Author: admin

ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ಅಪಪ್ರಚಾರ ಮಾಡಿದ ಆರೋಪದಡಿ ಪತ್ರಕರ್ತ ಹಾಗೂ ಲೇಖಕ ಅಜೀತ್ ಭಾರತಿ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ. ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ ಹಾಗೂ ವಕೀಲ ಬಿ.ಕೆ.ಬೋಪಣ್ಣ ಅವರು ನೀಡಿರುವ ದೂರಿನನ್ವಯ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ 153ಎ ಹಾಗೂ 505(2) ಕಾಯ್ದೆಯಡಿ ಅಜೀತ್ ಭಾರತಿ ಅವರ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಜೂ.6ರಂದು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ಅಜೀತ್ ಭಾರತಿ, ‘ ಸಂಸದ ರಾಹುಲ್ ಗಾಂಧಿ ಅವರು ಶ್ರೀರಾಮ ಮಂದಿರದ ಬದಲಿಗೆ ಬಾಬರಿ ಮಸೀದಿಯನ್ನು ಮರಳಿ ತರಲು ಉದ್ದೇಶಿಸಿದ್ದಾರೆ’ ಎಂದು ಹೇಳಿದ್ದಾರೆ. ಆದರೆ, ರಾಹುಲ್ ಗಾಂಧಿಯವರು ತಮ್ಮ ಯಾವುದೇ ಭಾಷಣಗಳಲ್ಲಿ ಅಂತಹ ಯಾವುದೇ ಹೇಳಿಕೆ ನೀಡಿರುವುದಿಲ್ಲ. ಸಮುದಾಯಗಳ ನಡುವೆ ಭಿನ್ನಾಭಿಪ್ರಾಯ ಮತ್ತು ದ್ವೇಷವನ್ನು ಪ್ರಚೋದಿಸುವ ಉದ್ದೇಶದಿಂದ, ಅಜೀತ್ ಭಾರತಿಯವರು ಸುಳ್ಳು ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಇದು ಸಾರ್ವಜನಿಕ ವ್ಯವಸ್ಥೆಯಲ್ಲಿ ಶಾಂತಿಯನ್ನು ಕದಡುವ ಮತ್ತು ಪ್ರಚೋದಿಸುವ ಸ್ಪಷ್ಟ ಉದ್ದೇಶದಿಂದ ಕೂಡಿದೆ ಎಂದು…

Read More

ಸಿನಿಮಾದಲ್ಲಿ ಹೀರೋಗಳಾದವರು ನಿಜ ಜೀವನದಲ್ಲಿ ಹೀರೋಗಳಾಗಿರುವುದಿಲ್ಲ ಎಂದು ಕೆಲವರು ಹೇಳುತ್ತಾರೆ. ದರ್ಶನ್ ಪ್ರಕರಣ ನೋಡಿದಾಗ ಅವರು ಸಿನಿಮಾದಲ್ಲಿ ಮಾತ್ರವೇ ಹೀರೋ ಆಗಿದ್ದರು ಎನಿಸುತ್ತದೆ. ದರ್ಶನ್ ಗೆ ಇಷ್ಟೊಂದು ಕ್ರೂರ ಮನಸ್ಥಿತಿ ಇದೆ ಎಂದು ಯಾರೂ ಭಾವಿಸಿರಲಿಲ್ಲ ಎಂದು ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷ ಹತ್ಯೆಗೊಳಗಾದ ರೇಣುಕಾ ಸ್ವಾಮಿ ಅವರ ಕುಟುಂಬದ ಜೊತೆಗಿದೆ. ಆ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದರು. ದರ್ಶನ್ ಪ್ರಕರಣ ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತಹದ್ದಾಗಿದೆ. ಯಾರಿಗೂ ಕಾನೂನು ಕೈಗೆತ್ತಿಕೊಂಡು ಕ್ರೌರ್ಯ ಮಾಡುವ ಅಧಿಕಾರವಿಲ್ಲ. ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಈ ಬಗ್ಗೆ ಹೆಚ್ಚು ಬದ್ಧತೆ ಇರಬೇಕು. ಇಂಥ ಕ್ರೌರ್ಯವನ್ನು ಯಾರೂ ಒಪ್ಪಲು ಸಾಧ್ಯವೇ ಇಲ್ಲ ಎಂದು ಹೇಳಿದರು. ರಾಜಕಾರಣಿಗಳ ಮೇಲಿನ ಟೀಕೆಗೆ ಕೊಲೆ ಮಾಡುವುದಾಗಿದ್ದರೆ ಗಂಟೆಗೊಂದು ಹೆಣ ಬೀಳುತ್ತಿತ್ತು. ಆದರೆ ದರ್ಶನ್ ಕಾನೂನು ಕೈಗೆತ್ತಿಕೊಂಡಿದ್ದು ತಪ್ಪು. ಯಾರೇ ತಪ್ಪು ಮಾಡಿದರೂ…

Read More

ಮುಸ್ಲಿಮರು ಆಚರಿಸುವ ಹಬ್ಬಗಳ ಪೈಕಿ ಈದುಲ್ ಅಝ್ಹಾ ಹಬ್ಬವು ಒಂದು. ಇದು ಬಹಳ ವಿಶೇಷತೆಯನ್ನು ಹೊಂದಿದೆ. ಜಾಗತಿಕ ವಲಯದಲ್ಲಿ ಸರ್ವ ಮುಸಲ್ಮಾನರು ಎಲ್ಲಾ ಹಬ್ಬಗಳ ಹಾಗೆ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಇದು ತ್ಯಾಗ ಮತ್ತು ಬಲಿದಾನ ಸಾವಿರಾರು ಹಿಂದಿನ ಐತಿಹಾಸಿಕ ಚಾರಿತ್ರಿಕ ಘಟನೆಯನ್ನು ಸ್ಮರಿಸುವ ಹಬ್ಬ. ಈ ಕುರಿತಾದ ಚರಿತ್ರೆಗಳು ಮತ್ತು ನೈಜ ಘಟನೆಗಳು ಖುರ್ ಆನ್ ಹಾಗೂ ಇಸ್ಲಾಮಿನ ಧಾರ್ಮಿಕ ಗ್ರಂಥದಲ್ಲಿ ಪುರಾವೆ ಸಮೇತ ಉಲ್ಲೇಖವಿದೆ. ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ ಅರೇಬಿಕ್ ತಿಂಗಳ ಕೊನೆಯ ತಿಂಗಳ ಝುಲ್ ಹಿಜ್ಜ ಬಹಳ ಪವಿತ್ರ ತಿಂಗಳು. ಆರೋಗ್ಯ, ಸಂಪತ್ತು,  ಸೌಕರ್ಯ ಹೊಂದಿ  ಜವಾಬ್ದಾರಿ ಮುಕ್ತನಾಗಿರುವ ಮುಸ್ಲಿಂ ವ್ಯಕ್ತಿಯ ಮೇಲೆ ಇಸ್ಲಾಮಿನ ಐದು ಪಂಚ ಕರ್ಮಗಳಲ್ಲಿ ಒಂದಾದ ಹಜ್ ಕಡ್ಡಾಯವಾಗಿದೆ. ಅದರ ನಿರ್ವಹಣೆಗಿರುವ ಸಮಯ ಮತ್ತು ತಿಂಗಳು ಇದೇ ಝುಲ್ ಹಜ್  ಆಗಿರುತ್ತದೆ. ಆಧ್ಯಾತ್ಮಿಕ ಶುದ್ಧೀಕರಣದೊಂದಿಗೆ ಮಕ್ಕಾದಲ್ಲಿರುವ ಪವಿತ್ರ್ ಭವನ ಕಅಬಾ ಗೆ ತೆರಳಿ ಕಅಬಾ ಭವನಕ್ಕೆ ಪ್ರದಕ್ಷಿಣೆ, ಸಫಾ ಮರ್ವಾ…

Read More

ಅಕ್ರಮ ಗೋಮಾಂಸ ವಹಿವಾಟಿನ ವಿರುದ್ಧದ ಕಾರ್ಯಾಚರಣೆಗಿಳಿದ ಮಧ್ಯಪ್ರದೇಶ ಸರ್ಕಾರ ಆದಿವಾಸಿಗಳೇ ಅಧಿಕ ಸಂಖ್ಯೆಯಲ್ಲಿರುವ ಮಾಂಡ್ಲಾ ಪ್ರದೇಶದಲ್ಲಿ ಸರ್ಕಾರಿ ಜಾಗದಲ್ಲಿ ನಿರ್ಮಿಸಿಕೊಂಡಿದ್ದ 11 ಮಂದಿಯ ಮನೆಗಳನ್ನು ಧ್ವಂಸಗೊಳಿಸಿದೆ. ನಿಯಾನ್ ಪುರದ ಭೈನ್ವಾಹಿ ಪ್ರದೇಶದಲ್ಲಿ ಕಸಾಯಿಗಾಗಿ ದೊಡ್ಡಸಂಖ್ಯೆಯ ಗೋವುಗಳನ್ನು ಹಿಡಿದಿಡಲಾಗಿದೆ ಎಂಬ ಮಾಹಿತಿಯ ಆಧಾರದಲ್ಲಿ ಕ್ರಮ ಕೈಗೊಂಡ ಅಧಿಕಾರಿಗಳು ಗೋಮಾಂಸ ವ್ಯಾಪಾರ ಮತ್ತು ವಹಿವಾಟು ನಡೆಸುತ್ತಿದ್ದವರ ಮತ್ತು ಅಕ್ರಮವಾಗಿ ನಿರ್ಮಿಸಿದ್ದ 11 ಮನೆಗಳನ್ನು ದ್ವಂಸಗೊಳಿಸಿದ್ದಾರೆ. “ಅಧಿಕಾರಿಗಳ ತಂಡ ಆ ಪ್ರದೇಶಕ್ಕೆ ಧಾವಿಸಿದಾಗ 150 ಹಸುಗಳನ್ನು ಆರೋಪಿಗಳ ಮನೆಯ ಹಿಂದೆ ಕಟ್ಟಿಹಾಕಿಕೊಂಡಿರುವುದು ಕಂಡುಬಂದಿದೆ. ಎಲ್ಲ 11 ಆರೋಪಿಗಳ ಮನೆಗಳ ಫ್ರಿಡ್ಜ್ ಗಳಲ್ಲಿ ಗೋಮಾಂಸ ಸಂಗ್ರಹಿಸಿದ್ದುದನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಾಣಿಯ ಕೊಬ್ಬು, ಜಾನುವಾರುಗಳ ಚರ್ಮ ಮತ್ತು ಎಲುಬು ಕೂಡಾ ಕೊಠಡಿಯೊಂದರಲ್ಲಿ ಪತ್ತೆಯಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಶಪಡಿಸಿಕೊಂಡ ಮಾಂಸ ಗೋಮಾಂಸ ಎನ್ನುವುದನ್ನು ಸ್ಥಳೀಯ ಸಂಸ್ಥೆಯ ಪಶುತಜ್ಞರು ದೃಢಪಡಿಸಿದ್ದಾರೆ. ಎಲ್ಲ 11 ಆರೋಪಿಗಳು ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡು ಇದ್ದುದು ಕಂಡು ಬಂದ ಹಿನ್ನೆಲೆಯಲ್ಲಿ ಅವುಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಹೇಳಲಾಗಿದೆ.…

Read More

ತಂದೆಯೊಬ್ಬ ತನ್ನ 12 ವರ್ಷದ ಮಗಳನ್ನು 72 ವರ್ಷದ ವ್ಯಕ್ತಿಗೆ ಮಾರಾಟ ಮಾಡಿ ಮದುವೆ ಮಾಡಲು ಯತ್ನಿಸಿದ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ನಡೆದಿದೆ. ಆದರೆ ಇದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆ ಮದುವೆಯನ್ನು ನಿಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ 72ರ ಮುದುಕನನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿಯ ತಂದೆಯನ್ನು ಆಲಂ ಸೈಯದ್ ಎಂದು ಗುರುತಿಸಲಾಗಿದೆ. ಈ ಸಂಬಂಧ ಬಾಲಕಿಯ ತಂದೆ ಸೈಯದ್ ತನ್ನ ಮಗಳನ್ನು 5 ಲಕ್ಷಕ್ಕೆ ಮಾರಾಟ ಮಾಡಲು ಒಪ್ಪಂದ ಮಾಡಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮದುವೆಗೆ ಮುನ್ನ ಇಷ್ಟು ಹಣ ಸಿಗದಿದ್ದರೆ ಮದುವೆ ಮಾಡಿಕೊಡುವುದಿಲ್ಲ ಎಂದು ಸೈಯದ್ ಹೇಳಿದ್ದಾನೆ. ಪೊಲೀಸರು ಮಧ್ಯ ಪ್ರವೇಶಿಸಿ ಮದುವೆಗೂ ಮುನ್ನ ತಡೆದಿದ್ದಾರೆ. ಇದಲ್ಲದೆ, ಬಾಲಕಿಯನ್ನು ಮದುವೆಯಾಗಲು ಹೊರಟಿದ್ದ ಮುದುಕ ವರ ಹಬೀಬ್ ಖಾನ್ ಮತ್ತು ಮದುವೆ ನಡೆಸಲು ಮುಂದಾದ ಇತರರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಪೊಲೀಸರು ಎಂಟ್ರಿಯಾಗುತ್ತಿದ್ದಂತೆ ಬಾಲಕಿಯ ತಂದೆ ಸೈಯದ್ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಪೊಲೀಸರಿಂದ ಬಾಲಕಿ ತಂದೆ,…

Read More

ಕೊರಟಗೆರೆ: ಕೃಷಿ ಇಲಾಖೆ ರೈತರಿಗೆ ಕಳಪೆ ಗುಣ ಮಟ್ಟದ ಬಿತ್ತನೆ ಬೀಜ  ಮತ್ತು ರಸಗೊಬ್ಬರ ವಿತರಣೆ ಮಾಡಲಾಗುತ್ತಿದ್ದು,  ರೈತರಿಗೆ ನೀಡುತ್ತಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲಾಗುತ್ತಿದೆ.  ಖಾಸಗಿ ಮಾರುಕಟ್ಟೆಯಲ್ಲಿ ಸಿಗುವ ಅದೇ ಬೆಲೆಗೆ ಕೃಷಿ ಇಲಾಖೆಯಲ್ಲಿ ಮಾರಾಟ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಕಳಪೆ ಗುಣಮಟ್ಟದಿಂದ ಕೂಡಿದ ಬಿತ್ತನೆ ಬೀಜವನ್ನು ಕೃಷಿ ಇಲಾಖೆಗೆ ರೈತರು ವಾಪಸ್ ನೀಡಿದ ಘಟನೆ ಕೊರಟಗೆರೆಯಲ್ಲಿ ನಡೆದಿದೆ. ಸರ್ಕಾರದಿಂದ ರೈತರಿಗಾಗಿ ಕಡಿಮೆ ಬೆಲೆಯಲ್ಲಿ ಗುಣ ಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ನೀಡಬೇಕು. ಆದರೆ ಕೊರಟಗೆರೆಯ ಕೃಷಿ ಇಲಾಖೆಯಲ್ಲಿ ಈ ರೀತಿ ಯಾಕೆ ಕಳಪೆ ಗುಣಮಟ್ಟದ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಬಂದಿದೆ ಎಂದು ತಿಳಿಯುತ್ತಿಲ್ಲ. ಕೂಡಲೇ ಇದನ್ನು ಸಂಬಂಧಪಟ್ಟ ಅಧಿಕಾರಿಗಳು ಸರಿಪಡಿಸಬೇಕೆಂದು  ಕೊರಟಗೆರೆ ತಾಲೂಕು ಕಚೇರಿ ಮುಂದೆ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟಿಸಿ ತಹಶೀಲ್ದಾವರಿಗೆ ಮನವಿ ಸಲ್ಲಿಸಿದರು. ಈಗಾಗಲೇ ಸರಿಯಾದ ಸಮಯಕ್ಕೆ ಮಳೆ ಬಾರದೆ ಬಿತ್ತನೆಗೆ ತಡವಾಗಿದೆ ಅದರಲ್ಲಿಯೂ…

Read More

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣಗೆ ಸಂಕಷ್ಟ ಎದುರಾಗಿದ್ದು, ನೋಟಿಸ್ ನೀಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ನಟ ದರ್ಶನ್ ಶೆಡ್ ಗೆ ಹೋಗುವ ಮೊದಲು ( ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳ) ದರ್ಶನ್ ಚಿಕ್ಕಣ್ಣ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಕೊಲೆ ನಡೆಯುವದಕ್ಕೂ ಮುನ್ನ ಪಾರ್ಟಿ ಒಂದು ನಡೆದಿದ್ದು, ಈ ಪಾರ್ಟಿಯಲ್ಲಿ ದರ್ಶನ್ ಜೊತೆ ಚಿಕ್ಕಣ್ಣ ಭಾಗಿಯಾಗಿದ್ದರು ಎನ್ನಲಾಗಿದೆ. ಚಿಕ್ಕಣ್ಣಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲದೇ ಇದ್ರೂ ಕೊಲೆ ನಡೆದ ದಿನ ದರ್ಶನ್ ಜೊತೆ ಚಿಕ್ಕಣ್ಣ ಇದ್ದರು ಎಂಬ ಕಾರಣಕ್ಕೆ ನೋಟಿಸ್ ಕೊಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ. ಪೊಲೀಸ್ ವಿಚಾರಣೆಗೆ ಹಾಜರಾಗಿ ನಟ ಚಿಕ್ಕಣ್ಣ ಕೂಡ ಹೇಳಿಕೆ ನೀಡುವ ಸಾಧ್ಯತೆಯಿದೆ. ನಟ ದರ್ಶನ್​​ ಶೆಡ್​ ಗೆ ಹೋಗುವ ಮೊದಲು ಖಾಸಗಿ ರೆಸ್ಟೋರೆಂಟ್​ ನಲ್ಲಿ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ, ನಿರ್ಮಾಪಕರು ಭಾಗಿಯಾಗಿದ್ದರು. ಪಾರ್ಟಿಯಿಂದ ಎದ್ದು ನಟ ದರ್ಶನ್ ಮನೆಗೆ ಹೊಗಬೇಕಿತ್ತು. ಆದರೆ ಅವರು ತೆರಳಿದ್ದು…

Read More

ಬೆಳಗಾವಿ :ಭ್ರೂಣ ಹತ್ಯೆ ಪ್ರಕರಣದ ಕರಾಳ ರೂಪ ಬೆಳಕಿಗೆ ಬಂದಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ. ಪೊಲೀಸರ ತನಿಖೆ ವೇಳೆ ಹೂತು ಹಾಕಿದ್ದ ಮೂರು ಭ್ರೂಣಗಳು ಪತ್ತೆಯಾಗಿದ್ದು, ಈ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಡೆದಿದೆ. ಮಕ್ಕಳ ಮಾರಾಟ ಜಾಲದಲ್ಲಿ ಸಿಕ್ಕಿ ಬಿದ್ದಿರುವ ನಕಲಿ ವೈದ್ಯ ಅಬ್ದುಲ್ ಗಫಾತ್ ಲಾಡಖಾನ್‌ ಎಂಬಾತ ಭ್ರೂಣ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಮಕ್ಕಳ ಮಾರಾಟ ಜಾಲದ ಪ್ರಕರಣವನ್ನು ಬೆನ್ನತ್ತಿರುವ ಬೆಳಗಾವಿ ಪೊಲೀಸರಿಗೆ ಬೆಚ್ಚಿಬಿಳಿಸುವ ಮಾಹಿತಿ‌ ಲಭ್ಯವಾಗಿದೆ. ಮಾತ್ರವಲ್ಲ ಭ್ರೂಣವನ್ನು ಹತ್ಯೆಗೈದು ತನ್ನ ಫಾರ್ಮ್ ಹೌಸ್‌ನಲ್ಲಿ ಹೂತು ಹಾಕಿದ್ದ ಎನ್ನಲಾಗಿದೆ. ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಸೂಚನೆ ಮೇರೆಗೆ ಹೆಚ್ಚಿನ ಪರಿಶೀಲನೆಗೆ ತಂಡ ರಚನೆ ಮಾಡಲಾಗಿದ್ದು, ಪೊಲೀಸರು, ಆರೋಗ್ಯ ಇಲಾಖೆ, ಎಫ್ ಎಸ್ ಎಲ್ ತಂಡ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ಬಳಿ ಇರೋ ನಕಲಿ ವೈದ್ಯನ ಫಾರ್ಮ್ ಹೌಸ್ ಗೆ ಭೇಟಿ ನೀಡಿ ಹೂತು ಹಾಕಲಾಗಿದ್ದ ಮೂರು ಭ್ರೂಣಗಳನ್ನು ವಶಕ್ಕೆ ಪಡೆದಿದ್ದಾರೆ. ಜೂನ್ 10 ರಂದು…

Read More

ಉತ್ತರ ಭಾರತದ ಹಲವೆಡೆ ತಾಪಮಾನ ಹೆಚ್ಚಳವಾಗಿದೆ. ಈ ನಡುವೆ ಬಿಸಿಲಿನ ತಾಪದಿಂದ ಬೇಸತ್ತ ಅಮೃತಸರದ ಐಐಎಮ್‍ನ ವಿದ್ಯಾರ್ಥಿಗಳು ಹಾಸ್ಟೆಲ್‍ ನಲ್ಲಿ ಎಸಿ ಅಳವಡಿಸುವಂತೆ ಆಗ್ರಹಿಸಿ ಮೆಸ್‍ನಲ್ಲಿ ವಿನೂತನವಾಗಿ ನಿದ್ರಿಸಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ 2 ದಿನಗಳಿಂದ ಅಮೃತಸರದಲ್ಲಿ ಗರಿಷ್ಠ ತಾಪಮಾನ 44.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ವಿದ್ಯಾರ್ಥಿಗಳ ಈ ಪ್ರತಿಭಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ವಿದ್ಯಾರ್ಥಿಗಳು ಕುರ್ಚಿ ಮೇಲೆ ಕುಳಿತು, ಟೇಬಲ್ ಮೇಲೆ ತಲೆ ಇರಿಸಿಕೊಂಡು ನಿದ್ರಿಸುವ ರೀತಿಯಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಹಾಸ್ಟೆಲ್‍ ನ ಸೌಲಭ್ಯಗಳನ್ನು ಒದಗಿಸುವ ಹಾಗೂ ನಿರ್ವಹಣೆಯ ವೈಫಲ್ಯದ ವಿರುದ್ಧ ಮೌನ ಪ್ರತಿಭಟನೆಯ ಸಂಕೇತವಾಗಿ ವಿದ್ಯಾರ್ಥಿಗಳು ಈ ರೀತಿ ಪ್ರತಿಭಟಿಸಿದ್ದಾರೆ ಎನ್ನಲಾಗಿದೆ. ಕಳೆದ ವರ್ಷವೂ ವಿದ್ಯಾರ್ಥಿಗಳು ಈ ಬೇಡಿಕೆಯನ್ನು ಮುಂದಿಟ್ಟಿದ್ದರು. ಆದರೆ ಹಾಸ್ಟೆಲ್‍ ಅನ್ನು ತಾತ್ಕಾಲಿಕ ವಸತಿಗೃಹದಲ್ಲಿ ನಡೆಸಲಾಗುತ್ತಿದ್ದು, ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡರೆ ಈ ಸಮಸ್ಯೆ ಬಗೆಹರಿಸಬಹುದು ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ನಟ ದರ್ಶನ್ ಮತ್ತು ಟೀಂ ಮಾಡಿರುವ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ ಮಾಧ್ಯಮ, ಪೊಲೀಸ್ ಸಿಬ್ಬಂದಿ ತುಂಬಾ ಕೆಲಸ ಮಾಡುತ್ತಿದ್ದೀರಿ, ನಿಮ್ಮ ಕೆಲಸವನ್ನು ನಾನು ಗೌರವಿಸುತ್ತೇನೆ. ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು’ ಎಂದು ತಿಳಿಸಿದರು. ಮುಂದುವರಿದು ಮಾತನಾಡಿದ ಅವರು, ‘ರೇಣುಕಾಸ್ವಾಮಿ ಪತ್ನಿಗೆ ನ್ಯಾಯ ಸಿಗಬೇಕು, ಇನ್ನೂ ಹುಟ್ಟಬೇಕಿರುವ ಅವರ ಮಗುವಿಗೆ ನ್ಯಾಯ ಸಿಗಬೇಕು. ಕನ್ನಡ ಚಿತ್ರರಂಗಕ್ಕೆ ನ್ಯಾಯ ಸಿಗಬೇಕು. ಚಿತ್ರರಂಗಕ್ಕೆ ಕಪ್ಪು ಚುಕ್ಕೆ ಬರುವುದು ನನಗೆ ಇಷ್ಟವಿಲ್ಲ. ಎಷ್ಟೋ ಕಲಾವಿದರು ನಮ್ಮ ಹಿರಿಯರು ಕಷ್ಟ ಪಟ್ಟು ಬೆಳೆಸಿದ ಸಂಸ್ಥೆಯಿದು. ಬೆವರಿನ ಹನಿಗಳಿಂದ ಕಟ್ಟಿದ ಸಂಸ್ಥೆಯ ಹೆಸರು ಹಾಳಾಗಬಾರದು’ ಎಂದು ತಿಳಿಸಿದರು. ಚಿತ್ರರಂಗದಿಂದ ದರ್ಶನ್ ಬ್ಯಾನ್ ಮಾಡೋದರ ಬಗ್ಗೆ ಪ್ರತಿಕ್ರಿಯಿಸಿದ ಸುದೀಪ್, ‘ಇಲ್ಲಿ ಬ್ಯಾನ್ ಅನ್ನೋದು ಸೆಕೆಂಡರಿ, ಬ್ಯಾನ್ ಮಾಡೋದಕ್ಕಿಂತ ರೇಣುಕಾ ಸ್ವಾಮಿಗೆ ನ್ಯಾಯ ಸಿಗೋದು ಮುಖ್ಯ. ನ್ಯಾಯದ ಮೇಲೆ ಜನರಿಗೆ ಒಂದು…

Read More