Subscribe to Updates
Get the latest creative news from FooBar about art, design and business.
- KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್: ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ
- ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
- ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
- ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
- ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
- ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
- ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
- ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
Author: admin
ತುಮಕೂರು : ಮಧುಗಿರಿಯ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯಲ್ಲಿ ಸಿದ್ದರಬೆಟ್ಟದ ಶ್ರೀ ರಂಭಾಪುರಿ ಶಾಖ ಪೀಠದ ಸ್ವಾಮೀಜಿ ಯೋಗಾಸನ ಮಾಡುವ ಮೂಲಕ ಯೋಗಾ ದಿನಾಚರಣೆಯಲ್ಲಿ ಪಾಲ್ಗೊಂಡರು. ಇದೇ ವೇಳೆ ಮಾತನಾಡಿದ ಸ್ವಾಮೀಜಿ, ನಮ್ಮ ದೈನಂದಿನ ಬದುಕಿಗೆ ಅಗತ್ಯವಿದೆ ಹೀಗಾಗಿ ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಇದನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಯೋಗಾಸನವನ್ನು ನಿಯಮಿತವಾಗಿ ಮಾಡುವ ಮೂಲಕ ಅನೇಕ ಕಾಯಿಲೆಗಳನ್ನು ದೂರ ಮಾಡಬಹುದಾಗಿದೆ. ಅಲ್ಲದೆ ಆರೋಗ್ಯಕರ ಸಮಾಜಕ್ಕೂ ಕೂಡ ಇದು ಪೂರಕವಾಗಿದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣದ ಬಳಿಕ ಪಟ್ಟಣಗೆರೆ ಶೆಡ್ ಭಾರೀ ಸುದ್ದಿಯಾಗಿದೆ. ಈ ಬೆನ್ನಲ್ಲೇ ಪಟ್ಟಣಗೆರೆ ಶೆಡ್ ಮಾಲಿಕನಿಗೆ ಬಿಬಿಎಂಪಿ ಶಾಕ್ ನೀಡಿದೆ. ರೇಣುಕಾಸ್ವಾಮಿಯನ್ನ ಹತ್ಯೆ ಮಾಡಿದ ಸ್ಥಳವಾದ ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನೋಟಿಸ್ ನೀಡಿದೆ. 2008 –- 09 ರಿಂದ ಆಸ್ತಿ ತೆರಿಗೆ ಪಾವತಿ ಆಗಿಲ್ಲ ಎಂದು ಕೆಂಗೇರಿ ಉಪ ವಲಯದಲ್ಲಿ ಸಹಾಯಕ ಕಂದಾಯ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನೋಟೀಸ್ ನಲ್ಲಿ 15 ದಿನಗಳ ಒಳಗೆ ಆಸ್ತಿ ತಮ್ಮದೇ ಅಂತಾ ಘೋಷಿಸಿಕೊಂಡು ತೆರಿಗೆ ಪಾವತಿಸುವಂತೆ ಸೂಚನೆ ಕೊಟ್ಟಿದ್ದಾರೆ. ಒಂದು ವೇಳೆ 15 ದಿನಗಳ ಒಳಗೆ ತೆರಿಗೆ ಪಾವತಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ದರ್ಶನ್ ಕೇಸ್ ನಲ್ಲಿ ಶೆಡ್ ಸುದ್ದಿಯಾದ ಬಳಿಕ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ಇನ್ನೂ ಅದೆಷ್ಟೋ ಆಸ್ತಿಗಳ ತೆರಿಗೆ ಈ ರೀತಿಯೇ ಬಾಕಿ ಇರಬಹುದು ಎಂದು ಶಂಕಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ನೀಟ್ (NEET) ಮತ್ತು ಯುಜಿಸಿ ನೆಟ್ (UGC-NET) ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮದ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಕೇಂದ್ರ ಸರ್ಕಾರ ಸರಿಯಾಗಿ ಪರೀಕ್ಷೆಗಳನ್ನು ನಡೆಸಲು ಆಗದಷ್ಟು ಭ್ರಷ್ಟವಾಗಿದೆ ಎಂದು ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಯುದ್ಧ ನಿಲ್ಲಿಸುವ ಪ್ರಧಾನಿಗಳಿಗೆ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಯಾಕೆ ತಡೆಯಲು ಆಗಲಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಮಾನಸಿಕವಾಗಿ ಕುಸಿದಿದ್ದಾರೆ. ಸರ್ಕಾರವನ್ನು ಸಮರ್ಥವಾಗಿ ನಡೆಸಲು ಹೆಣಗಾಡುತ್ತಿದ್ದಾರೆ ಎಂದು ರಾಹುಲ್ ಹೇಳಿದ್ದಾರೆ. ಶಿ ಶಿಕ್ಷಣ ಸಂಸ್ಥೆಗಳನ್ನು ಆರ್ ಎಸ್ ಎಸ್ ಮತ್ತು ಬಿಜೆಪಿ ವಶಪಡಿಸಿಕೊಳ್ಳುತ್ತಿದ್ದು, ಅದನ್ನು ಬದಲಾಯಿಸದ ಹೊರತು ಪ್ರಶ್ನೆ ಪತ್ರಿಕೆ ಸೋರಿಕೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಉಕ್ರೇನ್–ರಷ್ಯಾ ಯುದ್ಧ ಮತ್ತು ಇಸ್ರೇಲ್-ಗಾಜಾ ಯುದ್ಧವನ್ನು ನಿಲ್ಲಿಸಿದರು ಎಂದು ಹೇಳಲಾಗುತ್ತಿದೆ, ಆದರೆ ಅವರಿಗೆ ಪರೀಕ್ಷೆಯ ಪತ್ರಿಕೆ ಸೋರಿಕೆಯನ್ನು ತಡೆಯಲು ಸಾಧ್ಯವಾಗಲಿಲ್ಲ ಅಥವಾ ತಡೆಯುವುದು ಬೇಕಾಗಿರಲಿಲ್ಲ ಎಂದು ರಾಹುಲ್ ವಾಗ್ದಾಳಿ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ…
ತುಮಕೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಕೇಂದ್ರ ಸಚಿವ ಸೋಮಣ್ಣ ಜಿಲ್ಲಾ ಪೊಲೀಸ್ ಕೇಂದ್ರದ ಆವರಣದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಾಮೂಹಿಕ ಯೋಗಾಸನ ಕಾರ್ಯಕ್ರಮದಲ್ಲಿ ಅನೇಕ ಆಸನಗಳನ್ನು ಮಾಡಿದರು. ಅಂದು ಪ್ರಧಾನಿ ಮೋದಿಯವರು ಯೋಗ ದಿನಾಚರಣೆ ಕುರಿತು ಪ್ರಸ್ತಾಪಿಸಿದ ವೇಳೆ ಇಡೀ ವಿಶ್ವಸಂಸ್ಥೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲು ನಿರ್ಧಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಇದೆ ವೇಳೆ ತಿಳಿಸಿದರು. ಇಂದು ಏಕಕಾಲದಲ್ಲಿ ಪ್ರಪಂಚದ 176 ದೇಶಗಳು ಜೂನ್ 21ರಂದು ಯೋಗ ದಿನಾಚರಣೆಯನ್ನು ಆಚರಿಸುತ್ತಿವೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಪೊಲೀಸ್ ಕಸ್ಟಡಿಯಲ್ಲೇ ಇರುವ ಆರೋಪಿ ದರ್ಶನ್ ಇನ್ನೂ ಎರಡು ದಿನಗಳ ಕಾಲ ಕಸ್ಟಡಿ ಮುಂದುವರೆಯಲಿದೆ. ನಿನ್ನೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಪೊಲೀಸರು ಕೆಲವು ದಿನಗಳ ಕಾಲ ಮತ್ತೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಅದರಂತೆ ಕೋರ್ಟ್ ಆದೇಶ ಹೊರಡಿಸಿದೆ. ಅಷ್ಟಕ್ಕೂ ದರ್ಶನ್ ನ ಮೂರನೇ ಬಾರಿ ಕಸ್ಟಡಿಗೆ ಪಡೆದಿದ್ಯಾಕೆ ಗೊತ್ತಾ..? ಯಾವೆಲ್ಲಾ ಕಾರಣ ಹೇಳಿ ದರ್ಶನ್ ನ ಮತ್ತೆ ಕಸ್ಟಡಿಗೆ ಪಡೆದಿದ್ದು..? ರಿಮ್ಯಾಂಡ್ ಅಪ್ಲಿಕೇಶನ್ ನಲ್ಲಿರೋ ಎಕ್ಸ್ ಕ್ಲೂಸಿವ್ ಮಾಹಿತಿ ಇಲ್ಲಿದೆ ನೋಡಿ. 16 ಅಂಶಗಳನ್ನ ಉಲ್ಲೇಖಿಸಿ ದರ್ಶನ್ ಸೇರಿ ನಾಲ್ವರನ್ನ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. 1. ದರ್ಶನ್ ಸೇರಿ, ಎ9, ಎ10 ಮತ್ತು ಎ14 ಆರೋಪಿಗಳು ಪ್ರಕರಣದಲ್ಲಿ ತನಿಖೆಗೆ ಸರಿಯಾಗಿ ಸ್ಪಂದಿಸ್ತಿಲ್ಲ.. ಕೇಸ್ ಗೆ ಸಂಬಂಧಿಸಿದಂತೆ ವಿಚಾರಗಳನ್ನ ಮರೆ ಮಾಚುತ್ತಿದ್ದು ಈ ವಿಚಾರಗಳನ್ನ ಬಾಯಿ ಬಿಡಿಸಬೇಕು.. 2. ನಿನ್ನೆ ದರ್ಶನ್ ಮನೆಯಲ್ಲಿ ಮತ್ತೆ 37,40,000/- ರೂಗಳ ನಗದು ಹಣವನ್ನು ವಶ.. ಅಲ್ಲದೇ ದರ್ಶನ್ ತನ್ನ ಹೆಂಡತಿಗೆ ನೀಡಿದ್ದ ರೂ 3,00,000/-…
ಕನ್ನಡದ ರ್‍ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಛೇದನ ಪಡೆದ ಬೆನ್ನಲ್ಲೇ ಚಂದನ್ ಶೆಟ್ಟಿ ಹಲವು ಸಂದರ್ಶನಗಳಲ್ಲಿ ಹಾಗೇ ಸಿನಿಮಾ ಪ್ರಮೋಷನ್ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇದೀಗ ಚಂದನ್ ಸಂದರ್ಶನವೊಂದರಲ್ಲಿ ತಮ್ಮ ವೈಯಕ್ತಿಕ ಜೀವನ ಬಗ್ಗೆ, ಹಾಗೇ ಕರಿಯರ್ ಕುರಿತಾಗಿ ಹಲವಾರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆಂಕರ್ ರ್‍ಯಾಪಿಡ್ ರಶ್ಮಿ ಅವರ ಯುಟ್ಯೂಬ್ ಚಾನೆಲ್ ಗೆ ಸಂದರ್ಶನ ನೀಡಿರುವ ಚಂದನ್ ಶೆಟ್ಟಿಯವರು ತಮ್ಮ ಲೈಫ್‌ನ ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ತಾವು ನಡೆದು ಬಂದ ದಾರಿ, ಬಸ್ಸಿನಲ್ಲಿ ಹೋಗುತ್ತಿದ್ದ ತಾವು ಇಂದು ಈ ಮಟ್ಟಿಗೆ ಬೆಳೆಯಲು ಕಾರಣ ಎಲ್ಲವುಗಳ ಬಗ್ಗೆ ವಿವರವಾಗಿ ತಿಳಿಸಿದ್ದಾರೆ. ಜೀವನ ಕಲಿಸಿದ ಪಾಠದ ಕುರಿತು ಮಾತನಾಡಿದ ಅವರು, ನಾನು ಸಿಕ್ಕಾಪಟ್ಟೆ ಖರ್ಚು ಮಾಡುತ್ತಿದ್ದೆ. ಗೆಜೆಟ್‌ಗಳನ್ನು ವಿಪರೀತ ಖರೀದಿ ಮಾಡುತ್ತಿದ್ದೆ. ಕೋವಿಡ್ ನನಗೆ ಪಾಠ ಕಲಿಸಿತು , ನಾನು ಮಾಡಿದ ಪ್ರಾಜೆಕ್ಟ್‌ಗಳಿಂದ ತುಂಬಾ ಸಕ್ಸಸ್ ಸಿಗುತ್ತದೆ ಎಂದು ಅಂದುಕೊಳ್ಳುವಷ್ಟರಲ್ಲಿಯೇ ಕೋವಿಡ್ ಬಂದು ಬರಸಿಡಿಲು ಬಡಿಯಿತು. ಆಗಷ್ಟೇ ನನ್ನ ಮದುವೆಯಾಯಿತು. ಮದುವೆಗೆ…
ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಜೈಲು ಸೇರಿದ್ದಾರೆ. ಸಾಕಷ್ಟು ದಿನಗಳ ವಿಚಾರಣೆ ಬಳಿಕ ಪವಿತ್ರಾ ಕೃತ್ಯದಲ್ಲಿ ಭಾಗಿಯಾಗಿರುವುದು ಕನ್ಪಾರ್ಮ್ ಆದ ಹಿನ್ನೆಲೆಯಲ್ಲಿ ಆಕೆಯನ್ನು ಜೈಲಿಗೆ ಕಳುಹಿಸಲಾಗಿದೆ. ಕೋರ್ಟ್ನಲ್ಲಿ ವಿಚಾರಣೆ ಮುಗಿಸಿ ಪೊಲೀಸ್ ವ್ಯಾನ್ ಹತ್ತಿದಾಗ ಪವಿತ್ರಾ ಗೌಡ ನೋಡಲು ಪುತ್ರಿ ಖುಷಿಗೌಡ ಆಗಮಿಸಿದ್ದರು. ನೂಕುನುಗ್ಗಲಿನ ನಡುವೆ ತಾಯಿ ಜೊತೆ ಮಾತನಾಡಲು ಖುಷಿ ಗೌಡ ಹರಸಾಹಸ ಪಡಬೇಕಾಯಿತು. ಕೋರ್ಟ್ ಹೊರಗಡೆ ಪವಿತ್ರಾ ಗೌಡ ತಾಯಿ ಹಾಗೂ ಮಗಳು ಕಾಯುತ್ತಾ ನಿಂತಿದ್ದರು. ಪವಿತ್ರಾ ಗೌಡ ಕೋರ್ಟ್‌ನಿಂದ ಹೊರ ಬಂದು ಪೊಲೀಸ್ ವ್ಯಾನ್ ಹತ್ತುತ್ತಿದ್ದಂತೆಯೇ ಇಬ್ಬರು ಕೂಡ ಪವಿತ್ರಾ ಗೌಡ ಅವರನ್ನು ಕಂಡು ಕಣ್ಣೀರು ಹಾಕಿದ್ದಾರೆ. ಇನ್ನು ಪವಿತ್ರಾ ಗೌಡ ಕೂಡ ಇಬ್ಬರನ್ನು ನೋಡಿ ಗದ್ಗದಿತರಾಗಿದ್ದು ಬಳಿಕ ಅಮ್ಮ ಹಾಗೂ ಮಗಳನ್ನು ಸಮಾಧಾನ ಪಡಿಸಿದ್ದಾರೆ. ಪವಿತ್ರಾ ಗೌಡ ಅವರ ಕುಟುಂಬದ ಇತರೆ ಸದಸ್ಯರು ಕೂಡ ಪೊಲೀಸ್ ವ್ಯಾನ್ನ ಪಕ್ಕದಲ್ಲಿ ನಿಂತು ಮಾತನಾಡಿದರು. ಕಣ್ಣೀರು ಹಾಕುತ್ತಾ ಇದ್ದ ಮಗಳಿಗೆ,…
ಬೆಂಗಳೂರು : ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರಕಿಸಿಕೊಡುವಲ್ಲಿ ಕೇಂದ್ರ ಕೃಷಿ ಬೆಲೆ ಆಯೋಗದ ಪಾತ್ರ ಬಹಳ ಮಹತ್ವ ವಾದದ್ದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ವೆಚ್ಚ ಹಾಗೂ ಬೆಲೆಗಳ ಆಯೋಗ ಮತ್ತು ರಾಜ್ಯ ಕೃಷಿ ಇಲಾಖೆ ಸಹಭಾಗಿತ್ವದಲ್ಲಿ ನಗರದ ಕೃಷಿ ಆಯುಕ್ತಾಲಯದ ಸಂಗಮ ಸಭಾಂಗಣದಲ್ಲಿ ಏರ್ಪಡಿಸಿದ್ದ ಹಿಂಗಾರು ಹಂಗಾಮಿನ ಬೆಳೆಗಳ ಬೆಲೆ ನೀತಿ: 2025- 26 ನೇ ಸಾಲಿನ ಮಾರಾಟ ಅವಧಿ ಕುರಿತು ದಕ್ಷಿಣ ರಾಜ್ಯಗಳ ಪ್ರತಿನಿಧಿಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ರೈತರು ಬೆಳೆಯುವ ಬೆಳೆಗಳಿಗೆ ಉತ್ಪಾದನಾ ವೆಚ್ಚ ಹಾಗೂ ಸಾಗಾಟ, ಮಾರಾಟ ವೆಚ್ಚ ಪರಿಗಣಿಸಿ ವೈಜ್ಞಾನಿಕವಾದ ಬೆಂಬಲ ಬೆಲೆ ನಿಗದಿಯಾಗಬೇಕು. ಡಾ.ಸ್ವಾಮಿನಾಥನ್ ಅವರ ವರದಿ ಜಾರಿಯಾಗಬೇಕು ಎಂದು ಸಚಿವರು ಹೇಳಿದರು. ಜಾಗತಿಕ ಕೃಷಿಯಲ್ಲಿ ಭಾರತ ದೇಶ ಮತ್ತು ಕರ್ನಾಟಕ ರಾಜ್ಯದ ಪಾತ್ರ ಮಹತ್ವದ್ದು.ಅನೇಕ ಏಳು ಬೀಳುಗಳ ನಡುವೆಯೂ ನಾವು ಸ್ಥಿರತೆ ಕಂಡುಕೊಂಡಿದ್ದೇವೆ. ಕಳೆದ ಎರಡು ದಶಕಗಳಲ್ಲಿ ಬಹುತೇಕ ವರ್ಷ…
ಕಾರವಾರ: ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಯೋಗ ಅತ್ಯಂತ ಸಹಾಯಕಾರಿಯಾಗಿದ್ದು, ಪ್ರತಿಯೊಬ್ಬರು ತಮ್ಮ ದೈನಂದಿನ ಜೀವನ ಶೈಲಿಯಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಹೇಳಿದರು. ಅವರು ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ಆರೋಗ್ಯ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ, ಶಿಕ್ಷಣ ಇಲಾಖೆ, ನಗರಸಭೆ ಎನ್.ಸಿ.ಸಿ, ಎನ್.ಎಸ್.ಎಸ್, ರೆಡ್ ಕ್ರಾಸ್, ರೋಟರಿ ಕ್ಲಬ್ ಜಿಲ್ಲಾ ನೌಕಕರ ಸಂಘ ಹಾಗೂ ವಿವಿಧ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ 10 ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾ ಅಧಿಕಾರಿಗಳ ಕಚೇರಿಯ ಆವರಣದಲ್ಲಿ ಅಯೋಜಿಸಲಾದ ಯೋಗ ನಡಿಗೆ ಜಾಥಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು. ಪತಂಜಲಿ ಮಹರ್ಷಿ ಗಳು ಯೋಗದ ಮಹತ್ವವನ್ನು ಕ್ರಿ.ಶ 5 ಶತಮಾನದಲ್ಲಿ ತಿಳಿಸಿಕೊಟ್ಟರು. ಮನುಷ್ಯನಿಗೆ ಸ್ವಾಭಾವಿಕವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಇರುವಂತ ದೊಡ್ಡ…
ಕಾರವಾರ: ಎಲ್ಲಾ ಸಮಸ್ಯೆಗಳಿಗೆ ಸಾವು ಒಂದೇ ಅಂತಿಮ ಪರಿಹಾರವಲ್ಲ. ದೇಶಕ್ಕೆ ಅನ್ನ ನೀಡುವ ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆಯಂತಹ ಕಠಿಣ ನಿರ್ಧಾರ ಕೈಗೊಳ್ಳಬಾರದು, ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಜಿಲ್ಲಾಡಳಿತ ಸಂಪೂರ್ಣ ನೆರವು ನೀಡಲಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರೈತರ ಆತ್ಮಹತ್ಯೆ ಪ್ರಕರಣ ಕುರಿತ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶದ ಬೆನ್ನೆಲುಬಾದ ರೈತರು ಯಾವುದೇ ಕಾರಣಗಳಿಗೂ ಆತ್ಮಹತ್ಯೆ ಮಾಡಿಕೊಳ್ಳಬಾರದು. ಜಿಲ್ಲೆಯಲ್ಲಿ 2019 ರಿಂದ 2023-24ನೇ ಸಾಲಿನ ವರೆಗೆ 43 ರೈತರು ಆತ್ಮಹತ್ಯೆ ಮಾಡಿ ಕೊಂಡಿದ್ದು, ಮುಂಡಗೋಡ ತಾಲ್ಲೂಕಿನಲ್ಲಿ ಹೆಚ್ಚಿನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಕುಟುಂಬ ಸಾಕಷ್ಟು ಸಂಕಷ್ಟ ಅನುಭವಿಸುವುದರಿಂದ ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಹಾದಿ ತುಳಿಯಬಾರದು ಎಂದರು. ಸರ್ಕಾರ ಮತ್ತು ಜಿಲ್ಲಾಡಳಿತ ಸದಾ , ರೈತರೊಂದಿಗಿದ್ದು, ರೈತರಿಗೆ ಯಾವುದೇ ಸಮಸ್ಯೆ ಎದುರಾದರೆ ಸ್ಥಳೀಯ ತಹಶೀಲ್ದಾರರಿಗೆ, ಜಿಲ್ಲಾಡಳಿತಕ್ಕೆ ಅಥವಾ ಜಿಲ್ಲಾ ಉಚಿತ…