Author: admin

ಉಡುಪಿ: ಜಿಲ್ಲೆಯಲ್ಲಿ ಬಿಟ್ಟು, ಬಿಡದೆ ವರುಣ ಆರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಜಿಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮಲ್ಪೆ ಬೀಚ್​ಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಮಲ್ಪೆ ಬೀಚ್​ಗೆ ಬೇಲಿ ಹಾಕಿ, ಬೀಚ್ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಅಲ್ಲದೆ, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮತ್ತು ಸುರಕ್ಷತೆಯ ದೃಷ್ಟಿಯಿಂದ ಉಡುಪಿ ಜಿಲ್ಲಾಡಳಿತ ಮತ್ತು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅನೇಕ ಕ್ರಮಗಳನ್ನು ಕೈಗೊಂಡಿದೆ. ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೆ ಏಳು ಅಡಿ ಎತ್ತರದ ಬಲೆ ಅಳವಡಿಸಿ ತಡೆ ಬೇಲಿಯನ್ನು ಸದ್ಯಕ್ಕೆ ನಿರ್ಮಿಸಲಾಗಿದೆ. ಜೊತೆಗೆ ಎಚ್ಚರಿಕೆಯ ಕೆಂಪು ಬಾವುಟ ಹಾಕಲಾಗಿದೆ. ಇದರ ಜೊತೆಗೆ ಆಯಕಟ್ಟಿನ ಜಾಗದಲ್ಲಿ ಬೀಚ್ ಪ್ರವೇಶ ನಿಷೇಧದ ಎಚ್ಚರಿಕೆ ಫಲಕಗಳನ್ನು ಕೂಡ ಅಳವಡಿಸಲಾಗಿದೆ. ಮಲ್ಪೆ ಬೀಚಿನಲ್ಲಿ ತರಬೇತಿ ಪಡೆದ ಜೀವ ರಕ್ಷಕರನ್ನ ನಿಯೋಜನೆ ಮಾಡಲಾಗಿದೆ. ನಿರಂತರವಾಗಿ ಎಟಿಬಿ ಸ್ಯಾಂಡ್ ಬೈಕ್ ಮೂಲಕ ಬೀಚ್​​ ನ್ನು ಗಸ್ತು ತಿರುಗುವ ಜೀವ ರಕ್ಷಕ ಪಡೆಯ ಸದಸ್ಯರು ಬೀಚ್ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಮುನ್ನೆಚ್ಚರಿಕೆಗಳನ್ನ…

Read More

ಬೆಂಗಳೂರಿನಲ್ಲಿ IIMB ಮಾಡಿದ್ದ ಸೋಫಿಯಾ ಫಿರ್ದೋಸ್‌ ಒಡಿಶಾ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಬಾರಾಬತಿ- ಕಟಕ್‌ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ಸೋಫಿಯಾ ಫಿರ್ದೋಸ್‌, ಒಡಿಶಾ ರಾಜಕೀಯ ಇತಿಹಾಸದಲ್ಲಿ ವಿಧಾನಸಭೆ ಪ್ರವೇಶಿಸಿದ ಮೊದಲ ಮುಸ್ಲಿಂ ಮಹಿಳೆ ಎಂಬ ಖ್ಯಾತಿಗೆ ಪಾತ್ರವಾಗಿದ್ದಾರೆ. ಕಾಂಗ್ರೆಸ್‌ ಹಿರಿಯ ನಾಯಕ ಮೊಹಮ್ಮದ್‌ ಮೊಕ್ವಿಮ್‌ ಅವರು ಬಾರಾಬತಿ -ಕಟಕ್‌ ಕ್ಷೇತ್ರ ಪ್ರತಿನಿಧಿಸುತ್ತಿದ್ದರು. ಭ್ರಷ್ಟಾಚಾರ ಪ್ರಕರಣದಲ್ಲಿ ಮೊಕ್ವಿಮ್‌ ಅನರ್ಹಗೊಂಡಿದ್ದ ಕಾರಣ ಅವರ ಪುತ್ರಿ ಫಿರ್ದೋಸ್‌ ಅವರಿಗೆ ಕಾಂಗ್ರೆಸ್ ವಿಧಾನಸಭೆ ಟಿಕೆಟ್‌ ನೀಡಿತ್ತು. ಕಳಿಂಗ ವಿಶ್ವವಿದ್ಯಾಲಯದ ಬಿ.ಟೆಕ್‌ ಪದವೀಧರೆಯಾಗಿರುವ ಫಿರ್ದೋಸ್‌, 2022ರಲ್ಲಿ ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ ಮೆಂಟ್ ‌ನಲ್ಲಿ ಅಧ್ಯಯನ ಮಾಡಿದ್ದರು. ತಂದೆ ಸ್ಥಾಪಿಸಿದ್ದ ಮೆಟ್ರೋ ಬಿಲ್ಡರ್‌ ಕಂಪನಿಯಲ್ಲಿ ನಿರ್ದೇಶಕಿಯಾಗಿ ಕೆಲಸ ಮಾಡಿದ್ದರು. ತಮ್ಮ ರಿಯಲ್ ಎಸ್ಟೇಟ್ ಸಂಸ್ಥೆ ಮೆಟ್ರೋ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕರಾಗಿರುವ ಮೊಹಮ್ಮದ್ ಮೊಕ್ವಿಮ್, ಒರಿಸ್ಸಾ ಗ್ರಾಮೀಣ ವಸತಿ ಅಭಿವೃದ್ಧಿ ನಿಗಮದ (ಒಆರ್‌ಎಚ್‌ಡಿಸಿ) ಸಾಲ ವಂಚನೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದಾರೆ. ಈ ಶಿಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ…

Read More

ಬೆಂಗಳೂರು: ಕೊಲೆ ಪ್ರಕರಣ ಒಂದಕ್ಕೆ ಸಂಬಂಧಪಟ್ಟಂತೆ ಚಿತ್ರ ನಟ ದರ್ಶನ್ ಅವರನ್ನು ಈಗಾಗಲೇ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ಅವರು ಇಂದು ಕೋರಮಂಗಲದ ಆರ್.ಎ. ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಅಕಾಡೆಮಿ ಮೈದಾನದಲ್ಲಿ ನಡೆದ, ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಹಾಗೂ ಅಗ್ನಿಶಾಮಕರ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ವಿಚಾರಣೆಯ ನಂತರ ಈ ಸಂಬಂಧ ಸತ್ಯ ಹೊರಬೀಳಲಿದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುರುವೇಕೆರೆ: ಸರ್ಕಾರಿ ಶಾಲೆಯ ಉಳಿವಿಗಾಗಿ ದಾನಿಗಳು ಪ್ರೋತ್ಸಾಹಿಸಬೇಕು ಎಂದು ಬೆಂಗಳೂರು ಕ್ಲಿನಿಕ್ ಮಾಲಿಕರಾದ ಡಾ.‌ ಶಶಿಧರ್ ಎಂ ಹೇಳಿದರು. ತಾಲೂಕಿನ ಮಾಯಸಂದ್ರ ಹೋಬಳಿಯ ಡಿ.ಬಿ.ವಿ. ಹಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಉಚಿತ “ಟ್ರಾಕ್ ಸಮವಸ್ತ್ರ”ವನ್ನು ವಿತರಿಸಿ ಮಾತನಾಡಿದ ಅವರು, “ಗ್ರಾಮೀಣ ಪ್ರದೇಶಗಳತ್ತ ಸರ್ಕಾರಿ ಶಾಲೆಗಳು ಈಗಾಗಲೇ ಅಳಿವಿನಂಚಿನಲ್ಲಿದ್ದು, ಸರ್ಕಾರಿ ಶಾಲೆಯ ಉಳಿವಿಗಾಗಿ ದಾನಿಗಳು ಉದಾರ ಮನಸ್ಸಿನಿಂದ ವಿದ್ಯಾರ್ಥಿಗಳಿಗೆ ಅವಶ್ಯಕವಿರುವ ಉಪಯುಕ್ತ ವಿಶೇಷ ವಸ್ತುಗಳನ್ನು, ತಮ್ಮ ಕೈಲಾದ ಸಹಾಯ ಮಾಡುವ ಮೂಲಕ ಪ್ರೋತ್ಸಾಹಿಸಿ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಬೇಕೆಂದು ಮನವಿ ಮಾಡಿದರು. ಅಲ್ಲದೇ ಸರ್ಕಾರಿ ಶಾಲೆಯ ಉಳಿವಿಗಾಗಿ ನಾವೆಲ್ಲರೂ ಕೈಜೋಡಿಸೋಣ” ಎಂದರು. ಮುಖ್ಯ ಶಿಕ್ಷಕರಾದ ನಾಗರಾಜು ರವರು ಮಾತನಾಡಿ, “ಪ್ರತಿ ವರ್ಷವೂ ಸಹ ನಮ್ಮ ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳನ್ನು‌ ದಾನಿಗಳು ತಮ್ಮ ಕೈಲಾದ ಸಹಾಯವನ್ನು ಮಾಡುತ್ತಾ, ನಮ್ಮ ಮಕ್ಕಳನ್ನು ಪ್ರೋತ್ಸಾಹಿಸುತ್ತಿದ್ದಾರೆ. ಈ ವರ್ಷವೂ ಸಹ ಡಾ. ಶಶಿಧರ್ ಎಂ ರವರು ಉಚಿತ ಟ್ರಾಕ್ ಸಮವಸ್ತ್ರವನ್ನು ವಿತರಿಸಿದ್ದಾರೆ ಹಾಗೂ ಮಾಯಸಂದ್ರದ…

Read More

ರಾಜ್ಯದಲ್ಲಿ ಜೂ.2ರಂದು ಮುಂಗಾರು ಪ್ರವೇಶ ಮಾಡಿದೆ. 10 ದಿನಗಳ ಅವಧಿಯಲ್ಲಿ ವಾಡಿಕೆ ಪ್ರಕಾರ 51 ಮಿ.ಮೀ. ಮಳೆಯಾಗಬೇಕಿತ್ತು. ಆದರೆ, ಈಗಾಗಲೆ 91 ಮಿ.ಮೀ. ಆಗಿದೆ. ಇದು ವಾಡಿಕೆಗಿಂತ ಶೇ.78ರಷ್ಟು ಹೆಚ್ಚು ಮಳೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಬರ ವಿಚಾರಕ್ಕೆ ಸಂಬಂಧಿಸಿದ ಸಚಿವ ಸಂಪುಟ ಉಪ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 9 ಮಿ.ಮೀ. ಮಳೆಯಾಗಿತ್ತು ಎಂದರು. ಮುಂಗಾರು ರಾಜ್ಯದ ಎಲ್ಲ ಭಾಗಗಳಲ್ಲೂ ಆವರಿಸಿದೆ. 5 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾದರೆ, 4 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. 22 ಜಿಲ್ಲೆಗಳಲ್ಲಿ ವಾಡಿಕೆಗಿಂತ ಅತ್ಯಧಿಕ ಮಳೆಯಾಗಿದೆ. ಕುಡಿಯುವ ನೀರಿನ ಸಮಸ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಮೇ ತಿಂಗಳಲ್ಲಿ ಟ್ಯಾಂಕರ್ ಗಳ ಮೂಲಕ ನೀರು ಸರಬರಾಜು ಮಾಡುತ್ತಿದ್ದ ಹಳ್ಳಿಗಳ ಸಂಖ್ಯೆ 542 ಇತ್ತು. ಈಗ ಅದು 374ಕ್ಕೆ ಇಳಿದಿದೆ. ಮುಂದಿನ…

Read More

4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಾಲಿವುಡ್‌ ನಟರೊಬ್ಬರ ಮೇಲೆ ಕೇಸು ದಾಖಲಾಗಿದೆ. ಕೇರಳದ ಕೋಝಿಕ್ಕೋಡ್‌ ನಲ್ಲಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವು ನಟ ಕೂಟಿಕಲ್‌ ಜಯಚಂದ್ರನ್‌ ವಿರುದ್ಧ ಕೇಳಿ ಬಂದಿದೆ. ಸ್ಥಳೀಯ ಪೊಲೀಸರು ಕೇಸು ದಾಖಲಿಸಿದ್ದು, ಪ್ರಕರಣ ದಾಖಲಾಗಿದೆ. ತಮ್ಮ ಕುಟುಂಬದೊಳಗಿರುವ ವಿವಾದದ ಲಾಭವನ್ನು ಪಡೆದು ನಟ ತನ್ನ ನಾಲ್ಕು ವರ್ಷದ ಮಗಳಿಗೆ ಕಿರುಕುಳ ನೀಡಿದ್ದಾರೆ ಎಂದು ಮಗುವಿನ ತಾಯಿ ದೂರಿನಲ್ಲಿ ಹೇಳಿದ್ದು, ತಾಯಿ ನೀಡಿದ ದೂರಿನ ಆಧಾರದ ಮೇಲೆ ಕಸಬಾ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಈ ಪ್ರಕರಣದ ಕುರಿತು ನಟ ಜಯಚಂದ್ರನ್‌ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ದೃಶ್ಯಂ ಸಿನಿಮಾ ಸೇರಿ ನಜಾನ್‌, ಓರು ಸೆಕೆಂಡ್‌ ಕ್ಲಾಸ್‌ ಯಾತ್ರಾ, ಲಕ್ಷ್ಯಮ್‌, ನಾರದನ್‌, ಮೈಬಾಸ್‌, ಡಿಟೆಕ್ಟಿವ್‌ ಸೇರಿ ಹಲವು ಸಿನಿಮಾದಲ್ಲಿ ಜಯಚಂದ್ರನ್‌ ನಟಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಪ್ರಜ್ವಲ್ ರೇವಣ್ಣರ SIT ತನಿಖೆ ಅಂತ್ಯವಾಗಿದ್ದು, ಮಾಜಿ ಸಂಸದರು ಜೈಲು ಪಾಲಾಗಿದ್ದಾರೆ. ಪ್ರಜ್ವಲ್ ​ನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​ ಮಾಡಲಾಗಿದ್ದು, ವಿಚಾರಣಾಧೀನ ಖೈದಿ ಸಂಖ್ಯೆ 5664 ನೀಡಲಾಗಿದೆ. ಇನ್ನು ಮಹಿಳೆಯ ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಶಾಸಕ ಎಚ್​.ಡಿ. ರೇವಣ್ಣಗೆ ವಿಚಾರಣಾಧೀನ ಖೈದಿ ಸಂಖ್ಯೆ 4567 ನೀಡಲಾಗಿತ್ತು. ಸದ್ಯ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಕ್ವಾರೆಂಟೈನ್ ಸೆಲ್ ನಲ್ಲಿದ್ದು, ಅವರಿಗೆ ವಿಚಾರಣಾಧೀನ ಕೈದಿ ನಂಬರ್-5664 ನೀಡಲಾಗಿದೆ. ಇನ್ನು ಇಂದಿನ ರಾತ್ರಿ ಊಟವನ್ನು ಸಹ ಜೈಲಾಧಿಕಾರಿಗಳು ನೀಡಿದ್ದಾರೆ. ರಾತ್ರಿ ಜೈಲಿನ ಮೆನುವಿನಂತೆ ಮುದ್ದೆ, ಅನ್ನ, ಸಾಂಬಾರು, ಪಲ್ಯ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದ್ದು, ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂದು ಪರಾಮರ್ಶೆ ನಡೆಸಿ, ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಸೋಮವಾರ ನಗರದ ಕುಮಾರಪಾರ್ಕ್ ಬಳಿಯಿರುವ ಸರಕಾರಿ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಲೋಕಸಭಾ ಚುನಾವಣೆಯ ಫಲಿತಾಂಶದ ಕುರಿತು ಮುಂದಿನ ದಿನಗಳಲ್ಲಿ ಎಲ್ಲ ನಾಯಕರ ಜೊತೆ ಪರಾಮರ್ಶನಾ ಸಭೆ ನಡೆಸಲಾಗುವುದು. ಸೋಲು ಸೋಲೇ. ಎಲ್ಲಿ ತಪ್ಪಾಗಿದೆ, ಏಕೆ ಹೆಚ್ಚುಕಮ್ಮಿಯಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು. ಇಂದು ಬೆಂಗಳೂರಿನ ಲೋಕಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶಗಳ ಬಗ್ಗೆ ಸಭೆ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳ ಸಭೆ ನಡೆಸಲಾಗುವುದು. ಶೀಘ್ರವೇ ಇದಕ್ಕೆ ದಿನಾಂಕ ನಿಗದಿ ಮಾಡುತ್ತೇವೆ. ಎಲ್ಲೆಲ್ಲಿ ಏನಾಗಿದೆ ಎನ್ನುವ ಸತ್ಯಶೋಧನೆ ಹಾಗೂ ಪರಿಹಾರ ಹುಡುಕುವ ಕೆಲಸ ಆಗಬೇಕು ಎಂದು ಶಿವಕುಮಾರ್ ತಿಳಿಸಿದರು. ಕರ್ನಾಟಕ, ಹಿಮಾಚಲ ಪ್ರದೇಶದ ಚುನಾವಣೆಯ ಬಗ್ಗೆ ಎಐಸಿಸಿ ಅಧ್ಯಕ್ಷರು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಕೇಳಿದ ಕೇಳಿದ ಪ್ರಶ್ನೆಗೆ…

Read More

ಬೆಂಗಳೂರು: ಬಕ್ರೀದ್​​​ ಹಬ್ಬದ ಹಿನ್ನೆಲೆ ಪ್ರತಿ ವರ್ಷವೂ ಭರ್ಜರಿ ಕುರಿ ವ್ಯಾಪಾರ ನಡೆಯಲಿದೆ. ಎಂದಿನಂತೆ ಈ ಬಾರಿಯೂ ಬಗೆ ಬಗೆಯ ತಳಿಗಳ ಕುರಿಗಳು ಬಜಾರಿಗೆ ಬಂದಿದೆ. ನಗರದ ಅತಿ ದೊಡ್ಡ ಕುರಿ ಮಾರುಕಟ್ಟೆಯಾಗಿರುವ ಈದ್ಗಾ ಮೈದಾನದಲ್ಲಿ ಈಗಲೇ ಭರ್ಜರಿ ವ್ಯಾಪಾರ ಶುರುವಾಗಿದೆ. ಜೂನ್​​ 17ಕ್ಕೆ ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ನಡೆಯಲಿದೆ. ಈ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕುರಿ, ಮೇಕೆ ವ್ಯಾಪಾರ ಜೋರಾಗಿದೆ. ಮುಸ್ಲಿಮರ ಪವಿತ್ರ ಹಬ್ಬಗಳಲ್ಲೊಂದಾದ ಬಕ್ರೀದ್​​ ಸಮೀಪಿಸಿದೆ. ಜೂನ್​​ 17ಕ್ಕೆ ಸಾರ್ವತ್ರಿಕವಾಗಿ ನಾಡಿನೆಲ್ಲೆಡೆ ಬಕ್ರೀದ್​ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಬೆಂಗಳೂರಿಗೆ ಭಾರೀ ಪ್ರಮಾಣದಲ್ಲಿ ಕುರಿ, ಮೇಕೆಗಳು ಬಂದಿಳಿದಿದೆ. ಕೊರೋನಾ ಬಳಿಕ ಇದೇ ಮೊದಲ ಬಾರಿಗೆ ನಗರದ ಕುರಿ ಮಾರುಕಟ್ಟೆಗೆ ಇಷ್ಟೊಂದು ಮೇಕೆ ಕುರಿಗಳನ್ನು ಮಾರಾಟಕ್ಕೆ ಇರಿಸಲಾಗಿದ್ದು, ಭರ್ಜರಿ ಆದಾಯ ಬರುವ ನಿರೀಕ್ಷೆಯಲ್ಲಿದ್ದಾರೆ ರೈತರು. ಆದರೆ ಗ್ರಾಹಕರು ಈ ಬಾರಿ ಕುರಿಗಳ ರೇಟ್​ ಹೆಚ್ಚಳವಾಗಿದೆ ಎನ್ನುತ್ತಿದ್ದಾರೆ. ನಗರದ ಚಾಮರಾಜಪೇಟೆ, ಟ್ಯಾನರಿ ರೋಡ್, ಆರ್ ಟಿ‌ನಗರ ಸೇರಿದಂತೆ ನಗರದ ಕೆಲವು…

Read More

ಆರಂಭದಲ್ಲಿ ಲಕ್ಷಾಂತರ ಬಡವರ ಹೊಟ್ಟೆ ತುಂಬಿಸಿದ್ದ ಕ್ಯಾಂಟೀನ್​ಗಳು ಬಿಬಿಎಂಪಿ ನಿರ್ಲಕ್ಷ್ಯದಿಂದ ಸೊರಗಿವೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಇರುವಾಗಲೇ ಸಿಎಂ ಕನಸಿನ ಯೋಜನೆಯಾಗಿರುವ ಇಂದಿರಾ ಮೊಬೈಲ್ ಕ್ಯಾಂಟೀನ್​ ಗಳ ಸೇವೆ ಮರೆಯಾಗುತ್ತಿದೆ. ಮೊಬೈಲ್ ಕ್ಯಾಂಟೀನ್​ ಗಳ ಸದ್ಯದ ಸ್ಥಿತಿಯ ಬಗ್ಗೆ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಜಯನಗರದ 9ನೇ ಬ್ಲಾಕ್ ‌ನಲ್ಲಿರುವ ಸಂಚಾರಿ‌ ಇಂದಿರಾ ಮೊಬೈಲ್ ಕ್ಯಾಂಟೀನ್​ ನ ಡೋರ್ ಮುರಿದು ಹೋಗಿದೆ. ವಸ್ತುಗಳು ಎಲ್ಲಂದರಲ್ಲಿ ಬಿದ್ದಿದ್ದಾವೇ, ಸ್ವಚ್ಛತೆಯೇ ಮರೀಚಿಕೆಯಾಗಿದೆ. ಇಲ್ಲಿನ ಇಂದಿರಾ ಮೊಬೈಲ್ ಕ್ಯಾಂಟೀನ್ ದುಸ್ಥಿತಿಗೆ ತಲುಪಿದ್ದು ಹಿಗೆಯೇ ಜನರಿಗೆ ಊಟ-ತಿಂಡಿ ಪೂರೈಕೆ ಮಾಡಲಾಗ್ತಿದೆ. ಚಾಮರಾಜಪೇಟೆಯ ಹನುಮಂತನಗರದಲ್ಲಿ ಎರಡು ವರ್ಷದಿಂದ ಇಂದಿರಾ ಮೊಬೈಲ್​​ ಕ್ಯಾಂಟೀನ್​​ ನಿಂತಲ್ಲೇ ನಿಂತಿದೆ. ಗಾಡಿ ತುಕ್ಕು ಹಿಡಿದಿದ್ದು ಗುಜರಿಗೆ ಸೇರುವಂತಾಗಿದೆ.‌ ಶ್ರೀನಗರ ಬಸ್​ ನಿಲ್ದಾಣದಲ್ಲಿ ಸಾವಿರಾರು ಜನರಿಗೆ ಈ ಕ್ಯಾಂಟೀನ್ ಉಪಯೋಗವಾಗ್ತಿತ್ತು. ಕಳೆದ ಎರಡು ವರ್ಷದ ಹಿಂದೆ ಸ್ಥಗಿತಗೊಂಡಿದ್ದು ಬಡವರು ಊಟಕ್ಕೆ ಪರದಾಡುವಂತಾಗಿದೆ. ಬಿಬಿಎಂಪಿ ಅಧಿಕಾರಿಗಳ ಅಸಡ್ಡೆಯೇ ಇದ್ದಕ್ಕೆ ಕಾರಣ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.…

Read More