Subscribe to Updates
Get the latest creative news from FooBar about art, design and business.
- ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
- ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
- ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
- ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್ ಮಲ್ಲ ಬರ್ಬರ ಹತ್ಯೆ!
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
Author: admin
ಶ್ರೀದೇವಿ ಬೈರಪ್ಪ ಅವರು ಯಾವುದೇ ರೀತಿಯಲ್ಲಿ ಹಣ ಮತ್ತು ಆಸ್ತಿಗೆ ಆಸೆ ಪಡುತ್ತಿಲ್ಲ. ಆಕೆ ವಿದ್ಯಾವಂತೆ, ಎಲ್ಲವನ್ನೂ ಆಕೆ ಮ್ಯಾನೇಜ್ ಮಾಡುತ್ತಿದ್ದಾರೆ ಎಂದು ಲಾಯರ್ ಹೇಳಿದ್ದಾರೆ. ಪ್ರೀತಿಸಿ ಮದುವೆಯಾಗಿ ಜೀವ ನಡೆಸಿರುವ ಯುವ ರಾಜ್ ಕುಮಾರ್ ಇದ್ದಕ್ಕಿದ್ದಂತೆ ವಿಚ್ಛೇದನ ಬೇಕೆಂದು ನೋಟಿಸ್ ಕಳುಹಿಸಲು ಕಾರಣವೇನು? ಅಲ್ಲದೇ ಶ್ರೀದೇವಿ ಅವರ ತಂದೆ ಭೈರಪ್ಪನವರು ಕೂಡಾ ಸ್ಪಷ್ಟವಾಗಿ ಹೇಳಿದ್ದಾರೆ ನಮಗೆ ಅವರಿಂದ ಯಾವ ಹಣ ಕೂಡಾ ಬೇಕಿಲ್ಲ ಎಂದು” ಎಂದು ಶ್ರೀದೇವಿ ಭೈರಪ್ಪ ಲಾಯರ್ ದೀಪ್ತಿ ಆಯಾಥಾನ್ ಮಾತನಾಡಿದ್ದಾರೆ. ಆಕೆಗೆ ಪರೀಕ್ಷೆ ಇರುವ ಸಮಯದಲ್ಲಿ ನೋಟಿಸ್ ಕಳುಹಿಸಿದ್ದಾರೆ. ಹಾರ್ವರ್ಡ್ ಅಂತ ಪ್ರತಿಷ್ಠಿತ ಸಂಸ್ಥೆಯಲ್ಲಿ ಓದುತ್ತಿರುವಾಗ ಪರೀಕ್ಷೆ ಇರುವ ಸಮಯದಲ್ಲಿ ನೋಟಿಸ್ ಕೊಟ್ಟಿದ್ದಾರೆ. ಡಿಸೆಂಬರ್ ವರೆಗೆ ಊಟ ಆಯಿತಾ ಮಗಳೇ ಎಂದು ಮೆಸೇಜ್ ಬಂದಿದೆ ಆಮೇಲೆ ಎಲ್ಲಾ ಸ್ಟಾಪ್ ಆಗಿದೆ ಎಂದು ಲಾಯರ್ ಹೇಳಿದ್ದಾರೆ. ಪ್ರೀತಿಯಿಂದ ಯುವ ಮಾತನಾಡಿಸಿರುವ ಪ್ರತಿಯೊಂದು ಮೆಸೇಜ್ ಡಿಸೆಂಬರ್ ವರೆಗೂ ಇದೆ. ಅವರು ಮೊದಲು ನೋಟಿಸ್ ಕೊಟ್ಟಿರುವ ಕಾರಣ ಶ್ರೀದೇವಿ ಅವರು…
ಹಾಲಿಗೆ ಅರಿಶಿನ ಸೇರಿಸಿ ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ. ರಕ್ತವನ್ನು ಶುದ್ಧೀಕರಿಸುತ್ತದೆ: ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ. ರಕ್ತ ಪರಿಚಲನೆ ಹೆಚ್ಚಿಸಲು ಸಹಾಯ ಮಾಡುತ್ತದೆ. ಎಲ್ಲಾ ಕಲ್ಮಶಗಳಿಂದ ರಕ್ತನಾಳಗಳು ಮತ್ತು ದುಗ್ಧರಸ ವ್ಯವಸ್ಥೆ(ಲಿಂಫ್ಯಾಟಿಕ್ ಸಿಸ್ಟಮ್)ಯನ್ನು ಶುದ್ಧಗೊಳಿಸುತ್ತದೆ. ಕ್ಯಾನ್ಸರ್ ತಡೆಗಟ್ಟುತ್ತದೆ: ಅರಿಶಿನ ಹಾಲನ್ನು ನಿಯಮಿತವಾಗಿ ಸೇವಿಸುವುದರಿಂದ ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯಬಹುದು. ಅರಿಶಿನದಲ್ಲಿರುವ ‘ಕರ್ಕ್ಯುಮಿನ್ ‘ ಕ್ಯಾನ್ಸರ್ ಕೋಶಗಳನ್ನು ಕೊಲ್ಲಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆ ಹೆಚ್ಚಿಸುತ್ತದೆ: ಅರಿಶಿನದ ಹಾಲು ಜೀರ್ಣಕ್ರಿಯೆಯನ್ನು ಹೆಚ್ಚಿಸಿ ಹೊಟ್ಟೆಯ ಹುಣ್ಣು ಮತ್ತು ಅತಿಸಾರವನ್ನು ತಡೆಯುತ್ತದೆ. ಹೊಟ್ಟೆಯುಬ್ಬರ, ಎದೆಯುರಿ, ಇತರ ಜಠರಗರುಳಿನ ಸೋಂಕುಗಳಿದ್ದರೆ ಪ್ರತಿದಿನ…
ಕಲಬುರಗಿ: ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿದ್ದ ಸುಮಾರು 150 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಶಹಾಬಾದ ನಗರದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಡಿತರ ಅಕ್ಕಿ ವಿತರಿಸದೇ ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಡಿವೈಎಸ್ ಪಿ ಶಂಕರಗೌಡ ಪಾಟೀಲ ಹಾಗೂ ಪಿಐ ನಟರಾಜ ಲಾಡೆ ಅವರು ವಾಹನವನ್ನು ನಗರದ ವಾಡಿ ವೃತ್ತದಲ್ಲಿ ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಲಾರಿ ಚಾಲಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಟ್ರಕ್ನಲ್ಲಿ ಸುಮಾರು150 ಕ್ವಿಂಟಾಲ್ ಪಡಿತರ ಅಕ್ಕಿಯ ಚೀಲವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಹಾಬಾದನ ಜುನೈದ್ ಎಂಬಾತ ಶಹಾಬಾದದಿಂದ ಉಮರ್ಗಾ ಕಡೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಎಂದು ತಿಳಿದು ಬಂದಿದೆ. ಉಮರ್ಗಾ ಅಕ್ಕಿ ಗೋಡಾನ ಮಾಲೀಕನ ವಿರುದ್ಧ ಶಹಬಾದ ನಗರ ಪೊಲೀಸ್ ಠಾಣೆಯಲ್ಲಿ ದೂರ ದಾಖಲಾಗಿದೆ. ಈ ಕಾರ್ಯಾ ಚರಣೆಯಲ್ಲಿ ಪಿಎಸ್‍ಐ ಶಿವರಾಯ, ಸಿಬ್ಬಂದಿ ಗುಂಡಪ್ಪ, ಶ್ರೀಕಾಂತ್ ಉಪಳಪ್ಪ ಮತ್ತು ಆಹಾರ ಇಲಾಖೆಯ ನಿರ್ದೇಶಕರಾದ ಶ್ರೀಕಾಂತ್ ಮತ್ತು ಮಂಜು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆಗೈದ ಪ್ರಕರಣದಲ್ಲಿ ದರ್ಶನ್ ಮತ್ತು ಸಹಚರರು ಅರೆಸ್ಟ್ ಆದ ಬೆನ್ನಲ್ಲೇ ಸ್ಪೋಟಕ ಮಾಹಿತಿಗಳು ಹೊರಬರುತ್ತಿವೆ. ಈ ಕೊಲೆಯಾದ ಮೇಲೆ ಮೃತದೇಹ ವಿಲೇವಾರಿಗೆ ೩೦ ಲಕ್ಷಕ್ಕೆ ಡೀಲ್ ನಡೆದಿತ್ತು ಎನ್ನಲಾಗಿದೆ. ರೇಣುಕಾಸ್ವಾಮಿಯನ್ನು ಕೊಲೆಮಾಡಿ ಮೃತದೇಹ ವಿಲೇವಾರಿ ಬಳಿಕ ಹಂತಕರಿಗೆ ನಡುಕ ಶುರುವಾಗಿತ್ತು. ಹೀಗಾಗಿ ಮೂವರಲ್ಲಿ ಶರಣಾಗುವಂತೆ ದರ್ಶನ್ ಸೂಚನೆ ನೀಡಿದ್ದರು. ಜೂನ್ 10 ರಂದು ಮೂವರು ಕಾಮಾಕ್ಷಿಪಾಳ್ಯ ಠಾಣೆಗೆ ಶರಣಾಗಿ ನಾವು ಹಣಕಾಸು ವಿಚಾರಕ್ಕೆ ಕೊಲೆ ಮಾಡಿರುವುದಾಗಿ ಹೇಳಿಕೆ ನೀಡಿದ್ದರು. ಕೊಲೆ ಮಾಡಿ ಶರಣಾದ ಹಿನ್ನೆಲೆಯಲ್ಲಿ ಅನುಮಾನಗೊಂಡ ಪೊಲೀಸರು ಮೂವರನ್ನು ಪ್ರತ್ಯೇಕವಾಗಿ ಕರೆದು ಪೊಲೀಸ್ ಶೈಲಿಯಲ್ಲಿ ವಿಚಾರಣೆ ನಡೆಸಿ ಯಾರ ಮಾಹಿತಿ ಮೇರೆಗೆ ಬಂದು ಶರಣಾಗಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಒಬ್ಬೊಬ್ಬರು ಸಂಬಂಧವೇ ಇಲ್ಲದ ಒಂದೊಂದು ಹೇಳಿಕೆ ನೀಡಿದ್ದಾರೆ. ಪೊಲೀಸರು ಮತ್ತೆ ತನಿಖೆಗೆ ಇಳಿದು ಮೊಬೈಲ್ ಪರಿಶೀಲನೆ ನಡೆಸಿದಾಗ ದರ್ಶನ್‌ಗೆ ರಾತ್ರಿಯಿಡಿ ವಾಟ್ಸಪ್ ಕರೆ ಮಾಡಿರುವ ವಿಚಾರ ಗೊತ್ತಾಗಿದೆ. ಈ ವಿಚಾರ ತಿಳಿದು ವಿಚಾರಣೆಯನ್ನು ಮತ್ತಷ್ಟು ತೀವ್ರಗೊಳಿಸಿದಾಗ ಈ…
ಹದಿನೆಂಟನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಂದು ಆರಂಭಗೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಈ ಅಧಿವೇಶನದಲ್ಲಿ ಎಲ್ಲಾ ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೂನ್ 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಎರಡೂ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಧಿವೇಶನ ಜುಲೈ 3ರಂದು ಅಂತ್ಯಗೊಳ್ಳಲಿದೆ. ಈ ಅಧಿವೇಶನದ ವೇಳೆ ಲೋಕಭೆಯ ನೂತನ ಸ್ಪೀಕರ್ ಆಯ್ಕೆಯಾಗಲಿದ್ದಾರೆ. ಬಿಜೆಪಿ ಮತ್ತು ಅದರ ಎನ್ ಡಿಎ ಮಿತ್ರಪಕ್ಷಗಳ ನಡುವೆ ಈ ಮಹತ್ವದ ಹುದ್ದೆಗೆ ಈಗಾಗಲೇ ಮಾತುಕತೆಗಳು ನಡೆಯುತ್ತಿವೆ. ಲೋಕಸಭೆಯ ಮೊದಲ ಸಭೆಯಲ್ಲಿಯೇ ಸ್ಪೀಕರ್ ಆಯ್ಕೆ ನಡೆಯುತ್ತದೆ. ಇದಕ್ಕೂ ಮೊದಲು ಅತ್ಯಂತ ದೀರ್ಘಾವಧಿ ಸಂಸದರಾಗಿ ಸೇವೆ ಸಲ್ಲಿಸಿದ ಸದಸ್ಯರೊಬ್ಬರನ್ನು ಹಂಗಾಮಿ ಸ್ಪೀಕರ್ ಆಗಿ ಆರಿಸಲಾಗುತ್ತದೆ. ಈ ಹಂಗಾಮಿ ಸ್ಪೀಕರ್ ನೂತನ ಸಂಸದರ ಪ್ರಮಾಣವಚನ ಸ್ವೀಕಾರ ವೇಳೆ ಸದನದ ಅಧ್ಯಕ್ಷತೆ ವಹಿಸುತ್ತಾರೆ. ಎನ್ ಡಿಎ ಮೈತ್ರಿಕೂಟದ ಪ್ರಮುಖ ಭಾಗವಾಗಿರುವ ಟಿಡಿಪಿ ಮತ್ತು ಜೆಡಿ(ಯು) ಸ್ಪೀಕರ್ ಹುದ್ದೆಗಾಗಿ ಪೈಪೋಟಿ ನಡೆಸುತ್ತಿವೆ ಎನ್ನಲಾಗಿದೆ. 90ರ ದಶಕದಲ್ಲಿ…
ಶ್ರೀರಾಮ ಸೇನೆ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮವನ್ನು ಧಾರವಾಡ ನಗರದ ವಿದ್ಯಾಗಿರಿಯ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ರಾಮಲಿಂಗೇಶ್ವರ ಸಂಸ್ಥಾನ ಮಠದ ಮಾತಾ ವಚನಶ್ರೀ ಮಹಿಳೆಯರಿಗೆ ತ್ರಿಶೂಲ ದೀಕ್ಷಾ ನೀಡಿ. ಆಮೇಲೆ ಚಮತ್ಕಾರ ನೋಡಿ. ಮಹಿಳೆಯರು ತಮ್ಮ ರಕ್ಷಣೆಗಾಗಿ ಸದಾ ಜಾಗರೂಕರಾಗಿರಬೇಕು. ಜಿಹಾದಿಗಳಿಗೆ ಹಾಗೂ ಕಾಮುಕರಿಗೆ ತಕ್ಕ ಶಾಸ್ತಿ ಮಾಡಲು ಶಸ್ತ್ರ ಬಳಕೆ ಮಾಡಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಉಚ್ಚ ನ್ಯಾಯಾಲಯದ ವಕೀಲರಾದ ಸಚಿನ ಕುಲಕರ್ಣಿ, ಶ್ರೀ ರಾಮ ಸೇನಾ ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ ಸೇರಿದಂತೆ ಹಲವರು ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
100 ದೇಶಗಳನ್ನು ತಲುಪಿದ ಸ್ಟಾರ್ ಲಿಂಕ್ ನ ಇಂಟರ್ನೆಟ್ಸ್ಯಾಟಲೈಟ್ ಇಂಟರ್ನೆಟ್ ಸೇವೆ ಒದಗಿಸುವ ಕಂಪನಿ ಸ್ಟಾರ್ ಲಿಂಕ್ ಈಗ 100 ದೇಶಗಳನ್ನು ತಲುಪಿದೆ. ಸ್ವತಃ ಸ್ಪೇಸ್ ಎಕ್ಸ್ ಸಿಇಓ ಎಲೋನ್ ಮಸ್ಕ್ ಈ ಮಾಹಿತಿಯನ್ನು ನೀಡಿದ್ದಾರೆ. ಆಫ್ರಿಕನ್ ದೇಶ ಸಿಯೆರಾ ಲಿಯೋನ್ ಸ್ಟಾರ್‌ಲಿಂಕ್‌ನ ಇಂಟರ್ನೆಟ್ ಸೇವೆಯನ್ನು ಪ್ರಾರಂಭಿಸಿದ 100 ನೇ ದೇಶವಾಗಿದೆ. ಸಿಯೆರಾ ಲಿಯೋನ್ ಆಫ್ರಿಕಾದ 10 ನೇ ದೇಶವಾಗಿದೆ, ಅಲ್ಲಿ ಸ್ಟಾರ್‌ಲಿಂಕ್ ಇಂಟರ್ನೆಟ್ ತಲುಪಿದೆ. ಈ ಸುದ್ದಿಯನ್ನು ಮೊದಲು ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಎಕ್ಸ್ ನಲ್ಲಿ ಹಂಚಿಕೊಳ್ಳಲಾಗಿದೆ (ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು). ಸ್ಟಾರ್‌ಲಿಂಕ್ ಈ ಕುರಿತು ಎಕ್ಸ್ ನಲ್ಲಿ ಬರೆದುಕೊಂಡಿದೆ. ಸ್ಟಾರ್ ಲಿಂಕ್ ಒಂದು ವರ್ಷದ ನಂತರ ಪರವಾನಗಿ ಪಡೆಯಿತು: ನ್ಯಾಷನಲ್ ಕಮ್ಯುನಿಟಿ ಅಥಾರಿಟಿ ಆಫ್ ಸಿಯೆರಾ ಲಿಯೋನ್ (NATCA) 2023 ರಿಂದ ಪ್ರಾರಂಭವಾಗುವ ಒಂದು ವರ್ಷದ ತಾಂತ್ರಿಕ ಮೌಲ್ಯಮಾಪನದ ನಂತರ ಸ್ಟಾರ್‌ಲಿಂಕ್ ಗೆ ಪರವಾನಗಿಯನ್ನು ನೀಡಿದೆ. ಈ ದೇಶದ ಡೇವಿಡ್ ಮೊಯಿನಿನಾ ಸೆಂಗಾ ಅವರು ಇದನ್ನು…
ರಾಮನಗರ: ಮಂಡ್ಯ ಬಿಟ್ಟರೂ ಚನ್ನಪಟ್ಟಣ ಬಿಟ್ಟು ಕೊಡಲ್ಲ ಎಂದು ಡಿಕೆ ಸುರೇಶ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮಂಡ್ಯದಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ರಾಜೀನಾಮೆ ನೀಡುತ್ತಾರೆ. ಚನ್ನಪಟ್ಟಣ ಕ್ಷೇತ್ರವನ್ನ ಕುಮಾರಸ್ವಾಮಿ ಉಳಿಸಿಕೊಳ್ಳುತ್ತಾರೆ. ಚನ್ನಪಟ್ಟಣಕ್ಕೆ ಇನ್ನೂ ಬೈ ಎಲೆಕ್ಷನ್ ಘೋಷಣೆ ಆಗಿಲ್ಲ. ಯಾಕಂದ್ರೆ ಹಾಲಿ ಶಾಸಕರು ಇನ್ನೂ ರಾಜೀನಾಮೆ ನೀಡಿಲ್ಲ. ನಮಗೆ ವಿಶ್ವಾಸ ಇದೆ ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ಚನ್ನಪಟ್ಟಣ ಬಿಟ್ಟು ಹೋಗಲ್ಲ. ಅವರಿಗೆ ಅಧಿಕಾರಕ್ಕಿಂತ ಕ್ಷೇತ್ರದ ಜನ, ಕಾರ್ಯಕರ್ತರು ಮುಖ್ಯ. ನಾನು ಸಾಕಷ್ಟು ಬಾರಿ ಅವರ ಮಾತುಗಳನ್ನ ಆಲಿಸಿದ್ದೇನೆ. ಚನ್ನಪಟ್ಟಣ, ರಾಮನಗರ ನನ್ನ ಎರಡು ಕಣ್ಣುಗಳು ಅಂದಿದ್ರು. ಅಧಿಕಾರ ಇದ್ದಾಗ, ಇಲ್ಲದಿದ್ದಾಗ ಅವರ ಮಾತುಗಳನ್ನ ನೋಡಿದ್ದೇನೆ. ಅಲ್ಲದೇ ಅವರು ಹೃದಯವಂತರು ಕೂಡ. ಹಾಗಾಗಿ ಚನ್ನಪಟ್ಟಣ ಉಳಿಸಿಕೊಳ್ತಾರೆ ಅನ್ನೋ ವಿಶ್ವಾಸ ಇದೆ ಎಂದು ವ್ಯಂಗ್ಯವಾಡಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ಬೈಎಲೆಕ್ಷನ್ ನಲ್ಲಿ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಡಿಕೆ ಸುರೇಶ್ ಗೆ ಒತ್ತಾಯಿಸಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಕೃತಜ್ಞತಾ ಸಭೆ ಮುಗಿಸಿಕೊಂಡು ಹೋಗುತ್ತಿದ್ದ…
ವಿಶ್ವದ 4ನೇ ಅತಿ ದೊಡ್ಡ ಸೇನೆಯಾದ ಭಾರತೀಯ ಸೇನೆಯ ಹೊಸ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ಸರ್ಕಾರ ಆಯ್ಕೆ ಮಾಡಿದೆ. ಹಾಲಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಸಿ ಪಾಂಡೆಯವರ ಅಧಿಕಾರಾವಧಿ ಜೂನ್ 30ಕ್ಕೆ ಮುಕ್ತಾಯವಾಗಲಿದೆ ಎಂದು ವರದಿ ತಿಳಿಸಿದೆ. ಪರಮ ವಿಶಿಷ್ಟ ಸೇವಾ ಪದಕ ಪುರಸ್ಕೃತರಾಗಿರುವ ದ್ವಿವೇದಿ, ಪ್ರಸ್ತುತ ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಜೂನ್ 30ರಂದು ಸಂಜೆ ಜನರಲ್ ಪಾಂಡೆಯವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ. 1964ರಲ್ಲಿ ಜನಿಸಿದ ಲೆಫ್ಟಿನೆಂಟ್ ಜನರಲ್ ದ್ವಿವೇದಿ ಜಮ್ಮು & ಕಾಶ್ಮೀರ ರೈಫಲ್ಸ್ ನಲ್ಲಿ 1984ರ ಡಿಸೆಂಬರ್ 15ರಂದು ನಿಯೋಜನೆಗೊಂಡಿದ್ದರು. 40 ವರ್ಷಗಳ ಸುಧೀರ್ಘ ಸೇವೆಯಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಕಮಾಂಡ್ ಆಫ್ ರೆಜಿಮೆಂಟ್ (18 ಜಮ್ಮು & ಕಾಶ್ಮೀರ ರೈಫಲ್ಸ್), ಬ್ರಿಗೇಡ್ (26 ಸೆಕ್ಟರ್ ಅಸ್ಸಾಂ ರೈಫಲ್ಸ್), ಡಿಐಜಿ, ಅಸ್ಸಾಂ ರೈಫಲ್ಸ್ ಮತ್ತಿತರ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ ಎನ್ನಲಾಗಿದೆ. ಉತ್ತರ ಕಮಾಂಡ್ ನ ಸೇನಾ ಸಿಬ್ಬಂದಿಯ ಉಪಮುಖ್ಯಸ್ಥರಾಗಿ 2022ರಿಂದ…
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ರಾಜ್ಯಸಭಾ ಬಿಜೆಪಿ ಸಂಸದ ಜಗ್ಗೇಶ್ ಪರೋಕ್ಷವಾಗಿ ದರ್ಶನ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಎಕ್ಸ್ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದು, “ಸರ್ವ ಆತ್ಮಾನೇ ನಬ್ರಹ್ಮ, ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಜೀವನಿಗಿಲ್ಲಾ! ಕರ್ಮ ಜೀವನದ ಹಿಂದೆ ಹಿಂಬಾಲಿಸುತ್ತದೆ. ಅವನ ಪಾಪಕರ್ಮ ಅವನನ್ನು ಸುಡುತ್ತದೆ! ಕಲಿಯುಗದಲ್ಲಿ ದೇವರು ಕಲ್ಲಲ್ಲಾ. ಎಲ್ಲಾ ಕರ್ಮಕ್ಕು ತಕ್ಷಣ ಪಲಿತಾಂಶ ಉಂಟು! ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ! ಮದಕ್ಕೆ ಕಾರುಣ್ಯದ ಅರಿವಿಲ್ಲ! ಎಂದು ಬರೆದುಕೊಂಡಿದ್ದಾರೆ. ಈ ಹಿಂದೆ ದರ್ಶನ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು ಎಂಬ ಕಾರಣಕ್ಕೆ ಜಗ್ಗೇಶ್ ಮೇಲೆ ದರ್ಶನ್ ಅಭಿಮಾನಿಗಳು ಗರಂ ಆಗಿದ್ದರು ಮತ್ತು ಅವರನ್ನು ಸತ್ತುವರಿದು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿತ್ತು. ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಅಪಹರಿಸಿ ಕೊಲೆ ಮಾಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಹಾಗೂ ಅವರ ಆಪ್ತೆ ಪವಿತ್ರಾಗೌಡ ಸೇರಿ ಇತರೆ 13 ಆರೋಪಿಗಳ…