Subscribe to Updates
Get the latest creative news from FooBar about art, design and business.
- KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್: ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ
- ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
- ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
- ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
- ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
- ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
- ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
- ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
Author: admin
ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿ ಎಂದು ಹಲವು ಕಡೆ ಹೋಮ ಹವನ ಜರುಗುತ್ತಿತ್ತು. ಜನರು ತಮ್ಮದೇ ಆದ ರೀತಿಯಲ್ಲಿ ಬೇಡಿಕೊಳ್ಳುತ್ತಿದ್ದರು. ಆದರೆ ಇಲ್ಲೊಬ್ಬ ಉತ್ತರಕನ್ನಡದ ವಯಸ್ಸಾದ ವ್ಯಕ್ತಿ ಉರುಳು ಸೇವೆ ಹರಕೆ ಹೊತ್ತಿದ್ದರು! ಇಲ್ಲೊಬ್ಬ ವ್ಯಕ್ತಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡಿದ್ದಕ್ಕೆ ಅಭಿಮಾನಿಯೊಬ್ಬರು ಉರುಳುಸೇವೆ ಮಾಡಿ ಹರಕೆ ತೀರಿಸಿದ ಅಪರೂಪದ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನಲ್ಲಿ ನಡೆದಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಹರಿಹರ ಭಟ್ ಅವರು ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಹರಕೆ ಹೊತ್ತಿದ್ದರು. ಅಂಕೋಲಾ ತಾಲ್ಲೂಕಿನ ಹಳವಳ್ಳಿ ಗ್ರಾಮದ ನಿವಾಸಿ ಹರಿಹರ ಭಟ್ ಅವರು ಉರುಳು ಸೇವೆ ಮಾಡುವ ಮೂಲಕ ಪ್ರಧಾನಿ ಮೋದಿ ಅವರ ಮೇಲೆ ತಮ್ಮಗಿರುವ ಅಭಿಮಾನವನ್ನು ತೋರ್ಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ರೇಣುಕಾಸ್ವಾಮಿ ಹತ್ಯೆಯಾಗಿ 10 ದಿನ ಕಳೆದರೂ ಆತನ ಮೊಬೈಲ್ ಸಿಗದಿರುವುದು ಇನ್ನೂ ನಿಗೂಢವಾಗಿ ಉಳಿದಿದೆ. ಹೀಗಾಗಿ ಮೊಬೈಲ್ ಪತ್ತೆ ಹಚ್ಚಲು ಪೊಲೀಸರು ಆರೋಪಿಯನ್ನು ಮತ್ತೆ ಸ್ಥಳ ಮಹಜರು ಮಾಡಲು ಕರೆ ತಂದಿದ್ದಾರೆ ಎನ್ನಲಾಗಿದೆ. ಕೊಲೆ ಪ್ರಕರಣದಲ್ಲಿ ಮೊಬೈಲ್ ಪ್ರಮುಖ ಸಾಕ್ಷ್ಯವಾಗುವ ಕಾರಣ ಪೊಲೀಸರು ಎಲ್ಲಾ ಕಡೆ ಆತನ ಮೊಬೈಲ್ ಗಾಗಿ ಹುಡುಕಾಡಿದ್ದಾರೆ. ಎಲ್ಲಿಯೂ ಮೊಬೈಲ್ ಸಿಗದ ಕಾರಣ ಪೊಲೀಸರು ಕೊನೆಯ ಬಾರಿಗೆ ಸಿಗ್ನಲ್ ಇದ್ದ ಜಾಗವನ್ನು ಸರ್ಚ್ ಮಾಡಿದ್ದಾರೆ. ರಾಜಕಾಲುವೆ ಜಾಗದಲ್ಲೇ ಕೊನೆಯ ಬಾರಿಗೆ ಸಿಗ್ನಲ್ ತೋರಿಸಿದೆ ಎನ್ನಲಾಗಿದೆ. ಈ ಕಾರಣಕ್ಕೆ ಈಗ ಆರೋಪಿ ಪ್ರದೂಶ್ ನನ್ನು ಮತ್ತೆ ಸುಮನಹಳ್ಳಿ ಸತ್ವ ಅಪಾರ್ಟ್‌ಮೆಂಟ್ ಮುಂಭಾಗದಲ್ಲಿರುವ ರಾಜಕಾಲುವೆ ಬಳಿ ಶವ ಎಸೆದ ಜಾಗದತ್ತ ಕರೆತಂದಿದ್ದಾರೆ. ಪೊಲೀಸರ ಮನವಿಯ ಮೇರೆಗೆ ಪೌರ ಕಾರ್ಮಿಕರು ರಾಜಕಾಲುವೆಗೆ ಇಳಿದು ಮೊಬೈಲ್ ಹುಡುಕಾಡಿದ್ದಾರೆ. ಆದರೆ ಮೊಬೈಲ್ ಪತ್ತೆಯಾಗದ ಕಾರಣ ಶೋಧ ಕಾರ್ಯ ನಿಲ್ಲಿಸಿದ್ದಾರೆ ಎಂದು ವರದಿ ತಿಳಿಸಿದೆ. ತಡರಾತ್ರಿ ರೇಣುಕಾಸ್ವಾಮಿಯ ದೇಹವನ್ನು ಆರೋಪಿಗಳು ಸುಮನಹಳ್ಳಿ ಸತ್ವಾ ಅಪಾರ್ಟ್ಮೆಂಟ್ ಬಳಿ…
ಬಾಲಿವುಡ್ ನಟಿ ಸನ್ನಿ ಲಿಯೋನ್ ಕರ್ನಾಟಕದ ಹಾಸನಕ್ಕೆ ಆಗಮಿಸಿದ್ದಾರೆ. ತಮಿಳು ಸಿನಿಮಾವೊಂದರ ಚಿತ್ರೀಕರಣಕ್ಕೆ ಹಾಸನದ ಚೆನ್ನರಾಯಪಟ್ಟಣದ ಕಬ್ಬಳ್ಳಿ ಗ್ರಾಮಕ್ಕೆ ಬಂದಿದ್ದು, ಈ ವೇಳೆ ಸ್ಥಳೀಯ ಸರ್ಕಾರಿ ಶಾಲಾ ಮಕ್ಕಳ ಜೊತೆ ಸನ್ನಿ ಲಿಯೋನ್ (Sunny Leone) ಕಾಲ ಕಳೆದಿದ್ದಾರೆ ಎಂದು ವರದಿ ತಿಳಿಸಿದೆ. ಸನ್ನಿ ಲಿಯೋನ್ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಜೊತೆ ಆಟ ಆಡಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಸನ್ನಿ ಲಿಯೋನ್ ಮುಂಬರುವ ತಮಿಳು ಚಿತ್ರ ‘ಕೊಟೇಶನ್ ಗ್ಯಾಂಗ್ ನ’ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದ್ದು. ಇದನ್ನು ವಿವೇಕ್ ಕೆ. ಕಣ್ಣನ್ ಬರೆದು ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಜಾಕಿ ಶ್ರಾಫ್, ಸನ್ನಿ ಲಿಯೋನ್ ಮತ್ತು ಪ್ರಿಯಾಮಣಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ ಎನ್ನಲಾಗಿದೆ. ಕೊಟೇಶನ್ ಗ್ಯಾಂಗ್ ನ ಫಸ್ಟ್ ಲುಕ್ ನಲ್ಲಿ ಸನ್ನಿ ಲಿಯೋನ್ ಗ್ರಾಮೀಣ ಮಾಫಿಯಾ ಗ್ಯಾಂಗ್ ನ ಸದಸ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮತ್ತು ನಿರ್ದೇಶಕ ಉಪೇಂದ್ರ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ವಿಚಾರಣೆ ಕುರಿತ ವಿಡಿಯೊ ಚಿತ್ರೀಕರಣ ನಡೆಯಬೇಕು ಮತ್ತು ಅದು ಜನರಿಗೆ ನೋಡಲು ಸಿಗುವಂತಾಬೇಕು ಎಂದಿದ್ದಾರೆ. ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ನ ವಿಚಾರಣೆಯ ವಿಡಿಯೋ ದಾಖಲೆ ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೊಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣ, ದರ್ಶನ್ ಬಂಧನ ಮತ್ತು ಅದರ ವಿಚಾರಣೆಯನ್ನು ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ನ ವಿಚಾರಣೆಯಲ್ಲಿ ನಿಷ್ಪಕ್ಷವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಜನ ಕಾಯುತ್ತಿದ್ದಾರೆ. ರೇಣುಕಾಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿವೆ. ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ, ಯಾವುದೇ ಕೇಸ್ ಆದರೂ ಆ ಕೇಸ್ನ ವಿಚಾರಣೆಯ ವಿಡಿಯೋ ದಾಖಲೆ ಮತ್ತು…
ಪ್ರಧಾನಿ ನರೇಂದ್ರ ಮೋದಿ ಅವರ ಇಟಲಿ ಪ್ರವಾಸದ ಕುರಿತು ಕಾಂಗ್ರೆಸ್ ಪಕ್ಷದ ಕೇರಳ ಘಟಕ ಮಾಡಿದ್ದ ಲೇವಡಿ ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಕ್ಷಮಾಪಣೆ ಕೋರಿದೆ. ಜಿ7 ಶೃಂಗಸಭೆಗೆ ಇಟಲಿಯ ವಿಶೇಷ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅಲ್ಲಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ವಿವಿಧ ದೇಶಗಳ ನಾಯಕರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದ ಅವರು, ಪೋಪ್ ಫ್ರಾನ್ಸಿಸ್ ಅವರನ್ನು ಸಹ ಭೇಟಿಯಾಗಿದ್ದರು. ಇಬ್ಬರೂ ಪರಸ್ಪರ ಆಲಂಗಿಸುವ ಫೋಟೋಗಳು ವೈರಲ್ ಆಗಿದ್ದವು. ಇದನ್ನು ಕೇರಳ ಕಾಂಗ್ರೆಸ್ ಘಟಕ ಸಾಮಾಜಿಕ ಮಾಧ್ಯಮದಲ್ಲಿ ಅಣಕಿಸಿ ಪೋಸ್ಟ್ ಮಾಡಿತ್ತು. ವಿವಾದದ ಬೆನ್ನಲ್ಲೇ ಕೇರಳ ಕಾಂಗ್ರೆಸ್ ತನ್ನ ಪೋಸ್ಟ್ ಅನ್ನು ಡಿಲೀಟ್ ಮಾಡಿದೆ. ಪ್ರಧಾನಿ ಮೋದಿ ಪೋಪ್ ಜತೆಗೆ ಇರುವ ಫೋಟೋ ಹಂಚಿಕೊಂಡಿದ್ದ ಕಾಂಗ್ರೆಸ್ ಘಟಕವು, “ಪೋಪ್ ಅವರಿಗೆ ದೇವರನ್ನು ಭೇಟಿ ಮಾಡುವ ಅವಕಾಶ ಕೊನೆಗೂ ದೊರಕಿದೆ” ಎಂದು ಟೀಕಿಸಿತ್ತು. ಲೋಕಸಭೆ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ಅವರು ಸಂದರ್ಶನವೊಂದರಲ್ಲಿ, ತಮ್ಮನ್ನು ದೇವರು ಒಂದು ಉದ್ದೇಶಕ್ಕೆ…
ಚುನಾವಣೆಯಲ್ಲಿ ಹಲವು ಭರವಸೆ ನೀಡಿ ಆಂಧ್ರಪ್ರದೇಶದ ಅಧಿಕಾರ ಹಿಡಿದಿರುವ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (TDP) ಈ ಭರವಸೆಯನ್ನು ಹೇಗೆ ಈಡೇರಿಸುತ್ತದೆ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಹೇಗೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿತ್ತೋ ಅದೇ ಮಾದರಿಯಲ್ಲಿ ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ʼಸೂಪರ್ ಸಿಕ್ಸ್ ಗ್ಯಾರಂಟಿʼ ಹೆಸರಿನಲ್ಲಿ ಘೋಷಣೆ ಪ್ರಕಟಿಸಿದ್ದರು. ಪ್ರತಿ ತಿಂಗಳು ನಿರುದ್ಯೋಗಿಗಳಿಗೆ 3,000 ರೂ. ನಿರುದ್ಯೋಗ ಭತ್ಯೆ, ಶಾಲೆಗೆ ತೆರಳಲು ಪ್ರತಿ ಮಗುವಿಗೆ ವರ್ಷಕ್ಕೆ 15,000 ರೂ., ಪ್ರತಿ ರೈತರಿಗೆ ವಾರ್ಷಿಕ 20,000 ರೂ., ಸರ್ಕಾರದಿಂದ ಪ್ರತಿ ಮನೆಗೆ ವರ್ಷಕ್ಕೆ 3 ಗ್ಯಾಸ್ ಸಿಲಿಂಡರ್ ಉಚಿತ, 18 ವರ್ಷ ಮೇಲ್ಪಟ್ಟ ಪ್ರತಿ ಮಹಿಳೆಗೆ ತಿಂಗಳಿಗೆ 1,500 ರೂ., ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆಗಳನ್ನು ಟಿಡಿಪಿ ಘೋಷಣೆ ಮಾಡಿತ್ತು. ನಿರುದ್ಯೋಗಿ ಯುವಕರಿಗೆ ನಗದು ಪಾವತಿ, ಮಹಿಳೆಯರಿಗೆ ಉಚಿತ ಪ್ರಯಾಣ ಮತ್ತು ಉಚಿತ ಎಲ್ ಪಿಜಿ ಸಿಲಿಂಡರ್ ಸೇರಿದಂತೆ ಹಲವು ಭರವಸೆಗಳನ್ನು…
ಬೆಳೆ ನಾಶಕ್ಕೆ ಸೈನಿಕ ಹುಳು ಕೂಡ ಒಂದು ಕಾರಣ. ಸೈನಿಕ ಹುಳು ಗಳ ನಿಯಂತ್ರಣಕ್ಕಾಗಿ ರೈತರು ಹಲವಾರು ರೀತಿ ಪ್ರಯತ್ನ ಮಾಡಿ ಸೋತಿದ್ದಾರೆ. ಈಗಾಗಲೇ ಬೆಳೆ ನಾಶದಿಂದ ರೈತರು ಕಣ್ಗೆಟ್ಟಿದ್ದಾರೆ. ಅದಕ್ಕಾಗಿ ಸರಿಯಾದ ಪರಿಹಾರವನ್ನು ಇಲ್ಲಿ ತಿಳಿಸಲಾಗಿದೆ. ಸೈನಿಕ ಹುಳುವು 20-25 ದಿನಗಳ ಜೀವನ ಚಕ್ರ ಹೊಂದಿದ್ದು, ಏಕ ಬೆಳೆಯಲ್ಲೇ ಇದರ ಮೂರು ಹಂತಗಳು (ಮೊಟ್ಟೆ/ ಮರಿಹಳು/ ಪ್ರೌಡ ಚಿಟ್ಟೆ) ಕಾಣಿಸಿಕೊಂಡು ಎಲೆಗಳನ್ನು, ಸುಳಿಗಳನ್ನು ತಿಂದು ರಂಧ್ರಗಳನ್ನು ಮಾಡಿ ಹಿಕ್ಕೆಗಳನ್ನು ಎಲೆಯ ಮೇಲೆಯ ಬಿಡುತ್ತದೆ. ಅದಕ್ಕಾಗಿ ಶಿವಮೊಗ್ಗ ಕೃಷಿ ವಿಶ್ವವಿದ್ಯಾನಿಲಯದ ಕೀಟಶಾಸ್ತ್ರ ವಿಜ್ಞಾನಿ ಡಾ. ಶರಣಬಸಪ್ಪ ಎಸ್. ದೇಶಮುಖ್ ಅವರು, ಬೆಳೆಯ 45 ದಿನಗಳವರೆಗೆ ಈ ಹುಳು ಕಾಣಿಸಿಕೊಂಡು ಶೇ.70-80 ರವರೆಗೆ ಇಳುವರಿ ನಷ್ಟಕ್ಕೆ ಕಾರಣವಾಗುತ್ತದೆ. ರೈತರು ಪರ್ಯಾಯ ಬೆಳೆ ಪದ್ಧತಿ ರಸಾಯನಿಕ ಸಿಂಪರಣೆ ಮೂಲಕ ಈ ರೋಗವನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ. ಜಮೀನುಗಳಲ್ಲಿ ಸೈನಿಕ ಹುಳು ಕಾಟ, ಹತೋಟಿಗೆ ಸಲಹೆಗಳು : ಬೇಸಾಯ ಶಾಸ್ತ್ರಜ್ಞ ಹೊನ್ನಪ್ಪ ಪ್ರಕಾರ “ಮುಸುಕಿನ…
ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ–ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಸದ್ಯದ ಅಲ್ಪ ಪ್ರಮಾಣದ ಡೀಸೆಲ್–ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂಪಾಯಿ. ಹೀಗಾಗಿ ಆರ್.ಅಶೋಕ್ ಅವರ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ. ಆರ್.ಅಶೋಕ್ ಗೆ ಇದೆಲ್ಲಾ ಅರ್ಥ ಆಗಲ್ಲ , ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವೂ ಇಲ್ಲ ಎಂದು ವ್ಯಂಗ್ಯವಾಡಿದರು. ಕೇಂದ್ರ ಸರ್ಕಾರ ಜಿ.ಎಸ್.ಟಿ. ವ್ಯವಸ್ಥೆ ಜಾರಿಗೊಳಿಸಿದ ನಂತರ ರಾಜ್ಯ ಸರ್ಕಾರಗಳ ಸಂಪನ್ಮೂಲ ಕ್ರೋಢೀಕರಣಕ್ಕೆ ಇರುವ ಅವಕಾಶ ಸೀಮಿತಗೊಂಡಿದೆ. ಕೇಂದ್ರ ಸರ್ಕಾರ ಜಿ.ಎಸ್.ಟಿ. , ಆದಾಯ ತೆರಿಗೆ, ಕೇಂದ್ರ ಅಬಕಾರಿ ಸುಂಕ ಮೊದಲಾದ ಮೂಲಗಳಿಂದ ತೆರಿಗೆ ಸಂಗ್ರಹಿಸುತ್ತದೆ. ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್, ಡೀಸೆಲ್…
ಬೆಂಗಳೂರು: ತೈಲ ಬೆಲೆ ಖಂಡಿಸಿ ಪ್ರತಿಭಟಿಸುವ ಹಕ್ಕು ಬಿಜೆಪಿಗಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ಮಾಡಲಾಗಿದೆ ಎಂದು ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಹಾಗಾದರೆ ಅವರ ಪಕ್ಷ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ದರ ಎಷ್ಟಿದೆ? ಎಂದರು. ತೈಲ ಬೆಲೆ ಖಂಡಿಸಿ ಬಿಜೆಪಿ ಪ್ರತಿಭಟನೆ ಮಾಡಲಿ. ಅವರಿಗೆ ಪ್ರತಿಭಟಿಸುವ ಹಕ್ಕಿದೆ. ಜನರ ಸವಾಲುಗಳಿಗೆ ಉತ್ತರ ಕೊಡುವವರು ಯಾರು? ಪೆಟ್ರೋಲ್ ದರವನ್ನು 97ರೂ. ವರೆಗೆ ತಂದವರು ಯಾರು? ಸೆಸ್ಗಳ ಅನುಕೂಲ ಮಾಡಿಕೊಟ್ಟಿದ್ದಾರೆ. ರಷ್ಯಾದಿಂದ ಕಡಿಮೆ ಬೆಲೆಗೆ ತೆಗೆದುಕೊಂಡು ಅದನ್ನು ಜನ ಸಾಮಾನ್ಯರಿಗೆ ಕೊಟ್ಟಿದ್ದೀರಾ? ನಾವು ಕೇವಲ 3ರೂ. ಏರಿಕೆ ಮಾಡಿದ್ದೇವೆ ಅಷ್ಟೇ ಎಂದು ಅವರು ಸರ್ಕಾರದ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮಹಾರಾಷ್ಟ್ರ, ಆಂದ್ರದಲ್ಲಿ ಎಷ್ಟಿದೆ? ಬಿಜೆಪಿ ಇರುವ ರಾಜ್ಯಗಳಲ್ಲಿ ತೈಲ ಬೆಲೆ ಎಷ್ಟಾಗಿದೆ? ಇವರು ಬೆಲೆ ಏರಿಕೆ ಮಾಡಿದಾಗ ದೇಶ ಕಟ್ಟುವ ಅವಶ್ಯಕತೆ ಇದೆ ಅಂತಾರೆ. ನಾವು ಮಾಡಿದ್ರೆ ದೇಶ ಹಾಳಾಗುತ್ತಾ? ಅಂಕಿ…
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಂದುವರಿದಂತೆ ಬೆಚ್ಚಿ ಬೀಳಿಸುವ ಸಂಗತಿಗಳು ಬಯಲಾಗುತ್ತಲೇ ಇದ್ದು, ಆರೋಪಿಗಳು ರೇಣುಕಾಸ್ವಾಮಿಯನ್ನು ಕೊಂದ ನಂತರ ಅವರ ಮೈ ಮೇಲಿದ್ದ ಚಿನ್ನದ ಆಭರಣಗಳನ್ನು ದೋಚಿದ್ದ ವಿಚಾರ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆರೋಪಿಗಳಾದ ದರ್ಶನ್ ಮತ್ತು ಸಹಚರರನ್ನು ಕೋರ್ಟ್‌ನಲ್ಲಿ ಹಾಜರುಪಡಿಸಿದ್ದಾಗ ವಾದ ಮಂಡಿಸಿದ್ದ ಪೊಲೀಸ್ ಪರ ವಿಶೇಷ ಅಭಿಯೋಜಕರು, ಆರೋಪಿಗಳು ರೇಣುಕಾಸ್ವಾಮಿಗೆ ವಿದ್ಯುತ್ ಶಾಕ್ ಕೊಟ್ಟು ಕ್ರೌರ್ಯ ಮೆರೆದಿದ್ದರು ಎಂಬ ಭಯಾನಕ ಸಂಗತಿಯನ್ನು ಬಹಿರಂಗಪಡಿಸಿದ್ದರು. ಆರೋಪಿಗಳ ತಂಡವು ಇದೀಗ ಅದಕ್ಕಿಂತಲೂ ಹೇಯ ಕೃತ್ಯ ಎಸಗಿರುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಚಿನ್ನದ ಆಭರಣಗಳನ್ನು ಆತ ದೋಚಿದ್ದ. ರೇಣುಕಾಸ್ವಾಮಿ ಅಪಹರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಚಿತ್ರದುರ್ಗ ಜಿಲ್ಲೆಯ ದರ್ಶನ್ ಅಭಿಮಾನಿ ಬಳಗದ ಅಧ್ಯಕ್ಷ ರಾಘವೇಂದ್ರ ಎಂಬಾತನ ಪೈಶಾಚಿಕ ಕೃತ್ಯ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್…