Subscribe to Updates
Get the latest creative news from FooBar about art, design and business.
- ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
- ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
- ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
- ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್ ಮಲ್ಲ ಬರ್ಬರ ಹತ್ಯೆ!
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
Author: admin
2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಗಳ(ಎಚ್‌ಎಸ್‌ಆರ್ ಪಿ) ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4ರವರೆಗೆ ವಿಸ್ತರಣೆ ಮಾಡಲಾಗಿದೆ. ವಾಹನ ಸವಾರರಿಗೆ ಎಚ್‌ಎಸ್‌ಆರ್ ಪಿ ಅಳವಡಿಸಿಕೊಳ್ಳಲು ಮತ್ತಷ್ಟು ದಿನ ಅವಕಾಶ ಸಿಕ್ಕಂತಾಗಿದೆ. ಹೆಚ್‌ಎಸ್‌ಆರ್ ಪಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4ರ ತನಕ ವಿಸ್ತರಣೆ ಮಾಡಿದೆ. ಅರ್ಜಿ ಸಲ್ಲಿಸುವ ವಿಧಾನ: https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ ಎಚ್‌ಎಸ್‌ಆರ್ ಪಿ ಪಡೆಯಲು ಅರ್ಜಿ ಸಲ್ಲಿಸಬಹುದು. ಮೊದಲು Book HSRP ಕ್ಲಿಕ್ ಮಾಡಿ. ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ. ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ. ನಂಬರ್ ಪ್ಲೇಟ್ ಬದಲಾಯಿಸಲು ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ. ಶುಲ್ಕವನ್ನು ಆನ್ ಲೈನ್ ನಲ್ಲಿ ಪಾವತಿಸಿ. (ನಗದು ರೂಪದಲ್ಲಿ ಪಾವತಿ ಮಾಡಲು ಅವಕಾಶ ಇಲ್ಲ). ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ…
ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಎನ್. ಚಂದ್ರಬಾಬು ನಾಯ್ಡು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲೇ ತಮಿಳಿಸೈ ವಿರುದ್ಧ ಅಮಿತ್ ಶಾ ಅಸಮಾಧಾನ ವ್ಯಕ್ತಪಡಿಸಿರುವ ಘಟನೆಯ ದೃಶ್ಯಾವಳಿಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅನುಷಾ ರವಿ ಸೂದ್ ಎಂಬ ಬಳಕೆದಾರರೊಬ್ಬರು, ಅಮಿತ್ ಶಾ ಹಾಗೂ ತಮಿಳಿಸೈ ನಡುವೆ ಮಾತಿನ ಚಕಮಕಿ ನಡೆಯಲು ತಮಿಳುನಾಡಿನಲ್ಲಿ ಬಿಜೆಪಿಗೆ ಆಗಿರುವ ಹಿನ್ನಡೆ ಕಾರಣ. ಫಲಿತಾಂಶದ ನಂತರ, ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ ಎಂದು ಬರೆದುಕೊಂಡಿದ್ದಾರೆ. ಅವರ ಈ ವ್ಯಾಖ್ಯಾನವು ಹಲವರ ಗಮನ ಸೆಳೆದಿದೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಒಂದೂ ಸ್ಥಾನ ಗಳಿಸದ ಬಿಜೆಪಿ ಹೀನಾಯ ಸೋಲು ಅನುಭವಿಸಿತ್ತು. ತಮಿಳುನಾಡಿನಲ್ಲಿರುವ ಎಲ್ಲ 39 ಸ್ಥಾನಗಳನ್ನು ಆಡಳಿತಾರೂಢ ಡಿಎಂಕೆ ನೇತೃತ್ವದ ಇಂಡಿಯಾ ಮೈತ್ರಿಕೂಟ ಬಾಚಿಕೊಂಡಿತ್ತು. ಇದರ ಬೆನ್ನಿಗೇ ಬಿಜೆಪಿಯ ರಾಜ್ಯಾಧ್ಯಕ್ಷರಾದ ಕೆ.ಅಣ್ಣಾಮಲೈ ವಿರುದ್ಧ ಪಕ್ಷದೊಳಗೆ ಭಿನ್ನಮತ ಸ್ಫೋಟಗೊಂಡಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಫಲಿತಾಂಶದಲ್ಲಿ ಭಾರಿ ಆಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕದಲ್ಲಿ ಮೂಡಿರುವ ಆತಂಕಕ್ಕೆ ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೆಂದ್ರ ಮೋದಿ ಯವರ ಸರ್ಕಾರದವಾಗಲಿ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ ಎಂದು ದತ್ತಾತ್ರಿ ಬಾಪೋರೆ ಯುವ ಕಾಂಗ್ರೆಸ್ ತಾಲೂಕ ಅಧ್ಯಕ್ಷರು ಔರಾದ ಆರೋಪಿಸಿದ್ದಾರೆ. ನೀಟ್ ಪರೀಕ್ಷೆಯಲ್ಲಿ 67 ಅಭ್ಯರ್ಥಿ ಗಳಿಗೆ 720ಕ್ಕೆ 720 ಅಂಕಗಳು ಬಂದಿವೆ. ಅಂದರೆ ಶೇ.100 ಅಂಕ ಬಂದಿದೆ. ಆದರೆ ಈ ಹಿಂದೆ ಬಂದ ಟಾಪರ್ ಗಳ ಸಂಖ್ಯೆ ಎಷ್ಟು? ಎಂಬುದನ್ನು ಹೋಲಿಕೆ ಮಾಡಿ ನೋಡಿದರೆ, ಈ ಬಾರಿಯ ಫಲಿತಾಂಶದಲ್ಲಿ ಅಕ್ರಮದ ವಾಸನೆ ಬಡಿಯುತ್ತದೆ. 2019ರಲ್ಲಿ ಒಬ್ಬ ವಿದ್ಯಾರ್ಥಿ, 2020ರಲ್ಲಿ ಒಬ್ಬ, 2021ರಲ್ಲಿ ಮೂವರು. 2022ರಲ್ಲಿ ಒಬ್ಬ, 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಪ್ರತಿಶತ ಅಂಕ ಪಡೆದಿದ್ದರೆ ಈ ವರ್ಷ 67 ವಿದ್ಯಾರ್ಥಿಗಳು ಟಾರ್ಪಗಳಾಗಿ ಹೊರಹೊಮ್ಮಿದ್ದಾರೆ. ನೀಟ್ ಪರೀಕ್ಷೆಯಲ್ಲಿ…
ಕರ್ನಾಟಕ ಮೂಲದ ಟೆಕ್ ಕಂಪೆನಿಗಳನ್ನು ಜಾಗತಿಕ ವಾಣಿಜ್ಯೀಕರಣ ಮತ್ತು ಅಂತರ್ ರಾಷ್ಟ್ರೀಯ ಮಾರುಕಟ್ಟೆಗಳಿಗೆ ವಿಸ್ತರಿಸುವ ಗುರಿಯನ್ನು ಹೊಂದಿರುವ 2024ರ ‘ಹೈಪರ್ ಗ್ರೋತ್ ಗ್ಲೋಬಲ್ ಕರ್ನಾಟಕ’ ಜಾಗತಿಕ ಲೇಟ್-ಸ್ಟೇಜ್ ಸ್ಕೇಲಿಂಗ್ ಕಾರ್ಯಕ್ರಮವನ್ನು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಲಂಡನ್ ಟೆಕ್ ವೀಕ್ ನಲ್ಲಿ ಘೋಷಿಸಿದರು. ಸ್ಟಾರ್ಟ್ ಅಪ್ ಜೀನೋಮ್ ಮತ್ತು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ನಡುವಿನ ಉಪಕ್ರಮವಾಗಿ ಈ ಕಾರ್ಯಕ್ರಮವನ್ನು ಲಂಡನ್ ಟೆಕ್ ವೀಕ್ ಶೃಂಗಸಭೆಯಲ್ಲಿ ಪ್ರಾರಂಭಿಸಲಾಯಿತು. ಈ ಕಾರ್ಯಕ್ರಮವು ದೃಢವಾದ ಕರ್ನಾಟಕ ಸ್ಟಾರ್ಟ್ ಅಪ್ ಸಮುದಾಯಕ್ಕೆ ಹೊಸ ಸೇರ್ಪಡೆಯಾಗಲಿದೆ, ಇದನ್ನು ಜಾಗತಿಕ ನವೋದ್ಯಮ ಎಕೊಸಿಸ್ಟಮ್ ವರದಿಯಲ್ಲಿ ಪ್ರಮುಖವಾಗಿ ನಮೂದಿಸಲಾಗಿದೆ. ಇದು ಸ್ಟಾರ್ಟ್ ಅಪ್ ಪರಿಸರ ವ್ಯವಸ್ಥೆಗಳಲ್ಲಿ ವಿಶ್ವದ ಅತ್ಯಂತ ಗುಣಮಟ್ಟದ-ನಿಯಂತ್ರಿತ ಡೇಟಾಸೆಟ್‍ನಿಂದ ಪಡೆದ ಪ್ರಕಟಣೆಯಾಗಿದೆ. ವರದಿಯು 300ಕ್ಕೂ ಅಧಿಕ ಉದ್ಯಮಶೀಲತಾ ನಾವೀನ್ಯತೆ ಪರಿಸರ ವ್ಯವಸ್ಥೆಗಳಾದ್ಯಂತ 4.5 ಮಿಲಿಯನ್ ಕಂಪೆನಿಗಳಿಂದ ಡೇಟಾವನ್ನು ವಿಶ್ಲೇಷಿಸುತ್ತದೆ ಮತ್ತು ಶ್ರೇಯಾಂಕಗಳನ್ನು ಒದಗಿಸಲು ಮತ್ತು ಪ್ರಪಂಚದಾದ್ಯಂತದ ಆರಂಭಿಕ ಪ್ರವೃತ್ತಿಗಳ ಬಗ್ಗೆ ಆಳವಾದ ಜ್ಞಾನವನ್ನು ನೀಡುತ್ತದೆ. ವರದಿಯಲ್ಲಿ, ಗ್ಲೋಬಲ್…
ಯುವಕನ ಹತ್ಯೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ನಟ ದರ್ಶನ್ ಪ್ರಕರಣದಲ್ಲಿ ರಾಜ್ಯ ಸರಕಾರ ಮಧ್ಯಪ್ರವೇಶ ಮಾಡುವ ಪ್ರಶ್ನೆಯೇ ಇಲ್ಲ. ಪೊಲೀಸರು ಕಾನೂನು ರೀತಿಯ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ಪ್ರಕರಣದಿಂದ ಬಚಾವ್ ಆಗಲು ಪ್ರಭಾವಿ ರಾಜಕಾರಣಿಯಿಂದ ಪ್ರಯತ್ನ ಮಾಡಿದ್ದರು ಎನ್ನುವ ಮಾತುಗಳು ಕೇಳಿಬಂದಿವೆ. ಆದರೆ, ನನಗೆ ಗೊತ್ತಿರುವಂತೆ ಯಾರು ಸಹ ಪ್ರಯತ್ನ ಮಾಡಿಲ್ಲ. ಕಾನೂನಿನಲ್ಲಿ ಏನೆಲ್ಲ ಕ್ರಮ ತೆಗೆದುಕೊಳ್ಳಲು ಅವಕಾಶವಿದೆ ಅದನ್ನು ಪೊಲೀಸರು ಮಾಡುತ್ತಾರೆ. ಇದರಲ್ಲಿ ಸರಕಾರದಿಂದ ನಾವ್ಯಾರು ಮಧ್ಯ ಪ್ರವೇಶಿಸುವುದಿಲ್ಲ. ಮುಕ್ತವಾಗಿ ತನಿಖೆ ನಡೆಸಲು ಪೊಲೀಸರಿಗೆ ಅವಕಾಶವಿದೆ ಎಂದು ತಿಳಿಸಿದರು. ಕೊಲೆಯಾದ ರೇಣುಕಾಸ್ವಾಮಿ ಕುಟುಂಬ ವರ್ಗದ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುತ್ತೇನೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣದಲ್ಲಿ ಭಾಗಿಯಾಗಿದ್ದ 13 ಜನರನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಕರಣದ ತನಿಖೆಯನ್ನು ಬೇರೆ ಏಜೆನ್ಸಿಗೆ ಕೊಡುವ ಅಗತ್ಯವಿಲ್ಲ. ತನಿಖೆ ಪೂರ್ಣವಾದ ಬಳಿಕ ಎಲ್ಲ ಮಾಹಿತಿ ಗೊತ್ತಾಗುತ್ತದೆ. ಅಲ್ಲಿಯವರೆಗೆ ಈ ಬಗ್ಗೆ ಅಧಿಕಾರಿಗಳನ್ನು…
ಸುಮಾರು ೯ ಲಕ್ಷ ರೂ. ಮೌಲ್ಯದ ೮೦ ಡ್ರಿಪ್ ಪೈಪ್ ಗಳ ಬಂಡಲ್ ಗಳನ್ನು ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಅಜ್ಜಂಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಳೆದ ಜೂ.೫ರಂದು ಅಜ್ಜಂಪುರ ತಾಲೂಕಿನ ಗಡೀಹಳ್ಳಿ ಮುಗಳಿ ಬಳಿಯ ಓಪನ್ ವೇರ್ ಹೌಸ್ ನೇಟಾಫಿಮ್ ನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು ೮೦ ಡ್ರಿಪ್ ಪೈಪ್ ಗಳ ಬಂಡಲ್ ಗಳು ಕಳವಾಗಿತ್ತು. ಈ ಸಂಬಂಧ ಅಂಗಡಿ ಮಾಲಕ ಅಜ್ಜಂಪುರ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಖಚಿತ ಮಾಹಿತಿ ಮೇರೆಗೆ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ವಾಹನವೊಂದನ್ನು ಪರಿಶೀಲಿಸಿದಾಗ ಕಳವಾಗಿದ್ದ ೮೦ ಡ್ರಿಪ್ ಪೈಪ್ ಗಳ ಬಂಡಲ್ ಗಳು ಪತ್ತೆಯಾಗಿವೆ. ಪ್ರಕರಣಕ್ಕೆ ಸಂಬಂಧಿಸಿ ಮುಗಳಿ ಗ್ರಾಮದವರೇ ಆದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಗಳಿ ಗ್ರಾಮದ ಅಜ್ಜಂಪುರ ನಿವಾಸಿಗಳಾದ ಶರತ್ ಎಂ.ಎನ್., ಸಾಗರ್ ಎಂ.ಕೆ., ಯಶವಂತ್, ಯತಿರಾಜು ಮತ್ತು ವೆಂಕಟೇಶ ಬಂಧಿತ ಆರೋಪಿಗಳು. ಆರೋಪಿಗಳಿಂದ ೮೦ ಡ್ರಿಪ್ ಪೈಪ್ ಬಂಡಲ್ ಗಳು,…
ಹಾಸ್ಯ ನಟ ಪೃಥ್ವಿರಾಜ್ ವಿರುದ್ಧ ವಿಜಯವಾಡದ ಕೌಟುಂಬಿಕ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ. ವಿಜಯವಾಡದ ಶ್ರೀಲಕ್ಷ್ಮಿ 1984 ರಲ್ಲಿ ನಟ ಪೃಥ್ವಿರಾಜ್ ಅವರನ್ನು ವಿವಾಹವಾಗಿದ್ದರು. ಇಬ್ಬರಿಗೂ ಒಬ್ಬ ಮಗ ಮತ್ತು ಮಗಳು ಇದ್ದಾರೆ. ಪೃಥ್ವಿರಾಜ್ ತಮ್ಮ ಪತ್ನಿಯ ನಡುವಿನ ಘರ್ಷಣೆಯಿಂದ ಬೇರ್ಪಟ್ಟಿದ್ದಾರೆ. ಶ್ರೀಲಕ್ಷ್ಮಿ ತನ್ನ ಇಬ್ಬರು ಮಕ್ಕಳೊಂದಿಗೆ ಹುಟ್ಟಿದ ಮನೆಯಲ್ಲಿದ್ದಾರೆ. 2017ರಲ್ಲಿ ಶ್ರೀಲಕ್ಷ್ಮಿ ನ್ಯಾಯಾಲಯದ ಮೊರೆ ಹೋಗಿದ್ದು, ತನ್ನ ಪತಿ ಪೃಥ್ವಿರಾಜ್‌ಗೆ ತಿಂಗಳಿಗೆ 8 ಲಕ್ಷ ರೂ.ಗಳನ್ನು ಕಾನೂನಾತ್ಮಕವಾಗಿ ಜೀವನಾಂಶ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದರು. ಅದಕ್ಕೆ ನ್ಯಾಯಾಲಯವೂ ಒಪ್ಪಿಗೆ ಸೂಚಿಸಿದ್ದು, ಶ್ರೀಲಕ್ಷ್ಮಿ ಅವರ ಕಾನೂನು ಹೋರಾಟದ ವೆಚ್ಚವನ್ನೂ ಪೃಥ್ವಿರಾಜ್ ಭರಿಸಬೇಕೆಂದು ಕೋರ್ಟ್ ತೀರ್ಪು ನೀಡಿತ್ತು. ಅದರಂತೆ ಪೃಥ್ವಿರಾಜ್ ಪ್ರತಿ ತಿಂಗಳು 10ನೇ ತಾರೀಖಿನೊಳಗೆ ಆಕೆಗೆ 8 ಲಕ್ಷ ರೂ. ಜೀವನಾಂಶವನ್ನು ಪಾವತಿಸಬೇಕು ಎಂದು ತೀರ್ಪು ನೀಡಿತ್ತು. ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ನ್ಯಾಯಾಲಯದ ಆದೇಶದಂತೆ ಪೃಥ್ವಿರಾಜ್ ಪತ್ನಿಗೆ 8…
ಬಿಟ್ ಕಾಯಿನ್ ಹಗರಣ ಪ್ರಕರಣ ಸಂಬಂಧ ಎಸ್‍ಐಟಿ ಅಧಿಕಾರಿಗಳು ಕಾಂಗ್ರೆಸ್ ಯುವ ಮುಖಂಡ ಮುಹಮ್ಮದ್ ನಲಪಾಡ್ ಅವರನ್ನು ಬುಧವಾರ ವಿಚಾರಣೆಗೊಳಪಡಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಯಾನೆ ಶ್ರೀಕಿಯೊಂದಿಗೆ ನಂಟು ಹೊಂದಿದ್ದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ನೋಟಿಸ್ ನೀಡಲಾಗಿತ್ತು. ಸಿಐಡಿಯ ಇ-ಪ್ರೊಕ್ಯೂರ್ ಮೆಂಟ್ ಜಾಲತಾಣ ಹ್ಯಾಕ್ ಮಾಡಿ 1 ಕೋಟಿ ರೂಪಾಯಿ ವಂಚಿಸಿದ್ದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಐಪಿಎಸ್ ಅಧಿಕಾರಿ ವಂಶಿಕೃಷ್ಣ ಅವರ ಎದುರು ನಲಪಾಡ್ ಹಾಜರಾಗಿದ್ದಾರೆ. 2018ರಲ್ಲಿ ವಿದ್ವತ್ ಎಂಬಾತನ ಮೇಲೆ ಕೊಲೆಯತ್ನ ಪ್ರಕರಣದಲ್ಲಿ ನಲಪಾಡ್ ಜೊತೆಗೆ ಶ್ರೀಕಿ ಆರೋಪಿಯಾಗಿದ್ದ. ಇಬ್ಬರೂ ಪರಸ್ಪರ ಪರಿಚಯಸ್ಥರಾಗಿದ್ದು, ಇಬ್ಬರ ನಡುವೆ ಹಣಕಾಸು ವಹಿವಾಟು ನಡೆದಿತ್ತಾ? ಎಂಬ ಮಾಹಿತಿ ಸಂಗ್ರಹಿಸಲು ನಲಪಾಡ್ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಶ್ರೀಕಿ ಗೆಳತಿಯನ್ನು ತನಿಖಾಧಿಕಾರಿಗಳು ವಿಚಾರಣೆ ನಡೆಸಿದ್ದರು. ಬಿಟ್ ಕಾಯಿನ್ ಪ್ರಕರಣದಲ್ಲಿ ಬಂಧಿತನಾಗಿದ್ದಾಗ ಶ್ರೀಕಿಗೆ ಇನ್ ಸ್ಪೆಕ್ಟರ್ ಪ್ರಶಾಂತ್ ಬಾಬು ಲ್ಯಾಪ್ ಟಾಪ್ ನೀಡಿದ್ದರು. ಈ ವೇಳೆ ಕೆಲಸದ…
ಒಡಿಶಾ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಮೋಹನ್ ಚರಣ್ ಮಾಝಿ ಕೃಷಿಕರಾಗಿ, ಆರೆಸ್ಸೆಸ್ ಶಾಲೆಯ ಶಿಕ್ಷಕರಾಗಿ, ಸರಪಂಚರಾಗಿ, ಆದಿವಾಸಿ ಹಕ್ಕುಗಳ ಹೋರಾಟಗಾರರಾಗಿ ಮತ್ತು ಗಣಿ ಮಾಫಿಯಾ ವಿರುದ್ಧದ ಚಳವಳಿಗಾರರಾಗಿ ವೈವಿಧ್ಯಮಯ ಅನುಭವಗಳನ್ನು ಹೊಂದಿದ್ದಾರೆ. ಈ ಪೂರ್ವ ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿಯ ಸಿಎಂ ಆದ 52 ವರ್ಷ ವಯಸ್ಸಿನ ಮಾಝಿ ಕಿಯೊಂಝರ್ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಾಸಕರಾದ ಮೇಲೂ ರಾಜಧಾನಿಯಲ್ಲಿ ನನಗೆ ಬಾಡಿಗೆ ಮನೆ ಮಾಡುವ ಸಾಮರ್ಥ್ಯ ಇಲ್ಲ ಎಂದು ಹೇಳಿದವರು. ಈ ಪೂರ್ವ ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿಯ ಸಿಎಂ ಆದ 52 ವರ್ಷ ವಯಸ್ಸಿನ ಮಾಝಿ ಕಿಯೊಂಝರ್ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ದೇಶದ ಮೊಟ್ಟಮೊದಲ ಆದಿವಾಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮುದಾಯವಾದ ಸಂತಾಲ ಸಮಾಜಕ್ಕೆ ಸೇರಿದ ಮಾಝಿ ಅವರನ್ನು ಬಿಜೆಪಿ ಸಿಎಂ ಹುದ್ದೆಗೆ ಆಯ್ಕೆ ಮಾಡಿದೆ. ಆದಿವಾಸಿ ಪ್ರಾಬಲ್ಯದ ಜಾರ್ಖಂಡ್ ವಿಧಾನಸಭೆಗೆ ಸದ್ಯದಲ್ಲೇ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಕಾರ್ಯತಂತ್ರದ ಭಾಗವಾಗಿ…
ತುಮಕೂರು: ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ವಿಚಾರಿಸಿದರು. ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟು, ಇನ್ನೂ ಕೆಲವರು ಚಿಕಿತ್ಸೆ ಪಡೆಯುತ್ತಿರುವ ವಿಚಾರ ತಿಳಿದು ಸಚಿವರು ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯರು ಹಾಗೂ ಮಕ್ಕಳ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಅವರು, “ಕುಡಿಯುವ ನೀರಿನ ಸಮಸ್ಯೆ ಇರುವ ಕಡೆಗೆ ಗಮನ ಹರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೂ ಸಣ್ಣಪುಟ್ಟ ವ್ಯತ್ಯಾಸಗಳಾಗಿವೆ. ಮೂವರು ಮೃತಪಟ್ಟಿದ್ದು ಬೇಸರ ಸಂಗತಿ. ಈಗಾಗಲೇ ಪರಿಸ್ಥಿತಿ ಸುಧಾರಿಸಿದ್ದು, ಬೇರೆ ಕಡೆಯೂ ಇಂತಹ ಸಮಸ್ಯೆ ಆಗದಂತೆ ಗಮನ ನೀಡುವಂತೆ ಸೂಚಿಸಲಾಗಿದೆ” ಎಂದು ಮಾಹಿತಿ ನೀಡಿದರು. “ಕಲುಷಿತ ನೀರು ಸರಬರಾಜಿಗೆ ಸಂಬಂಧಪಟ್ಟಂತೆ ಈಗಾಗಲೇ ಇಬ್ಬರು ವಾಟರ್ ಮ್ಯಾನ್ ಗಳನ್ನು ಅಮಾನತುಗೊಳಿಸಲಾಗಿದೆ” ಎಂದು ತಿಳಿಸಿದರು. ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಜೂ7 ರಿಂದ ಲಕ್ಷ್ಮಿದೇವಿ ಮತ್ತು ಕೆಂಪಮ್ಮ ಜಾತ್ರೆ ಇತ್ತು. ಈ ವೇಳೆ ನಾನಾ ಭಾಗಗಳಿಂದ…