Subscribe to Updates
Get the latest creative news from FooBar about art, design and business.
- ಡಿ.29ರಿಂದ ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ: ಏನೇನು ಕಾರ್ಯಕ್ರಮಗಳು ಇರಲಿವೆ?
- ತುರುವೇಕೆರೆ: ಡಿ.30: ಸಂಪಿಗೆಯಲ್ಲಿ ವೈಕುಂಠ ಏಕಾದಶಿ ಮಹೋತ್ಸವ
- ಕುಣಿಗಲ್: ಡಿ.29ರಿಂದ ವೆಂಕಟರಮಣ ಸ್ವಾಮಿ ಪೂಜೋತ್ಸವ
- ತುರುವೇಕೆರೆ: ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ತೀರ್ಮಾನ
- ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ
- ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ
- ಸರಗೂರು: SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ
- ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು: ಲಕ್ಷಾಂತರ ಬೆಲೆಬಾಳುವ ರಾಗಿ, ಜೋಳ ಆನೆಗೆ ಆಹಾರ: ರೈತರು ಕಂಗಾಲು
Author: admin
ಸರಗೂರು: ಸರ್ಕಾರ ಪ್ರತಿ ಕುಟುಂಬದಲ್ಲಿರುವ ಅರ್ಹರಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಅನುಮೋದನೆ ಪತ್ರವನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಜಾರಿ ಮಾಡಿದೆ. ಅರ್ಹರು ಇದರ ಸದುಪಯೋಗ ಪಡೆದು ಕೊಳ್ಳಬೇಕು ಎಂದು ರಾಜಸ್ವ ನಿರೀಕ್ಷಕ ರವಿಚಂದ್ರನ್ ತಿಳಿಸಿದರು. ತಾಲೂಕಿನ ಇಟ್ನ ಗ್ರಾಪಂ ವ್ಯಾಪ್ತಿಯ ಇಟ್ನ ಗ್ರಾಮದ ಪಂಚಾಯಿತಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವತಿಯಿಂದ ಆಯೋಜಿಸಿದ್ದ ಗ್ರಾಪಂ ಮಟ್ಟದ ಪೌತಿ ಖಾತೆ ಆಂದೋಲನ ಕಾರ್ಯಕ್ರಮವನ್ನು ಶುಕ್ರವಾರ ದಂದು ಹಮ್ಮಿಕೊಂಡಿದ್ದು ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾವಿರಾರು ಕೋಟಿ ರೂ. ಸಾಮಾಜಿಕ ಭದ್ರತಾ ಯೋಜನೆಯಲ್ಲಿ ಅನುದಾನ ಬಿಡುಗಡೆಗೊಳಿಸುತ್ತಿದೆ. ಆದರೆ ಇದು ಸಮರ್ಪಕವಾಗಿ ವಿತರಣೆ ಯಾಗುತ್ತಿಲ್ಲ ಎಂಬ ಕಾರಣದಿಂದ ಪ್ರತಿ ತಿಂಗಳ 15 ರೊಳಗೆ ಜನರ ಬಳಿ ಹೋಗಿ ಅರ್ಹರನ್ನು ಗುರುತಿಸಿ ಮನೆ ಬಾಗಿಲಿಗೆ ಪಿಂಚಣಿ ಅನು ಮೋದನೆ ಪತ್ರ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಕಂದಾಯ ನಿರೀಕ್ಷಕರು ಗ್ರಾಮಲೆಕ್ಕಿಗರಿಗೆ ತಮ್ಮ ಅರ್ಜಿ ಸಲ್ಲಿಸಬಹುದು. ಸ್ಥಳೀಯ ಮುಖಂಡರು ಅರ್ಹರನ್ನು ಗುರುತಿಸಲು ಇಲಾಖೆ…
ಔರಾದ: ಜಿಲ್ಲಾ ಪಂಚಾಯಿತಿ ಸಿಇಒ ಡಾ.ಗಿರೀಶ್ ಬದೋಲೆ ಅವರು ಗುರುವಾರ ಪಟ್ಟಣದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಶಾಲಾ ಮಕ್ಕಳ ಸಮಸ್ಯೆಯ ಮಾಹಿತಿ ಪಡೆದುಕೊಂಡರು.1ನೇ ತರಗತಿಯಿಂದ ಪಿಯುಸಿವರೆಗಿನ ಈ ಶಾಲಾ ಪರಿಸರ ನೋಡಿ ಅಚ್ಚರಿಪಟ್ಟರು. ಸ್ವತಃ ಕೆಸರಿನಲ್ಲಿ ಓಡಾಡಿ ಮಕ್ಕಳು ಹೇಗೆ ಇಲ್ಲಿ ಬಂದು ಹೋಗುತ್ತಾರೆ? ಕನಿಷ್ಠ ಸ್ವಚ್ಛತೆ ಮಾಡಲು ಬರುವುದಿಲ್ಲವೇ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ಶಾಲಾ ಆವರಣದಲ್ಲಿ 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ, ಅವರಿಗೆ ಬಂದು ಹೋಗಲು ರಸ್ತೆ ವ್ಯವಸ್ಥೆ ಏಕೆ ಆಗಿಲ್ಲ? ಬರೀ ಕಟ್ಟಡ ಕಟ್ಟಿದರೆ ಏನು ಪ್ರಯೋಜನ? ಎಂದು ಅಸಮಾಧಾನ ಹೊರ ಹಾಕಿದರು. ವಿದ್ಯಾರ್ಥಿಗಳಿಗೆ ಸಮರ್ಪಕ ಶೌಚಾಲಯ ಇಲ್ಲದಿರುವುದು ಕಂಡು ಈ ಬಗ್ಗೆ ಕೆಕೆಆರ್ ಡಿಬಿಗೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ತಿಳಿಸಿದರು. ಶೌಚಾಲಯ ಸೇರಿದಂತೆ ಮಕ್ಕಳಿಗೆ ಮೂಲಕ ಸೌಲಭ್ಯ ಕಲ್ಪಿಸುವುದು ಅಧಿಕಾರಿಗಳ ಜವಾಬ್ದಾರಿ. ಈ ಬಗ್ಗೆ ಕಾಳಜಿ ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ.ರಂಗೇಶ ಅವರಿಗೆ ಸೂಚಿಸಿದರು. ತಾಪಂ ಇಒ ಕಿರಣ…
ಬೀದರ್: ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಔರಾದ್ ತಾಲ್ಲೂಕಿನಲ್ಲೇ ಕಾರ್ಯನಿರ್ವಹಿಸುತ್ತಿರುವ ತಾಲ್ಲೂಕು ಆರೋಗ್ಯ ಅಧಿಕಾರಿಯನ್ನು ಕೂಡಲೇ ಬೇರೆಡೆ ವರ್ಗಾವಣೆ ಮಾಡಬೇಕು ಎಂದು ರಾಷ್ಟ್ರೀಯ ಅಹಿಂದ ಸಂಘಟನೆಯ ಯುವ ಘಟಕ ಆಗ್ರಹಿಸಿದೆ. ಯುವ ಘಟಕದ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಗುರುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಬರೆದ ಮನವಿ ಪತ್ರವನ್ನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ಸಲ್ಲಿಸಿದರು. ತಾಲ್ಲೂಕು ಆರೋಗ್ಯ ಅಧಿಕಾರಿ, ತಾಲ್ಲೂಕು ಮುಖ್ಯ ವೈದ್ಯಾಧಿಕಾರಿ, ಚಿಂತಾಕಿ, ವಡಗಾಂವ್ ಪಿಎಸಿ ಆಡಳಿತ ಅಧಿಕಾರಿ ಹುದ್ದೆಗಳನ್ನು ಒಬ್ಬರೇ ನಿರ್ವಹಿಸುತ್ತಿದ್ದಾರೆ ಎಂದು ದೂರಿದರು. ತಾಲ್ಲೂಕು ಆರೋಗ್ಯ ಅಧಿಕಾರಿ ಪಟ್ಟಣದಲ್ಲಿ ಖಾಸಗಿ ಆಸ್ಪತ್ರೆ ನಡೆಸುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ತಮ್ಮ ಆಸ್ಪತ್ರೆಗೆ ಹೋಗಲು ತಿಳಿಸುತ್ತಿದ್ದಾರೆ ಎಂದು ಆಪಾದಿಸಿದರು. ಔರಾದ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಂದು ಹೆರಿಗೆಗೆ ತಲಾ ರೂ. 4 ಸಾವಿರ ಪಡೆಯುತ್ತಿದ್ದಾರೆ. ತಾಲ್ಲೂಕು ಆರೋಗ್ಯ ಅಧಿಕಾರಿ ಗಮನಕ್ಕೆ ಇದ್ದರೂ ಅವರು ನಿರ್ಲಕ್ಷಿಸುತ್ತಿದ್ದಾರೆ ಎಂದು ಆಪಾದಿಸಿದರು. ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ರಕ್ತ ಪರೀಕ್ಷೆಗೆ ಹಣ ಪಡೆಯಲಾಗುತ್ತಿದೆ ಶವ…
ಸರಗೂರು: ಪಟ್ಟಣದ ಅಂಚೆ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರು ಖಾತೆದಾರರ ನಕಲಿ ಸಹಿ ಬಳಸಿ, ಒಂದು ಕೋಟಿಗೂ ಹೆಚ್ಚು ರೂ.ಗಳ ಅಧಿಕ ಮೊತ್ತದ ಹಣ ಲಪಟಾಯಿಸಿರುವ ಸಂಬಂಧ ಖಾತೆದಾರರು ದೂರು ನೀಡಿ ನಾಲ್ಕು ತಿಂಗಳುಗಳೇ ಕಳೆದರೂ ಠೇವಣಿ ಹಣ ಕೊಡಿಸಿಲ್ಲ ಎಂದು ಆರೋಪಿಸಿ ಖಾತೆದಾರರು ಪ್ರತಿಭಟನೆ ನಡೆಸಿದರು. ಪಟ್ಟಣದ ಒಂದನೇ ಮುಖ್ಯ ರಸ್ತೆಯ ಎಸ್ ಬಿಐ ಬ್ಯಾಂಕ್ ಕಚೇರಿ ಪಕ್ಕದಲ್ಲಿರುವ ಅಂಚೆ ಕಚೇರಿಗೆ ಮುತ್ತಿಗೆ ಹಾಕಿದ ಖಾತೆದಾರರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಕಚೇರಿಗೆ ಬೀಗ ಜಡಿದು, ಸಿಬ್ಬಂದಿಯನ್ನು ಹೊರಹಾಕಿ ನ್ಯಾಯ ಕೊಡಿಸುವಂತೆ ಒತ್ತಾಯಿಸಿದರು. ಅಂಚೆ ಕಚೇರಿಯಲ್ಲಿನ ಅಂಚೆ ಶಾಖಾ ಪಾಲಕ(ಪೋಸ್ಟಲ್ ಅಸಿಸ್ಟೆಂಟ್) ದೀಪಕ್ ಎಂಬುವವರು ಅಂಚೆ ಕಚೇರಿಯ ವಿವಿಧ ಖಾತೆಗಳಿಂದ ನಕಲಿ ಸಹಿ ಬಳಸಿ, ಲಕ್ಷಾಂತರ ರೂ. ಲೂಟಿ ಮಾಡಿದ್ದಾನೆ ಎಂದು ಹಣ ಕಳೆದುಕೊಂಡ ಖಾತೆದಾರರುಗಳು ದೂರಿದ್ದಾರೆ. ಪ್ರಕರಣ ಬೆಳಕಿಗೆ ಬಂದು ಹಲವು ತಿಂಗಳುಗಳೇ ಕಳೆದಿವೆ. ಹಣ ಲಪಟಾಯಿಸಿರುವವರ ವಿರುದ್ಧ ದೂರು ನೀಡಿದರೂ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು. ಅಂಚೆ…
ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಮನುಷ್ಯನ ಮೊಣಕಾಲಿನ ಎತ್ತರಕ್ಕೆ ರಸ್ತೆಯಲ್ಲಿ ಗುಂಡಿಗಳೇ ಇವೆ, ಅನೇಕ ಶಾಲಾ ಮಕ್ಕಳು ವಿಧಿಯಿಲ್ಲದೇ ಈ ರಸ್ತೆಯಲ್ಲಿಯೇ ಮುಂದೆ ಸಾಗಬೇಕು, ಮಳೆ ಬಂದರೆ ಬಿದ್ದೆದ್ದು ಪ್ರಯಾಣ ಮಾಡುವಂತಹ ಅನಿವಾರ್ಯತೆ ಇದೆ. ಈ ಸಮಸ್ಯೆ ಹಲವು ವರ್ಷಗಳಿಂದ ಹಾಗೇ ಉಳಿದಿದ್ದರೂ ಸಹ ದುರಸ್ತಿ ಕಾರ್ಯಕ್ಕೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮುಂದಾಗಿಲ್ಲ ಎಂದು ಗ್ರಾಮೀಣ ಭಾಗದ ಜನರು ಹಿಡಿಶಾಪ ಹಾಕುತ್ತಿದ್ದಾರೆ. ತಾಲ್ಲೂಕಿನ ಹೊಳವನಹಳ್ಳಿ ಕ್ಯಾಮೇನಹಳ್ಳಿ ಮಧ್ಯೆ ಇರುವಂತಹ ಶನಿಮಹಾತ್ಮ ದೇವಸ್ಥಾನದಿಂದ ಬೋಮ್ಮಲದೇವಿಪುರ ಗ್ರಾಮದವರೆಗೂ ನೂರಾರು ಗುಂಡಿಗಳು ರಸ್ತೆಯಲ್ಲಿ ಕಾಣಬಹುದಾಗಿದೆ. ಸುಮಾರು ವರ್ಷಗಳಿಂದ ರಸ್ತೆಯಲ್ಲಿ ಗುಂಡಿ ಬಿದ್ದಿದ್ದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ತನಗೂ ಅದಕ್ಕೂ ಸಂಬಂಧ ಇಲ್ಲ ಎನ್ನುವ ರೀತಿಯಲ್ಲಿ ಕಚೇರಿಯಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ಹೊಳವನಹಳ್ಳಿ ಗ್ರಾಮಸ್ಥರು ದೂರಿದ್ದಾರೆ. ಹೊಳವನಹಳ್ಳಿಯಿಂದ 50ಕ್ಕೂ ಹೆಚ್ಚು ಗ್ರಾಮಗಳಿಗೆ ಕಲ್ಪಿಸುವ ಈ ರಸ್ತೆಯಲ್ಲಿ ಮೊಣಕಾಲು ಉದ್ದದ ಗುಂಡಿಗಳು ಕಾಣಬಹುದಾಗಿದೆ. ಒಂದು ಬೈಕ್ ಹೋಗಲಾರದಷ್ಟು ಗುಂಡಿಗಳು ಬಿದ್ದಿವೆ. ಇನ್ನೂ ರಸ್ತೆಯಲ್ಲಿ ಸಾಕಷ್ಟು ಅಪಘಾತಗಳು…
ಬೀದರ್: ಮನೆಯಲ್ಲಿ ಆಟವಾಡುತಿದ್ದ 6 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದ್ದು, ಮಂಗಳವಾರ ಪ್ರಕರಣ ದಾಖಲಾಗಿದೆ. ಸೆ. 6ರಂದು ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಪಾಲಕರು ಜಮೀನಿಗೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿದ 24 ವರ್ಷದ ಯುವಕನೊಬ್ಬ ಸಂಜೆ ಸಮಯದಲ್ಲಿ ಬಾಲಕಿಯನ್ನು ಪುಸಲಾಯಿಸಿ ಆಕೆಯ ಮನೆಯಿಂದ ತನ್ನ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆಯಿಂದ ಆಘಾತಕ್ಕೆ ಒಳಗಾಗಿದ್ದ ಪಾಲಕರು ಸೆ.9 ರಂದು ದೂರು ನೀಡಿದ್ದು, ಮುಡಬಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ನಕಲಿ ದಾಖಲೆ ಸೃಷ್ಟಿ ಮಾಡಿ, ಸರಕಾರದ ಅನುದಾನ ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ಆದೇಶ ಹೊರಡಿಸಿದ್ದಾರೆ. ತಾಳಮಡಗಿ ಗ್ರಾಮ ಪಂಚಾಯತ್ ನಲ್ಲಿ, ಸರ್ಕಾರದ ಅನುದಾನದಡಿಯಲ್ಲಿ ದುರುಪಯೋಗವಾಗಿದ್ದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ. ದಾಸ್ತಾನು ವಹಿ, ನಗದು ಪುಸ್ತಕ ಹಾಗೂ ಹಾಜರಾತಿ ಪುಸ್ತಕಗಳನ್ನು ಪರಿಶೀಲನೆ ಮಾಡಲಾಗಿದೆ. ನಗದು ವಹಿಯಲ್ಲಿ ದಿನಾಂಕಗಳು ನಮೂದಿಸಿರುವುದಿಲ್ಲ. ಅನುದಾನವನ್ನು ಪಿಡಿಒ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ದುರುಪಯೋಗ ಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಇವರು 15ನೇ ಹಣಕಾಸು ಯೋಜನೆ ಅಡಿಯಲ್ಲಿ 42 ಲಕ್ಷ ರೂ. ಕ್ಕಿಂತ ಹೆಚ್ಚು ಹಾಗೂ ನಿಧಿ–1ರ ಖಾತೆಯಲ್ಲಿ 2 ಲಕ್ಷ ರೂ. ಆರ್ಥಿಕ ದುರ್ನಡತೆ ಎಸಗಿ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ತಾಳಮಡಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಶ್ವಿನಿ ಅವರನ್ನು ಅಮಾನತುಗೊಳಿಸಲಾಗಿದೆ. ಹಾಗೆಯೇ ಮಂಗಲಗಿ ಗ್ರಾಮ ಪಂಚಾಯತ್…
ಔರಾದ: ತಾಲೂಕಿನ ಆರೋಗ್ಯಾಧಿಕಾರಿಗಳಾದ ಡಾ.ಗಾಯತ್ರಿದೇವಿ ಅವರು ಉತ್ತಮ ಸೇವೆ ಸಲ್ಲಿಸುತ್ತಿದ್ದು, ಅವರ ವಿರುದ್ಧ ವಿನಾಕಾರಣ ಕೆಲ ಸಂಘಟನೆಗಳು ಸುಳ್ಳು ಆರೋಪ ಮಾಡುತ್ತಿವೆ ಎಂದು ಕನ್ನಡ ಸೇನೆ ತಾಲೂಕಾಧ್ಯಕ್ಷರಾದ ಶಿವಶಂಕರ್ ನಿಸ್ಪತೆ ಅವರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಹೆಸರಿಗೆ ಬರೆದ ಪತ್ರ ತಹಶೀಲ್ದಾರ್ ಮಹೇಶ್ ಪಾಟೀಲ್ ಅವರಿಗೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಔರಾದ ತಾಲೂಕು ವೈದ್ಯಾಧಿಕಾರಿಗಳಾದ ಡಾ.ಗಾಯತ್ರಿದೇವಿ ಅವರು ತಾಲೂಕಿನಲ್ಲಿ ಸುಮಾರು 18 ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ತೀರಾ ಹಿಂದುಳಿದ ಮತ್ತು ಗಡಿಭಾಗವೆನಿಸಿಕೊಂಡ ನಮ್ಮ ತಾಲೂಕಿನಲ್ಲಿ ಉತ್ತಮ ಸೇವೆ ಸಲ್ಲಿಸುತ್ತಾ ತಾಲೂಕಿನ ಜನರ ಮನ ಗೆದ್ದಿದ್ದಾರೆ. ಇವರ ವಿರುದ್ಧ ಷಡ್ಯಂತ್ರ ಮಾಡಿ, ಇವರ ಹೆಸರಿಗೆ ಕಳಂಕ ತಂದು ತಾಲೂಕಿನಿಂದ ವರ್ಗಾವಣೆಗೊಳಿಸಬೇಕೆಂದು ಕೆಲವರು ಪ್ರಯತ್ನಿಸುತ್ತಿದ್ದಾರೆ ಎಂದು ಕನ್ನಡ ಸೇನೆ ತಾಲೂಕ ಅಧ್ಯಕ್ಷರಾದ ಶಿವಶಂಕರ್ ಅವರು ಆರೋಪ ಮಾಡಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ತುಮಕೂರು: ನೀರು ಹಾಗೂ ಮೂಲಭೂತ ಸೌಕರ್ಯ ಕೇಳಿದ್ದಕ್ಕಾಗಿ ದಲಿತ ಸಮುದಾಯದ (ಆದಿ ಕರ್ನಾಟಕ ಸಮುದಾಯಕ್ಕೆ) ಸೇರಿದ ಆನಂದ್ ಬಿನ್ ರಾಮಾಂಜಿನಪ್ಪ ಎಂಬ ವ್ಯಕ್ತಿಯನ್ನು ಬರ್ಬರವಾಗಿ ಕೊಲೆಗೈದ ಘಟನೆ ನಡೆದಿದೆ. ಪೋಲೆನಹಳ್ಳಿ ಗ್ರಾಮದ ವಾಸಿ ಆನಂದ್ ಅವರು, ಮನೆಯ ಬಳಿ ಇರುವ ಕುಡಿಯುವ ನೀರಿನ ನಲ್ಲಿಯಲ್ಲಿ ನೀರು ಬರುತ್ತಿಲ್ಲ ಹಾಗೂ ಗ್ರಾಮ ಪಂಚಾಯತಿಯಿಂದ ಮನೆ ಮಂಜೂರು ಮಾಡಿ ಕೊಡಿ ಎಂದು ಬಿಲ್ ಕಲೆಕ್ಟರ್ ರಾಮಕೃಷ್ಣಯ್ಯ ಹಾಗೂ ಅವರ ಮಗ ಗ್ರಾಮ ಪಂಚಾಯತಿ ಸದಸ್ಯ ನಾಗೇಶ್ ಅವರ ಮನೆಯ ಬಳಿ ಹೋಗಿ ಆಕ್ರೋಶ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದರಿಂದ ಮಾತಿಗೆ ಮಾತು ಬೆಳೆದು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ತಿಳಿದು ಬಂದಿದೆ. ಕುಡಿಯುವ ನೀರಿನ ವಿಚಾರವಾಗಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ರಾಮಕೃಷ್ಣಪ್ಪ ಹಾಗೂ ಮಗ ಗ್ರಾಮ ಪಂಚಾಯಿತಿ ಸದಸ್ಯ ನಾಗೇಶ, ನಾಗಮಣಿ ಇತರರು ಸೇರಿ ಮಚ್ಚು ದೊಣ್ಣೆ ಗಳಿಂದ ಹಲ್ಲೆ ಮಾಡಿ ಬುಲೆರೋ ಜೀಪ್ ನಿಂದ ಗುದ್ದಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ತುಮಕೂರು ಜಿಲ್ಲೆ…
ಸರಗೂರು: ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಹೆಗ್ಗಡೆ ದೇವನ ಕೋಟೆಯ ಕನಕ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಸರಗೂರಿನ ಅನುದಾನ ರಹಿತ ಶಾಲೆಯಾದ ಲಯನ್ಸ್ ಅಕಾಡೆಮಿ ಶಾಲೆಯ ಮುಖ್ಯ ಶಿಕ್ಷಕ ಬಿ.ಡಿ. ದಾಸಾಚಾರಿ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿಕ್ಷಣ ಇಲಾಖೆಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಸರ್ಕಾರಿ ಶಿಕ್ಷಕರಂತೆ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿರುವುದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಗೌರವವನ್ನು ಹೆಚ್ಚಿಸಿದೆ ಎಂದು ಅವರು ತಿಳಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಯನ್ನು ಮಾಡುತ್ತಿರುವ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜುರವರು ಸರ್ಕಾರಿ ಅನುದಾನಿತ ಶಾಲೆಗಳಂತೆಯೇ ಅನುದಾನ ರಹಿತ ಶಾಲೆಗಳು ಕೂಡ ತಾಲೂಕಿನ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚು ಒತ್ತನ್ನು ನೀಡುತ್ತಿದ್ದು, ಅಲ್ಲಿನ ಶಿಕ್ಷಕರು ನಮ್ಮ ಶಿಕ್ಷಕರೇ ಎಂಬ ಸಮಾನ ಮನೋಭಾವವನ್ನು ಹೊಂದಿರುವುದು ನಮ್ಮ ಹೆಗ್ಗಳಿಕೆ ಎಂದು ಪ್ರಶಸ್ತಿ ಪಡೆದ ಲಯನ್ಸ್ ಅಕಾಡೆಮಿ ಶಾಲೆಯ ಮುಖ್ಯ ಶಿಕ್ಷಕ ಬಿ.ಡಿ.ದಾಸಾಚಾರಿ ಅಭಿಪ್ರಾಯ ಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ…