Author: admin

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ 98 ಜನರು ಅಸ್ವಸ್ತರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮಧುಗಿರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಹಾಗೂ ನೀರು ಸರಬರಾಜು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಗ್ರಾಮೀಣ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅಧಿಕಾರಿಗಳು, ನೀರಿನ ಸೇವನೆ ಮತ್ತು ಸೇವಿಸಿರುವ ಆಹಾರದಿಂದಾಗಿ ಒಟ್ಟು 98 ಜನರು ಅಸ್ವಸ್ತರಾಗಿದ್ದು, ಅದರಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ 39 ಜನರು ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಸ್ಥಳದಲ್ಲಿಯೇ ಚಿಕಿತ್ಸೆ ಪಡೆದು, ಗುಣಮುಖರಾಗಿ ಮನೆಗಳಿಗೆ ತೆರಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ವಿದೇಶ ಪ್ರವಾಸದಲ್ಲಿರುವ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಈ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಚಿನ್ನೇನಹಳ್ಳಿ ಗ್ರಾಮದ ಸಾರ್ವಜನಿಕರ ಆರೋಗ್ಯದ ಬಗ್ಗೆ ತೀವ್ರ ನಿಗಾ…

Read More

ಕೊಲೆ ಪ್ರಕರಣ ಸಂಬಂಧ ರೇಣುಕಾಸ್ವಾಮಿ ಅವರ ಮರಣೋತ್ತರ ಪರೀಕ್ಷಾ ವರದಿಯು ಪೊಲೀಸರಿಗೆ ತಲುಪಿದ್ದು, ಆತನ ಮರ್ಮಾಂಗ ಸೇರಿ ದೇಹದ 15 ಭಾಗಗಳಲ್ಲಿ ಗಾಯವಾಗಿರುವುದು ದೃಢಪಟ್ಟಿದೆ ಎಂಬುದು ವರದಿಯಲ್ಲಿ ನಮೂದಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬೌರಿಂಗ್ ಆಸ್ಪತ್ರೆಯ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿ ವರದಿಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ನೀಡಿದ್ದಾರೆ. ವರದಿಯಲ್ಲಿ ರೇಣುಕಾಸ್ವಾಮಿ ದೇಹದ ಯಾವ ಭಾಗದಲ್ಲಿ ರಕ್ತ ಬಂದಿತ್ತು?. ಎಲ್ಲೆಲ್ಲಿ ಗಾಯಗಳಾಗಿತ್ತು ಎಂಬುದನ್ನು ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿಯ ಮರ್ಮಾಂಗದ ಮೇಲೆ ಹಲ್ಲೆ ಮಾಡಿರುವುದು ಗೊತ್ತಾಗಿದ್ದು, ಆ ಭಾಗದಲ್ಲಿ ರಕ್ತಸ್ರಾವವಾಗಿದೆ. ಮರ್ಮಾಂಗಕ್ಕೆ ಹೊಡೆದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಅಲ್ಲದೇ, ಹೊಟ್ಟೆ ಭಾಗದಲ್ಲಿಯೂ ರಕ್ತ ಸೋರಿಕೆಯಾಗಿದೆ. ತಲೆಗೂ ಬಲವಾದ ಪೆಟ್ಟು ಬಿದ್ದಿದೆ. ಆದರೆ, ರಕ್ತ ಸೋರಿಕೆಯಾಗಿಲ್ಲ ಎಂದು ಮೂಲಗಳು ಮಾಹಿತಿ ನೀಡಿವೆ. ಕೈ ಮತ್ತು ಕಾಲುಗಳಲ್ಲಿ, ಬೆನ್ನು ಹಾಗೂ ಎದೆ ಭಾಗದಲ್ಲೂ ರಕ್ತ ಬಂದಿದೆ. ತೀವ್ರ ಹಲ್ಲೆಯಿಂದ ದೇಹದಲ್ಲಿ ರಕ್ತ ಹೆಪ್ಪುಗಟ್ಟಿ ಸಾವಾಗಿದೆ. ಮರದ ಪೀಸ್, ಬೆಲ್ಟ್ ಬಳಸಿ ಹಲ್ಲೆ ಮಾಡಲಾಗಿದ್ದು,…

Read More

ನಟ ದರ್ಶನ್ ಸೇರಿದಂತೆ 13 ಆರೋಪಿಗಳ ತನಿಖೆ ನಡೆಸುತ್ತಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ನಟ ಕಾಣದಂತೆ ಶಾಮಿಯಾನದ ಪರದೆ ಹಾಕಲಾಗಿದೆ. ಠಾಣೆಯ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿರುವುದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಗುರುವಾರ ಈ ಸಂಬಂಧ ನಗರದ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಪೊಲೀಸ್ ಠಾಣೆಗೆ 144 ಸೆಕ್ಷನ್ ಹಾಕುವುದು ಎಂದರೆಪೊಲೀಸ್ ಠಾಣೆ ರಕ್ಷಿಸಲು ಇನ್ನೊಬ್ಬ ಖಾಸಗಿಯವರಿಗೆ ಕೊಟ್ಟಂತೆ. ಅಂದರೆ, ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಹೋಗಿದೆ ಎಂಬುದಕ್ಕೆ ನಿದರ್ಶನ ಎಂದು ಆಕ್ಷೇಪಿಸಿದರು. ಮಾಧ್ಯಮದವರನ್ನು ದೂರ ಇಡುವ ಉದ್ದೇಶ, ಇನ್ನೊಬ್ಬರನ್ನು ದೂರವಿಡಲು ಮತ್ತು ಠಾಣೆಯಲ್ಲಿ ತಮ್ಮ ವೈಯಕ್ತಿಕ ಹಿತಾಸಕ್ತಿಯ ಚಟುವಟಿಕೆ ಮಾಡುವುದಕ್ಕಾಗಿ ಅಥವಾ ಯಾರನ್ನೋ ಓಲೈಕೆಗೆ 144ನೇ ಸೆಕ್ಷನ್ ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ಟೀಕಿಸಿದರು. ಕಾನೂನು ಎಲ್ಲರಿಗೂ ಸಮಾನ. ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡುವುದೇ ಕಾನೂನು. ನಮ್ಮ ಸಂವಿಧಾನದಂತೆ ಕಾನೂನಿನಡಿ ಎಲ್ಲರೂ ಸಮಾನರು. ಆದರೆ, ವಿಐಪಿಯನ್ನು ಕರೆದುಕೊಂಡು…

Read More

ಯಡಿಯೂರಪ್ಪನವರನ್ನು ಕೆಣಕಲು ಹೋದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ನಾಮವಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಬಿಜೆಪಿ ಹೇಳಿದೆ. ಈ ಕುರಿತು ಸಾಮಾಜಿಕ ಜಾಲತಾಣದ ‘ಎಕ್ಸ್ ‘ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿ, “ಲೋಕಸಭಾ ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ @INCIndia ನಾಯಕರು ಬಿಜೆಪಿ ವಿರುದ್ಧ ಒಂದಿಲ್ಲೊಂದು ಷಡ್ಯಂತ್ರ ರೂಪಿಸುವಲ್ಲಿ ತಲ್ಲೀನರಾಗಿದ್ದಾರೆ.” “@BJP4Karnataka ವಿರುದ್ಧ ಅಪಪ್ರಚಾರ ಮಾಡಿದ್ದ @RahulGandhi ಅವರನ್ನು ಕೋರ್ಟ್ ಮೆಟ್ಟಿಲು ಹತ್ತಿಸಿದ್ದಕ್ಕಾಗಿ ದ್ವೇಷ ರಾಜಕಾರಣ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಮಾನಸಿಕ ಅಸ್ವಸ್ಥೆ ನೀಡಿದ್ದ ದೂರನ್ನು ಆಧರಿಸಿ ರೈತ ನಾಯಕ ಮಾನ್ಯ ಶ್ರೀ @BSYBJP ಅವರನ್ನು ಬಂಧಿಸಲು ಹವಣಿಸುತ್ತಿದೆ.” ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ತಲೆದಂಡ ಹಾಗೂ ಸ್ವತಃ ಸರ್ಕಾರದ ಮೇಲೆ ಆರೋಪ ಬಂದಿರುವ ಬೆನ್ನಲ್ಲೇ ಭ್ರಷ್ಟಾಚಾರ ಪ್ರಕರಣದ ದಿಕ್ಕು ತಪ್ಪಿಸುವ ಉದ್ದೇಶದಿಂದ ಯಡಿಯೂರಪ್ಪನವರ ಮೇಲೆ ಅಪಪ್ರಚಾರದ ಷಡ್ಯಂತರ ರೂಪಿಸಿದ್ದಾರೆ.” “ಈ ಹಿಂದೆ ಸ್ವತಃ ಗೃಹ ಸಚಿವ @DrParameshwara ಅವರೇ ಮಾನಸಿಕ ಅಸ್ವಸ್ಥೆ ದುರುದ್ದೇಶಪೂರಿತವಾಗಿ ದೂರು…

Read More

ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಮೇಲೆ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಜೆಡಿಎಸ್ ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದು, ಆ ಸಂಭ್ರಮದಲ್ಲಿ ನಾನು ಭಾಗಿಯಾಗುತ್ತೇನೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಗುರುವಾರ ನಗರದಲ್ಲಿರುವ ಜೆಡಿಎಸ್ ಕಚೇರಿ(ಜೆ.ಪಿ.ಭವನ)ಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ಬೆಳಗ್ಗೆ 11.50ಕ್ಕೆ ದಿಲ್ಲಿಯಿಂದ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕುಮಾರಸ್ವಾಮಿ ಆಗಮಿಸಲಿದ್ದಾರೆ. ಅವರ ಸ್ವಾಗತಕ್ಕೆ ಎಲ್ಲ ಸಿದ್ಧತೆಗಳನ್ನು ಕಾರ್ಯಕರ್ತರು ಮಾಡಿಕೊಳ್ಳುತ್ತಿದ್ದಾರೆ. ವಿಮಾನ ನಿಲ್ದಾಣದಿಂದ ಪಕ್ಷದ ರಾಜ್ಯ ಕಚೇರಿ ಜೆಪಿ ಭವನಕ್ಕೆ ಬರಲಿರುವ ಅವರು ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಿದರು. ಅನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಸೌಹಾರ್ದ ಭೇಟಿ ಮಾಡಲಿದ್ದಾರೆ. ಬಳಿಕ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮನೆಗೆ ತೆರಳಿ ತಂದೆ, ತಾಯಿಯ ಆಶೀರ್ವಾದ ಪಡೆಯಲಿದ್ದಾರೆ. ನಂತರ ತಿರುಪತಿಗೆ ತೆರಳಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಮಾಹಿತಿ ನೀಡಿದರು. ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಸ್ಪರ್ಧೆ ಕುರಿತು…

Read More

ಬೆಂಗಳೂರು: ಹಾಸನ ಲೋಕಸಭೆ ಫಲಿತಾಂಶ ಅನಿರೀಕ್ಷಿತ ಬೆಳವಣಿಗೆ. ಹಾಸನದಲ್ಲಿ ಮತ್ತೆ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನ ಸೋಲಿಗೆ ಪ್ರತಿಕ್ರಿಯೆ ನೀಡಿದ ಅವರು, ಹಾಸನದ ಬೆಳವಣಿಗೆ ಅನಿರೀಕ್ಷಿತ. ಇಂತಹ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ, ಚುನಾವಣೆಯಲ್ಲಿ ಗೆಲುವು, ಸೋಲು ಸಾಮಾನ್ಯ. ದೇವೇಗೌಡರು ಸೋತಿರೋ ಇತಿಹಾಸ ಇದೆ. ಸೋತಿದ್ದಾರೆ ಅಂತ ಬೇಸರ ಮಾಡಿಕೊಂಡು ಮನೆಯಲ್ಲಿ ಕೂರೋದಿಲ್ಲ. ಸಾವಿರಾರು ಕಾರ್ಯಕರ್ತರು ಹಾಸನದಲ್ಲಿ ಇದ್ದಾರೆ. ಅವರಿಗಾಗಿ ನಾವು ಅವರ ಜೊತೆ ಇದ್ದೇವೆ. ಮತ್ತೆ ಪಕ್ಷ ಕಟ್ಟುವ ಕೆಲಸ ಹಾಸನದಲ್ಲಿ ಮಾಡುತ್ತೇವೆ ಎಂದರು. ಹಾಸನ ಸೋಲಿಗೆ ಕಾರಣ ಪಕ್ಷದ ಚೌಕಟ್ಟಿನಲ್ಲಿ ಮಾತನಾಡುತ್ತೇವೆ. ಆತ್ಮ ವಿಮರ್ಶೆ ಮಾಡಿಕೊಳುತ್ತೇವೆ. ಪ್ರಜ್ವಲ್‌ ರಿಂದ ಸೋಲಾಯಿತು ಎಂದು ನಾನು ಮಾತಾಡಲ್ಲ. ಟಿಕೆಟ್ ಕೊಟ್ಟಿದ್ರು. ಚುನಾವಣೆ ಆಗಿದೆ, ಸೋಲಾಯ್ತು. ಅದರ ಬಗ್ಗೆ ನಾನೇನು ಮಾತಾಡಲ್ಲ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಸಲಗ ಗೋಚರಿಸಿದೆ. ಕಳೆದ ರಾತ್ರಿ ಪ್ರಯಾಣಿಕರಿಂದ ತುಂಬಿ ತುಳುಕುತ್ತ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್‌ ಗೆ ಏಕಾಏಕಿ ಅಡ್ಡ ಬಂದು ನಿಂತಿದೆ. ನಿದ್ರೆಯ ಮಂಪರಿನಲ್ಲಿದ್ದವರೆಲ್ಲಾ ಗಾಬರಿಯಿಂದ ಎದ್ದು ಕಾಡಾನೆ ನೋಡುತ್ತಾ ಭಯದಲ್ಲೇ ಕಾಲ ಕಳೆಯುವಂತಾಗಿತ್ತು, ಅಂದ ಹಾಗೆ ಇದು ಅದೇ ಒಂಟಿ ಸಲಗ ಚಾರ್ಮಾಡಿ ಘಾಟಿಯಲ್ಲಿ ಮತ್ತರ ಸರ್ಕಾರಿ ಬಸ್ಸಿಗೆ ಕಾಡಾನೆ ಅಡ್ಡ ಬಂದಿದೆ. ಸರ್ಕಾರಿ ಬಸ್ಸಿನ ಪಕ್ಕದಲ್ಲೇ ಕಾಡಾನೆ ಕಳೆದ ರಾತ್ರಿ ಓಡಾಡಿದೆ. ಕಾಡಾನೆ ಕಂಡು ಬಸ್ ನ ಒಳಗೆ ಇದ್ದ ಪ್ರಯಾಣಿಕರು ಗಾಬರಿಯಾಗಿದ್ದಾರೆ ಚಾರ್ಮಾಡಿ ಘಾಟಿಯ ೭ ಮತ್ತು ೮ನೇ ತಿರುವಿನಲ್ಲಿ ಘಟನೆ ನಡೆದಿದೆ ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ಒಂಟಿ ಸಲಗ ನಿಂತಲ್ಲೇ ನಿಂತಿದ್ದು ಆನೆಯನ್ನ ಕಂಡು ತಕ್ಷಣ ಬಸ್ ಅನ್ನು ಚಾಲಕ ನಿಲ್ಲಿಸಿದ್ದಾನೆ. ಆನೆ ಸಂಚಾರ ಹಿನ್ನೆಲೆಯಲ್ಲಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಉಂಟಾಗಿತ್ತು ಚಿಕ್ಕಮಗಳೂರು ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್ ಆಗಿದ್ದು ಅರ್ಧ ಗಂಟೆ ಬಳಿಕ ಅರಣ್ಯಕ್ಕೆ…

Read More

ಭುವನೇಶ್ವರ: ಪುರಿಯ ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ಇಂದು ತೆರೆಯಲಾಗಿದೆ. ಚುನಾವಣೆಗೂ ಮುನ್ನ ಬಿಜೆಪಿ ಗೆದ್ದರೆ ದೇವಾಲಯದ ಎಲ್ಲಾ ದ್ವಾರಗಳನ್ನು ಭಕ್ತರಿಗಾಗಿ ತೆರೆಯುವುದಾಗಿ ಹೆಳಿತ್ತು. ಇದೀಗ ನೂತನವಾಗಿ ರಚನೆಯಾದ ಬಿಜೆಪಿ ಸರ್ಕಾರ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯನ್ನು ನೆರವೇರಿಸಿದೆ. ಬೆಳಗ್ಗೆ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ, ಪುರಿ ಸಂಸದ ಸಂಬಿತ್ ಪಾತ್ರ ಸೇರಿದಂತೆ ಬಿಜೆಪಿಯ ನಾಯಕರು ತೆರಳಿ ದೇವಾಲಯದ ದ್ವಾರಗಳನ್ನು ತೆರೆಯುವ ಮಹತ್ವದ ಕ್ಷಣದಲ್ಲಿ ಭಾಗಿಯಾಗಿದ್ದರು. ಮಾಂಝಿ ಅವರು ಬುಧವಾರದ ತಮ್ಮ ಮೊದಲ ಕ್ಯಾಬಿನೆಟ್ ಸಭೆಯಲ್ಲಿ, ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಮುಚ್ಚಲ್ಪಟ್ಟಿರುವ ಪವಿತ್ರ ದೇಗುಲದ ಎಲ್ಲಾ ದ್ವಾರಗಳನ್ನು ಭಕ್ತರಿಗಾಗಿ ಮತ್ತೆ ತೆರೆಯುವ ಪ್ರಸ್ತಾಪವನ್ನು ಅನುಮೋದಿಸಿದರು. ಅಲ್ಲದೇ 12ನೇ ಶತಮಾನದ ಈ ದೇಗುಲದ ಅಭಿವೃದ್ಧಿ ಹಾಗೂ ನಿರ್ವಹಣೆಗಾಗಿ 500 ಕೋಟಿ ರೂ. ಮೌಲ್ಯದ ಕಾರ್ಪಸ್ ನಿಧಿಯನ್ನು ಸ್ಥಾಪಿಸುವುದಾಗಿ ಕ್ಯಾಬಿನೆಟ್ ಘೋಷಿಸಿತು. ಪುರಿಯ ಜಗನ್ನಾಥ ದೇವಾಲಯದಲ್ಲಿ ನಾಲ್ಕು ದ್ವಾರಗಳಿವೆ. ಅವುಗಳೆಂದರೆ ಸಿಂಹದ್ವಾರ, ಅಶ್ವದ್ವಾರ, ವ್ಯಾಘ್ರದ್ವಾರ, ಮತ್ತು ಹಸ್ತಿದ್ವಾರ. ಈ ದ್ವಾರಗಳು ದೇವಾಲಯದ…

Read More

ಅತಿಯಾಗಿ ಪ್ರೀತಿಸ್ತಾನೆ, ಆದ್ರೆ ನನ್ನ ಜೊತೆ ಜಗಳವನ್ನೇ ಮಾಡಲ್ಲ ಎಂದು ಮಹಿಳೆಯೊಬ್ಬರು ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ವಿಚ್ಛೇದನ ಕೋರಿದ ಮಹಿಳೆಗೆ ತನ್ನ ಗಂಡ ತನ್ನೊಂದಿಗೆ ಬಹಳ ಮಾತಾಡಬೇಕು, ವಾದ ಮಾಡಬೇಕು, ಜಗಳವಾಡಬೇಕು ಎಂಬ ಆಸೆಯಿತ್ತಂತೆ. ಆದರೆ, ಆಕೆಯ ಗಂಡ ಆಕೆ ಏನೇ ಹೇಳಿದರೂ ಕೋಪಿಸಿಕೊಳ್ಳುತ್ತಿರಲಿಲ್ಲ. ಒಂದೇ ಒಂದು ದಿನವೂ ಆಕೆಯೊಂದಿಗೆ ಜಗಳವಾಡಲಿಲ್ಲ. ಇದರಿಂದ ಬೇಸತ್ತ ಆ ಮಹಿಳೆ ತನ್ನ ಗಂಡನ ಪ್ರೀತಿ ತನಗೆ ಉಸಿರುಗಟ್ಟಿಸುತ್ತಿದೆ ಎಂಬ ಕಾರಣಕ್ಕೆ ವಿಚ್ಛೇದನ ಕೋರಿದ್ದಾರೆ. ನನ್ನ ಗಂಡ ವಿಪರೀತ ಒಳ್ಳೆಯವನು. ಅವನೇ ನನಗಾಗಿ ಅಡುಗೆ ಮಾಡುತ್ತಾನೆ. ಮನೆಯ ಎಲ್ಲ ಕೆಲಸಗಳನ್ನು ಮಾಡಲು ಸಹಾಯ ಮಾಡುತ್ತಾನೆ. ನನಗೆ ಸ್ವಲ್ಪವೂ ತೊಂದರೆಯಾಗಲು ಬಿಡುವುದಿಲ್ಲ. ವಿಪರೀತ ಕಾಳಜಿ ವಹಿಸುತ್ತಾನೆ. ಇದೇ ನನಗೆ ಉಸಿರುಗಟ್ಟಿಸುತ್ತಿದೆ. ನಾವು ಬೇರೆ ದಂಪತಿಯಂತೆ ನಾರ್ಮಲ್ ಆಗಿಲ್ಲ ಎನಿಸುತ್ತಿದೆ. ನನ್ನ ಗಂಡ ಪ್ರತಿಯೊಂದು ವಿಚಾರದಲ್ಲೂ ನನ್ನೊಂದಿಗೆ ಕಾಂಪ್ರಮೈಸ್ ಆಗುವುದು ನನಗೆ ಇಷ್ಟವಾಗುವುದಿಲ್ಲ” ಎಂದು ಆ ಮಹಿಳೆ ಕೋರ್ಟ್ನಲ್ಲಿ ಹೇಳಿದ್ದಾರೆ. ನಾನು ತಪ್ಪು ಮಾಡಿದಾಗ ಅವನು ಯಾವಾಗಲೂ…

Read More

ನವದೆಹಲಿ: ನೀಟ್‌ ಯಜಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್‌ ಅಂಕಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. 1563 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನು ತೆಗೆದುಕೊಳ್ಳಲು ಆಯ್ಕೆಯನ್ನು ನೀಡಲಾಗುತ್ತದೆ ಅಥವಾ ಗ್ರೇಸ್ ಅಂಕಗಳಿಲ್ಲದೆ ಪಡೆದ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೇಳಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನೀಟ್‌ ಅನ್ಯಾಯ ಸೇರಿದಂತೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಎಲ್ಲಾ ಅರ್ಜಿಗಳನ್ನು ಜುಲೈ 8 ರಂದು ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್‌ ತಿಳಿಸಿದೆ. ಜೂನ್ 23 ರಂದು ಮರುಪರೀಕ್ಷೆ ನಡೆಯುವ ಸಾಧ್ಯತೆಯಿದ್ದು, ಜುಲೈ 1 ರ ಮೊದಲು ಫಲಿತಾಂಶ ಹೊರಬೀಳಲಿದೆ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆಪತ್ರಿಕೆ ವಿಳಂಬಗೊಂಡು ಗ್ರೇಸ್‌ ಅಂಕ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಮರು ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದು ಕೋರ್ಟ್‌ ಸ್ಪಷ್ಟಪಡಿಸಿದೆ. ಗ್ರೇಸ್ ಮಾರ್ಕ್ ನೀಡಿರುವುದನ್ನು ಪ್ರಶ್ನಿಸಿ ಅರ್ಜಿಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಎನ್‌ಟಿಎ (NTA) ಮರುಪರಿಶೀಲನೆಗೆ ಸಮಿತಿಯೊಂದನ್ನು ರಚಿಸಿತ್ತು.…

Read More