Author: admin

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ. ಪರಮೇಶ್ವರ ಇಂದು ಕೊರಟಗೆರೆ ತಾಲ್ಲೂಕಿನ ಮಲ್ಲೇಶ್ವರ ಗ್ರಾಮದಲ್ಲಿ ‘ಮುಂಗಾರು ಬಿತ್ತನೆಗೆ ಚಾಲನೆ’ ನೀಡಿದರು. ಹಂಚಿಹಳ್ಳಿ ಗ್ರಾಮ ಪಂಚಾಯಿತಿಯ ಗೊಲ್ಲದೇವನಹಳ್ಳಿಯಲ್ಲಿ ಮಲ್ಲೇಶ್ವರ ರೈತ ಚನ್ನಪ್ಪ ಅವರ ಜಮೀನಿನಲ್ಲಿ ತೊಗರಿ, ಬಿಆರ್‌ ಜಿ 05 ಸೊರಗು ನಿರೋದಕ ಬೀಜವನ್ನು ಬಿತ್ತನೆ ಮಾಡಿದರು. ಅಲ್ಲದೆ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಪರಮೇಶ್ವರ ಅವರು ಗಮನಸೆಳೆದರು. ಈ ವೇಳೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಭು, ತಹಶೀಲ್ದಾರ್ ಮಂಜುನಾಥ್ ಅವರು ಇದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ರಾಜ್ಯದಲ್ಲಿ ಬಂಡವಾಳ ಹೂಡಿಕೆರಾಜ್ಯದಲ್ಲಿ ಬಂಡವಾಳ ಹೂಡಿಕೆ ಸಾಧ್ಯತೆಗಳನ್ನು ಚರ್ಚಿಸಲು ದಕ್ಷಿಣ ಕೊರಿಯಾದ ನಿಯೋಗವು ಇಂದು ಇಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರನ್ನು ಭೇಟಿಯಾಗಿತ್ತು. ಗರಿಷ್ಠ ನಿಖರತೆಯ ಮತ್ತು ಹೆಚ್ಚಿನ ಮೌಲ್ಯದ ಕಂಪ್ಯೂಟರೈಸ್ಡ್‌ ನ್ಯುಮೆರಿಕಲ್‌ ಕಂಟ್ರೋಲ್‌ (ಸಿಎನ್‌ ಸಿ) ಯಂತ್ರೋಪಕರಣಗಳನ್ನು ತಯಾರಿಸುವ ಜಾಗತಿಕ ಪ್ರಮುಖ ತಯಾರಿಕಾ ಕಂಪನಿಯಾಗಿರುವ ದಕ್ಷಿಣ ಕೊರಿಯಾದ ಡಿಎನ್ ಸೊಲುಷನ್ಸ್‌ನ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯ ಸರ್ಕಾರ ಮತ್ತು ಡಿ.ಎನ್‌. ಸೊಲುಷನ್ಸ್‌ ನಡುವಣ ಪಾಲುದಾರಿಕೆಯ ಒಪ್ಪಂದಗಳನ್ನು ಕಾರ್ಯಗತಗೊಳ್ಳಲು ಸ್ಯಾವೆಲ್ಸ್‌ ಇಂಡಿಯಾ ನೆರವಾಗುತ್ತಿದ್ದು, ಅದರ ಪ್ರತಿನಿಧಿಗಳೂ ಸಭೆಯಲ್ಲಿ ಉಪಸ್ಥಿತರಿದ್ದರು. ಡಿಎನ್‌ ಸೊಲ್ಯೂಷನ್ಸ್, ದಕ್ಷಿಣ ಕೊರಿಯಾದ ಯಂತ್ರೋಪಕರಣ ತಯಾರಿಸುವ ಅತಿದೊಡ್ಡ ಮತ್ತು ಲೋಹ-ಕತ್ತರಿಸುವ ಯಂತ್ರ ತಯಾರಿಸುವ ವಿಶ್ವದ ಮೂರನೇ ಅತಿದೊಡ್ಡ ಕಂಪನಿಯಾಗಿದೆ. ವಾಹನ ತಯಾರಿಕೆ, ಸೆಮಿಕಂಡಕ್ಟರ್‌, ಐಟಿ, ವಿಮಾನಯಾನ, ವೈದ್ಯಕೀಯ ಸೇವೆಗಳು ಮತ್ತಿತರ ಉದ್ಯಮಗಳಿಗೆ 400 ಕ್ಕೂ ಹೆಚ್ಚು ಬಗೆಯ ವೈವಿಧ್ಯಮಯ ಉತ್ಪನ್ನಗಳನ್ನು ಈ ಕಂಪನಿಯೇ ವಿನ್ಯಾಸಗೊಳಿಸುತ್ತಿದೆ. ಕಂಪನಿಯ ಭಾರತದ ನಿರ್ದೇಶಕ ಯಂಗ್ ಸಮ್ ಕಿಮ್ ಮತ್ತು…

Read More

ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್ ಗಳನ್ನು ಪ್ರಾರಂಭಿಸಲು 15 ದಿನಗಳ ಒಳಗಾಗಿ ಸ್ಥಳ ಗುರುತಿಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು. ಗುರುವಾರ ವಿಕಾಸಸೌಧದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಆರೋಗ್ಯ ಯೋಜನೆಗಳ ಪ್ರಗತಿ ಕುರಿತು ಪರಿಶೀಲನೆ ನಡೆಸಿದ ಅವರು, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್ ಗಳನ್ನು ಸದೃಢಗೊಳಿಸುವತ್ತ ಗಮನ ಹರಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಅವಕಾಶವಿದ್ದು, ಸ್ಥಳ ಗುರುತಿಸುವ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಥಳ ಗುರುತಿಸುವ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆದ್ಯತೆ ನೀಡಬೇಕು. ವಿಶೇಷವಾಗಿ ಜೈಲುಗಳು ಹಾಗೂ ಬಸ್ ನಿಲ್ದಾಣಗಳಲ್ಲಿ, ನಮ್ಮ ಕ್ಲಿನಿಕ್ ಗಳನ್ನು ಆರಂಭಿಸುವ ಕುರಿತು ಸ್ಥಳ ಗುರುತಿಸುವ ಕಾರ್ಯ 15 ದಿನಗಳ ಒಳಗಾಗಿ ಪೂರ್ಣಗೊಳಿಸಿ ಸಚಿವ ಸಂಪುಟ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿ…

Read More

ಎತ್ತಿನಹೊಳೆ ಕಾಮಗಾರಿಗೆ ಅಡಚಣೆ ಉಂಟು ಮಾಡಿರುವ 500 ಎಕರೆ ಜಾಗವನ್ನು ಹಸ್ತಾಂತರಿಸಲು ಅರಣ್ಯ ಇಲಾಖೆ ಒಪ್ಪಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಅವರು ಈ ಯೋಜನೆ ಸಂಬಂಧ ವಿಕಾಸಸೌಧದಲ್ಲಿ ಮಂಗಳವಾರ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಅರಣ್ಯ ಸಚಿವ ಈಶ್ವರ ಖಂಡ್ರೆ, ದಿಲ್ಲಿಯಲ್ಲಿ ಕರ್ನಾಟಕ ಸರಕಾರದ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಹಾಗೂ ಸಂಬಂಧಪಟ್ಟ ಇಲಾಖೆಗಳ ಪ್ರಮುಖ ಅಧಿಕಾರಿಗಳ ಜತೆ ಸಭೆ ನಡೆಸಿದರು. ಈ ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಿವಕುಮಾರ್ ಅವರು, “ಎತ್ತಿನಹೊಳೆ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ಕೆಲಸ ತ್ವರಿತ ಗತಿಯಲ್ಲಿ ನಡೆಸಲು ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ದಿಲ್ಲಿ ಪ್ರತಿನಿಧಿ ಟಿ.ಬಿ ಜಯಚಂದ್ರ, ಕಂದಾಯ, ಅರಣ್ಯ, ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಇಂದು ಚರ್ಚೆ ಮಾಡಿದ್ದೇವೆ” ಎಂದರು. ʼಯೋಜನೆಗೆ ಅಗತ್ಯವಿರುವ ಜಾಗವನ್ನು ಅರಣ್ಯ ಇಲಾಖೆ ನೀಡುತ್ತಿದ್ದು, ಇದಕ್ಕೆ ಪರ್ಯಾಯವಾಗಿ ಕಂದಾಯ ಇಲಾಖೆಯು ಅರಣ್ಯ ಇಲಾಖೆಗೆ 500…

Read More

ಬೆಂಗಳೂರು: ನಗರದಲ್ಲಿ ಕಸದ ಸಮಸ್ಯೆ ನಿವಾರಣೆ ಮಾಡುವ ಉದ್ದೇಶದಿಂದ ಕರ್ನಾಟಕ ವಿದ್ಯುತ್ ನಿಗಮದ(ಕೆಪಿಸಿಎಲ್) ವತಿಯಿಂದ ಬಿಡದಿಯಲ್ಲಿ ಸ್ಥಾಪಿಸುತ್ತಿರುವ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕದಲ್ಲಿ ಶೀಘ್ರ ಪರೀಕ್ಷಾರ್ಥವಾಗಿ ವಿದ್ಯುತ್ ಉತ್ಪಾದಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಕಸದ ಸಮಸ್ಯೆ ನಿವಾರಣೆ ಮಾಡುವ ಸಂಬಂಧ ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಕರ್ನಾಟಕ ವಿದ್ಯುತ್ ನಿಗಮದ ವತಿಯಿಂದ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕವನ್ನು ಸ್ಥಾಪಿಸಲಾಗುತ್ತಿದ್ದು, ಪಾಲಿಕೆಯಿಂದ ತ್ಯಾಜ್ಯದ ವ್ಯವಸ್ಥೆಯನ್ನು ಮಾಡಬೇಕಿದೆ. ಈ ನಿಟ್ಟಿನಲ್ಲಿ ತ್ಯಾಜ್ಯವನ್ನು ಸರಿಯಾಗಿ ನೀಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನಂತರ ವಿದ್ಯುತ್ ಉತ್ಪಾದನೆಗಾಗಿ ಪರೀಕ್ಷಾರ್ಥವಾಗಿ ತ್ಯಾಜ್ಯದ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. 11.5 ಮೆಗಾವಾಟ್ ವಿದ್ಯುತ್ ಉತ್ಪಾದನೆ: ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕವನ್ನು 10…

Read More

ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಆಗೋದು ಗ್ಯಾರಂಟಿ ಎಂದೇ ಹೇಳಲಾಗುತ್ತಿದೆ. ಈ ಸಂಬಂಧ ಫಿಲಂ ಚೇಂಬರ್ ನಲ್ಲಿ ಪದಾಧಿಕಾರಿಗಳು, ಅಧ್ಯಕ್ಷರು ತುರ್ತು ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಫಿಲಂ ಚೇಂಬರ್ ಅಧ್ಯಕ್ಷ ಎನ್‌.ಎಂ. ಸುರೇಶ್, ಕೊಲೆ ಪ್ರಕರಣವನ್ನು ಖಂಡಿಸಿದರು. ಈ ಅನ್ಯಾಯವನ್ನ ಖಂಡಿಸಲೇಬೇಕು. ಮೊದಲು, ನಾಳೆ ನಾವೆಲ್ಲಾ ಚಿತ್ರದುರ್ಗಕ್ಕೆ ಹೋಗ್ತೀವಿ, ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳುತ್ತೇವೆ ಎಂದರು. ಆ ಮೂಲಕ ಫಿಲಂ ಚೇಂಬರ್ ಮೃತನ ಕುಟುಂಬದ ಪರ ನಿಲ್ಲುತ್ತದೆ ಎಂದು ಸ್ಪಷ್ಟನೆ ನೀಡಿದರು. ನಂತರ ಪ್ರಕರಣದ ಬಗ್ಗೆ ಮಾತನಾಡಿದ ಎನ್‌ಎಂ ಸುರೇಶ್, ಇದು ಕೊಲೆಯಾಗಿದ್ದು ತುಂಬಾ ಸೂಕ್ಷ್ಮ ವಿಚಾರವಾಗಿದೆ. ಕಾನೂನಿನಡಿ ಪೊಲೀಸರು ತನಿಖೆ ಮಾಡ್ತಿದ್ದಾರೆ, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. 2011ರಲ್ಲಿ ನಾವು ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿಯನ್ನ ಮಾತನಾಡಿಸಿ ಸರಿ ಮಾಡಿದ್ವಿ. ಆದರೆ ಆದರೆ ಈಗ ಹಾಗೆ ಆಗಲ್ಲ, ಇದಕ್ಕೆ ಕಾನೂನಿನ‌ ತೊಡಕು ಇದೆ. ನಿರ್ಮಾಪಕರು ಕೋಟ್ಯಂತರ ರೂಪಾಯಿ ಹಣ ಹಾಕಿದ್ದಾರೆ, ಅವರ…

Read More

ತುಮಕೂರು: ಇಂದು ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಕೇಂದ್ರ ಸಚಿವ ವಿ. ಸೋಮಣ್ಣ ಅವರನ್ನು ಸ್ವಾಗತಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಪ್ರಭು ಅವರು ಸೇರಿದಂತೆ ಯಾವೊಬ್ಬ ಹಿರಿಯ ಅಧಿಕಾರಿಗಳು ಬಾರದೆ ಇರುವುದಕ್ಕೆ, ಸಚಿವ ಸೋಮಣ್ಣ ದೂರವಾಣಿ ಮೂಲಕ ಏರು ಧ್ವನಿಯಲ್ಲಿ ಮಾತನಾಡಿದ ಘಟನೆ ನಡೆದಿದೆ. ಕೇಂದ್ರ ಸಚಿವ ಸೋಮಣ್ಣ ಇಂದು ಮೊದಲಿಗೆ ಸಿದ್ದಗಂಗಾ ಮಠಕ್ಕೆ ಆಗಮಿಸಿದ ಸಂದರ್ಭದಲ್ಲಿ ಯಾವೊಬ್ಬ ಅಧಿಕಾರಿಗಳು ಕೂಡ ಹಾಜರಿರಲಿಲ್ಲ ನಂತರ ಅಲ್ಲಿಂದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಬಂದಿದ್ದ ಸೋಮಣ್ಣ ಅವರಿಗೆ ಮಾಹಿತಿ ನೀಡಲು ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಶಾಸ್ತ್ರ ಚಿಕಿತ್ಸಕರು ಕೂಡ ಹಾಜರಿರಲಿಲ್ಲ. ಇತ್ತೀಚಿಗೆ ಪಾವಗಡ ತಾಲೂಕಿನಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟಿದ್ದರು. ಅಲ್ಲದೆ, ಇನ್ನೂ 10 ಮಂದಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರುಗಳ ಆರೋಗ್ಯವನ್ನು ವಿಚಾರಿಸಲು ಕೇಂದ್ರ ಸಚಿವ ಸೋಮಣ್ಣ ಆಗಮಿಸಿದ್ದರು. ಆದರೆ ಅಲ್ಲಿಯೂ ಕೂಡ ಅಧಿಕಾರಿಗಳು ಇಲ್ಲದಿದ್ದನ್ನು ಕಂಡು ಕೆಂಡಮಂಡಲರಾದ ಸಚಿವ ಸೋಮಣ್ಣ…

Read More

ತುಮಕೂರು: “ನನಗೆ ಕೊಟ್ಟ ಖಾತೆಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ. ಪ್ರಧಾನಿ ಮೋದಿ ಅವರ ನಿರೀಕ್ಷೆಯಂತೆ ಕೆಲಸ ಮಾಡುತ್ತೇನೆ” ಎಂದು ಕೇಂದ್ರದ ರಾಜ್ಯ ರೈಲ್ವೆ ಖಾತೆ ಹಾಗೂ ಜಗಶಕ್ತಿ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. “ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಶಿಕುಮಾರ್ ಸ್ವಾಮೀಜಿ ಅವರ ಗದ್ದಿಗೆ ದರ್ಶನ ಪಡೆದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಎನ್ ಡಿ ಎ ಒಕ್ಕೂಟದ ಮಂತ್ರಿ ಮಾಡಿದ್ದಾರೆ. ಪ್ರಧಾನಿ ಹಾಗೂ ಗೃಹ ಸಚಿವರಿಗೆ, ದೇವೇಗೌಡರಿಗೆ ಧನ್ಯವಾದ ಹೇಳುತ್ತೇನೆ” ಎಂದರು. “ಇಂದು ತುಮಕೂರು ಜಿಲ್ಲೆಯ ಸ್ವಾಮೀಜಿಗಳ ಭೇಟಿ ಮಾಡಿ ಆಶೀರ್ವಾದ ಪಡೆಯುತ್ತೇವೆ” ಎಂದರು. “ಮಧುಗಿರಿಯಲ್ಲಿ ಕಹಿ ಘಟನೆ ನಡೆದಿದೆ. ಕಲುಷಿತ ನೀರು ಕುಡಿದು ಸಾವನಪ್ಪಿದ್ದಾರೆ. ಇದು ನಡೆಯಬಾರದಿತ್ತು” ಎಂದರು. “ಈ ಕುರಿತು ಉಸ್ತುವಾರಿ ಸಚಿವರ ಜೊತೆ ಮಾತನಾಡಿದ್ದೇನೆ. ನಾನೂ ಜಿಲ್ಲಾಸ್ಪತ್ರೆಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸುತ್ತೇನೆ” ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಕೆ ಸುಧಾಕರ್ ಒಂದು ಮತ ಹೆಚ್ಚಿಗೆ ಲೀಡ್ ಪಡೆದರೆ ನಾನು ರಾಜೀನಾಮೆ ನೀಡುತ್ತೇನೆಂದು ಪ್ರದೀಪ್ ಈಶ್ವರ್ ಹೇಳಿಕೆ ಕೊಟ್ಟಿದ್ದರು.ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕೆಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರದೀಪ್ ಈಶ್ವರ್ ಪ್ರತಿಕ್ರಿಯಿಸಿದ್ದಾರೆ. ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕೆಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ ಪಕ್ಷದವರಿಗೆ ಧನ್ಯವಾದ. ಸುಧಾಕರ್‌ ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ನನ್ನ ಸವಾಲು ಸ್ವೀಕರಿಸುತ್ತಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಹಣದ ಹೊಳೆ ಹರಿದಿದೆ. ಬಿಜೆಪಿಯವರು ನಾನು ರಾಜೀನಾಮೆ ಕೊಡಬಹುದು ಅಂತ ಕಾಯ್ತಿದ್ದಾರೆ. ನಾನು ರಾಜೀನಾಮೆ ಕೊಟ್ರೆ ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ. ಆದರೆ ಅವರಿಗೆ ನಾನು ಆ ನೆಮ್ಮದಿ ಕೊಡಲ್ಲ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಒಂದು ವೇಳೆ ದರ್ಶನ್ ವಿರುದ್ಧದ ಆರೋಪ ಸಾಬೀತಾದರೆ ಶಿಕ್ಷೆ ಆಗಲಿ ಎಂದು ಆರ್. ಅಶೋಕ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಹಾಗೆಯೇ ಪೊಲೀಸರು ಸೂಕ್ತವಾಗಿ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದರು. ರಾಜ್ಯದಲ್ಲಿ ಅಪರಾಧ ಚಟುವಟಿಕೆ ಹೆಚ್ಚಿದೆ. ಚನ್ನಗಿರಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲಾಗಿದೆ. ಪೊಲೀಸರಿಗೆ ಕಪಾಳ ಮೋಕ್ಷವಾಗಿದೆ. ಕಾನೂನು ಪೊಲೀಸರ ಹಿಡಿತದಲ್ಲೇ ಇಲ್ಲ. ಆದ್ದರಿಂದ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿ ಮುಚ್ಚುಮರೆ ಮಾಡುತ್ತಿದ್ದಾರೆ. ನಾವು ಕರ್ನಾಟಕದಲ್ಲಿದ್ದೇವೆಯೇ ಹೊರತು ಜಮ್ಮು ಮತ್ತು ಕಾಶ್ಮೀರದಲ್ಲಿಲ್ಲ. ಇದನ್ನು ಟಿವಿ ಮಾಧ್ಯಮಗಳು ಚಿತ್ರೀಕರಣ ಮಾಡದಂತೆ ಕ್ರಮ ವಹಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿಯವರು ಕೂಡ ಈ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು. ತನಿಖೆ ಸರಿಯಾಗಿ ನಡೆದು ಸತ್ಯಾಂಶ ಹೊರಬರಲಿ. ಈ ಪ್ರಕರಣದಲ್ಲಿ ಮೃತನಾದ ವ್ಯಕ್ತಿ ಯಾವುದೇ ಅಪರಾಧಿ ಹಿನ್ನೆಲೆ ಹೊಂದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಎಷ್ಟೋ ಸಂದೇಶಗಳು ಬರುತ್ತವೆ. ಅದಕ್ಕಾಗಿ ಕೊಲೆ ಮಾಡಲು ಹೋಗಬಾರದು. ಇಂತಹ…

Read More