Subscribe to Updates
Get the latest creative news from FooBar about art, design and business.
- KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್: ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ
- ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
- ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
- ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
- ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
- ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
- ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
- ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
Author: admin
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಡ ಮಂಡಳಿ ನೊಂದಾಯಿತ ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ಮಂಡಳಿಯು ನೋಂದಾಯಿತ ಕಾರ್ಮಿಕರ ಮದುವೆಗೆ ಅಥವಾ ಅವರ ಮಕ್ಕಳ ಮದುವೆಗೆ ಸಹಾಯಧನವನ್ನು ನೀಡುತ್ತದೆ. ನೋ೦ದಾಯಿತ ಕಾರ್ಮಿಕರ ಮದುವೆ ಅಥವಾ ಅವರ ಮಕ್ಕಳ ಮದುವೆಗೆ ಮ೦ಡಳಿಯು ಸಹಾಯಧನವನ್ನು ನೀಡುತ್ತದೆ. ನೋ೦ದಣಿ ದಿನಾ೦ಕದಿ೦ದ ಮದುವೆ ದಿನಾ೦ಕದವರೆಗೆ ಮ೦ಡಳಿಯಲ್ಲಿ ಕನಿಷ್ಠ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು. ಒ೦ದು ಕುಟು೦ಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅವಕಾಶವಿರುತ್ತದೆ.ಸಹಾಯಧನವನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ತಲುಪಿರಬೇಕು.ಮದುವೆಯ ದಿನಾ೦ಕದಿಂದ 6 ತಿಂಗಳ ಒಳಗೆ ಅರ್ಜಿ ಸಲ್ಲಿಸಬೇಕು. ಕಾರ್ಮಿಕರ ಮದುವೆ ಅಥವಾ ಅವರ ಎರಡು ಮಕ್ಕಳ ಮದುವೆಗೆ ಕಟ್ಟಡ ಕಾರ್ಮಿಕ ಮಂಡಳಿಯು 60,000/- ಸಹಾಯಧನವನ್ನ ನೀಡುತ್ತದೆ. ಹಾಗು ಮಂಡಳಿಯ ವತಿಯಿಂದ ನೋಂದಣಿ ಮಾಡಿಕೊಂಡಿರುವ ಕಟ್ಟಡ ಕಾರ್ಮಿಕರು ತಮಗೂ ಹಾಗೂ ತಮ್ಮ ಮಕ್ಕಳ ಮದುವೆಗಾಗಿ ಸಹಾಯಧನ ಪಡೆಯಬಹುದು. ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿ ನೋಂದಣಿಗೆ ನಮೂನೆ 5-1ರ ಅರ್ಜಿಯಲ್ಲಿ…
NEET ಮತ್ತು UGC NET ಪರೀಕ್ಷೆ ನಡೆದ ಅಕ್ರಮದ ಆರೋಪದ ಬಗ್ಗೆ ಈಗಾಗಲೇ ಭಾರೀ ಚರ್ಚೆಯಾಗುತ್ತಿದೆ. ಇನ್ನು ಕೆಲವರು ಕೇಂದ್ರ ಸರ್ಕಾರವನ್ನು ಟೀಕೆ ಮಾಡಿದ್ದಾರೆ. ಇದೀಗ ಕೇಂದ್ರ ಇದಕ್ಕೆಲ್ಲ ಉತ್ತರ ನೀಡಬೇಕು ಎಂದು ಸಾರ್ವಜನಿಕ ಪರೀಕ್ಷೆಗಳ ಕಾಯಿದೆ ಜಾರಿಗೆ ತಂದಿದೆ. ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಒಂದು ಮಹತ್ವ ನಿರ್ಧಾರವನ್ನು ತೆಗೆದುಕೊಂಡಿದೆ.ಕೇಂದ್ರ ಶಿಕ್ಷಣ ಸಚಿವಾಲಯ ಸಾರ್ವಜನಿಕ ಪರೀಕ್ಷೆಗಳ ಕಾಯಿದೆಯನ್ನು ಜಾರಿಗೆ ತರಲು ಅಧಿಸೂಚನೆ ನೀಡಿದೆ. ಕಾನೂನಿನಲ್ಲಿ ಒಬ್ಬ ವ್ಯಕ್ತಿ ಅಥವಾ ವ್ಯಕ್ತಿಗಳ ಗುಂಪು ಪರೀಕ್ಷಾ ಪ್ರಾಧಿಕಾರ, ಸೇವಾ ಪೂರೈಕೆದಾರರು ಅಥವಾ ಯಾವುದೇ ಇತರ ಸಂಸ್ಥೆ ಸೇರಿದಂತೆ ಸಂಘಟಿತ ಅಪರಾಧವನ್ನು ಮಾಡಿದರೆ ಅವರಿಗೆ 5ರಿಂದ 10ವರ್ಷದ ವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಹಾಗೂ 1 ಕೋಟಿ ರೂ. ದಂಡ ವಿಧಿಸಲಾಗುವುದು ಎಂದು ಹೇಳಲಾಗಿದೆ. ತರಬೇತಿ ಏಜೆಂಟ್ ಅಥವಾ ಕೋರ್ಸ್ ಸೆಂಟರ್ ಗಳು ಪೇಪರ್ ಸೋರಿಕೆ ಅಪರಾಧದಲ್ಲಿ ಭಾಗಿಯಾಗಿರುವುದು ಕಂಡುಬಂದಲ್ಲಿ ಆ ಸಂಸ್ಥೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕಾನೂನು ನಿಬಂಧನೆಗಳನ್ನು ಹೊಂದಿದೆ…
ಟಿಬೆಟಿಯನ್ ಧಾರ್ಮಿಕ ಮುಖಂಡ ದಲೈಲಾಮಾ ಅವರು ಕಳೆದ 65 ವರ್ಷಗಳಿಂದ ಭಾರತದಲ್ಲಿ ನೆಲೆಸಿದ್ದಾರೆ. ಭಾರತ ಅವರಿಗೆ ರಾಜಕೀಯ ಆಶ್ರಯ ನೀಡಿದೆ.ದಲೈಲಾಮಾ ಭಾರತಕ್ಕೆ ಬಂದ ಕಥೆ ತುಂಬಾ ಆಸಕ್ತಿದಾಯಕವಾಗಿದೆ. 1959 ರ ಚಳಿಗಾಲವು ಪ್ರಾರಂಭವಾದಾಗ, ಚೀನಾ ಟಿಬೆಟ್ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಹೆಚ್ಚಿಸಿತು. ಒಂದು ವರ್ಷದ ಹಿಂದೆ, 1958 ರಲ್ಲಿ, ಪೂರ್ವ ಟಿಬೆಟ್‌ನ ಕೆಲವು ಖಂಪಾಗಳು ಚೀನಾದ ಸೈನಿಕರ ವಿರುದ್ಧ ಶಸ್ತ್ರಾಸ್ತ್ರಗಳನ್ನು ತೆಗೆದುಕೊಂಡರು, ಆದರೆ ಹೀನಾಯ ಸೋಲನ್ನು ಅನುಭವಿಸಿದರು. 1959 ರ ಹೊತ್ತಿಗೆ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತು. ಟಿಬೆಟ್‌ನಲ್ಲಿ ವಾಸಿಸುವುದು ಸುರಕ್ಷಿತವಲ್ಲ ಎಂದು ದಲೈಲಾಮಾ ಭಾವಿಸಿದರು. ಅವರು ಟಿಬೆಟ್ ತೊರೆಯಲು ನಿರ್ಧರಿಸಿದರು. ಭಾರತದಿಂದ ರಾಜಕೀಯ ಆಶ್ರಯ ಕೇಳಿದೆ. ಜವಾಹರಲಾಲ್ ನೆಹರು ಅವರ ಸರ್ಕಾರವು ದಲೈ ಲಾಮಾಗೆ ಆಶ್ರಯ ನೀಡಲು ಒಪ್ಪಿಕೊಂಡಿತು. ದಲೈಲಾಮಾ ಅವರು ಟಿಬೆಟ್‌ನಿಂದ ಭಾರತಕ್ಕೆ ಹೇಗೆ ಹೋಗುವುದು ಎಂದು ಕಷ್ಟಪಡುತ್ತಿದ್ದರು? ಏಕೆಂದರೆ ಚೀನಾದ ಸೈನಿಕರು ಮತ್ತು ಗೂಢಚಾರರು 24 ಗಂಟೆಯೂ ಅವರ ಮೇಲೆ ಕಣ್ಣಿಟ್ಟಿದ್ದರು. ದಲೈ ಲಾಮಾ ಅವರು ತಮ್ಮ ಕೆಲವು ನಿಕಟ…
ಕೊರಟಗೆರೆ: ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯ ಪಕ್ಕದಲ್ಲಿರುವ ದೇವಸ್ಥಾನದ ಬಳಿ ಕಾರು ನಿಲ್ಲಿಸಿ, ಇಬ್ಬರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ(50) ಹಾಗೂ ಲಕ್ಕಯ್ಯನಪಾಳ್ಯದ ಯುವತಿ ಅನನ್ಯ (19) ಕೆರೆಗೆ ಹಾರಿ ಸಾವಿಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಮೂರು ದಿನದ ಹಿಂದೆ ಮನೆ ಬಿಟ್ಟು ಇಬ್ಬರು ಬಂದಿದ್ದರು. ಇದೀಗ ಕೆರೆಯ ಬಳಿಯಲ್ಲಿ ಕಾರು ಹಾಗೂ ಚಪ್ಪಲಿ ಪತ್ತೆಯಾಗಿದೆ. ಹೀಗಾಗಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ಮೂಡಿದೆ. ಘಟನೆ ಹಿನ್ನೆಲೆ ಅಗ್ನಿಶಾಮಕ ದಳದ ಕೆಲವು ಈಜುಪಟುಗಳುಮಾವತ್ತೂರು ಕೆರೆಯಲ್ಲಿ ತೀವ್ರ ಶೋಧ ಕಾರ್ಯ ನಡೆಸಿದರು. ಬೋಟ್ ಸಹಾಯದಿಂದ ಹುಡುಕಾಟ ನಡೆಸಲಾಯಿತು. ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಅನಿಲ್, ಕೊಳಲ ಪೊಲೀಸ್ ಠಾಣೆಯ ಪಿಎಸ್ ಐ ಯೋಗೇಶ್, ಸಬ್ ಇನ್ಸ್ಪೆಕ್ಟರ್ ರೇಣುಕಾ ಯಾದವ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್.ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತುಮಕೂರು: ಹೇಮಾವತಿ ಎಕ್ಸ್’ಪ್ರೆಸ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿ ತುಮಕೂರು, ಜೂನ್ 25ರಂದು ತುಮಕೂರು ಬಂದ್ ಗೆ ಕರೆ ನೀಡಿದ್ದು, ಎಲ್ಲ ತಾಲೂಕು ಕೇಂದ್ರಗಳಲ್ಲಿ ಬಂದ್ ಆಚರಿಸಿ ಪ್ರತಿಭಟನೆ ಮಾಡಲಾಗುವುದು ನಡೆಸಲಾಗುವುದು ಎಂದು ತಿಳಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಸೊಗಡು ಶಿವಣ್ಣ, ಗುಬ್ಬಿ ತಾಲೂಕನ್ನು ಸುತ್ತುವರಿದಂತೆ ಬಂದಿರುವ 100 ಕಿ.ಮೀ. ಚಾನಲ್ ಸುತ್ತಳತೆ ಹೊರತುಪಡಿಸಿ ಡಿ.ರಾಂಪುರದಿಂದ 34.5 ಕಿ.ಮೀ. ಲಿಂಕ್ ಕೆನಾಲ್ ಪೈಪ್‌ಲೈನ್ ಮೂಲಕ ರಾಮನಗರ ಜಿಲ್ಲೆ ಮಾಗಡಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗಲು ಸುಮಾರು 1 ಸಾವಿರ ಕೋಟಿ ರೂಪಾಯಿ ಅಂದಾಜು ಮೊತ್ತದ ಕಾಮಗಾರಿಗೆ ಅನುಮೋದನೆ ಪಡೆದುಕೊಂಡು ಕಾಮಗಾರಿಯನ್ನು ಆರಂಭಿಸಿದ್ದಾರೆ. ಈ ಯೋಜನೆ ಅನುಷ್ಠಾನವಾದರೆ ನಮ್ಮ ಜಿಲ್ಲೆಯ ತಿಪಟೂರು, ಗುಬ್ಬಿ, ತುರುವೇಕೆರೆ, ಶಿರಾ, ಮಧುಗಿರಿ, ಕೊರಟಗೆರೆ, ಚಿಕ್ಕನಾಯಕನಹಳ್ಳಿ, ಸಿ.ಎಸ್.ಪುರ, ಸಂಪಿಗೆ, ಬುಗುಡನಹಳ್ಳಿ, ತುಮಕೂರು ನಗರ, ತುಮಕೂರು ಗ್ರಾಮಾಂತರ, ಹೊನ್ನುಡಿಕೆ, ನಾಗವಲ್ಲಿ, ತುಮಕೂರು ಅಮಾನಿಕೆರೆ, ಹೆಣ್ಣೂರು — ಗೂಳೂರು ಏತ ನೀರಾವರಿ ಯೋಜನೆಯ 52 ಕೆರೆಗಳು ಹಾಗೂ ಜಿಲ್ಲೆಯ…
ತುಮಕೂರು: ಜಿಲ್ಲೆಯ ಕಂದಾಯ ಇಲಾಖೆಯ ಭೂಸ್ವಾಧೀನ ಹಾಗೂ ಇತರೆ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನು ಸಲಹೆ ನೀಡಲು ಕಾನೂನು ಸಲಹೆಗಾರ(ಕಾನೂನು ಕೋಶ)ರ ಹುದ್ದೆಯನ್ನು ಭರ್ತಿ ಮಾಡಲು ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಸಿವಿಲ್ ನ್ಯಾಯಾಧೀಶರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ವೈಯಕ್ತಿಕ ಮಾಹಿತಿಯ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 8ರೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಆಯ್ಕೆಯಾದವರಿಗೆ ಸರ್ಕಾರದ ಆದೇಶದನ್ವಯ ಮಾಸಿಕ ಸಂಚಿತ ವೇತನವನ್ನು ಪಾವತಿಸಲಾಗುವುದು. ಆಯ್ಕೆಯ ವಿಚಾರದಲ್ಲಿ ಜಿಲ್ಲಾಧಿಕಾರಿಗಳ ತೀರ್ಮಾನವೇ ಅಂತಿಮವಾಗಿದ್ದು, ಯಾವುದೇ ವ್ಯಾಜ್ಯ ತಕರಾರುಗಳಿಗೆ ಅವಕಾಶವಿರುವುದಿಲ್ಲವೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ನನಗೆ ಯಾವುದೇ ರೀತಿಯ ಪತ್ರ ಬಂದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪವರ್ ಟಿವಿ ಸುದ್ದಿ ವಾಹಿನಿಯಲ್ಲಿ ಪ್ರಸಾರವಾಗಿರುವುದನ್ನು ಗಮನಿಸಿದ್ದೇನೆ. ಈವರೆಗೆ ಯಾವುದೇ ರೀತಿಯ ಅಧಿಕೃತ ದೂರು ದಾಖಲಾಗಿಲ್ಲ. ನನಗೆ ಯಾವುದೇ ಪತ್ರ ಬಂದಿಲ್ಲ. ಶಿವಕುಮಾರ್ ಎನ್ನುವರು ದೂರು ಕೊಟ್ಟಿದ್ದಾರೆ ಎಂದರು. ಪತ್ರ ಬರೆಯುವುದಕ್ಕು, ದೂರು ಕೊಡುವುದಕ್ಕು ಸಾಕಷ್ಟು ವ್ಯತ್ಯಾಸವಿದೆ. ನೈಜತೆಯನ್ನು ಪರಿಶೀಲಿಸಬೇಕಾಗುತ್ತದೆ. ಪೊಲೀಸ್ ಠಾಣೆಗೆ ದೂರು ಕೊಟ್ಟರೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬಹುದು. ಪವರ್ ಟಿವಿಯರನ್ನು ಕರೆಸಿ, ಎಲ್ಲಿ ಮಾಹಿತಿ ಸಿಕ್ಕಿದೆ ಎಂಬುದುನ್ನು ಪಡೆಯಲಾಗುವುದು ಎಂದು ಹೇಳಿದರು. ರಾಜ್ಯ ಸರ್ಕಾರಕ್ಕೆ ಹಣಕಾಸು ವ್ಯವಸ್ಥೆಯನ್ನು ಸರಿಯಾಗಿ ನೋಡಿಕೊಳ್ಳಲು ಆಗುತ್ತಿಲ್ಲ. ಏಜೆನ್ಸಿಗೆ ಕೊಟ್ಟಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ತಮ್ಮ ಅಧಿಕಾರವಧಿಯಲ್ಲಿ ರಾಜ್ಯದ ಹಣಕಾಸಿನ ಸ್ಥಿತಿ ಯಾವ ರೀತಿ ಇಟ್ಟಿದ್ದರು ಎಂಬುದು ಇಡೀ ದೇಶಕ್ಕೆ ಗೊತ್ತಿದೆ. ಸಾಲ ಎಷ್ಟು ಮಾಡಿದ್ದರು,…
ತುಮಕೂರು: ಜಿಲ್ಲೆಯ ತಿಪಟೂರು ನಗರದ ಮಾರನಗೆರೆ ಕೊರಚರ ಕಾಲೋನಿ 16ನೇ ವಾರ್ಡ್‌ನಲ್ಲಿ ಮಳೆ ಬಂದರೆ ಚರಂಡಿ ನೀರು ಮುಂದೆ ಹೋಗದಂತೆ ಕಟ್ಟಿಕೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಸ್ಥಳ ಪರಿಶೀಲಿಸಿ, ಚರಂಡಿಯಲ್ಲಿ ನಿಂತಿರುವ ಹೂಳನ್ನು ತೆಗೆದು ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಿದ್ದು, ಈ ಪ್ರದೇಶದಲ್ಲಿರುವ ಸಾರ್ವಜನಿಕರೊಂದಿಗೆ ಚರ್ಚಿಸಿ ಕುಂದುಕೊರತೆಗಳಿಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಇನ್ನೂ ಸಾರ್ವಜನಿಕರು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನಕ್ಕೆ ತರಲು @osd_cmkarnataka ಎಕ್ಸ್ ಖಾತೆಗೆ ಟ್ಯಾಗ್ ಮಾಡಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯವೂ ಅಭಿವೃದ್ಧಿಪಡಿಸಲಾದ ವಿವಿಧ ತಾಂತ್ರಿಕತೆಗಳ ಉತ್ಪನ್ನ ಹಾಗೂ ಕೃಷಿ ಪರಿಕರಗಳ’ ಕೃಷಿ ವಿಶ್ವವಿದ್ಯಾನಿಲಯ ಉತ್ಪನ್ನಗಳ ಸಂತೆ’ ಎಂಬ ವಿನೂತನ ಕಾರ್ಯಕ್ರಮಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಇಂದು ಚಾಲನೆ ನೀಡಿದರು. ಜಿಕೆವಿಕೆ ಆವರಣದಲ್ಲಿ ಆಯೋಜಿಸಿದ್ದ ಈ ವಿನೂತನ ಕಾರ್ಯಕ್ರಮಕ್ಕೆ ಸಚಿವರು ಚಾಲನೆ ನೀಡಿ, ಈ ಸಂತೆಯಲ್ಲಿ ಬೆಂಗಳೂರು ಕೃಷಿ ವಿವಿಯ ವ್ಯಾಪ್ತಿಗೊಳಪಡುವ ವಿವಿಧ ಕೃಷಿ ಸಂಶೋಧನಾ ವಿಸ್ತರಣಾ ಹಾಗೂ ಕೃಷಿ ಮಹಾವಿದ್ಯಾಲಯಗಳಲ್ಲಿ ಸಂಶೋಧನೆಗೊಳಪಟ್ಟು ಉತ್ಪಾದಿಸಲಾದ ಕೃಷಿ ಉತ್ಪನ್ನಗಳು ಹಾಗೂ ಕೃಷಿ ತಂತ್ರಜ್ಞಾನಗಳನ್ನು ಪರಿಚಯ ಮಾಡುವ ನಿಟ್ಟಿನಲ್ಲಿ ಆಯೋಜಿಸಿದ್ದ ಸಂತೆಯನ್ನು ವೀಕ್ಷಿಸಿದರು. ಸಂತೆಯಲ್ಲಿ ಬಿತ್ತನೆ ಬೀಜಗಳು, ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳು, ಸಾವಯವ ಉತ್ಪನ್ನಗಳು, ವಿವಿಧ ಸಸ್ಯಾಭಿವೃದ್ದಿ ಸಾಮಾಗ್ರಿಗಳು, ಜೈವಿಕ ಗೊಬ್ಬರಗಳು, ಜೇನು ಕೃಷಿ, ಕೇಕ್ ಪ್ರದರ್ಶನ, ಇನ್ನೂ ಮುಂತಾದವುಗಳನ್ನು ಈ ಸಂತೆಯಲ್ಲಿ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯನ್ನು ಕಂಡು ಸಚಿವರು ಸಂತಸ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಜಿಕೆವಿಕೆ ಉಪ ಕುಲಪತಿ ಸುರೇಶ್, ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ…
ಬೆಂಗಳೂರು: ಮೂರು ವರ್ಷದ ಮಗುವಿನ ಸಿಗರೇಟ್‌ನಿಂದ ಸುಟ್ಟು ಮಲತಂದೆಯೊಬ್ಬ ಮೃಗೀಯ ವರ್ತನೆ ತೋರಿರುವ ಘಟನೆ ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ. ಜರೀನಾ ತಾಜ್ ಎಂಬ ಮಹಿಳೆ ಹಾಗೂ ಆಕೆಯ ಮೂರು ವರ್ಷದ ಮಗು ತೀವ್ರ ಹಲ್ಲೆಗೊಳಗಾದವರು. ಜರೀನಾ ತಾಜ್ ಮೂರನೇ ಪತಿ ಅಜ್ಮಂತ್ ಎಂಬಾತ, 3 ವರ್ಷದ ಮಗುವಿನ ಮುಖ, ಕತ್ತು ಹಾಗೂ ತಲೆ ಭಾಗದಲ್ಲಿ ಸಿಗರೇಟ್ ನಿಂದ ಸುಟ್ಟು ಗಾಯಗೊಳಿಸಿದ್ದಾನೆ. ಕಾಲಿನ ಮೇಲೆ ದಾಳಿ ಮಾಡಿರುವುದರಿಂದ ಕಾಲು ಕತ್ತರಿಸಿದಂತಾಗಿದೆ. ತೀವ್ರ ಗಾಯಗೊಂಡಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜರೀನಾ ತಾಜ್ ಮೂರು ಮದುವೆಯಾಗಿದ್ದು, ಮೊದಲ ಗಂಡನಿಂದ ಎರಡು ಹೆಣ್ಣು ಮಕ್ಕಳು ಆಗಿದ್ದವು. ಎರಡನೇ ಪತಿಯಿಂದ ಒಂದು ಹೆಣ್ಣು ಮಗು ಆಗಿತ್ತು. ಆ ಹೆಣ್ಣು ಮಗುವಿನ ಮೇಲೆ ಇದೀಗ ಕ್ರೌರ್ಯ ನಡೆದಿದೆ. ಮೊದಲ ಇಬ್ಬರು ಗಂಡಂದಿರನ್ನು ತೊರೆದಿದ್ದ ಜರೀನಾ ತಾಜ್, ಅಜ್ಮಂತ್ ಜೊತೆ ಮೂರನೇ ಮದುವೆಯಾಗಿದ್ದಳು. ಈಗ ಮೂರನೇ ಗಂಡ ಚಿತ್ರಹಿಂಸೆ ನೀಡುತ್ತಿದ್ದಾನೆ ಎಂದು ಜರೀನಾ ತಾಜ್ ಆರೋಪಿಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ…