಾಲಿಸಿಕೊಂಡು ಹೋಗಿ ಅಕ್ಕಪಕ್ಕದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಏಕಾಏಕಿ ಹಿಂದಿನಿಂದ ಬಂದು ಬಾಲಕಿಯನ್ನು ಗಟ್ಟಿಯಾಗಿ ಹಿಡಿದು ಬಾಯಿಗೆ ಬಟ್ಟೆಯನ್ನು ತುರುಕಿದ್ದಾನೆ. ಆತನ ಮುಷ್ಠಿಯಿಂದ ಬಿಡಿಸಿಕೊಳ್ಳಲು ಆಗದಿದ್ದಾಗ ಬಾಲಕಿಯ ಅಸಹಾಯಕತೆಯನ್ನೇ ದುರುಪಯೋಗ ಮಾಡಿಕೊಂಡು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಲೈಂಗಿಕ ದೌರ್ಜನ್ಯ  ಎಸಗಿದ ಬಳಿಕ ಸಿಕ್ಕಿ ಬೀಳುವ ಭೀತಿಯಲ್ಲಿ ಕಾಮುಕ ಬಸವರಾಜ, ಅಸ್ವಸ್ಥಳಾಗಿದ್ದ ಬಾಲಕಿ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿದ್ದಾನೆ. ಆದರೆ ಬಾಲಕಿ ಆತನಿಂದ ತಪ್ಪಿಸಿಕೊಂಡು ಬಂದಿದ್ದು, ನಡೆದಿದ್ದ ಎಲ್ಲ ಘಟನೆಯನ್ನು ಪೋಷಕರಿಗೆ ತಿಳಿಸಿದ್ದಾಳೆ. ತಕ್ಷಣ ಪೋಷಕರು ಸಂತ್ರಸ್ತೆ ಜತೆಗೂಡಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಲಿಂಗಸಗೂರು ಪೊಲೀಸರು ಕೃತ್ಯ…

Read More

ವಿವಾಹಿತನನ್ನು ಪ್ರೀತಿಸಿದ ಯುವತಿ ಆತನೊಂದಿಗೆ ಮದುವೆ ಮಾಡಿಕೊಳ್ಳಲು ಬಯಸಿದ್ದು,  ಆದರೆ ಯುವತಿಯ ಪೋಷಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಬ್ಬರೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ. ಸದ್ಯ ಯುವತಿಯ  ಮೃತದೇಹ ಪತ್ತೆಯಾಗಿದ್ದು, ವಿವಾಹಿತನಿಗಾಗಿ ಹುಡುಕಾಟ ನಡೆದಿದೆ. ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ಮಾವತ್ತೂರು ಗ್ರಾ.ಪಂ. ಕೇಂದ್ರ ಸ್ಥಾನದಲ್ಲಿನ ಮಾವತ್ತೂರು ಕೆರೆಯ ಸಮೀಪ ಅಪರಿಚಿತ ಕಾರು, ಕಾರಿನಲ್ಲಿದ್ದ ಮೊಬೈಲ್ ಮತ್ತು ದಡದಲ್ಲಿದ್ದ ಇಬ್ಬರ ಚಪ್ಪಲಿಗಳು ಆಧರಿಸಿ ಕೋಳಾಲ ಪೊಲೀಸರ ತಂಡ ತನಿಖೆ ನಡೆಸಿದರು. ಆಗ, ಇಬ್ಬರೂ ತಮ್ಮ ಮನೆಯಿಂದ ಕಾಣೆಯಾಗಿ ವೈವಾಹಿಕ ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂದಿದೆ. 19 ವರ್ಷ ವಯಸ್ಸಿನ ಅನನ್ಯ ಹಾಗೂ 45 ವರ್ಷ ವಯಸ್ಸಿನ ರಂಗಶಾಮಯ್ಯ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ.  ಬೈರಗೊಂಡ್ಲು ಗ್ರಾಮದ ಅಳಿಯ ಆಗಿರುವ ರಂಗಶಾಮಯ್ಯನಿಗೆ ಮಡದಿ ಗಂಗರತ್ನಮ್ಮ ಮತ್ತು ಇಬ್ಬರು ಗಂಡು ಮಕ್ಕಳಿದ್ದು, ಅವರು 11 ಮತ್ತು 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈತ ಕೋಳಾಲದಲ್ಲಿ ಗ್ರಾಮ-1 ಕೇಂದ್ರ…

Read More

ತುಮಕೂರು: ಜಿಲ್ಲೆಗೆ ಮಂಜೂರಾಗಿರುವ ನೀರನ್ನು ಎಕ್ಸ್ ಪ್ರೆಸ್ ಲಿಂಕ್  ಕೆನಾಲ್ ಮೂಲಕ ಮಾಗಡಿ ತಾಲೂಕಿಗೆ ತೆಗೆದುಕೊಂಡು ಹೋಗಲು ರೂಪಿಸಿರುವ ಯೋಜನೆಯಿಂದ ತುಮಕೂರು ಜಿಲ್ಲೆಗೆ ಬಹಳ ಅನ್ಯಾಯವಾಗುತ್ತದೆ.  ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ಕಾರ್ಯಕತವಾಗಲು ಬಿಡುವುದಿಲ್ಲ ಎಂದು ಜೆಡಿಎಸ್ ಮುಖಂಡ ಶಾಂತಕುಮಾರ್  ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಈ ಬಾರಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪ್ರತಿಭಟನೆ ಕೈಗೊಂಡಿರುವುದರಿಂದ ಸರ್ಕಾರ ಯೋಜನೆಯನ್ನು ನಿಲ್ಲಿಸಬೇಕು. ತಿಪಟೂರು ಜಾತ್ಯಾತೀತವಾಗಿ ಸಂಪೂರ್ಣ ಬಂದ್ ಗೆ ಕರೆ ನೀಡಲಾಗಿದೆ. ತಿಪಟೂರಿಗೆ ಅನ್ಯಾಯವಾಗಲು ನಾವು ಬಿಡುವುದಿಲ್ಲ. ಮೊದಲೇ ತುಮಕೂರು ಜಿಲ್ಲೆಗೆ ಮಂಜೂರಾಗಿರುವ ನೀರನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ನಮ್ಮ ಜಿಲ್ಲೆಯ ನೀರಿಗೆ ಕೈ ಹಾಕಿದರೆ ನಾವು ಸುಮ್ಮನಿರುವುದಿಲ್ಲ ಎಂದು ಅವರು ಎಚ್ಚರಿಸಿದರು. ವಿರೋಧ ಪಕ್ಷದಲ್ಲಿದ್ದಾಗ ಮೇಕೆದಾಟು ಯೋಜನೆ ಜಾರಿಗೆ ತೊಡೆತಟ್ಟಿ ನಿಂತಿದ್ದ ಮುಖಂಡರು ಈಗ ಅವರ ಪಕ್ಷದವರೇ ಅಧಿಕಾರವಿದ್ದಲ್ಲಿದ್ದಾಗ ಸುಮ್ಮನಿರುವುದು ಏಕೆ ಎಂದು ಪ್ರಶ್ನಿಸಿದ ಅವರು,  ಮಾಗಡಿ ತಾಲೂಕಿಗೆ ಮೇಕೆದಾಟು ಯೋಜನೆಯಿಂದ ನೀರು ಪಡೆದುಕೊಳ್ಳಲಿ ಎಂದರು. ಈ ಸುದ್ದಿಗೋಷ್ಠಿಯಲ್ಲಿ ಬತ್ತಿಹಳ್ಳಿರಾಜಣ್ಣ ನಾರಾಯಣಪ್ಪ…

Read More

ತುಮಕೂರು: ಜಿಲ್ಲೆಯಲ್ಲಿ ಜೂನ್ ೧೪ ರಿಂದ  ೨೧ರವರೆಗೆ ಎಲ್ಲ ತಾಲೂಕಿನಿಂದ ೨೧೭೬೪ ರೈತರನ್ನು ಮಾತ್ರ ಬೆಳೆ ವಿಮೆಗೆ ನೋಂದಾಯಿಸಲಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ರೈತರಲ್ಲಿ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ರಾತ್ರಿ ಜಿಲ್ಲೆಯ ಮಳೆ–ಬೆಳೆ ಪರಿಸ್ಥಿತಿ ಕುರಿತು   ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಪ್ರಕೃತಿ ವಿಕೋಪ/ಕೀಟ ಅಥವಾ ರೋಗಬಾಧೆಯಿಂದ ಬೆಳೆ ನಷ್ಟ ಸಂಭವಿಸಿದ ಸಂದರ್ಭದಲ್ಲಿ ವಿಮಾ ಮೊತ್ತ ರೈತರ ಕೈ ಹಿಡಿಯಲಿದ್ದು, ಈ ನಿಟ್ಟಿನಲ್ಲಿ ಬೆಳೆ ವಿಮೆಗೆ ರೈತರ ನೋಂದಣಿ ಮಾಡುವ ಸಂಖ್ಯೆಯನ್ನು ಇನ್ನಷ್ಟು ಚುರುಕುಗೊಳಿಸಬೇಕು ಎಂದು ನಿರ್ದೇಶನ ನೀಡಿದರು. ಜಂಟಿ ಕೃಷಿ ನಿರ್ದೇಶಕ ರಮೇಶ್ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡುತ್ತಾ ಬೆಳೆ ವಿಮೆಗೆ ನೋಂದಣಿ ಮಾಡಿಸುವ ಬಗ್ಗೆ ಜಿಲ್ಲಾದ್ಯಂತ ಜೂನ್ ೨೪ ರಿಂದ ಗ್ರಾಮ ಪಂಚಾಯತಿ ಮಟ್ಟದಲ್ಲಿ ರೈತರಿಗೆ ತರಬೇತಿ ನೀಡುವ ಮೂಲಕ ಅರಿವು ಮೂಡಿಸಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬಿತ್ತನೆ…

Read More

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಜಿಎಸ್ಟಿ ಕೌನ್ಸಿಲ್ ಸಭೆ ನಡೆಯಿತು. ಸಭೆಯಲ್ಲಿ ಹಲವಾರು ಪ್ರಮುಖ ನಿರ್ಧಾರಗಳನ್ನ ತೆಗೆದುಕೊಳ್ಳಲಾಯಿತು. ತೆರಿಗೆ ಪಾವತಿಸುವವರಿಗೆ ಅನೇಕ ಸಕಾರಾತ್ಮಕ ನಿರ್ಧಾರಗಳನ್ನ ತೆಗೆದುಕೊಳ್ಳಲಾಗಿದೆ. ಸಣ್ಣ ವ್ಯಾಪಾರಿಗಳ ಅನುಕೂಲಕ್ಕಾಗಿ ಜಿಎಸ್ಟಿ ಮಂಡಳಿಯಲ್ಲಿ ನಿರ್ಧಾರಗಳನ್ನ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,ಸಭೆಯಲ್ಲಿ ಕೆಲವು ವಸ್ತುಗಳ ಮೇಲಿನ ಜಿಎಸ್ಟಿಯನ್ನ ಕಡಿಮೆ ಮಾಡಲಾಗಿದೆ. ರೈಲ್ವೆ ಪ್ಲಾಟ್ಫಾರ್ಮ್ ಟಿಕೆಟ್ ಗಳು, ಕಾಯುವಿಕೆ, ಲಾಕರ್ ಕೊಠಡಿಗಳು, ಬ್ಯಾಟರಿ ಚಾಲಿತ ಸೇವೆಗಳು ಮತ್ತು ಅಂತರ್ ರೈಲ್ವೆ ಸೇವೆಗಳ ಮೇಲಿನ ಜಿಎಸ್ಟಿಯನ್ನ ಮನ್ನಾ ಮಾಡಲಾಗಿದೆ. ಇದಲ್ಲದೆ, ಹಾಲಿನ ಕ್ಯಾನ್ ಗಳು ಮತ್ತು ಕಾರ್ಟನ್ ಬಾಕ್ಸ್ ಗಳ ಮೇಲಿನ ಜಿಎಸ್ಟಿಯನ್ನ ಶೇಕಡಾ 18 ರಿಂದ 12ಕ್ಕೆ ಇಳಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಸೌರ ಕುಕ್ಕರ್ ಗಳ ಮೇಲಿನ ಜಿಎಸ್ ಟಿಯನ್ನ ಶೇ.18ರಿಂದ ಶೇ.12ಕ್ಕೆ ಇಳಿಸಲಾಗಿದೆ. ಇದಲ್ಲದೆ, ಶಿಕ್ಷಣ ಸಂಸ್ಥೆಗಳೊಂದಿಗೆ ಸಂಬಂಧ ಹೊಂದಿರದ ಹಾಸ್ಟೆಲ್ಗಳಿಗೆ ಜಿಎಸ್ಟಿಯಿಂದ…

Read More

ಹಾಸನ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ರೇವಣ್ಣ ಅವರ ಬಂಧನವಾಗಿರುವ ಬಗ್ಗೆ ವರದಿಯಾಗಿದೆ. ಶನಿವಾರ ರಾತ್ರಿಯಿಂದ ಸಿಇಎನ್ ಠಾಣೆಯಲ್ಲಿ ಸೂರಜ್ ಅವರನ್ನು ವಿಚಾರಣೆಗೊಳಪಡಿಸಿದ್ದ ತನಿಖಾಧಿಕಾರಿ ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಅವರು ಆರೋಪಿಯನ್ನು ಬಂಧಿಸಿದ್ದಾರೆ. ಮಧ್ಯಾಹ್ನದ ವೇಳೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಒಂದೆಡೆ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿರುವಾಗಲೇ ಅವರ ಅಣ್ಣ ಡಾ.ಸೂರಜ್ ಬಂಧನವಾಗಿದ್ದು ರೇವಣ್ಣ ಅವರ ಇಬ್ಬರು ಪುತ್ರರೂ ಗಂಭೀರ ಅಪರಾಧ ಪ್ರಕರಣಗಳಲ್ಲಿ ಸಿಲುಕಿ ಜೈಲು ಸೇರುವಂತಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More