Subscribe to Updates
Get the latest creative news from FooBar about art, design and business.
- ಡಿ.29ರಿಂದ ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ: ಏನೇನು ಕಾರ್ಯಕ್ರಮಗಳು ಇರಲಿವೆ?
- ತುರುವೇಕೆರೆ: ಡಿ.30: ಸಂಪಿಗೆಯಲ್ಲಿ ವೈಕುಂಠ ಏಕಾದಶಿ ಮಹೋತ್ಸವ
- ಕುಣಿಗಲ್: ಡಿ.29ರಿಂದ ವೆಂಕಟರಮಣ ಸ್ವಾಮಿ ಪೂಜೋತ್ಸವ
- ತುರುವೇಕೆರೆ: ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ತೀರ್ಮಾನ
- ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ
- ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ
- ಸರಗೂರು: SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ
- ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು: ಲಕ್ಷಾಂತರ ಬೆಲೆಬಾಳುವ ರಾಗಿ, ಜೋಳ ಆನೆಗೆ ಆಹಾರ: ರೈತರು ಕಂಗಾಲು
Author: admin
ಸರಗೂರು: 2025– 26 ನೇ ಸಾಲಿನ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಲಯನ್ಸ್ ಅಕಾಡೆಮಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಅತಿ ಹೆಚ್ಚು ಬಹುಮಾನಗಳನ್ನು ಪಡೆದುಕೊಂಡಿದ್ದೇವೆ ಎಂದು ಬುಧವಾರ ಶಾಲೆಯ ಮುಖ್ಯ ಶಿಕ್ಷಕ ಬಿ.ಡಿ.ದಾಸಚಾರಿ ತಿಳಿಸಿದರು. ಅಥ್ಲೆಟಿಕ್ಸ್ ವಿಭಾಗದಲ್ಲಿ ಬಾಲಕರ 100 ಮೀಟರ್ ಓಟ ಪ್ರಥಮ, 200 ಮೀಟರ್ ಓಟ ತೃತೀಯ, 800 ಮೀಟರ್ ಓಟ ತೃತೀಯ, 3000 ಮೀಟರ್ ಓಟ ತೃತೀಯ, 4*10 ರಿಲೇ ಪ್ರಥಮ, 4*400 ಮೀಟರ್ ರಿಲೇ ದ್ವಿತೀಯ, ಜಾವೆಲಿನ್ ತೃತೀಯ, ಎತ್ತರ ಜಿಗಿತ ಪ್ರಥಮ, ಉದ್ದ ಜಗಿತ ಪ್ರಥಮ, ಬಾಲಕಿಯರ ವಿಭಾಗದಲ್ಲಿ 4* 400 ಮೀಟರ್ ರಿಲೇ ದ್ವಿತೀಯ, ಎತ್ತರ ಜಿಗಿತ ಪ್ರಥಮ, ಉದ್ದ ಜಿಗಿತ ತೃತೀಯ, ಗುಂಡು ಎಸೆತ ಪ್ರಥಮ, ಜಾವೆಲಿನ್ ಪ್ರಥಮ, ತಟ್ಟೆ ಎಸೆತ ತೃತೀಯ, ಗುಂಪು ಆಟಗಳಲ್ಲಿ ಹುಡುಗರ ಬಾಲ್ ಬ್ಯಾಡ್ಮಿಂಟನ್ ಪ್ರಥಮ, ಹುಡುಗಿಯರ ಬಾಲ್ ಬ್ಯಾಡ್ಮಿಂಟನ್ ಪ್ರಥಮ, ಬಾಲಕಿಯರ ಕಬಡ್ಡಿ ಪ್ರಥಮ, ಬಾಲಕಿಯರ ತ್ರೋಬಾಲ್ ದ್ವಿತೀಯ, ಬಾಲಕಿಯರ ವಾಲಿಬಾಲ್ ದ್ವಿತೀಯ ಹಾಗೂ ಪತಸಂಚಲನದಲ್ಲಿ…
ಮಧುಗಿರಿ: ನ್ಯಾಯಾಲಯದಲ್ಲಿರುವ ಸಾರ್ವಜನಿಕರ ಹಲವಾರು ಪ್ರಕರಣಗಳಿಗೆ ರಾಜಿ ಪಂಚಾಯ್ತಿ ಮೂಲಕ ತೆರೆ ಎಳೆಯಲು ನ್ಯಾಯಾಂಗ ಇಲಾಖೆ ಸಿದ್ಧವಿದ್ದು, ಇದೇ ಸೆ.13 ಕ್ಕೆ ಜಿಲ್ಲಾ ನ್ಯಾಯಾಲಯದಲ್ಲಿ ಲೋಕ್ ಅದಾಲತ್ ಕಾರ್ಯಕ್ರಮ ಏರ್ಪಡಿಸಿದ್ದು, ನೊಂದವರು ಯಾವುದೇ ಶುಲ್ಕವಿಲ್ಲದೆ ನಿಮ್ಮ ಸಮಸ್ಯೆಗೆ ನೇರವಾಗಿ ಅಥವಾ ವಕೀಲರ ಮೂಲಕವಾಗಲಿ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ಈ ಅವಕಾಶವನ್ನು ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳುವಂತೆ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ವೆಂಕಟಪ್ಪ ತಿಳಿಸಿದ್ದಾರೆ. ಪಟ್ಟಣದ ಹೊರವಲಯದಲ್ಲಿರುವ ನ್ಯಾಯಾಲಯ ಸಂಕೀರ್ಣದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನ್ಯಾಯಾಧೀಶರು, ಇದೇ ಮಧುಗಿರಿ ನ್ಯಾಯಾಲಯದಲ್ಲಿ ಸೆ.13 ಶನಿವಾರ ನಡೆಯಲಿರುವ ಲೋಕ್ ಆದಾಲತ್ ಸೇವೆಯನ್ನು ಸಾರ್ವಜನಿಕರು ಭಾಗಿಯಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು, 2007ರಲ್ಲಿ ಸರ್ಕಾರ ಸ್ಥಾಪಿಸಿರುವ ಖಾಯಂ ಜನತಾ ನ್ಯಾಯಾಲಯದಲ್ಲಿ ಸಾರ್ವಜನಿಕ ಉಪಯುಕ್ತ ಸೇವೆಗಳಿಗೆ ಸಂಬಂಧಿಸಿದಂತೆ ವಿವಾದಗಳನ್ನು ರಾಜಿ ಮತ್ತು ವಿಚಾರಣೆ ಮೂಲಕ ತೀರ್ಮಾನ ಮಾಡುವ ಅಧಿಕಾರವನ್ನು ಹೊಂದಿರುತ್ತದೆ. ಅದರಂತೆ ಸಾರಿಗೆ ಇಲಾಖೆಯಿಂದ ಬಂದಿರುವ ದಂಡ ಪಾವತಿ, ಅಂಚೆ ಇಲಾಖೆಯ ಸೇವೆಗಳು, ವಿದ್ಯುತ್, ಬೆಳಕು, ನೀರು ನೀಡುವ…
ತುರುವೇಕರೆ: ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷದ ಟೀಕೆ ಟಿಪ್ಪಣಿಗಳಿದ್ದರು ಗ್ಯಾರಂಟಿ ಯೋಜನೆಯಿಂದ ಲಕ್ಷಾಂತರ ಬಡಜನರಿಗೆ ಅನುಕೂಲವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಪಟ್ಟಣದ ತಾಲೂಕು ಕಚೇರಿ ಆಚರಣದಲ್ಲಿ ಜಿಲ್ಲಾಡಳಿತ ಹಾಗೂ ಪಟ್ಟಣ ಪಂಚಾಯತಿ ವತಿಯಿಂದ ನೂತನವಾಗಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೇಸ್ ಸರ್ಕಾರ ಬಡ ಜನತೆಯ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಬಡವ, ಶ್ರೀಮಂತ, ಜಾತಿ, ಧರ್ಮ ಹಾಗೂ ಪಕ್ಷ ರಹಿತವಾಗಿ ಗೃಹ ಲಕ್ಷ್ಮೀ ಹಣ 2 ಸಾವಿರ ಹಣ ನೀಡುತ್ತಿದ್ದೇವೆ. ಹಣ ಉಳ್ಳವರು ನಾವು ಕೇಳಿದ್ದೇವಾ ಎಂಬ ಮಾತು ಆಡಬಹುದು ಆದರೆ ಬಡ ಹೆಣ್ಣು ಮಕ್ಕಳಿಗೆ ಬಹಳ ಅನುಕೂಲವಾಗಿದೆ ಎಂದರು. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ 2003ರಲ್ಲಿ ಬಡ ಕೂಲಿ ಕಾರ್ಮಿಕರಿಗೆ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರು ನಗರದಲ್ಲಿ 5 ರೂ. ತಿಂಡಿ, 10 ರೂ ಊಟ ನೀಡುವಂತಹ ಇಂದಿರಾ ಕ್ಯಾಂಟೀನ್ ತೆರೆಯಲಾಯಿತು. ನಂತರ ಶಾಸಕರ ಒತ್ತಾಯದ ಮೇರೆಗೆ ಜಿಲ್ಲಾ…
ತುಮಕೂರು ಕೌಟುಂಬಿಕ ಹಿಂಸೆ, ಲೈಂಗಿಕ ಕಿರುಕುಳ, ಭಾವನಾತ್ಮಕ ಯಾತನೆಯಂತಹ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸಮಾಲೋಚನೆ, ಕಾನೂನು ನೆರವು ಮತ್ತು ಮಾರ್ಗದರ್ಶನ ನೀಡಲು ಜಿಲ್ಲಾಸ್ಪತ್ರೆಯ ಸಖಿ ಒನ್ ಸ್ಟಾಪ್ ಸೆಂಟರ್ ನಲ್ಲಿ ಮಹಿಳಾ ಸಹಾಯವಾಣಿ ಸಂಖ್ಯೆಯನ್ನು ಸ್ಥಾಪಿಸಲಾಗಿದೆ. ಮಹಿಳಾ ಸಹಾಯವಾಣಿ ಸಂಖ್ಯೆ 181 ದಿನದ 20 ಗಂಟೆಯೂ ಕಾರ್ಯನಿರ್ವಹಿಸಲಿದ್ದು, ದೌರ್ಜನ್ಯಕ್ಕೊಳಗಾದ ಮಹಿಳೆಯರು ಈ ಸಂಖ್ಯೆಗೆ ದೂರು ನೀಡಬಹುದಾಗಿದೆ. ಈ ಸಹಾಯವಾಣಿಯು ರಾಷ್ಟ್ರೀಯ ಮಹಿಳಾ ಆಯೋಗವು ಒದಗಿಸುವ ಒಂದು ಪ್ರಮುಖ ಸೇವೆಯಾಗಿದ್ದು, ವಿವಿಧ ಸವಾಲುಗಳನ್ನು ಎದುರಿಸುತ್ತಿರುವ ಮಹಿಳೆಯರಿಗೆ ಸಹಾಯ ಮತ್ತು ಬೆಂಬಲವನ್ನು ನೀಡಲಿದೆ. ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿರುವ ಮಹಿಳೆಯರನ್ನು ಪೊಲೀಸ್ ಸೇವೆ, ಒನ್ ಸ್ಟಾಪ್ ಸೆಂಟರ್, ಆಸ್ಪತ್ರೆ, ಕಾನೂನು ಸೇವೆಗಳ ಪ್ರಾಧಿಕಾರ ಮುಂತಾದ ಸೂಕ್ತ ಪಾಧಿಕಾರಗಳ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸುವುದರೊಂದಿಗೆ ದಿನದ 24 ಗಂಟೆಗಳೂ ತುರ್ತು ಮತ್ತು ತುರ್ತು ರಹಿತ ಪ್ರತಿಕ್ರಿಯೆಗಳನ್ನು ಒದಗಿಸುವ ಗುರಿಯನ್ನು ಈ ಮಹಿಳಾ ಸಹಾಯವಾಣಿ ಸಂಖ್ಯೆ ಹೊಂದಿದೆ. ಈ ಸಹಾಯವಾಣಿಯು ಮಹಿಳಾ ಕಲ್ಯಾಣದ ಯೋಜನೆ ಮತ್ತು ಕಾರ್ಯಕ್ರಮಗಳ ಬಗ್ಗೆಯೂ ಮಾಹಿತಿ…
ಮಂಗಳೂರು: ಮಂಗಳೂರಿನ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಯಿಂದಾಗಿ ನಿಯಂತ್ರಣ ಕಳೆದುಕೊಂಡು ದ್ವಿಚಕ್ರ ವಾಹನವೊಂದು ಉರುಳಿಬಿದ್ದಿದೆ. ಈ ದ್ವಿಚಕ್ರ ವಾಹನದಲ್ಲಿದ್ದ ಮಹಿಳೆಯೊಬ್ಬರು ಚಲಿಸುತ್ತಿದ್ದ ಲಾರಿಯ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಈ ಅಪಘಾತದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯ ಬೆನ್ನಲ್ಲೇ ಮಂಗಳೂರಿನಲ್ಲಿ ರಸ್ತೆ ಗುಂಡಿಗಳ ವಿರುದ್ಧ ಸಾರ್ವಜನಿಕರು ಸಿಡಿದೆದ್ದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದ್ವಿಚಕ್ರ ವಾಹನ ಓಡಿಸುತ್ತಿದ್ದ ಮಹಿಳೆಯೊಬ್ಬರು ರಸ್ತೆಯ ಗುಂಡಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ವಾಹನದೊಂದಿಗೆ ರಸ್ತೆಗೆ ಉರುಳಿ ಬಿದ್ದಿದ್ದು, ಈ ವೇಳೆಯಲ್ಲಿ ಲಾರಿಯೊಂದು ಮಹಿಳೆಯ ಮೇಲೆಯೇ ಹರಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ. ಸೆಪ್ಟೆಂಬರ್ 9ರ ಬೆಳಗ್ಗೆ 8–30ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಮೃತ ಪಟ್ಟ ಮಹಿಳೆಯನ್ನು ಮಾಧವಿ (44) ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಾಂತರಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಲಾರಿ ಚಾಲಕ ಮೊಹಮ್ಮದ್ ಫಾರೂಕ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಮದ್ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲ ಮುಸಲ್ಮಾನರ ಕಡೆಗೆ ಹೆಚ್ಚಾಗಿರುವುದರಿಂದ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ನಾಲಿಗೆ ಹರಿಯಬಿಟ್ಟಿದ್ದಾರೆ. ಪಟ್ಟಣದಲ್ಲಿ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ಅಂಗವಾಗಿ ಬುಧವಾರ ಏರ್ಪಡಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿದ ಅವರು, ಕರ್ನಾಟಕವನ್ನ ಇಟಲಿ ಸರ್ಕಾರ, ತಾಲಿಬಾನ್ ಸರ್ಕಾರ, ಮುಲ್ಲಾ ಸರ್ಕಾರ ಆಗಲು ಬಿಡಲ್ಲ ಎಂದ ಅವರು, ರಾಜ್ಯ ಸರ್ಕಾರ ಧರ್ಮಸ್ಥಳ ಮತ್ತು ಚಾಮುಂಡೇಶ್ವರಿ ದೇಗುಲಕ್ಕೆ ಕಳಂಕ ತರಲು ಯತ್ನಿಸಿತು. ಇದೀಗ ಗಣೇಶ ಉತ್ಸವದ ವೇಳೆ ದಾಳಿ ನಡೆಸಿದವರನ್ನು ರಕ್ಷಿಸಲು ಹೊರಟಿದೆ. ಮುಸ್ಲಿಮರ ಓಲೈಸುತ್ತಿರುವ, ಮುಸಲ್ಮಾನರಿಗೆ ಹೆಚ್ಚು ಬೆಂಬಲ ನೀಡುತ್ತಿರುವ ಸಿದ್ದರಾಮಯ್ಯ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕೆಂದು ಹೇಳಿದ್ದಾರೆ. ರಾಜ್ಯ ಸರ್ಕಾರ ಇದೀಗ ಡಿಜೆ ಬ್ಯಾನ್ ಮಾಡಿದ್ದಾರೆ, ಮುಂದೆ ಮಸೀದಿ ಎದುರು ಗಣೇಶ ಮೂರ್ತಿ ಮೆರವಣಿಗೆಯನ್ನೂ ಬ್ಯಾನ್ ಮಾಡಿ ಕೊನೆಗೆ ಗಣಪತಿ ಹಬ್ಬವನ್ನೇ ನಿಷೇಧಿಸುತ್ತಾರೆ. ಹಿಂದೂ ಸಂಘಟನೆಗಳ ಹೋರಾಟ ರಾಷ್ಟ್ರಮಟ್ಟದಲ್ಲಿ ಗಮನಸೆಳೆಯುತ್ತಿದೆ. ಇದಕ್ಕೇ ಮಂಡ್ಯ ಅಂದ್ರೆ ಇಂಡಿಯಾ ಅನ್ನೋದು ಎಂದರು. ಮದ್ದೂರು ಜನರು…
ಸರಗೂರು: ಸುನೀಲ್ ಬೋಸ್ ಅಭಿಮಾನಿಗಳ ಬಳಗದ ನೂತನ ಅಧ್ಯಕ್ಷರಾಗಿ ದೇವಲಾಪುರ ಸಿದ್ದರಾಜುರನ್ನು ಹಿರಿಯರ ಮುಖಂಡರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು. ತಾಲೂಕಿನ ಸಮೀಪದ ಹ್ಯಾಂಡ್ ಪೋಸ್ಟ್ ನ ಮೈರಾಡ ಪಾನ್ ಸಭಾಂಗಣದಲ್ಲಿ ಬುಧವಾರದಂದು ನಡೆದ ಸಂಸದ ಸುನೀಲ್ ಬೋಸ್ ಅಭಿಮಾನಿಗಳ ಬಳಗದ ಅಧ್ಯಕ್ಷರ ಆಯ್ಕೆ ಬಗ್ಗೆ ಹಾಗೂ ಬಲಗೈ ಸಮಾಜದ ಕುಂದುಕೊರತೆಗಳ ಪೂರ್ವಭಾವಿ ಸಭೆಯನ್ನು ಹಮ್ಮಿಕೊಂಡು ಸಮಾಜದ ಹಿರಿಯರ ಸಮ್ಮುಖದಲ್ಲಿ ಸಂಸದ ಸುನೀಲ್ ಬೋಸ್ ಅಭಿಮಾನಿಗಳ ಬಳಗದ ನೂತನ ಅಧ್ಯಕ್ಷರಾಗಿ ದೇವಲಾಪುರ ಸಿದ್ದರಾಜು ಅವರನ್ನು ಆಯ್ಕೆ ಮಾಡಲಾಯಿತು . ನಂತರ ಮಾತನಾಡಿದ ನೂತನ ಅಧ್ಯಕ್ಷ ದೇವಲಾಪುರ ಸಿದ್ದರಾಜು, ತಾಲೂಕಿನ ಜನತೆ ಸಮಾಜ ಕಲ್ಯಾಣ ಹಾಗೂ ಮೈಸೂರು ಉಸ್ತುವಾರಿ ಸಚಿವ ಡಾ.ಎಸ್.ಸಿ.ಮಹದೇವಪ್ಪ ಮತ್ತು ಶಾಸಕ ಅನಿಲ್ ಚಿಕ್ಕಮಾದು ಹಾಗೂ ಸಂಸದ ಸುನೀಲ್ ಬೋಸ್ ರವರ ಮಾರ್ಗದರ್ಶನದಲ್ಲಿ ಈ ಬಳಗವನ್ನು ಮುನ್ನಡೆಸಿಕೊಂಡು ಹೋಗುತ್ತೇನೆ. ಎಲ್ಲಾ ಸಮಾಜ ಅಭಿವೃದ್ಧಿ ಕೆಲಸ ಹೆಚ್ಚಿನ ಆದ್ಯತೆ ನೀಡಿ ಇವರ ಮಾರ್ಗದರ್ಶನದಲ್ಲಿ ಸರ್ಕಾರದಿಂದ ಬರುವ ಸೌಲಭ್ಯವನ್ನು ಸಾರ್ವಜನಿಕರಿಗೆ ತಲುಪುವ ನಿಟ್ಟಿನಲ್ಲಿ ಕೆಲಸ…
ಔರಾದ: ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಗಾಯತ್ರಿದೇವಿ ಅವರು ಉತ್ತಮ ಸೇವೆ ಸಲ್ಲಿಸುತ್ತಿದ್ದು, ಅವರ ವಿರುದ್ಧ ಕೆಲವರು ವಿನಾಕಾರಣ ಸುಳ್ಳು ಆರೋಪ ಮಾಡುತ್ತಿರುವುದನ್ನು ರಾಜ್ಯ ಆದಿಜಾಂಬವ ಸಂಘದ ತಾಲೂಕು ಘಟಕ ಅಧ್ಯಕ್ಷರಾದ ಸುಂದರರಾಜ್ ಎಸ್. ಮುದ್ದಾಳೆ ಅವರು ಕಟುವಾಗಿ ಖಂಡಿಸಿದ್ದಾರೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡುರಾವ್ ಅವರಿಗೆ ತಹಶೀಲ್ದಾರ ಮುಖಾಂತರ ಸಲ್ಲಿಸಿದ ಮನವಿಯಲ್ಲಿ ಮಹಾರಾಷ್ಟ್ರ ಹಾಗೂ ತೆಲಂಗಣ ಹಿಂದುಳಿದ ಗಡಿ ಪ್ರದೇಶದ ಔರಾದ್ ತಾಲೂಕಿನಲ್ಲಿ ನಿರಂತರವಾಗಿ ಜನರಿಗೆ ಉತ್ತಮ ಆರೋಗ್ಯ ಸೇವೆಯನ್ನು ನೀಡುವ ಮೂಲಕ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಗಾಯತ್ರಿದೇವಿ ಅವರು ಈ ಭಾಗದಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆ ಮಾದರಿಯಲ್ಲಿ ಮೇಲ್ದರ್ಜೆಗೆ ಏರಿಸಿ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಕಳೆದ 18 ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡ್ತಿದ್ದಾರೆ ಎಂದರು. ಇವರ ಸೇವೆಯನ್ನು ಗುರುತಿಸುವ ಮೂಲಕ ಕಳೇದ ತಿಂಗಳಷ್ಟೇ ಪ್ರತಿಷ್ಠಿತ ‘ಕನ್ನಡಪ್ರಭ’ ಹಾಗೂ ಸುವರ್ಣನ್ಯೂಸ್ ಸುದ್ದಿ ಸಂಸ್ಥೆ ‘ಹೇಲ್ತ್ ಕೇರ್ ಎಕ್ಸಲೇನ್ಸ್’ ಅವಾರ್ಡ್ ನೀಡುವ ಮೂಲಕ…
ಕೊರಟಗೆರೆ : ಕೊರಟಗೆರೆ ಪಟ್ಟಣ ಪಂಚಾಯಿತಿ ಮತ್ತು ಶ್ರೀ ಸತ್ಯ ಗಣಪತಿ ಸೇವಾ ಮಂಡಳಿ ಸಹಯೋಗದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಕರ್ತವ್ಯ ನಿರ್ವಹಿಸಿದ ಕೊರಟಗೆರೆ ಪೊಲೀಸ್ ಠಾಣೆಯ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿಪಿಐ ಆರ್.ಪಿ.ಅನಿಲ್, ಯಾವುದೇ ಸಭೆ ಸಮಾರಂಭ ಮೆರವಣಿಗೆ ಕಾರ್ಯಕ್ರಮಗಳು ಯಶಸ್ವಿಯಾಗಲು ಪೊಲೀಸರೊಂದಿಗೆ ಸಾರ್ವಜನಿಕರ ಸಹಕಾರ ಅತಿಮುಖ್ಯವಾದುದು, ಸೆಷ್ಟೆಂಬರ್ 6ರಂದು ನಡೆದ ಗಣೇಶ ವಿಸರ್ಜನೆ ಮೆರವಣಿಗೆ ಶಾಂತಿಯಾಗಿ ಭಾವೈಕ್ಯತೆಯಿಂದ ಪೂರ್ಣಗೊಳಿಸಿದ್ದು ರಾಜ್ಯಕ್ಕೆ ಮಾದರಿಯಾಗಿದ್ದು, ಇದಕ್ಕೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿವರ್ಗದ ಶ್ರಮವು ಕಾರಣವಾಗಿದೆ ಎಂದರು. ಪ.ಪಂ.ಅನಿತಾ ಮಾತನಾಡಿ, ಗಣಪತಿ ಹಬ್ಬವನ್ನು ಎಲ್ಲರೂ ಜಾತಿ ಮತಭೇದವನ್ನು ಮರೆತು 11 ದಿನಗಳ ಕಾಲ ಆಚರಿಸಿದ್ದೇವೆ ಮೆರವಣಿಗೆಯು ಪಟ್ಟಣದಲ್ಲಿ ವೈವಿದ್ಯವಾಗಿ ನಡೆದಿದ್ದು, ಇದಕ್ಕೆ ಪಟ್ಟಣ ಪಂಚಾಯಿತಿಯ ಎಲ್ಲಾ ಸದಸ್ಯರು ಅಧಿಕಾರಿಗಳು ಸಿಬ್ಬಂದಿ ವರ್ಗದ ಸಹಕಾರ ಹಾಗೂ 11 ದಿನಗಳ ಸ್ವಚ್ಚತೆಯಲ್ಲಿ ನಮ್ಮ ಪೌರಕಾರ್ಮಿಕರ ಶ್ರಮ ಸಾಕಷ್ಟು ಇದೆ ಎಂದರು. ಪಿಎಸೈ ತೀರ್ಥೇಶ್ ಮಾತನಾಡಿ, 11 ದಿನಗಳ ಕಾಲ ಗಣಪತಿ ಮಹೋತ್ಸವ ಹಾಗೂ…
ಸರಗೂರು: ಸಾರ್ವಜನಿಕರು ಆಸ್ತಿಗಳ ಪೌತಿ ಖಾತೆಗಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸುವ ಸಲುವಾಗಿ ಪೌತಿ ಖಾತೆ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸರಗೂರು ಹೋಬಳಿ ರಾಜಸ್ವ ನಿರೀಕ್ಷಕ ರವಿಚಂದ್ರನ್ ತಿಳಿಸಿದರು. ತಾಲೂಕಿನ ಎಂ.ಸಿ.ತಳಲು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಪೌತೆ ಖಾತೆ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಪೌತಿ ಖಾತೆ ಆಂದೋಲನ ನಡೆಸುವ ಮೂಲಕ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತಾಲೂಕು ಆಡಳಿತ ಮುಂದಾಗಿದ್ದು, ಎಲ್ಲರೂ ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಖಾತಾ ತಂತ್ರಾಂಶದಿಂದ ಅತ್ಯಂತ ಕಡಿಮೆ ದಾಖಲೆ ಮೂಲಕ ಶೀಘ್ರವಾಗಿ ವಾರಸುದಾರರಿಗೆ ಪೌತಿ ಖಾತೆ ವರ್ಗಾವಣೆಯಾಗಲಿದೆ. ಜಮೀನು ಮಾಲೀಕ ಮರಣ ಹೊಂದಿದ್ದರೆ, ಜಮೀನಿನ ವಾರಸುದಾರರಾಗಿ ಕುಟುಂಬದ ಸದಸ್ಯರಿಗೆ ಹಕ್ಕು ಪಡೆಯಲು ಪೌತಿ ಖಾತೆ ಸಹಕಾರಿಯಾಗಿದೆ. ಸರಕಾರ ಈಗಾಗಲೇ ಸರಕಾರದ ಸೌಲಭ್ಯ ಪಡೆಯುವುದಕ್ಕಾಗಿ ಜಮೀನಿನ ಮಾಲೀಕರ ಪಹಣಿಗೆ ಆಧಾರ್ ಕಾರ್ಡ್‌ಗಳನ್ನು ಲಿಂಕ್ ಮಾಡಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಗ್ರಾಮ ಲೆಕ್ಕಿಗ ಪುರುಷೋತ್ತಮ್…