Author: admin

ಉಡುಪಿ: ಇಲ್ಲಿಯ ಸಂತೆಕಟ್ಟೆ ಜಂಕ್ಷನ್‌ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಆಯಿಲ್ ಟ್ಯಾಂಕರ್ ಕೆಸರು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಖಾದ್ಯ ತೈಲ ಸಾಗಣೆ ಮಾಡುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದೆ. ಚಾಲಕನಿಗೆ ತರಚಿದ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಹೈವೇ ಕಾಮಗಾರಿ ಸೂಚನಾ ಫಲಕ ನೋಡದೆ ಮುಚ್ಚಿದ್ದ ಸರ್ವಿಸ್ ರಸ್ತೆಯಲ್ಲಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್‌ ನಿಂದ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದ್ದು, ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸ್ಟಿಫ್ಟ್‌ ಕಾರೊಂದು ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ಬಂದಾಗ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಲ್ಲಿದ್ದ ನಾಲ್ವರು ಕೆಳಗಿಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಸ್ವಿಫ್ಟ್ ಕಾರು ಸುಟ್ಟು ಹೋಗಿದೆ. ಕಡೂರು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಸರಗೂರು: ತಾಲೂಕಿನ ಹಂಚಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ದಡದಹಳ್ಳಿ ಹಾಡಿಗೆ, ದಡದಹಳ್ಳಿ ಗ್ರಾಮದಿಂದ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಡಾಂಬರೀಕರಣ ಮಾಡಲು ಆಗ್ರಹಿಸಿ, ಕೆಸರು ತುಂಬಿದ ರಸ್ತೆಗೆ ಗಿಡ ನೆಟ್ಟು ಶುಕ್ರವಾರ ದಂದುದು ಅಖಿಲ ಭಾರತ ಜನ ಅಧಿಕಾರ ಸುರಕ್ಷಾ ಸಮಿತಿವತಿಯಿಂದ ಪ್ರತಿಭಟನೆ ಮಾಡಲಾಯಿತು. ನಂತರ ಮಾತನಾಡಿದ ಅಖಿಲ ಭಾರತ ಜನ ಅಧಿಕಾರ ಸುರಕ್ಷಾ ಸಮಿತಿಯ ಮುಖಂಡ ಸುನಿಲ್ ಟಿ.ಆರ್., “ದಡದಹಳ್ಳಿ ಹಾಡಿಯಲ್ಲಿ ಆದಿವಾಸಿ ಜನರು ಕಾಡಂಚಿನ ಪ್ರದೇಶದಲ್ಲಿ ವಾಸಿಸುತ್ತಿದ್ದು, ಪ್ರತಿನಿತ್ಯ ಅವರು ಕಲ್ಲು, ಮಣ್ಣು, ಗುಂಡಿಗಳಿರುವ ಹಾಗೂ ಮಳೆ ಬಂದಾಗ ಕೆಸರುಗದ್ದೆ ಅಂತೆ ಆಗುವ ರಸ್ತೆಯಲ್ಲಿ 3 ಕಿಲೋ ಮೀಟರ್ ನಡೆದು ಓಡಾಡುವ ಪರಿಸ್ಥಿತಿ ಇದೆ. ಒಂದೆಡೆ ಕಾಡುಪ್ರಾಣಿಗಳ ಹಾವಳಿಯಿಂದಾಗಿ ಜೀವ ಭಯದಿಂದ ಓಡಾಡುವಂತಾಗಿದೆ. ಇನ್ನೊಂದೆಡೆ ಹಾಡಿಯಲ್ಲಿ ಶಾಲೆಯು ಇಲ್ಲದಿರುವುದರಿಂದ ಪ್ರತಿನಿತ್ಯ ಮಕ್ಕಳು ನಡೆದು ಹೋಗಬೇಕಾಗುತ್ತದೆ. ತುರ್ತು ಅನಾರೋಗ್ಯದ ಸಂದರ್ಭದಲ್ಲಿ ಆಸ್ಪತ್ರೆಗೆ ಹೋಗಲು ಸಹ ಬಹಳ ಕಷ್ಟವಿದೆ. ಪೌಷ್ಟಿಕ ಆಹಾರ ಸಾಮಗ್ರಿ ಬರುವ ವಾಹನವು ಸಹ ಸರಿಯಾದ ಸಮಯಕ್ಕೆ ಬರಲು…

Read More

ತುಮಕೂರು: ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಅಲ್ಲದೆ ಅನೇಕ ಕೆರೆಕಟ್ಟೆಗಳು ಕೋಡಿಬಿದ್ದು ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಕೊರಟಗೆರೆ ತಾಲೂಕು ವ್ಯಾಪ್ತಿಯ ಅತಿ ದೊಡ್ಡ ಕೆರೆಗಳಲ್ಲಿ ಒಂದು ಆಗಿರುವ, ಜಂಪೇನ ಹಳ್ಳಿ ಕೆರೆಗೆ ಭಾರೀ ಪ್ರಮಾಣದ ಮಳೆ ನೀರು ಹರಿದು ಬರುತ್ತಿದ್ದು, ಕೆರೆ ಕೋಡಿ ಬಿದ್ದ ಪರಿಣಾಮ ಸುತ್ತಮುತ್ತಲ ಜಮೀನುಗಳಲ್ಲಿ ನೀರು ಆವರಿಸಿಕೊಂಡಿದೆ. ಇನ್ನೊಂದೆಡೆ ಕಳೆದ ಮೂರು ದಿನಗಳಿಂದ ಸಂಜೆ ವೇಳೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಸಿದ್ದಾಪುರ: ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಸಿದ್ದಾಪುರ ಸಮೀಪದ ಬಾಡಗ ಬಾಣಂಗಾಲದಲ್ಲಿ ನಡೆದಿದೆ. ಆಟೋ ಚಾಲಕ ವಿಜಯ್ ಎಂಬುವರು ಎಂದಿನಂತೆ ಮನೆ ಬಳಿ ಆಟೋ ರಿಕ್ಷಾ ನಿಲ್ಲಿಸಿ ಹೊರಗೆ ತೆರಳಿದ್ದರು. ರಾತ್ರಿಯ ವೇಳೆ ನಾಯಿಯನ್ನು ಅಟ್ಟಿಸಿಕೊಂಡು ಬಂದ ಕಾಡಾನೆ ಮನೆ ಸಮೀಪದಲ್ಲಿದ್ದ ರಿಕ್ಷಾ ಮೇಲೆ ದಾಳಿ ನಡೆಸಿದೆ. ಕಾಡಾನೆಯ ದಾಳಿಯ ಪರಿಣಾಮ ಆಟೋದ ಹಿಂಭಾಗಕ್ಕೆ ಹಾನಿಯಾಗಿದೆ. ಕಾಡಾನೆಗಳು ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಬೇಕು ಎಂದು ಇಲ್ಲಿನ ಸ್ಥಳೀಯರು ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನವದೆಹಲಿ: ಇಂಡಿಯಾ ಮೈತ್ರಿ ಮುಂದುವರಿಯಬೇಕು ಮತ್ತು ಗುಂಪು “ಸಂಸತ್ತಿನಲ್ಲಿ ಮತ್ತು ಹೊರಗೆ ಒಗ್ಗಟ್ಟಿನಿಂದ ಮತ್ತು ಸಾಮೂಹಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ. ನಿವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಯಲ್ಲಿ ಮಾತನಾಡಿದ ಅವರು, ಜನರು ಆಡಳಿತ ಪಕ್ಷದ ಸರ್ವಾಧಿಕಾರಿ ಮತ್ತು ಪ್ರಜಾಪ್ರಭುತ್ವ ವಿರೋಧಿಗಳ ವಿರುದ್ಧ ಮತ ಚಲಾಯಿಸಿದ್ದಾರೆ ಎಂದರು. ವಿಭಜನೆ, ದ್ವೇಷ ಮತ್ತು ಧ್ರುವೀಕರಣದ ರಾಜಕೀಯವನ್ನು ಮತದಾರರು ತಿರಸ್ಕರಿಸಿದ್ದಾರೆ ಎಂದು ಒತ್ತಿ ಹೇಳಿದ ಖರ್ಗೆ,  ಜನರು ನಮ್ಮ ಮೇಲೆ ಗಣನೀಯ ಪ್ರಮಾಣದಲ್ಲಿ ನಂಬಿಕೆ ಇಟ್ಟಿದ್ದಾರೆ ಮತ್ತು ನಾವು ಅದನ್ನು ಉಳಿಸಿಕೊಳ್ಳಬೇಕು ಎಂದರು. ಲೋಕಸಭೆಗೆ ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಸದಸ್ಯರನ್ನು “ಪ್ರತಿಕೂಲ ಪರಿಸ್ಥಿತಿಗಳಲ್ಲಿ ಹೋರಾಡಿ ಚುನಾವಣೆಯಲ್ಲಿ ಗೆದ್ದವರು” ಎಂದು ಬಣ್ಣಿಸಿ ಅಭಿನಂದಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಅಗ್ನಿ ಅವಘಡದಲ್ಲಿ ಐದು ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಎಲೆಕ್ಟ್ರಿಕ್ ಅಂಗಡಿ, ಬೇಕರಿ, ಬೊಂಬೆ ಅಂಗಡಿ, ಪೂಟ್ ವೇರ್ ಹಾಗೂ ಹೋಟೆಲ್ ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಏಕಾಏಕಿ ಬೆಂಕಿ ಧಗಧಗನೆ ಹೊತ್ತಿ ಉರಿದಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯ ಮಾಹಿತಿ ತಿಳಿದು ಅಗ್ನಿಶಾಮಕ ವಾಹನ ಸ್ಥಳಕ್ಕಾಗಮಿಸಿ ಬೆಂಕಿ ನಿಯಂತ್ರಣಕ್ಕೆ ತಂದಿದೆ. ಘಟನೆಯಿಂದಾಗಿ 30 ಲಕ್ಷಕ್ಕೂ ಅಧಿಕ ವಸ್ತುಗಳು ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಶಾಸಕ ಯು.ಬಿ. ಬಣಕಾರ್ ಭೇಟಿ ನೀಡಿದ್ದಾರೆ. ಹಂಸಭಾವಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಶಿವಮೊಗ್ಗ: ಮಹಾನಗರ ಪಾಲಿಕೆಗೆ ನೂತನ ಆಯುಕ್ತರಾಗಿ ಡಾ.ಕವಿತಾ ಯೋಗಪ್ಪನವರ್ ಅನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅಧಿಸೂಚನೆ ಹೊರಡಿಸಿದ್ದಾರೆ. ಡಾ. ಕವಿತಾ ಯೋಗಪ್ಪನವರ್, ಕೆಎಎಸ್(ಹಿರಿಯ ಶ್ರೇಣಿ) ಅಧಿಕಾರಿ, ವಿಶೇಷ ಭೂಸ್ವಾಧೀನಾಧಿಕಾರಿ, ಡಾ.ಶಿವರಾಮಕಾರಂತ ಬಡವಾಣೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ಆಯುಕ್ತರು, ಶಿವಮೊಗ್ಗ ಮಹಾನಗರ ವಾಲಿಕೆ ಈ ಹುದ್ದೆಗೆ ವರ್ಗಾಯಿಸಿ ಆದೇಶಿಸಿದ್ದಾರೆ. ಇನ್ನೂ ಈ ಆದೇಶದಿಂದ ಸ್ಥಳ ನಿರೀಕ್ಷೆಗೆ ಬರುವ ಅಧಿಕಾರಿಯು ಮುಂದಿನ ಸ್ಥಳ ನಿಯುಕ್ತಿಗಾಗಿ ತಮ್ಮ ಮಾತೃ ಇಲಾಖೆಯಲ್ಲಿ ಕಾರ್ಯ ವರದಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಜನರಿಗೆ ಇಷ್ಟವಾಗಿಲ್ಲ. ಅದರ ವಿರುದ್ಧ ಮಾತನಾಡುತ್ತಿರೋ ಬಿಜೆಪಿಗರಿಗೆ ಜನರು ಮತ ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಬಗ್ಗೆ ಮರು ಪರಿಶೀಲನೆ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಎಂ.ಲಕ್ಷ್ಮಣ್ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗ್ಯಾರಂಟಿ ನಿಲ್ಲಿಸುವುದು ಒಳ್ಳೇದು, ಜನರಿಗೆ ಕಾಂಗ್ರೆಸ್ ಗ್ಯಾರಂಟಿಗಳು ಇಷ್ಟ ಅಗಲ್ಲ. ಇಷ್ಟವಿಲ್ಲವೆಂದು ಫಲಿತಾಂಶದ ಮೂಲಕ ತೋರಿಸಿದ್ದಾರೆ ಎಂದರು. ಗ್ಯಾರಂಟಿ ವಿರುದ್ಧ ಮಾತನಾಡಿರೋ ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಜನರು ಬೆಂಬಲ ನೀಡಿದ್ದಾರೆ. ಹೀಗಾಗಿ ನಮ್ಮ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಬಗ್ಗೆ ಮರು ಪರಿಶೀಲನೆ ಅತ್ಯಗತ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ಬಳಿ ಕೋರುವುದಾಗಿ ಅವರು ಹೇಳಿದರು. ನಾನು ಗ್ಯಾರಂಟಿ ಯೋಜನೆ ನಿಲ್ಲಿಸಿಯೇ ಬಿಡಿ ಅಂತ ಹೇಳುತ್ತಿಲ್ಲ. ಯಾರಿಗೆ ತಲುಪಬೇಕೋ ಅವರಿಗೆ ತಲುಪಲಿ. ಬಡವರು, ಮಧ್ಯಮ ವರ್ಗದವರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಮರು ಪರಿಶೀಲಿಸಬೇಕು ಎಂದು ಅವರು ಒತ್ತಾಯಿಸುವುದಾಗಿ ತಿಳಿಸಿದರು.…

Read More

ತುಮಕೂರು: ಎಕ್ಸ್ ಪ್ರೆಸ್ ಕೆನಾಲ್ ಪೈಪ್ ಲೈನ್ ಮುಖಾಂತರ ರಾಮನಗರ ಜಿಲ್ಲೆಗೆ ಹೇಮಾವತಿ ನೀರನ್ನು ತೆಗೆದುಕೊಂಡು ಹೋಗಲು ಕಿಲೋಮೀಟರ್ 70 ರಿಂದ ಆರಂಭವಾಗಿರುವ ಕಾಮಗಾರಿಯನ್ನು ತಕ್ಷಣ ನಿಲ್ಲಿಸಲು ತುಮಕೂರಿನ ವಿವಿಧ ಮಠಗಳ ಸ್ವಾಮೀಜಿಗಳು, ಮುಖಂಡರಾದ ಸೊಗಡು ಶಿವಣ್ಣ, ಎಂ.ಟಿ.ಕೃಷ್ಣಪ್ಪ, ಎಸ್ ಡಿ ದಿಲೀಪ್ ಕುಮಾರ್ ದನಿಯಕುಮಾರ್ ಇತರೆ ಸಂಘ ಸಂಸ್ಥೆಗಳ ಮುಖಂಡರುಗಳು ಬೆಂಬಲ ಕೋರಿದರು. ಹೇಮಾವತಿ ಯೋಜನೆ ಆಡಿ ತುಮಕೂರು ಜಿಲ್ಲೆಗೆ ೨೫ ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿರುವುದು ಸರಿ ಅಷ್ಟೇ.? ಆದರೆ ಇದುವರೆಗೂ ಕೂಡ ಯಾವ ವರ್ಷದಲ್ಲೂ ತುಮಕೂರು ಜಿಲ್ಲೆಗೆ ಲಭ್ಯವಾಗಿರುವ ನೀರಿನ ಪ್ರಮಾಣಕ್ಕೆ ಅನುಸಾರವಾಗಿ ಒಂದು ವರ್ಷವೂ ಕೂಡ 25 ಟಿಎಂಸಿ ನೀರು ತುಮಕೂರು ಜಿಲ್ಲೆಗೆ ಬಂದಿರುವುದಿಲ್ಲ. 25 ಟಿಎಂಸಿ ನೀರಿನಲ್ಲಿ ನೀರಾವರಿ ಯೋಜನೆಗಳು ಹಾಗೂ ಕುಡಿಯುವ ನೀರಿನ ಯೋಜನೆಗಳು ಸೇರ್ಪಡೆಗೊಂಡಿರುತ್ತವೆ. ನೀರಿನ ಅಭಾವದಿಂದ. ಈ ಎಲ್ಲ ಯೋಜನೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿರುತ್ತವೆ. ಮಳೆಯ ಪ್ರಮಾಣ ಕಡಿಮೆಯಾದಂತ ವರ್ಷಗಳಲ್ಲಿ ತೀವ್ರ ಸಂಕಷ್ಟಕ್ಕೆ ತುಮಕೂರು ಜಿಲ್ಲೆ ಸಿಲುಕಿದೆ. ಪರಿಸ್ಥಿತಿ ಈಗಿರುವಾಗ ಹೇಮಾವತಿ…

Read More