Author: admin

ಬೆಂಗಳೂರು: ನಟ ಅರ್ಜುನ್ ಸರ್ಜಾ ಮಗಳು ಐಶ್ವರ್ಯಾ ಅರ್ಜುನ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂನ್ 10ರಂದು ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಅರ್ಜುನ್ ಸರ್ಜಾ ಮಗಳು ಐಶ್ವರ್ಯಾ ಅರ್ಜುನ್, ತಮಿಳಿನ ನಟ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಅವರನ್ನು ಮದುವೆಯಾಗಿದ್ದಾರೆ. ಐಶ್ವರ್ಯಾ ಮತ್ತು ಉಮಾಪತಿ ಟಿವಿ ಕಾರ್ಯಕ್ರಮವೊಂದರಲ್ಲಿ ಪರಿಚಯವಾದ್ರು. ಇಬ್ಬರ ಸ್ನೇಹ ಪ್ರೀತಿಗೆ ತಿರುಗಿತು. ಈ ವಿಚಾರವನ್ನು ಹಿರಿಯರ ಗಮನಕ್ಕೆ ತಂದಾಗ ಇಬ್ಬರ ಮನೆಯವರು ಮದುವೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಕಳೆದ ವರ್ಷ ಅಕ್ಟೋಬರ್​ ನಲ್ಲಿ ಅವರ ನಿಶ್ಚಿತಾರ್ಥ ಸಮಾರಂಭ ನಡೆದಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನವದೆಹಲಿ: ಅನ್ನಪೂರ್ಣ ದೇವಿ ಅವರು ಇಂದು ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರ ವಹಿಸಿಕೊಳ್ಳುವ ಮುನ್ನ, 55 ವರ್ಷದ ದೇವಿ ಅವರು ಮಾಜಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಸ್ಮೃತಿ ಇರಾನಿ ಅವರನ್ನು ಅವರ ನಿವಾಸದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾರ್ಗದರ್ಶನ ಪಡೆದಿದ್ದೇನೆ. ಸ್ಮೃತಿ ಅವರು ನೀಡಿದ ಪ್ರೀತಿಯ ಸ್ವಾಗತ ಆತ್ಮೀಯವಾಗಿತ್ತು. ಅವರ ಸ್ಫೂರ್ತಿದಾಯಕ ಮಾರ್ಗದರ್ಶನವು ನನಗೆ ಬೆಳಕಿನ ಕಿರಣದಂತೆ ಯಾವಾಗಲೂ ಉಪಯುಕ್ತವಾಗಿರುತ್ತದೆ’ ಎಂದು ಬರೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ ಕನಸನ್ನು ನನಸಾಗಿಸಲು ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೀದರ್: ನಗರದ ಬಸವೇಶ್ವರ ಮಂಟಪದಲ್ಲಿ ಅಕ್ಕಮಹಾದೇವಿ ಸಾಂಸ್ಕೃತಿಕ ಮಹಿಳಾ ಸಂಘ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಯೋಜಿಸಲಾಯಿತು. ಮುಖ್ಯ ಅತಿಥಿಗಳಾಗಿ ಹಾವಪ್ಪ ವಲಯ ಅರಣ್ಯ ಅಧಿಕಾರಿಗಳು ಔರಾದ್ , ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಜರಪ್ಪ ಮಮದಾಪುರ್, ನಗರಸಭೆಯ ಸದಸ್ಯರಾದ ಪ್ರಶಾಂತ್ ದೊಡ್ಡಿ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುನಿತಾ ಜಿರೋಬಿ ಅವರು ಇದೇ ವೇಳೆ ಮಾತನಾಡಿ, ಗಿಡ ನೆಡೋಣ, ಭೂಮಿ ಉಳಿಸೋಣ ಎಂಬ ಘೋಷಣೆ ಹೇಳಿ, ಪರಿಸರದ ಬಗ್ಗೆ ಜಾಗೃತಿ ಮೂಡಿಸಿದರು. ಸುವರ್ಣ, ವಿದ್ಯಾವತಿ, ವಿಠ್ಠಲ್ ಸಿಸಿ೯, ಶಿವರಾಜ್ ಮಾಶೆಟ್ಟಿ ಚಿಮಕೋಡ, ಅಣ್ಣಾವ್ರ ಪವನ್, ಕಿರಣ್ ಕುಮಾರ್, ಅಣ್ಣಾವ್ರು ಶರಣಯ್ಯ ಇದ್ದರು ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಬೆಂಗಳೂರಲ್ಲಿ ಇನ್ಮುಂದೆ ಬೆಳಗ್ಗೆ 5ರಿಂದ ರಾತ್ರಿ 10ರ ವರೆಗೆ ಪಾರ್ಕ್ ಗಳು ಓಪನ್ ಆಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಈ ಮೊದಲು ಬೆಳಗ್ಗೆ 5ರಿಂದ ಬೆಳಗ್ಗೆ 10ರ ತನಕ ಪಾರ್ಕ್ ಗಳನ್ನು ಓಪನ್ ಮಾಡಲಾಗುತ್ತಿತ್ತು, ಇನ್ಮುಂದೆ ಬೆಳಗ್ಗೆ 5ರಿಂದ ರಾತ್ರಿ 10ರ ವರೆಗೆ ಪಾರ್ಕ್ ಗಳು ಓಪನ್ ಆಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೆ ಲಾಲ್ ಬಾಗ್, ಕಬ್ಬನ್ ಪಾರ್ಕ್ ಸೇರಿದಂತೆ ತೋಟಗಾರಿಕೆ ವ್ಯಾಪ್ತಿಯಲ್ಲಿ ಇರುವ ಪಾರ್ಕ್ ಗಳಿಗೆ ಈ ಅವಧಿ ವಿಸ್ತರಣೆ ಅನ್ವಯ ಆಗುವುದಿಲ್ಲ ಎಂದರು. ಪಾರ್ಕ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಹಾಕಿದ್ದೇನೆ, ಸಾರ್ವಜನಿಕರಿಗೆ ಎಲ್ಲಾ ರೀತಿಯ ಸುರಕ್ಷಿತ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಖಾಲಿ ಹುದ್ದೆ ತುಂಬಿರಲಿಲ್ಲ. ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಸೇರಿ ನಾಲ್ಕು ನಿಗಮಗಳಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 2 ಸಾವಿರ ಹುದ್ದೆಗಳಿಗೆ ಈಗಾಗಲೇ ನೇಮಕಾತಿ ಮಾಡಿಕೊಳ್ಳಲಾಗಿದೆ. ಉಳಿದವು ನೇಮಕಾತಿ ಪ್ರಕ್ರಿಯೆಯಲ್ಲಿವೆ. 5800 ಹೊಸ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದ್ದು, ಈಗಾಗಲೇ 2400 ಬಸ್ ಗಳ ಖರೀದಿ ಆಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವ ನಿರ್ಧಾರ ಕೈಗೊಂಡಿಲ್ಲ. ನಾಲ್ಕು ನಿಗಮಗಳಿಂದ ಪ್ರಸ್ತಾವ ಬಂದ ನಂತರ ಟಿಕೆಟ್ ದರ ಹೆಚ್ಚಳದ ಬಗ್ಗೆ ಪರಿಶೀಲಿಸುವುದಾಗಿ ಸಚಿವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನರೇಗಾ ಕೆಲಸಕ್ಕೆಂದು ಬಂದ ಮಹಿಳೆಯನ್ನು ದೆವ್ವವೊಂದು ಆವರಿಸಿಕೊಂಡಿದ್ದು, ಏನು ಬೇಕು ಎಂದು ಕೇಳಿದಾಗ ನನಗೆ ವಿಮಲ್, ಗುಟ್ಕಾ ಬೇಕೆಂದು ಕೇಳಿದ ವಿಚಿತ್ರ ಹಾಗೂ ಹಾಸ್ಯದ ಪ್ರಸಂಗವೊಂದು ಬೆಳಕಿಗೆ ಬಂದಿದೆ. ಕೊಪ್ಪಳದ ಕೆರೆಹಳ್ಳಿ ಗ್ರಾಮದಲ್ಲಿ‌ ನರೇಗಾ ಕಾಮಗಾರಿಯಲ್ಲಿ ಹೂಳೆತ್ತುವ ಕೆಲಸ ಮಾಡುತ್ತಿದ್ದ ‌ವೇಳೆ ಮಹಿಳೆಯನ್ನು ದೆವ್ವವೊಂದು ಆವರಿಸಿಕೊಂಡು ಆಕೆ ವಿಚಿತ್ರವಾಗಿ ವರ್ತಿಸಿದ್ದಾಳೆ. ಪಕ್ಕದಲ್ಲಿದ್ದವರೆಲ್ಲಾ ತಕ್ಷಣ ಗಾಬರಿಗೊಂಡು ಬಂಡಿಹರ್ಲಾಪುರಾ ಗ್ರಾಮದಲ್ಲಿ ದೆವ್ವ ಬಿಡಿಸುವ ಖಾಜಾ ಸಾಹೇಬ್ ಯಡಿಯಪೂರ ಅವರನ್ನು ಸ್ಥಳಕ್ಕೆ ಕರೆಸಿದ್ದಾರೆ. ಖಾಜಾ ಸಾಹೇಬ್ ಅವರು ಏನಾಯಿತು, ಯಾಕೆ ಬಂದೆ ಎಂದು ಕೇಳಿದಾಗ ನನಗೆ ವಿಮಲ್ ಕೊಟ್ರೆ ಹೋಗ್ತಿನಿ ಎಂದು ಮಹಿಳೆಗೆ ಆವರಿಸಿಕೊಂಡಿದ್ದ ದೆವ್ವ ವಿಮಲ್‌ ಗುಟ್ಕಾ ಕೇಳಿದೆ. ಈ ವೇಳೆ ತಲೆ ಮೇಲೆ ಕಲ್ಲೊರಿಸಿ ಖಾಜಾ ಸಾಹೇಬ್ ದೆವ್ವ ಬಿಡಿಸಿದ್ದಾನೆ. ಖಾಜಾ ಸಾಹೇಬ್ ಪೂಜೆ ಶುರು ಮಾಡುತ್ತಿದ್ದಂತೆ ನಾನು ಹೋಗ್ತಿನಿ ಬಿಟ್ಟು ಬಿಡು ಎಂದು ದೆವ್ವ ಕಣ್ಣೀರು ಹಾಕಿದೆ. ವಿಮಲ್ ಗುಟ್ಕಾ ಪ್ರೇಮಿ ದೆವ್ವದ ವರ್ತನೆಗೆ ಜನ ಎದ್ದು ಬಿದ್ದು ನಕ್ಕಿದ್ದಾರೆ. ಕೊನೆಗೆ…

Read More

ನರೇಂದ್ರ ಮೋದಿ ಭಾನುವಾರ ಸಂಜೆ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಜೊತೆ 71 ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎಲ್ಲ ಸಚಿವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಪ್ರಮಾಣ ವಚನ ಸ್ವೀಕಾರದ ಸಮಯದಲ್ಲಿ ಸಾಮಾನ್ಯವಾಗಿ ಸಚಿವರು ನಾನು (ಹೆಸರು) ಕಾನೂನಿನ ಮೂಲಕ ಸ್ಥಾಪಿಸಿದಂತೆ ನಾನು ಭಾರತದ ಸಂವಿಧಾನಕ್ಕೆ ಪ್ರಮಾಣ ಮಾಡುತ್ತೇನೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಎಂದು ಮಂತ್ರಿಗಳ ಪ್ರಮಾಣ ವಚನವನ್ನು ಪೂರ್ಣಗೊಳಿಸಲಾಗುತ್ತದೆ. ಪ್ರಧಾನಿ ಕೂಡ ಅದೇ ರೀತಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಆದರೆ, ಭಾನುವಾರ ಟಿಡಿಪಿ ಸಂಸದ ಚಂದ್ರಶೇಖರ್ ಪೆಮ್ಮಸಾನಿ ಪ್ರಮಾಣ ವಚನ ಸ್ವೀಕರಿಸಿದಾಗ, ಅವರ ಮಾತುಗಳು ಇತರ ಸಚಿವರಿಗಿಂತ ಭಿನ್ನವಾಗಿತ್ತು. ಟಿಡಿಪಿ ಸಂಸದ ಚಂದ್ರಶೇಖರ್ ಪೆಮ್ಮಸಾನಿ ಭಾನುವಾರ ಸಂಜೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.  ನಡೆದ ಸಮಾರಂಭದಲ್ಲಿ ಬೇರೆ ಸಚಿವರಿಗಿಂತಲೂ ಚಂದ್ರಶೇಖರ್ ಪೆಮ್ಮಸಾನಿ ಅವರ ಪ್ರಮಾಣ ವಚನ ಸ್ವಲ್ಪ ವಿಭಿನ್ನವಾಗಿತ್ತು. ನಾನು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಎಂದು ಅವರು…

Read More

ರಾಮನಗರ ತಾಲೂಕಿನ ಬಿಡದಿ ಬಳಿ ಕೆಂಚನಗುಪ್ಪೆಯಲ್ಲಿ ಡಿಕೆ ಸುರೇಶ್ ಪರ ಬೆಟ್ಟಿಂಗ್ ಆಡಿದ್ದ ವ್ಯಕ್ತಿ ನೇಣಿಗೆ ಶರಣಾಗಿದ್ದಾರೆ. 40 ವರ್ಷದ ಶಿವರಾಜ್ ಮೃತ ವ್ಯಕ್ತಿ ಎನ್ನಲಾಗಿದೆ. ಡಿ.ಕೆ‌.ಸುರೇಶ್ ಪರವಾಗಿ 50‌ ಲಕ್ಷಕ್ಕೂ ಹೆಚ್ಚು ರೂ. ಬೆಟ್ಟಿಂಗ್​ ಕಟ್ಟಿ ಶಿವರಾಜ್ ಸೋತಿದ್ದ. ಆದರೆ ಲಕ್ಷಾಂತರ ಹಣ ಕೊಡಲಾಗದೇ‌ ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಡದಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಕಳೆದ ಬಾರಿ ಕರ್ನಾಟಕದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರ ಭಾರೀ ಸದ್ದು ಮಾಡಿತ್ತು. ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಎನ್ನುವ ಲೆವಲ್​ಗೆ ಸದ್ದು ಮಾಡಿತ್ತು. ಈ ಭಾರೀ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸದ್ದು ಮಾಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದಿಂದ ಐವರಿಗೆ ಮಂತ್ರಿ ಸ್ಥಾನ ದೊರಕಿದ್ದು, ಇದರಲ್ಲಿ ಮೂವರಿಗೆ ಕ್ಯಾಬಿನೆಟ್‌ ದರ್ಜೆ ಸಚಿವ ಸ್ಥಾನ ದೊರಕಿದರೆ ಉಳಿದ ಇಬ್ಬರಿಗೆ ರಾಜ್ಯ ಖಾತೆ ದೊರಕಿದೆ. ನಿರ್ಮಲಾ ಸೀತಾರಾಮನ್‌, ಧಾರವಾಡದ ಪ್ರಲ್ಹಾದ್‌ ಜೋಶಿ, ಮಂಡ್ಯದ ಎಚ್‌ ಡಿ ಕುಮಾರಸ್ವಾಮಿ ಇವರಿಗೆ ಕ್ಯಾಬಿನೇಟ್‌ ದರ್ಜೆ ಸಚಿವ ಸ್ಥಾನ ದೊರಕಿದರೆ, ಬೆಂಗಳೂರು ಉತ್ತರ ಕ್ಷೇತ್ರದ ಶೋಭಾ ಕರಂದ್ಲಾಜೆ ಹಾಗೂ ತುಮಕೂರು ಕ್ಷೇತ್ರದ ವಿ ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಚಿವ ಸ್ಥಾನ ದೊರಕಿದೆ. ಕುಮಾರಸ್ವಾಮಿ ಅವರಿಗೆ ಕೃಷಿ ಖಾತೆ ಮಿಸ್‌ ಆಗಿದ್ದು, ಅವರಿಗೆ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಖಾತೆ ದೊರಕಿದೆ. ಇನ್ನು ಕೃಷಿ ಖಾತೆ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ದೊರಕಿದೆ. ನಿರ್ಮಲಾ ಸೀತಾರಾಮನ್‌ ಅವರಿಗೆ ಈ ಬಾರಿ ಕೂಡಾ ಹಣಕಾಸು ಇಲಾಖೆ ನೀಡಲಾಗಿದೆ. ಪ್ರಹ್ಲಾದ್‌ ಜೋಶಿ ಅವರಿಗೆ ಈ ಬಾರಿ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ನೀಡಲಾಗಿದೆ. ಜೊತೆಗೆ ನವೀಕರಿಸಬಹುದಾದ ಇಂಧನ ಇಲಾಖೆಯ ಜವಾಬ್ದಾರಿ ನೀಡಲಾಗಿದೆ. ಶೋಭಾ ಕರಂದ್ಲಾಜೆ…

Read More

ಬೆಂಗಳೂರು: ಜಾತಿ ಪ್ರಮಾಣಪತ್ರವನ್ನು ರದ್ದುಗೊಳಿಸುವ ಅಧಿಕಾರ ತಹಸೀಲ್ದಾರ್‌ಗೆ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಈ ಅಧಿಕಾರವು ರಾಜ್ಯ ಜಾತಿ ಪರಿಶೀಲನಾ ಸಮಿತಿಗೆ ಮಾತ್ರ ಇರುತ್ತದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತಮ್ಮ ತೀರ್ಪಿನಲ್ಲಿ, ತಹಸೀಲ್ದಾರ್ ಜಾತಿ ಪ್ರಮಾಣಪತ್ರಕ್ಕಾಗಿ ಅರ್ಜಿಯನ್ನು ಸ್ವೀಕರಿಸಬಹುದು ಅಥವಾ ತಿರಸ್ಕರಿಸಬಹುದು ಎಂದು ಸ್ಪಷ್ಟಪಡಿಸಿದ್ದಾರೆ. 2015ರ ಜೂನ್ 30ರಂದು ಬೆಂಗಳೂರು ಉತ್ತರ ತಾಲೂಕು ತಹಶೀಲ್ದಾರ್ ಬಿನ್ನಿಪೇಟೆಯ ಎಂ. ಗಾಯತ್ರಿ ಅವರು ನಾಯಕ ಸಮುದಾಯಕ್ಕೆ ಸೇರಿದ್ದಾರೆ ಎಂದು ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ವಿತರಿಸಿದ್ದರು. ಈ ಪತ್ರ ಆಧರಿಸಿ ಬಿಬಿಎಂಪಿ ಚುನಾವಣೆಗೆ ಗಾಯಿತ್ರಿ ಸ್ಪರ್ಧಿಸಿದ್ದರು. ಸಿವಿಲ್ ಹಕ್ಕುಗಳ ಜಾರಿ ನಿರ್ದೇಶನಾಲಯದ ಮುಂದೆ ದೂರು 2015ರ ಸೆಪ್ಟೆಂಬರ್ 5 ರಂದು ಸಲ್ಲಿಸಿದ್ದಾರೆ. ಮೋಸದಿಂದ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ಗಾಯಿತ್ರಿ ಅವರು ಪಡೆದಿದ್ದಾರೆ ಎಂದು ದೂರು ನೀಡಿದ್ದರು. ಬೆಂಗಳೂರಿನ ಜಿಲ್ಲಾ ಜಾತಿ ಪರಿಶೀಲನ ಸಮಿತಿಗೆ ಈ ದೂರು ವರ್ಗಾವಣೆಯಾಗಿದ್ದು, ಅರ್ಜಿ ವಿಚಾರಣೆ ನಡೆಸಿದ್ದ ಸಮಿತಿ ಅಧ್ಯಕ್ಷರಾದ ಜಿಲ್ಲಾಧಿಕಾರಿ ಅವರು,…

Read More