Author: admin

ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ ಮೃತಪಟ್ಟ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣಕ್ಕೆ ಜುಲೈನಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಗುರುವಾರ ವಿಧಾನಸೌಧದ ಮುಂಭಾಗದಲ್ಲಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಸಫಾರಿಗಾಗಿ ವಿಶೇಷ ವಿನ್ಯಾಸದೊಂದಿಗೆ ಸಿದ್ಧವಾಗಿರುವ 3 ಹೊಸ ಮಿನಿ ಬಸ್ ಗಳಿಗೆ ಹಸಿರು ನಿಶಾನೆ ತೋರಿದ ಬಳಿಕ ಅವರು ಮಾತನಾಡಿದರು. ಹಾಸನ ಜಿಲ್ಲೆ ಯಸಳೂರು ಬಳಿ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಮತ್ತು ಅರ್ಜುನನ ಆವಾಸಸ್ಥಾನವಾಗಿದ್ದ, ನಾಗರಹೊಳೆಯ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುವುದು. ಈ ಎರಡೂ ಸ್ಮಾರಕಗಳಲ್ಲಿ ಅರ್ಜುನ ಪ್ರತಿಕೃತಿಯನ್ನು ನಿರ್ಮಿಸಿ ಪ್ರತಿಷ್ಠಾಪಿಸಲಾಗುವುದು ಎಂದು ಅವರು ಹೇಳಿದರು. ಜೊತೆಗೆ ಚಿನ್ನದ ಅಂಬಾರಿ ಹೊತ್ತ ಅರ್ಜುನನ ಚಿತ್ರಗಳು, ಅರ್ಜುನ ವಿವಿಧ ಆನೆ ಕಾರ್ಯಾಚರಣೆ, ಹುಲಿ ಮತ್ತು ಚಿರತೆ…

Read More

ಎಕ್ಸ್‌ ಬಾಕ್ಸ್ ಕಂಟ್ರೋಲರ್ ಅರ್ಡರ್ ಮಾಡಿದ್ದ ದಂಪತಿಗೆ ಅಮೆಜಾನ್ ಬಾಕ್ಸ್‌ನಲ್ಲಿ ಬಂದಿದ್ದು ಮಾತ್ರ ಜೀವಂತ ನಾಗರ ಹಾವು. ಈ ಘಟನೆ ನಡೆದಿರುವುದು ಬೇರೆಲ್ಲೂ ಅಲ್ಲ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ. ದಂಪತಿಗಳಿಗೆ ಬಂದ ಅಮೆಜಾನ್ ಪ್ಯಾಕೇಜ್‌ ನಲ್ಲಿ ಜೀವಂತ ನಾಗರಹಾವು ಕಂಡುಬಂದಿದ್ದು, ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ  ವೈರಲ್  ಆಗಿದೆ. ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ವಾಸವಿರುವ ಇಂಜಿನಿಯರ್ ದಂಪತಿ ಆನ್‌ ಲೈನ್ ವಿತರಣಾ ಪ್ಲಾಟ್‌ ಫಾರ್ಮ್‌ ಅಮೆಜಾನ್‌ ನಲ್ಲಿ ಎಕ್ಸ್‌ ಬಾಕ್ಸ್ ಕಂಟ್ರೋಲರ್ ಅನ್ನು ಆರ್ಡರ್ ಮಾಡಿದ್ದರು. ಆದರೆ, ಅವರು ಪ್ಯಾಕೇಜ್ ಸ್ವೀಕರಿಸಿದಾಗ ಮಾತ್ರ ಪಾರ್ಸಲ್‌ನಲ್ಲಿ ಇದ್ದದ್ದು ನಾಗರಹಾವು. ದಂಪತಿಗಳ ಹೇಳಿದ ಪ್ರಕಾರ, “ನಾವು ಅಮೆಜಾನ್‌ನಿಂದ 2 ದಿನಗಳ ಹಿಂದೆ ಎಕ್ಸ್‌ ಬಾಕ್ಸ್ ಕಂಟ್ರೋಲರ್ ನ್ನು ಆರ್ಡರ್ ಮಾಡಿದ್ದೆವು. ಅಮೆಜಾನ್‌ನಿಂದ ಬಂದ ಪ್ಯಾಕೇಜ್‌ ನಲ್ಲಿ ಜೀವಂತ ಹಾವು ಬಂದಿದೆ. ಪ್ಯಾಕೇಜ್ ಅನ್ನು ನೇರವಾಗಿ ಡಿಲೆವರಿ ಪಾರ್ಟ್ನರ್ ನಮಗೆ ನೀಡಿದ್ದಾರೆ. ಅವರು ಹೊರಗೆ ಇಟ್ಟು ಹೋಗಿಲ್ಲ. ಇಡೀ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದೇವೆ, ಜೊತೆಗೆ ನಮ್ಮಲ್ಲಿ…

Read More

ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ. ಲೋಕಸಭೆ ಚುನಾವಣೆ ಮುಗಿದು NDA ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಜೂನ್ 24 ರಿಂದ ಮೊದಲ ಲೋಕಸಭಾ ಅಧಿವೇಶನ ಕೂಡ ನಡೆಯಲಿದೆ. ಈ ಬೆನ್ನಲ್ಲೇ ಭಾರೀ ಕುತೂಹಲ ಕೆರಳಿಸಿದ ಲೋಕಸಭಾ ಸ್ಪೀಕರ್ ಆಯ್ಕೆ ಇನ್ನೂ ತಣಿಯದಾಗಿದೆ. ಆದರೆ ಈ ನಡುವೆ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ. ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಗುರುವಾರ ಮಾಹಿತಿ ನೀಡಿದ್ದು, ಒಡಿಶಾ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ‘ಸಂವಿಧಾನದ ಪರಿಚ್ಛೇದ 95(1)ರ ಅಡಿಯಲ್ಲಿ ಲೋಕಸಭಾ ಸದಸ್ಯರಾದ…

Read More

10ನೇ ವರ್ಷದ ಯೋಗ ದಿನದ ಅಂಗವಾಗಿ ಕೊರಟಗೆರೆ ತಾಲ್ಲೂಕಿನ ಅರಸಪುರ ಸರ್ಕಾರಿ ಶಾಲೆಯ ಮಕ್ಕಳು ಯೋಗಾಭ್ಯಾಸ ಮಾಡಿದರು. ವಿಶೇಷ ಮಕ್ಕಳಿಗೆ ಯೋಗಭ್ಯಾಸ ಹೇಳಿಕೊಟ್ಟ ಶಿಕ್ಷಕ ವೃಂದ, ಮಕ್ಕಳ ಜೊತೆಗೆ ಯೋಗಾಭ್ಯಾಸ ಮಾಡಿದರು. ಈ ವೇಳೆ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕರಾದ ಆನಂದ್, ಯೋಗ ಎನ್ನುವುದು ನಮ್ಮ ಪೂರ್ವಿಕರಿಂದ ಬಂದ ಬಹುದೊಡ್ಡ ಕೊಡುಗೆ, ಯೋಗವನ್ನ ಮಕ್ಕಳು ತಮ್ಮ ಬಾಲ್ಯದಲ್ಲಿ ಅಭ್ಯಾಸ ಮಾಡಿದರೆ ದೇಹದಲ್ಲಿ ಉತ್ತಮ ಆರೋಗ್ಯ ವೃದ್ಧಿಸುತ್ತದೆ. ಯಾವುದೇ ರೋಗ ರೂಜಿನಗಳು ಬರದಂತೆ ದೇಹವನ್ನು  ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ತುಮಕೂರು: ಭಾರತ ದೇಶದ ಪರಂಪರೆ, ಸಂಸ್ಕೃತಿಯು ತುಂಬಾ ಪ್ರಾಚೀನವಾಗಿದ್ದು, ಜಗತ್ತಿಗೆ ಆದರ್ಶವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರಯತ್ನದಿಂದ ಯೋಗವು ಜಗತ್ತಿಗೆ ಪರಿಚಯಿಸಲ್ಪಟ್ಟು ಅಂತರರಾಷ್ಟಿಯ ಯೋಗ ದಿನಾಚರಣೆ ಮೂಲಕ ವಿಶ್ವದ ೧೮೭ಕ್ಕೂ ಹೆಚ್ಚು ದೇಶಗಳಲ್ಲಿ ಆಚರಿಸಲ್ಪಡುತ್ತಿದೆ ಎಂದು ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಖಾತೆ ಸಚಿವರಾದ ವಿ.ಸೋಮಣ್ಣ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಆಶ್ರಯದಲ್ಲಿ ೧೦ನೇ ಅಂತರರಾಷ್ಟ್ರೀಯ ದಿನಾಚರಣೆ ಅಂಗವಾಗಿ ನಗರದ ಪೊಲೀಸ್ ಕವಾಯತು ಮೈದಾನದಲ್ಲಿಂದು ಹಮ್ಮಿಕೊಳ್ಳಲಾಗಿದ್ದ “ತನಗಾಗಿ ಮತ್ತು ಸಮಾಜಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವಸಂಸ್ಥೆಯಲ್ಲಿ ನಡೆದ ೨೦೧೪ರ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯೋಗದ ಮಹತ್ವವನ್ನು ವಿವರಿಸಿ, ಜಗತ್ತಿನ ಆರೋಗ್ಯಕ್ಕಾಗಿ ಯೋಗದ ಅನಿವಾರ್ಯತೆಯನ್ನು ಪ್ರತಿಪಾದಿಸಿದರು. ಪ್ರಧಾನ ಮಂತ್ರಿಗಳ ಪ್ರಯತ್ನದಿಂದ ವಿಶ್ವಸಂಸ್ಥೆಯು ೨೦೧೪ರ ವರ್ಷದಿಂದ ಪ್ರತಿ ವರ್ಷ ಜೂನ್ ೨೧ನ್ನು ಅಂತರಾಷ್ಟ್ರೀಯ ಯೋಗ ದಿನಾಚರಣೆಯಾಗಿ ಘೋಷಣೆ ಮಾಡಿದ್ದು, ಭಾರತಕ್ಕೆ ಸೀಮಿತವಾಗಿದ್ದ…

Read More

ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಸಿನಿಮಾದಲ್ಲಿ ಮಾತ್ರವಲ್ಲದೆ ನಿಜ ಜೀವನದಲ್ಲೂ ಹೀರೋ ಆಗಿದ್ದಾರೆ. ಇತ್ತೀಚಿಗಷ್ಟೇ ಮಹೇಶ್​​ ಬಾಬು ಅನಾರೋಗ್ಯ ದಿಂದ ಹಾಸಿಗೆ ಹಿಡಿದ ತನ್ನ ಅಭಿಮಾನಿಯ ಕುಟುಂಬವನ್ನು ದತ್ತು ಪಡೆದು ಬೀದಿಗೆ ಬಿದ್ದಿದ್ದ ಕುಟುಂಬಕ್ಕೆ ಆರ್ಥಿಕವಾಗಿ ಮಾತ್ರವಲ್ಲದೆ ಇಡೀ ಕುಟುಂಬದ ಜವಾಬ್ದಾರಿ ವಹಿಸಿಕೊಂಡು ಸಹಾಯ ಮಾಡಿದ್ದಾರೆ. ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ರಾಜೇಶ್ ಎಂಬವರು ಮಹೇಶ್ ಬಾಬು ಅವರ ಕಟ್ಟಾ ಅಭಿಮಾನಿ ಎನ್ನಲಾಗಿದೆ. ಆದರೆ, ಕೆಲ ದಿನಗಳಿಂದ ರಾಜೇಶ್​​ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲಿ ಹಾಸಿಗೆ ಹಿಡಿದ್ದಿದ್ದರು. ಮನೆಯ ಆಧಾರ ಸ್ಥಂಭವಾಗಿದ್ದ ರಾಜೇಶ್ ಹಾಸಿಗೆ ಹಿಡಿದಿದ್ದರಿಂದ ಆತನ ಕುಟುಂಬ ಆರ್ಥಿಕ ಸಮಸ್ಯೆ ಅನುಭವಿಸಿದೆ. ಈ ವಿಷಯ ಸಾಮಾಜಿಕ ಜಾಲತಾಣಗಳ ಮೂಲಕ ಮಹೇಶ್ ಬಾಬು ಗಮನಕ್ಕೆ ಬಂದಿದೆ. ಕೂಡಲೇ ಸ್ಪಂದಿಸಿದ ಅವರು ರಾಜೇಶ್ ಕುಟುಂಬದ ಬೆಂಬಲಕ್ಕೆ ನಿಂತಿದ್ದಾರೆ. ಅಭಿಮಾನಿಯ ಮೂವರು ಮಕ್ಕಳನ್ನು ದತ್ತು ಪಡೆದು ಅವರ ಶಿಕ್ಷಣದ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಸದ್ಯ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ತಂದೆ ರಾಜೇಶ್…

Read More

ಯುವತಿ ತನ್ನ ಮದುವೆಯನ್ನು ಸಂಭ್ರಮಿಸುತ್ತಲೇ ಹೊಸ ಬದುಕಿನ ಕನಸು ಕಾಣುತ್ತಲೇ ಕೊನೆಯುಸಿರೆಳೆದ ಘಟನೆ ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ನಡೆದಿದೆ. ಮೃತರನ್ನು ಶ್ರೇಯಾ ಜೈನ್ (28) ಎಂದು ಗುರುತಿಸಲಾಗಿದೆ. ಈಕೆ ಎಂಬಿಎ ಪದವಿದರೆಯಾಗಿದ್ದರು. ವರ ಲಕ್ನೋದ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ದೆಹಲಿ ಮೂಲದ ಶ್ರೇಯಾ ಅವರ ಕುಟುಂಬ ಡೆಹ್ರಾಡೂನ್‌ ನಲ್ಲಿ ಮದುವೆ ಕಾರ್ಯಕ್ರಮಕ್ಕಾಗಿ ಐಷಾರಾಮಿ ರೆಸಾರ್ಟ್ ಅನ್ನು ಬುಕ್ ಮಾಡಿತ್ತು. ಮದುವೆಗೆ ಎರಡು ದಿನಗಳ ಮೊದಲು, ಶ್ರೇಯಾ ಜೈನ್ ತನ್ನ ಕುಟುಂಬ ಮತ್ತು ಸ್ನೇಹಿತರೊಂದಿಗೆ ನಕುಚಿಯಾಟಲ್‌ ನಲ್ಲಿರುವ ಐಷಾರಾಮಿ ರೆಸಾರ್ಟ್‌ಗೆ ತಲುಪಿದ್ದಾರೆ. ವಿವಾಹದ ನಿಮಿತ್ತ ಅದ್ಧೂರಿಯಾಗಿ ಮೆಹಂದಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅದರಂತೆ ಸಂಗೀತ ಕಾರ್ಯಕ್ರಮಗಳೊಂದಿಗೆ ಮೆಹೆಂದಿ ಕಾರ್ಯಕ್ರಮ ಆರಂಭವಾಗಿತ್ತು. ಆದರೆ ಮೆಹಂದಿ ದಿನದಂದು ಡ್ಯಾನ್ಸ್ ಮಾಡುವಾಗ ವಧು ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅದಾಗಲೇ ಯುವತಿ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಹೃದಯ ರಕ್ತನಾಳದ ತೊಂದರೆಯಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು ಇಬ್ಬರ ಹೆಣ ನಿಗೂಢ ರೀತಿಯಲ್ಲಿ ಪತ್ತೆಯಾಗಿದೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಶೂಟೌಟ್ ನಡೆದಿದೆ. ಒಬ್ಬ ವ್ಯಕ್ತಿಯ ಶವ ಕಾರಿನ ಒಳಗೆ ಕಂಡುಬಂದಿದ್ದು, ಕಾರಿನ ಹೊರಗಡೆ ಮತ್ತೊಂದು ಶವ ಪತ್ತೆಯಾಗಿದೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಸ್​ ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು, ಎಫ್​ ಎಸ್​​ ಎಲ್​ ತಜ್ಞರಿಂದ ಪರಿಶೀಲನೆ ನಡೆಸಲಾಗಿದೆ. ಹಾಸನದ ಕೆಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮಧ್ಯಾಹ್ನ 12:30ರ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಬ್ಬರ ಶವ ಕಾರಿನ ಹೊರಭಾಗದಲ್ಲಿ ಬಿದ್ದಿದ್ದು, ಇನ್ನೊಬ್ಬರು ಕಾರಿನ ಎದುರು ಸೀಟ್ ನಲ್ಲಿ ಬಿದ್ದಿದ್ದರು. ಇಬ್ಬರಿಗೂ ಗುಂಡು ತಗುಲಿದ್ದು, ಸ್ಥಳದಲ್ಲೇ ಅಸುನೀಗಿದ್ದಾರೆ. ಒಬ್ಬರಿಗೆ ಮತ್ತೊಬ್ಬ ಗುಂಡು ಹೊಡೆದು ಇನ್ನೊಬ್ಬರು ತಾನೇ ಗುಂಡು ಹಾರಿಸಿಕೊಂಡ ರೀತಿ ಮೇಲ್ನೋಟಕ್ಕೆ ಕಂಡು ಬಂದಿದೆ. ಇನ್ನು ತನಿಖೆಯ ಬಳಿಕ ಸಂತ್ಯಾಂಶ ಬಯಲಾಗಲಿದೆ ಎಂದು ಪೊಲೀಸರು…

Read More

ಟೀಮ್​ ಇಂಡಿಯಾದ ಮಾಜಿ ಆಟಗಾರ, ಕನ್ನಡಿಗ ಡೇವಿಡ್ ಜಾನ್ಸನ್(52) ಮಾನಸಿಕ ಖಿನ್ನತೆಗೆ ಒಳಗಾಗಿ ಕಟ್ಟಡದಿಂದ ಧುಮುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ  ಸಂಭವಿಸಿದೆ. ಬೆಂಗಳೂರಿನ ಕೊತ್ತನೂರು ಬಳಿ ಇರುವ ಅಪಾರ್ಟ್ಮೆಂಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಅರಸಿಕೆರೆ ಮೂಲದ ಡೇವಿಡ್ ಜಾನ್ಸನ್ 1996ರಲ್ಲಿ ಭಾರತ ಪರ 2 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿ ಇದಾಗಿತ್ತು. ಬ್ಯಾಟಿಂಗ್ ಆಲ್ ​ರೌಂಡರ್​ ಆಗಿದ್ದ ಅವರು ಟೆಸ್ಟ್​ ನಲ್ಲಿ 8 ರನ್​ ಮತ್ತು 3 ವಿಕೆಟ್​ ಕಿತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಅವರಿಗೆ ಭಾರತ ಪರ ಕೊನೆಯ ಪಂದ್ಯವಾಗಿತ್ತು. ಇದಾದ ಬಳಿಕ ಅವರಿಗೆ ತಂಡದಲ್ಲಿ ಅವಕಾಶ ಸಿಕ್ಕಿರರಿಲ್ಲ ಎನ್ನಲಾಗಿದೆ. ವಿಪರೀತ ಕುಡಿತದ ಚಟ ಹೊಂದಿದ್ದ ಡೇವಿಡ್ ಜಾನ್ಸನ್ ಕೆಲ ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. 1971ರ ಅಕ್ಟೋಬರ್ 16ರಂದು ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಜನಿಸಿದ ಡೇವಿಡ್ ಇತ್ತೀಚೆಗೆ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಪೊಲೀಸರ ವಶದಲ್ಲಿದ್ದ ಕೊಲೆ ಆರೋಪಿ ಒಬ್ಬ ಸಿನಿಮೀಯ ರೀತಿಯಲ್ಲಿ ಪರಾರಿಯಾಗಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸರ ನಿರ್ಲಕ್ಷ್ಯದ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಮಧ್ಯಪ್ರದೇಶ ಮೂಲದ ಕೊಲೆ ಆರೋಪಿ ಒಬ್ಬನನ್ನು ಗುಜರಾತ್ ರಾಜ್ಯಕ್ಕೆ ಕರೆ ತಂದಿದ್ದರು. ಈ ವೇಳೆ ಆರೋಪಿಯ ಜೊತೆ ಗುಜರಾತ್‌ ನ ಪಾವಗಡ ಎಂಬ ಪುಣ್ಯ ಕ್ಷೇತ್ರದಲ್ಲಿ ಇರುವ ಮಹಾಕಾಳಿಯ ದರ್ಶನ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಹೇಗಿದ್ದರೂ ಇಷ್ಟು ದೂರ ಬಂದಿದ್ದೇವೆ, ತಾಯಿಯ ಆಶೀರ್ವಾದ ಪಡೆದೇ ಹೋಗೋಣ ಎಂದು ಪೊಲೀಸರು ನಿರ್ಧರಿಸಿದ್ದರು. ಆದರೆ, ಪೊಲೀಸರ ಈ ದೇಗುಲ ದರ್ಶನವೇ ದೊಡ್ಡ ಎಡವಟ್ಟಿಗೆ ಕಾರಣವಾಗಿದೆ. ಮಹಾಕಾಳಿಯ ದರ್ಶನ ಪಡೆಯಲು ದೇಗುಲಕ್ಕೆ ತೆರಳಿದ ವೇಳೆ ಭಾರೀ ಜನ ಜಂಗುಳಿ ಇತ್ತು. ಈ ಸಂದರ್ಭವನ್ನು ತನ್ನ ಲಾಭಕ್ಕೆ ಬಳಸಿಕೊಂಡ ಕೊಲೆ ಆರೋಪಿ, ಪೊಲೀಸರಿಗೆ ಚಳ್ಳೇಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ. ಈ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಕಾನೂನು ನಿಯಮಗಳ ಪ್ರಕಾರ ಯಾವುದೇ ವಿಚಾರಣಾಧೀನ ಕೈದಿಯನ್ನು ಪೊಲೀಸರು…

Read More