Author: admin

ಬೆಂಗಳೂರು:  ಐಸ್‌ ಕ್ರೀಮ್‌ ಕೊಡಿಸುವುದಾಗಿ ಆಮಿಷವೊಡ್ಡಿ 9 ವರ್ಷದ ಬಾಲಕನನ್ನು ಕಿಡ್ನ್ಯಾಪ್‌ ಮಾಡಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಚಿಕ್ಕತೋಗೂರು ಬಳಿ ಈ ಘಟನೆ ನಡೆದಿತ್ತು.. ಜಾರ್ಖಂಡ್‌ ಮೂಲದ ಮೊಹಮದ್ ಜಶಿಮುದ್ದೀನ್ ಶೇಕ್‌(24)  ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.. ಮೊಹಮದ್ ಜಶಿಮುದ್ದೀನ್ ಶೇಕ್‌(24) ಬ್ಯುಸಿನೆಸ್‌ ನಲ್ಲಿ ಲಾಸ್‌ ಆಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಆತ ಮನೆ ಬಳಿ ಆಟವಾಡುತ್ತಿದ್ದ ಬಾಲಕನಿಗೆ ಐಸ್‌ ಕ್ರೀಮ್‌ ಕೊಡಿಸುವ ಆಮಿಷ ತೋರಿಸಿ ಕಿಡ್ನ್ಯಾಪ್‌ ಮಾಡಿಕೊಂಡು ಹೋಗಿದ್ದ. ಜೂನ್‌ 17ರಂದು ಕಿಡ್ನ್ಯಾಪ್‌ ಮಾಡಲಾಗಿತ್ತು. ನಂತರ ಬಾಲಕನ ಪೋಷಕರಿಗೆ ಕರೆ ಮಾಡಿದ್ದ ಆರೋಪಿ 10 ಲಕ್ಷ ರೂಪಾಯಿ ತಂದುಕೊಡುವಂತೆ ಬೇಡಿಕೆ ಇಟ್ಟಿದ್ದ. ಪದೇ ಪದೇ ಲೊಕೇಷನ್‌ ಬದಲಿಸುತ್ತಾ ಆತ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ.. ಕೊನೆಗೂ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಜೂನ್‌ 18ರಂದೇ ಬಂಧನವಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.. ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.…

Read More

ಬೆಂಗಳೂರು: ಗೂಡ್ಸ್‌ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಅಂಗಡಿಗೇ ನುಗ್ಗಿದ ಘಟನೆ ಬೆಂಗಳೂರಿನ ಸುಬ್ರಮಣ್ಯನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ನೆನ್ನೆ ಮಧ್ಯಾಹ್ನ ಗೂಡ್ಸ್‌ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿದೆ. ಅದು ಒಮ್ಮಲೆ ಫುಟ್‌ ಪಾತ್‌ ಗೆ ನುಗ್ಗಿದೆ.. ಅಲ್ಲಿಂದ ದಾಟಿಕೊಂಡು ಅಂಗಡಿಯೊಂದಕ್ಕೆ ನುಗ್ಗಿದೆ. ಮಧ್ಯಾಹ್ನ 2:30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ವ್ಯಕ್ತಿಯೊಬ್ಬರ ಕಾಲು ಮುರಿದಿದೆ.. ಫುಟ್‌ ಪಾತ್‌ನಲ್ಲಿ ಬೈಕ್‌ ನಿಲ್ಲಿಸುತ್ತಿದ್ದವನ ಮೇಲೆ ನುಗ್ಗಿದ್ದರಿಂದ ಆತನ ಕಾಲು ಮುರಿದಿದೆ ಎಂದು ತಿಳಿದು ಬಂದಿದೆ. ಗಾಯಾಗೊಂಡ ಸವಾರನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಗಂಡ–ಹೆಂಡತಿ ಮನೆ ಟೆರೇಸ್‌ ಮೇಲಿದ್ದರು. ಈ ವೇಳೆ ಪತ್ನಿ ಜಾರಿ ಕೆಳಗೆ ಬೀಳುತ್ತಿದ್ದರು. ಆಗ ಗಂಡ ಆಕೆಯ ಕೈಹಿಡಿದು ರಕ್ಷಿಸಲು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಪತ್ನಿ ಗಂಡ ಕೈಯಿಂದ ನೇತಾಡುತ್ತಿದ್ದರೆ, ಕೆಳಗೆ ನಿಂತಿದ್ದ ಜನ ರಕ್ಷಣೆ ಮಾಡೋಕೆ ಸಿದ್ಧತೆ ಮಾಡ್ತಿದ್ದರು.. ಆದ್ರೆ, ಆಕೆ ಗಂಡನ ಕೈಜಾರಿ ಕೆಳಗೆ ಬಿದ್ದಿದ್ದಾಳೆ. ಕೆಳಗೆ ಬೈಕ್‌ಗಳು ಪಾರ್ಕ್‌ ಮಾಡಿದ್ದರಿಂದ ಅದರ ಮೇಲೆ ಬಿದ್ದು ತೀವ್ರ ಗಾಯಗೊಂಡಿದ್ದಾಳೆ.. ಕೋಮಾಗೆ ಜಾರಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ನಡೆದದ್ದು ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಕನಕನಗರದ ಬಡಾವಣೆಯಲ್ಲಿ.  27 ವರ್ಷದ ಮಹಿಳೆ ರುಬಾಯ್‌ ಎಂಬಾಕೆಯೇ ಮನೆ ಮೇಲಿಂದ ಕಾಲುಜಾರಿ ಬಿದ್ದಾಕೆ. ಸದ್ಯ ಆಕೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತನ್ನ ಪತಿಯ ಜೊತೆ ಕಟ್ಟಡದ ಮೇಲೆ ಆಕೆ ಕೆಲಸ ಮಾಡ್ತಿದ್ದಳು. ಕೆಲಸ ಮಾಡುವ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾಳೆ.. ನೀರಿನ ಮೇಲೆ ಕಾಲಿಟ್ಟಿದ್ದರಿಂದ ಕಾಲು ಜಾರಿ ಕೆಳಗೆ ಬಿದ್ದಿದ್ದಾಳೆ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಪಾವಗಡ: ಕೃಷಿ ಬೆಳೆಗಳಲ್ಲಿ ಬಿತ್ತನೆ ಹಂತದಿಂದ ಕಟಾವು ಹಂತದ ವರೆಗೆ ಬರ, ಆಲಿಕಲ್ಲುಮಳೆ, ಭೂಕುಸಿತ ಮುಂತಾದ ಪ್ರಕೃತಿ ವಿಕೋಪಗಳಿಂದ ಇಳುವರಿ ನಷ್ಟ ಸಂಭವಿಸಿದಲ್ಲಿ ಸಮಗ್ರ ವಿಮಾ ಭದ್ರತೆಯನ್ನು ಒದಗಿಸುವ ಸಲುವಾಗಿ 2024 ರ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಹಾಯಕ ಕೃಷಿ ನಿರ್ದೇಶಕರಾದ ಅಜಯ್ ಕುಮಾರ್ ತಿಳಿಸಿದರು. ಸದರಿ ಯೋಜನೆ ಇಡೀ ವಿಮಾ ಪರಿಹಾರ ಮೊತ್ತವನ್ನು ಪಡೆಯಲು ಬೆಳೆ ಸಮೀಕ್ಷೆ ಕಾರ್ಯಕ್ರಮದಲ್ಲಿ ರೈತರು ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ಬೆಳೆಗಳು ದಾಖಲಾಗುವುದು ಕಡ್ಡಾಯವಾಗಿರುತ್ತದೆ ಆದ್ದರಿಂದ ಪ್ರಸ್ತುತ ಹಂಗಾಮಿನ ಬೆಳೆ ವಿಮೆ ಯೋಜನೆಯಲ್ಲಿ ವಿಮೆಗೆ ಒಳಪಡುವ ವಿಮಾ ಘಟಕಗಳು ಬೆಳೆಗಳು ಪ್ರೀಮಿಯಂ ಮೊತ್ತ ಬೆಳೆವಾರು ವಿಮಾ ಮೊತ್ತ ಹಾಗೂ ಅಂತಿಮ ದಿನಾಂಕಗಳ ಬಗ್ಗೆ ಮತ್ತು ಬೆಳೆ ಸಮೀಕ್ಷೆ ಕಾರ್ಯಕ್ರಮ ಮಾಡಿ ರೈತರ ತಮ್ಮ ಮೊಬೈಲ್ ಮುಖಾಂತರ ತಮ್ಮ ಜಮೀನಿನಲ್ಲಿರುವ ಬೆಳೆಗಳನ್ನು ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ದಾಖಲು ಮಾಡುವುದರ ಕುರಿತು ದಿನಾಂಕ…

Read More

ದಿಲ್ಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯವು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಂಜೂರು ಮಾಡಿರುವ ಜಾಮೀನನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯವು ಸಲ್ಲಿಸಿರುವ ತುರ್ತು ಅರ್ಜಿ ಆಲಿಸಿದ ದಿಲ್ಲಿ ಹೈಕೋರ್ಟ್, ಅರವಿಂದ್ ಕೇಜ್ರಿವಾಲ್ ರ ಬಿಡುಗಡೆಗೆ ತಡೆ ನೀಡಿದೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ 1 ಲಕ್ಷ ರೂ. ಬಾಂಡ್ ನ ಮೇಲೆ ದಿಲ್ಲಿಯ ರೌಸ್ ಅವೆನ್ಯೂ ನ್ಯಾಯಾಲಯ ಗುರುವಾರ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ನೆನ್ನೆ ಇಡಿ ಹೈಕೋರ್ಟ್ ಮೆಟ್ಟಿಲೇರಿತ್ತು. ಜಾರಿ ನಿರ್ದೇಶನಾಲಯದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಸಲ್ಲಿಸಿದ್ದ ತುರ್ತು ಅರ್ಜಿಯ ವಿಚಾರಣೆಯು ನ್ಯಾ. ಸುಧೀರ್ ಕುಮಾರ್ ಜೈನ್ ಹಾಗೂ ರವೀಂದರ್ ದುದೇಜ ಅವರನ್ನೊಳಗೊಂಡ ರಜಾಪೀಠದ ಮುಂದೆ ಬಂದಿದೆ. ಅರವಿಂದ್ ಕೇಜ್ರಿವಾಲ್ ಅವರಿಗೆ ವಿಚಾರಣಾ ನ್ಯಾಯಾಲಯವು ಮಂಜೂರು ಮಾಡಿರುವ ಜಾಮೀನಿಗೆ ತಡೆ ನೀಡಬೇಕು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್…

Read More

2023–24 ಸಾಲಿಗೆ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಹೊರಡಿಸಿರುವ ಅಧಿಸೂಚನೆಯಲ್ಲಿ 2017-18ನೆ ಸಾಲಿನ ಗೆಜೆಟೆಡ್ ಪ್ರೊಬೇಷನರಿ(ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು 15 ದಿನಗಳ ವಿಶೇಷ ಅವಕಾಶವನ್ನು ನೀಡಲು ಸರಕಾರ ನಿರ್ಧರಿಸಿದೆ. ಶುಕ್ರವಾರ ಈ ಕುರಿತು ಆದೇಶ ಹೊರಡಿಸಿದ್ದು, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ನಿಯಮಗಳು, 1997 ರನ್ವಯ 2023–24ನೆ ಸಾಲಿಗೆ ಕರ್ನಾಟಕ ಲೋಕಸೇವಾ ಆಯೋಗವು ಕೆಎಎಸ್ ಹುದ್ದೆಗಳ ರಿಕ್ತ ಸ್ಥಾನಗಳಿಗೆ ಫೆ.26ರಂದು ಹೊರಡಿಸಿರುವ ಅಧಿಸೂಚನೆ ಹೊರಡಿಸಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಳಿಸಿದೆ. ಅಧಿಸೂಚನೆಯಲ್ಲಿ ಈಗಿರುವ ನಿಯಮಗಳ ಮೇಲೆ 2017-18ನೆ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ವಯಸ್ಸಿನ ನಿಬರ್ಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಿ ಸರಕಾರವು ಆದೇಶಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಹಗರಣದ ಆರೋಪ ಕೇಳಿ ಬಂದಿದ್ದು, ಸೂರಜ್ ರೇವಣ್ಣ ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ದೌರ್ಜನ್ಯ ಎಸಗಿದ್ದಾರೆ ಎಂದು ಅರಕಲಗೂಡಿನ ಚೇತನ್ ಎಂಬಾತ ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ಸುಮಾರು 14ರಿಂದ 15 ಪುಟದ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ಆರೋಪದ ಬೆನ್ನಲ್ಲೇ ದೂರುದಾರ ಚೇತನ್ ವಿರುದ್ಧ ಬ್ಲಾಕ್ ಮೇಲ್ ಆರೋಪ ಹೊರಿಸಿ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಹಾಗೂ ಸೂರಜ್ ಬ್ರಿಗೇಡ್ ನ ಖಜಾಂಚಿ ಶಿವಕುಮಾರ್ ಎಚ್.ಎಲ್. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದೂರು ನೀಡಿದ್ದಾರೆ. ತನ್ನ ಮೇಲೆ ಎಂಎಲ್ ಸಿ ಸೂರಜ್ ರೇವಣ್ಣ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂದು ಚೇತನ್ ಎಂಬ ಯುವಕ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ. ಸೂರಜ್ ರೇವಣ್ಣ ವಿರುದ್ಧ ದೂರು ನೀಡಿರುವ ಚೇತನ್ ವಿರುದ್ಧ ಹೊಳೆನರಸೀಪುರ ಪಟ್ಟಣ ಠಾಣೆಯಲ್ಲಿ ಸೂರಜ್ ರೇವಣ್ಣ…

Read More

ಆಂಧ್ರಪ್ರದೇಶದ ಪುಟ್ಟಹಳ್ಳಿಯ ಹೆಣ್ಣುಮಕ್ಕಳ ಪ್ರೌಢಶಾಲೆ ಬಳಿ ಪೊದೆಯಲ್ಲಿ ಶುಕ್ರವಾರ 21 ವರ್ಷ ವಯಸ್ಸಿನ ಮಹಿಳೆಯ ಶವ ನಗ್ನಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ. ಮಹಿಳೆಯ ಹತ್ಯೆಗೆ ಮುನ್ನ ಅತ್ಯಾಚಾರ ನಡೆದಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ. ಬಾಪಟ್ಲಾ ಜಿಲ್ಲೆಯ ಎಪುರುಪಲೇಂ ಗ್ರಾಮದ ಮಹಿಳೆ ಬೆಳಿಗ್ಗೆ ಶೌಚಕ್ಕಾಗಿ ರೈಲು ಹಳಿ ಪಕ್ಕದಲ್ಲಿರುವ ಶಾಲೆಯ ಬಳಿ ತೆರಳಿದ್ದರು. ಆದರೆ ಆ ಬಳಿಕ ವಾಪಸ್ಸಾಗಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಮುಂಜಾನೆ 5.30 ರಿಂದ 5.45ರ ವೇಳೆ ಮನೆಯಿಂದ ಹೊರಟಿದ್ದ ಮಹಿಳೆ ಬಾರದೇ ಇದ್ದಾಗ, ಕುಟುಂಬದವರು ಹುಡುಕಾಟ ಆರಂಭಿಸಿದರು. ಈ ವೇಳೆ ಆಕೆಯ ಮೃತದೇಹ ಪೊದೆಯಲ್ಲಿ ಪತ್ತೆಯಾಯಿತು ಎಂದು ಬಾಪಟ್ಲಾ ಜಿಲ್ಲೆಯ ಎಸ್ಪಿ ವಕುಲ್ ಜಿಂದಾಲ್ ಹೇಳಿದ್ದಾರೆ. ಈ ಶಂಕಿತ ಅತ್ಯಾಚಾರ ಮತ್ತು ಮಹಿಳೆಯ ಹತ್ಯಾ ಪ್ರಕರಣವನ್ನು ಬೇಧಿಸಲು ಐದು ತನಿಖಾ ತಂಡಗಳನ್ನು ರಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ತಕ್ಷಣ ಗ್ರಾಮಕ್ಕೆ ಭೇಟಿ ನೀಡುವಂತೆ ಗೃಹ ಸಚಿವರಾದ ವಂಗಲಪುಡಿ ಅನಿತಾ ಅವರಿಗೆ ಸಿಎಂ ಚಂದ್ರಬಾಬು ನಾಯ್ಡು ಸೂಚಿಸಿದ್ದಾರೆ. ಮಾದಕ…

Read More

ಆಧುನಿಕ ತಂತ್ರಜ್ಞಾನ ಬಳಸಿ ಆನ್ ಲೈನ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಆಮಿಷಗಳನ್ನು ಒಡ್ಡಿ ವಂಚನೆ ಮಾಡುತ್ತಿರುವ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನಸಾಮಾನ್ಯರು ಮುಂಜಾಗ್ರತೆ ವಹಿಸುವ ಮೂಲಕ ವಂಚನೆಗೊಳಗಾಗುವುದನ್ನು ತಡೆಗಟ್ಟಬಹುದಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ. ವಿಕ್ರಮ ಅಮಟೆ ತಿಳಿಸಿದರು. ಅವರು ಇಂದು ಚಿಕ್ಕಮಗಳೂರು ಪ್ರಸ್‌ಕ್ಲಬ್‌ನಲ್ಲಿ ಏರ್ಪಡಿಸಲಾಗಿದ್ದ ತಿಂಗಳ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ನೀಡಿದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು, ವಿದ್ಯಾವಂತ ಸುಶಿಕ್ಷಿತರೇ ಹೆಚ್ಚು ವಂಚನೆಗೊಳಗಾಗುತ್ತಿದ್ದಾರೆ, ದೊಡ್ಡ ಜಾಲವನ್ನು ಹೊಂದಿರುವ ವಂಚಕರ ಜಾಲವು ಇಲ್ಲಸಲ್ಲದ ಆಮಿಷ ಒಡ್ಡಿ ವಿವಿಧ ರೀತಿಯಲ್ಲಿ ವಂಚನೆ ಮಾಡುತ್ತಿದ್ದು, ಯಾರೂ ಕೂಡ ಅಪರಿಚಿತರೊಂದಿಗೆ ತಮ್ಮ ವಯಕ್ತಿಕ ಮಾಹಿತಿಗಳನ್ನು ನೀಡಬಾರದು ಎಂದು ಮನವಿ ಮಾಡಿದರು. ಮೂರು ಪ್ರಕರಣಗಳಲ್ಲಿ ಸೈಬರ್ ಅಪರಾಧಗಳು ನಡೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳನ್ನು ವೈರಲ್ ಮಾಡಿ ಬ್ಲಾಕ್‌ಮೇಲ್ ರೂಪದಲ್ಲಿ ವಂಚನೆ ಮಾಡಲಾಗುತ್ತಿದೆ. ಬ್ಯಾಂಕ್ ಹಾಗೂ ಇತರ ವ್ಯವಹಾರಗಳಲ್ಲಿ ವಯಕ್ತಿಕ ಮಾಹಿತಿ ಪಡೆದುಕೊಂಡು ತಂತ್ರಜ್ಞಾನ ಬಳಸಿ ಹಣ ಅಪಹರಿಸುವ ಮೂಲಕ ವಂಚನೆ…

Read More

ಮುಸ್ಲಿಂ ಬಾಹುಳ್ಯದ ದೇಶವಾಗಿರುವ ತಜಿಕಿಸ್ತಾನ ಇದೀಗ ಹಿಜಾಬ್ ನಿಷೇಧಿಸಲು ಮುಂದಾಗಿದ್ದು, ಶೀಘ್ರದಲ್ಲಿಯೇ ಈ ಕಾನೂನು ಜಾರಿಯಾಗುವ ಸಾಧ್ಯತೆ ಇದೆ. ದೇಶದ ಸಂಸತ್ ನ ಮೇಲ್ಮನೆಯಲ್ಲಿ ಜೂನ್ 19ರಂದು ಹಿಜಾಬ್ ನಿಷೇಧ ಸಂಬಂಧಿ ವಿಧೇಯಕವನ್ನು ಅಂಗೀಕರಿಸಲಾಗಿದೆ. ಶಾಲಾ–ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿದ ಘಟನೆ ಕರ್ನಾಟಕ(Karnataka) ಸೇರಿದಂತೆ ಭಾರತದ ವಿವಿಧ ರಾಜ್ಯಗಳಲ್ಲಿ ಗದ್ದಲ ಏರ್ಪಟ್ಟು ಭಾರೀ ಚರ್ಚೆ ಆಗಿತ್ತು. ಆದರೀಗ ಅಚ್ಚರಿ ಎಂಬಂತೆ ಮುಸ್ಲಿಂ ರಾಷ್ಟ್ರಗಳೇ ಹಿಜಾಬ್ ನಿಷೇಧಕ್ಕೆ ಮುಂದಾಗಿವೆ. ಅಂತೆಯೇ ಇದೀಗ ಸುಮಾರು 1 ಕೋಟಿ ಜನಸಂಖ್ಯೆ ಹೊಂದಿರುವ ತಜಕಿಸ್ತಾನದಲ್ಲಿ ಶೇ.96ರಷ್ಟು ಜನರು ಮುಸ್ಲಿಮರಿದ್ದಾರೆ. ಆದರೆ ಹಾಲಿ ಆಡಳಿತದಲ್ಲಿರುವ ಅಧ್ಯಕ್ಷ ಎಮೋಮಲಿ ರೆಹಮಾನ್ ಸರ್ಕಾರವು, ತಜಕಿಸ್ತಾನವನ್ನು ಜಾತ್ಯತೀತ ದೇಶ ಎಂದು ಜಗತ್ತಿನ ಮುಂದೆ ತೆರೆದಿಡುವ ಭಾಗವಾಗಿ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ತಜಿಕಿಸ್ತಾನದ ಸಂಸತ್ ನ ಮೇಲ್ಮನೆಯಾದ ಮಜಿಲಿ ಮಿಲ್ಲಿಯಲ್ಲಿ ಸ್ಪೀಕರ್ ರುಸ್ತಮ್ ಎಮೋಮಲಿ ಅವರ ಅಧ್ಯಕ್ಷತೆಯಲ್ಲಿ ನಡೆದ 18ನೇ ಅಧಿವೇಶನದ ವೇಳೆ ವಿಧೇಯಕಕ್ಕೆ ಅನುಮೋದನೆ ದೊರಕಿದೆ.…

Read More