Subscribe to Updates
Get the latest creative news from FooBar about art, design and business.
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
- ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
- ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
- ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
- ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
Author: admin
ಇಂದು 3ನೇ ಬಾರಿಗೆ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಈ ಸಮಾರಂಭಕ್ಕೆ ನಾನು ಭಾಗಿಯಾಗುತ್ತಿಲ್ಲ ಎಂಬುದಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ರದಲ್ಲಿ ತಿಳಿಸಿದ್ದಾರೆ. ಯಾಕೆ ಗೊತ್ತೆ ? ಮೋದಿಗೆ ಪತ್ರ ಬರೆದಿರುವಂತ ದೇವೆಗೌಡರು, ಮೊದಲನೆಯದಾಗಿ, ಸತತ ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸ್ವೀಕರಿಸಿ ಎಂದಿದ್ದಾರೆ. ಇದು ನಿಜವಾಗಿಯೂ ಐತಿಹಾಸಿಕ ಸಂದರ್ಭ. ನಾನು ಈ ಹಿಂದೆ ಅನೇಕ ಬಾರಿ ಹೇಳಿದಂತೆ, ಇದು ನಿಮ್ಮ ಮೇಲೆ ಸರ್ವಶಕ್ತನ ಅಸಾಧಾರಣ ಆಶೀರ್ವಾದದ ಫಲಿತಾಂಶವಾಗಿದೆ. ನೀವು ಭಗವಂತನ ಆಶೀರ್ವಾದವನ್ನು ಪಡೆಯುವುದನ್ನು ಮುಂದುವರಿಸುತ್ತೀರಿ ಮತ್ತು ಒಂದು ದಶಕದಿಂದ ನಮಗೆಲ್ಲರಿಗೂ ಪರಿಚಿತವಾಗಿರುವ ಸಂಪೂರ್ಣ ಸಮರ್ಪಣೆಯೊಂದಿಗೆ ನಮ್ಮ ಮಹಾನ್ ರಾಷ್ಟ್ರದ ಸೇವೆಯನ್ನು ಮುಂದುವರಿಸುತ್ತೀರಿ ಎಂಬುದರಲ್ಲಿ ನನಗೆ ಯಾವುದೇ ಸಂದೇಹವಿಲ್ಲ ಎಂದಿದ್ದಾರೆ. ಚುನಾವಣೆಗಳು ಆಸಕ್ತಿದಾಯಕ ಫಲಿತಾಂಶಗಳನ್ನು ನೀಡಿವೆ. ಇದು ಭಾರತೀಯ ಪ್ರಜಾಪ್ರಭುತ್ವದ ಜೀವಂತಿಕೆಯನ್ನು ಸಾಬೀತುಪಡಿಸುತ್ತದೆ. ನೀವು ನಿಜವಾದ ಪ್ರಜಾಪ್ರಭುತ್ವವಾದಿ ಎಂದು ಇದು ಸಾಬೀತುಪಡಿಸಿದೆ. ನಮ್ಮ ಸಂಸ್ಥೆಗಳು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಗಳನ್ನು ಅಪಖ್ಯಾತಿಗೊಳಿಸಲು ಕಾಂಗ್ರೆಸ್…
ಬ್ರಾಂಡಿ ಮತ್ತು ವಿಸ್ಕಿಯ ನಡುವಿನ ವ್ಯತ್ಯಾಸವನ್ನ ತಿಳಿಯೋಣ.ಇವೆರಡರ ನಡುವಿನ ವ್ಯತ್ಯಾಸವೇನು.? ಇವೆರಡೂ ಬೇರೆ ಬೇರೆಯೇ.? ಎಂಬ ಸಂದೇಹಗಳೂ ಬರುತ್ತವೆ. ಬ್ರಾಂಡಿ ಮತ್ತು ವಿಸ್ಕಿ ಎರಡು ಜನಪ್ರಿಯ ಆಲ್ಕೊಹಾಲ್ಯುಕ್ತ ಪಾನೀಯಗಳಾಗಿವೆ. ಪ್ರಪಂಚದಾದ್ಯಂತ ಅನೇಕ ಜನರು ದಶಕಗಳಿಂದ ಬ್ರಾಂಡಿ ಮತ್ತು ವಿಸ್ಕಿಯನ್ನ ಕುಡಿಯುತ್ತಿದ್ದಾರೆ. ಎರಡು ಪಾನೀಯಗಳು ಕೆಲವು ಸಾಮ್ಯತೆಗಳನ್ನ ಹೊಂದಿದ್ದರೂ, ಅವುಗಳ ತಯಾರಿಕೆ, ವಿಷಯ ಮತ್ತು ರುಚಿಯ ಆಧಾರದ ಮೇಲೆ ಬ್ರಾಂಡಿ ಮತ್ತು ವಿಸ್ಕಿಯ ನಡುವೆ ಅನೇಕ ವ್ಯತ್ಯಾಸಗಳಿವೆ. ಬ್ರಾಂಡಿಯು ಹುದುಗಿಸಿದ ವೈನ್ ನಿಂದ ಬಟ್ಟಿ ಇಳಿಸಿದ ಸ್ಪಿರಿಟ್ ಆಗಿದೆ. ಆದ್ರೆ, ವಿಸ್ಕಿಯು ಗೋಧಿ, ಬಾರ್ಲಿ, ಕಾರ್ನ್ ಮತ್ತು ರೈಗಳಂತಹ ಬ್ರೂ ಮಾಡಿದ ಮಾಲ್ಟೆಡ್ ಧಾನ್ಯಗಳಿಂದ ಬಟ್ಟಿ ಇಳಿಸಿದ ಸ್ಪಿರಿಟ್ ಆಗಿದೆ. ಬ್ರಾಂಡಿ ದ್ರಾಕ್ಷಿಯಿಂದ ತಯಾರಿಸಿದ ಬಟ್ಟಿ ಇಳಿಸಿದ ಮದ್ಯವಾಗಿದೆ. ಸರಳವಾಗಿ ಹೇಳುವುದಾದರೆ, ಬ್ರಾಂಡಿ ಬಟ್ಟಿ ಇಳಿಸಿದ ವೈನ್. ಬ್ರಾಂಡಿ ಎಂಬ ಹೆಸರು ಡಚ್ ಪದ ‘ಬ್ರಾಂಡ್ವಿಜ್ನ್’ ನಿಂದ ಬಂದಿದೆ. ಇದರ ಅರ್ಥ ‘ಸುಟ್ಟ ವೈನ್’. ಬ್ರಾಂಡಿಯ ಆಲ್ಕೋಹಾಲ್ ಅಂಶವು ಸುಮಾರು 35-60% ಆಗಿದೆ.…
ನಮ್ಮ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ಜನರಿಗೇ ಇಷ್ಟವಾಗಿಲ್ಲ , ಅವುಗಳನ್ನು ಬಂದ್ ಮಾಡುವುದೇ ಒಳ್ಳೆಯದು ಎಂದು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ, ನಾಯಕ ಎಂ ಲಕ್ಷ್ಮಣ್ ಅವರು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಸೋತ ಬಳಿಕ ಮೊದಲ ಸಲ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ‘ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳ್ಳೆಯದು. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಬಿಜೆಪಿಗರು ಗ್ಯಾರಂಟಿ ವಿರುದ್ಧ ಮಾತಾಡ್ತಿದ್ರೂ ಜನ ಬೆಂಬಲಿಸಿದ್ದಾರೆ. ಹಾಗಾಗಿ ಜನರಿಗೆ ನಮ್ಮ ಗ್ಯಾರಂಟಿ ಇಷ್ಟ ಆಗಿಲ್ಲ ಅಂತಾನೇ ಅಲ್ವಾ? ಹೀಗಾಗಿ ಗ್ಯಾರಂಟಿ ಇಷ್ಟವಿಲ್ಲವೆಂದು ಫಲಿತಾಂಶ ಮೂಲಕ ತೋರಿಸಿದ್ದಾರೆ. ಆದ್ದರಿಂದ ಗ್ಯಾರಂಟಿ ಯೋಜನೆ ಬಗ್ಗೆ ಸಿಎಂ ಮರು ಪರಿಶೀಲನೆ ಮಾಡಿ ಅವುಗಳನ್ನು ಬಂದ್ ಮಾಡಬೇಕು ಎಂದು ಹೇಳಿಕೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ(Parliament election) ಕನಿಷ್ಠ 14 ಕ್ಷೇತ್ರಗಳಲ್ಲಿ ಗೆಲುವು ನಿರೀಕ್ಷಿಸಿದ್ದ ಹಾಗೂ ಗ್ಯಾರಂಟಿ ಯೋಜನೆಗಳನ್ನು ಜನ ಮೆಚ್ಚಿದ್ದರೆ ಈ ಸಂಖ್ಯೆ 20 ಮುಟ್ಟಬಹುದು ಎಂದು ಭಾವಿಸಿದ್ದ ಕಾಂಗ್ರೆಸ್ಸಿಗರಿಗೆ 9 ಕ್ಷೇತ್ರಗಳಲ್ಲಿ ಗೆದ್ದಿರುವುದು ಸಮಾಧಾನ…
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 9 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಳೆದು ಚುನಾವಣೆಯಲ್ಲಿ 1 ಸ್ಥಾನ ಗೆದ್ದಿದ್ದ ಕಾಂಗ್ರೆಸ್ ಇದೀಗ 9 ಸ್ಥಾನ ಗೆದ್ದು ಗೆಲುವಿನ ನಗೆ ಬೀರಿದೆ. ಆದರೆ ಈ ಬೆನ್ನಲ್ಲೇ ಬಳ್ಳಾರಿಯಲ್ಲಿ ಶ್ರೀರಾಮುಲು ವಿರುದ್ಧ ಜಯಭೇರಿ ಬಾರಿಸಿದ ಸಂಸದ ತುಕಾರಾಂ ಅವರು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ವಿಚಾರವೊಂದು ಸದ್ದು ಮಾಡುತ್ತಿದೆ. ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಸಾರ್ವಜನಿಕ ವಲಯದಲ್ಲಿ ಉತ್ತಮ ಅಭಿಪ್ರಾಯ ಮೂಡಿಸಿರುವ ತುಕಾರಾಂ ಅವರು ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮಾಜಿ ಸಚಿವ, ಬಿಜೆಪಿ ನಾಯಕ ಶ್ರೀರಾಮುಲು ಅವರನ್ನು ಹೀನಾಯವಾಗಿ ಸೋಲಿಸಿದ್ದಾರೆ. ಆದರೀಗ ನೂತನ ಸಂಸದರಾಗಿ ಆಯ್ಕೆಯಾಗಿರುವ ಇ ತುಕಾರಾಂ ಸಂಡೂರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಭೆಗೆ ಹೋಗುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರುಪಯೋಗದ ಆರೋಪದ ಮೇಲೆ ಸಿದ್ದರಾಮಯ್ಯ ಸಂಪುಟದಿಂದ ಬಿ ನಾಗೇಂದ್ರ(Nagendra)…
ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ, ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ಎದುರಾಗಿದೆ. ಯಾಕೆಂದರೆ 7 ನೇ ವೇತನ ಆಯೋಗ ಜಾರಿ ಕುರಿತು ಸರ್ಕಾರವು ಮಹತ್ವದ ಘೋಷಣೆ ಹೊರಡಿಸಿದೆ. ಏಳನೇ ವೇತನ ಆಯೋಗವನ್ನು ರಚಿಸುವುದಾಗಿ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ ಕೊನೆಗೂ ಈ ಸಂಬಂಧ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ಅಲ್ಲದೆ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಮತ್ತು ರಾಜ್ಯ ಸಂಘದ ಪದಾಧಿಕಾರಿಗಳು CM ಸಿದ್ದರಾಮಯ್ಯ ಮತ್ತು DCM ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ್ದು, 7ನೇ ವೇತನ ಆಯೋಗದ ವರದಿ ಅನುಷ್ಠಾನಗೊಳಿಸುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಮನವಿಯನ್ನು ಆಲಿಸಿದ ಸಿಎಂ ಮತ್ತು ಡಿಸಿಎಂ ಆದಷ್ಟು ಬೇಗನೇ 7ನೇ ವೇತನ ಆಯೋಗದ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ನಿಯೋಗಕ್ಕೆ ನೀಡಿದ್ದಾರೆ. ಅಂದಹಾಗೆ ಸರ್ಕಾರಿ ನೌಕಕರು ಲೋಕಸಭಾ ಚುನಾವಣೆಗೂ ಮೊದಲೇ 7 ನೇ ವೇತನ ಆಯೋಗದ ಜಾರಿ ಕುರಿತು ಸರ್ಕಾರಕ್ಕೆ ಅನೇಕ ಬಾರಿ ಮನವಿ ಮಾಡಿದ್ದು, ಸರ್ಕಾರದ ವಿರುದ್ಧ ಹಲವಾರು…
ಅತ್ಯಾಚಾರ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ ಆರೋಪದಡಿಯಲ್ಲಿ ಇದೀಗ ಪ್ರಜ್ವಲ್ ರೇವಣ್ಣ ಗರ್ಲ್‌ಫ್ರೆಂಡ್‌ಗೆ ಎಸ್ ಐಟಿ ನೋಟಿಸ್ ನೀಡಿದೆ. ಇಲ್ಲಿನ ವಿದ್ಯಮಾನಗಳ ಜೊತೆಗೆ, ವಿದೇಶದಲ್ಲಿರುವಾಗ ಸಹಾಯ ಮಾಡಿದ್ದಳು ಗರ್ಲ್‌ಫ್ರೆಂಡ್ ಎನ್ನಲಾಗಿದೆ. ಹೀಗಾಗಿ ಪ್ರಜ್ವಲ್ ಗರ್ಲ್‌ಫ್ರೆಂಡ್ ಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮುಂದಿನ ತನಿಖೆ ಹೇಗೆ ನಡೆಯಲಿದೆ ಎಂಬ ಕುತೂಹಲ ಹೆಚ್ಚಿದೆ. ಪ್ರಜ್ವಲ್ ಗೆ ಗರ್ಲ್‌ಫ್ರೆಂಡ್ ಹಣ ಸಹಾಯ ಮಾಡಿರುವುದು, ಆಶ್ರಯ ಕಲ್ಪಿಸಿರುವುದು ಈ ಕುರಿತ ಮಹತ್ವದ ಸಾಕ್ಷ್ಯ ದೊರಕಿರುವುದರಿಂದ ನೋಟಿಸ್ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ ಸಚಿವ ಹಸನ್ ಮುಶ್ರಿಫ್ ಅವರು ನೀಟ್ ಫಲಿತಾಂಶಗಳನ್ನು ಬಹಿರಂಗವಾಗಿ ಟೀಕಿಸಿದ್ದು, ಪರೀಕ್ಷೆಯ ನಡವಳಿಕೆಯಲ್ಲಿ ಸಂಭವನೀಯ ಅವ್ಯವಹಾರ ಆಗಿರುವುದಾಗಿ ಹೇಳಿದ್ದಾರೆ. ಪರೀಕ್ಷೆಯ ಫಲಿತಾಂಶವು ಮಹಾರಾಷ್ಟ್ರದ ವಿದ್ಯಾರ್ಥಿಗಳು ರಾಜ್ಯದೊಳಗಿನ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಎಂಬಿಬಿಎಸ್ ಕಾರ್ಯಕ್ರಮಗಳಿಗೆ ಪ್ರವೇಶ ಪಡೆಯುವ ಅವಕಾಶದಿಂದ ವಂಚಿತರಾಗುವಂತೆ ಮಾಡಿದೆ ಎಂದು ಅವರು ತೀವ್ರ ಕಳವಳ ವ್ಯಕ್ತಪಡಿಸಿದರು. ಮಹಾರಾಷ್ಟ್ರ ಸರ್ಕಾರವು ಬಹಿರಂಗವಾಗಿ ಇತ್ತೀಚಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಪರೀಕ್ಷೆಯ ಫಲಿತಾಂಶಗಳನ್ನು ತಕ್ಷಣವೇ ರದ್ದುಗೊಳಿಸುವಂತೆ ವಿನಂತಿಸಿದೆ. ನೀಟ್ ಪರೀಕ್ಷೆಯ ಫಲಿತಾಂಶವು ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಮಹಾ ಸರ್ಕಾರ ಆರೋಪಿಸಿದೆ. ಮೇ 5 ರಂದು ದೇಶದ 571 ನಗರಗಳ 4,750 ಕೇಂದ್ರಗಳಲ್ಲಿ ನಡೆದ NEET ಪರೀಕ್ಷೆಯ ವಿವಾದ ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದೆ. ದಾಖಲೆ ಸಂಖ್ಯೆಯ 67 ಅಭ್ಯರ್ಥಿಗಳು ಟಾಪರ್ ಆಗಿರೋದು ಮತ್ತು ಹರಿಯಾಣದ ಒಂದೇ ಪರೀಕ್ಷಾ ಕೇಂದ್ರದಿಂದ 6 ಜನರು ಟಾಪರ್ ಲಿಸ್ಟಿನಲ್ಲಿ ಇರೋದು ದೇಶದಾದ್ಯಂತ ಉನ್ನತ ಪರೀಕ್ಷೆಯ ನೈತಿಕತೆಯನ್ನು ಪ್ರಶ್ನೆ ಮಾಡಿದೆ.…
ಬೆಂಗಳೂರು: ನಕಲಿ ವೈದ್ಯಕೀಯ ವೃತ್ತಿಯನ್ನು ಬೇರುಸಮೇತ ಕಿತ್ತೊಗೆಯುವ ಉದ್ದೇಶದಿಂದ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‍ಗಳು ತಮ್ಮ ಕೆಪಿಎಂಇ(ಕರ್ನಾಟಕ ಪ್ರೈವೆಟ್ ಮೆಡಿಕಲ್ ಎಸ್ಟಾಬ್ಲಿಷ್ ಮೆಂಟ್ ಅಸೋಸಿಯೇಷನ್)ನ ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸಬೇಕು ಎಂದು ಆರೋಗ್ಯ ಇಲಾಖೆಯು ಆದೇಶ ಹೊರಡಿಸಿದೆ. ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು. ಖಾಸಗಿ ವೈದ್ಯಕೀಯ ಆಸ್ಪತ್ರೆಗಳು ಈ ನಿಯಮಗಳನ್ನು ಅನುಸರಿಸುವಲ್ಲಿ ವಿಫಲವಾದಲ್ಲಿ ಕೆಪಿಎಂಇ ತಿದ್ದುಪಡಿ ಕಾಯಿದೆ 2017ರ ಸೆಕ್ಷನ್ 19(5) ರ ಅನ್ವಯ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಲಾಗಿದೆ. ಆದೇಶದ ಪ್ರತಿಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ನಕಲಿ ಮತ್ತು ಅರ್ಹತೆ ಹೊಂದಿಲ್ಲದ ವೈದ್ಯರು ಸಮಾಜಕ್ಕೆ ಕಂಟಕರಾಗಿದ್ದು, ರೋಗಿಗಳ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ನಮ್ಮ ಸರಕಾರವು ರೋಗಿಗಳ ಸುರಕ್ಷತೆಗೆ ಮತ್ತು ಉತ್ತಮ ಆರೋಗ್ಯ ಸೇವೆ ಒದಗಿಸಲು ಬದ್ಧವಾಗಿದೆ ಎಂದಿದ್ದಾರೆ.…
ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ ದುಲ್ ಹಜ್ ತಿಂಗಳ ಪ್ರಥಮ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಜೂ.17ರಂದು ಬಕ್ರೀದ್(ಈದುಲ್ ಅಝ್‍ಹಾ) ಆಚರಿಸಲು ಅಮೀರೆ ಶರೀಅತ್ ಕರ್ನಾಟಕ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಚಂದ್ರ ದರ್ಶನ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮೋಡ ಕವಿದ ವಾತಾವರಣದಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಚಂದ್ರ ದರ್ಶನವಾಗಲಿಲ್ಲ. ಆದರೆ, ಪಾಂಡಿಚೇರಿ, ತಮಿಳುನಾಡಿನ ಪರಂಗಿಪೇಟೆ, ಗುಜರಾತ್ ನ ಲೂನವಾಡ, ನಡ್ಯಾಡ್, ಅಜ್ರಾಕ್‍ಪುರ್ ಮಂಗ್ರೋಲ್, ಕಚ್ ಸೇರಿದಂತೆ ಇನ್ನತರೆಡೆ ಚಂದ್ರ ದರ್ಶನವಾದ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜೂ.17ರಂದು ಈದುಲ್ ಅಝ್ ಹಾ ಆಚರಣೆಗೆ ನಿರ್ಧರಿಸಲಾಗಿದೆ ಎಂದು ಚಂದ್ರ ದರ್ಶನ ಸಮಿತಿಯ ಸದಸ್ಯ ಮೌಲಾನಾ ಮಕ್ಸೂದ್ ಇಮ್ರಾನ್ ರಶಾದಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ:…
ಮೈತ್ರಿ ಧರ್ಮವನ್ನು ಪಾಲಿಸಬೇಕಾದ ಅನಿವಾರ್ಯತೆಗೆ ಪ್ರಧಾನಿ ನರೇಂದ್ರ ಮೋದಿ ಸಿಲುಕಿರುವುದರಿಂದ, ಈ ಬಾರಿಯ ಸಂಪುಟದಲ್ಲಿ ಒಂದಕ್ಕಿಂತ ಹೆಚ್ಚು ಖಾತೆಗಳನ್ನು ಹೊಂದಿರುವ ಸಂಖ್ಯೆ ತೀರಾ ಕಡಿಮೆ ಇರಲಿವೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಸತತ ಮೂರನೇ ಬಾರಿಗೆ ಪ್ರಧಾನಿ ಹುದ್ದೆಯನ್ನು ಅಲಂಕರಿಸಲಿರುವ ನರೇಂದ್ರ ಮೋದಿಯವರ ಜತೆಗೆ 30 ಸಚಿವರು ಕೂಡಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಸಂಪುಟದಲ್ಲಿ ಒಟ್ಟು 78 ರಿಂದ 81 ಮಂದಿ ಇರಲಿದ್ದಾರೆ. ಮೋದಿಯವರು ಇಂದು ಗೃಹ, ರಕ್ಷಣೆ, ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳು ಸೇರಿದಂತೆ ಪ್ರಮುಖ ಖಾತೆಗಳ ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಿದ್ದಾರೆ. ಇವೆಲ್ಲವೂ ಬಿಜೆಪಿಯ ವಶದಲ್ಲೇ ಮುಂದುವರಿಯುವ ಸಾಧ್ಯತೆಗಳಿವೆ. ಪ್ರಮುಖ ಮೂಲಸೌಕರ್ಯ ಸಚಿವಾಲಯಗಳಾದ ಉಕ್ಕು, ನಾಗರಿಕ ವಿಮಾನಯಾನ ಮತ್ತು ಕಲ್ಲಿದ್ದಲು ಖಾತೆಗಳ ಸಚಿವರು ಕೂಡಾ ಸ್ಥಾನ ಪಡೆಯುವ ನಿರೀಕ್ಷೆ ಇದೆ. ಸಂಜೆ 7:15ರಿಂದ 8 ಗಂಟೆವರೆಗೆ ಸಮಾರಂಭ ನಡೆಯಲಿದ್ದು, ಬೆಳಿಗ್ಗೆಯಿಂದ ನೂತನ ಸಚಿವರಿಗೆ ದೂರವಾಣಿ ಮೂಲಕ ಕರೆ ನೀಡಲಾಗುತ್ತಿದೆ. 10 ವರ್ಷಗಳಲ್ಲಿ ಮೊದಲ ಬಾರಿಗೆ ಬಿಜೆಪಿ ಬಹುಮತ…