Author: admin

ವಿಜಯಪುರ: ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ವಿಜಯಪುರ ನಗರದ ಆಶ್ರಮ ರಸ್ತೆಯ ಪಿ&ಟಿ ಕ್ವಾರ್ಟರ್ಸಿನಲ್ಲಿ ನಡೆದಿದೆ. ಮನೆಯವರು ಸೂಕ್ತ ಸಂದರ್ಭದಲ್ಲಿ ಎಚ್ಚೆತ್ತುಕೊಂಡ ಕಾರಣ ಭಾರೀ ಅನಾಹುತ ತಪ್ಪಿದೆ. ಪಿ&ಟಿ ಕ್ವಾರ್ಟರ್ಸ್ ನಿವಾಸಿ ಇಬ್ರಾಹಿಂ ಬಿದರಕುಂದಿ ಎನ್ನುವವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಮೂಲತಃ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದವರಾಗಿದ್ದಾರೆ. ಬಕ್ರೀದ್ ಹಬ್ಬದ ದಿನವೇ ಹಬ್ಬದಡುಗೆ ಮಾಡುವ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಸಿಲಿಂಡರ್’ಗೆ ಬೆಂಕಿ ಹತ್ತಿಕೊಂಡ ಕಾರಣ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಗ್ನಿ ಶಾಮಕ ದಳದವರಿಗೆ, ಗ್ಯಾಸ್ ಏಜೆನ್ಸಿಯವರಿಗೆ ಮಾಹಿತಿ ರವಾನೆ ಮಾಡಿದ್ದು, ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದರು. ಘಟನೆಯಲ್ಲಿ ಮನೆಯಲ್ಲಿನ ಅಡುಗೆ ಕೋಣೆಯಲ್ಲಿನ  ವಸ್ತುಗಳಿಗೆ ಹಾನಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಳಗಾವಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ನಡುರಸ್ತೆಯಲ್ಲಿ ವ್ಯಕ್ತಿಯ ಭೀಕರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಯಕ್ಸಂಬಾ ಪಟ್ಟಣದಲ್ಲಿ ನಡೆದಿದೆ. ಬೀರೇಶ್ವರ ದೇವರ ಜಾತ್ರಾ ಮಹೋತ್ಸವ ಜಾತ್ರಾ ಮಹೋತ್ಸವದ ನಿಮಿತ್ತ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮ ನೋಡಿ ವಾಪಸ್ ಮನೆಗೆ ತೆರಳುವ ಸಂದರ್ಭದಲ್ಲಿ ಯಾರೋ ಆತನ ತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ ಮಾಡಿದ್ದಾರೆ. ಮಹೇಶ ಕುರ್ಣಿ ಕುಡಿತದ ಚಟ ಹೊಂದಿದ್ದರು. ಮಹೇಶ ಅವರ ಪ್ಯಾಮಿಲಿ ಬೆಳಗಾವಿಯಲ್ಲಿ ಸೆಟಲ್ ಆಗಿದ್ದಾರೆ. ಮಕ್ಕಳ ನೌಕರಿಗಾಗಿ ಈತನು ಸಹ ಬೆಳಗಾವಿಯಲ್ಲೆ ನೆಲೆಸಿದ್ದ. ಆದ್ರೆ ಯಕ್ಸಂಬಾ ಪ್ಟಣದಲ್ಲಿರೋ ತನ್ನ ಒಂದು ಎಕರೆ ಜಮೀನು ಹಾಳಾಗುತ್ತೆ ಎನ್ನುವ ಕಾರಣಕ್ಕೆ ಮಹೇಶ ಯಕ್ಸಂಬಾ ಪಟ್ಟಣದಲ್ಲಿ ಒಬ್ಬನೇ ವಾಸವಾಗಿದ್ದ. ಆತನ ಸಂಬಂಧಿಕರು ಹೇಳುವಂತ, ಮಹೇಶ ಕುರ್ಣೆ ಯಾವಾಗಲಾದ್ರೂ ಮದ್ಯಸೇವನೆ ಮಾಡ್ತಿದ್ದನಂತೆ. ಊರಲ್ಲಿ ಯಾರೊಂದಿಗೂ ಜಗಳವಾಡಿರಲಿಲ್ಲವಂತೆ. ನಿನ್ನೆ ರಾತ್ರಿ ಜಾತ್ರೆ ನಿಮಿತ್ತ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮ ನೋಡಿ ವಾಪಸ್ಸಾಗುವ ಸಂದರ್ಭದಲ್ಲಿ ಯಾರೋ ಆತನನ್ನು ಕೊಲೆ ಮಾಡಿದ್ದಾರೆ ಎನ್ನುತ್ತಿದ್ದಾರೆ. ಇನ್ನು ವಿಷಯ…

Read More

ಬೆಂಗಳೂರು : ಕಳೆದ ವಾರವಷ್ಟೆ ಕೆ.ಜಿ.ಗೆ 50 ರೂ.ಗೆ ದೊರೆಯುತ್ತಿದ್ದ ಟೊಮೆಟೊ, ಈಗ ಏಕಾಏಕಿ 100 ರೂ. ಗಡಿ ದಾಟಿದೆ. ಆ ಮೂಲಕ ಮತ್ತೆ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಟೊಮೆಟೊ ಸೇರಿದಂತೆ ಕಾಯಿಪಲ್ಲೆ, ಹಸಿರುಪಲ್ಲೆಗಳ ದರಗಳು ಏರುತ್ತಿವೆ. ಹೀಗಾಗಿ ಮಾರುಕಟ್ಟೆಗೆ ಹೋಗಬೇಕೆಂದರೆ ಚೀಲ ತುಂಬಾ ಹಣ ತುಂಬಿಕೊಂಡು ಬೇಬಿನಲ್ಲಿ ತರಕಾರಿ ತರುವ ಸ್ಥಿತಿ ಎದುರಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಳೆ ಬಂದ ಪರಿಣಾಮ ಬಂದ ಬೆಳೆಯೂ ಹಾಳಾಗುತ್ತಿದೆ. ಜತೆಗೆ ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ತರಕಾರಿ ದೊರೆಯದ ಕಾರಣ ಬೆಲೆ ಏರಿಕೆಯಾಗಿದೆ. ಹೀರೆಕಾಯಿ ಕೆಜಿಗೆ 120 ರೂ., ಸೌತೆಕಾಯಿ 120 ರೂ., ಚೌಳಿಕಾಯಿ 80 ರೂ., ಬೀನ್ಸ್ 160 ರೂ.,. 6 ನಿಂಬೆ ಹಣ್ಣಿಗೆ 20 ರೂ., 1 ಮೂಲಂಗಿಗೆ 10 ರೂ., ಹೀಗೆ ತರಕಾರಿ ದರ ಏರುಮುಖದಲ್ಲಿ ಸಾಗಿದೆ. ಶನಿವಾರದಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯೂ ಹೆಚ್ಚಾಗಿದ್ದು , ಸಾಗಣೆ ವೆಚ್ಚ ಹೆಚ್ಚಾಗುತ್ತಿರುವುದರಿಂದ…

Read More

ಬೆಂಗಳೂರು: ಟ್ರಾಫಿಕ್  ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧವಾಗಿದೆ. ರಾಗಿಗುಡ್ಡ-ಸೆಂಟ್ರಲ್ ಸಿಲ್ಕ್ ಬೋರ್ಡ್ ವರಗೆ ನಿರ್ಮಾಣವಾಗ್ತಿದ್ದ 3.3 ಕಿಮೀ ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್ ಕಾಮಗಾರಿ ಕಂಪ್ಲಿಟ್ ಆಗಿದ್ದು, ಶೀಘ್ರದಲ್ಲಿಯೇ ಉದ್ಘಾಟನೆಗೆ ಸಜ್ಜಾಗ್ತಿದೆ. ಅಂತಿಮ ತಪಾಸಣೆ ಬಾಕಿಯಿದ್ದು ಅದು ಮುಗಿಯುತ್ತಿದ್ದಂತೆ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ. ಈ ಡಬಲ್ ಡೆಕ್ಕರ್ ಫ್ಲೈಓವರ್ ನಲ್ಲಿ ಮೆಟ್ರೋ ರೈಲು ಹಾಗೂ ವಾಹನ ಸಂಚರಿಸುತ್ತೆ. ಕೆಳರಸ್ತೆಯಿಂದ ಡಬ್ಬಲ್ ಡೆಕ್ಕರ್ ನ ಮೊದಲ ಫ್ಲೈಓವರ್ 8 ಮೀ. ಎತ್ತರದಲ್ಲಿದ್ದರೆ, ಮೆಟ್ರೋ ವಯಡಕ್ಟ್ 16 ಮೀ. ಎತ್ತರದಲ್ಲಿದೆ. ಸಂಚಾರ ದಟ್ಟಣೆ ನಿವಾರಣೆ ದೃಷ್ಟಿಯಿಂದ ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗೆ ಸಿಗ್ನಲ್ ಮುಕ್ತವಾಗಿಸಲಾಗಿದೆ. ಎಚ್ ಎಸ್ ಆರ್ ಲೇಔಟ್ ಹಾಗೂ ಹೊಸೂರು ಲೇಔಟನ್ನು ಇದರಿಂದ ಅಡ್ಡಿಯಿಲ್ಲದೆ ತಲುಪಬಹುದು. ಇದರ ಜೊತೆಗೆ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಅನ್ನು ಸಂಪೂರ್ಣ ಸಿಗ್ನಲ್ ಮುಕ್ತಗೊಳಿಸುವ ಬಿಎಂಆರ್ ಸಿಎಲ್‌ನಿಂದ ಬರೋಬ್ಬರಿ ಐದು ರ್ಯಾಂಪ್ಗಳ ನಿರ್ಮಾಣ ಮಾಡ್ತಿದೆ. ಒಂದು…

Read More

ಗುಬ್ಬಿ ತಾಲ್ಲೂಕು ಕಡಬ ಹೋಬಳಿ ಬೋಚಿಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಕರ್ಣಾಟ ಬಲ ಸೇನೆ ವತಿಯಿಂದ  ನವೀಕರಣ ಮಾಡಲಾಯಿತು. ಬೋಚಿಹಳ್ಳಿ ಗ್ರಾಮದ ಸರ್ಕಾರಿಶಾಲೆಗೆ ಕರ್ಣಾಟ ಬಲ ಸೇನೆ ಸಂಘಟನೆ ವತಿಯಿಂದ  ಸುಣ್ಣ ಬಣ್ಣವನ್ನು ಹೊಡೆದು ಅಂದವನ್ನು ಹೆಚ್ಚಿಸಲಾಯಿತು.  ಶಾಲೆಯ ಮೈದಾನದಲ್ಲಿ ಗಿಡಗಳನ್ನು ನೆಟ್ಟು ಶಾಲೆಯು ಆಕರ್ಷಕವಾಗಿ ಕಾಣುವಂತೆ ಮಾಡಲಾಯಿತು. ಈ ಕಾರ್ಯವನ್ನು ಗ್ರಾಮದ ಯುವ ಮುಖಂಡರಾದಂತಹ ನಾಗೇಶ್ ಬಿ.ಟಿ. ಅಭಿನಂದಿಸಿದರು. ಇದೇ ವೇಳೆ ಮಾತನಾಡಿದ ಸಂಘಟನೆಯ ನವೀನ್ ಸಿಂಗ್,  ಕರ್ಣಾಟ ಬಲ ಸೇನೆಯು ಸರ್ಕಾರಿ ಶಾಲೆ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ  ಎಂದರು. ನಮ್ಮ ಸರ್ಕಾರಿ ಶಾಲೆಯಲ್ಲಿ ಈ ಬಾರಿಯಿಂದ  ಎಲ್ ಕೆ ಜಿ ಮತ್ತು ಯು ಕೆ ಜಿ ಹಾಗೂ ಇಂಗ್ಲಿಷ್ ಮಾಧ್ಯಮ ಪ್ರಾರಂಭಿಸುತ್ತಿದ್ದು, ಮಕ್ಕಳ ದಾಖಲಾತಿಯು ಕಳೆದ ಬಾರಿಗಿಂತ ಈ ಬಾರಿ ಅತ್ಯಧಿಕವಾಗಿದೆ ಎಂದರು. ಮುಖ್ಯ ಶಿಕ್ಷಕರಾದ ಮುದ್ದ ಹನುಮಯ್ಯ,  ಗ್ರಾಮಸ್ಥರಾದ ಯೋಗೇಶ್ ಮೂರ್ತಿ,  ಕಡೇಕ್ಟ್ರ್ ಶಂಕರ್,  ನಾಗರಾಜು, ಗುರು, ಶಾಂತಪ್ಪ,   ಚಂದ್ರಶೇಖರ, …

Read More

ಜೂನ್ 21 ವಿಶ್ವದ ಅತ್ಯಂತ ವಿಶೇಷ ದಿನವೆಂದು ಸಾಬೀತಾಗಲಿದೆ. ಜ್ಯೋತಿಷ್ಯ ಮತ್ತು ಖಗೋಳಶಾಸ್ತ್ರದ ಪ್ರಕಾರ, ಈ ದಿನಾಂಕದಂದು, ದಿನವು ಅತಿ ಉದ್ದವಾಗಿರುತ್ತದೆ, ರಾತ್ರಿ ಆಕಾಶದಲ್ಲಿ ಬಹಳ ಅಪರೂಪದ ದೃಶ್ಯವಿರುತ್ತದೆ. ಈ ದಿನ, ಜಗತ್ತು ರಾತ್ರಿ ಆಕಾಶದಲ್ಲಿ ಸ್ಟ್ರಾಬೆರಿ ಚಂದ್ರನನ್ನ ನೋಡುತ್ತದೆ. ಚಂದ್ರನು ತಿಳಿ ಗುಲಾಬಿ ಬಣ್ಣದಲ್ಲಿರುತ್ತಾನೆ ಮತ್ತು ಈ ದಿನದಿಂದ ಯುರೋಪ್ ಮತ್ತು ಅಮೇರಿಕಾದಲ್ಲಿ ಬೇಸಿಗೆ ಕಾಲ ಪ್ರಾರಂಭವಾಗುತ್ತದೆ. ಯುರೋಪ್ ಖಂಡದ ಉತ್ತರದ ದೇಶಗಳಲ್ಲಿ ಉದಯಿಸುವಾಗ ಚಂದ್ರನು ಕೆಂಪು ಬಣ್ಣದಲ್ಲಿ ಕಾಣಿಸಿಕೊಳ್ಳುತ್ತಾನೆ. ಆಕಾಶದಲ್ಲಿ ಚಂದ್ರನು ಗಮನಾರ್ಹವಾಗಿ ಕೆಳಮಟ್ಟದಲ್ಲಿ ಕಾಣಿಸಿಕೊಂಡಾಗ ಇದು ಸಂಭವಿಸುವ ಸಾಧ್ಯತೆಯಿದೆ. ಇದು ಮೇಲಕ್ಕೆ ಏರುತ್ತಿದ್ದಂತೆ ಗುಲಾಬಿ ಬಣ್ಣದಲ್ಲಿರುತ್ತದೆ. ಸ್ಟ್ರಾಬೆರಿ ಮೂನ್ ಜೂನ್ 21ರ ಶುಕ್ರವಾರ ರಾತ್ರಿ 9:07ಕ್ಕೆ ತನ್ನ ಉತ್ತುಂಗದಲ್ಲಿರುತ್ತಾನೆ, ಇದು ವರ್ಷದ ಅತಿ ಉದ್ದದ ದಿನವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್…

Read More

ಬೆಂಗಳೂರು: ಸಂಪನ್ಮೂಲ ಕ್ರೋಢಿಕರಿಸುವ ಉದ್ದೇಶದಿಂದ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದೆ ಎಂದರು. ಬಿಜೆಪಿಯವರ ಆಡಳಿತಾವಧಿಯಲ್ಲಿ 14 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿದ್ದರು. ಆಗ ಇವರೆಲ್ಲ ಎಲ್ಲಿದ್ದರು. ಬಿಜೆಪಿಯವರು ಪ್ರತಿಭಟನೆ ಮಾಡುವುದಕ್ಕು ಮುನ್ನ ಇದನ್ನು ಯೋಚಿಸಲಿ. ಅಭಿವೃದ್ಧಿ ಕಾರ್ಯಗಳಾಗಬೇಕು ಎಂಬ ಉದ್ದೇಶದಿಂದ ಬೆಲೆ ಹೆಚ್ಚಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಗೋಸ್ಕರ ಬೆಲೆ ಏರಿಕೆ ಮಾಡಿದ್ದಾರೆ ಎಂದು ವ್ಯಾಖ್ಯಾನ ಮಾಡುವುದು ಸರಿಯಲ್ಲ ಎಂದು ಬೇಸರಿಸಿದರು. ಅಧಿಕಾರಕ್ಕೆ ಬಂದಾಗ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಕಡಿಮೆ ಮಾಡುತ್ತೇವೆ ಎಂದು ಸಿಎಂ ಭರವಸೆ ಕೊಟ್ಟಿರುವ ವೀಡಿಯೋ ಬಿಡುಗಡೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಇವತ್ತು ಒಂದು ಮಾತನ್ನು ಹೇಳುತ್ತೇನೆ. ಆ ಮಾತು ಶಾಶ್ವತವಾಗಿ ಉಳಿದು ಹೋಗುತ್ತದೆಯೇ? ಸಂದರ್ಭಕ್ಕೆ ಅನುಸಾರವಾಗಿ ಆಡಳಿತ ಮಾಡಬೇಕಲ್ಲವೇ? ಎಂದರು. ರೇಣುಕಾಸ್ವಾಮಿ…

Read More

ಹೃದಯಾಘಾತ ಎನ್ನುವುದು ಇತ್ತೀಚೆಗೆ ಶೀತ, ಜ್ವರದಷ್ಟೇ ಸಾಮಾನ್ಯ ಎನ್ನುವಂತಾಗಿದೆ. ಹೀಗಾಗಿ ಹೃದಯದ ಬಗ್ಗೆ ಕಾಳಜಿ ವಹಿಸಿ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಅಗತ್ಯ. ಯುವಕರು, ವೃದ್ಧರು ಅನ್ನೋ ವ್ಯತ್ಯಾಸವಿಲ್ಲದೆ ಎಲ್ಲಾ ವಯೋಮಾನದವರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಇದೀಗ ಅಂತಹದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ತನ್ನ ಕುಟುಂಬ ಸದಸ್ಯರೊಂದಿಗೆ ಹೋಟೆಲ್’ಗೆ ಬಂದು. ಖುಷಿ ಖುಷಿಯಲ್ಲಿ ಮಾತನಾಡುತ್ತ ಇನ್ನೇನು ಊಟ ಮಾಡಬೇಕು ಅಂತ ಅನ್ನುವಷ್ಟರಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ತುತ್ತಾಗಿ ಪ್ರಾಣವನ್ನೇ ಬಿಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ಘಟನೆ ಕಳೆದ ವರ್ಷ ಡಿಸೆಂಬರ್ ನಲ್ಲಿ ನಡೆದಿದ್ದು, ಈ ಕುರಿತ ವಿಡಿಯೋ ತುಣುಕೊಂದು ಇದೀಗ ವೈರಲ್ ಆಗುತ್ತಿದೆ. ರೆಸ್ಟೋರೆಂಟ್ ಒಂದಕ್ಕೆ ಕುಟುಂಬ ಸಮೇತ ಊಟಕ್ಕೆ ಬಂದಂತಹ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಈ ದೃಶ್ಯ ಅಲ್ಲಿದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೈರಲ್ ವಿಡಿಯೋದಲ್ಲಿ ಕುಟುಂಬ ಸಮೇತ ರೆಸ್ಟೋರೆಂಟ್ ಗೆ ಬಂದಂತಹ ವ್ಯಕ್ತಿಯೊಬ್ಬರು ಅವರೆಲ್ಲರೊಂದಿಗೆ ಖುಷಿಯಿಂದ ಮಾತನಾಡುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಮಾತನಾಡುತ್ತಿರುವಾಗ ಅವರು ಆರ್ಡರ್ ಮಾಡಿದಂತಹ ಫುಡ್…

Read More

ಮತ್ತೊಮ್ಮೆ ಹಿಜಾಬ್ ಜಗಳ ಆರಂಭಗೊಂಡಿದೆ. ಮುಂಬೈನ ಚೆಂಬೂರ್‌ ನಲ್ಲಿರುವ ಆಚಾರ್ಯ ಕಾಲೇಜಿನಲ್ಲಿ ಹಿಜಾಬ್‌ ಗೆ ನಿಷೇಧ ಹೇರಲಾಗಿದ್ದು, ಇದರ ವಿರುದ್ಧ ಒಂಬತ್ತು ವಿದ್ಯಾರ್ಥಿನಿಯರು ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕುವಂತೆ ವಿದ್ಯಾರ್ಥಿನಿಯರು ನ್ಯಾಯಾಲಯದಲ್ಲಿ ಮನವಿ ಮಾಡಿದ್ದು, ಇದರೊಂದಿಗೆ ಕಾಲೇಜು ಆಡಳಿತವು ಧರ್ಮದ ಆಧಾರದಲ್ಲಿ ಪಕ್ಷಪಾತ ಮಾಡುತ್ತಿದೆ ಎಂಬ ಆರೋಪವನ್ನೂ ವಿದ್ಯಾರ್ಥಿಗಳು ಮಾಡಿದ್ದಾರೆ. ಮುಂಬೈನ ಎನ್‌.ಜಿ.ಆಚಾರ್ಯ ಮತ್ತು ಡಿ.ಕೆ.ಮರಾಠೆ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್‌ನ 9 ವಿದ್ಯಾರ್ಥಿನಿಯರು, ಕಾಲೇಜು ಆಡಳಿತವು ಇತ್ತೀಚೆಗೆ ಜಾರಿಗೆ ತಂದಿರುವ ಡ್ರೆಸ್ ಕೋಡ್ ಅನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ. ಕಾಲೇಜು ನಿಷೇಧ ಹೇರಿರುವುದು ಸ್ವೇಚ್ಛಾಚಾರ’ ಎಂದು ವಿದ್ಯಾರ್ಥಿಗಳು ಮನವಿಯಲ್ಲಿ ತಿಳಿಸಿದ್ದಾರೆ. ಈ ಡ್ರೆಸ್ ಕೋಡ್ ಅಡಿಯಲ್ಲಿ, ವಿದ್ಯಾರ್ಥಿನಿಯರು ಕ್ಯಾಂಪಸ್‌ ನಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಗಿದೆ. ಅರ್ಜಿದಾರ ವಿದ್ಯಾರ್ಥಿನಿಯರು ಹೊಸ ಡ್ರೆಸ್ ಕೋಡ್ ತಮ್ಮ ಖಾಸಗಿತನ, ಘನತೆ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಕಾಲೇಜಿನಲ್ಲಿ…

Read More

ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಬಿಬಿಎಂಪಿ ಶಾಲೆಗಳ ದಾಖಲಾತಿಯಲ್ಲಿ ಭಾರೀ ಇಳಿಕೆ ಕಂಡಿದೆ. ಕಳೆದ ಬಾರಿಗಿಂತ ಈ ಬಾರಿಯ ದಾಖಲಾತಿಯಲ್ಲಿ ಸುಮಾರು ಶೇ.40ರಷ್ಟು ಕುಸಿತ ಕಂಡಿದೆ. ಹೌದು, ಬಿಬಿಎಂಪಿ ಶಾಲಾ-ಕಾಲೇಜುಗಳಲ್ಲಿ 2024-25ನೇ ಸಾಲಿನ ಶೈಕ್ಷಣಿಕ ಸಾಲಿನ ದಾಖಲಾತಿ ಮುಗಿಯುವ ಹಂತಕ್ಕೆ ಬಂದಿದೆ. ಆದರೆ, ಈ ಬಾರಿ ದಾಖಲಾತಿ ಪ್ರಮಾಣ ಭಾರೀ ಇಳಿಕೆಯಾಗಿದೆ. ಕೊರೊನಾ ಸಂದರ್ಭದಲ್ಲಿ ಬಿಬಿಎಂಪಿ ಶಾಲಾ ಕಾಲೇಜುಗಳಲ್ಲಿ ದಾಖಲಾತಿ ಪ್ರಮಾಣ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಕಳೆದ 2023–24ನೇ ಸಾಲಿನಲ್ಲಿ ಬರೋಬ್ಬರಿ 25 ಸಾವಿರಕ್ಕೂ ಅಧಿಕ ಸಂಖ್ಯೆಯ ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದರು. ಆದರೆ, ಈ ಬಾರಿ ಕೇವಲ 19,974 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಬಹುತೇಕ ಶೇ.40ರಷ್ಟು ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಿದೆ. ಈ ಬಾರಿಯ ದಾಖಲಾತಿ: ನರ್ಸರಿ ಶಾಲೆ: 311. ಪ್ರಾಥಮಿಕ ಶಾಲೆ: 3674. ಪ್ರೌಢ ಶಾಲೆ: 6691. ಪಿಯು ಕಾಲೇಜು: 4711. ಡಿಗ್ರಿ ಕಾಲೇಜು: 1689. ಪಿಜಿ ಕಾಲೇಜು: 98. ಒಟ್ಟು ದಾಖಲಾತಿ: 19,974 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಬಿಬಿಎಂಪಿ ತನ್ನ ವ್ಯಾಪ್ತಿಯ ಶಾಲೆಗಳನ್ನು…

Read More