Author: admin

ರಾಯಚೂರು: ಇಲ್ಲಿ ಪ್ರಸಿದ್ಧಯಾತ್ರಾ ಸ್ಥಳ ಮಂತ್ರಾಲಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಕಟ್ಟಿಸಿದ ಛತ್ರಗಳು ಉದ್ಘಾಟನೆಗೊಂಡ ಕೆಲವೇ ದಿನಗಳಲ್ಲಿ ಸೋರುತ್ತಿವೆ. ಕಳಪೆ ಕಾಮಗಾರಿ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಮಂತ್ರಾಲಯಕ್ಕೆ ಬರುವ ಭಕ್ತರಿಗೆ ತಂಗಲು 100 ಕೊಠಡಿಗಳ ಅತಿಥಿಗೃಹ ನಿರ್ಮಾಣಕ್ಕೆ 5 ಕೋಟಿ ರೂ.ಗಳನ್ನು ಸರ್ಕಾರ ನೀಡಿತ್ತು. ಈ ಹಣದಲ್ಲಿ 100 ಕೊಠಡಿಗಳ ಛತ್ರ ನಿರ್ಮಾಣ ಮಾಡಲಾಗಿತ್ತು. ಇವುಗಳನ್ನು ಉದ್ಘಾಟನೆ ಮಾಡಿ ಭಕ್ತರಿಗೆ ತಂಗಲು ಅವಕಾಶ ನೀಡಲಾಗಿತ್ತು. ಆದರೆ ಉದ್ಘಾಟನೆಯಾದ ಎರಡು ವರ್ಷಗಳಾಗಿಲ್ಲವಾದರೂ ಇವು ಕಳಪೆ ಕಾಮಗಾರಿಯಿಂದ ಸೋರಲು ಆರಂಭವಾಗಿವೆ. ಕರ್ನಾಟಕ ಭವನದ ಕಟ್ಟಡ ಸೋರುತ್ತಿರುವುದು ಮಾತ್ರವಲ್ಲ, ಗೋಡೆಗಳಿಂದ ನೀರು ಜಿನುಗುತ್ತಿದೆ. ಇಲ್ಲಿ ಉಳಿಯಲು ಸಾಧ್ಯವಿಲ್ಲ ಎಂಬುದು ಭಕ್ತರ ಅಳಲು. ಗೋಡೆಗಳು ಬಿರುಕುಬಿಟ್ಟಿವೆ. ಬೇಕಾಬಿಟ್ಟಿ ಅಳವಡಿಸಿದ ಗೀಸರ್, ಪ್ಲಗ್‌ ಗಳು ಕಿತ್ತು ಬಂದಿವೆ. ತಂಗಿದ ಭಕ್ತರು ಕರೆಂಟ್ ಶಾಕ್ ಭೀತಿಯಲ್ಲಿ ಇರಬೇಕಾದ ಸ್ಥಿತಿ ಇದೆ. ಈಗ ಮಳೆ ಆರಂಭವಾಗಿದ್ದು ಸ್ಥಿತಿ ಇನ್ನೂ ಹದಗೆಟ್ಟಿದೆ. ಸಣ್ಣ ಮಳೆಯಾದರೂ ಸಾಕು ಕೊಠಡಿಗಳು…

Read More

ನೂರಾರು ಕ್ವಿಂಟಾಲ್ ಅಕ್ಕಿ ಗೋಧಿ, ಪೌಷ್ಟಿಕ ಆಹಾರ ನಾಶವಾಗಿದೆ. ಗೋದಾಮಿನಲ್ಲಿ ಸಂಗ್ರಹಿಸಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಗೋಧಿ ಹುಳಗಳ ಪಾಲಾಗಿದೆ. ಗದಗ ಜಿಲ್ಲೆಯ ಮುಂಡರಗಿ ಬಳಿ ಇರುವ ಗೋದಾಮಿನಲ್ಲಿ ಅಕ್ಕಿ ಗೋದಿ ಸಂಗ್ರಹಿಸಲಾಗಿತ್ತು. ಹೀಗೆ ಸಂಗ್ರಹಿಸಿಟ್ಟು ವರ್ಷಗಳೇ ಕಳೆದಿದ್ದು, ಯಾರಿಗೂ ಉಪಯೋಗವಾಗದೇ ಆಹಾರ ಪದಾರ್ಥ ಹಾಳಾಗಿದೆ. ಅಂಗನವಾಡಿ ಮೂಲಕ ಗರ್ಭಿಣಿಯರು, ಮಕ್ಕಳ ಹೊಟ್ಟೆ ಸೇರಬೇಕಾದ ಆಹಾರ ಹುಳುಗಳ ಪಾಲಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಲಕ್ಷಾಂತರ ರೂಪಾಯಿ ಮೌಲ್ಯದ 50 ಟನ್ ಕ್ಕೂ ಅಧಿಕ ಅಕ್ಕಿ ಹಾಗೂ ಗೋದಿ ನಾಶವಾಗಿದ್ದು, ಎಂಎಸ್‌ ಪಿಸಿ ಸಂಸ್ಥೆ ಮೂಲಕ ಮುಂಡರಗಿ, ಶಿರಹಟ್ಟಿ ತಾಲೂಕಿನ ಅಂಗನವಾಡಿ ಕೇಂದ್ರಕ್ಕೆ ಸರಬರಾಜು ಮಾಡಬೇಕಿದ್ದ ಆಹಾರ ಪದಾರ್ಥ ವ್ಯರ್ಥವಾಗಿದೆ. ಇದೆಲ್ಲಾ ಆಗಿದ್ರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಾಗಲೀ, ಆಹಾರ ಇಲಾಖೆಯಾಗಲೀ ಯಾವುದೇ ಕ್ರಮ ವಹಿಸಿಲ್ಲ ಎಂಬುದು ಸಾರ್ವಜನಿಕರ ಸಿಟ್ಟಿಗೆ ಕಾರಣವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಕೊರಟಗೆರೆ: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಯಿತು.  ಪೆಟ್ರೋಲ್ ಡೀಸೆಲ್ ಬೆಲೆ ಶೀಘ್ರವಾಗಿ ಕಡಿಮೆ ಮಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಬಿಜೆಪಿ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದೆ. ಗ್ಯಾರಂಟಿ ಹೆಸರಿನಲ್ಲಿ ರಾಜ್ಯ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೊರಟಗೆರೆಯ ಎಸ್ ಎಸ್ ಆರ್ ವೃತ್ತದಲ್ಲಿ ಬಿಜೆಪಿ ತಾಲೋಕ್ ಮಾಜಿ ಅಧ್ಯಕ್ಷ ಪವನ್ ಕುಮಾರ್ ಹಾಗೂ ಮಂಡಲಾ ಅಧ್ಯಕ್ಷ ದರ್ಶನ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಣಕು ಭಾವಚಿತ್ರ ದಹನ ಮಾಡಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.  ಈ ವೇಳೆ ತಾಲ್ಲೂಕು ಮಂಡಲಾ ಅಧ್ಯಕ್ಷ ದರ್ಶನ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸ್ವಾಮಿ ಹಾಗೂ ಕೆಲವು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು. ಕೊರಟಗೆರೆಯ ಪಿಎಸ್ ಐ ಚೇತನ್ ಕುಮಾರ್ ತಂಡ  ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.  ಇದೇ ಸಂದರ್ಭದಲ್ಲಿ ಪಟ್ಟಣ…

Read More

ಹೂವಿನ ಹೆಸರು ಮತ್ತು ಹಣ್ಣಿನ ಹೆಸರಿನಲ್ಲಿರುವ ಈ ಮೂನ್ ತುಂಬಾ ಸ್ಪೆಷಲ್ ಅಂತೆ. ಹೌದು,  ಜೂನ್ 21ಕ್ಕೆ ಆಗಸದಲ್ಲಿ ಪೂರ್ಣ ಚಂದಿರ ಕಾಣಿಸಲಿದ್ದು, ಬಣ್ಣದಲ್ಲೂ ಎಲ್ಲರನ್ನೂ ಆಕರ್ಷಿಸಲಿದೆ. ಮುಖ್ಯವಾಗಿ ರೋಸ್ ಮೂನ್ ಅಥವಾ ಸ್ಟ್ರಾಬೆರಿಮೂನ್ ಸಾಮಾನ್ಯಕ್ಕಿಂತ ತುಸು ಹೆಚ್ಚಾದ ಹಳದಿ ಮಿಶ್ರಿತ ಚಿನ್ನದ ಬಣ್ಣದಲ್ಲಿ ಕಂಗೊಳಿಸಲಿದೆ. ಇನ್ನು ಈ ಚಂದ್ರನಿಗೆ ಹಣ್ಣಿನ ಹೆಸರು ಬರಲು ಕಾರಣ ಏನೆಂದರೆ ಉತ್ತರ ಅಮೆರಿಕದಲ್ಲಿ ಸ್ಟ್ರಾಬೆರಿ ಮೂನ್ ಗೋಚರಿಸಿದ ಬಳಿಕ ಸ್ಟ್ರಾಬೆರಿ ಹಣ್ಣಿನ ಬೆಳೆ ಬೆಳೆಯಲು ಆರಂಭಿಸುತ್ತಾರೆ ಎಂದು  ಹೇಳಲಾಗಿದೆ. ಅಲ್ಲದೇ ಜೂನ್ ತಿಂಗಳಲ್ಲಿ ಅಂತಿಮ ವಾರದಲ್ಲಿ ಮಳೆ ಹೆಚ್ಚಾಗಲಿದ್ದು, ಕೃಷಿ ಚಟುವಟಿಕೆಗಳು ಹೆಚ್ಚಾಗಿರುತ್ತದೆ. ಬಿತ್ತನೆ ಮಾಡುವುದು ಮುಂತಾದ ಬೆಳೆ ಬೆಳೆಯುವುದು. ಇದೇ ವೇಳೆ ಗುಲಾಬಿ ಹೂವುಗಳು ಹೆಚ್ಚಾಗಿ ಹೂವು ಬಿಡುತ್ತದೆ. ಹೀಗಾಗಿ ರೋಸ್ ಮೂನ್ (Rose Moon) ಎಂಬ ಹೆಸರಿನಿಂದಲೂ ಕರೆಯುತ್ತಾರೆ. ವಿಶೇಷ ಅಂದ್ರೆ ಉತ್ತರ ಅಮೆರಿಕ ಹಾಗೂ ಯೂರೋಪ್ ದೇಶಗಳಲ್ಲಿ ಸ್ಟ್ರಾಬೆರಿ ಮೂನ್ ಬಳಿಕ ಮದುವೆಗಳು ಹೆಚ್ಚಾಗಿ ನಡೆಯುತ್ತದೆಯಂತೆ. ಮದುವೆ ಬಳಿಕ ನವ…

Read More

ಆಲಿಯಾ ಭಟ್, ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ, ನಟಿ ಕತ್ರಿನಾ ಕೈಫ್‌, ನಟಿ ಕಾಜೋಲ್‌  ಹೀಗೆ ಹಲವು ಸೆಲೆಬ್ರೇಟಿಗಳು ಈಗಾಗಲೇ ಡೀಪ್‌ ಫೇಕ್‌ ಗೆ ಗುರಿಯಾಗಿದ್ದಾರೆ. ಅದರಲ್ಲೂ ಭಾರತೀಯರಲ್ಲಿ  ಶೇ. 75ರಷ್ಟು ಮಂದಿ ಡೀಪ್‌ ಫೇಕ್‌ ಜಾಲಕ್ಕೆ ಸಿಕ್ಕಿದ್ದು, ಶೇಕಡಾ 22ರಷ್ಟು ಮಂದಿಗೆ ಮಾತ್ರ ಇದು ಗಮನಕ್ಕೆ ಬಂದಿದೆ ಎನ್ನಲಾಗಿದೆ. ಈ ಡೀಪ್‌ ಫೇಕ್‌ ಗೆ ಹೆಚ್ಚಾಗಿ ನಟಿಯರು ಒಳಗಾಗುತ್ತಿದ್ದು, ಇದೀಗ ವೈಷ್ಣವಿ ಗೌಡ ಈ ಹಿಂದೆ ಧರಿಸಿದ್ದ ಕೆಂಪು ಬಣ್ಣದ ಗೌನ್ ಬಟ್ಟೆಯ ಫೋಟೋವನ್ನು ಎಡಿಟ್‌ ಮಾಡಿರುವ ಕಿಡಿಗೇಡಿಗಳು ಫೋಟೋವನ್ನು ಹರಿಬಿಟ್ಟಿದ್ದಾರೆ. ಬಿಗ್ ಬಾಸ್ ಖ್ಯಾತಿ ಹಾಗೂ ಈಗ ಅಗ್ನಿಸಾಕ್ಷಿ, ಸೀತಾರಾಮ ಸೀರಿಯಲ್‌ ಖ್ಯಾತಿಯ ನಟಿ ವೈಷ್ಣವಿ ಗೌಡಗೆ ಕಿಡಿಗೇಡಿಗಳಿಂದ ಡೀಪ್ ಫೇಕ್ ಕಾಟ ಎದುರಾಗಿದೆ. ಈ ಫೋಟೋದಲ್ಲಿ ವೈಷ್ಣವಿ ಅವರು ರೆಡ್‌ ಕಲರ್‌ ಡ್ರೆಸ್‌ನಲ್ಲಿರುವ ಫೋಟೊವನ್ನು ಪೋಸ್ಟ್‌ ಮಾಡಿದ್ದರು. ಕೆಲ ಕಿಡಿಗೇಡಿಗಳು ಈ ಫೋಟೊಗೆ ಬೋಲ್ಡ್ ಆಗಿ ಎಡಿಟ್ ಮಾಡಿ ಇಂಟರ್‌ ನೆಟ್‌ ನಲ್ಲಿ ವೈರಲ್ ಆಗುವಂತೆ ಮಾಡಿದ್ದಾರೆ.…

Read More

ಕರ್ನಾಟಕದ ಎಲ್ಲ ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರ ಬಗ್ಗೆ ನಾವು ಕೇಳಿದ್ದೆವು, ನೋಡಿದ್ದೆವು. ಆದರೀಗ ಅಚ್ಚರಿ ಎಂಬಂತೆ ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು, ಮಠಾಧೀಶರು ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ಇನ್ನುಮುಂದೆ ಆಚರಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಯಾಕೆ ಈ ಆದೇಶ?: ಸಂಸ್ಥೆಗಳಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳು, ಬಾಲ ಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟ, ಬಾಲ್ಯ ವಿವಾಹಕ್ಕೆ ಒಳಗಾದ, ಅತ್ಯಾಚಾರಕ್ಕೆ ಒಳಗಾದ, ತಂದೆ-ತಾಯಿಯಿಂದ ತಿರಸ್ಕರಿಸಲ್ಪಟ್ಟ, ತಾಯಿ ಅಥವಾ ತಂದೆ ಇಲ್ಲದ, ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟ ಇತ್ಯಾದಿ ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ/ಬಾಲನ್ಯಾಯ ಮಂಡಳಿಗಳ ಆದೇಶದ ಮೂಲಕ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲು ಮಾಡಲಾಗಿರುತ್ತದೆ.…

Read More

40 ವರ್ಷದ ತಾಯಿ ತನ್ನ ಮೂವರು ಗಂಡು ಮಕ್ಕಳನ್ನು ಬಿಟ್ಟು 25 ವರ್ಷದ ಯುವಕನೊಂದಿಗೆ ಪ್ರೀತಿಸಿ ಓಡಿ ಹೋದ ಘಟನೆ ಬೆಳಗಾವಿಯ ಗಣೇಶಪುರದಲ್ಲಿ ವರದಿಯಾಗಿದೆ. ಸರ್ಕಾರಿ ನೌಕರನಾಗಿದ್ದ ಗಂಡನ ಅಕಾಲಿಕ ನಿಧನದಿಂದ ಅನುಕಂಪದ ಮೇಲೆ ಸಿಕ್ಕ ಸರ್ಕಾರಿ ನೌಕರಿ ಮಾಡಿಕೊಂಡು ಬದುಕು ನಡೆಸುತ್ತಿದ್ದ ಮಹಿಳೆಗೆ 10, 15, 19 ವರ್ಷ ವಯಸ್ಸಿನ ಗಂಡು ಮಕ್ಕಳಿದ್ದಾರೆ. ಆದರೆ, 25 ವಯಸ್ಸಿನ ಯುವಕನೊಂದಿಗೆ ಪ್ರೀತಿಸಿ ಮನೆ ಬಿಟ್ಟು ಮಕ್ಕಳನ್ನು ಅನಾಥ ಮಾಡಿ ನಾಪತ್ತೆಯಾಗಿದ್ದಾಳೆ ಎನ್ನಲಾಗಿದೆ. ಮಕ್ಕಳು ನ್ಯಾಯಕ್ಕಾಗಿ ತಾಯಿ ಕಾಣೆಯಾದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಾಡಿಗೆ ಮನೆಯಲ್ಲಿದ್ದ ಈ ಮಕ್ಕಳಿಗೆ ಬಾಡಿಗೆ ಹಣ ಕಟ್ಟಲು ಆಗದೇ ಅಜ್ಜಿ ಮನೆಯಲ್ಲಿ ಉಳಿದುಕೊಂಡಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಆಸ್ಪತ್ರೆಯಲ್ಲೇ ಡಾಕ್ಟರ್‌ ಮತ್ತು ನರ್ಸ್ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿರುವ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಪೆನ್‌ ಡ್ರೈವ್‌ ಹಾಗೂ ಒಂದು ಪತ್ರದ ಜೊತೆಯಲ್ಲಿ ಇಂಗ್ಲಿಷ್ ಮಾಧ್ಯಮವೊಂದಕ್ಕೆ ಈ ವಿಡಿಯೋವನ್ನು ವ್ಯಕ್ತಿಯೊಬ್ಬ ಕಳುಹಿಸಿದ್ದಾನೆ. ವಿಡಿಯೋದಲ್ಲಿರುವ ವ್ಯಕ್ತಿಯನ್ನು ಡಾ. ಸುಬ್ಬಯ್ಯ ಷಣ್ಮುಗಂ ಎಂದು ಗುರುತಿಸಲಾಗಿದೆ. ನಗರದ ರಾಯಪೆಟ್ಟಾ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಡಾಕ್ಟರ್ ಆಪರೇಷನ್‌ ಥಿಯೇಟರ್‌ ನಲ್ಲಿ ಕೆಲಸ ಮಾಡುವ ನರ್ಸ್‌ ಜೊತೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಘಟನೆ ಮತ್ತು ವಿಡಿಯೋ ಕುರಿತು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಕೇಳಿದಾಗ, ವೈದ್ಯರ ವಿರುದ್ಧ ದೂರು ಬಂದಿಲ್ಲ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಆ ಬಳಿಕ ಸಂಸ್ಥೆಯಿಂದ ತನಿಖೆಯನ್ನು ಆರಂಭಿಸಲಾಗಿದೆ ಎಂದು ವರದಿ ತಿಳಿಸಿದೆ. ಈ ಹಿಂದೆ 2020 ರಲ್ಲೂ ಡಾ. ಷಣ್ಮುಗಂ ಮೇಲೆ ಕಿರುಕುಳ ಆರೋಪ ಕೇಳಿಬಂದಿತ್ತು. ಪಾರ್ಕಿಂಗ್‌ ವಿಚಾರಕ್ಕೆ ಪಕ್ಕದ ಮನೆಯವರ ಗೇಟ್‌ ಗೆ ಮೂತ್ರ ವಿಸರ್ಜನೆ ಮಾಡಿ ರಾದ್ಧಾಂತ ಸೃಷ್ಟಿಸಿದ್ದರು ಎನ್ನಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ನಡೆದ ಎನ್‌ ಕೌಂಟರ್‌ ನಲ್ಲಿ ಇಬ್ಬರು ಭಯೋತ್ಪಾದಕರು ಹತರಾದ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಬಾರಾಮುಲ್ಲಾದ ಸೋಪೋರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ, ಕೇಂದ್ರಾಡಳಿತ ಪ್ರದೇಶವಾದ ಬಂಡಿಪೋರಾದ ಅರ್ಗಾಮ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಭಾನುವಾರ ರಾತ್ರಿ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು 2 ದಿನ ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದಾರೆ. ಇದನ್ನು ಗಮನಿಸಿದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್…

Read More

ಕೆನಡಾದ ಸಂಸತ್ತು  ಹೌಸ್ ಆಫ್ ಕಾಮನ್‌ ನಲ್ಲಿ ಒಂದು ನಿಮಿಷ ಮೌನ ಆಚರಿಸುವ ಮೂಲಕ ಹತ್ಯೆಯಾದ ಭಾರತದ ಮೋಸ್ಟ್ ವಾಂಟೆಡ್ ಉಗ್ರ, ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್‌ ಗೆ ಗೌರವ ಸಲ್ಲಿಸಿ ಸುದ್ದಿಯಾಗಿದೆ. ಖಲಿಸ್ತಾನಿ ಭಯೋತ್ಪಾದಕನಿಗೆ ಕೆನಡಾ ಸಂಸತ್ತು ಗೌರವ ಸಲ್ಲಿಸಿದ್ದಕ್ಕೆ ಭಾರತ ಖಂಡಿಸಿದೆ. ಈ ಬಗ್ಗೆ ವ್ಯಾಂಕೋವರ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪ್ರತಿಕ್ರಿಯೆ ನೀಡಿದೆ. ಏರ್ ಇಂಡಿಯಾ ವಿಮಾನ ‘ಕನಿಷ್ಕಾ182’ ಮೇಲೆ ನಡೆದ ಬಾಂಬ್ ದಾಳಿಯನ್ನು ಜಗತ್ತಿಗೆ ನೆನಪಿಸಿದೆ. ಕೆನಡಾ ಹರ್ದೀಪ್ ಸಿಂಗ್‌ಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರತಿಯಾಗಿ ವ್ಯಾಂಕೋವರ್‌ ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ 1985ರಲ್ಲಿ ಏರ್ ಇಂಡಿಯಾ ಕಾನಿಷ್ಕಾ ವಿಮಾನದ ಮೇಲೆ ಖಲಿಸ್ತಾನಿ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದ 329 ಜನರನ್ನು ಸ್ಮರಿಸಲು ತೀರ್ಮಾನಿಸಿದೆ, ಇದರಲ್ಲಿ ಉಗ್ರ ಹರ್ದೀಪ್ ಸಿಂಗ್ ಮುಖ್ಯ ರೂವಾರಿಯಾಗಿದ್ದ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…

Read More