Subscribe to Updates
Get the latest creative news from FooBar about art, design and business.
- KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್: ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ
- ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
- ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
- ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
- ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
- ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
- ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
- ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
Author: admin
Zepto ಮೂಲಕ ಆರ್ಡರ್ ಮಾಡಿದ ಹರ್ಷೆಯ ಚಾಕೊಲೇಟ್ ಸಿರಪ್ ಬಾಟಲಿಯಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಪ್ರಮಿ ಶ್ರೀಧರ್ ಯವರು ಚಾಕೊಲೇಟ್ ಸಿರಪ್ ಆರ್ಡರ್ ಮಾಡಿದ ವ್ಯಕ್ತಿಯಾಗಿದ್ದಾರೆ. Zepto ಮೂಲಕ ಆರ್ಡರ್ ಮಾಡಿದ ಹರ್ಷೆಯ ಚಾಕೊಲೇಟ್ ಸಿರಪ್ ನ ಬಾಟಲಿಯಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ತಕ್ಷಣವೇ ಅವರು ಅದರ ವೀಡಿಯೊವನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಹರ್ಷೆಯ ಬಾಟಲಿಯಲ್ಲಿ ಸತ್ತ ಇಲಿ ಇರುವುದು ತಿಳಿಯುವ ಮೊದಲು ಕುಟುಂಬದ ಮೂವರು ಸದಸ್ಯರು ಈ ಸಿರಪ್ ಅನ್ನು ಕುಡಿದಿದ್ದಾರೆ. ತಕ್ಷಣ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ಪ್ರಮಿ ಇನ್ ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ. ತಮ್ಮ ಪೋಸ್ಟ್ ನ ಕೊನೆಯಲ್ಲಿ, ಯಾವುದೇ ಉತ್ಪನ್ನವನ್ನು ಮನೆಯಲ್ಲಿ ಮಕ್ಕಳಿಗೆ ನೀಡುವ ಮೊದಲು ಅದನ್ನು ಪರೀಕ್ಷಿಸಲು ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಕಂಪನಿಯು ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಭರವಸೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನು ಪೋಸ್ಟ್…
ತುಮಕೂರಿನಲ್ಲಿ ಹುಚ್ಚುನಾಯಿ ಹಾವಳಿ ಹೆಚ್ಚಾಗಿದ್ದು 5ಕ್ಕೂ ಹೆಚ್ಚು ಮಂದಿ ಮೇಲೆ ದಾಳಿ ಮಾಡಿವೆ. ಓರ್ವ ಬಾಲಕಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ನಗರದ ಗೋಕುಲ ಬಡಾವಣೆಯಲ್ಲಿ ನಡೆದಿದೆ. ಸಂಜೆ 5ಗಂಟೆ ಸುಮಾರಿಗೆ ಗೋಕುಲ ಬಡಾವಣೆಯಲ್ಲಿ ಕಾಣಿಸಿಕೊಂಡ ಹುಚ್ಚುನಾಯಿ, ಮನೆ ಮುಂದೆ ಆಟವಾಡುತ್ತಿದ್ದ 9 ವರ್ಷ ಬಾಲಕಿ ಮೇಲೆ ದಾಳಿ ಮಾಡಿದೆ. ಬಾಲಕಿಯ ಕೈ, ಕಾಲಿಗೆ ಗಂಭೀರವಾಗಿ ಕಚ್ಚಿರುವ ಹುಚ್ಚುನಾಯಿ, ಅದಲ್ಲದೇ ಮನೆಯಲ್ಲಿ ಸಾಕಿದ್ದ ಎರಡು ನಾಯಿಗಳ ಮೇಲೆಯೂ ದಾಳಿ ಮಾಡಿದೆ. ಹೊರಗಡೆಯಿಂದ ಬರ್ತಿರುವ ನಾಯಿಗಳ ಹಾವಳಿಯಿಂದ ಸ್ಥಳೀಯರಲ್ಲಿ ಹೆಚ್ಚಿದ ಆತಂಕ ಹೆಚ್ಚಾಗಿದೆ. ರಿಂಗ್ ರಸ್ತೆ ಸಮೀಪ ಇರುವ ಹಿನ್ನೆಲೆ, ಬೇರೆ ಕಡೆಯಿಂದ ರಿಂಗ್ ರಸ್ತೆ ಬಳಿ ನಾಯಿಗಳನ್ನ ತಂದು ಬಿಟ್ಟು ಹೋಗುತ್ತಿರುವ ಆರೋಪ ವ್ಯಕ್ತವಾಗಿದೆ. ಸ್ಥಳೀಯರ ಮೇಲೆ ದಾಳಿ ನಡೆಸಿ ನಾಯಿಗಳು ಆತಂಕ ಸೃಷ್ಟಿಸಿವೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರಿಂದ ಒತ್ತಾಯ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ತುಮಕೂರು ಮಹಾನಗರ ಪಾಲಕೆ ಕಮಿಷನರ್ ಬಿ.ವಿ.…
ಜೂನ್ 18ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನೇ (NET 2024) ಕೇಂದ್ರ ಸರ್ಕಾರವು ರದ್ದುಗೊಳಿಸಿದೆ. ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರವು ಆದೇಶ ಹೊರಡಿಸಿದೆ. ಜೂನ್ 18ರಂದು ಕರ್ನಾಟಕ ಸೇರಿ ದೇಶಾದ್ಯಂತ 317 ನಗರಗಳ 1,205 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 11 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೆಟ್ ಗೆ ಹಾಜರಾಗಿದ್ದರು. ಈಗ ಪರೀಕ್ಷೆಯನ್ನು ರದ್ದುಗೊಳಿಸಿರುವ ಕಾರಣ ಶೀಘ್ರದಲ್ಲೇ ಹೊಸ ದಿನಾಂಕ ಘೋಷಿಸಲಾಗುತ್ತದೆ ಎಂದು ತಿಳಿದುಬಂದಿದೆ. ನ್ಯಾಷನ್ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯುನಿಟ್ ಆಫ್ ಇಂಡಿಯನ್ ಸೈಬರ್ ಕ್ರೈಮ್ ಕೋ-ಆರ್ಡಿನೇಷನ್ ಸೆಂಟರ್‌ನಿಂದ ಯುಜಿಸಿಗೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. “ಪರೀಕ್ಷೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು, ಭಾರತ ಸರ್ಕಾರದ ಶಿಕ್ಷಣ ಸಚಿವಾಲಯವು UGC-NET ಜೂನ್ 2024 ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ” ಎಂದು ಶಿಕ್ಷಣ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. Government is committed to ensure the sanctity of examinations and…
ಕಾರವಾರ: ಜಿಲ್ಲೆಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಗುತ್ತಿಗೆವಹಿಸಿ ಕೊಂಡಿರುವ ಗುತ್ತಿಗೆದಾರರು ಮತ್ತು ಗುತ್ತಿಗೆ ಕಂಪನಿಗಳು ನಿಗಧಿ ಅವಧಿಯೊಳಗೆ ಕಾಮಗಾರಿಗಳನ್ನು ಮುಕ್ತಾಯಗೊಳಿಸದೇ ಇದ್ದಲ್ಲಿನ ಅಂತಹವರನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡುವಂತೆ ಎಲ್ಲಾ ಅಧಿಕಾರಿಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 450 ಹಾಸಿಗೆಯ ಸೂಪರ್ ಸ್ಪೆಷಾಲಟಿ ಆಸ್ಪತ್ರೆಯ ಕಟ್ಟಡ ಕಾಮಗಾರಿಯು ನಿಗಧಿತ ಒಪ್ಪಂದದಂತೆ ಮುಕ್ತಾಯಗೊಂಡು ಮಾರ್ಚ್ ತಿಂಗಳಲ್ಲಿ ಕಟ್ಟಡ ಹಸ್ತಾಂತರವಾಗಬೇಕಿತ್ತು. ಆದರೆ ಇಲ್ಲಿಯವರೆಗೆ ಹಸ್ತಾಂತರವಾಗದ ಹಿನ್ನಲೆಯಲ್ಲಿ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಯೋಜನೆಯ ಪ್ರಯೋಜನ ದೊರೆಯದೇ ಚಿಕಿತ್ಸೆಗೆ ಪರದಾಡುವಂತಾಗಿದೆ. ಅಲ್ಲದೇ ಜಿಲ್ಲೆಯಲ್ಲಿ ಕೈಗೊಂಡಿರುವ ಹಲವು ಅಭಿವೃದ್ದಿ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಇತರೆ ಗುತ್ತಿಗೆದಾರರು ಮತ್ತು ಗುತ್ತಿಗೆ ಕಂಪನಿಗಳು ನಿಗಧಿತ ಅವಧಿಯೊಳಗೆ ಕಾಮಗಾರಿಗಳನ್ನು ಮುಕ್ತಾಯಗೊಳಿದೇ ಇದ್ದಲ್ಲಿ ಅವರನ್ನು…
ಮಡಿಕೇರಿ: ಅಂತರರಾಷ್ಟ್ರೀಯ 10 ನೇ ಯೋಗ ದಿನಾಚರಣೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರ ಅಧ್ಯಕ್ಷತೆಯಲ್ಲಿ ವಿಡಿಯೋ ಸಂವಾದದ ಮೂಲಕ ಪೂರ್ವಭಾವಿ ಸಭೆಯು ಬುಧವಾರ ನಡೆಯಿತು. ಸಭೆಯಲ್ಲಿ ಜೂನ್, 21 ರಂದು ನಡೆಯುವ ಅಂತರರಾಷ್ಟ್ರೀಯ 10ನೇ ಯೋಗ ದಿನಾಚರಣೆ ಆಚರಿಸುವ ನಿಟ್ಟಿನಲ್ಲಿ ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಕೋರಿದರು. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮಹತ್ವ ಅರಿತು ಸಂಬಂಧಪಟ್ಟ ವಿವಿಧ ಇಲಾಖೆಗಳು ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಬೇಕು. ಶಾಲಾ ಕಾಲೇಜು ಹಾಗೂ ಹಾಸ್ಟೇಲ್ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ಮತ್ತು ಬರಲು ಅಗತ್ಯ ಜವಾಬ್ದಾರಿ ವಹಿಸಿಕೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ನಿರ್ದೇಶನ ನೀಡಿದರು. ಸ್ವಚ್ಚತೆ ಕಾಪಾಡುವುದು ಮತ್ತು ಕುಡಿಯುವ ನೀರು ಕಲ್ಪಿಸುವುದು ಮತ್ತಿತರ ಸಂಬಂಧ ನಗರಸಭೆ ಅಧಿಕಾರಿಗಳು ಅಗತ್ಯ ಸಹಕಾರ ನೀಡುವಂತೆ ಸೂಚಿಸಿದರು. ಜಿಲ್ಲಾ ಆಯೂಷ್ ಅಧಿಕಾರಿ ಡಾ.ರೇಣುಕಾ ದೇವಿ ಅವರು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಜೂನ್, 21 ರಂದು…
ಮಡಿಕೇರಿ: ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಆಯೋಜಿಸಲು ಚಿಂತಿಸಲಾಗಿದ್ದು, ಆ ನಿಟ್ಟಿನಲ್ಲಿ ಸ್ಥಳೀಯ ಸಮಸ್ಯೆ ಬಗೆಹರಿಸಲು ಶ್ರಮಿಸಲಾಗುವುದು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ವಿರಾಜಪೇಟೆಯ ಕಾವೇರಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನಸ್ಪಂದನ ಕಾರ್ಯಕ್ರಮ ಮೂಲಕ ಜನರ ಸಮಸ್ಯೆ ಪರಿಹರಿಸುವುದು ಉದ್ದೇಶವಾಗಿದೆ. ಆ ದಿಸೆಯಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವುದು ಪ್ರಮುಖವಾಗಿದೆ ಎಂದರು. ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವುದು ಅತಿಮುಖ್ಯ. ಸಾಧ್ಯವಾದಷ್ಟು ಸರ್ಕಾರದ ಕೆಲಸಗಳನ್ನು ತಲುಪಿದಲ್ಲಿ ಸಾರ್ಥಕವಾಗಲಿದೆ ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ, ಯಾವುದೇ ರೀತಿಯ ಕುಂದುಕೊರತೆ ಇದ್ದಲ್ಲಿ ಮನವಿ ಮಾಡುವಂತಾಗಬೇಕು. ಬಗೆಹರಿಸುವಂತಹಗಳನ್ನು ಸ್ಥಳದಲ್ಲಿಯೇ ತಿಳಿಸಲಾಗುವುದು. ಇಲ್ಲದಿದ್ದಲ್ಲಿ 15 ದಿನದೊಳಗೆ ಬಗೆಹರಿಸಲಾಗುವುದು ಎಂದರು. ಸಾರ್ವಜನಿಕರ ಮನೆ ಬಾಗಿಲಿಗೆ ಬಂದು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ.…
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ಮೌನ ಮುರಿದಿದ್ದಾರೆ. ಇದು ವರೆಗೆ ಪ್ರಕರಣದ ಬಗ್ಗೆ ಏನೂ ಮಾತನಾಡದ ಅವರು, ಈಗ ಸೋಷಿಯಲ್ ಮೀಡಿಯಾ ಮೂಲಕ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ. ಇಂದು ತಮ್ಮ ಇನ್ ಸ್ಟಾಗ್ರಾಂನಲ್ಲಿ ಪ್ರಕರಣದ ಕುರಿತು ಉಲ್ಲೇಖಿಸಿರುವ ಅವರು, ರೇಣುಕಾಸ್ವಾಮಿ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಈ ಘಟನೆಯಿಂದಾಗಿ ನನಗೆ ಹಾಗೂ ನನ್ನ ಹದಿಹರೆಯದ ಮಗನಿಗೆ, ದರ್ಶನ್ ಅವರ ಸ್ನೇಹಿತರಿಗೆ, ಅಭಿಮಾನಿಗಳಿಗೆ ತುಂಬ ದುಃಖವಾಗಿದೆ ಎಂದಿದ್ದಾರೆ. ತಾಯಿ ಚಾಮುಂಡೇಶ್ವರಿ ಹಾಗೂ ನಮ್ಮ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ನ್ಯಾಯವು ಮೇಲುಗೈ ಸಾಧಿಸಲಿದೆ. ನ್ಯಾಯಾಲದಿಂದ ಪ್ರಕಟವಾಗಲಿರುವ ತೀರ್ಪು ದರ್ಶನ್ ಹಾಗೂ ಅಭಿಮಾನಿಗಳಿಗೆ ನೆಮ್ಮದಿಯ ಭಾವ ಮೂಡಿಸಲಿದೆ ಎಂದು ನಾನು ಭಾವಿಸುತ್ತೇನೆ. ಸತ್ಯ ಮೇವ ಜಯತೆ ಎಂದು ಬರೆದಿದ್ದಾರೆ. ಇದೇ ವೇಳೆ ಮಾಧ್ಯಮಗಳ ವಿರುದ್ಧ ಅಸಮಾಧಾನ ಹೊರಹಾಕಿರುವ ಅವರು, ವಿವಿಧ ಮಾಧ್ಯಮಗಳು ಹಾಗೂ ಸೋಷಿಯಲ್ ಮೀಡಿಯಾಗಳಲ್ಲಿ ಸತ್ಯಕ್ಕೆ ದೂರವಾದ ಸುದ್ದಿಗಳು ಪ್ರಸಾರವಾಗುತ್ತಿವೆ. ದಯವಿಟ್ಟು…
ಚಂದ್ರಬಾಬು ನಾಯ್ಡು ಸರ್ಕಾರ ಹಿರಿಯ ನಾಗಕರಿಗೆ ಒಳ್ಳೆಯ ಸುದ್ದಿ ನೀಡಿದೆ. ಹಿರಿಯ ನಾಗರಿಕರಿಗೆ ಯಾವುದೇ ಒತ್ತಡವಿಲ್ಲದೆ ಆರಾಮದಾಯಕವಾಗಿ ತಿರುಪತಿ ತಿಮಪ್ಪನ ದರ್ಶನ ಪಡೆಯಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರು ಸರತಿಸಾಲಿನಲ್ಲಿ ನಿಲ್ಲಬೇಕಾದ ಅಗತ್ಯವಿಲ್ಲ. ಅವರು ಯಾವುದೇ ಮೆಟ್ಟಿಲುಗಳನ್ನು ಹತ್ತದೇ ಸೇತುವೆ ಕೆಳಗೆ ಇರುವ ಗ್ಯಾಲರಿಯ ಮೂಲಕ ಪ್ರವೇಶಿಸಬಹುದಾಗಿದೆ. ತಿರುಪತಿಗೆ ಭೇಟಿ ನೀಡುವ ಹಿರಿಯ ನಾಗರಿಕರಿಗೆ ಹಲವು ಸೌಲಭ್ಯಗಳು ಲಭ್ಯವಿದೆ. ವೆಂಕಟೇಶ್ವರ ದೇವರ ಉಚಿತ ದರ್ಶನಕ್ಕೆ ಎರಡು ವಿಶೇಷ ಸಮಯ ಸ್ಲಾಟ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.ಬೆಳಿಗ್ಗೆ 10 ಗಂಟೆಗೆ ಹಾಗೂ ಮಧ್ಯಾಹ್ನ 3 ಗಂಟೆಗೆ ವಿಶೇಷ ಸ್ಲಾಟ್‌ನಲ್ಲಿ ಹಿರಿಯ ನಾಗರಿಕರು ವೆಂಕಟೇಶ್ವರನ ದರುಶನ ಪಡೆಯಬಹುದಾಗಿದೆ.ಟಿಟಿಡಿ ನೀಡುತ್ತಿರುವ ಈ ಸೌಲಭ್ಯ ಪಡೆಯಲು ಹಿರಿಯ ನಾಗರಿಕರು ತಮ ಫೋಟೊ ಗುರುತಿನ ಚೀಟಿ (ಆಧಾರ್ ಅಥವಾ ಇತರೆ ದಾಖಲೆಗಳು) ಜೊತೆಗೆ ವಯಸ್ಸಿನ ಪುರಾವೆಯನ್ನು ಹಾಜರುಪಡಿಸಬೇಕು. ಈ ದಾಖಲೆಗಳನ್ನು ಎಸ್–1 ಕೌಂಟರ್‌ನಲ್ಲಿ ಸಲ್ಲಿಸಬೇಕು. ಹೆಚ್ಚಿನ ವಿವರಣೆಗಳಿಗೆ ಟಿಟಿಡಿ ವಿಶೇಷ ಸಹಾಯವಾಣಿ ಸಂಖ್ಯೆ 08772277777 ಯಲ್ಲಿ ಸಂಪರ್ಕಿಸಬಹುದಾಗಿದೆ. ನಮ್ಮತುಮಕೂರಿನ ಕ್ಷಣ…
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಇಂದಿರಾ ಕ್ಯಾಂಟೀನ್ ನಲ್ಲಿ ಇಂದಿನಿಂದ ಹೊಸ ಮೆನು ಜಾರಿಗೆ ಬಂದಿದ್ದು, ಬೆಳಗ್ಗೆಯ ತಿಂಡಿ ಹಾಗೂ ಮಧ್ಯಾಹ್ನದ ಊಟ, ರಾತ್ರಿ ಊಟದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ. ರಾಜ್ಯದ ಇಂದಿರಾ ಕ್ಯಾಂಟೀನ್ ಗಳಲ್ಲಿ ಇಂದಿನಿಂದ ಊಟ ಮತ್ತು ಉಪಾಹಾರಗಳಲಿ ಬದಲಾವಣೆ ಮಾಡಲಾಗಿದ್ದು, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಭಾಗಕ್ಕೆ ಬೇರೆ ಬೇರೆ ಮೆನು ಪರಿಚಯಿಸಲಾಗಿದೆ. ಇಲ್ಲಿದೆ ಮೆನುವಿನ ಸಂಪೂರ್ಣ ಮಾಹಿತಿ: ಭಾನುವಾರ ಬೆಳಗ್ಗೆ : ಇಡ್ಲಿ ಚಟ್ನಿ / ಖಾರಾ ಬಾತ್ / ಬ್ರೆಡ್ ಮತ್ತು ಜಾಮ್ ಮಧ್ಯಾಹ್ನ : ಅನ್ನ ಸಾಂಬಾರ್ / ಮೊಸರಾನ್ನ / ರಾಗಿಮುದ್ದೆ ಸೊಪ್ಪು ಸಾರು ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು ಸೋಮವಾರ ಬೆಳಗ್ಗೆ : ಇಡ್ಲಿ ಸಾಂಬಾರ್ / ಪಲಾವ್ ರೈತ / ಬ್ರೆಡ್ & ಜಾಮ್ ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ರಾಗಿಮುದ್ದೆ ಸೊಪ್ಪು ಸಾರು ಮತ್ತು…
ತುಮಕೂರು: ಜಿಲ್ಲೆಯ ಇರಕ ಸಂದ್ರ ಕಾಲೋನಿ, ಕೊಳವನಹಳ್ಳಿ ಗ್ರಾಮಗಳ ಗುಡಿಸಲು ನಿವಾಸಿಗಳು ಸೇರಿದಂತೆ ಜಿಲ್ಲೆಯ ಭೂಮಿ ವಸತಿ ವಂಚಿತರಿಂದ ನಿವೇಶನಗಳಿಗೆ ಹಕ್ಕು ಪತ್ರ ಮತ್ತು ಭೂ ಸಾಗುವಳಿ, ಖಾತೆ ಪಹಣಿ ಕುಡಿಯುವ ನೀರು ಮತ್ತು ವಿದ್ಯುತ್ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿಯಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಯಿತು. ಪ್ರತಿಭಟನಾಕಾರರ ಮನವೊಲಿಸಲು ತಡ ರಾತ್ರಿ 10 ಗಂಟೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸ್ಥಳಕ್ಕೆ ಭೇಟಿ ನೀಡಿದರು. ನಿರಾಶ್ರಿತರ ಬೇಡಿಕೆಗಳು ಈಡೇರುವವರೆಗೂ ಮುಷ್ಕರವನ್ನ ಕೈ ಬಿಡುವುದಿಲ್ಲ ಎಂದು ಸಾಮಾಜಿಕ ಹೋರಾಟಗಾರ ಹಂದ್ರಾಳು ನಾಗಭೂಷಣ್ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರಕ್ಕೆ ನೂರಾರು ಮನವಿ ಸಲ್ಲಿಸಿದರು ಸಹ ನಿರಾಶ್ರಿತರ ಬೇಡಿಕೆಗಳನ್ನು ಬಗೆಹರಿಸುವಲ್ಲಿ ಅಧಿಕಾರಿ ವರ್ಗ ಮತ್ತು ಸರ್ಕಾರ ವಿಫಲವಾಗಿದೆ ಎಂದು ಎಂದು ಆಕ್ರೋಶ ಹಿರಿಯ ಹೋರಾಟಗಾರ ಸಿರಿಮನೆ ನಾಗರಾಜು ಆಕ್ರೋಶ ವ್ಯಕ್ತಪಡಿಸಿದರು. ಸುರಿಯುವ ಮಳೆಯಲ್ಲಿ ವಿದ್ಯುತ್, ಶೌಚಾಲಯ, ಕುಡಿಯುವ ನೀರು, ಇಲ್ಲದೆ ನಿರಾಶ್ರಿತರು ಪರದಾಡುತ್ತಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿಯೇ…