Author: admin

ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿಗೆ  ಸಂತ್ರಸ್ತೆಯನ್ನೇ ಮದುವೆಯಾಗಲು ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್‌ ಅಪರೂಪದ ಆದೇಶ ಹೊರಡಿಸಿದೆ. ಆರೋಪಿಯ ಲೈಂಗಿಕ ಸಂಪರ್ಕದಿಂದ ಸಂತ್ರಸ್ತೆಗೆ ಮಗು ಜನಿಸಿದೆ. ಸಂತ್ರಸ್ತೆಗೆ ಸದ್ಯ 18 ವರ್ಷ. ಈ ಹಿಂದೆ ಏನೆಲ್ಲಾ ಘಟನೆಗಳು ನಡೆದಿವೆ ಎನ್ನುವುದು ಮಗುವಿಗೆ ತಿಳಿದಿಲ್ಲ. ಮಗು ಮತ್ತು ಸಂತ್ರಸ್ತೆಯ ಹಿತ ರಕ್ಷಿಸಬೇಕಿದೆ. ಮಗು ಭವಿಷ್ಯದಲ್ಲಿ ಯಾವುದೇ ರೀತಿಯಲ್ಲಿ ಅವಮಾನಕ್ಕೆ ಗುರಿಯಾಗಬಾರದು ಎಂದು ಹೈಕೋರ್ಟ್‌ ಮೇಲಿನ ಆದೇಶ ಹೊರಡಿಸಿದೆ. ಪೋಕ್ಸೋ ಕಾಯ್ದೆಯಡಿ ತನ್ನ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಲು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಸಂತ್ರಸ್ತೆಯನ್ನು ಮದುವೆಯಾಗಲು ಜೂ.17ರಿಂದ ಅನ್ವಯವಾಗುವಂತೆ ಜು.3ರವರೆಗೆ ಆರೋಪಿಯನ್ನು ಮಧ್ಯಂತರ ಜಾಮೀನು ಮೇಲೆ ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ. ಸಂತ್ರಸ್ತೆಯನ್ನು ಮದುವೆಯಾಗಿ ಜು.3ರ ಸಂಜೆ ಹಿಂದಿರುಗಬೇಕು. ಜು.4ರಂದು ವಿವಾಹ ನೋಂದಣಿ ಪತ್ರವನ್ನು ಕೋರ್ಟ್‌ಗೆ ಸಲ್ಲಿಸಬೇಕು. ಜಾಮೀನು ಮೇಲೆ ಹೊರಗಿರುವ ಸಮಯದಲ್ಲಿ ಆರೋಪಿ ಸಂಬಂಧಪಟ್ಟ ಪೊಲೀಸ್‌…

Read More

ಕಳಸ: ಮೂಡಿಗೆರೆ ತಾಲ್ಲೂಕಿನ ವಿವಿಧ ಭಾಗದಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಸಾವಪ್ಪಿರುವ ಘಟನೆ ನಡೆದಿದೆ. ಕಳಸ ಪಟ್ಟಣ ಸಮೀಪದ ಅಂಬಾತೀರ್ಥದ ಭದ್ರಾ ನದಿಯಲ್ಲಿ ಮಧ್ಯಪ್ರದೇಶದ ಕೂಲಿ ಕಾರ್ಮಿಕರೊಬ್ಬರು ಮುಳುಗಿ ಮೃತಪಟ್ಟಿದ್ದಾರೆ. ಸುಂದರಿ ಎಸ್ಟೇಟಿನಲ್ಲಿ ಕೆಲಸ ಮಾಡುತ್ತಿದ್ದ ಸಾಗರ ತಮ್ಮ ಸ್ನೇಹಿತನ ಜೊತೆ ನದಿಯಲ್ಲಿ ಸ್ನಾನ ಮಾಡಲು ಇಳಿದಾಗ ಅವಘಡ ಸಂಭವಿಸಿದೆ. ಆಳವಾದ ಪ್ರದೇಶದಲ್ಲಿ ಮುಳುಗಿದ್ದ ಅವರ ಮೃತದೇಹ ಇನ್ನೂ ಪತ್ತೆ ಆಗಿರಲಿಲ್ಲ. ನಂತರ ಮುಳುಗು ತಜ್ಞ ಈಶ್ವರ್ ಮಲ್ಪೆ ಮೃತದೇಹವನ್ನು ಪತ್ತೆ ಮಾಡಿದರು. ಶೌರ್ಯ ವಿಪತ್ತು ತಂಡದ ಸದಸ್ಯರು ಮೃತದೇಹವನ್ನು ನೀರಿನಿಂದ ಮೇಲೆತ್ತಲು ಸಹಕಾರ ನೀಡಿದರು. ಈಜಲು ಹೋಗಿ ಮೃತ: ಆಲ್ದೂರು ಸಮೀಪದ ವಗರ್ ರಸ್ತೆ ದೋಣಗುಡಿಗೆ ಗ್ರಾಮದ ಬಾಬು ಅಕ್ಕಮ್ಮ ದಂಪತಿ ಪುತ್ರ ಪೂರ್ಣೇಶ್ ಮನೆಯ ಸಮೀಪದ ಕೃಷಿಹೊಂಡದಲ್ಲಿ ಈಜಲು ಹೋಗಿ ಮೃತಪಟ್ಟಿದ್ದಾನೆ. ಮೂಡಿಗೆರೆ ತಾಲ್ಲೂಕು ಹೆಸಗಲ್ ವಲಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಈಜು ತಜ್ಞರಾದ ಹಾಂದಿ ರಾಕೇಶ್, ಪ್ರಶಾಂತ್, ಅಭಿಲಾಶ್ ಯುವಕನ ಮೃತದೇಹವನ್ನು ಕೃಷಿ ಹೊಂಡದಿಂದ ಹೊರತೆಗೆಯಲು…

Read More

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಬಂಧನವಾಗಿದ್ದು, ಇದೀಗ ದರ್ಶನ್ ವಿರುದ್ಧ ನಿರ್ಮಾಪಕ ಉಮಾಪತಿ ಗೌಡ ಟೀಕೆ ಮಾಡಿದ್ದಾರೆ. ಉಮಾಪತಿ ಗೌಡ ನಟ ದರ್ಶನ್‌ ವಿರುದ್ಧ ಮೊದಲಿನಿಂದಲೂ ಕಿಡಿಕಾರುತ್ತಲೇ ಬಂದಿದ್ದು, ಇದೀಗ ಮತ್ತೊಮ್ಮೆ, ನಟನ ವಿರುದ್ಧ ಟೀಕೆ ಮಾಡಿದ್ದಾರೆ. ಉಮಾಪತಿ ಅವರು ಮಾಡಿದ ಪಾಪ ಕರ್ಮಗಳು ಅವರನ್ನೇ ಕಿತ್ತು ತಿನ್ನುತ್ತಿದೆ ಎಂದು ಹೇಳಿದ್ದಾರೆ. ನಾನು ದರ್ಶನ್ ಅವರಿಂದ ದೂರಾಗಿದ್ದು ಒಳ್ಳೆಯದ್ದೇ ಆಯಿತು. ಭಗವಂತ ನನ್ನನ್ನು ಕಾಪಾಡಿದ. ವ್ಯಕ್ತಿ ಬೆಳೆಯಬೇಕಾದ್ರೆ, ಗುರು ಮತ್ತು ಗುರಿ ಇರಬೇಕು. ಇಲ್ಲ ಅಂದ್ರೆ ಈ ರೀತಿ ಆಗುತ್ತದೆ. ಇನ್ನು ಕೋಟಿ ಆಸ್ತಿ, ಬೆಲೆ ಬಾಳುವ ಕಾರು, ಮನೆ ಇದ್ಯಾವುದು ಲೆಕ್ಕಕ್ಕೆ ಬರೋದಿಲ್ಲ, ದೇಹದಲ್ಲಿ ರೋಗ ಇದ್ರೆ ಏನು ಪ್ರಯೋಜನ. ದರ್ಶನ್ ಗೆ ಸ್ವಲ್ಪ ಕೋಪ ಜಾಸ್ತಿ ಎಂದು ಉಮಾಪತಿ ಗೌಡ ಹೇಳಿದ್ದಾರೆ. ದರ್ಶನ್  ಮಾಡಿರೋದು ಅಪರಾಧ. ಕಾನೂನಿನಲ್ಲಿ ಏನಾಗುತ್ತೋ ಆಗಲಿ. ರೇಣುಕಾ ಸ್ವಾಮಿ ಕುಟುಂಬದ ಜತೆ ನಾನು ನಿಲ್ಲುತ್ತೇನೆ. ದರ್ಶನ್ ರಿಂದ ಇದುವರೆಗೂ ಶೋಷಣೆಗೆ ಒಳಗಾದವರು ಹಲವರು…

Read More

ತುಮಕೂರು: ಬೇರೆ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೆಚ್ಚಿನ ತೆರಿಗೆ ವಿಧಿಸಲಾಗುತ್ತಿದೆ ಎಂದು ಪ್ರಸ್ತುತ ಬೆಲೆ ಏರಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಿ ಶ್ರೀ ಶಿವಕುಮಾರ ಸ್ವಾಮೀಜಿಯವರ ದರ್ಶನ ಪಡೆದರು ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್ ಡೀಸೆಲ್ ದರ ಏರಿಕೆ, ವಿದ್ಯುತ್ ದರ ಏರಿಕೆ, ಸ್ಟ್ಯಾಂಪ್ ಡ್ಯೂಟಿ ದರ ಏರಿಕೆ ಆರ್ಥಿಕ ಸಂಪನ್ಮೂಲವನ್ನು ಕ್ರೂಡೀಕರಿಸಲಾಗಿದ್ದು ಅದೆಲ್ಲವನ್ನು ಯಾವ ರೀತಿ ಬಳಸಿಕೊಳ್ಳುತ್ತಿದೆ, ಇನ್ನೊಂದೆಡೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಿಸಿ ಅದನ್ನು ಲೋಕಸಭಾ ಚುನಾವಣೆಗೆ ಬಳಸಿಕೊಳ್ಳಲಾಗಿದೆ. ಇದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮವಲೋಕನ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು. ತೈಲಬೆಲೆ ಏರಿಕೆ ಒಂದು ರೀತಿ ರೈತ ಸಮುದಾಯದ ಮೇಲೆ ಪರೋಕ್ಷ ಪರಿಣಾಮ ಬೀರುತ್ತಿದೆ.…

Read More

ಅಂಧ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಹುಣಸೂರು ತಾಲ್ಲೂಕು ಬಿಳಿಕೆರೆ ಹೋಬಳಿ ಕೊಮ್ಮೆಗೌಡನ ಕೊಪ್ಪಲು ಗ್ರಾಮದ ವಾಸಿ 50 ವರ್ಷದ ಚಲುವರಾಜು ಬಿನ್ ಸೀನೇಗೌಡ ಶಿಕ್ಷೆಗೆ ಗುರಿಯಾದ ಆರೋಪಿ. 16-08-2019 ರಂದು ಪ್ರಕರಣದ ಸಂತ್ರಸ್ತ ಅಂಧ ಮಹಿಳೆಯು ಮನೆಯಲ್ಲಿ ಒಬ್ಬಳೇ ವಾಸವಿದ್ದಾಗ ಆರೋಪಿ ಚಲುವರಾಜು ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಅಪರಾಧ ಮಾಡುವ ಉದ್ದೇಶದಿಂದ ಸಂತ್ರಸ್ತ ಮಹಿಳೆಯ ಮನೆಗೆ ಅತಿಕ್ರಮ ಪ್ರವೇಶ ಮಾಡಿ ಸಂತ್ರಸ್ತೆ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ, ಕತ್ತನ್ನು ಹಿಸುಕಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ(ಅತ್ಯಾಚಾರ)ವೆಸಗಿದ್ದನು. ನಂತರ ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ನಿನ್ನನ್ನು ಮುಗಿಸುತ್ತೇನೆಂದು ಕೊಲೆ ಬೆದರಿಕೆ ಹಾಕಿದ್ದ. ಈ ಬಗ್ಗೆ ಸಂತ್ರಸ್ತೆಯ ಅತ್ತಿಗೆ ದೂರು ದಾಖಲಿಸಿದ್ದ ಹಿನ್ನೆಲೆಯಲ್ಲಿ ಬಿಳಿಕೆರೆ ಪೊಲೀಸ್ ಠಾಣೆಯ ಅಂದಿನ ವೃತ್ತ…

Read More

ತುಮಕೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ. ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಯುವತಿ ಸಾವಿಗೆ ಶರಣಾಗಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪುತ್ರಿ ವರ್ಷಿಣಿ (19), ಮೃತ ವಿದ್ಯಾರ್ಥಿನಿ. ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದ ವಿದ್ಯಾರ್ಥಿನಿ, ಕಾಲೇಜಿಗೆ ಪ್ರತಿದಿನ ಊರಿನಿಂದ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಳು. ಇಂದು ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವರ್ಷಿಣಿಗೆ ಆರೋಗ್ಯ ಸಮಸ್ಯೆ ಇತ್ತು ಎಂದು ಹೇಳಲಾಗುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅರಸೀಕೆರೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ತಿಪಟೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು. ಘಟನೆ ಸಂಬಂಧ ಅರಸೀಕೆರೆ…

Read More

ಬಿಹಾರದ ಬಂಕಾದಲ್ಲಿ ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿ ಸತ್ತ ಹಾವು ಪತ್ತೆಯಾದ ಘಟನೆ ಜರುಗಿದೆ. ಬಿಹಾರದ ಬಂಕಾದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ರಿಷಿ ಸಿಂಗ್ ಕಾಲೇಜಿನ ಅವ್ಯವಸ್ಥೆಯಿಂದ ಹಿಡಿದು ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವ ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾನೆ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಊಟದಲ್ಲಿ ಸತ್ತ ಹಾವು ಇತ್ತು ಎಂದು ತನ್ನ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಬರೆದಿದ್ದಾನೆ. ಆ ಆಹಾರವನ್ನು ಸೇವಿಸಿದ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದರು ಎಂಬುದಾಗಿ ತಿಳಿಸಿದ್ದಾನೆ. ಇದಕ್ಕೆ ಸಂಬಂಧಿಸಿದ ಪೋಟೊಗಳನ್ನು ಪೋಸ್ಟ್ ಮಾಡಿದ್ದಾನೆ. ಹಾಗೇ ಮತ್ತೊಂದು ಪೋಸ್ಟ್ ನಲ್ಲಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಬ್ರೆಡ್ನ ಬಗ್ಗೆ ತಿಳಿಸಿದ್ದಾನೆ. ಬ್ರೆಡ್ ಗೆ ಅವಧಿ ಮೀರಿದ ಕಾರಣ ಅದರಲ್ಲಿ ಇರುವೆ, ಹುಳುಗಳು ಇವೆ. ಅದನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಇದು ವಿದ್ಯಾರ್ಥಿಗಳ ಆರೋಗ್ಯವನ್ನು ಹಾಳುಮಾಡುತ್ತದೆ ಎಂದು ಅದಕ್ಕೆ ಸಂಬಂಧಪಟ್ಟ ವಿಡಿಯೊ ತುಣುಕೊಂದನ್ನು ಪೋಸ್ಟ್ ಮಾಡಿದ್ದಾನೆ. ಅಲ್ಲದೇ ಇದರ ಕುರಿತು ಕ್ರಮ ತೆಗೆದುಕೊಳ್ಳಲು ಕಾಲೇಜು ಆಡಳಿತ ಮತ್ತು ಸ್ಥಳೀಯ…

Read More

ಡಿಬಾಸ್ ಜೈಲಿಂದ ಹೊರಗಡೆ ಬಂದಿಲ್ಲಾಂದ್ರೆ ನನ್ ಬದುಕಿರೋಲ್ಲ ಎಂದು ಹೇಳುವ ಮೂಲಕ ದರ್ಶನ್ ಅಭಿಮಾನಿ ಹುಚ್ಚಾಟ ಮೆರೆದಿದ್ದಾನೆ. ದರ್ಶನ್ ರನ್ನು ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಈ ಸುದ್ದಿ ಫ್ಯಾನ್ಸ್ ಗಳಿಗೆ ದೊಡ್ಡ ಶಾಕ್ ನೀಡಿದೆ. ದರ್ಶನ್ ಕೊಲೆ ಆರೋಪಿಯಾಗಿದ್ದರೂ ಕೆಲವು ಹುಚ್ಚು ಅಭಿಮಾನಿಗಳು ನಮ್ ಡಿ ಬಾಸ್ ಯಾವುದೇ ತಪ್ಪು ಮಾಡಿಲ್ಲ. ನಮ್ಮ ಸಪೋರ್ಟ್ ಯಾವತ್ತಿದ್ರೂ ಅವರಿಗೆ ಎಂದೆಲ್ಲಾ ಹೇಳ್ತಿದ್ದಾರೆ. ಈ ನಡುವೆ ಇಲ್ಲೊಬ್ಬ ಅಂಧಾಭಿಮಾನಿ ಡಿ ಬಾಸ್ ಏನಾದ್ರೂ ಜೈಲಿಂದ ಹೊರಗಡೆ ಬಂದಿಲ್ಲಾಂದ್ರೆ ನಾನು ಬದುಕಿರೋಲ್ಲ, ಎಲ್ಲಾದ್ರೂ ಹೋಗಿ ಸಾಯ್ತೀನಿ ಅಂತ ಹುಚ್ಚು ಮಾತುಗಳನ್ನಾಡಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗುತ್ತಿದೆ. ವಿಡಿಯೋವನ್ನು ʼಕರ್ನಾಟಕ ನ್ಯಾಯ ಬೆಲೆ ಅಂಗಡಿʼ ಎಂಬ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ನಟ ದರ್ಶನ್ ಬಂಧನಕ್ಕೊಳಗಾದ ಆಘಾತದಲ್ಲಿ ಅಭಿಮಾನಿಯೊಬ್ಬ ನಾನು ಇನ್ಮೇಲೆ ಬದುಕಿರೋಕೆ ಚಾನ್ಸೇ ಇಲ್ಲ. ಡಿ ಬಾಸ್ ಹೊರಗಡೆ ಬಂದಿಲ್ಲಾ ಅಂದ್ರೆ ನನ್ ಹೆಣ ಕೂಡಾ ಸಿಗೋಲ್ಲ, ಎಲ್ಲೋ ಮೂಲೆಗೆ…

Read More

ಇತ್ತೀಚೆಗಷ್ಟೇ ಕಾರು ಕಲಿತಿದ್ದ ಯುವತಿ, ಕಾರು ಚಲಾಯಿಸುತ್ತಾ ರಿವರ್ಸ್ ಗೇರ್ ನಲ್ಲಿದ್ದಾಗ ಎಕ್ಸಲೇಟರ್ ಒತ್ತಿದ್ದಾಳೆ, ಪರಿಣಾಮ ಕಾರು ಕಂದಕಕ್ಕೆ ಬಿದ್ದು ಆಕೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಛತ್ರಿಪತಿ ಸಂಭಾಜಿನಗರದಲ್ಲಿ 23 ವರ್ಷದ ಯುವತಿ ರಿವರ್ಸ್ ಗೇರ್ ನಲ್ಲಿ ಎಕ್ಸಲೇಟರ್ ಒತ್ತಿದ ಕಾರಣ ಕಾರು ಹಿಂಬದಿಯ ಕ್ರ್ಯಾಶ್ ಬ್ಯಾರಿಯರ್ ಅನ್ನು ಮುರಿದು ಕಂದಕಕ್ಕೆ ಬಿದ್ದಿದೆ. ಸುಲಿಭಂಜನ್ ಪ್ರದೇಶದಲ್ಲಿ ಜೂ.17ರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಯುವತಿಯನ್ನು ಶ್ವೇತಾ ಸುರ್ವಾಸೆ ಎಂದು ಗುರುತಿಸಲಾಗಿದೆ. ಸ್ನೇಹಿತ ಶಿವರಾಜ್ ಮುಳೆ ಕಾರಿನಲ್ಲಿ ಸಂಭಾಜಿನಗರದಿಂದ ದತ್ ಮಂದಿರ ಪ್ರದೇಶಕ್ಕೆ ಬಂದಿದ್ದರು. ಶಿವರಾಜ್ ಇತ್ತೀಚೆಗಷ್ಟೇ ಶ್ವೇತಾಳಿಗೆ ಕಾರು ಓಡಿಸಲು ಕಲಿಸಿದ್ದ ಎನ್ನಲಾಗಿದೆ. ಶ್ವೇತಾಗೆ ಕಾರು ಓಡಿಸುವಾಗ (reels)ರೀಲ್ ಗಳನ್ನು ತಯಾರಿಸುವ ಆಸೆ ಇತ್ತು. ಮೊಬೈಲನ್ನು ಶಿವರಾಜ್ ಗೆ ಕೊಟ್ಟು ತನ್ನ ರೀಲ್ಸ್ ಮಾಡುವಂತೆ ಕೇಳಿದ್ದಳು. ಇದ್ದಕ್ಕಿದ್ದಂತೆ ಕಾರು ರಿವರ್ಸ್ ಗೇರ್‌ನಲ್ಲಿ ಚಲಿಸಲು ಪ್ರಾರಂಭಿಸಿತು ಮತ್ತು ಶ್ವೇತಾ ಏನು ಮಾಡಬೇಕೆಂದು ತೋಚದೆ ಮತ್ತೆ ಎಕ್ಸಲೇಟರ್ ಅನ್ನು ಒತ್ತಿದ್ದಾಳೆ. ನಿಯಂತ್ರಣ…

Read More

ಇತ್ತೀಚೆಗೆ ಪ್ರೀತಿಸಿದ ಯುವತಿ ಸಿಗಲಿಲ್ಲ ಎನ್ನುವ ಕಾರಣಕ್ಕೆ ಕೊಡುಗು ಮತ್ತು ಹುಬ್ಬಳ್ಳಿಯಲ್ಲಿ ಭೀಕರ ಕೊಲೆ ಪ್ರಕರಣ ನಡೆದಿತ್ತು. ಅಂತಹದ್ದೇ ವಿಕೃತ ಕೊಲೆ ಪ್ರಕರಣ ಮತ್ತೆ ನಡೆದಿದೆ. ವ್ಯಕ್ತಿಯೊಬ್ಬ ಲವ್ ಬ್ರೇಕಪ್ ಎಂದಿದ್ದಕ್ಕೆ ಪ್ರೇಯಸಿಯನ್ನು ನಡು ರಸ್ತೆಯಲ್ಲಿಯೇ ಸ್ಪ್ಯಾನರ್‌ನಿಂದ ಹೊಡೆದು ಕೊಲೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. ಈ ಕೃತ್ಯದ ಭೀಕರ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಮುಂಬೈ ಬಳಿಯ ವಸಾಯ್ ಪ್ರದೇಶದ ರಸ್ತೆಯೊಂದರಲ್ಲಿ 20 ವರ್ಷದ ಆರತಿ ಯಾದವ್ ನಡೆದುಕೊಂಡು ಹೋಗುತ್ತಿರುತ್ತಾರೆ. ಆಗ 29 ವರ್ಷದ ರೋಹಿತ್ ಯಾದವ್ ಎಂಬಾತ ಸ್ಪ್ಯಾನರ್ ಹಿಡಿದುಕೊಂಡೇ ಓಡಿ ಬಂದು ಯುವತಿ ಮೇಲೆ ದಾಳಿ ಮಾಡಿದ್ದಾನೆ. ಯುವತಿ ತಲೆಗೆ, ಎದೆಗೆ ಸ್ಪ್ಯಾನರ್ ನಿಂದ ಹೊಡೆದು, ಆಕೆ ನೆಲಕ್ಕೆ ಬಿದ್ದ ಮೇಲೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಇದೇ ವೇಳೆ ಒಂದಿಬ್ಬರು ವ್ಯಕ್ತಿಯನ್ನು ತಡೆಯಲು ಪ್ರಯತ್ನಿಸಿದರೂ ಅಷ್ಟೊತ್ತಿಗಾಗಲೇ ಗಂಭೀರವಾಗಿ ಗಾಯಗೊಂಡಿದ್ದ ಆರತಿ ಮೃತಪಟ್ಟಿದ್ದಾರೆ, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ…

Read More