Subscribe to Updates
Get the latest creative news from FooBar about art, design and business.
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
- ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
- ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
- ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
- ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
Author: admin
ಲಕ್ನೋ: ಮುಸ್ಲಿಮರ ವಿರುದ್ಧ ಪ್ರಚೋದಿಸುವ ಉದ್ದೇಶದಿಂದ ಮುಸ್ಲಿಮರ ವೇಷ ಹಾಕಿ ಅಯೋಧ್ಯೆಯ ಹಿಂದೂಗಳನ್ನು ಟೀಕಿಸಿದ ಧೀರೇಂದ್ರ ರಾಘವ್ ಎಂಬಾತನನ್ನು ಬಂಧಿಸಲಾಗಿದೆ. ಸ್ಕಲ್ ಕ್ಯಾಪ್ ಧರಿಸಿದ ವ್ಯಕ್ತಿಯೊಬ್ಬ “ದೋಗ್ಲೆ” (ಎರಡು ಮುಖದವರು) ಹಿಂದೂಗಳನ್ನು ಉದ್ದೇಶಿಸಿ ಮಾತನಾಡುವ ವಿಡಿಯೊ ವೈರಲ್ ಆಗಿತ್ತು. ಮುಸ್ಲಿಂ ವ್ಯಕ್ತಿ ಎಂದು ಹೇಳಿಕೊಂಡ ಆತ, ಅಯೋಧ್ಯೆಯ ಹಿಂದೂಗಳನ್ನು ಎರಡು ಮುಖದವರು ಎಂದು ಕರೆದಿದ್ದು, ರಾಹುಲ್ ಗಾಂಧಿ ಅಧಿಕಾರಕ್ಕೆ ಬಂದಿದ್ದರೆ, ಮುಸ್ಲಿಮರಿಗೆ ಮೀಸಲಾತಿ ನೀಡುತ್ತಿದ್ದರು ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. “ಒಬ್ಬ ನಾಯಕ ನಮಗೆ ಮಸೀದಿ ನಿರ್ಮಿಸಿದರೆ, ನಾವು ನಮ್ಮ ಜೀವನವಿಡೀ ಆತನಿಗೆ ಮತ ಹಾಕುತ್ತೇವೆ. ಆದರೆ ನಿಮಗೆ ಎಲ್ಲವನ್ನೂ ಮಾಡಿದ್ದರೂ ನೀವು ಮೋದಿಗೆ ಮತ ಹಾಕುವುದಿಲ್ಲ” ಎಂದು ಆತ ಹೇಳಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹೊಸದಿಲ್ಲಿ: ಸಾಲದ ಸುಳಿಯಲ್ಲಿ ಸಿಲುಕಿರುವ ಶಿಕ್ಷಣ ತಂತ್ರಜ್ಞಾನ ಸಂಸ್ಥೆ BYJU’S ಒಂದೊಮ್ಮೆ 22 ಬಿಲಿಯನ್ ಡಾಲರ್ ಮೌಲ್ಯ ಹೊಂದಿದ್ದರೆ, ಈಗ ಅದರ ನಿವ್ವಳ ಮೌಲ್ಯ ಶೂನ್ಯವಾಗಿದೆ ಎಂದು ಎಚ್ ಎಸ್ ಬಿಸಿ ನಡೆಸಿದ ಸಂಶೋಧನೆ ತಿಳಿಸಿದೆ. ಬೈಜೂಸ್ ನಲ್ಲಿ ಹೂಡಿಕೆ ಕಂಪನಿ ಪ್ರೋಸಸ್ ನ ಶೇ.10ರಷ್ಟು ಪಾಲು ಬಂಡವಾಳದ ಮೌಲ್ಯ ಶೂನ್ಯ ಎಂದು ಎಚ್ ಎಸ್ ಬಿಸಿ ಅಧ್ಯಯನ ತಿಳಿಸಿದೆ. ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಬೈಜೂಸ್ ಹಲವಾರು ಕಾನೂನು ಪ್ರಕರಣಗಳನ್ನು ಎದುರಿಸುತ್ತಿದೆ ಮತ್ತು ತನ್ನ ಉದ್ಯೋಗಿಗಳಿಗೆ ವೇತನ ನೀಡಲು ಹೆಣಗಾಡುತ್ತಿದೆ. ಈ ವರ್ಷದ ಜನವರಿಯಲ್ಲಿ ಅಮೆರಿಕಾದ ಹೂಡಿಕೆ ಸಂಸ್ಥೆ ಬ್ಲ್ಯಾಕ್ ರಾಕ್ ಬೈಜೂಸ್ ನಲ್ಲಿನ ತನ್ನ ಪಾಲನ್ನು 22 ಬಿಲಿಯನ್ ಡಾಲರ್‌ನಿಂದ 1 ಬಿಲಿಯನ್ ಡಾಲರ್ ಗೆ ಕಡಿತಗೊಳಿಸಿತ್ತು. ಬ್ಲ್ಯಾಕ್ ರಾಕ್ ಸಂಸ್ಥೆ ಬೈಜೂಸ್ ನಲ್ಲಿ ಶೇ.1ಕ್ಕಿಂತಲೂ ಕಡಿಮೆ ಪಾಲು ಹೊಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತುಮಕೂರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಬಗ್ಗೆ ಸಚಿವ ರಾಜಣ್ಣ ಅವರು ಅಚ್ಚರಿ ಹೇಳಿಕೆ ನೀಡಿದ್ದಾರೆ. ನಾನು ಹಾಸನ ಜಿಲ್ಲಾ ಉಸ್ತುವಾರಿ ಸಚಿವ, ನನಗೆ ಹಾಸನದ ಚುನಾವಣೆ ಜವಾಬ್ದಾರಿ ಕೊಟ್ಟಿದ್ರು. ತುಮಕೂರಿಗೆ ನಾನು, ಪರಮೇಶ್ವರ್ ಮಂತ್ರಿಗಳಾಗಿದ್ದೇವೆ. ಆದರೆ ನಾನು ಹಾಸನ ಜಿಲ್ಲೆಯ ಚುನಾವಣೆ ಬಗ್ಗೆ ಹೆಚ್ಚು ಒತ್ತು ಕೊಟ್ಟೆ. ತುಮಕೂರು ಚುನಾವಣೆ ಬಗ್ಗೆ ನಾನು ಹೆಚ್ಚು ತಲೆ ಕೆಡಿಸಿಕೊಳ್ಳಲು ಹೋಗಲಿಲ್ಲ. ನನ್ನದೊಂದು ಮಧುಗಿರಿ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿದ್ದೆ. ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸದಿದ್ದರೆ ಹಾಸನಕ್ಕೆ ಬರಲ್ಲ ಅಂತ ಹೇಳಿದ್ದೆ, ಈಗ ಗೆಲ್ಲಿಸಿದ್ದಾರೆ ಎಂದರು. ಜಿಲ್ಲೆಯಲ್ಲಿ ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ, ಎಲ್ಲಾ ಪಕ್ಷ, ಜಾತಿಯವರು ಮತ ಹಾಕಿದ್ದಾರೆ. ಪುಟ್ಟಸ್ವಾಮಿಗೌಡರ ಹೆಸರಿನ ಆಧಾರದ ಮೇಲೆ ಹೆಚ್ಚಿನ ಬಹುಮತ ಬರಲು ಸಾಧ್ಯವಾಗಿದೆ. ಈ ಕ್ಷೇತ್ರದ ಜನರು ಗೆಲ್ಲಿಸಿದ್ದಾರೆ ಎಂದು ಅವರಿಗೆ ಅಭಿನಂದನೆ ಸಲ್ಲಿಸಬೇಕು. ನಾನೇ ಗೆಲ್ಲಿಸಿದ್ದೀನಿ ಅಂತಾ ಹೇಳಿದ್ರೆ, ಅದು ದುರಂಹಕಾರದ ಮಾತಾಗುತ್ತೆ ಎಂದರು. ಕಳೆದ ಚುನಾವಣೆಯಲ್ಲಿ ದೇವೇಗೌಡರನ್ನು ಸೋಲಿಸಿದ್ದು ನಾನೇ, ಅದರಲ್ಲಿ ಅನುಮಾನ ಏನು…
ಬೀದರ್: ಜನರು ಜೀವಂತ ಮೀನು ಗಳನ್ನ ನುಂಗುವುದಕ್ಕಾಗಿಯೇ ನೂರಾರು ಸಂಖ್ಯೆಯಲ್ಲಿ ಚಿಕ್ಕಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಜನ ಜಂಗುಳಿ ಸೇರಿದ ದೃಶ್ಯ ನಗರದ ಓಲ್ಡ್ ಸಿಡಿ ಹಾಗೂ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಣಣದಲ್ಲಿ ಜರುಗಿದೆ. ಮಿರಗ ಮಳೆ ಆರಂಭವಾಗುವ ಈ ದಿನದಂದೂ ಆರ್ಯುವೇದ ಔಷಧಿಯನ್ನ ಜೀವಂತ ಮೀನಿನ ಬಾಯಿಯೊಳಗೆ ಹಾಕಿ ಅದನ್ನ ಜೀವಂತವಾಗಿ ನುಂಗಿದರೆ ಕೆಮ್ಮು, ಧಮ್ಮು, ಕಮಾಲೇ, ಅಸ್ತಮಾದಂತಾ ಖಾಯಿಲೆಗಳು ವಾಸಿಯಾಗುತ್ತದೆ ಎಂದು ಜನರು ನಂಬಿಕೊಂಡಿದ್ದು, ಅದರಂತೆ ಇದು ನೂರಾರು ವರ್ಷದಿಂದ ನಡೆದುಕೊಂಡು ಬರುತ್ತಿದೆ. ಶತಮಾನದಿಂದ ಇಲ್ಲಿ ಈ ಸಂಪ್ರದಾಯ ನಡೆದುಕೊಂಡು ಬರುತ್ತಿದೆ. ಪ್ರತಿ ವರ್ಷ ಜೂನ್ ತಿಂಗಳು ಆರಂಭದಲ್ಲಿ ಅಂದರೇ ಮಿರುಗು ಮಳೆಯಾದ ತಕ್ಷಣ ಇಲ್ಲಿ ಅಸ್ತಮಾ, ಕೆಮ್ಮಿ ಕಾಮಾಲೆ ರೋಗಗಳು ಇದ್ದವರು ಇಲ್ಲಿಗೆ ಬಂದು ಜಿವಂತ ಮೀನುಗಳನ್ನ ನುಂಗಿ ತಮ್ಮ ಕಾಯಿಲೆಗಳನ್ನ ಕಡಿಮೆಮಾಡಿಕೊಂಡು ಹೋಗುತ್ತಾರೆ. ಹುಮ್ನಾಬಾದ್ ಪಟ್ಟಣದ ಶರಣಪ್ಪ ಜಗದಾಳೆ ಕುಟುಂಬದವರು ಆರ್ಯುವೇದಿಕ್ ಔಷಧಿಯನ್ನ ಜೀವಂತ ಮೀನುಗಳ ಬಾಯಿಯಲ್ಲಿ ಹಾಕಿ ಅಸ್ತಮಾ, ಕಾಮಾಲೆಯಂತ ರೋಗಗಳಿಂದ ಬಳಲುತ್ತಿರುವ ರೋಗಿಗಳಿಗೆ ಮೀನು…
ಬೆಂಗಳೂರಿನ ನಮ್ಮ ಮೆಟ್ರೊ ಇದೀಗ ಮಾಸಿಕ 62,500 ರೂಪಾಯಿನಿಂದ 1,06,250 ರೂಪಾಯಿವರೆಗಿನ ಸಂಬಳದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬಿಎಂಆರ್ ಸಿಎಲ್ ಸಂಸ್ಥೆಯು ಸ್ವತ್ತು ಅಭಿವೃದ್ಧಿ ವಿಭಾಗದಲ್ಲಿ ಎಕ್ಸಿಕ್ಯೂಟಿವ್ ಇಂಜಿನಿಯರ್ (ಸಿವಿಲ್) 1 ಪೋಸ್ಟ್, ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್) 4, ಅಸಿಸ್ಟೆಂಟ್ ಇಂಜಿನಿಯರ್ (ಇ ಅಂಡ್ ಎಂ) 1, ಅಸಿಸ್ಟೆಂಟ್ ಮ್ಯಾನೇಜರ್ (ಮಾರ್ಕೆಟಿಂಗ್) 1 ಸೇರಿದಂತೆ ಒಟ್ಟು 7 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಕ್ಸಿಕ್ಯೂಟಿವ್ ಇಂಜಿನಿಯರ್ ಗೆ ಮಾಸಿಕ ವೇತನ 1,06,250 ರೂಪಾಯಿ, ಅಸಿಸ್ಟಂಟ್ ಇಂಜಿನಿಯರ್ ಹುದ್ದಗೆ 62,500,ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ ಮಾಸಿಕ ವೇತನ 62,500 ರೂಪಾಯಿ ನೀಡಲಾಗುತ್ತದೆ. ಈ ಹುದ್ದೆಗಳು ಆನ್ ಲೈನ್ ನಲ್ಲು ಅರ್ಜಿ ಹಾಕಲು ಕೊನೆಯ ದಿನಾಂಕ ಜುಲೈ, 2, 2024 ಆಗಿದ್ದು, ಅರ್ಜಿಯ ಸಹಿ ಮಾಡಿದ ಪ್ರಿಂಟ್ ಔಟ್ ಅನ್ನು ಜುಲೈ 5 ಸಂಜೆ 04ರೊಳಗೆ ಸಲ್ಲಿಸಬೇಕಾಗುತ್ತದೆ. ಆಯ್ಕೆಯಾದರಿಗೆ 3 ವರ್ಷ ಅಷ್ಟೇ ಹುದ್ದೆಯಲ್ಲಿರಬಹುದಾಗಿದೆ. ಬಿಇ, ಬಿ.ಟೆಕ್, ಎಂಬಿಎ ಮುಗಿಸಿದವರಿಗೆ ಬೆಂಗಳೂರಿನಲ್ಲಿ ಉದ್ಯೋಗ ಹರಸುತ್ತಿದ್ದರೆ ಅಂತವರಿಗೆ ನಮ್ಮ…
ಅಯೋಧ್ಯೆಯಲ್ಲಿ ರಾಮನ ದೇವಾಲಯವನ್ನು ನಿರ್ಮಿಸಿದ ನಂತರವೂ, ಇಲ್ಲಿ ಬಿಜೆಪಿ ಸೋತಿದೆ ಅನ್ನೋದೆ ದೊಡ್ಡ ಚರ್ಚೆಯ ವಿಷಯವಾಗಿದೆ. ಇದೆಲ್ಲದರ ನಡುವೆ, ನಿಮಗೊಂದು ಪೌರಾಣಿಕ ಕಥೆ ಗೊತ್ತೆ ? ಸೀತಾ ಮಾತೆ ಅಯೋಧ್ಯೆ ಮತ್ತು ಅಲ್ಲಿನ ಜನರಿಗೆ ನೀಡಿದ ಶಾಪದ ಬಗ್ಗೆ ನಿಮಗೆ ಗೊತ್ತೆ ?ಸೀತಾ ಮಾತೆ ಅಯೋಧ್ಯೆಗೆ ಶಾಪ ನೀಡಿದ್ದಳು. ಸೀತಾ ಮಾತೆಯ ಈ ಶಾಪದಿಂದ, ಅಯೋಧ್ಯೆ ನಗರ ಎಂದಿಗೂ ಪ್ರಗತಿ ಹೊಂದೋದಕ್ಕೆ ಸಾಧ್ಯವಾಗಲಿಲ್ಲ ಎನ್ನುವ ನಂಬಿಕೆ ಇದೆ. ನಗರವು ಯಾವಾಗಲೂ ಒಂದಲ್ಲ ಒಂದು ಕೊರತೆಯನ್ನು ಅನುಭವಿಸುತ್ತೆ? ವೇದಗಳು ಮತ್ತು ಪುರಾಣಗಳಲ್ಲಿ ತಿಳಿಸಿದಂತೆ, ರಾವಣನ ಸಂಹಾರಾದ ಬಳಿಕ, ವನವಾಸವನ್ನು ಕೊನೆಗೊಳಿಸಿ ಶ್ರೀರಾಮನು ಸೀತಾಳೊಂದಿಗೆ ಅಯೋಧ್ಯೆಗೆ ಮರಳಿದ ಸಮಯವದು. ಒಂದೆಡೆ, ಭಗವಾನ್ ರಾಮನ ಆಗಮನದ ಸಂದರ್ಭದಲ್ಲಿ ತುಪ್ಪದ ದೀಪಗಳನ್ನು ಬೆಳಗಿಸುವ ಮೂಲಕ ಜನ ಸಂತೋಷವನ್ನು ಆಚರಿಸುತ್ತಿದ್ದರೆ, ಮತ್ತೊಂದೆಡೆ, ಅಯೋಧ್ಯೆಯ ಜನರು ಸೀತಾ ಮಾತೆಯ ಬಗ್ಗೆ ಸಂಶಯದ ನೋಟ ಬೀರುತ್ತಾ, ಬಾಯಿಂದ ಬಾಯಿಗೆ ವದಂತಿ ಹರಡುತ್ತಿದ್ರು. ಸೀತೆ ಇಷ್ಟು ದಿನ ಅದ್ಯಾವುದೋ ಬೇರೆ ರಾಜ್ಯದ ಜೀವಿಯಾದ ರಾವಣನೊಂದಿಗೆ…
ಚಂದನ್ ಶೆಟ್ಟಿ – ನಿವೇದಿತಾ ಗೌಡ ದಿಢೀರ್ ಅಂತ ವಿಚ್ಛೇದನ ಪಡೆದಿಲ್ಲ. ಒಂದು ವರ್ಷದ ಹಿಂದೆಯೇ ತೀರ್ಮಾನ ಆಗಿತ್ತು ಎಂಬ ಸ್ಫೋಟಕ ಮಾಹಿತಿಯನ್ನ ಲಾಯರ್ ಅನಿತಾ ಬಿಚ್ಚಿಟ್ಟಿದ್ದಾರೆ. ‘’ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಒಂದು ವರ್ಷದ ಹಿಂದೆಯೇ ವಿಚ್ಛೇದನ ಪಡೆಯಲು ನಿರ್ಧರಿಸಿದ್ದರು. ಮಾತುಕತೆ ನಡೆಯುತ್ತಿತ್ತು. ಕುಟುಂಬದ ಹಿರಿಯರು ಮಾತನಾಡಿ ಸಂಧಾನಕ್ಕೆ ಯತ್ನಿಸಿದ್ದರು. ಆದರೆ, ಅದು ಸಾಧ್ಯವಾಗಿಲ್ಲ. ಇಬ್ಬರಲ್ಲೂ ಅವರದ್ದೇ ಆದ ವೃತ್ತಿಜೀವನದ ಕನಸುಗಳಿವೆ. ಹೀಗಾಗಿ, ವರ್ಷದ ಹಿಂದೆಯೇ ಡಿವೋರ್ಸ್ ತೀರ್ಮಾನ ಮಾಡಿಕೊಂಡಿದ್ದರು’’ ಎಂದು ಲಾಯರ್ ಅನಿತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರದ್ದು ಲವ್ ಕಮ್ ಅರೇಂಜ್ಡ್ ಮ್ಯಾರೇಜ್. ಇಬ್ಬರ ಪೋಷಕರೂ ತುಂಬಾ ಪ್ರಯತ್ನ ಪಟ್ಟಿದ್ದಾರೆ. ಆದರೆ, ಒಂದು ಮಾಡಲು ಸಾಧ್ಯವಾಗಿಲ್ಲ. ಒಂದು ವರ್ಷದಿಂದ ವಿಚ್ಛೇದನದ ನಿರ್ಧಾರ ಮಾಡಿದ್ದರು. ಹೀಗಾಗಿ, 6 ತಿಂಗಳು ವೇಯ್ಟಿಂಗ್ ಪೀರಿಯಡ್ ನೀಡದೆ ಕಾನೂನಾತ್ಮಕವಾಗಿ ವಿಚ್ಛೇದನ ನೀಡಲಾಗಿದೆ’’ ಎಂದು ವಕೀಲೆ ಅನಿತಾ ತಿಳಿಸಿದ್ದಾರೆ. ಇಬ್ಬರಿಗೂ ಅವರದ್ದೇ ಆದ ಥಿಂಕಿಂಗ್ ಇದೆ. ಆದರೂ…
ಮಂಡ್ಯ: ನನಗೆ ರಾಜ್ಯದಲ್ಲಿ ಪಕ್ಷ ಕಟ್ಟುವ ಜವಾಬ್ದಾರಿಯನ್ನು ವರಿಷ್ಠರು ನೀಡಿದ್ದಾರೆ. ಹೀಗಾಗಿ ಇನ್ನು ಮುಂದೆ ಸಿನಿಮಾಗಳಲ್ಲಿ ನಟಿಸುವುದಿಲ್ಲ. ಸಿನಿಮಾ ಮಾಡುವ ಬಗ್ಗೆ ಸದ್ಯಕ್ಕೆ ಯಾವುದೇ ಆಲೋಚನೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ತಾಲೂಕಿನ ಚಿಕ್ಕಬಾಣಸವಾಡಿ ಗ್ರಾಮದಲ್ಲಿ ಮಾತನಾಡಿದ ಅವರು, “ಸಿನಿಮಾ ರಂಗವನ್ನು ಪೂರ್ಣವಾಗಿ ತ್ಯಜಿಸಿದ್ದೇನೆ. ಇನ್ನು ಮುಂದೆ ಸಂಪೂರ್ಣ ರಾಜಕಾರಣಿಯಾಗಿರುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದಿದ್ದಾರೆ. ಕುಮಾರಸ್ವಾಮಿಯವರ ಮೇಲೆ ವಿಶ್ವಾಸವಿಟ್ಟು ಜನ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದಾರೆ. ಕುಮಾರಸ್ವಾಮಿಯವರು ಐದು ವರ್ಷ ಉತ್ತಮವಾಗಿ ಕೆಲಸ ಮಾಡುತ್ತಾರೆ. ಕೇಂದ್ರದಲ್ಲಿ ಸಚಿವ ಸ್ಥಾನಕ್ಕೆ ಡಿಮ್ಯಾಂಡ್ ಮಾಡಲ್ಲ. ಅವರ ಹಿರಿತನದ ಆಧಾರದ ಮೇಲೆ ಉತ್ತಮ ಸ್ಥಾನ ಸಿಗಲಿದೆ ಎಂದರು. ಇದೇ ವೇಳೆ, ಮಾಜಿ ಸಂಸದೆ ಸುಮಲತಾ ಅವರು ಕುಮಾರಸ್ವಾಮಿ ಗೆಲುವು ಬಯಸಿದ್ದರು. ಪ್ರಚಾರ ವೇದಿಕೆ ಹಂಚಿಕೊಳ್ಳದೇ ಇದ್ರೂ ಅವರ ಬೆಂಬಲಿಗರಿಗೆ ಹೇಳಿದ್ದರು” ಎಂದು ತಿಳಿಸಿದರು. ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಸಂಸತ್ ಪ್ರವೇಶಿಸುತ್ತಿದ್ದಾರೆ. ಅವರಿಂದ ತೆರವಾದ ಸ್ಥಾನಕ್ಕೆ…
ಬೆಂಗಳೂರು: ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆ ಮೇಲೆ ವೇಗವಾಗಿ ಬಂದಂತಹ ಕಾರು ಡಿವೈಡರ್ ಗೆ ಗುದ್ದಿ ಪಕ್ಕದಲ್ಲಿರುವ ಕೆರೆಗೆ ಬಿದ್ದಿದೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನುಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬರುವ ವೇಳೆ ವೇಗವಾಗಿ ಬಂದಂತಹ ಕಾರು ನಿಯಂತ್ರಣ ಕಳೆದುಕೊಂಡು ಕೆರೆಗೆ ಬಿದ್ದಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಂಚಾಲೆ ಗ್ರಾಮದ ಬಳಿ ಮಾರುತಿ ಓಮ್ನಿ ಹಾಗೂ ಇಂಡಿಕಾ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಓಮ್ನಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಜೇಯ(21) ಮೃತ ದುರ್ದೈವಿಯಾಗಿದ್ದಾರೆ. ಓಮ್ನಿ ಕಾರು ಜೋಗದಿಂದ ಶಿವಮೊಗ್ಗ ಕಡೆ ಹೊರಟಿತ್ತು. ಇಂಡಿಕಾ ಕಾರು ಆನಂದಪುರದಿಂದ ಸಾಗರ ಕಡೆಗೆ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಂಡಿಕಾ ಕಾರು ಚಾಲಕ ಹಾಗೂ ಮಾರುತಿ ಓಮ್ನಿಯಲ್ಲಿದ್ದ ಯುವಕನಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296