Author: admin

ಇವೆಂಟ್ ಮ್ಯಾನೇಜ್‌ ಮೆಂಟ್ ಕಂಪೆನಿಗೆ ವಂಚಿಸಿ, ಜೀವ ಬೆದರಿಕೆ ಹಾಕಿರುವ ಆರೋಪದಡಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣರ ಪುತ್ರ ಅರುಣ್ ಸೋಮಣ್ಣ ಸೇರಿದಂತೆ ಮೂವರ ವಿರುದ್ಧ ಎಫ್‍ ಐಆರ್ ದಾಖಲಾಗಿರುವುದಾಗಿ ವರದಿಯಾಗಿದೆ. ಈ ಕುರಿತು ತೃಪ್ತಿ ಹೆಗಡೆ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ಅರ್ಜಿಯ ವಿಚಾರಣೆ ನಡೆಸಿದ ನಗರದ 37ನೇ ಎಸಿಎಂಎಂ ನ್ಯಾಯಾಲಯ ತನಿಖೆ ನಡೆಸುವಂತೆ ಆದೇಶಿಸಿತ್ತು. ಅದರನ್ವಯ ಅರುಣ್ ಸೋಮಣ್ಣ, ಜೀವನ್ ಕುಮಾರ್ ಹಾಗೂ ಪ್ರಮೋದ್ ರಾವ್ ಎಂಬುವರ ವಿರುದ್ಧ ಐಪಿಸಿ ಸೆಕ್ಷನ್ 506, 34, 504, 387, 420, 477ಂ, 323, 327,347 ಹಾಗೂ 354 (ದೈಹಿಕ ಹಿಂಸೆ, ಅವಮಾನ, ಜೀವಭಯ, ವಂಚನೆ, ಅಪಹರಣ) ಸೇರಿದಂತೆ ಮತ್ತಿತರ ಆರೋಪಗಳಡಿ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರಿನ ವಿವರ: ದೂರುದಾರೆಯಾದ ತೃಪ್ತಿ ಹೆಗಡೆ ಹಾಗೂ ಮಧ್ವರಾಜ್ ಎಂಬುವರು ಸುಮಾರು 23 ವರ್ಷಗಳಿಂದ ಇವೆಂಟ್ ಮ್ಯಾನೇಜ್‌ ಮೆಂಟ್…

Read More

ಬೆಂಗಳೂರಿನ ಕೇಂದ್ರ ಭಾಗಗಳಾದ ಸರ್ವಜ್ಞನಗರ, ಎಚ್‍ ಬಿಆರ್ ಲೇಔಟ್, ಬಾಣಸವಾಡಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಿಗೆ ಗುಣಮಟ್ಟದ ವಿದ್ಯುತ್ ಒದಗಿಸುವ ಹೊಸ ವಿದ್ಯುತ್ ಸರಬರಾಜು ವ್ಯವಸ್ಥೆಗೆ ಎಚ್‍ ಬಿಆರ್ ಸ್ಟೇಷ ನ್‍ನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಚಾಲನೆ ನೀಡಿದರು. 220/60ಕೆವಿ ಎಚ್‍ಬಿಆರ್ ಜಿಐಎಸ್ ವಿದ್ಯುತ್ ಕೇಂದ್ರದಿಂದ 66 ಕೆ.ವಿ. ಪಾಟರಿ ರಸ್ತೆ ವಿದ್ಯುತ್ ಉಪ ಕೇಂದ್ರಕ್ಕೆ ಸುಮಾರು 5.18 ಕಿ.ಮೀ. ಉದ್ದದ ಏಕಮಾರ್ಗ 1ಸಾವಿರ ಚದರ ಮಿ.ಮೀ. ಭೂಗತ ಕೇಬಲ್ ಅನ್ನು ಕೆಪಿಟಿಸಿಎಲ್ ಅಳವಡಿಸಿದೆ. ಈಗಿರುವ 66 ಕೆವಿ ಪಾಟರಿ ರಸ್ತೆ ವಿದ್ಯುತ್ ಉಪಕೇಂದ್ರಕ್ಕೆ 66 ಕೆವಿ ಐಟಿಐ ವಿದ್ಯುತ್ ಉಪಕೇಂದ್ರದಿಂದ ದ್ವಿಮಾರ್ಗ ಪ್ರಸರಣ ಮಾರ್ಗ ಸಂಪರ್ಕದಲ್ಲಿದ್ದು, ಈ ಉಪಕೇಂದ್ರದಿಂದ ಬೆಂಗಳೂರಿನ ಕೇಂದ್ರ ಭಾಗಗಳಾದ ಸರ್ವಜ್ಞನಗರ, ಎಚ್‍ಬಿಆರ್ ಲೇಔಟ್, ನಾಗವಾರ, ಬಾಣಸವಾಡಿ, ಕಮ್ಮನಹಳ್ಳಿ, ಕಾಡಗೊಂಡನಹಳ್ಳಿ ಲಿಂಗರಾಜಪುರ, ಅರೇಬಿಕ್ ಕಾಲೇಜು, ಟ್ಯಾನರಿ ರಸ್ತೆ, ಡೀವಿಸ್ ರಸ್ತೆ, ಪುಲಕೇಶಿನಗರ ಮತ್ತು ದಂಡು ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಇತರ ಪ್ರದೇಶಗಳಿಗೆ ಕೈಗಾರಿಕೆ, ವಾಣಿಜ್ಯ ಹಾಗೂ ಗೃಹಬಳಕೆಯ…

Read More

ಒಕ್ಕಲಿಗ ನಾಯಕರ ಜೊತೆಗಿನ ಸಭೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಮಾಧ್ಯಮಗಳ ಪ್ರಶ್ನೆ ಉತ್ತರಿಸಿದ್ದು, ನಾವು ನಮ್ಮ ಸಮಾಜದ ಬಗ್ಗೆ, ಲೋಕಸಭೆ ಚುನಾವಣೆ ಮತದಾನದ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು ಸೋತಿದ್ದು, ಸೋಲನ್ನು ಒಪ್ಪಿದ್ದೇವೆ. ರಾಜಕಾರಣದಲ್ಲಿ ಇದು ಸಹಜ ಎಂದರು. ನಮ್ಮ ಚಲುವರಾಯಸ್ವಾಮಿ, ಬಾಲಕೃಷ್ಣ 50 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಈಗ ಅವರು ಮತ್ತೆ ಗೆದ್ದಿದ್ದಾರೆ. ಈ ಸೋಲು ಶಾಶ್ವತವಲ್ಲ. ಜನರ ಭಾವನೆ, ಆಲೋಚನೆ ಆರು ತಿಂಗಳಿಗೆ ಬದಲಾಗುತ್ತದೆ. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷ ಕೇವಲ 1 ಸ್ಥಾನ ಗೆದ್ದಿತ್ತು. ಈಗ 9 ಸ್ಥಾನ ಗೆದ್ದಿದೆ. ಇನ್ನು ನಾಲ್ಕೈದು ಕ್ಷೇತ್ರ ನಾವು ನಿರೀಕ್ಷೆ ಮಾಡಿದ್ದೆವು. 2028ಕ್ಕೆ ಮತ್ತೆ ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತರುವುದು ನನ್ನ ಜವಾಬ್ದಾರಿ. ನಾನು, ಸಿದ್ದರಾಮಯ್ಯ, ಎಲ್ಲ ಸಚಿವ ಸಂಪುಟ ಸದಸ್ಯರು ಒಟ್ಟಾಗಿ ದುಡಿದು ಈ ಸರಕಾರ ಮತ್ತೆ ತರುತ್ತೇವೆ ಎಂದು ಅವರು ಹೇಳಿದರು. ನಟ ದರ್ಶನ್ ಪ್ರಕರಣದಲ್ಲಿ ಪ್ರಭಾವಿಗಳ ಒತ್ತಡವಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದ…

Read More

ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಮತ್ತು ಸಹವರ್ತಿಗಳಿಗೆ ಯಾವುದೇ ವಿಶೇಷ ಆತಿಥ್ಯ ಕೊಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ನೀಡಲು ಹೋದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಈ ಬಗ್ಗೆ ಸೂಚನೆ ನೀಡಿದ್ದಾರೆ. ಸುದ್ದಿ ಮಾಧ್ಯಮಗಳಲ್ಲಿ ಆರೋಪಿಗಳಾದ ನಟ ದರ್ಶನ್ ಹಾಗೂ ಸಹಚರರಿಗೆ ವಿಶೇಷ ಆತಿಥ್ಯ ಕೊಡುತ್ತಿರುವ ಬಗ್ಗೆ ವರದಿಯಾಗುತ್ತಿವೆ. ಆರೋಪಿಗಳಿಗೆ ಯಾವುದೇ ವಿಶೇಷ ಆತಿಥ್ಯ ಕೊಡಬೇಡಿ. ಆರೋಪಿಗಳಿಗೆ ಆರೋಪಿಗೆ ನೀಡಬೇಕಾದ ಟ್ರೀಟ್ಮೆಂಟ್ ಕೊಡಿ. ಯಾವುದೇ ಸ್ಪೆಷಲ್ ಟ್ರಿಟ್ಮೆಂಟ್ ಬೇಡ. ಮಾಧ್ಯಮಗಳಲ್ಲಿ ಪೊಲೀಸ್ ಠಾಣೆ ಮುಚ್ಚಿದ್ದಾರೆ ಅಂತ ಸುದ್ದಿ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ. ದರ್ಶನ್ ಬೆಂಬಲಿಗರು ಬರಬಹುದು ಹಾಗೂ ಮಾಧ್ಯಮಗಳು ವಿಡಿಯೋ ಮಾಡುತ್ತಾರೆ ಅಂತ ಶಾಮಿಯಾನ ಹಾಕಲಾಗಿದೆ ಎಂದು ಮುಖ್ಯಮಂತ್ರಿಗೆ ಪೊಲೀಸ್ ಅಧಿಕಾರಿಗಳು ಸಮಜಾಯಿಷಿ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಅಮೆರಿಕ ಮತ್ತು ಐರ್ಲೆಂಡ್ ನಡುವಿನ ಟಿ20 ವಿಶ್ವಕಪ್ ಪಂದ್ಯಾವಳಿಯ ಎ ಗುಂಪಿನ ಪಂದ್ಯ ಶುಕ್ರವಾರ ಮಳೆಯ ಕಾರಣದಿಂದ ರದ್ದಾಗಿದ್ದು, ಉಭಯ ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಂಡಿವೆ. ಇದರೊಂದಿಗೆ ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿರುವ ಅಮೆರಿಕ ತಂಡ ಸೂಪರ್ 8 ಹಂತಕ್ಕೆ ಮುನ್ನಡೆದಿದೆ. ಇದರಿಂದಾಗಿ ಟೂರ್ನಿಯಲ್ಲಿ ಎರಡು ಪಂದ್ಯಗಳನ್ನು ಸೋತಿರುವ ಪಾಕಿಸ್ತಾನ ಟೂರ್ನಿಯಿಂದ ನಿರ್ಗಮಿಸಿದೆ. ಸಹ ತಂಡವೊಂದು ಗುಂಪು ಹಂತದಿಂದ ಸೂಪರ್ ಹಂತಕ್ಕೆ (8/10/12) ಮುನ್ನಡೆಯುತ್ತಿರುವ ಏಳನೇ ನಿದರ್ಶನ ಇದಾಗಿದೆ. ಇದಕ್ಕೂ ಮುನ್ನ ಟಿ20 ವಿಶ್ವಕಪ್ ನಲ್ಲಿ ಐರ್ಲೆಂಡ್ (2009), ನೆದರ್ಲೆಂಡ್ಸ್ (2014), ಅಫ್ಘಾನಿಸ್ತಾನ (2016), ನಮೀಬಿಯಾ (2021), ಸ್ಕಾಟ್ಲೆಂಡ್ (2021) ಮತ್ತು ನೆದರ್ಲೆಂಡ್ಸ್ (2022) ಸೂಪರ್ ಹಂತಕ್ಕೆ ಮುನ್ನಡೆದಿದ್ದವು. ಗುಂಪು ಹಂತದ ಎಲ್ಲ ನಾಲ್ಕು ಪಂದ್ಯಗಳನ್ನು ಮುಗಿಸಿರುವ ಅಮೆರಿಕ ಎರಡು ಜಯ, ಒಂದು ಸೋಲು ಮತ್ತು ಒಂದು ಪಂದ್ಯ ರದ್ದಾಗಿರುವ ಕಾರಣ ಒಟ್ಟು ಐದು ಅಂಕಗಳನ್ನು ಸಂಪಾದಿಸಿ, ಎ ಗುಂಪಿನಿಂದ 2ನೇ ತಂಡವಾಗಿ ಸೂಪರ್ 8 ಹಂತ…

Read More

ನಿತ್ಯ ಸರಾಸರಿ ಒಂದು ಲಕ್ಷಕ್ಕೂ ಅಧಿಕ ಮಂದಿ ಅಯೋಧ್ಯೆಗೆ ಭೇಟಿ ನೀಡಿ, ರಾಮಲಲ್ಲಾನ ದರ್ಶನ ಪಡೆಯುತ್ತಿದ್ದಾರೆ. ರಾಮಮಂದಿರ ನಿರ್ಮಾಣದ ಬಳಿಕ ಅಯೋಧ್ಯೆಯು ದೇಶದ ಪ್ರಮುಖ ಯಾತ್ರಾಸ್ಥಳವಾಗಿ ಬದಲಾಗಿದೆ. ಇದರ ಬೆನ್ನಲ್ಲೇ, ರಾಮಮಂದಿರವನ್ನು ಸ್ಫೋಟಿಸುವ ಕುರಿತು ಉಗ್ರರು ಬೆದರಿಕೆ ಹಾಕಿದ್ದಾರೆ. ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು (Ram Mandir) ಸ್ಫೋಟಿಸಲಾಗುವುದು ಎಂದು ಜೈಶೆ ಮೊಹಮ್ಮದ್‌ ಉಗ್ರ ಸಂಘಟನೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಕಟ್ಟೆಚ್ಚರ ಘೋಷಣೆ ಮಾಡಲಾಗಿದೆ. ರಾಮಮಂದಿರ ಸ್ಫೋಟಿಸುವ ಕುರಿತು ಜೈಶೆ ಮೊಹಮ್ಮದ್‌ ಉಗ್ರರು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ರಾಮಮಂದಿರ ಸುತ್ತಮುತ್ತ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಿಸಿಟಿವಿಗಳ ಮೂಲಕ ಶಂಕಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇರಿಸಲಾಗಿದೆ. ಬಾಂಬ್‌ ನಿಷ್ಕ್ರಿಯ ದಳ, ಶ್ವಾನ ದಳ ಕೂಡ ಅಯೋಧ್ಯೆಯಲ್ಲಿ ಹೆಚ್ಚು ಅಲರ್ಟ್‌ ಆಗಿವೆ. ಅಯೋಧ್ಯೆಯ ಇಂಚಿಂಚೂ ಪ್ರದೇಶದ ಮೇಲೆ ಭದ್ರತಾ ಸಿಬ್ಬಂದಿಯು ನಿಗಾ ಇರಿಸಿದ್ದಾರೆ. ವಾಹನಗಳ ತಪಾಸಣೆಯೂ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಸಾಮಾನ್ಯ ವ್ಯಕ್ತಿಯೊಬ್ಬನ ಕೊಲೆ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡಿರುವ ಖ್ಯಾತ ಸಿನಿಮಾ ನಟ ದರ್ಶನ್ ಅವರನ್ನು ನ್ಯಾಯಾಲಯ ಮುಂದಿನ ಏಳು ದಿನಗಳ ತನಕ ಪೊಲೀಸ್ ಕಸ್ಟಡಿಗೆ ನೀಡಿದೆ. ನೆನ್ನೆ ಸಂಜೆ ನ್ಯಾಯಾಲಯಕ್ಕೆ ದರ್ಶನ್ ಮತ್ತು ಟೀಂ ಅನ್ನು ಹಾಜರುಪಡಿಸಲಾಗಿದೆ. ಈ ವೇಳೆ ವಿಚಾರಣೆಯನ್ನು ನ್ಯಾಯಾಧೀಶರು ನಡೆಸಿರುತ್ತಾರೆ. ಪೊಲೀಸರಿಂದ ನಿಮಗೆ ಏನಾದರೂ ತೊಂದರೆ ಆಯಿತೇ..? ಎಂದು ಮೊದಲಿಗೆ ಕೇಳಿದ್ದಾರೆ. ಬಳಿಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಂದಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ. ಈ ವೇಳೆ ದರ್ಶನ್ ಕೈಕಟ್ಟಿ ನ್ಯಾಯಾಧೀಶರ ಎದುರು ನಿಂತಿದ್ದರು. ಮಾತ್ರವಲ್ಲ ಕಣ್ಣೀರು ಹಾಕಿದರು. ಇದಾದ ಬಳಿಕ ನ್ಯಾಯಾಲಯ ತನ್ನ ಆದೇಶವನ್ನು ಪ್ರಕಟಿಸುತ್ತೆ, ಮುಂದಿನ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಸೂಚಿಸುತ್ತೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಪೂರ್ಣ ಸತ್ಯಾಸತ್ಯತೆ ತಿಳಿದು ಬರಬೇಕು. ಇದಕ್ಕೆ ಸಮಗ್ರ ತನಿಖೆಯ ಅವಶ್ಯಕತೆ ಇದೆ ಎಂದು ನ್ಯಾಯಾಲಯ ಅಭಿಪ್ರಾಯ ಪಡುತ್ತದೆ. ಮಾತ್ರವಲ್ಲ ನಟ ದರ್ಶನ್ ಪ್ರಭಾವಿಯಾಗಿದ್ದು ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ ಎಂದು ಇದೇ ವೇಳೆ ನ್ಯಾಯಾಲಯ ತಿಳಿಸಿದೆ. ಸದ್ಯ…

Read More

ತುಮಕೂರು: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಂತಹ ಶಿಕ್ಷಕರೇ ದೇಶದ ಭವಿಷ್ಯವನ್ನು ನಿರ್ಧರಿಸುತ್ತಾರೆ. ಶಾಲೆಯ ಫಲಿತಾಂಶವೇ ಶಾಲೆಯ ಉತ್ತಮ ಗುಣಮಟ್ಟವನ್ನು ಅಳೆಯುತ್ತದೆ. ಆದ್ದರಿಂದ ಶಿಕ್ಷಕರು ಪ್ರಾಮಾಣಿಕತೆ, ಕರ್ತವ್ಯ ನಿಷ್ಟೆಯಿಂದ ಮಕ್ಕಳಿಗೆ ಬೋಧನೆ ಮಾಡುವ ಮೂಲಕ ಜಿಲ್ಲೆಯ ಶೈಕ್ಷಣಿಕ ಫಲಿತಾಂಶವನ್ನು ಹೆಚ್ಚಿಸಲು ಅಗತ್ಯ ಕ್ರಮವಹಿಸಿಬೇಕೆಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಕೊರಟಗೆರೆ ತಾಲ್ಲೂಕಿನ ಜಟ್ಟಿ ಅಗ್ರಹಾರ ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಆವರಣದಲ್ಲಿ ನಡೆದ ವಿದ್ಯಾರ್ಥಿಗಳಿಗೆ ‘ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತç ವಿತರಣಾ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಉಚಿತ ಪಠ್ಯಪುಸ್ತಕ, ಸಮವಸ್ತç ವಿತರಣೆಯಂತಹ ಕಾರ್ಯಕ್ರಮಗಳು ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವಲ್ಲಿ ಗಮನಾರ್ಹ ಪಾತ್ರವಹಿಸಿವೆ. ಶಾಲೆಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಸರ್ಕಾರ ಸಾವಿರಾರು ಕೋಟಿ ರೂ.ಗಳನ್ನು ವ್ಯಯಿಸುತ್ತಿದೆ. ಉತ್ತಮ ಶಿಕ್ಷಣದಿಂದಲೇ ಮನುಷ್ಯನು ಉತ್ತಮ ಹಾಗೂ ಪರಿಪೂರ್ಣ ವ್ಯಕ್ತಿಯಾಗಿ ರೂಪುಗೊಂಡು ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಿ ಉತ್ತಮ ಪ್ರಜೆಯಾಗುತ್ತಾನೆ. ಗುಣಮಟ್ಟದ ಶಿಕ್ಷಣ ನೀಡಿಸ…

Read More

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath ) ಅವರು ಬಕ್ರೀದ್ ಹಿನ್ನಲೆ ಮುಸ್ಲಿಂ ಸಮೂಹಕ್ಕೆ ಖಡಕ್ ಸಂದೇಶವೊಂದನ್ನು ನೀಡಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಕ್ರೀದ್ ಹಿನ್ನಲೆ ಮುಸ್ಲಿಂ ಸಮೂಹಕ್ಕೆ ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ. ಜೂನ್ 17ರಂದು ದೇಶದ ಎಲ್ಲೆಡೆ ಮುಸ್ಲಿಂ ಸಮೂಹದವರು ಬಕ್ರೀದ್ ಹಬ್ಬವನ್ನು ಆಚರಿಸುತ್ತಾರೆ. ಈ ವೇಳೆ ಮುಸ್ಲಿಮರು ರಸ್ತೆಗಳಲ್ಲಿ ನಮಾಜ್ ಮಾಡುವಂತಿಲ್ಲ. ನಿಷೇಧ ಪ್ರದೇಶಗಳಲ್ಲಿ ಪ್ರಾಣಿಗಳನ್ನು ಬಲಿ ಕೊಡುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.‌ ಬಕ್ರೀದ್‌ನಲ್ಲಿ ಬಲಿದಾನ ಮಾಡುವ ಸ್ಥಳವನ್ನು ಮೊದಲೇ ಗುರುತಿಸಬೇಕು. ಇತರ ಸ್ಥಳಗಳಲ್ಲಿ ಬಲಿದಾನ ಮಾಡಬಾರದು ಹಾಗೂ ವಿವಾದಿತ ಸ್ಥಳಗಳಲ್ಲಿ ಬಲಿ ನೀಡಬಾರದು. ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ರಸ್ತೆಗಳನ್ನು ಬಂದ್​ ಮಾಡಿ ಪ್ರಾರ್ಥನೆ ಮಾಡಬಾರದು. ನಂಬಿಕೆಯನ್ನು ಗೌರವಿಸಿ ಆದರೆ ಯಾವುದೇ ಹೊಸ ಸಂಪ್ರದಾಯವನ್ನು ಪ್ರೋತ್ಸಾಹಿಸಬೇಡಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿರುವ ಹಿಂದಿನ ಕಾರಣ ರಿವೀಲ್ ಆಗಿದೆ. ನಟ ದರ್ಶನ್ , ಗೆಳತಿ ಪವಿತ್ರಾ ಗೌಡ ಸಹಿತ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣದಲ್ಲಿ 15 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿದ್ದ ಪೊಲೀಸ್ ಠಾಣೆಯ ಆವರಣದ ಗೋಡೆಗೆ ಶಾಮಿಯಾನ ಹಾಕಲಾಗಿತ್ತು. ಈ ವಿಚಾರ ಈಗ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಶಾಮಿಯಾನದ ಸೈಡ್ ವಾಲ್ ಹಾಕಿಸಿದ್ದು ನಟ ದರ್ಶನ್‍ಗಾಗಿಯೇ ಎಂಬ ಸತ್ಯ ಬಯಲಾಗಿದೆ. ಪೊಲೀಸರ ಮುಂದೆ ದರ್ಶನ್ ಮನವಿ ಹಿನ್ನೆಲೆಯಲ್ಲಿ ಪೊಲೀಸರು ಈ ಕೆಲಸ ಮಾಡಿದ್ದಾರೆ ಎನ್ನಲಾಗಿದೆ. ಸಾರ್ ನನಗೆ ಒಂದೇ ಕಡೆ ಕುಳಿತುಕೊಳ್ಳಲು ಆಗುವುದಿಲ್ಲ. ನಾನು ವಾಕ್ ಮಾಡಬೇಕು. ನನ್ನ ಕೈಲಿ ಆಗುತ್ತಿಲ್ಲ. ನನ್ನ ಬಾಡಿ ರಿಲ್ಯಾಕ್ಸ್ ಆಗಬೇಕು. ಸಿಗರೇಟ್ ಇಲ್ಲವಾದರೆ ನನ್ನ ಕೈ ನಡುಗುತ್ತೆ. ನೀವು ಪದೇ ಪದೇ ಪ್ರಶ್ನೆ ಮಾಡುತ್ತಲೇ ಇದ್ದೀರಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ ತಿರುಗಾಡಲು ಸೈಡ್ ವಾಲ್ ಹಾಕಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More