Subscribe to Updates
Get the latest creative news from FooBar about art, design and business.
- ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
- ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
- ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
- ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್ ಮಲ್ಲ ಬರ್ಬರ ಹತ್ಯೆ!
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
Author: admin
ಮಂದಿನ ತಿಂಗಳಿನಿಂದ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಹಣ ಸಿಗಲಿದೆ. ತೃತೀಯ ಲಿಂಗಿಗಳಿಗೆ ಹಣ ನೀಡಲು ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆದೇಶ ಆಗಿದೆ. ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ತಿಂಗಳ ಕೊನೆಯ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಜಿಲ್ಲಾಧಿಕಾರಿಗಳಿಂದ ವಿತರಿಲ್ಪಟ್ಟ ಗುರುತಿನ ಚೀಟಿ ಇದ್ದರೆ ತೃತೀಯ ಲಿಂಗಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ತಿಂಗಳ ಒಳಗಡೆ ಅರ್ಜಿ ಸಲ್ಲಿಕೆಯಾದ್ರೆ ಮುಂದಿನ ತಿಂಗಳೇ ತೃತೀಯ ಲಿಂಗಿಗಳ ಅಕೌಂಟ್ ಗೆ ಎರಡು ಸಾವಿರ ರೂಪಾಯಿ ಹಣ ಬರಲಿದೆ. ರಾಜ್ಯದಲ್ಲಿ 40,000 ಹೆಚ್ಚು ತೃತೀಯ ಲಿಂಗಿಗಳಿದ್ದು ಅವರ ಅಭಿವೃದ್ಧಿಗೆ ಅಥವಾ ಜೀವನೋಪಾಯಕ್ಕೆ ಗೃಹಲಕ್ಷ್ಮಿ ಹಣ ಸಹಕಾರಿಯಾಗಲಿದೆ. ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಸೈಬರ್ ಸೆಂಟರ್ಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈಗಾಗಲೇ 1.24 ಕೋಟಿ ಮಂದಿ ಗೃಹಲಕ್ಷ್ಮಿ ಯೋಜನೆಗೆ ನೊಂದಾಣಿ ಮಾಡಿಕೊಂಡಿದ್ದಾರೆ. ಅದರಲ್ಲಿ 1.25 ಕೋಟಿ ಮಂದಿ 2 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದು 1.5 ಲಕ್ಷ ಮಂದಿ ಜಿಎಸ್ಟಿ…
ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಮದ್ಯದ ಬೆಲೆಯಲ್ಲಿ ಹೆಚ್ಚಳ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ. ರಾಜ್ಯದಲ್ಲಿ 2023ರ ಜುಲೈನಲ್ಲಿ ದೇಶೀಯ ಮದ್ಯಗಳ ಬೆಲೆ ಹೆಚ್ಚಿಸಲಾಗಿತ್ತು. ನಂತರ ಲಿಕ್ಕರ್ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದವು. ಲಿಕ್ಕರ್ ದರವನ್ನ 20 ರೂಪಾಯಿಗೆ ಏರಿಕೆ ಮಾಡಿತ್ತು. ಈಗ ಮತ್ತೆ ಮದ್ಯದ ಬೆಲೆಯಲ್ಲಿ ಹೆಚ್ಚಳ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ. ಸರ್ಕಾರ, ದೇಶಿಯ ಮದ್ಯಗಳ ಬೆಲೆ ಏರಿಕೆಗೆ ನಿರ್ಧರಿಸಿದ್ದು, ಲಿಕ್ಕರ್ ದರ ಏರಿಕೆಗೆ ಅಬಕಾರಿ ಇಲಾಖೆ ಪ್ಲಾನ್ ಮಾಡಿದ್ದು, ಶೀಘ್ರವೇ ಅನುಮೋದನೆ ನೀಡಲು ಮುಂದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್‍ಗೆ 14 ಕೆ.ಜಿ., ಆದ್ಯತಾ ಹಾಗೂ ಬಿ.ಪಿ.ಎಲ್. ಪಡಿತರ ಚೀಟಿದಾರರಿಗೆ 3 ಕೆ.ಜಿ. ಅಕ್ಕಿ, ರಾಗಿ 2 ಕೆ.ಜಿ. ಉಚಿತವಾಗಿ ವಿತರಿಸಲಾಗುತ್ತದೆ. ಸರ್ಕಾರದ ಗ್ಯಾರಂಟಿ ಯೋಜನೆಯಡಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ತಹಶೀಲ್ದಾರ್ ಡಾ.ಎಂ.ಬಿ.ಅಶ್ವಥ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಧೂಮಪಾನ ಮದ್ಯಪಾನ ಆರೋಗ್ಯಕ್ಕೆ ತುಂಬಾನೇ ಹಾನಿಕರ ಎಂಬ ಮಾತುಗಳನ್ನು ನೀವು ಕೇಳಿರುತ್ತೀರಿ. ಆದ್ರೆ ಇಲ್ಲೊಂದು ವಿಚಿತ್ರ ಪದ್ಧತಿ ನಡೆಯುತ್ತಿದೆ. ಇಲ್ಲಿ ಹುಡುಗ ಸಿಗರೇಟ್ ಸೇದಿದರೆ ಮಾತ್ರ ಹುಡುಗನಿಗೆ ಮಗಳನ್ನು ಕೊಟ್ಟು ಮದುವೆ ಮಾಡ್ತಾರೆ. ಪ್ರತಿಯೊಂದು ಜಾಗದಲ್ಲೂ ಅವರವರ ಆಚಾರಕ್ಕೆ ತಕ್ಕಂತೆ ಮದುವೆಯ ಆಚರಣೆ ಬದಲಾಗುತ್ತದೆ. ಇಲ್ಲೊಂದು ಸ್ಥಳದಲ್ಲಿ ಮದುವೆ ಮಾಡಿಕೊಳ್ಳುವಂತಹ ಪದ್ಧತಿಯೇ ವಿಚಿತ್ರವಾಗಿದ್ದು, ಹೆಣ್ಣುಮಕ್ಕಳಿಗೆ ಪೋಷಕರು ಒಳ್ಳೆಯ ಹುಡುಗನನ್ನ ಹುಡುಕುವಾಗ ಅವನಿಗೆ ಯಾವುದಕ್ಕೆ ಕೆಟ್ಟ ಚಟ ಇಲ್ಲದಂತಹ ಹುಡುಗನನ್ನು ಅಳಿಯನಾಗಿ ಸ್ವೀಕರಿಸುತ್ತಾರೆ. ಆದರೆ ಇಲ್ಲಿ ಮಾತ್ರ ಮದುವೆಯ ಸಂದರ್ಭದಲ್ಲಿ ಅಳಿಯನಿಗೆ ಸಿಗ’ರೇಟ್ ಕೊಟ್ಟು ದಮ್ ಹೊಡೆಯುವಂತೆ ಹೇಳುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ತುಂಬಾನೇ ವೈರಲ್ ಆಗುತ್ತಿದೆ. ಮದುವೆ ಮನೆಯಲ್ಲಿ ಅತ್ತೆ ಹಾಗೂ ಮಾವ ಇಬ್ಬರೂ ಕೂಡ ಹುಡುಗನಿಗೆ ಸಿಗರೇಟ್ ಕೊಟ್ಟು ಆ ಹುಡುಗ ಸಿಗ’ರೇಟ್ ಸೇದಿದ ನಂತರ ಮಾವ ಹಾಗೂ ಅತ್ತೆ ಇಬ್ಬರಿಗೂ ಕೂಡ ಸ್ವಲ್ಪ ಹಣವನ್ನು ನೀಡುತ್ತಾನೆ. ಈ ವಿಡಿಯೋ ನೋಡಿ ನೆಟ್ಟಿಗರು ಇದೆಂತಹ ವಿಚಿತ್ರ ಮದುವೆ ಪದ್ಧತಿ ಎಂಬುದಾಗಿ ಇದನ್ನು…
ಕಾರವಾರ: ಮಕ್ಕಳು ತಮ್ಮ ಶಿಕ್ಷಣದೊಂದಿಗೆ ಬಾಲ್ಯವನ್ನು ಆನಂದಿಸಲು ಅಗತ್ಯವಿರುವ ಎಲ್ಲಾ ಅವಕಾಶಗಳನ್ನು ಒದಗಿಸುವ ಮೂಲಕ, ಅವರು ಬಾಲ ಕಾರ್ಮಿಕ ಪದ್ದತಿಗೆ ಒಳಗಾಗದಂತೆ ಪೋಷಕರು ಹಾಗೂ ಸಮಾಜದ ಪ್ರತಿಯೊಬ್ಬರೂ ಎಚ್ಚರವಹಿಸಬೇಕು ಎಂದು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಯಣ್ಣ ಹೇಳಿದರು. ಬುಧವಾರ, ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಪೊಲೀಸ್ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ(ರಿ), ಬಾಲಮಂದಿರ ಹೈಸ್ಕೂಲ್ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಬಾಲಮಂದಿರ ಹೈಸ್ಕೂಲ್ (ಹಿಂದೂ ಹೈಸ್ಕೂಲ್) ಸಭಾಂಗಣದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಬಾಲ ಕಾರ್ಮಿಕ ಪದ್ದತಿ ಒಂದು ಅನಿಷ್ಠ ಪದ್ದತಿಯಾಗಿದೆ. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯಮದಲ್ಲಿ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಈ ಬಗ್ಗೆ ಪೋಷಕರು ಹಾಗು ಎಲ್ಲಾ ಉದ್ದಿಮೆದಾರರು…
ಬೆಂಗಳೂರು: ತುಮಕೂರು ಜಿಲ್ಲೆಯ ವಸಂತನರಸಾಪುರದ ಕೈಗಾರಿಕ ಪ್ರದೇಶಕ್ಕೆ ಹೊಂದಿಕೊಂಡಂತೆ ನಗರಾಭಿವೃದ್ಧಿ ಇಲಾಖೆಯ ವತಿಯಿಂದ Integrated Township ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಿ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್.ಸುರೇಶ (ಬೈರತಿ) ರವರು ನಗರಾಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ವಿಧಾನಸೌಧದ ತಮ್ಮ ಕಚೇರಿಯಲ್ಲಿ ನಗರಾಭಿವೃದ್ದಿ ಇಲಾಖೆಯ ಅಡಿಯಲ್ಲಿ ಬರುವ ಹತ್ತು ಮಹಾನಗರ ಪಾಲಿಕೆಗಳು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ, ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಳೆದ 3 ತಿಂಗಳಿನಿಂದ ಇವುಗಳಲ್ಲಿ ನಡೆದಿರುವ ಕಾಮಗಾರಿಗಳು ಹಾಗೂ ಕೈಗೊಂಡಿರುವ ಯೋಜನೆಗಳ ಕುರಿತಂತೆ ಸಭೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಮಂಡಿಸಿರುವ ಆಯವ್ಯಯದಲ್ಲಿ ವಸಂತನರಸಾಪುರದ ಬಳಿ ಸುಮಾರು 500 ಎಕರೆ ಪ್ರದೇಶದಲ್ಲಿ Integrated Township ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ಲೋಕಸಭಾ ಚುನಾವಣೆಗಳಿಂದಾಗಿ ಇಲ್ಲಿಯವರೆಗೂ ನೀತಿ ಸಂಹಿತೆ ಜಾರಿಯಲ್ಲಿತ್ತು, ಈಗ ಅದು…
ಬೆಂಗಳೂರಿನಲ್ಲಿ ಓಲಾ, ಉಬರ್ ಗೆ ಸೆಡ್ಡುಹೊಡೆಯಲು ಹಾಗು ಆಟೋ ಚಾಲಕರೇ ಸೇರಿ ಕಟ್ಟಿದ ನಮ್ಮ ಯಾತ್ರಿ ಆಪ್ ಗೆ ಪ್ರತಿಸ್ಪರ್ಧಿಯಾಗಿ ಈಗ ಮತ್ತೊಂದು ಆಪ್ ಚಾಲನೆಗೊಂಡಿದೆ. ಬೆಂಗಳೂರಿನ ಮತ್ತೊಂದು ಸಾರಿಗೆ ಒಕ್ಕೂಟವು ಆಟೋ–ರಿಕ್ಷಾ ಅಪ್ಲಿಕೇಶನ್ ಅನ್ನು ಪ್ರಾರಂಭಿಸುತ್ತಿದೆ. ಕರ್ನಾಟಕ ರಾಜ್ಯ ಚಾಲಕ ಪರಿಷತ್ತು (ಕರ್ನಾಟಕ ರಾಜ್ಯ ಚಾಲಕರ ಪರಿಷತ್ತು) ಅಗ್ನಿಭು ಟೆಕ್ನಾಲಜೀಸ್ ಜೊತೆಗೆ ಜೂನ್ 10 ರಂದು ಮಧ್ಯಾಹ್ನ ‘ನಗರ ಮೀಟರ್ಡ್ ಆಟೋ’ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಿದೆ ಮತ್ತು ಅದು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯವಿರುತ್ತದೆ. ಒಕ್ಕೂಟದ ಪ್ರಕಾರ, ಬಳಕೆದಾರರು ಅಪ್ಲಿಕೇಶನ್ ಮೂಲಕ ರೈಡ್ ಗಳನ್ನು ಬುಕ್ ಮಾಡಬಹುದು ಆದರೆ ಮೀಟರ್ ನಲ್ಲಿ ಪ್ರದರ್ಶಿಸಿದಂತೆ ಮೊದಲ ಎರಡು ಕಿಮೀಗೆ ರೂ 30 ಮತ್ತು ನಂತರದ ಪ್ರತಿ ಕಿಮೀಗೆ ರೂ 15 ಮಾತ್ರ ಸರ್ಕಾರಿ–ನಿಗದಿತ ದರಗಳನ್ನು ಪಾವತಿಸಬಹುದು ಎಂದು ತಿಳಿಸಲಾಗಿದೆ. ಯಾವುದೇ ಏರಿಕೆ ಬೆಲೆ ಅಥವಾ ಕಮಿಷನ್ ಇರುವುದಿಲ್ಲ ಆದರೆ ಚಾಲಕರು ಸಣ್ಣ ಚಂದಾದಾರಿಕೆ ಶುಲ್ಕವನ್ನು ಪಾವತಿಸಬೇಕಾಗಬಹುದು. ಅವರು ಮೊದಲ…
ತುಮಕೂರು: ಬಸ್ ಚಾಲಕನಿಗೆ ಹೃದಯಾಘಾತವಾಗಿ ಬಸ್ ಅಡ್ಡ-ದಿಡ್ಡಿ ಓಡಿಸುತ್ತಿದ್ದನ್ನು ತಪ್ಪಿಸಿ ಚಾಲಕ ಮತ್ತು ಪ್ರಯಾಣಿಕರ ಜೀವ ಉಳಿಸಿದ ಪೊಲೀಸ್ ಪೇದೆಯೊಬ್ಬರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ . ಮೇ 4 ರಂದು ತುಮಕೂರು ಜಿಲ್ಲೆಯಿಂದ ಗದಗ ಜಿಲ್ಲೆಗೆ ಲೋಕಸಭಾ ಚುನಾವಣಾ ಬಂದೋಬಸ್ತ್ ಕರ್ತವ್ಯಕ್ಕೆಂದು ತುಮಕೂರು ನಗರದ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ರಾಘವೇಂದ್ರ ಕ್ಷತ್ರಿ ಮತ್ತು ಸಿಬ್ಬಂದಿಯವರು ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಮಧ್ಯರಾತ್ರಿಯ ಸಮಯದಲ್ಲಿ ಚಿತ್ರದುರ್ಗ ಸಮೀಪ ಬಸ್ಸಿನ ಚಾಲಕರಿಗೆ ಹೃದಯಾಘಾತವಾಗಿ ಬಸ್ಸನ್ನು ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದರು. ಇದನ್ನು ಗಮನಿಸಿದ ಸಂಚಾರಿ ಪೊಲೀಸ್ ಪೇದೆ ರಾಘವೇಂದ್ರ ಕ್ಷತ್ರಿ ಅವರು ತಕ್ಷಣ ಬಸ್ಸನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿ, ಚಾಲಕನನ್ನು 112 ಅಂಬುಲೆನ್ಸ್ ಮೂಲಕ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದರು. ಬಸ್ಸಿನ ಚಾಲಕನ ಪ್ರಾಣ ಮತ್ತು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪೊಲೀಸರನ್ನು ರಕ್ಷಿಸಿದ ರಾಘವೇಂದ್ರ ಕ್ಷತ್ರಿರವರಿಗೆ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ. ರವರು ತಮ್ಮ ಸಮಯ ಪ್ರಜ್ಞೆಯನ್ನು ಅಭಿನಂದಿಸಿ,…
ಉತ್ತರ ಪ್ರದೇಶ: ವೇಗವಾಗಿ ಬರುತ್ತಿದ್ದ ಮರಳು ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಗುಡಿಸಲಿನ ಮೇಲೆ ಏಕಾಏಕಿ ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ಎಂಟು ಮಂದಿ ಮೃತಪಟ್ಟಿರುವ ಘಟನೆ ಹರ್ದೋಯ್ ಜಿಲ್ಲೆಯ ಮಲ್ಲವನ್ ಕೊಟ್ವಾಲಿ ಪ್ರದೇಶದ ಉನ್ನಾವೋ ಸಮೀಪ ಮಂಗಳವಾರ ರಾತ್ರಿ ನಡೆದಿದೆ. ಮಲ್ಲವನ್ ಪಟ್ಟಣದ ಉನ್ನಾವ್ ರಸ್ತೆಯಲ್ಲಿರುವ ಚುಂಗಿ ನಂಬರ್ 2 ಬಳಿ ನಾಟ್ ಸಮುದಾಯದ ಜನರು ರಸ್ತೆಬದಿಯ ಗುಡಿಸಲುಗಳಲ್ಲಿ ವಾಸ ಮಾಡುತ್ತಿದ್ದರು. ಮಂಗಳವಾರ ಮಧ್ಯರಾತ್ರಿ ಕಾನ್ಪುರದಿಂದ ಹರ್ದೋಯ್ ಗೆ ಹೋಗುತ್ತಿದ್ದ ಮರಳು ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಗುಡಿಸಲು ಮೇಲೆ ಪಲ್ಟಿಯಾಗಿದೆ. ಗುಡಿಸಲಿನಲ್ಲಿ ಮಲಗಿದ್ದ ಒಂದೇ ಕುಟುಂಬದ ಎಂಟು ಮಂದಿ ಮೃತಪಟ್ಟಿದ್ದಾರೆ. ಈ ಸಂಬಂಧ ಲಾರಿ ಚಾಲಕ ಅವಧೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಸ್ಥಳೀಯರ ನೆರವಿನಿಂದ ಜೆಸಿಬಿ ಮೂಲಕ ಲಾರಿಯನ್ನು ತೆರವುಗೊಳಿಸಿದ್ದಾರೆ. ಈ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.…
ಬೆಳಗಾವಿ: ಬೆಳಗಾವಿಯ ಜಿಲ್ಲಾ ಕೋರ್ಟ್ ನಲ್ಲಿ ವ್ಯಕ್ತಿಯೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ. ಪಾಕಿಸ್ತಾನ ಪರ ಘೋಷಣೆ ಕೂಗುತ್ತಿದ್ದಂತೆ ಅಲ್ಲಿದ್ದ ವಕೀಲರು ಹಾಗೂ ಸಾರ್ವಜನಿಕರು ಆರೋಪಿ ಜಯೇಶ್ ಪೂಜಾರಿಗೆ ಧರ್ಮದೇಟು ನೀಡಿದ್ದಾರೆ. ಕೂಡಲೆ ಆರೋಪಿ ಜಯೇಶ್ ನನ್ನು ರಕ್ಷಿಸಿ ಪೊಲೀಸರು ಆತನನ್ನು ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಆರೋಪಿ ಜಯೇಶ್ ಪೂಜಾರಿ ಪೂಜಾರಿ ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್ ಕುಮಾರ ಹಾಗೂ ಕೇಂದ್ರ ಸಚಿವ ನಿತೀನ್ ಗಡ್ಕರಿಗೂ ಜೀವ ಬೆದರಿಕೆ ಮಾಡಿದ್ದ ಎನ್ನಲಾಗುತ್ತಿದ್ದು, ಹಿಂಡಲಗಾ ಜೈಲಿನಿಂದಲೇ ಗಡ್ಕರಿಗೆ ಜೀವ ಬೆದರಿಕೆ ಹಾಕಿದ್ದ ಎನ್ನಲಾಗುತ್ತಿದೆ. ಅಲೋಕ್ ಕುಮಾರ್ ಅವರಿಗೆ ಜೈಲಿನಿಂದಲೇ ಕರೆಮಾಡಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಾಣೆಗಾಗಿ ಪೊಲೀಸರು ನ್ಯಾಯಾಲಯಕ್ಕೆ ಕರೆ ತಂದಾಗ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296