Subscribe to Updates
Get the latest creative news from FooBar about art, design and business.
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
- ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
- ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
- ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
- ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
Author: admin
ಬೀದರ್: ಮಳೆಗಾಲ ಆರಂಭವಾಗಿರುವ ಹಿನ್ನೆಲೆ ಸಾರ್ವಜನಿಕರು ರಸ್ತೆ ಸುರಕ್ಷತೆಯ ನಿಯಮಗಳನ್ನು ಪಾಲಿಸುವಂತೆ ಬೀದರ್ ಜಿಲ್ಲಾ ಪೊಲೀಸರು ಮನವಿ ಮಾಡಿದ್ದಾರೆ. ಬೀದರ ಜಿಲ್ಲೆಯ ಸಂಚಾರಿ ಪೊಲೀಸರು ಜನ ಸಾಮಾನ್ಯರ ಪ್ರಾಣ ರಕ್ಷಣೆಗೆ ಮಳೆ, ಗಾಳಿ, ಬಿಸಿಲು, ಚಳಿ ಲೆಕ್ಕಿಸದೇ ಸತತವಾಗಿ 24×7 ದುಡಿಯುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರು ತಪ್ಪದೇ ಸಂಚಾರಿ ನಿಯಮಗಳನ್ನು ಪಾಲಿಸಿ ಸಹಕರಿಸಿ ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ. ಮಳೆಯ ನಡುವೆಯೂ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಯ ಫೋಟೋವನ್ನು ಹಂಚಿಕೊಳ್ಳಲಾಗಿದ್ದು, ಇದು ಬೀದರ್ ಜಿಲ್ಲಾ ಪೊಲೀಸರ ಕರ್ತವ್ಯ ನಿಷ್ಠೆಯ ನಿದರ್ಶನವಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುರುವೇಕೆರೆ: “ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತುರುವೇಕೆರೆ ತಾಲೂಕಿನ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರುಗಳು ಹೋರಾಟ ಮಾಡಿ, 45,000 ಮತಗಳ ಅಂತರದಿಂದ ನಮ್ಮ ಬಿಜೆಪಿ ಪಕ್ಷದ ಅಭ್ಯರ್ಥಿ ವಿ. ಸೋಮಣ್ಣರನ್ನು ಗೆಲ್ಲಿಸಿದ್ದಾರೆ. ಎರಡು ಪಕ್ಷಗಳ ಮುಖಂಡರುಗಳಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ತುರುವೇಕೆರೆ ಕ್ಷೇತ್ರದ ಮಾಜಿ ಶಾಸಕ ಮಸಾಲ ಜಯರಾಮ್ ಹೇಳಿದರು. ತುರುವೇಕೆರೆ ತಾಲೂಕಿನ ಚಿಕ್ಕೋನಹಳ್ಳಿಯ ಗೇಟ್ ಬಳಿ ಇರುವ ತಮ್ಮ ಫಾರ್ಮ್ ಹೌಸ್ ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ದಿನ ಬಹಳ ಖುಷಿಯಾಗುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರುಗಳು ಮುಖಂಡರುಗಳು ನಾಯಕರುಗಳು ಒಗ್ಗಟ್ಟಿನ ಮಂತ್ರದಿಂದ ವಿ. ಸೋಮಣ್ಣನವರ ಗೆಲುವಿಗೆ ಕಾರಣಕರ್ತರಾಗಿದ್ದಾರೆ. ನಮ್ಮ ಅಭ್ಯರ್ಥಿಯು ಬಹಳ ಸಜ್ಜನಿಕೆಯ ರಾಜಕಾರಣಿ, ಎರಡು ಬಾರಿ ಪರಾಜಿತರಾಗಿದ್ದರು. ಅವರಿಗೆ ತುಮಕೂರು ಜಿಲ್ಲೆ ಮತ್ತು ತುರುವೇಕೆರೆ ಕ್ಷೇತ್ರ ರಾಜಕೀಯವಾಗಿ ಮರುಜನ್ಮ ನೀಡಿದೆ ಎಂದು ಅಭಿಪ್ರಾಯಪಟ್ಟರು. ಮುಂದಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಣ್ಣನವರು ಹಾಗೂ ಸೋಮಣ್ಣನವರು ಕೇಂದ್ರ ಸರ್ಕಾರದ ಸಚಿವರಾಗುವ ಸಂಭವ ಹೆಚ್ಚಾಗಿದೆ.…
ಸಮಾಜ ಕಲ್ಯಾಣ ಇಲಾಖೆಯು 2023-24 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರೆಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಜಿಲ್ಲಾ ಮಟ್ಟದಲ್ಲಿ ಬೆಂಗಳೂರಿನ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ಹಾಗೂ ಪ್ರಾದೇಶಿಕ ತರಬೇತಿ ಕೇಂದ್ರಗಳ ಸಹಯೊಗದಲ್ಲಿ 60 ದಿನಗಳ ವಿವಿಧ ಕೌಶಲ್ಯಾಭಿವೃದ್ಧಿ (ತಾಂತ್ರಿಕ ನೈಪುಣ್ಯತೆ) ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು, ನಿಗದಿತ ನಮೂನೆ ಅರ್ಜಿಯನ್ನು ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಧಾರವಾಡ ಅಥವಾ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ತಾಲ್ಲೂಕಾ ಕಾರ್ಯಾಲಯ ಮೂಲಕ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜೂನ್ 30, 2024 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447201 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ವಿಚ್ಛೇದನ ಅರ್ಜಿ ಸಲ್ಲಿಸಿದ್ದರೆ ತಿಂಗಳಾನುಗಟ್ಟಲೇ, ವರ್ಷಗಟ್ಟಲೇ ವಿಚಾರಣೆ ಕೋರ್ಟ್‌ನಲ್ಲಿ ನಡೆಯುತ್ತೆ. ಆದರೆ, ಚಂದನ್ ಶೆಟ್ಟಿ ನಿವೇದಿತಾ ದಂಪತಿ ವಿಚ್ಛೇದನ ಮಾತ್ರ ಒಂದೇ ದಿನದಲ್ಲಿ ಆಗಿದೆ. ಫ್ಯಾಮಿಲಿ ಕೋರ್ಟ್‌ನ 13ಬಿ ಸೆಕ್ಷನ್ ನಲ್ಲಿ ಒಂದೇ ದಿನದಲ್ಲಿ ವಿಚ್ಚೇದನ ದೊರೆಯುತ್ತದೆಯೇ ? ಗಂಡ-ಹೆಂಡತಿಗೆ ಜತೆಯಾಗಿ ಬದುಕಲು ಕಷ್ಟವಾಗುತ್ತಿದೆ ಎಂದಾಗ ಅತ್ಯಂತ ಸುಲಭವಾಗಿ ಹಾಗೂ ತ್ವರಿತವಾಗಿ ವಿಚ್ಛೇದನ ಪಡೆಯುವ ಮಾರ್ಗ ಇದು. ಹಿಂದೂ ವಿವಾಹ ಕಾಯಿದೆ 1955ರ ಸೆಕ್ಷನ್ 13ಬಿಯು ಫ್ಯಾಮಿಲಿ ಕೋರ್ಟ್‌ನಲ್ಲಿ ದಂಪರಿಗಳಿಗೆ ಸಮ್ಮತಿಯ ಒಪ್ಪಿಗೆ ನೀಡಿ ಡಿವೋರ್ಸ್ ಪಡೆಯಲು ಅವಕಾಶ ದಯಪಾಲಿಸುತ್ತದೆ. ಇದಕ್ಕಾಗಿ ಗಂಡ-ಹೆಂಡತಿ ಇಬ್ಬರೂ ಮ್ಯೂಚುವಲ್ ಕನ್ಸೆಂಟ್ ಅಂದರೆ ಶಾಂತಿಯುತ ಪ್ರತ್ಯೇಕತೆಗೆ ಒಪ್ಪಿಗೆ ನೀಡುವ ಅಗ್ರಿಮೆಂಟ್ ಅನ್ನು ಕೋರ್ಟ್‌ಗೆ ನೀಡಬೇಕು. 1976ರ ಮೇ 27 ರಂದು ಹಿಂದೂ ವಿವಾಹ ಕಾಯಿದೆಯಲ್ಲಿ ಈ ನಿಬಂಧನೆಯನ್ನು ಸೇರಿಸಲಾಗಿದೆ. ಈ ಕನ್ಸೆಂಟ್ ಫಾರ್ಮ್ ನಲ್ಲಿ ಡಿವೋರ್ಸ್ ಅರ್ಜಿ ಸಲ್ಲಿಕೆ ಮಾಡಬೇಕಾದಲ್ಲಿ ಎರಡೂ ಕಡೆಯವರು ಕೆಲವೊಂದು ಷರತ್ತುಗಳನ್ನು ಪಾಲನೆ ಮಾಡಬೇಕಾಗುತ್ತದೆ. ಇಬ್ಬರೂ ಕೂಡ ಕಳೆದೊಂದು ವರ್ಷದಿಂದ ಒಟ್ಟಿಗೆ ವಾಸ…
ಸರಗೂರು: ತಾಲ್ಲೂಕಿನ ಪಟ್ಟಣದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲಾ ಮಕ್ಕಳಿಗೆ ನೋಟ್ ಪುಸ್ತಕ, ಇಂಗ್ಲಿಷ್ ಡಿಕ್ಷನರಿ, ಪೆನ್ಸಿಲ್ ಮತ್ತು ಸಿಹಿ ಲಡ್ಡು ಹಂಚುವ ಮೂಲಕ ಪಿ.ಸಿ.ಸಿ. ರಾಜ್ಯ ಉಪಾಧ್ಯಕ್ಷರು, ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ ರವರ ಹುಟ್ಟುಹಬ್ಬವನ್ನು ಶನಿವಾರ ದಂದು ಆಚರಿಸಲಾಯಿತು. ನಂತರ ರಾಜೀವ್ ಗಾಂಧಿ ಪಂಚಾಯತ್ ರಾಜ್ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಗ್ರಾಮೀಣ ಮಹೇಶ್ ಮಾತನಾಡಿ, “ನಂಜುಂಡಸ್ವಾಮಿರವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ವಂಚಿತರಾದ ನಂತರ, ನಡೆದ ವಿಧಾನ ಪರಿಷತ್ ಸದಸ್ಯ ಸ್ಥಾನದ ಆಕಾಂಕ್ಷಿಯೂ ಆಗಿದ್ದರು. ಆದರೆ ಯಾವುದೇ ಅವಕಾಶಗಳು ಇವರಿಗೆ ಲಭಿಸಲಿಲ್ಲ. ಇದರ ನಡುವೆ ಬೆಂಗಳೂರಿನಲ್ಲಿ ಕಾರು ಅಪಘಾತಕ್ಕೆ ಸಿಲುಕಿ ಪ್ರಾಣಾಪಾಯದಿಂದ ಪಾರಾಗಿ ಪುನರ್ಜನ್ಮವನ್ನು ಪಡೆದವರಾಗಿದ್ದಾರೆ. ಅದೇ ರೀತಿ ಮುಂದಿನ ದಿನಗಳಲ್ಲಿ ರಾಜಕೀಯ ಪುನರ್ಜನ್ಮ ತಾಳಲಿ ಎಂದು ಆಶಿಸುತ್ತಾ ಹುಟ್ಟು ಹಬ್ಬದ ಶುಭಾಶಯಗಳು ಕೋರುತ್ತಿದ್ದೇವೆ” ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸೇವಾದಳ ತಾಲ್ಲೂಕು ಕಾರ್ಯಕರ್ತ ಕೊತ್ತೇಗಾಲ…
ತಿಪಟೂರು: ತಿಪಟೂರು ನಗರದ ಪುರಾತನ ಕಾಲದ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ಅಭಿವೃದ್ಧಿ ಹೆಸರಿನಲ್ಲಿ, ದೇವಸ್ಥಾನದ ಆವರಣದಲ್ಲಿ ಹಳ್ಳಿ ಮರ, ಬೇವಿನ ಮರ, ಹತ್ತಿಮರ, ಬಿಲ್ಪತ್ರೆ ಮರ ಹಾಗೂ ಬನ್ನಿಮರಗಳಿದ್ದು ಹತ್ತಾರು ವರ್ಷಗಳಿಂದ ಭಕ್ತರು ಇವುಗಳನ್ನು ಪೂಜಿಸಿಕೊಂಡು ಬರುತ್ತಿದ್ದಾರೆ. “ದೇವರ ಹೆಸರಿನ ಅಭಿವೃದ್ಧಿಯಲ್ಲಿ ಪೌಳಿ ನಿರ್ಮಿಸಲು ಅಡ್ಡವಾಗುತ್ತಿದೆ ಎಂದು, ಇಂಥ ಫಲವತ್ತಾದ ದೈವಿಕ ಮರಗಳನ್ನು ಕಡಿಸಲು ಯಾವುದೇ ಕಾರಣಕ್ಕೆ ಬಿಡುವುದಿಲ್ಲ” ಎಂದು ಬಿಜೆಪಿ ಮುಖಂಡ ಲೋಕೇಶ್ವರ್ ತಿಳಿಸಿದರು. “ಮೊನ್ನೆ ತಾನೆ ಪರಿಸರ ದಿನಾಚರಣೆ ನಡೆದಿದ್ದು ಎಲ್ಲಾ ಕಡೆ ಗಿಡಗಳನ್ನು ನೆಟ್ಟು ಪೋಷಿಸಿ ಬೆಳೆಸಲು ಅರಿವು ಮೂಡಿಸುತ್ತಾರೆ. ಮರುದಿನವೇ 40 ರಿಂದ 50 ವರ್ಷದ ಮರಗಳನ್ನು ಕಡಿಸಲು ಪ್ರಯತ್ನಿಸುತ್ತಾರೆ” ಎಂದು ಲೋಕೇಶ್ವರ್ ತಿಳಿಸಿದರು. ಈ ಸುದ್ದಿಗೋಷ್ಠಿಯಲ್ಲಿ ಮಾಜಿ ನಗರಸಭೆ ಮಾಜಿ ಉಪಾಧ್ಯಕ್ಷ ಸೊಪ್ಪ ಗಣೇಶ್ ಅಯ್ಯಪ್ಪ ಸ್ವಾಮಿ ಭಕ್ತರು ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯು ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದ್ದು, ಶೀಘ್ರವೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಶೇ.10ರಿಂದ 15 ರಷ್ಟು ಹೆಚ್ಚಳ ಮಾಡಲು ಚಿಂತನೆ ಮಾಡಲಾಗಿದೆ. ಸಾರಿಗೆ ಬಸ್ ಪ್ರಯಾಣ ದರ ಏರಿಕೆಗೆ ಸಂಬಂಧಿಸಿದಂತೆ ಚರ್ಚೆಗಳು ಶುರುವಾಗಿದ್ದು, ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಡೀಸೆಲ್, ಬಿಡಿ ಭಾಗಗಳ ದರ ಹೆಚ್ಚಳ, ಸಿಬ್ಬಂದಿ ವೇತನ ಹೆಚ್ಚಳ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಖರ್ಚು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಾರಿಗೆ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಬೇಡಿಕೆ ಸಲ್ಲಿಸುವ ಸಾಧ್ಯತೆ ಇದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಳಗಾವಿ: ಖನಗಾಂವ ಕೆಎಚ್ ಗ್ರಾಮದ ಬಳಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರನೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ವಿಠ್ಠಲ ದತ್ತಾ ಲೋಕರೆ(29) ಮೃತ ದುರ್ದೈವಿಯಾಗಿದ್ದಾರೆ. ಬೆಳಗಾವಿ ಕಡೆಯಿಂದ ಬರುತ್ತಿದ್ದ ಬಸ್ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿತ್ತು. ಅಪಘಾತವನ್ನು ನಿಯಂತ್ರಿಸಲು ಹೋಗಿ ಬಸ್ ಕೂಡ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಾರಿಹಾಳ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕರ್ನಾಟಕಕ್ಕೆ ಮುಂದಿನ 7 ದಿನ ಮಳೆ ಅಬ್ಬರಿಸಲಿದ್ದು, ಮುನ್ನೆಚ್ಚರಿಕೆ ನೀಡಲಾಗಿದೆ. ಕರ್ನಾಟಕದ ಯಾವ ಯಾವ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಲಿದೆ? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ. ಮತ್ತೊಂದು ಕಡೆ ಕರ್ನಾಟಕದ ಬಹುತೇಕ ಕೆರೆಗಳು & ಹಳ್ಳಕೊಳ್ಳ ತುಂಬಿ ಹರಿಯುತ್ತಿವೆ. ಹೀಗಿದ್ದಾಗಲೇ ಕರಾವಳಿ ಜಿಲ್ಲೆಗಳಾದ ಉಡುಪಿ & ದಕ್ಷಿಣ ಕನ್ನಡದಲ್ಲಿ ಭಾರಿ ಭರ್ಜರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಹಾಗೇ ಉತ್ತರ ಕನ್ನಡದ ಹಲವು ಪ್ರದೇಶಗಳಲ್ಲಿ ಭರ್ಜರಿ ಮಳೆ ಬೀಳುವ ಎಚ್ಚರಿಕೆ ನೀಡಲಾಗಿದೆ. ಕಾವೇರಿ ತವರು ಕೊಡಗು ಜಿಲ್ಲೆ ಸೇರಿ ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು & ಉಡುಪಿ, ಚಾಮರಾಜನಗರ, ಮಂಡ್ಯ, ಮಂಗಳೂರು, ಉತ್ತರ ಕನ್ನಡ, ತುಮಕೂರು & ಹಾಸನ ಜಿಲ್ಲೆಯ ಬಹುತೇಕ ಭಾಗದಲ್ಲಿ ಭರ್ಜರಿ ಮಳೆ ಆಗಲಿದೆ. ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಿಗೆ ಭರ್ಜರಿ ಮಳೆ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಉತ್ತರ ಕರ್ನಾಟಕದಲ್ಲೂ ಮಳೆ ಅಬ್ಬರ ತೋರಿಸಲಿದ್ದು, ಉತ್ತರ ಕರ್ನಾಟಕದ ವಿಜಯಪುರ & ಕಲಬುರಗಿ, ರಾಯಚೂರು ಸೇರಿ ಯಾದಗಿರಿ, ಬೀದರ್, ಬಾಗಲಕೋಟೆ, ಬೆಳಗಾವಿ,…
ಮೈಸೂರು: ಮೈಸೂರಿನ ಹಳೆ ಕೆಸರೆಯ ಗುಜರಿಯಲ್ಲಿ ವಿಷಾನಿಲ ಸೋರಿಕೆಯಿಂದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಪ್ರಕರಣ ನಡೆದಿದೆ. ಸುಮಾರು 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುತ್ತಮುತ್ತಲ ಜನರಿಗೆ ಕೆಮ್ಮು, ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296