Author: admin

ಬೆಂಗಳೂರಿನ ಪಟ್ಟಣಗೆರೆ ಶೆಡ್ಡಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ವಿಚಾರಣೆ ನಡೆಸಲಾಗುತ್ತಿದ್ದು, ನಿತ್ಯ ಹೊಸ ಹೊಸ ವಿಚಾರಗಳು ಹೊರಬರುತ್ತಿವೆ ರೇಣುಕಾ ಸ್ವಾಮಿ ಹತ್ಯೆ ಕೇಸ್ ನ ಆರೋಪಿ, ನಟ ದರ್ಶನ್, ಪ್ರಕರಣಕ್ಕೆ ಸಂಬಂಧಿಸಿ ಸ್ವ ಇಚ್ಛೆ ಹೇಳಿಕೆ ನೀಡಿದ್ದಾರೆ ಎನ್ನಲಾದ ಮಾಹಿತಿಯೊಂದು ಹೊರಬಿದ್ದಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಮುಚ್ಚಿ ಹಾಕಲು ನಟ ದರ್ಶನ್ 30 ಲಕ್ಷ ಡೀಲ್ ಮಾಡಿಕೊಂಡಿರುವುದಾಗಿ ಒಪ್ಪಿಕೊಂಡಿದ್ದಾರೆ.ಪೊಲೀಸ್, ಲಾಯರ್, ಶವ ಸಾಗಿಸುವವರಿಗಾಗಿ 30 ಲಕ್ಷ ವೆಚ್ಚ ಮಾಡಿರುವುದಾಗಿ ಡಿ ಬಾಸ್ ಹೇಳಿದ್ದಾರೆ. ಈ ಕೇಸ್‌ನಲ್ಲಿ ತಮ್ಮ ಹೆಸರು ಬಾರದಂತೆ ನೋಡಿಕೊಳ್ಳಲು ಪರಮಾಪ್ತ ಪ್ರದೂಶ್‌ಗೆ ಹಣ ನೀಡಿರುವುದಾಗಿ ದರ್ಶನ್ ವಿಚಾರಣೆ ವೇಳೆ ಹೇಳಿಕೊಂಡಿದ್ದಾರೆ. ಆದರೆ ಪಟ್ಟಣಗೆರೆಯ ಶೆಡ್‌ನಲ್ಲಿ ನಡೆದ ಹಲ್ಲೆಯಲ್ಲಿ ತಾನು ಭಾಗಿಯಾಗಿದ್ದೇನೆ ಎಂದು ದರ್ಶನ್ ಒಪ್ಪಿಕೊಂಡಿಲ್ಲ. ಶೆಡ್ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳು, ಜೂನ್ 8ರಂದು ರಾತ್ರಿ ದರ್ಶನ್ ತನ್ನ ಜೀಪಿನಲ್ಲಿ ಶೆಡ್ ಕಡೆಗೆ ಆಗಮಿಸಿದ್ದನ್ನು ತೋರಿಸಿವೆ. ಹತ್ಯೆಯ ನಂತರ ದರ್ಶನ್ ಆರೋಪಿಗಳ ಜೊತೆಗೆ ಪಾರ್ಟಿ…

Read More

ಬಡವರು, ದಲಿತರ ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ದರೆ ನೀವು ಸೇವೆಯಲ್ಲಿರಲು ನಾಲಾಯಕ್. ವಸತಿ ಶಾಲೆಗಳು ಬಡಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಬೇಕು. ಬುದ್ಧಿವಂತರನ್ನು ಇನ್ನಷ್ಟು ಬುದ್ಧಿವಂತರಾಗಿಸುವುದು ಮಾತ್ರವಲ್ಲ, ಕಲಿಕೆಯಲ್ಲಿ ಹಿಂದುಳಿದವರನ್ನೂ ಬುದ್ಧಿವಂತರಾಗಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಮಂಗಳವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ‘ಇಲಾಖೆಯ ಒಟ್ಟಾರೆ ಆಯವ್ಯಯದಲ್ಲಿ ಬಿಡುಗಡೆಯಾದ ಮೊತ್ತ 1,884ಕೋಟಿ ರೂ.ಗಳ ಪೈಕಿ 1,879ಕೋಟಿ ರೂ.ವೆಚ್ಚವಾಗಿದ್ದು, ಶೇ.99.75ರಷ್ಟು ಸಾಧನೆಯಾಗಿದೆ’ ಎಂದು ಹೇಳಿದರು. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ 389 ವಿದ್ಯಾರ್ಥಿ ನಿಲಯಗಳು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು-39,541 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಿದ್ದು, 194.71 ಕೋಟಿ ರೂ.ಒದಗಿಸಲಾಗಿದೆ. ಎಸೆಸೆಲ್ಸಿ ಯಲ್ಲಿ ಶೇ.77ರಷ್ಟು ಫಲಿತಾಂಶ ಬಂದಿದ್ದು, ಫಲಿತಾಂಶವನ್ನು ಇನ್ನಷ್ಟು ಉತ್ತಮ ಪಡಿಸಬೇಕು ಎಂದು ಅವರು ನಿರ್ದೇಶಕ ನೀಡಿದರು. ಹಾಸ್ಟೆಲ್‍ಗಳಿಗೆ ಸಂಜೆ ವೇಳೆಗೆ ಭೇಟಿ ನೀಡಿ,…

Read More

ಗ್ಯಾರಂಟಿ ತೆಗೆದರೆ ಝೀರೋ ಆಗುತ್ತೇವೆಂದು ತೈಲ ದರ ಏರಿಕೆ ಮಾಡುತ್ತಿದ್ದಾರೆ ಎಂದು ಶಾಸಕ ಯತ್ನಾಳ್ ಹೇಳಿದ್ದಾರೆ. ಪಕ್ಷದ ಮುಂದಿನ ಹೋರಾಟಗಳ ಕುರಿತು ಎನ್ ರವಿಕುಮಾರ್, ವೀರಣ್ಣ ಚರಂತಿಮಠ, ಅಭಯ ಪಾಟೀಲರೊಂದಿಗೆ ಚರ್ಚಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್​ನ ದುರಾಡಳಿತದ ವಿಚಾರವಾಗಿ ಅಧಿವೇಶನದಲ್ಲಿ ಚರ್ಚೆ ಮಾಡುವುದು ಸೇರಿದಂತೆ, ನಾವೆಲ್ಲರೂ ಒಂದಾಗಿ ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುವ ವಿಚಾರವಾಗಿ ಚರ್ಚೆ ಆಗಿದೆ ಎಂದರು. ಗ್ಯಾರಂಟಿ ತೆಗೆದರೆ ಝೀರೋ ಆಗುತ್ತೇವೆ ಎಂಬ ಕಾರಣದಿಂದ ತೈಲದ ದರವನ್ನು ಏರಿಕೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ನೈತಿಕ ಹಕ್ಕಿಲ್ಲ, ಗ್ಯಾರಂಟಿ ಸಂಪೂರ್ಣವಾಗಿ ವಿಫಲವಾಗಿದೆ ಎಂದರು. ಸಾರಿಗೆ ಬಸ್​ಗಳು ಲಾಭದಲ್ಲಿ ಇವೆ ಎಂದು ಹೇಳುವ ನೀವು ಗಂಡಸರಿಗೂ ಫ್ರೀ ಮಾಡಿ.  ಈ ಒಂದು ವರ್ಷದಲ್ಲಿ ಒಂದೇ ಒಂದು ಭೂಮಿ ಪೂಜೆಯನ್ನು ನಾನು ಮಾಡಿಲ್ಲ. ಸಚಿವ ಚಲುವರಾಯಸ್ವಾಮಿ ಗ್ಯಾರಂಟಿ ಯೋಜನೆ ಕೈಬಿಟ್ಟು ಅಭಿವೃದ್ಧಿಗೆ ಹಣ ಕೊಡಿ ಎಂದಿದ್ದಾರೆ. ಇನ್ನೊಂದು ತಿಂಗಳಲ್ಲಿ ಕಾಂಗ್ರೆಸ್​ನ ಶಾಸಕರೇ ಬಂಡಾಯ ಏಳುತ್ತಾರೆ. ರಾಜ್ಯದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ…

Read More

ಇವಿಎಂ ಕಾರಣಕ್ಕೆ ಜೆಡಿಎಸ್ ಮತ್ತು ಬಿಜೆಪಿಗೆ ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳು ಬಂದಿವೆ. ಇದರ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಬೇಕಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮಂಗಳವಾರ ವಿಧಾನಸೌಧ ಹಾಗೂ ಬಿಬಿಎಂಪಿ ಮುಖ್ಯ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇವಿಎಂ ತೊಲಗಬೇಕು ಬ್ಯಾಲೆಟ್ ಮತದಾನ ಮತ್ತೆ ಬರಬೇಕು. ಈಗಾಗಲೇ ಫಲಿತಾಂಶ ಬಂದಾಗಿದೆ. ಈಗೇನೂ ಮಾಡಲು ಆಗುವುದಿಲ್ಲ ಎಂದರು. ಮತ್ತೊಮ್ಮೆ ಫಲಿತಾಂಶವನ್ನು ಪರಿಶೀಲನೆ ನಡೆಸಬಹುದು. ಮಧ್ಯಪ್ರದೇಶದಲ್ಲಿ ಬ್ಯಾಲೆಟ್ ಮತದಾನ ಇದ್ದಾಗ ಮೂರರಲ್ಲಿ ಎರಡು ಭಾಗದಷ್ಟು ಮತಗಳು ಕಾಂಗ್ರೆಸ್ ಪರವಾಗಿ ಬೀಳುತ್ತಿದ್ದವು. ಇವಿಎಂ ಕಾರಣಕ್ಕೆ ಈಗ ಪರಿಸ್ಥಿತಿ ಬದಲಾಗಿದೆ. ಇದರ ಬಗ್ಗೆ ಮತ್ತಷ್ಟು ಆಳವಾಗಿ ಚಿಂತನೆ ನಡೆಸಬೇಕಿದೆ ಎಂದು ಅವರು ಹೇಳಿದರು. ಬಿಬಿಎಂಪಿ ಆಸ್ತಿಗಳನ್ನು ಸರಕಾರ ಅಡವಿಡುತ್ತಿದೆ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ಯಾವ ಅಡಮಾನವೂ ಇಲ್ಲ. ನಮ್ಮ ಬಿಬಿಎಂಪಿಯ ಆಸ್ತಿಯಗಳ ರಕ್ಷಣೆ ಹಾಗೂ ಎಷ್ಟು ಆಸ್ತಿಗಳಿವೆ ಎನ್ನುವ ಮರು ಸಮೀಕ್ಷೆ, ಗುತ್ತಿಗೆ ನವೀಕರಣ ಸೇರಿದಂತೆ ಇತರೇ ಕೆಲಸಗಳಿಗಾಗಿ ನಮ್ಮ…

Read More

ಆದಾಯ ತೆರಿಗೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಆದಾಯ ತೆರಿಗೆ ನೇಮಕಾತಿ 2024 ರ ಅಧಿಕೃತ ಅಧಿಸೂಚನೆಗೆ ಅನುಗುಣವಾಗಿ, ನೇಮಕಾತಿಯು ಡೆಪ್ಯುಟೇಶನ್ ಆಧಾರದ ಮೇಲೆ ಇರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳನ್ನು 03 ವರ್ಷಗಳಿಗೆ ಮೀರದ ಸೂಕ್ತ ಅವಧಿಗೆ ನೇಮಕ ಮಾಡಲಾಗುತ್ತದೆ. ಆದಾಯ ತೆರಿಗೆ ನೇಮಕಾತಿ 2024 ರ ಅಧಿಕೃತ ಅಧಿಸೂಚನೆಯ ಆಧಾರದ ಮೇಲೆ, ಎಲ್ಲಾ ವಿಷಯಗಳಲ್ಲಿ ಸ್ಥಾನದ ಪ್ರಕಾರ ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು,. ಸೂಕ್ತವಾದ ವಿಧಾನದ ಮೂಲಕ ಕೆಳಗೆ ನಮೂದಿಸಿದ ವಿಳಾಸಕ್ಕೆ ಫಾರ್ವರ್ಡ್ ಮಾಡುವ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಗತ್ಯವಿದ್ದಲ್ಲಿ ಅಥವಾ ಸಮಿತಿಯು ಕೇಳಿದರೆ ಸರಿಯಾಗಿ ಭರ್ತಿ ಮಾಡಿದ ಅರ್ಜಿಗಳೊಂದಿಗೆ ತಮ್ಮ ಸಂಬಂಧಿತ ದಾಖಲೆಗಳನ್ನು ಲಗತ್ತಿಸಬೇಕು. ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಮಿತಿಯು ನೀಡಿದ ನಿಗದಿತ ದಿನಾಂಕದಂದು ಅಥವಾ ಮೊದಲು ಸಲ್ಲಿಸಬೇಕು. ಆದಾಯ ತೆರಿಗೆ ನೇಮಕಾತಿ 2024 ಗಾಗಿ ಪೋಸ್ಟ್ ಹೆಸರು ಮತ್ತು ಹುದ್ದೆಗಳು ಇನ್ಸ್ ಪೆಕ್ಟರ್ ಮತ್ತು ಅಸಿಸ್ಟೆಂಟ್ ಹುದ್ದೆಗೆ ಅವಕಾಶ ತೆರೆಯಲಾಗಿದೆ. ಆದಾಯ ತೆರಿಗೆ ನೇಮಕಾತಿ…

Read More

ವೀಳ್ಯದೆಲೆ ಮತ್ತು ಸುಣ್ಣದ ಜೊತೆ ವೀಳ್ಯದೆಲೆಯನ್ನು ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿಯಲ್ಲ, ಆದರೆ ತುಳಸಿ ಬೀಜಗಳೊಂದಿಗೆ ವೀಳ್ಯದೆಲೆಯನ್ನು ತಿನ್ನುವುದು ತುಂಬಾ ಪ್ರಯೋಜನಕಾರಿಯಾಗಿದೆ. ಹಾಗಾದರೆ ತುಳಿಸಿ ಬೀಜ ಹಾಗೂ ವೀಳ್ಯದೆಲೆ ತಿನ್ನೋದರ ಪ್ರಯೋಜನಗಳೇನು ಅನ್ನೋದನ್ನು ತಿಳಿಯೋಣ . ಬಾಯಿಯ ಆರೋಗ್ಯಕ್ಕೆ ಒಳ್ಳೆಯದು. ವೀಳ್ಯದೆಲೆಗೆ ಬಾಯಿಯ ದುರ್ವಾಸನೆ ಕಡಿಮೆ ಮಾಡುವ ಗುಣವಿದೆ. ವಾಸ್ತವವಾಗಿ, ಇದರಲ್ಲಿರುವ ಅಂಶವು ಬ್ಯಾಕ್ಟೀರಿಯಾದ ಪರಿಣಾಮವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ, ಇದು ಬಾಯಿಯಿಂದ ಬರುವ ಕೆಟ್ಟ ವಾಸನೆಯನ್ನು ಕಡಿಮೆ ಮಾಡುತ್ತದೆ. ಬಾಯಿಯ ದುರ್ವಾಸನೆಯ ಸಮಸ್ಯೆ ಅಥವಾ ಬಾಯಿಯಿಂದ ರಕ್ತ ಬರುತ್ತಿದ್ದರೆ, ತುಳಸಿ ಬೀಜದ ಜೊತೆ ವೀಳ್ಯದೆಲೆಯಿಟ್ಟು ಅಗಿಯಿರಿ. ನಿಮಗೆ ಬೇಕಾದರೆ ಲವಂಗ ಮತ್ತು ಏಲಕ್ಕಿಯನ್ನು ಕೂಡ ಹಾಕಬಹುದು. ಇದರಿಂದ ಬಾಯಿಯ ದುರ್ವಾಸನೆ ದೂರವಾಗುತ್ತದೆ. ಜೀರ್ಣಕಾರಿ ಸಮಸ್ಯೆಗಳಿಂದ ಪರಿಹಾರ ವೀಳ್ಯದೆಲೆಯೊಂದಿಗೆ ತುಳಸಿ ಬೀಜಗಳನ್ನು ತಿನ್ನುವುದರಿಂದ ಜೀರ್ಣಕ್ರಿಯೆಯ ಸಮಸ್ಯೆಯನ್ನು ಸುಧಾರಿಸಬಹುದು. ವಾಸ್ತವವಾಗಿ, ವೀಳ್ಯದೆಲೆಯೊಂದಿಗೆ ತುಳಸಿ ಬೀಜಗಳನ್ನು ತಿನ್ನುವುದು ನಿಮ್ಮ ಲಾಲಾರಸ ಗ್ರಂಥಿಯನ್ನು ಸಕ್ರಿಯವಾಗಿಡಲು ಸಹಾಯಕವಾಗಿದೆ. ಈ ಗ್ರಂಥಿಯು ಆಹಾರವನ್ನು ಸಣ್ಣ ತುಂಡುಗಳಾಗಿ ವಿಭಜಿಸಲು…

Read More

ಕಾಲೇಜು ಶುಲ್ಕವನ್ನು ಆನ್‍ಲೈನ್ ಗೇಮ್‍ನಲ್ಲಿ ಕಳೆದಿದ್ದ ವಿದ್ಯಾರ್ಥಿನಿಯೊಬ್ಬಳು ಹಣ ಹೊಂದಿಸಲಾಗದೇ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಇಲ್ಲಿನ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯ ವಿ.ವಿ.ಹಾಸ್ಟೆಲ್‍ನಲ್ಲಿ ವರದಿಯಾಗಿದೆ. ಕೋಲಾರದ ಶ್ರೀನಿವಾಸಪುರ ಮೂಲದ ಪಾವನ(19) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ಪಾವನ ಮೊದಲ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜಿಗೆ ಮೂರು ದಿನ ರಜೆ ಇದ್ದಿದ್ದರಿಂದ ಹಾಸ್ಟೆಲ್‍ನಲ್ಲಿ ಸಹಪಾಠಿಗಳು ತಮ್ಮ ಊರುಗಳಿಗೆ ತೆರಳಿದ್ದರು. ಜೂ.16ರ ರವಿವಾರ ರಾತ್ರಿ ಒಬ್ಬಳೇ ಇದ್ದ ಪಾವನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ಆಕೆ ಬಳಸಿದ್ದ ಚೇರ್ ಕೆಳಗಡೆ ಬಿದ್ದು ಜೋರಾದ ಶಬ್ದವಾಗಿದ್ದರಿಂದ ಪಕ್ಕದ ರೂಮ್‍ನ ಸಹಪಾಠಿಗಳು ಬಂದು ಗಮನಿಸಿದಾಗ ಪಾವನ ಆತ್ಮಹತ್ಯೆಗೆ ಮಾಡಿಕೊಂಡಿರುವುದು ಕಂಡುಬಂದಿದೆ. ತಕ್ಷಣ ಹಾಸ್ಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಮೃತದೇಹದ ಬಳಿ ಪತ್ತೆಯಾದ ಡೆತ್‍ನೋಟ್‍ನಲ್ಲಿ ‘ಆನ್‍ಲೈನ್‍ನಲ್ಲಿ ಹಣ ಹೂಡಿಕೆ ಮಾಡಿ ನಷ್ಟಕ್ಕೆ ಒಳಗಾದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ’ ಪಾವನ…

Read More

ರಾಜ್ಯದ ಎಲ್ಲ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ರೂ.ನೀಡಲಾಗುವುದು. ಹಾಗೂ ಪ್ರತಿ ಕ್ಷೇತ್ರದಲ್ಲಿ ಕೆಂಪೇಗೌಡ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರ ಸಂಕಿರಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ 1ಲಕ್ಷ ರೂ.ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮಂಗಳವಾರ ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಮಕ್ಕಳಿಗೆ ಕೆಂಪೇಗೌಡರ ಕುರಿತು ಚರ್ಚಾ ಸ್ಪರ್ಧೆ ಏರ್ಪಡಿಸಲಾಗುವುದು ಎಂದರು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 20 ಸಾವಿರ ರೂ., ತಾಲೂಕು ಕೇಂದ್ರಗಳಿಗೆ 20 ಸಾವಿರ ರೂ.ಜೊತೆಗೆ ಹೆಚ್ಚುವರಿಯಾಗಿ 1 ಲಕ್ಷ ರೂ.ನೀಡಲಾಗುವುದು. ಜಿಲ್ಲಾ ಕೇಂದ್ರಗಳಿಗೆ 50 ಸಾವಿರ ರೂ.ನೀಡಲಾಗುತ್ತಿದ್ದು ಹೆಚ್ಚು ಮಾಡಲು ಚಿಂತನೆ ನಡೆಸಲಾಗುವುದು ಎಂದು ಅವರು ಹೇಳಿದರು. ನಾಡಪ್ರಭು ಕೆಂಪೇಗೌಡರ 515ನೆ ಜಯಂತೋತ್ಸವವನ್ನು ಅರಮನೆ ಮೈದಾನ ಅಥವಾ ಹೊರಾಂಗಣ ಮೈದಾನದಲ್ಲಿ ಜೂ.27ರಂದು ನಡೆಸಲು ತೀರ್ಮಾನಿಸಲಾಗಿದೆ. ಹುಲಿಯೂರುದುರ್ಗ, ಮಾಗಡಿ, ಆವತಿ ಸೇರಿದಂತೆ ಬೆಂಗಳೂರಿನ ಎಲ್ಲಾ ದಿಕ್ಕುಗಳಿಂದ ಪ್ರತಿವರ್ಷದಂತೆ ಗೋಪುರ ಮತ್ತು ಜ್ಯೋತಿಗಳ ಮೆರವಣಿಗೆ…

Read More

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ರಕ್ಷಣೆಗಾಗಿ ನಿಯೋಜಿಸಲಾಗಿದ್ದ ಎಸ್ ಎಸ್ ಎಫ್ ಜವಾನನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎನ್ನಲಾಗಿದೆ. ಬುಧವಾರ ಮುಂಜಾನೆ 5:25 ಕ್ಕೆ ಈ ಘಟನೆ ನಡೆದಿದೆ. ಮೃತ ಸೈನಿಕನ ಹೆಸರು ಶತ್ರುಘ್ನ ವಿಶ್ವಕರ್ಮ ಎನ್ನಲಾಗಿದೆ . ಅಯೋಧ್ಯೆ ಆವರಣದಲ್ಲಿ ಗುಂಡಿನ ಸದ್ದು ಕೇಳಿದ ಬಳಿಕ ಸಹ ಸಿಬ್ಬಂದಿ ಅಲ್ಲಿಗೆ ಓಡೋಡಿ ಬಂದಿದ್ದಾರೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಆತನನ್ನು ನೋಡಿದ ಇತರ ಸೈನಿಕರು ಆಸ್ಪತ್ರೆಗೆ ಕರೆದುಕೊಂಡು ಹೋದರು . ಆದರೆ ಅಲ್ಲಿನ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎನ್ನಲಾಗಿದೆ. ಘಟನ ಸ್ಥಳಕ್ಕೆ ವಿಧಿವಿಜ್ಞಾನ ತಂಡವೂ ಸ್ಥಳಕ್ಕೆ ತಲುಪಿ ತನಿಖೆ ನಡೆಸಿತು. ಪ್ರಾಥಮಿಕ ತನಿಖೆಯಲ್ಲಿ ಇದನ್ನು ಆತ್ಮಹತ್ಯೆ ಪ್ರಕರಣವೆಂದು ಪರಿಗಣಿಸಲಾಗುತ್ತಿದೆ. ಈಗ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿಯ ನಂತರ ಸಾವಿಗೆ ನಿಖರ ಕಾರಣ ಸ್ಪಷ್ಟವಾಗಲಿದೆ ಎನ್ನಲಾಗಿದೆ. ದೇವಸ್ಥಾನದ ಭದ್ರತೆಗಾಗಿ ಯೋಗಿ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಎಸ್‌ಎಸ್‌ಎಫ್ ಪಡೆಯನ್ನು ರಚಿಸಿತ್ತು. ಘಟನೆಗೂ ಮುನ್ನ ಶತ್ರುಘ್ನ ಮೊಬೈಲ್ ನೋಡುತ್ತಿದ್ದ ಎಂದು…

Read More

ನವದೆಹಲಿ:ರಾಷ್ಟ್ರ ರಾಜಧಾನಿಯಲ್ಲಿ ಕಳೆದ 72 ಗಂಟೆಗಳ ಅವಧಿಯಲ್ಲಿ ಉಷ್ಣಮಾರುತಕ್ಕೆ ಕನಿಷ್ಠ ಐದು ಮಂದಿ ಬಲಿಯಾಗಿದ್ದಾರೆ. ಈ ಐದು ಮಂದಿ ಬಿಸಿಲ ಹೊಡೆತಕ್ಕೆ ಅಸ್ವಸ್ಥರಾಗಿ ಮೂರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ. ಜೂನ್ 17ರಂದು ಸಫ್ದರ್‍ಜಂಗ್ ಆಸ್ಪತ್ರೆಗೆ ದಾಖಲಾಗಿದ್ದ 50 ವರ್ಷದ ವ್ಯಕ್ತಿ ಮಂಗಳವಾರ ಮುಂಜಾನೆ ಕೊನೆಯುಸಿರೆಳೆದಿದ್ದು, ಅದೇ ದಿನ ಆಸ್ಪತ್ರೆಗೆ ದಾಖಲಾಗಿದ್ದ 60 ವರ್ಷದ ಮಹಿಳೆ ಕೂಡಾ ಮಂಗಳವಾರ ಮೃತಪಟ್ಟಿದ್ದಾರೆ. 40 ವರ್ಷದ ಮಹಿಳಾ ಕೂಲಿ ಕಾರ್ಮಿಕೆ ಮತ್ತು 60 ವರ್ಷ ವಯಸ್ಸಿನ ಭದ್ರತಾ ಸಿಬ್ಬಂದಿ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ. ಮಹಿಳೆ ಸೋಮವಾರ ಹಾಗೂ ಪುರುಷ ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ. ಲೋಕನಾಯಕ ಆಸ್ಪತ್ರೆಯಲ್ಲಿ ಮತ್ತೊಂದು ಸಾವು ಸಂಭವಿಸಿದೆ. 39 ವರ್ಷ ವಯಸ್ಸಿನ ಜನಕಪುರಿಯ ಕಾರು ಮೆಕ್ಯಾನಿಕ್ ಜೂನ್ 15ರಂದು 106 ಡಿಗ್ರಿ ಫ್ಯಾರನ್‍ಹೀಟ್ ತಾಪಮಾನದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಮರುದಿನ ಅವರು ಕೊನೆಯುಸಿರೆಳೆದರು. ಈ ವರ್ಷದ ಅತ್ಯಧಿಕ ಕನಿಷ್ಠ ತಾಪಮಾನ 33.8 ಡಿಗ್ರಿ ಸೆಲ್ಷಿಯಸ್ ಮಂಗಳವಾರ…

Read More