Subscribe to Updates
Get the latest creative news from FooBar about art, design and business.
- ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?
- ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್ ಲೈನ್ ಅರ್ಜಿ ಆಹ್ವಾನ
- ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
- NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ಜು. 29ರಂದು ಔರಾದ್ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
- ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
- ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
- ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
Author: admin
ಚಂದ್ರನ ಅಂಗಳದಲ್ಲಿನ ಕಲ್ಲು ಮತ್ತು ಮಣ್ಣಿನ ಮಾದರಿಯನ್ನು ಸಂಗ್ರಹಿಸಿ ತರಲಿರುವ ತನ್ನ ಬಾಹ್ಯಾಕಾಶ ನೌಕೆಯು ಭೂಮಿಯತ್ತ ಪ್ರಯಾಣ ಆರಂಭಿಸಿದೆ ಎಂದು ಚೀನಾ ಹೇಳಿಕೆ ನೀಡಿದೆ. ಕಳೆದ ತಿಂಗಳು ಉಡಾವಣೆ ಮಾಡಲಾಗಿದ್ದ ಚೇಂಜ್’ಇ-6 ಹೆಸರಿನ ಬಾಹ್ಯಾಕಾಶ ನೌಕೆಯು ಇತ್ತೀಚೆಗೆ ಚಂದ್ರನ ಮೇಲ್ಮೈನಲ್ಲಿ ಇಳಿದಿತ್ತು. ಈಗಾಗಲೇ ಚಂದ್ರನ ಮೇಲ್ಮೈನಲ್ಲಿ ಸಂಗ್ರಹಿಸಿರುವ ಮಣ್ಣು ಮತ್ತು ಕಲ್ಲಿನ ಮಾದರಿಯನ್ನು ನೌಕೆಯಲ್ಲಿನ ಪೆಟ್ಟಿಗೆಯಲ್ಲಿಟ್ಟುಕೊಂಡಿದ್ದು, ಜೂನ್ 25ರಂದು ಚೀನಾದ ಇನ್ನರ್ ಮಂಗೋಲಿಯಾ ಪ್ರಾಂತ್ಯದ ಮರುಭೂಮಿಯಲ್ಲಿ ಬಂದಿಳಿಯಲಿದೆ ಎಂದು ಚೀನಾ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಉತ್ತರಾಖಂಡದ ಸಹಸ್ತ್ರ ತಾಲ್ ಗೆ ಚಾರಣಕ್ಕೆ ತೆರಳಿ ಹವಾಮಾನ ವೈಪರೀತ್ಯದಿಂದ ಅಪಾಯಕ್ಕೆ ಸಿಲುಕಿದ್ದ ಚಾರಣಿಗರ ಪೈಕಿ, ರಕ್ಷಿಸಲ್ಪಟ್ಟ 13 ಮಂದಿಯ ತಂಡವು ಗುರುವಾರ ರಾತ್ರಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಚಿವ ಕೃಷ್ಣಬೈರೇಗೌಡ ಅವರ ಜೊತೆ ವಿಮಾನದಲ್ಲಿ 13 ಮಂದಿ ಕನ್ನಡಿಗರು ಆಗಮಿಸಿದ್ದಾರೆ. ವಿಮಾನ ನಿಲ್ದಾಣದ ಬಳಿ ಕಾದಿದ್ದ ಅವರ ಕುಟುಂಬಸ್ಥರು ಸುರಕ್ಷಿತವಾಗಿ ಬಂದ ಚಾರಣಿಗರನ್ನು ಸ್ವಾಗತಿಸಿದರು. ಹವಾಮಾನ ವೈಪರೀತ್ಯದಿಂದ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಬುಧವಾರ ಐದು ಮೃತದೇಹಗಳು ಸಿಕ್ಕಿದ್ದವು. ನಾಪತ್ತೆಯಾದ ನಾಲ್ವರ ಪತ್ತೆಗೆ ಪ್ರತಿಕೂಲ ಪರಿಸ್ಥಿತಿಯಿಂದ ಬುಧವಾರ ಸಂಜೆ ಕಾರ್ಯಾಚರಣೆ ಮುಂದುವರಿಸಲು ಸಾಧ್ಯವಾಗಿರಲಿಲ್ಲ. ಗುರುವಾರ ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಆರಂಭಿಸಿ ನಾಲ್ವರ ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ. ಚಾರಣಿಗರಾದ ಸೌಮ್ಯಾ ಕೆನಾಲೆ, ಸ್ಮೃತಿ, ಶೀನಾ ಲಕ್ಷ್ಮಿ, ಎಸ್.ಶಿವ ಜ್ಯೋತಿ, ಅನಿಲ್, ಭರತ್ ಬೊಮ್ಮನಗೌಡರ್, ಮಧುಕಿರಣ್ ರೆಡ್ಡಿ, ಬಿ.ಎಸ್.ಜೈಪ್ರಕಾಶ್,ಎಸ್. ಸುಧಾಕರ್, ಎಂ.ಕೆ. ವಿನಯ್, ವಿವೇಕ್ ಶ್ರೀಧರ್, ಎಂ.ನವೀನ್, ರಿತಿಕಾ ಜಿಂದಾಲ್ ಅವರನ್ನು ವಿಮಾನದ…
ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿಯಾಗಿ ಬಿಂಬಿಸುವ ಆರೋಪ ಹೊತ್ತಿರುವ ಹಿಂದಿ ಭಾಷೆಯ “ಹಮಾರೆ ಬಾರಾಹ್” ಸಿನೆಮಾವನ್ನು ಕರ್ನಾಟಕದಲ್ಲಿ ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. “ಹಮಾರೆ ಬಾರಾಹ್” ಸಿನೆಮಾ ಜೂ.7ರಂದು ಬಿಡುಗಡೆ ಆಗಲಿದ್ದು, ಈ ಚಿತ್ರದ ಟ್ರೈಲರ್ ಅನ್ನು ಮಾಧ್ಯಮ, ಸಾಮಾಜಿಕ ಜಾಲತಾಣ, ಸಿನೆಮಾ ಮಂದಿರ, ಖಾಸಗಿ ಟಿವಿ ಚಾನಲ್ ಸೇರಿದಂತೆ ಯಾವುದೇ ರೀತಿಯಲ್ಲೂ ಪ್ರಸಾರ ಮಾಡುವುದನ್ನು ರಾಜ್ಯದಲ್ಲಿ ನಿಷೇಧಿಸಲಾಗಿದೆ ಎಂದು ರಾಜ್ಯ ಸರಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ರಾಜ್ಯ ಸರಕಾರದ ಆದೇಶ ಉಲ್ಲಂಘನೆ ಕಂಡುಬಂದಲ್ಲಿ, ಕಾನೂನು ರೀತ್ಯಾ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಎಚ್ಚರಿಕೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
2024ರ ವಿಧಾನ ಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ 3ನೇ ಭಾರಿ ಪ್ರಧಾನಿಯಾಗಿ ಗದ್ದುಗೆ ಏರಲು ನರೇಂದ್ರ ಮೋದಿ ಸಿದ್ದರಾಗಿದ್ದಾರೆ. ಮೋದಿ ಗೆಲುವಿಗೆ ವಿಶ್ವದ ಸಾಕಷ್ಟು ನಾಯಕರು ಶುಭ ಹಾರೈಸಿದ್ದಾರೆ. ದೇಶ ವಿದೇಶದ ಗಣ್ಯರು ಮೋದಿಗೆ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಇದೀಗ ಅಮೆರಿಕದ ಖ್ಯಾತ ಗಾಯಕಿ, ನಟಿ ಮೇರಿ ಮಿಲ್ಬೆನ್ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ನಿಮ್ಮನ್ನು ಜನರು ಮಾತ್ರವಲ್ಲ, ದೇವರೂ ಆಯ್ಕೆ ಮಾಡಿದ್ದಾರೆ ಎಂದು ನಟಿ ಸಂದೇಶ ಕಳುಹಿಸಿದ್ದಾರೆ. ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿರುವ ಮಿಲ್ಬೆನ್, ‘ನವ ಭಾರತ’ವನ್ನು ತರಲು ದೇವರ ರಾಯಭಾರಿ ಮತ್ತು ಜನರ ಧ್ವನಿಯಾಗಬೇಕೆಂದು ಅವರು ಪೋಸ್ಟ್ ಮಾಡಿದ್ದಾರೆ. ನನ್ನ ಪ್ರೀತಿಯ ಭಾರತ, ನಮಸ್ತೆ. ಇಂದು ಭಾರತ ಮತ್ತು ವಿಶ್ವಕ್ಕೆ ಐತಿಹಾಸಿಕ ದಿನವಾಗಿದೆ. ನನ್ನ ಸ್ನೇಹಿತ, ಗೌರವಾನ್ವಿತ ಪ್ರಧಾನ ಮಂತ್ರಿಗಳ ಮರು ಆಯ್ಕೆ ಮತ್ತು ನವ ಭಾರತದ ಉದಯ. ಪ್ರಧಾನಿ ಮೋದಿ, ನಿಮ್ಮ ಪುನರಾಯ್ಕೆಗಾಗಿ ನಿಮ್ಮನ್ನು ಅಭಿನಂದಿಸುವ ಅಮೆರಿಕದಿಂದ ಮೊದಲಿಗರಲ್ಲಿ…
ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿ 4.77 ಕೋಟಿ ರೂ. ಮೌಲ್ಯದ ಚಿನ್ನವನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿರುವುದಾಗಿ ವರದಿಯಾಗಿದೆ. ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಆಗಮಿಸಿದ ವಿಮಾನದಲ್ಲಿದ್ದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಡಿಆರ್ ಐ ಬೆಂಗಳೂರು ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದು ಇಬ್ಬರಿಂದ 6 ಕೆಜಿ 834 ಗ್ರಾಂ ಚಿನ್ನ ಜಪ್ತಿ ಮಾಡಿ ತನಿಖೆ ಮುಂದುವರೆಸಲಾಗಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೆಕೋಟೆ ಗ್ರಾಮದಲ್ಲಿ ಇಬ್ಬರು ಬಾಲಕಾರ್ಮಿಕರನ್ನ ಕಾರ್ಮಿಕ ಇಲಾಖೆಯ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿ ಜಂಟಿಯಾಗಿ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವುದಾಗಿ ಬಂದ ದೂರಿನ ಮೇರೆಗೆ ತಪಾಸಣೆಯನ್ನು ಕೈಗೊಂಡು ಇಬ್ಬರು ಬಾಲ ಕಾರ್ಮಿಕರನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೆಕೋಟೆ ಗ್ರಾಮದಲ್ಲಿ ರಕ್ಷಿಸಲಾಗಿದೆ. ಹಾಗೆಯೇ ಮೆಳೆಕೋಟೆ ಗ್ರಾಮದಲ್ಲಿ ವಿವಿಧ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಸ್ಟಿಕರ್ ಮತ್ತು ಪಾಂಪ್ಲೆಟ್ಸ್ ಗಳನ್ನು ನೀಡಿ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಜಾಗೃತಿಯನ್ನು ಮೂಡಿಸಲಾಯಿತು. ರಕ್ಷಿಸಲಾದ ಮಕ್ಕಳನ್ನು ತಾತ್ಕಾಲಿಕ ಪುನರ್ವಸತಿ ಕೇಂದ್ರದಲ್ಲಿ ಇರಿಸಲಾಗಿದೆ. ತನಿಖಾ ಕಾರ್ಯಾಚರಣೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ ಹೆಚ್.ಆರ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸುಬ್ಬಾರಾವ್. ಎಸ್, ಕಾರ್ಮಿಕ ನಿರೀಕ್ಷಕ ದಯಾನಂದ ಸಾಗರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ರಶ್ಮಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂಧಿ ಶ್ರೀಧರ್ ಹಾಗೂ…
ಅಮೇರಿಕಾ ವಿರುದ್ಧ ಪಾಕಿಸ್ತಾನಕ್ಕೆ ಸೋಲು ಕಂಡಿದೆ. ಡಲ್ಲಾಸ್ ನಲ್ಲಿ ನಡೆದ ಅಮೇರಿಕಾ-ಪಾಕ್ ನಡುವಿನ ಟಿ20 ವಿಶ್ವಕಪ್ ಪಂದ್ಯ ಆರಂಭದಲ್ಲಿ ಸಮಬಲ ಕಂಡು ಸೂಪರ್ ಓವರ್ ನಲ್ಲಿ ಕೊನೆಗೊಂಡಿತು. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಅಮೇರಿಕಾ ತಂಡ, ಪಾಕಿಸ್ತಾನ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 159 ರನ್ ಗಳಿಗೆ ಕಟ್ಟಿಹಾಕಿತು. ಅಮೇರಿಕಾ ಪರ ನೋಸ್ತೂಶ್ ಕೆಂಜಿಗೆ 30 ರನ್ ನೀಡಿ 3 ವಿಕೆಟ್ ಪಡೆದರೆ, ಸೌರಭ್ ನೇತ್ರವಲ್ಕರ್ 18 ರನ್ ನೀಡಿ 2 ವಿಕೆಟ್ ಪಡೆದರು. ಅಲಿಖಾನ್ 30 ರನ್, ಜಸ್ದೀಪ್ ಸಿಂಗ್ 37 ರನ್ ನೀಡಿ ತಲಾ 1 ವಿಕೆಟ್ ಪಡೆದರು. ಪಾಕ್ ಪರ ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ 8 ಎಸೆತಗಳನ್ನು ಎದುರಿಸಿ 9 ರನ್ ಗಳಿಸಿ ಬೇಗ ಔಟ್ ಆದರೆ, ಬಾಬರ್ ಆಜಮ್ 43 ಎಸೆತಗಳಲ್ಲಿ 44 ರನ್ ಗಳಿಸಿದರೆ, ಶಾದಬ್ ಖಾನ್ 25 ಎಸೆತಗಳಲ್ಲಿ 40 ರನ್ ಗಳಿಸಿದರು. 160…
ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್. ನಗರ ಸಂತ್ರಸ್ತೆ ಕಿಡ್ನ್ಯಾಪ್ ಕೇಸ್ ನಲ್ಲಿ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ಬಂಧನಕ್ಕೆ ಎಸ್.ಐ.ಟಿ ಹಲವು ಬಾರಿ ನೋಟಿಸ್ ಕೊಟ್ಟಿತ್ತು. ವಿಚಾರಣೆಗೆ ಹಾಜರಾಗಲು ನಿರಾಕರಿಸಿದ್ದ ಭವಾನಿ ರೇವಣ್ಣ ಅಧಿಕಾರಿಗಳು ಮನೆಗೇ ಬಂದು ವಿಚಾರಣೆ ನಡೆಸುವಂತೆ ತಿಳಿಸಿದ್ದರು ಎನ್ನಲಾಗಿದೆ. ಮನೆಗೆ ತೆರಳಿದಾಗ ವಿಚಾರಣೆಗೆ ಸಹಕರಿಸದ ಕಾರಣ ಎಸ್.ಐ.ಟಿ ಕೋರ್ಟ್ ಮೊರೆ ಹೋಗಿತ್ತು ಎನ್ನಲಾಗಿದೆ. ಈಗ ಕೋರ್ಟ್ ಬಂಧನ ವಾರಂಟ್ ಜಾರಿ ಮಾಡಿದ್ದು, ಇತ್ತೀಚೆಗೆ ಭವಾನಿ ರೇವಣ್ಣರನ್ನು ವಶಕ್ಕೆ ಪಡೆಯಲು ಹೊಳೆನರಸೀಪುರ ನಿವಾಸಕ್ಕೆ ತೆರಳಿದ್ದ ಎಸ್‌ಐಟಿ ಅಧಿಕಾರಿಗಳು ಸತತ 7 ಗಂಟೆ ಕಾದು ವಾಪಸ್ ಆದ ಘಟನೆ ನಡೆದಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ತುಮಕೂರಿನಲ್ಲಿ ನಿಲ್ಲದ ಮಳೆ ರಗಳೆಯಾಗಿದ್ದು ಕೆರೆಯಂತಾದ ಯಲ್ಲಾಪುರಕ್ಕೆ ಹೋಗುವ ಅಂಡರ್ ಪಾಸ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಮಳೆ ನೀರಿನಲ್ಲಿ ವಾಹನ ಸವಾರರ ಪರದಾಡುವಂತಾಗಿತ್ತು. ಅಂತರಸನಹಳ್ಳಿ ಅಂಡರ್ ಪಾಸ್ ಜಲಾವೃತವಾಗಿದ್ದು, ವಾಹನಗಳು ನೀರಿನಲ್ಲೇ ನಿಲ್ಲುವಂತಾಗಿತ್ತು. ಪಾವಗಡ, ಮಧುಗಿರಿ, ಕೊರಟಗೆರೆಗೆ ಹೋಗುವ ಪ್ರಯಾಣಿಕರ ಪರದಾಡಿದರು. ರಾಷ್ಟ್ರೀಯ ಹೆದ್ದಾರಿ 4ಕ್ಕೆ ಅಡ್ಡಲಾಗಿ ನಿರ್ಮಿಸಿರುವ ಅಂಡರ್ ಪಾಸ್ ಇದಾಗಿದ್ದು, ಅಂಡರ್ ಪಾಸ್ ನಿಂದ ನೀರು ಹೊರಗೆ ಹೋಗದೆ ಅಂಡರ್ ಪಾಸ್ ಜಲಾವೃತವಾಗಿದ್ದು, ನೀರಿನಲ್ಲೇ ಓಡಾಡುತ್ತಿರುವ ಕಾರು, ಬಸ್ ಸಾಮಾನ್ಯವಾಗಿತ್ತು. ಪ್ರತಿ ಬಾರಿ ಮಳೆ ಬಂದಾಗಲೂ ಜಲಾವೃತ್ತವಾಗುವ ಅಂಡರ್ ಪಾಸ್ ಕುರಿತು ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಪಕ್ಷ ಹಾಗೂ ಸರ್ಕಾರಗ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ನಾಗೇಂದ್ರ ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದರು. ಅದರಂತೆ ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ನೀಡಿದ್ದಾರೆ. ‘ನಾನು, ಗೃಹ ಸಚಿವರು ಸಚಿವ ನಾಗೇಂದ್ರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ. ಆದರೆ ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು(ಜೂ.6) ಅವರು ರಾಜೀನಾಮೆ ನೀಡಬಹುದು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮತದಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರ ವಜಾಕ್ಕೆ…