Subscribe to Updates
Get the latest creative news from FooBar about art, design and business.
- KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್: ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ
- ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
- ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
- ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
- ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
- ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
- ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
- ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
Author: admin
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣದ ಅಗತ್ಯವಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಕೆಂಪೇಗೌಡ ವಿಮಾನ ನಿಲ್ದಾಣ ಹಾಗೂ ನಮಗೂ ಒಪ್ಪಂದವಿದೆ. ಆ ಒಪ್ಪಂದದ ಪ್ರಕಾರ 2033ರವರೆಗೆ ಬೇರೊಂದು ವಿಮಾನ ನಿಲ್ದಾಣ ಮಾಡುವುದಕ್ಕೆ ಅವಕಾಶ ಇಲ್ಲ. 2033ಕ್ಕೆ ಆ ಒಪ್ಪಂದ ಮುಗಿಯುತ್ತೆ. ಆಗ ನಾವು ಎರಡನೇ ಏರ್ಪೋರ್ಟ್ ಮಾಡಬೇಕಾಗುತ್ತೆ ಎಂದರು. ಪ್ರಯಾಣಿಕರ ಲೋಡ್ ಬಗ್ಗೆ ನಿನ್ನೆ ನಡೆದ ಸಭೆಯಲ್ಲಿ ಪರಾಮರ್ಶೆ ಮಾಡಲಾಗಿದೆ. 2032ರ ಸುಮಾರಿಗೆ ಕೆಐಎನಲ್ಲಿ ಜನಸಂದಣಿ ಹೆಚ್ಚಾಗಲಿದೆ. ಹಾಗಾಗಿ ಮತ್ತೊಂದು ಏರ್ ಪೋರ್ಟ್ ನಮಗೆ ಬೇಕಾಗುತ್ತದೆ. ಮುಂಬೈ, ಗೋವಾ, ದೆಹಲಿಯಲ್ಲಿ ಹೊಸ ಏರ್ ಪೊರ್ಟ್ ಗಳಿವೆ. ಮುಂದಿನ ದಿನಗಳಲ್ಲಿ ಬೆಂಗಳೂರಿಗೆ 2ನೇ ಏರ್ ಪೋರ್ಟ್ ಅಗತ್ಯವಿದೆ. ಎಲ್ಲಿ, ಎಷ್ಟು ಎಕರೆ ಜಾಗದಲ್ಲಿ ನಿರ್ಮಾಣ ಮಾಡಬೇಕು ಎಂಬ ಬಗ್ಗೆ ನಿರ್ಧಾರ ಮಾಡಿಲ್ಲ. ಈ ಬಗ್ಗೆ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.…
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಬಾಲಿವುಡ್ ನ ಖ್ಯಾತ ಗಾಯಕ, ನಟ ಲಕ್ಕಿ ಅಲಿ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ನ್ಯೂ ಯಲಹಂಕ ಟೌನ್ ಬಳಿ ಇರುವ ಟ್ರಸ್ಟ್ ಒಂದಕ್ಕೆ ಸೇರಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಗಾಯಕ ಲಕ್ಕಿ ಅಲಿ ದೂರು ನೀಡಿದ್ದಾರೆ ಎನ್ನಲಾಗಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಅವರ ಪತಿ ಸುಧೀರ್ ರೆಡ್ಡಿ ಹಾಗೂ ಮಧುಸೂಧನ ರೆಡ್ಡಿ ವಿರುದ್ಧ ದೂರು ನೀಡಿದ್ದಾರೆ. ಜೊತೆಗೆ ಸಲ್ಲಿಸಿರುವ ದೂರಿನ ಪ್ರತಿಯನ್ನು ಎಕ್ಸ್ ನಲ್ಲಿ ಖ್ಯಾತ ಗಾಯಕ ಲಕ್ಕಿ ಆಲಿ ಅವರು ಪೋಸ್ಟ್ ಮಾಡಿದ್ದಾರೆ. ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿರುವ ತಮ್ಮ ಟ್ರಸ್ಟ್ ಗೆ ಸಂಬಂಧಿಸಿದ ಭೂಮಿಯನ್ನು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಮಧುಸೂಧನ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಇದೇ ಬರುವ ಜೂನ್ 27 ರಿಂದ ಜುಲೈ 2ರ ವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿಯನ್ನು ಏರ್ಪಡಿಸಲಾಗಿದೆ. ಈ ಬಗ್ಗೆ ಅಗತ್ಯ ಸಿದ್ಧತೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆಗೆ ಜಿಲ್ಲಾಧಿಕಾರಿ ವೆಂಕಟರ್ ರಾಜಾ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪೂರ್ವ ಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಯಾವುದೇ ರೀತಿಯ ತೊಂದರೆಗೆ ಆಸ್ಪಂದ ನೀಡದಂತೆ ಕರ್ತವ್ಯ ನಿರ್ವಹಿಸಲು ಹಾಗೂ ಊಟೋಪಚಾರದ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ಡಿಸಿ ತಿಳಿಸಿದ್ದಾರೆ. ಸೈನಿಕ ಭರ್ತಿ ಕಾರ್ಯಾಲಯದ ನಿರ್ದೇಶಕ ಕರ್ನಲ್ ಗೌರವ್ ತಾಪ ಅವರು ಮಾತನಾಡಿ,”ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕಿದೆ. ಲೋಕೋಪಯೋಗಿ, ಸೆಸ್ಕ್, ಪದವಿ ಪೂರ್ವ ಶಿಕ್ಷಣ, ಅಗ್ನಿಶಾಮಕ ದಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವೈದ್ಯಕೀಯ ಶಿಕ್ಷಣ, ಸೆಸ್ಕ್, ಬಿಎಸ್ ಎನ್ ಎಲ್ ಹೀಗೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಸಹಕಾರ ನೀಡಬೇಕು. ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ನೋಡಲ್ ಅಧಿಕಾರಿ ಮೇಜರ್ ಬಾಲಸುಬ್ರಹ್ಮಣ್ಯಂ…
ನಟಿ ದೀಪಿಕಾ ಪಡುಕೋಣೆ ಅಮ್ಮನಾಗುವ ಖುಷಿಯಲ್ಲಿದ್ದಾರೆ.’ಕಲ್ಕಿ 2898 ಎಡಿ’ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ತೊಡಿಗಿಸಿಕೊಂಡಿದ್ದಾರೆ. ಈ ವೇಳೆ ನಟಿ ದುಬಾರಿ ಮೊತ್ತದ ಡ್ರೆಸ್ ಧರಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಪ್ರೀ ರಿಲೀಸ್ ಇವೆಂಟ್ನಲ್ಲಿ ನಟಿ ದೀಪಿಕಾ ಪಡುಕೋಣೆ ಮುಖ್ಯ ಆಕರ್ಷಣೆಯಾಗಿ ಕಾಣಿಸಿಕೊಂಡಿದ್ರು. ಇನ್ನು, ನಟಿ ದೀಪಿಕಾ ಧರಿಸಿದ್ದ ಕಪ್ಪು ಬಣ್ಣದ ಗೌನ್ ಬೆಲೆ ಎಷ್ಟು ಗೊತ್ತಾ ಕೇಳಿದ್ರೆ ಶಾಕ್ ಆಗ್ತಿರಾ! ಲೋವೆ ಅಧಿಕೃತ ವೆಬ್‌ಸೈಟ್‌ನಲ್ಲಿ ಹತ್ತಿಯ ಅನಗ್ರಾಮ್ ಪೆಬಲ್ ಡ್ರೆಸ್ ನ ಬೆಲೆ ಬರೋಬ್ಬರಿ ₹1,14,000 ರೂಪಾಯಿ ಇದೆ. ಬೆಲೆ ಕೇಳಿದ ಫ್ಯಾನ್ಸ್ ಈ ಸಿಂಪಲ್ ಡ್ರೆಸ್‌ಗೆ ಇಷ್ಟೋಂದು ದೀಪಿಕಾ ಇಷ್ಟೊಂದು ಹಣ ಕೊಟ್ಟಿದ್ದಾರಾ ಎಂದು ಕೇಳ್ತಿದ್ದಾರೆ. ದೀಪಿಕಾ ಧರಿಸಿದ ಕಪ್ಪು ಬಣ್ಣದ ಡ್ರೆಸ್‌ಗೆ 1,14,000 ಲಕ್ಷ ರೂ.ಎನ್ನಲಾಗುತ್ತಿದೆ. ನಟಿ ಕಲ್ಕಿ ಸಿನಿಮಾದಲ್ಲಿ ನಟಿಸಿದ್ದು ಪ್ರಭಾಸ್ ಜೊತೆ ಸ್ಕ್ರೀನ್ ಶೇರ್ ಮಾಡಿದ್ದಾರೆ. ಈ ಚಿತ್ರ ಭಾರೀ ನಿರೀಕ್ಷೆ ಹುಟ್ಟಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
KSRTC ಬಸ್ ಚಾಲಕರಾಗಬೇಕು ಎಂದು ಅಂದುಕೊಂಡವರಿಗೆ ಇಲ್ಲಿದೆ ಸುವರ್ಣಾವಕಾಶ. ಖಾಲಿ ಇರುವ KSRTC ಬಸ್ ಚಾಲಕರ ಹುದ್ದೆಗಳನ್ನು ಆಯಾ ಬಸ್ ಡಿಪೋಗಳು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ 7ನೇ ತರಗತಿ ಪಾಸ್ ಆಗಿರಬೇಕು.. ಹೆವಿ ಮೋಟಾರ್ ವಾಹನ ಚಾಲಕರಾಗಿ 2 ವರ್ಷಗಳ ಅನುಭವ ಹೊಂದಿರಬೇಕು.. ಕರ್ನಾಟಕದ ಮಾನ್ಯತೆ ಪಡೆದಿರುವ ಸರಕು ವಾಹನ ಬ್ಯಾಡ್ಜ್ ಹೊಂದಿರಬೇಕು. ಮಾಸಿಕ ವೇತನ : ರೂ.23,000. ಇಎಸ್ ಐ, ಇಪಿಎಫ್ ಸೌಲಭ್ಯ ಇರುತ್ತದೆ. ಹೊರಗುತ್ತಿಗೆ ಆಧಾರದ ಚಾಲಕರನ್ನು ಆಯ್ಕೆ ಮಾಡಲಾಗುತ್ತದೆ.ಚಾಮರಾಜನಗರ, ರಾಮನಗರ, ಆನೇಕಲ್ ಡಿಪೋದಲ್ಲಿ ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಚಾಮರಾಜನಗರ ಡಿಪೋದಲ್ಲಿ ಕೆಲಸ ಬೇಕಿದ್ರೆ 8050980889, 8618876846. ಹಾಗೂ ರಾಮನಗರ, ಅನೇಕಲ್ ನಲ್ಲಿ ಕೆಲಸ ಬೇಕಿದ್ರೆ 8050980889, 8618876846 ಸಂಪರ್ಕಿಸಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್…
ಮೈಸೂರು: ಮೈಸೂರಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2024ನೇ ಸಾಲಿನ ಆಷಾಢ ಶುಕ್ರವಾರ ಹಾಗೂ ಅಮ್ಮನವರ ಜನ್ಮೋತ್ಸವ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಆಷಾಢ ಶುಕ್ರವಾರ ಹಾಗೂ ಅಮ್ಮನವರ ಜನ್ಮೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವರ್ಷ ಜುಲೈ 12 ರಂದು ಮೊದಲನೇ ಆಷಾಢ ಶುಕ್ರವಾರ, ಜುಲೈ 19 ರಂದು ಎರಡನೇ ಆಷಾಢ ಶುಕ್ರವಾರ, ಜುಲೈ 26 ರಂದು ಮೂರನೇ ಆಷಾಢ ಶುಕ್ರವಾರ, ಜುಲೈ 27 ರಂದು ಶನಿವಾರ ರಂದು ಶ್ರೀ ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವ ವರ್ಧಂತಿ ಕಾರ್ಯಕ್ರಮ ಹಾಗೂ ಆಗಸ್ಟ್ 2 ರಂದು ಕೊನೆಯ ಆಷಾಢ ಶುಕ್ರವಾರಕ್ಕೆ ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಸೂಕ್ತ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು. ಜುಲೈ ಮೊದಲ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಪಕ್ಷದ ಆಧಾರದ ಮೇಲೆ ನಡೆಯುತ್ತಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ತಪ್ಪಿತಸ್ಥರು ಯಾವುದೇ ಪಕ್ಷದಲ್ಲಿದ್ದರು ತಪ್ಪಿತಸ್ಥರೇ ಆಗಿರುತ್ತಾರೆ. ಬೇರೆ ಪಕ್ಷದಲ್ಲಿದ್ದಾರೆ ಎಂಬುದನ್ನು ಮುಖ್ಯವಾಗಿ ತೆಗೆದುಕೊಳ್ಳುವುದಿಲ್ಲ. ಏನು ತಪ್ಪು ಮಾಡಿದ್ದಾರೆ ಎಂಬ ಆಧಾರದ ಮೇಲೆ ತನಿಖೆ, ವಿಚಾರಣೆ ನಡೆಯುತ್ತದೆ ಎಂದು ಹೇಳಿದರು. ದರ್ಶನ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ನನ್ನು ವಿಚಾರಣೆ ನಡೆಸಲು ಇನ್ನೊಂದು ವಾರ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಪೊಲೀಸರು ಕೇಳಿದ್ದರು. ಆದರೆ ಎರಡು ದಿನ ಕಸ್ಟಡಿಗೆ ನೀಡಿದೆ. ಎರಡು ದಿನದ ಬಳಿಕ ವಿಚಾರಣೆ ಮುಗಿದರೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಾರೆ ಎಂದು ತಿಳಿಸಿದರು. ರೇಣುಕಾಸ್ವಾಮಿ ಪ್ರಕರಣದ ಕೊಲೆ ಆರೋಪ ಹೊತ್ತಿರುವ ನಟ ದರ್ಶನ್ ವಿಚಾರದಲ್ಲಿ ಯಾರು ನನ್ನ ಬಳಿ ಬರಬೇಡಿ ಎಂದು ಮುಖ್ಯಮಂತ್ರಿಯವರ ಸೂಚಿಸಿದ್ದಾರೆ ಎಂಬುದರ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ,…
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ– ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಯ ಮಾಹಿತಿ: NMHS ಸರ್ವೇ ಕೋಆರ್ಡಿನೇಟರ್ –1 NMHS ಸರ್ವೇ ಫೀಲ್ಡ್ ಡೇಟಾ ಕಲೆಕ್ಟರ್ –7 ಒಟ್ಟು 8 NMHS ಸರ್ವೇ ಫೀಲ್ಡ್ ಡೇಟಾ ಕಲೆಕ್ಟರ್, ಸರ್ವೇ ಕೋಆರ್ಡಿನೇಟರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜೂನ್ 22, 2024 ಅಂದರೆ ನಾಳೆ ಬೆಳಗ್ಗೆ 10.30ಕ್ಕೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಿ. ಶೈಕ್ಷಣಿಕ ಅರ್ಹತೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ: NMHS ಸರ್ವೇ ಕೋಆರ್ಡಿನೇಟರ್ – 45 ವರ್ಷ…
ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಕನ್ನಡದ ವಿಚಾರದಲ್ಲಿ ರಾಜಿಯಾಗದೆ ಕೆಲಸ ಮಾಡುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧ ಆವರಣದಲ್ಲಿ ನಡೆದ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆಯ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ವಿಧಾನಸೌಧದ ಆವರಣದಲ್ಲಿ ಅಂಬೇಡ್ಕರ್ ಅವರ, ಬಸವಣ್ಣನವರ, ಕೆಂಪೇಗೌಡರು ಸೇರಿದಂತೆ ಅನೇಕ ನಾಯಕರ ಪ್ರತಿಮೆಗಳಿವೆ. ಈ ಶಕ್ತಿ ಕೇಂದ್ರದಲ್ಲಿ ನಾಡ ದೇವಿ ಭುವನೇಶ್ವರಿ ತಾಯಿ ಪ್ರತಿಮೆ ಇರಬೇಕು. ಇಲ್ಲಿಗೆ ಭೇಟಿ ನೀಡುವವರು ದೇವಿಯ ಆಶೀರ್ವಾದ ಪಡೆದುಕೊಳ್ಳಬೇಕು ಎಂಬುದು ನಮ್ಮ ಆಶಯ. ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳಾಗಿದ್ದು, ಈ ನೆನಪಿಗಾಗಿ 25 ಅಡಿಯ ಕಂಚಿನ ಪ್ರತಿಮೆ ಸ್ಥಾಪಿಸಲಾಗುತ್ತಿದೆ” ಎಂದರು. “ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮಾಡಿ ಮೊದಲ ಬಾರಿಗೆ ಕಾನೂನು ಮಾಡಲಾಯಿತು. ಇದಕ್ಕೆ ಅನೇಕ ಕನ್ನಡ ಸಂಘಟನೆಗಳು ಹೋರಾಟ ಮಾಡಿವೆ. ಒಂದಷ್ಟು ಬಾರಿ ಕಾನೂನು ಕೈಗೆ ತೆಗೆದುಕೊಂಡಾಗ ರಾಜಿಯಾಗದೆ ಕೆಲಸ ಮಾಡಿದ್ದೇವೆ. ಜೊತೆಗೆ ಕನ್ನಡ ಉಳಿಸುವ ಕೆಲಸವನ್ನು ಮಾಡಿದ್ದೇವೆ” ಎಂದು…
ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಗಳ ಮಾಹಿತಿಯನ್ನು ಸರಕಾರಕ್ಕೆ ನೀಡಿದವರಿಗೆ ಆರೋಗ್ಯ ಇಲಾಖೆಯಿಂದ ನೀಡಲಾಗುತ್ತಿದ್ದ ಬಹುಮಾನದ ಮೊತ್ತವನ್ನು 50 ಸಾವಿರ ರೂ.ಗಳಿಂದ ಒಂದು ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಹೆಣ್ಣು ಭ್ರೂಣ ಪತ್ತೆಯಾಗುತ್ತಿದ್ದಂತೆ ಗರ್ಭಪಾತ ಮಾಡಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ತಡೆಯಲು ಆರೋಗ್ಯ ಇಲಾಖೆ ನೂತನ ಯೋಜನೆಯನ್ನು ರೂಪಿಸಿದೆ. ಭ್ರೂಣಲಿಂಗ ಪತ್ತೆ ಹಾಗೂ ಹತ್ಯ ನಡೆಯುತ್ತಿದ್ದರೆ ಈ ಬಗ್ಗೆ ಸಾರ್ವಜನಿಕರು ಇಲಾಖೆಗೆ ಸುಳಿವು ನೀಡಿದರೆ ಬರೋಬ್ಬರಿ ಒಂದು ಲಕ್ಷ ರೂ. ಬಹುಮಾನ ನೀಡಲಾಗುತ್ತದೆ. ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ತಂತ್ರವಿಧಾನಗಳು(ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994 ಅನುಷ್ಠಾನಕ್ಕೆ ಸಂಬಂಧಿಸಿದಂತೆ, ಯಶ್ವಸಿಗೊಂಡ ಗುಪ್ತಕಾರ್ಯಾಚರಣೆಗೆ, ಮಾಹಿತಿ ನೀಡುವ ಮಾಹಿತಿದಾರರಿಗೆ ಈಗಾಗಲೇ 50 ಸಾವಿರ ರೂ.ಬಹುಮಾನವಾಗಿ ನೀಡಲಾಗುತ್ತಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…