Subscribe to Updates
Get the latest creative news from FooBar about art, design and business.
- KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್: ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ
- ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
- ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
- ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
- ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
- ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
- ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
- ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
Author: admin
ಕೋಡಿ ಮಠದ ಡಾ.ಶಿವಾನಂದ ಶಿವಯೋಗಿ ಮಹಾ ಸ್ವಾಮೀಜಿಗಳು ನಟ ದರ್ಶನ್, ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ, ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಾಗೂ ಮಳೆ–ಬೆಳೆ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಈಗ ದೇಶದಲ್ಲಿ ಕ್ರೋಧಿ ನಾಮ ಸಂವತ್ಸರ ಇದೆ. ಶುಭಗಳಿಗಿಂತ ಅಶುಭಗಳೇ ಹೆಚ್ಚಾಗಿ ನಡೆಯುತ್ತವೆ. ದೇಶದಲ್ಲಿ ಜಲಕಂಟಕ, ಅಗ್ನಿಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆ. ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿ ಸಾಧ್ಯತೆ ಇದೆ ಎಂದು ಕೋಡಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು (Kodi Mutt Swamiji) ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣು ಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಆಪತ್ತು ಇರುವುದಿಲ್ಲ. ಶ್ರಾವಣದಲ್ಲಿ ನಾನು ಮತ್ತೊಂದು ಸ್ಫೋಟಕ ಭವಿಷ್ಯ ಹೇಳುತ್ತೇನೆ. ಕೇಂದ್ರ ಸರ್ಕಾರ ಹಾಗೂ ಮೋದಿ ಅವರ ಬಗ್ಗೆ ಶ್ರಾವಣದಲ್ಲಿ ಮಾತನಾಡುತ್ತೇನೆ ಎಂದಿದ್ದಾರೆ. ಕೋಪದ ಕೈಗೆ ಬುದ್ಧಿ ಕೊಟ್ಟರೆ ಈ ರೀತಿಯ ಅವಗಡಗಳು ಸಂಭವಿಸುತ್ತವೆ. ಕರೆಯದೆ ಬರುವವನು ಕೋಪ,…
ತುಮಕೂರು: ಚಿನ್ನೆನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಇಬ್ಬರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನೆನಹಳ್ಳಿ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆಎನ್ ರಾಜಣ್ಣ ಭೇಟಿ ನೀಡಿ ಗ್ರಾಮದಲ್ಲಿ ಪರಿಶೀಲನೆ ನಡೆಸಿದರು. ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಸಚಿವ ಪರಮೇಶ್ವರ್ ಹಾಗೂ ಕೆ.ಎನ್. ರಾಜಣ್ಣ ಅವರಿಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಓ ಪ್ರಭು, ಎಸ್ ಪಿ ಅಶೋಕ್ ಕೆವಿ ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದರು. ಕಳೆದ ಭಾನುವಾರ ಚಿನ್ನೆನಹಳ್ಳಿ ಗ್ರಾಮದ ಜನರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿತ್ತು. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ರು, 250 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ರು. ಅಲ್ಲದೇ ಕಳೆದ ಎರಡು ದಿನಗಳ ಹಿಂದೆ ವಾಂತಿ ಭೇದಿ ಕಾಣಿಸಿಕೊಂಡಿದ್ದ ವ್ಯಕ್ತಿಯೊಬ್ಬರಿಗೆ ಕಾಲಾರಾ ಖಾಯಿಲೆ ಪತ್ತೆ ಆಗಿತ್ತು. ಈ ಹಿನ್ನೆಲೆ ಚಿನ್ನೆನಹಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಕೊರಟಗೆರೆ: ಕರ್ನಾಟಕ ಸರ್ಕಾರದ ಅದೇಶದಂತೆ ಜೂನ್ 19ರಂದು ಕೊರಟಗೆರೆ ತಾಲ್ಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮನ್ನು ಆಯೋಜಿಸಲಾಗಿದೆ ಎಂದು ತಹಶೀಲ್ದಾರ್ ಮಂಜುನಾಥ್ ತಿಳಿಸಿದ್ದಾರೆ. ಅವರು ಪತ್ರಿಕಾ ಹೇಳಿಕೆ ನೀಡಿ, ಸರ್ಕಾರ ಸುತ್ತೋಲೆಯಂತೆ ಸಾರ್ವಜನಿಕರ ಕುಂದು ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಜೂನ್ 2024 ರ ಮೊದಲವಾರದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮವು ನಡೆದಿದ್ದು, ಜೂನ್ ಕೊನೆಯ ವಾರಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮನ್ನು ಹಮ್ಮಿಕೊಂಡಿದ್ದು, ಈ ಸಂಬಂಧ ಸರ್ಕಾರದ ಸುತ್ತೋಲೆಯಂತೆ ಕೊರಟಗೆರೆ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಕೊರಟಗೆರೆ ಪಟ್ಟಣದ ಶ್ರೀ ಮಾರುತಿ ಕಲ್ಯಾಣಮಂಟಪದಲ್ಲಿ ಜೂನ್ 19 ಬುಧವಾರ ದಂದು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮಕ್ಕೆ ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಜನರ ಅಹವಾಲುಗಳನ್ನು ಸ್ವೀಕರಿಸುವರು ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಜರಿರುವರು ಆದರಿಂದ ತಾಲ್ಲೂಕಿನ ಎಲ್ಲಾ ಸಾರ್ವಜನಿಕರು ತಮ್ಮ…
ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಪಟ್ಟಂತೆ ಅನ್ನಪೂರ್ಣೇಶ್ವರಿ ನಗರ ಠಾಣೆ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ , ಅಸ್ವಸ್ಥಗೊಂಡಿದ್ದರಿಂದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವೈದ್ಯರು ಬಂದಿದ್ದರು. ಆದರೆ, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಪವಿತ್ರಾಗೌಡಳನ್ನು ಮಲ್ಲತ್ತಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಭಾನುವಾರ ಆರ್.ಆರ್.ನಗರ ಮನೆಯಲ್ಲಿ ದಿನವಿಡೀ ಪೊಲೀಸರು ಮಹಜರು ನಡೆಸಿದ್ದು, ಆ ಬಳಿಕ ಪವಿತ್ರಾ ಅವರು ಸುಸ್ತಾಗಿದ್ದರು. ಮಂಗಳವಾರ ಬೆಳಿಗ್ಗೆ ತೀವ್ರ ಆಯಾಸ ಎಂದ ಪವಿತ್ರ ಗೌಡ ಅವರನ್ನು ಪೊಲೀಸರು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡರನ್ನು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ. ವಿಚಾರಣೆ ಸಮಯದಲ್ಲಿ ಅವರನ್ನು ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗುತ್ತಿತ್ತು. ಇಂದು (ಜೂನ್ 18) ವಿಚಾರಣೆ ಸಮಯದಲ್ಲಿ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ದು, ಪೊಲೀಸರು ಕೂಡಲೇ ಠಾಣೆಗೆ ವೈದ್ಯರನ್ನು ಕರೆಸಿ ಪರಿಶೀಲಿಸಿದ ಬಳಿಕ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ನಾಗರಭಾವಿಯಲ್ಲಿರುವ ಮಲ್ಲತಹಳ್ಳಿ ಸರ್ಕಾರಿ ಆಸ್ಪತ್ರೆಗೆ ಪವಿತ್ರಾರನ್ನು ದಾಖಲು…
ಸರಗೂರು: ತಾಲ್ಲೂಕಿನ ಪಟ್ಟಣದ 7 ನೇ ವಾರ್ಡಿನ ಇರುವ ಸತ್ಯಪ್ಪ ಕೊಂಡೋತ್ಸವ ಗಾಣಿಗ ಸಮಾಜ ವತಿಯಿಂದ ಮಂಗಳವಾರ ದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಕೊಂಡೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು. ಉತ್ಸವದ ಅಂಗವಾಗಿ ದೇವಾಲಯವನ್ನು ಸಿಂಗರಿಸಲಾಗಿತ್ತು. ಬೆಳಗ್ಗೆ ಮಡೆ ಸೇವೆ, ತಂಬಿಟ್ಟು ಆರತಿ ನಡೆಯಿತು. ನಂತರ ಕಬಿನಿ ಜಲಾಶಯದ ಹೊಳೆಯಲ್ಲಿ ವಾದ್ಯ ಮೇಳದೊಂದಿಗೆ ಸತ್ಯಪ್ಪ ವಿಗ್ರಹವನ್ನು ಕಬಿನಿ ಜಲಾಶಯದ ಹೊಳೆಯ ಬಳಿ ತೆಗೆದುಕೊಂಡು ಹೋಗಿ ಪೂಜೆ ಸಲ್ಲಿಸಿ, ಮೆರವಣಿಗೆ ಮೂಲಕ ದೇವಾಲಯಕ್ಕೆ ತರಲಾಯಿತು. ನಂತರ ಹರಕೆ ಹೊತ್ತವರ ಪೈಕಿ ನಾಲ್ವರು ಕೊಂಡ ಹಾಯುವ ಮೂಲಕ ಭಕ್ತಿ ಸಮರ್ಪಿಸಿದರು. ಪಟ್ಟಣದ ಎಲ್ಲಾ ವಾರ್ಡಿನ ಸಾವಿರಾರು ಭಕ್ತರು ಉತ್ಸವದಲ್ಲಿ ಭಾಗಿಯಾಗಿದ್ದರು. ಗ್ರಾಮದ ತುಂಬ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಎಲ್ಲೆಂದರಲ್ಲಿ ಭಕ್ತ ಸಮೂಹ ನೆರೆದಿತ್ತು. ಜಾತ್ರೆ ವಹಿವಾಟು ಜೋರಾಗಿತ್ತು. ಈ ಸಂದರ್ಭದಲ್ಲಿ ಗಾಣಿಗ ಸಮಾಜದ ಮುಖಂಡರು ವೆಂಕಟರಾಮು, ಶಿವಲಿಂಗ ಶೆಟ್ಟಿ, ಗುತ್ತಿಗೆದಾರ ಶಿವಣ್ಣ, ನಂಜುಂಡ, ಬಿಎಸ್ ಎನ್ ಎಲ್ ನಾಗರಾಜು, ಟೀ ಅಂಗಡಿ ವೆಂಕಟೇಶ್…
ತುರುವೇಕೆರೆ: ಕ್ಷೇತ್ರದ ಕಲ್ಲೂರು ಗ್ರಾಮದಲ್ಲಿ ನಾಯಿಗಳ ದಾಳಿ ಹೆಚ್ಚಾಗಿದ್ದು ಗ್ರಾಮದಲ್ಲಿ 500ಕ್ಕೂ ಹೆಚ್ಚು ನಾಯಿಗಳಿವೆ, ಈ ಪೈಕಿ ಸುಮಾರು ನಾಲ್ಕರಿಂದ ಐದು ನಾಯಿಗಳಿಗೆ ಹುಚ್ಚು ಹಿಡಿದಿದೆ ಎಂದು ತುರುವೇಕೆರೆ ಕ್ಷೇತ್ರದ ಮಾಜಿ ಶಾಸಕ ಮಸಾಲ ಜಯರಾಮ್ ಹೇಳಿದ್ದಾರೆ. ಪಟ್ಟಣದ ಸಮೀಪವಿರುವ ತಮ್ಮ ಫಾರ್ಮ್ ಹೌಸ್ ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ದಿನಗಳ ಕೆಳಗೆ ಕಲ್ಲೂರು ಗ್ರಾಮದ ಸುಮಾರು 65 ವರ್ಷದ ವೃದ್ದೆ ಮೇಲೆ ನಾಯಿಗಳು ದಾಳಿ ನಡೆಸಿವೆ. ದಾಳಿಯಲ್ಲಿ ವೃದ್ದೆಯ ತಲೆ ಮುಂದಿನ ಭಾಗ, ಮೆದುಳಿನ ಭಾಗ, ಕೈ ಕಾಲು, ಸೇರಿದಂತೆ ಮನಬಂದಂತೆ ಎಲ್ಲಾ ಕಡೆಗಳನ್ನು ಕಡಿದಿದ್ದು, ಕಡಿತದಿಂದ ವೃದ್ದೆಯು ನೆಲಕ್ಕೆ ಬಿದ್ದಿದ್ದು ತಕ್ಷಣ ವೃದ್ದೆಯನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೃದ್ದೆಗೆ ಚಿಕಿತ್ಸೆ ನೀಡಲು ಸ್ಥಳೀಯ ಆಸ್ಪತ್ರೆಯಲ್ಲಿ ಆಂಟಿ ರೇಬಿಸ್ ಲಸಿಕೆ ಲಭ್ಯವಿಲ್ಲದೆ ಇರುವುದರಿಂದ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಅಲ್ಲಿಯೂ ಸಹ ಲಸಿಕೆ ಲಭ್ಯವಿಲ್ಲದೆ ತುಂಬಾ ತೊಂದರೆಯಾಗಿದ್ದು ಗಾಯಗಳಿಂದ ನರಳುತ್ತಿದ್ದಾಗ…
ಪಾವಗಡ : ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ವಿ.ವೆಂಕಟೇಶ್ ರವರ 48 ನೇ ಹುಟ್ಟು ಹಬ್ಬದ ಅಂಗವಾಗಿ ಸೋಮವಾರ ಪಾವಗಡ ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ನೇತೃತ್ವದಲ್ಲಿ ಬೀದಿ ಬದಿ ವ್ಯಾಪಾರಸ್ಥರ ಮಕ್ಕಳಿಗೆ ಶಾಲಾ ಬ್ಯಾಗ್, ಹಾಗೂ ಶಾಲಾ ಪರಿಕರಗಳನ್ನು ವಿತರಿಸಲಾಯಿತು. ಪಾವಗಡ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿರುವ ಜನಾನುರಾಗಿ, ಎಚ್ ವಿ. ವೆಂಕಟೇಶ್ ರವರಿಗೆ ಭಗವಂತ ಮತ್ತಷ್ಟು ಸೇವೆ ಮಾಡುವ ಶಕ್ತಿ ನೀಡಲಿ ಎಂದು ಹುಟ್ಟು ಹಬ್ಬವನ್ನು ಆಚರಿಸಿದ್ದು, ಸುಮಾರು 85 ಬಡ ಮಕ್ಕಳಿಗೆ ಶಾಲಾ ಪರಿಕರಗಳನ್ನು ವಿತರಿಸಿದ್ದೇವೆ ಎಂದು ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ತಿಳಿಸಿದರು. ಈ ಸಂದರ್ಭದಲ್ಲಿ ASI ನಾರಾಯಣಸ್ವಾಮಿ,ಬೀದಿ ಬದಿ ಮಹಿಳಾ ವ್ಯಾಪಾರಸ್ಥರ ಅಧ್ಯಕ್ಷ ಶಶಿಕಲಾ, ಮೋಹನ್, ಅರವಿಂದ್ ಕುಮಾರ್, ಸಾಯಿ, ಇನ್ನು ಮುಂತಾದವರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ದೇಶಾದ್ಯಂತ ಜಿಯೋ ಸರ್ವರ್ ಡೌನ್ ಆಗಿದೆ. ವಾಟ್ಸಾಪ್, ಇನ್ಸ್ಟಾಗ್ರಾಮ್, ಎಕ್ಸ್, ಸ್ನ್ಯಾಪ್ಚಾಟ್, ಯೂಟ್ಯೂಬ್ ಮತ್ತು ಗೂಗಲ್ ಸೇರಿದಂತೆ ಎಲ್ಲಾ ದೈನಂದಿನ ಬಳಕೆಯ ಅಪ್ಲಿಕೇಶನ್ಗಳನ್ನ ಪ್ರವೇಶಿಸಲು ಸಾಧ್ಯವಾಗದ ಕಾರಣ ದೇಶಾದ್ಯಂತ ಬಳಕೆದಾರರು ಜಿಯೋ ಸೇವೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರುತ್ತಿದ್ದಾರೆ. ಕಳೆದ ಬಾರಿ ಏಪ್ರಿಲ್‌ನಲ್ಲೂ ಇದೇ ರೀತಿ ಜಿಯೋ ಸರ್ವರ್ ಸ್ಥಗಿತಗೊಂಡಿದ್ದು, ಈ ಬಾರಿಯೂದೇಶಾದ್ಯಂತ ಸಾವಿರಾರು ಜಿಯೋ ಬಳಕೆದಾದರು ಇದು ಇಂಟರ್ ನೆಟ್ ಸೇವೆಯಲ್ಲಿ ಸಮಸ್ಯೆಗಳನ್ನು ಎದುರಿಸಿದ್ದಾರೆಂದು ವರದಿಯಾಗಿದೆ. ಹಾಗಾಗಿ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ #JioDown ಎಂದು ಹ್ಯಾಶ್ ಟ್ಯಾಗ್ ಬಳಸಿ ಟ್ರೋಲ್ ಮಾಡಿದ್ದರು. ಡೌನ್ ಡೆಕ್ಟ್ ವರದಿಯ ಪ್ರಕಾರ 54% ಬಳಕೆದಾರರು ಮೊಬೈಲ್ ಇಂಟರ್ ನೆಟ್ ಸಮಸ್ಯೆಗಳನ್ನು ಎದುರಿಸಿದರೆ, 38% ಜನರು ಜಿಯೋ ಫೈಬರ್ ಸಮಸ್ಯೆಗಳನ್ನು ಎದುರಿಸಿದ್ದಾರೆ. 7% ಮೊಬೈಲ್ ನೆಟ್ ವರ್ಕ್ ಅಡೆತಡೆಗಳನ್ನು ಅನುಭವಿಸಿದ್ದಾರೆ. ಆದರೂ ಈ ಸಮಸ್ಯೆಗಳ ಬಗ್ಗೆ ಇನ್ನು ಕೂಡಾ ಜಿಯೋ ಕಂಪನಿ ಯಾವುದೇ ಪ್ರತಿಕ್ರಿಯೆಗಳನ್ನು ನೀಡಿಲ್ಲ. ಮಧ್ಯಾಹ್ನ 1:42 ರ ಸುಮಾರಿಗೆ ಸಮಸ್ಯೆ ಉತ್ತುಂಗಕ್ಕೇರಿತು, ಇದರ ಪರಿಣಾಮವಾಗಿ…
ರಾಜ್ಯದ ಉಪ–ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯಾ ಅವರು ತಮ್ಮ ಕಾಲೇಜಿನ ದಿನಗಳಲ್ಲಿ ನಡೆದ ಕಥೆಯನ್ನು ಹೇಳಿಕೊಂಡಿದ್ದಾರೆ. ಐಶ್ವರ್ಯಾ ಕಾಲೇಜು ಓದುವಾಗ ಅವರ ತಂದೆ ಕಾಲೇಜಿನ ಚೇರ್ ಮನ್ ಆಗಿದ್ದರಂತೆ.ಆದರೆ, ಶುರುವಿನಲ್ಲಿ ಆ ಸಂಗತಿ ಯಾರಿಗೂ ಗೊತ್ತಿರಲಿಲ್ಲ. ಆಗ ಸಹಜವಾಗಿಯೇ ಸಾಕಷ್ಟು ಜನರು ಫ್ರೆಂಡ್ಸ್ ಆಗಿದ್ದಾರೆ. ಆದರೆ, ಯಾವಾಗ ಐಶ್ವರ್ಯಾ ಅವರು ಚೇರ್‌ಮನ್ ಮಗಳು ಅಂತ ಗೊತ್ತಾಯ್ತೋ, ಆಗ ಹಲವರು ಅವರಿಂದ ಅಂತರ ಕಾಯ್ದುಕೊಳ್ಳಲು ಶುರುಮಾಡಿದ್ದರಂತೆ. ಜತೆಗೆ, ನಾನು ಚೆನ್ನಾಗಿ ಓದುತ್ತಿದ್ದರೂ, ಎಷ್ಟೇ ಮಾರ್ಕ್ಸ್ ತೆಗೆದುಕೊಂಡರೂ ‘ಅವ್ಳು ಚೇರ್‌ಮನ್ ಮಗ್ಳು ಅಲ್ವಾ?’ ಮಾರ್ಕ್ಸ್ ಕೊಡ್ತಾರೆ ಅವ್ಳಿಗೆ ಅಂತಾನೇ ಹೇಳೋರು. ಅದು ತಪ್ಪು ಅಂತ ನಾನು ಹೇಳಲ್ಲ. ನಿಜವಾಗಿ ಹೇಳಬೇಕೆಂದರೆ ನಾನು ಕಾಲೇಜಿಗೆ ಫಸ್ಟ್ ಡೇ ಹೋದಾಗ್ಲೇ ಗಾಡಿನ ಎಲ್ಲೋ ನಿಲ್ಸಿ ಎಲ್ಲರ ತರ ಕಾಲೇಜಿಗೆ ನಡ್ಕೊಂಡೇ ಹೋಗಿದ್ದೆ. ಆದ್ರೆ ಹೋಗ್ತಾ ಹೋಗ್ತಾ ಗೊತ್ತಾಗೋಯ್ತು ನಾನು ಚೇರ್ ಮನ್ ಮಗಳು ಅಂತ. ಆಮೇಲೆ ಕಾಲೇಜಲ್ಲಿ ನನ್ನ ನೋಡೋ ರೀತಿನೇ ಬದಲಾಗಿ…
ಡಾ. ರಾಜ್’ಕುಮಾರ್ ತಮ್ಮ ಸಿನಿಮಾಗಳಲ್ಲಿ ಸಿಗರೇಟು, ಮದ್ಯ ಇವುಗಳನ್ನು ವಿರೋಧಿಸುತ್ತಲೇ ಡಾ. ರಾಜ್’ಕುಮಾರ್ ರವರು ಸಿನಿಮಾ ಮಾಡಿದವರು. ಹೆಚ್ಚಿನವರಿಗೆ ಇಂದಿಗೂ ಡಾ.ರಾಜ್ ಕುಮಾರ್ ರವರು ಒಂದು ಕಾಲದಲ್ಲಿ ಸಿಗರೇಟು ಸೇದುತ್ತಿದ್ದರು ಅಂದರೆ ಖಂಡಿತ ನಂಬಲಾರರು ಏಕೆಂದರೆ ಅಣ್ಣಾವ್ರು ಸಿಗರೇಟು ಸೇದುತ್ತಿದ್ದ ವಿಷಯ ಎಲ್ಲೂ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದುಕೊಂಡಿಲ್ಲ. ರಾಜ್ ಕುಮಾರ್ ರವರು ಸಿಗರೇಟ್ ಸೇದದೇ ಇರೋದರ ಹಿಂದೆ ಇಷ್ಟೆಲ್ಲಾ ಕಥೆಯಿದ್ದರೂ, ಒಂದು ಕಾಲದಲ್ಲಿ ಅವರು ಸಿಗರೇಟ್ ಸೇದುತ್ತಿದ್ದ ಸಣ್ಣ ಕಥೆಯಿದೆ. ಆಗ ರಾಜ್ ಕುಮಾರ್ ರವರು ದಿನಕ್ಕೆ ಒಂದೋ ಎರಡೋ ಸಿಗರೇಟುಗಳನ್ನು ಸೇದುವ ಚಟವಿತ್ತು. ಅಕಸ್ಮಾತಾಗಿ ಅವರು ಸಿಗರೇಟು ಸೇದುವುದನ್ನು ಕಂಡಾಗ ಅವರ ಅಭಿಮಾನಿಗಳು `ಏನಣ್ಣಾ ನಿಮ್ಮ ಕೈಲಿ ಸಿಗರೇಟ್ ಚೆನ್ನಾಗಿ ಕಾಣಲ್ಲ… ದಯವಿಟ್ಟು ಇದು ಬೇಡಿ’ ಅಂತ ಹೇಳಿದ್ದರು. ಅಂದಿನಿಂದ ರಾಜ್ಕುಮಾರ್ ಯಾರಿಗೂ ಕಾಣದೇ ತಮ್ಮ ಗ್ರೀನ್ ರೂಮ್ನಲ್ಲೋ, ತಮ್ಮ ಖಾಸಗಿ ರೂಮ್ನಲ್ಲೋ ಅಪರೂಪಕ್ಕೆ ಸೇದುತ್ತಿದ್ದರು. ಹೀಗಿರುವಾಗ ಒಂದು ಘಟನೆ ನಡೆಯಿತು. ಒಮ್ಮೆ ಸೆಟ್ ನಲ್ಲಿ ಯಾರೂ ಇಲ್ಲದ ವೇಳೆ…