Subscribe to Updates
Get the latest creative news from FooBar about art, design and business.
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
- ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
- ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
- ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
- ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
Author: admin
ಗ್ರಾಮೀಣ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದೆ. ಇನ್ಮುಂದೆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗಳಲ್ಲೇ ಜನನ, ಮರಣ ಪ್ರಮಾಣಪತ್ರಗಳ ಡಿಜಿಟಲ್ ದಾಖಲೆಗಳು ಸಿಗಲಿವೆ. ಗ್ರಾಮೀಣ ಪ್ರದೇಶದ ಜನರಿಗೆ ಜನನ ಮತ್ತು ಮರಣ ನೋಂದಣಿಗಳನ್ನು ದಾಖಲಿಸುವ ಉದ್ದೇಶದಿಂದ ಗ್ರಾಮಪಂಚಾಯಿತಿಗಳಲ್ಲೇ ಜನನ ಮರಣ ಪತ್ರಗಳ ಡಿಜಿಟಲ್ ದಾಖಲೆಗಳನ್ನು ನೀಡಲು ನಿರ್ಧರಿಸಿದೆ. ಇ-̲ಜನ್ಮ ಪೋರ್ಟ್ಲ್ ನಲ್ಲಿಆಧಾರ್ ಕಾರ್ಡ್ ಮಾದರಿಯಲ್ಲಿಯೇ ಒಬ್ಬರಿಗೆ ಒಂದು ನಂಬರ್ ಸಿಗಲಿದ್ದು, ಮಗು ಹುಟ್ಟಿದ ತಕ್ಷಣ ಆ ಮಾಹಿತಿಯನ್ನು ಗ್ರಾಮ ಪಂಚಾಯತ್ ಗಳಿಗೆ ನೀಡಬೇಕು. ಗ್ರಾಮ ಪಂಚಾಯತ್ ಅಧಿಕಾರಿಗಳು ಇ-ಜನ್ಮ ಪೋರ್ಟ್ಲ್ ನಲ್ಲಿ ತಂದೆ, ತಾಯಿ ಹೆಸರು, ಆಧಾರ್, ಪಾನ್ ಕಾರ್ಡ್ ಸೇರಿ ಯಾವುದಾದರೊಂದು ದಾಖಲಾತಿ ನೀಡಿ ಅಪ್ಲೋಡ್ ಮಾಡುತ್ತಾರೆ. ನಂತರ ಸರ್ಟಿಫಿಕೇಟ್ ನೊಂದಿಗೆ ನಂಬರ್ ವೊಂದು ಜನರೇಟ್ ಆಗಲಿದ್ದು, ಈ ನಂಬರ್ ಪಡೆದು ಎಲ್ಲಿ ಬೇಕಾದರೂ ಆನ್ ಲೈನ್ ನಲ್ಲಿ ಮಾಹಿತಿ, ದಾಖಲೆ ಪಡೆದುಕೊಳ್ಳಬಹುದು. ನಮ್ಮತುಮಕೂರಿನ ಕ್ಷಣ…
ಲೋಕಸಭಾ ಚುನಾವಣೆ ಮುಗಿದು, ಬಿಜೆಪಿ ಗರ್ವಭಂಗವಡಗಿ ಎನ್ ಡಿ ಎ ಮೈತ್ರಿ ಕೂಟ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಹಾಗೂ 7 ಪ್ರಮಾಣವಚನ ಸ್ವೀಕಾರ ಮಾಡಿ, ಖಾತೆ ಹಂಚಿಕೆಯೂ ಮುಗಿದಿದೆ. ಆದರೀಗ ಉಳಿದಿರುವುದು ಸ್ಪೀಕರ್ ಹುದ್ದೆ ಮಾತ್ರ. ಹೀಗಾಗಿ ಲೋಕಸಭಾ ಸಭಾಧ್ಯಕ್ಷರು ಯಾರಾಗಬಹುದು ಎಂಬ ಕುತೂಹಲ ಕೆರಳಿದೆ. ಆದರೀಗ ಬಿಜೆಪಿ ಜಾಣ ಹೆಜ್ಜೆ ಇಟ್ಟಿದ್ಧು ಆಂಧ್ರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷೆ ಪುರಂದೇಶ್ವರಿಯನ್ನು ಈ ಸ್ಥಾನಕ್ಕೆ ಆಯ್ಕೆ ಮಾಡುವ ಮೂಲಕ ಒಂದು ಕಲ್ಲಲ್ಲಿ ಎರಡು ಹಕ್ಕಿಯನ್ನು ಹೊಡೆಯಲು ತೀರ್ಮಾನ ಮಾಡಿದೆ ಎನ್ನಲಾಗಿದೆ. ಲೋಕಸಭೆಯ ಸ್ಪೀಕರ್ ಹುದ್ದೆಯನ್ನು NDA ಮಿತ್ರ ಪಕ್ಷಗಳು ತಮಗೆ ಬೇಕೆಂದು ಬೇಡಿಕೆ ಇಟ್ಟಿದ್ದವು. ಆದರೆ ಬಿಜೆಪಿ ಮಾತ್ರ ತನ್ನಲ್ಲೇ ಉಳಿಸಿಕೊಳ್ಳಲು ಭರ್ಜರಿ ಬಾಣ ಪ್ರಯೋಗಿಸಿದ್ದು, ಅದು ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಲೋಕಸಭೆಯ ನೂತನ ಸ್ಪೀಕರ್ ಹುದ್ದೆಯನ್ನು ಹಾಲಿ ರಾಜಮಂಡಿ ಕ್ಷೇತ್ರದ ಸಂಸದೆ ಮತ್ತು ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷೆ ಡಿ.…
ರಾಮ ದಶರಥ ಮಹಾರಾಜರಿಗೆ ಹುಟ್ಟಿಲ್ಲ, ಪುರೋಹಿತನೊಬ್ಬನಿಗೆ ಹುಟ್ಟಿರುವುದು. ಮಹಾಭಾರತದ ಪಾಂಡವ ಸಹೋದರರು ಹುಟ್ಟಿದ್ದು ದೇವತೆಗಳಿಂದ. ಈ ಮಾತಿಗೆ ನನ್ನ ಬಳಿ ಪುರಾವೆಗಳಿವೆ ಎಂದು ಸಾಹಿತಿ, ಪ್ರಗತಿಪರ ಚಿಂತಕ ಪ್ರೊ. ಕೆ.ಎಸ್. ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ಯಿಂದ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಪ್ರೊ.ಬಿ. ಕೃಷ್ಣಪ್ಪ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಈ ರೀತಿ ಹೇಳಿದ್ದಾರೆ ಎನ್ನಲಾಗಿದೆ. ರಾಮಾಯಣದ ರಾಮ ದಶರಥ ಮಹಾರಾಜರ ಮಗ ಎಂಬುದಷ್ಟೆ ತಿಳಿದ ವಿಷಯವಾದರೂ ರಾಮ ದಶರಥ ಮಹಾರಾಜರಿಂದ ಹುಟ್ಟಿಲ್ಲ, ಬದಲಾಗಿ ಪುರೋಹಿತನೊಬ್ಬನಿಂದ ಹುಟ್ಟಿದನು. ಅದೇ ರೀತಿ ಮಹಾಭಾರತದ ವಿಷಯಕ್ಕೆ ಬಂದರೆ, ಶಾಪಗ್ರಸ್ಥ ರಾಜ ಪಾಂಡು ಐವರು ಪಾಂಡವರ ತಂದೆ ಎಂದು ಹೇಳಲಾಗುತ್ತಿದ್ದರೂ ಪಾಂಡವರು ಹುಟ್ಟಿದ್ದು ಮಾತ್ರ ದೇವತೆಗಳಿಂದ ಎಂದು ಮಹಾಭಾರತದಲ್ಲೇ ಇದೆ’ ಎಂದಿದ್ದಾರೆ. ಪುರಾಣಗಳನ್ನು ಅಭ್ಯಾಸ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಈ ಪುರಾಣಗಳು ಹಾಗೂ ಮನುಸ್ಮೃತಿಯಲ್ಲಿ ಬ್ರಾಹ್ಮಣರನ್ನು ಬಿಟ್ಟು ಉಳಿದೆಲ್ಲ ಜಾತಿ, ಜನಾಂಗದವರನ್ನು ಶೂದ್ರರೆಂದು ಕರೆದಿವೆ. ಶೂದ್ರರೆಲ್ಲಾ…
ಸ್ಯಾಂಡಲ್ವುಡ್ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇಂದು ಬೆಳಗ್ಗೆ ಮೈಸೂರಿನ ತೋಟದ ಮನೆಯಿಂದ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ದರ್ಶನ್ ಅವರನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆ ತರಲಾಗುತ್ತಿದೆ. ಕೊಲೆ ಆರೋಪದಡಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸರು ದರ್ಶನ್‌ರನ್ನ ವಶಕ್ಕೆ ಪಡೆದಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆದ ಘಟನೆಗೆ ಸಂಬಂಧಿಸಿದಂತೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎಂದು ಹೇಳಲಾಗಿದೆ.ದರ್ಶನ್ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಭಾಗಿಯಾಗಿದ್ದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ ಮಾಡಿ, ಕಾಮಾಕ್ಷಿ ಪಾಳ್ಯದಲ್ಲಿ ಮೃತದೇಹವನ್ನು ಎಸೆದಿದ್ದರು ಎಂದು ಆರೋಪವಿದೆ. ಕೆಲವೇ ಕ್ಷಣಗಳಲ್ಲಿ ದರ್ಶನ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ನಂತರ ಅವರನ್ನು ನ್ಯಾಯಾಧೀಶರ…
ಐದು ತಿಂಗಳ ಹಸುಗೂಸನ್ನು ತುರ್ತಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅನ್ನು ತಡೆದು ಚಾಲಕನ ಮೇಲೆ ಹಲ್ಲೆ ಮಾಡಿದ ಮೂವರು ಪುಂಡರನ್ನು ಅರೆಸ್ಟ್ ಮಾಡಲಾಗಿದೆ. ನೆಲಮಂಗಲ ಪೊಲೀಸರು ಬಂಧಿಸಿದ್ದಾರೆಂದು ವರದಿಯಾಗಿದೆ. ಬಂಧಿತರನ್ನು ಮಂಜುನಾಥ, ಯುವರಾಜ, ಲಿಖಿತ್ ಎಂದು ಗುರುತಿಸಲಾಗಿದೆ. ಮನುಷ್ಯತ್ವ ಮೀರಿ ಪುಟ್ಟ ಮಗುವನ್ನು ತುರ್ತಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ದುಷ್ಟರು ತಿಪಟೂರು ಬಳಿ ದಾಳಿ ನಡೆಸಿದ್ದರು. ಘಟನೆ ನಡೆದು ಕೆಲವು ಗಂಟೆಗಳಾಗಿದ್ದರೂ ಪೊಲೀಸರು ಆರೋಪಿಗಳನ್ನು ಬಂಧಿಸಿರಲಿಲ್ಲ. ಆದರೆ ರಾಜ್ಯವ್ಯಾಪ್ತಿ ಆಂಬ್ಯುಲೆನ್ಸ್ ಚಾಲಕರ ಪ್ರತಿಭಟನೆ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಐದು ತಿಂಗಳ ನವಜಾತ ಶಿಶುವೊಂದು ಅನಾರೋಗ್ಯಕ್ಕೆ ಈಡಾಗಿತ್ತು. ತುರ್ತಾಗಿ ಮಗುವನ್ನು ಆಸ್ಪತ್ರೆಗೆ ದಾಖಲಿಸಲು ಆಂಬ್ಯುಲೆನ್ಸ್ ಮೂಲಕ ಕರೆದುಕೊಂಡು ಹೋಗಲಾಗುತ್ತಿತ್ತು. ಈ ಸಂದರ್ಭದಲ್ಲಿ ರಸ್ತೆಯಲ್ಲಿ ಕಾರೊಂದು ಅಡ್ಡ ಬಂದಿದೆ. ಸೈಡ್ ಕೊಡಿ ಎಂದು ಆಂಬ್ಯುಲೆನ್ಸ್ ಚಾಲಕ ಕೇಳಿಕೊಂಡಿದ್ದಾರೆ. ಇಷ್ಟಕ್ಕೆ ಸಿಟ್ಟಾದ ಕಾರಿನಲ್ಲಿದ್ದವರು ಆಂಬ್ಯುಲೆನ್ಸ್ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಮಾತ್ರವಲ್ಲ ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಹಿಂದೆ ಇದ್ದ ಅನಾರೋಗ್ಯ ಪೀಡಿತ ಮಗುವಿನ…
ರಾಜ್ಯ ಸಾರಿಗೆ ನಿಗಮದ ಬಸ್‌ಗಳಲ್ಲಿ ಹಲವು ಹೊಸ ಪ್ರಯೋಗಗಳು ನಡೆಯುತ್ತಲೆ ಇವೆ. ಬಸ್‌ನಲ್ಲಿ ಪಾಸ್ ಗಳ ಜೊತೆಗೆ ಹೊಸ ಆಪ್ ಮೂಲಕ ಪಾಸ್ ನವೀಕರಿಸಿಕೊಳ್ಳಬಹುದು. ಈ ಮೂಲಕ ಟಿಕೆಟ್ , ಪಾಸ್ ಕಳೆದು ಹೋದ ಭಯವಿರುವುದಿಲ್ಲ. ಈಗ ಕೆಎಸ್ ಆರ್ ಟಿಸಿ ತನ್ನ ಪ್ರಯಾಣಿಕರಿಗೆ ಹೊಸ ಅಪ್ ಡೇಟ್ ನೀಡಿದೆ. ಎಲ್ಲೆಡೆ ಯುಪಿಎ ಬಳಕೆ ಹೆಚ್ಚಾಗಿದೆ. ಇದನ್ನು ಮನಗಂಡ ಕೆಎಸ್‌ಆರ್‌ಟಿಸಿ ಕೂಡ ಬಸ್ ಗಳಲ್ಲಿ ಟಿಕೆಟ್ ಕೊಳ್ಳಲು ಯುಪಿಎ ಪಾವತಿಗೆ ಅವಕಾಶ ಮಾಡಿಕೊಡಲಿದೆ. ಈ ಜೂನ್ 25 ರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ ಆರ್ ಟಿಸಿ) ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಯುಪಿಐ, ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳ ಮೂಲಕ ಪಾವತಿಸಬಹುದು. ಹಣವನ್ನು ತೆಗೆದುಕೊಂಡು ಹೋಗುವ ಬಗ್ಗೆ ಚಿಂತಿಸಬೇಕಾಗಿಲ್ಲ. ಕೆಎಸ್ ಆರ್ ಟಿಸಿ ಜೂನ್ 25 ರಿಂದ ನಾಲ್ಕು ಡಿಪೋಗಳಲ್ಲಿ ಎಲೆಕ್ಟ್ರಾನಿಕ್ ಟಿಕೆಟಿಂಗ್ ಯಂತ್ರಗಳ (ಇಟಿಎಂ) ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸಲಿದೆ. ಎಲ್ಲಾ ಕಂಡಕ್ಟರ್‌ಗಳಿಗೆ ತರಬೇತಿ ನೀಡಿದ ನಂತರ…
ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಸೋಲು ಕಂಡಿದ್ದರು. ಇದೇ ಸಂದರ್ಭದಲ್ಲಿ ಮಾತನಾಡಿದ ಗೀತಾ ಶಿವರಾಜ್ ಕುಮಾರ್, ಚುನಾವಣೆ ಎಂದ ಮೇಲೆ ಯಾರಾದರೂ ಸೋಲಬೇಕು, ಯಾರಾದರೂ ಗೆಲ್ಲಬೇಕು. ಹಿಂದೆ ಇಲ್ಲಿ ಕಾಂಗ್ರೆಸ್ ಹಿಂದಿಗಿಂತಲೂ ಹೆಚ್ಚು ಮತ ಬಂದಿವೆ. 5 ಲಕ್ಷಕ್ಕೂ ಹೆಚ್ಚು ಮತಗಳು ನನಗೆ ಸಿಕ್ಕಿವೆ. ಹಿಂದೆ ನನ್ನ ತಂದೆಯೂ ಸೋತಿದ್ದರು. ನಾನೂ ಗೆಲ್ಲುತ್ತೇನೆ ಅಂದುಕೊಂಡಿದ್ದೆ. ಈ ಬಾರೀ ಸಾಧ್ಯವಾಗಿಲ್ಲ ಎಂದರು. ಚುನಾವಣೆ ಬಳಿಕ ಮಾತ್ರವಲ್ಲ, ಯಾವಾಗಲೂ ಶಿವಮೊಗ್ಗ ಜನತೆಗೆ ಇರುತ್ತೇನೆ. ಶಿವಮೊಗ್ಗ ಬಿಟ್ಟು ಹೋಗುವ ಪ್ರಶ್ನೆ ಇಲ್ಲ, ಇಲ್ಲೇ ಇರುತ್ತೇನೆ. ಶಕ್ತಿಧಾಮ ಮಾದರಿ ಇಲ್ಲೊಂದು ಶುರು ಮಾಡುತ್ತೇವೆ, ಮನೆ ಕೂಡ ಮಾಡುತ್ತೇವೆ. ನಮಗೆ ಸರ್ಕಾರದ ಬೆಂಬಲವೂ ಇದೆ. ಟಾಟಾ ಬಾಯ್ ಬಾಯ್ ಹೇಳೋದೆಲ್ಲಾ ಸುಳ್ಳು, ನಿಮ್ಮೊಂದಿಗೆ ಇರಲಿದ್ದೇನೆ. ಇನ್ನೂ ಸಾಕಷ್ಟು ವಿಚಾರಗಳಿವೆ. ಆದರೆ ಅದನ್ನು ಇನ್ನೊಮ್ಮೆ ಬಹಿರಂಗಪಡಿಸುತ್ತೇನೆ ಎಂದು ಹೇಳಿದರು. ಹಿಂದಿನ ಚುನಾವಣೆಗಳಿಗಿಂತ ಈ ಬಾರಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ದೊಡ್ಡ ಮತಗಳು ಬಂದಿವೆ. ಕೊನೆಯವರೆಗೂ ಕ್ಷೇತ್ರದ…
ಯುವ ರಾಜಕುಮಾರ್ ಅವರ ವಿಚ್ಚೇದನ ವಿಚಾರ ಇದೀಗ ದೊಡ್ಡ ಸುದ್ದಿಯಾಗುತ್ತಿದೆ. ನಟ ರಾಘವೇಂದ್ರ ರಾಜ್ ಕುಮಾರ್ ಪುತ್ರ ನಟ ಯುವ ಮತ್ತು ಪತ್ನಿ ಶ್ರೀದೇವಿ ಅವರು ವಿಚ್ಚೇದನಕ್ಕೆ ಅರ್ಜಿ ಹಾಕಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಸುದ್ದಿಗಾರರು ಶಿವಮೊಗ್ಗದಲ್ಲಿ ನಟ ಶಿವರಾಜ್ ಕುಮಾರ್ ಅವರನ್ನು ಕೇಳಿದಾಗ, ನಟ ಯುವ ವಿಚ್ಛೇದನ ವಿಚಾರದ ಬಗ್ಗೆ ಗೊತ್ತಿಲ್ಲ, ಸತ್ಯವಾಗಿಯೂ ಗೊತ್ತಿಲ್ಲ ಎಂದರು. ‘ಯುವ ಡಿವೋರ್ಸ್ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಹಾಗಾಗಿ, ಮಾಹಿತಿ ಇಲ್ಲದೇ ಮಾತನಾಡೋದು ಸರಿಯಿಲ್ಲ. ಈ ಬಗ್ಗೆ ಮೊಬೈಲ್ನಲ್ಲಿ ನೋಡಿ ತಿಳಿದುಕೊಂಡೆ. ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ಬೇಜಾರಾಗುತ್ತದೆ’ ಎಂದು ಶಿವರಾಜ್ಕುಮಾರ್ ಅವರು ಹೇಳಿದ್ದಾರೆ. ಗೀತಾ ಶಿವರಾಜ್ ಕುಮಾರ್ ಅವರು ಮಾತನಾಡಿ, ಇದು ನಮ್ಮ ಮನೆಯ ವಿಚಾರ. ಇಲ್ಲಿವರೆಗೂ ಅದರ ಬಗ್ಗೆ ಗೊತ್ತಿಲ್ಲ. ಅದರ ಬಗ್ಗೆ ವಿಚಾರ ಮಾಡುತ್ತೇವೆ. ಈ ವಿಚಾರದಲ್ಲಿ ನಾವು ಇಬ್ಬರು ಮಾತಾನಾಡಬಾರದು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಬೆಂಗಳೂರು: ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಾಂಕ ಜಾರಕಿಹೊಳಿ ಅವರನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸದಲ್ಲಿ ಅಭಿನಂದಿಸಿದರು. ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ಶಾಸಕರಾದ ಅಶೋಕ್ ಪಟ್ಟಣ, ಬಾಬಾಸಾಬ್ ಪಾಟೀಲ್, ಆಸೀಫ್ ಸೇಠ್, ಚನ್ನರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್ ನಾವಲಗಟ್ಟಿ ಮತ್ತಿತರರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಜಬಲ್ ಪುರದ ಹಿನೊಟಾ ಗ್ರಾಮವು ವಿಶ್ವದಲ್ಲೇ ಅತ್ಯಂತ ದುಬಾರಿ ಮಾವಿನ ಹಣ್ಣಿನ ತೋಟಗಳನ್ನು ಹೊಂದಿದೆ. ದೇಶದ ಹಲವು ರಾಜ್ಯಗಳಲ್ಲಿ ಮಾವು ಬೆಳೆಯಲಾಗುತ್ತದೆ. ಆದರೆ ಜಬಲ್ಪುರದಿಂದ 25 ಕಿ.ಮೀ. ದೂರದಲ್ಲಿರುವ ಚಾರ್ಗ್ವಾನ್ ರಸ್ತೆಯಲ್ಲಿರುವ ಹಿನೋಟಾ ಗ್ರಾಮದಲ್ಲಿ ಮಹಾಕಾಲ್ ಹೈಬ್ರಿಡ್ ಮಾವಿನ ತೋಟಗಳಿವೆ. ಈ ಹಣ್ಣುಗಳನ್ನು ವಿದೇಶಗಳಲ್ಲಿ ಮಾರಾಟ ಮಾಡಿ ಲಕ್ಷಗಟ್ಟಲೆ ಆದಾಯ ಗಳಿಸುತ್ತಾರೆ. ಮಿಯಾಜಾಕಿ ಮಾವಿನ ಹಣ್ಣು ದುಬಾರಿಯಾಗಿರುವುದರಿಂದ ಕಳ್ಳತನ ಹೆಚ್ಚಾಗಿದೆ. ಈಗ ಸಿಸಿ ಕ್ಯಾಮೆರಾಗಳ ಜತೆಗೆ ನೈಟ್ ವಿಷನ್ ಕ್ಯಾಮೆರಾಗಳನ್ನು ಅಳವಡಿಸುತ್ತಿದ್ದಾರೆ. ರಾತ್ರಿ ವೇಳೆ ಭದ್ರೆತೆಗಾಗಿ ನಾಯಿಗಳನ್ನು ಸಹ ತೋಟದಲ್ಲಿ ಬಿಡಲಾಗುತ್ತಿದೆ. ಒಂದು ವೇಳೆ ರಾತ್ರಿ ಕಳ್ಳರು ತೋಟಕ್ಕೆ ನುಗ್ಗಲು ಪ್ರಯತ್ನಿಸಿದರೆ, ಈ ನಾಯಿಗಳು ಕಳ್ಳರ ಮೇಲೆ ದಾಳಿ ಮಾಡುತ್ತವೆ. ವಿಶ್ವದ ಅತ್ಯಂತ ದುಬಾರಿ ಮಾವಿನ ತಳಿಯನ್ನು ಜಪಾನ್ನ ಮಿಯಾಜಾಕಿಯಲ್ಲಿ ಬೆಳೆಯಲಾಗುತ್ತದೆ. ಹೀಗಾಗಿ ಇದಕ್ಕೆ ಮಿಯಾಜಾಕಿ ಮಾವಿನ ಹಣ್ಣು ಎಂದು ಹೆಸರಿಡಲಾಗಿದೆ. ತನ್ನ ವಿಶಿಷ್ಟವಾದ ರುಚಿ, ಕೆನೆ ವಿನ್ಯಾಸ ಮತ್ತು ಗಾಢ ಬಣ್ಣಕ್ಕೆ ಹೆಸರುವಾಸಿಯಾಗಿರುವ ಮಿಯಾಜಾಕಿ ಮಾವಿನ ಹಣ್ಣುಗಳು ತುಂಬಾ ಅಪರೂಪವಾಗಿದ್ದು,…