Subscribe to Updates
Get the latest creative news from FooBar about art, design and business.
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
- ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
- ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
- ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
- ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
Author: admin
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ (Actor Darshan) ಹಾಗೂ ಅವರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಅವರ ಈ ನಡೆಯಿಂದ ಕಂಗಾಲಾಗಿರುವ ಪತ್ನಿ ವಿಜಯಲಕ್ಷ್ಮೀ, ಇನ್ಸ್ಟಾಗ್ರಾಂನಲ್ಲಿ ದರ್ಶನ್ರನ್ನು ಅನ್ಫಾಲೋ ಮಾಡಿ, ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ. ದರ್ಶನ್ ಗೆ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ನಡುವೆ ದರ್ಶನ್ ಅವರ ಕುಟುಂಬ ಸಹ ಈ ಪ್ರಕರಣದಿಂದ ಅಂತರ ಕಾಯ್ದುಕೊಂಡಿದೆ. ಮೀನಾ ತೂಗುದೀಪ್ ತಮ್ಮ ಮತ್ತೋರ್ವ ಪುತ್ರ ದಿನಕರ್ ಜೊತೆ ವಾಸವಿದ್ದಾರೆ. ಸದ್ಯ ತಾಯಿ ಜತೆಗೂ ದರ್ಶನ್ ಜಗಳ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಹುಟ್ಟಿ ಬೆಳೆದ ಮೈಸೂರಿನ ಮನೆಗೆ ಇತ್ತೀಚೆಗೆ ಬಂದೇ ಇಲ್ಲ ಎಂದು ಹೇಳಲಾಗಿದೆ. ನಟ ದರ್ಶನ್ ಬಂಧನದ ಬೆನ್ನಲ್ಲೇ ದರ್ಶನ್ ತಾಯಿಗೆ ಒಂದರ ಮೇಲೊಂದ ಆಘಾತಗಳು ದುರಾಗುತ್ತಿವೆ. ದರ್ಶನ್ ಕುಟುಂಬ ಈ ವಿಷಯವಾಗಿ ಅಂತರ ಕಾಯ್ದುಕೊಂಡಿದ್ದು, ಮಾಧ್ಯಮ ಪ್ರತಿಕ್ರಿಯೆ ನೀಡಲು ತಾಯಿ ಮೀನಾ ತೂಗುದೀಪ್ ನಿರಾಕರಿಸಿದ್ದಾರೆ. ಮೈಸೂರಿನ ಸಿದ್ದಾರ್ಥನಗರದಲ್ಲಿ ವಾಸ ಇರುವ ಮೀನಾ ತೂಗುದೀಪ್ ಮಗ ದರ್ಶನ್…
ನೀವು ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿದ್ದರೆ, ನಿಮಗಿದೆ ಉತ್ತಮ ಅವಕಾಶ. BHEL IIT ಪಾಸ್ ಅಭ್ಯರ್ಥಿಗಳಿಗೆ ವಿವಿಧ ಟ್ರೇಡ್ ಗಳಲ್ಲಿ ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯ ಮೂಲಕ, ಟ್ರೇಡ್ ಅಪ್ರೆಂಟಿಸ್ ಶಿಪ್ ಟ್ರೈನಿಗಾಗಿ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗುತ್ತದೆ. ಇಲ್ಲಿ ಫಿಟ್ಟರ್ ಟರ್ನರ್, ಮೆಷಿನಿಸ್ಟ್, ವೆಲ್ಡರ್, ಎಲೆಕ್ಟ್ರಿಷಿಯನ್, ಕಾರ್ಪೆಂಟರ್ ಸೇರಿದಂತೆ ಹಲವು ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್’ನ ಅಧಿಕೃತ ವೆಬ್ ಸೈಟ್ https://hwr.bhel.com/bhelweb/ ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ನೀವು ಈ ದಿನಾಂಕದವರೆಗೆ ಅರ್ಜಿ ಸಲ್ಲಿಸಬಹುದು: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್’ನ ಈ ನೇಮಕಾತಿಗಾಗಿ ಅರ್ಜಿ ಅನ್ನು ಭರ್ತಿ ಮಾಡಲು ಕೊನೆಯ ದಿನಾಂಕ 14 ಜೂನ್ 2024 ಆಗಿದೆ. ಆದಾಗ್ಯೂ, ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಜೂನ್ 24, 2024 ರವರೆಗೆ ಆನ್ ಲೈನ್ ನಲ್ಲಿ ಸಲ್ಲಿಸಬಹುದು.…
ರಾಜ್ಯದ ಅಗ್ನಿಶಾಮಕ ದಳವು ರಾಷ್ಟ್ರ ಮಟ್ಟದಲ್ಲಿ ಮೆಚ್ಚುಗೆ ಪಡೆದಿದೆ. ಇದಕ್ಕೆ ಕಾರಣರಾಗಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಭಿನಂದನೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಕೋರಮಂಗಲದ ಆರ್.ಎ. ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಅಕಾಡೆಮಿ ಮೈದಾನದಲ್ಲಿ ಮಂಗಳವಾರ ನಡೆದ ‘ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಹಾಗೂ ಅಗ್ನಿಶಾಮಕರ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ’ ಅವರು ಮಾತನಾಡಿದರು. ಪ್ರತಿ ಜಿಲ್ಲೆಯಲ್ಲಿ ಅಗ್ನಿಶಾಮಕದ ದಳದ ಕಚೇರಿ ಇರಬೇಕು ಎಂಬ ಆದೇಶವಿದೆ. ರಾಜ್ಯ ಸರ್ಕಾರ ಪ್ರತಿ ತಾಲ್ಲೂಕಿನಲ್ಲಿ ಕಚೇರಿ ತೆರೆದಿದೆ ಎಂದು ಡಾ.ಜಿ. ಪರಮೇಶ್ವರ್ ತಿಳಿಸಿದರು. ಅಗ್ನಿಶಾಮಕ ಮತ್ತು ತುರ್ತುಸೇವೆ, ಗೃಹ ರಕ್ಷಕ ದಳ, ರಾಜ್ಯ ವಿಪತ್ತು ನಿರ್ವಹಣ ದಳ ಪ್ರಾಮಾಣಿಕವಾಗಿ ಕೆಲಸ ಮಾಡಿ ರಾಜ್ಯದ ಜನಸಮುದಾಯದ ಮೆಚ್ಚುಗೆಗೆ ಪಾತ್ರವಾಗಿದೆ. ಇಂತಹ ಇಲಾಖೆಯ ಕೆಲಸ ಕಾರ್ಯಗಳಿಗೆ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದೀರಿ. ಭವಿಷ್ಯ ಉಜ್ವಲವಾಗಿರಲಿ ಎಂದು ಡಾ.ಜಿ. ಪರಮೇಶ್ವರ್ ಹೇಳಿದರು. ಅವಘಡಗಳಲ್ಲಿ ಬೆಂಕಿ ನಂದಿಸಲು 90 ಮೀಟರ್ ವರೆಗೆ ನೀರು ತಲುಪಿಸಬಹುದಾದ ಏರಿಯಲ್ ಲ್ಯಾಡರ್ ಅಳವಡಿಸಿಕೊಳ್ಳಲಾಗಿದೆ. ಬಹುತೇಕ…
ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ತಮ್ಮ ಹಿಂಬಾಲಕರು ವ್ಯಾಪಕವಾಗಿ ಹಾಕಿಕೊಂಡಿದ್ದ ‘ಮೋದಿ ಕಾ ಪರಿವಾರ್’ ಅನ್ನು ತೆಗೆದುಹಾಕುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಿ ಮೋದಿ, “ಚುನಾವಣಾ ಪ್ರಚಾರದ ವೇಳೆ ಭಾರತದಾದ್ಯಂತ ಜನರು ನನ್ನ ಮೇಲಿನ ಪ್ರೀತಿಯ ಸಂಕೇತವಾಗಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ‘ಮೋದಿ ಕಾ ಪರಿವಾರ್’ ಅನ್ನು ಅಳವಡಿಸಿಕೊಂಡಿದ್ದಾರೆ. ನಾನು ಅದರಿಂದ ಸಾಕಷ್ಟು ಬಲ ಪಡೆದುಕೊಂಡಿದ್ದೇನೆ. ಭಾರತದ ಜನರು ಸತತ ಮೂರನೇ ಬಾರಿಗೆ ಎನ್ಡಿಎಗೆ ಬಹುಮತವನ್ನು ನೀಡಿದ್ದಾರೆ. ಇದು ಒಂದು ರೀತಿಯ ದಾಖಲೆಯಾಗಿದ್ದು ನಮ್ಮ ರಾಷ್ಟ್ರದ ಸುಧಾರಣೆಗಾಗಿ ಕೆಲಸ ಮಾಡಲು ನಮಗೆ ಜನಾದೇಶ ನೀಡಿದ್ದಾರೆ”, ಎಂದು ಪೋಸ್ಟ್ ಮಾಡಿದ್ದಾರೆ. “ನಾವೆಲ್ಲರೂ ಒಂದೇ ಕುಟುಂಬ ಎಂಬ ಸಂದೇಶವನ್ನು ಪರಿಣಾಮಕಾರಿಯಾಗಿ ರವಾನಿಸಿದ ಭಾರತದ ಜನರಿಗೆ ನಾನು ಮತ್ತೊಮ್ಮೆ ಧನ್ಯವಾದ ಹೇಳುತ್ತೇನೆ. ಇದೀಗ ನಿಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಿಂದ ‘ಮೋದಿ ಕಾ ಪರಿವಾರ್’ ಅನ್ನು ತೆಗೆದುಹಾಕುವಂತೆ ವಿನಂತಿಸುತ್ತೇನೆ. ನೀವು ಇದನ್ನು ಬದಲಾಯಿಸಬಹುದು. ಆದರೆ ಭಾರತದ ಪ್ರಗತಿಗಾಗಿ…
ಮರದ ಕೊಂಬೆ ಕಡಿಯುವಾಗ ನಡುವೆ ಹಾದು ಹೋಗಿದ್ದ ವಿದ್ಯುತ್ ತಂತಿಯ ಶಾಕ್ ತಗುಲಿ ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಮೃತ ಕಾರ್ಮಿಕನನ್ನು ಚಂದ್ರಪ್ಪ (45) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ಸಿಲ್ವರ್ ಮರದ ಕೊಂಬೆಗಳನ್ನು ಕತ್ತರಿಸುವಾಗ ಘಟನೆ ನಡೆದಿದೆ. ಸಿಲ್ವರ್ ಮರದ ಮಧ್ಯೆ ವಿದ್ಯುತ್ ತಂತಿ ಹಾದು ಹೋಗಿತ್ತು. ಆದರೆ ವಿದ್ಯುತ್ ತಂತಿಯನ್ನು ಗಮನಿಸದೇ ಮರದ ಕೊಂಬೆ ಕಡಿಯುತ್ತಿರುವಾಗ ವಿದ್ಯುತ್ ಪ್ರವಹಿಸಿ ಮರದಲ್ಲೇ ಚಂದ್ರಪ್ಪ ಸಾವನ್ನಪ್ಪಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ವಿದೇಶಿಗರು ಭಾರತಕ್ಕೆ ಭೇಟಿ ನೀಡಿದಾಗ ಹಲವರಿಗೆ ಕಹಿ ಅನುಭವಗಳು ಆಗಿ ದೇಶದ ಬಗ್ಗೆ ಬಿನ್ನ ಅಭಿಪ್ರಾಯಗಳು ಬಂದಿರುವ ಹಲವು ಘಟನೆಗಳು ಈ ಹಿಂದೆ ನಡೆದಿದೆ. ಅದರಂತೆಯೇ ರಾಜಸ್ಥಾನದ ಜೈಪುರದಲ್ಲಿ ಯು.ಎಸ್ ಮಹಿಳೆಗೆ ಚಿನ್ನದ ಆಭರಣ ಎಂದು ನಂಬಿಸಿ 300 ರೂ. ನಕಲಿ ಒಡವೆಯನ್ನು 6 ಕೋಟಿ ರೂಪಾಯಿಗೆ ಮಾರಾಟ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಅಮೆರಿಕದ ಮಹಿಳೆಯೊಬ್ಬರು ₹ 300 ಮೌಲ್ಯದ ಕೃತಕ ಆಭರಣಗಳನ್ನು ₹ 6 ಕೋಟಿಗೆ ಖರೀಸಿ ವಂಚನೆಗೆ ಒಳಗಾಗಿದ್ದಾರೆ. ರಾಜಸ್ಥಾನದ ಜೈಪುರದ ಜೊಹ್ರಿ ಬಜಾರ್ ನಲ್ಲಿರುವ ಅಂಗಡಿಯೊಂದರಲ್ಲಿ ಅಮೆರಿಕದ ಪ್ರಜೆಯಾದ ಚೆರಿಶ್ ಚಿನ್ನದ ಪಾಲಿಶ್ ಇರುವ ಬೆಳ್ಳಿ ಆಭರಣಗಳನ್ನು ಖರೀದಿಸಿ ಮೋಸ ಹೋಗಿದ್ದಾರೆ. ಈ ವರ್ಷ ಏಪ್ರಿಲ್‌ನಲ್ಲಿ ಯುಎಸ್‌ನಲ್ಲಿ ನಡೆದ ಪ್ರದರ್ಶನದಲ್ಲಿ ಆಭರಣಗಳನ್ನು ಪ್ರದರ್ಶಿಸಿದಾಗ, ಅದು ನಕಲಿ ಎಂದು ತಿಳಿದು ಬಂದಿದೆ. ಚೆರಿಶ್ ಭಾರತಕ್ಕೆ ಬಂದು ಅಂಗಡಿ ಮಾಲೀಕ ಗೌರವ್ ಸೋನಿಯನ್ನು ಪ್ರಶ್ನಿಸಿದ್ದಾಳೆ. ಅಂಗಡಿ ಮಾಲೀಕ ಆರೋಪಗಳನ್ನು ತಳ್ಳಿಹಾಕಿದ ನಂತರ, ಯುಎಸ್ ಮಹಿಳೆ ಜೈಪುರದಲ್ಲಿ ಪೊಲೀಸ್ ದೂರು…
ಭಾರತದ ನ್ಯಾಶನಲ್ ರೈಫಲ್ ಅಸೋಸಿಯೇಶನ್ (NRAI) ಪ್ಯಾರಿಸ್ ಒಲಿಂಪಿಕ್ಸ್- 2024ಕ್ಕೆ 15 ಸದಸ್ಯರುಗಳನ್ನು ಒಳಗೊಂಡ ಭಾರತೀಯ ರೈಫಲ್ ಹಾಗೂ ಪಿಸ್ತೂಲ್ ತಂಡವನ್ನು ಮಂಗಳವಾರ ಪ್ರಕಟಿಸಿದೆ. ಎರಡು ಬಾರಿಯ ಒಲಿಂಪಿಯನ್ ಮನು ಭಾಕರ್ ಮಾತ್ರ ಒಂದಕ್ಕಿಂತ ಹೆಚ್ಚು ವೈಯಕ್ತಿಕ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಮನು ಮಹಿಳೆಯರ 10 ಮೀ. ಏರ್ ಪಿಸ್ತೂಲ್ ಹಾಗೂ ಮಹಿಳೆಯರ 25 ಮೀ. ಪಿಸ್ತೂಲ್ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ. ತಂಡವು 8 ರೈಫಲ್ ಹಾಗೂ 7 ಪಿಸ್ತೂಲ್ ಶೂಟರ್ ಗಳನ್ನು ಒಳಗೊಂಡಿದೆ. ವಿಶ್ವ ಚಾಂಪಿಯನ್ ರುದ್ರಾಂಕ್ಷ್ ಪಾಟೀಲ್ ಹಾಗೂ ವಿಶ್ವ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ವಿಜೇತೆ ಮೆಹುಲಿ ಘೋಷ್ ಹಾಗೂ ಕಂಚಿನ ಪದಕ ವಿಜೇತ ಅಖಿಲ್ ಸೆಹೊರನ್ ಸಹಿತ ಕೆಲವು ಪ್ರಮುಖ ಶೂಟರ್ಗಳು ಒಲಿಂಪಿಕ್ಸ್ನಿಂದ ವಂಚಿತರಾಗಿದ್ದಾರೆ. ತಿಲೋತ್ತಮ ಸೇನ್, ಶ್ರೀಯಾಂಕಾ ಸದಂಗಿ ಹಾಗೂ ವರುಣ್ ತೋಮರ್ ಒಲಿಂಪಿಕ್ಸ್ ಕೋಟಾ ಗೆದ್ದಿದ್ದಾರೆ. ಭಾರತವು ಮುಂಬರುವ ಒಲಿಂಪಿಕ್ ಗೇಮ್ಸ್ ನಲ್ಲಿ ಶೂಟಿಂಗ್ನಲ್ಲಿ 21 ಕೋಟಾಗಳನ್ನು ಗಿಟ್ಟಿಸಿಕೊಂಡು ದಾಖಲೆ ಬರೆದಿದೆ. ► ಪ್ಯಾರಿಸ್ ಒಲಿಂಪಿಕ್ಸ್-2024ಕ್ಕೆ ಭಾರತದ…
ರಾಂಚಿ: ಭೂ ಹಗರಣ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಸಿಎಂ ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಅವರು, ಗಂಡೇ ಕ್ಷೇತ್ರದಿಂದ ಜಾರ್ಖಂಡ್ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸ್ಪೀಕರ್ ರವೀಂದ್ರ ನಾಥ್ ಮಹತೋ ಕಲ್ಪನಾ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂಪೈ ಸೊರೆನ್ ಮತ್ತು ಇತರ ಜೆಎಂಎಂ ನಾಯಕರು ಉಪಸ್ಥಿತರಿದ್ದರು. ಗಂಡೇ ಉಪಚುನಾವಣೆಯಲ್ಲಿ ಕಲ್ಪನಾ ಸೊರೆನ್ ಅವರು ಬಿಜೆಪಿಯ ದಿಲೀಪ್ ಕುಮಾರ್ ವರ್ಮಾ ಅವರನ್ನು 27,149 ಮತಗಳ ಅಂತರದಿಂದ ಸೋಲಿಸಿದರು. ಜೆಎಂಎಂ ಶಾಸಕ ಸರ್ಫರಾಜ್ ಅಹ್ಮದ್ ರಾಜೀನಾಮೆ ನೀಡಿದ ನಂತರ ಈ ಸ್ಥಾನ ತೆರವಾಗಿತ್ತು. ಮೇ 20 ರಂದು ಮತದಾನ ನಡೆದಿದ್ದು, 3.16 ಲಕ್ಷ ಅರ್ಹ ಮತದಾರರಲ್ಲಿ 2.17 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಹೇಮಂತ್ ಸೊರೆನ್ ಅವರನ್ನು ಜನವರಿ 31 ರಂದು ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಇಡಿ ಬಂಧಿಸಿತ್ತು. ಬಂಧನಕ್ಕೂ ಮುನ್ನ ಹೇಮಂತ್…
ಬೆಂಗಳೂರು: ‘ಎಲ್ಲರಿಗೂ ಕಾನೂನು ಒಂದೇ, ನಟ ದರ್ಶನ್ ಗೂ ಕಾನೂನು ಒಂದೇ, ಪರಮೇಶ್ವರ್ ಗೂ ಒಂದೇ ಕಾನೂನು. ಯಾರು ಸಹ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ದರ್ಶನ್ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ. ತನಿಖೆಯಲ್ಲಿ ಬರುವ ಅಂಶಗಳನ್ನು ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ. ಯಾರು ಸಹ ಕಾನೂನು ಕೈಗೆತ್ತಿಕೊಳ್ಳಬಾರದು ಎಂದರು. ರೇಣುಕಾಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅವರ ಆಪ್ತೆ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎನ್ನಲಾಗಿದೆ. ಈ ಬಗ್ಗೆ ದರ್ಶನ್ ದೂರು ಕೊಡಬಹುದಾಗಿತ್ತು. ಪೊಲೀಸರು ಕೂಡಲೇ ಕ್ರಮ ತೆಗೆದುಕೊಳ್ಳುತ್ತಿದ್ದರು. ಅದನ್ನು ಬಿಟ್ಟು, ರೇಣುಕಾಸ್ವಾಮಿಯನ್ನು ಕರೆದುಕೊಂಡು ಬಂದು ಹೊಡೆದು ಸಾಯಿಸಿದ್ದಾರೆ ಎಂಬ ಮಾಹಿತಿ ಇದೆ. ದೂರು ಕೊಟ್ಟಿದ್ದರೆ ಇದೆಲ್ಲವನ್ನು ತಡೆಯಲು ಅವಕಾಶವಿತ್ತು. ಆದರೆ, ಘಟನೆ ನಡೆದು ಹೋಗಿದೆ. ಯಾರು ಏನು ಮಾಡುವುದಕ್ಕೆ ಆಗುವುದಿಲ್ಲ. ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕೋ…
ತಮಿಳುನಾಡಿನ ದೇವಸ್ಥಾನದಿಂದ ಕಳ್ಳತನವಾಗಿದ್ದ 500 ವರ್ಷಗಳಷ್ಟು ಹಳೆಯದಾದ ಸಂತ ತಿರುಮಂಕೈ ಆಳ್ವರ ಕಂಚಿನ ವಿಗ್ರಹವನ್ನು ಭಾರತಕ್ಕೆ ಹಿಂದಿರುಗಿಸಲು ಬ್ರಿಟನ್ ನ ಪ್ರತಿಷ್ಠಿತ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಒಪ್ಪಿಕೊಂಡಿದೆ ಎಂದು ವರದಿ ತಿಳಿಸಿದೆ. ಆಕ್ಸ್ ಫರ್ಡ್ ವಿಶ್ವವಿದ್ಯಾನಿಲಯದ ಕೌನ್ಸಿಲ್ ಅಶ್ಮೋಲಿಯನ್ ಮ್ಯೂಸಿಯಂನಿಂದ 15 ನೇ ಶತಮಾನದ ಸಂತ ತಿರುಮಂಕೈ ಆಳ್ವಾರ ಕಂಚಿನ ಶಿಲ್ಪವನ್ನು ಹಿಂದಿರುಗಿಸಲು ಭಾರತೀಯ ಹೈಕಮಿಷನ್ ನ ಮನವಿಯನ್ನು ವಿಶ್ವವಿದ್ಯಾಲಯವು ಒಪ್ಪಿಕೊಂಡಿದೆ. 60 ಸೆಂ.ಮೀ ಎತ್ತರದ ಸಂತ ತಿರುಮಂಕೈ ಆಳ್ವರ ಪ್ರತಿಮೆಯನ್ನು ಆಕ್ಸ್ ಫರ್ಡ್ ವಿಶ್ವವಿದ್ಯಾನಿಲಯದ ಅಶ್ಮೋಲಿಯನ್ ಮ್ಯೂಸಿಯಂ 1967 ರಲ್ಲಿ ಡಾ ಜೆ ಆರ್ ಬೆಲ್ಮಾಂಟ್ (1886-1981) ಎಂಬ ಸಂಗ್ರಾಹಕನ ಸಂಗ್ರಹದಿಂದ ಹರಾಜಿನಲ್ಲಿ ಆಕ್ಸ್ ಫರ್ಡ್ ಪಡೆದುಕೊಂಡಿತ್ತು. ಪ್ರಪಂಚದ ಅತ್ಯಂತ ಪ್ರಸಿದ್ಧವಾದ ಕೆಲವು ಕಲೆ ಮತ್ತು ಪುರಾತತ್ತ್ವ ಶಾಸ್ತ್ರದ ಕಲಾಕೃತಿಗಳನ್ನು ಹೊಂದಿರುವ ವಸ್ತುಸಂಗ್ರಹಾಲಯವು, 1967 ರಲ್ಲಿ ಈ ವಿಗ್ರಹವನ್ನು ಸದುದ್ದೇಶದಿಂದ ಇಲ್ಲಿ ಇರಿಸಿಕೊಂಡಿತ್ತು ಎಂದು ವಿಶ್ವವಿದ್ಯಾಲಯ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…