Author: admin

ಹಿಂದೂ ಧರ್ಮದಲ್ಲಿ, ಅಮವಾಸ್ಯೆ ದಿನವನ್ನು ಬಹಳ ವಿಶೇಷವೆಂದು ಪರಿಗಣಿಸಲಾಗುತ್ತದೆ ಮತ್ತು ಜ್ಯೇಷ್ಠ ಮಾಸದ ಅಮವಾಸ್ಯೆಯು ಅತ್ಯಂತ ಮಹತ್ವದ್ದಾಗಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಜ್ಯೇಷ್ಠ ಅಮವಾಸ್ಯೆಯ ದಿನದಂದು ಪೂರ್ವಜರಿಗೆ ತರ್ಪಣವನ್ನು ಅರ್ಪಿಸಿದರೆ, ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ ಮತ್ತು ಅವರು ತಮ್ಮ ಆಶೀರ್ವಾದವನ್ನು ನೀಡುತ್ತಾರೆ. ಅಮವಾಸ್ಯೆಯ ಜೊತೆಗೆ ಶನಿ ಜಯಂತಿ ಮತ್ತು ವತ್ ಸಾವಿತ್ರಿ ಉಪವಾಸವು ಈ ದಿನದಂದು ಬರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಜ್ಯೇಷ್ಠ ಅಮಾವಾಸ್ಯೆಯ ದಿನದಂದು, ಪೂರ್ವಜರಿಗೆ ಪ್ರಾರ್ಥನೆ ಸಲ್ಲಿಸುವುದರೊಂದಿಗೆ, ಅಖಂಡ ಸೌಭಾಗ್ಯವನ್ನು ಬಯಸಲು ಉಪವಾಸವನ್ನು ಆಚರಿಸಲಾಗುತ್ತದೆ ಮತ್ತು ಶನಿ ದೇವರನ್ನು ಸಹ ಪೂಜಿಸಲಾಗುತ್ತದೆ. ಜೂನ್ 5 ಅಥವಾ 6 ವೈದಿಕ ಕ್ಯಾಲೆಂಡರ್ ಪ್ರಕಾರ, ಜ್ಯೇಷ್ಠ ಅಮಾವಾಸ್ಯೆ ತಿಥಿ ಬುಧವಾರ ರಾತ್ರಿ, ಜೂನ್ 5, 2024 ರಂದು 7:54 ಕ್ಕೆ ಪ್ರಾರಂಭವಾಗುತ್ತದೆ. ಈ ದಿನಾಂಕವು ಗುರುವಾರ, ಜೂನ್ 6, 2024 ರಂದು ಸಂಜೆ 6:07 ಕ್ಕೆ ಕೊನೆಗೊಳ್ಳುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಮಾಜಿ ಸಿಎಂ ಬಿಎಸ್​ ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ ಹೊಂದಿದ್ದಾರೆ. ಕಳೆದ ಆರೇಳು ತಿಂಗಳಿನಿಂದ ಕಾ.ಪು ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಕಾಪು ಸಿದ್ದಲಿಂಗಸ್ವಾಮಿ  ನಿಧನರಾಗಿದ್ದಾರೆ. 2013ರಲ್ಲಿ ವರುಣದಲ್ಲಿ ಕಾಪು ಸಿದ್ದಲಿಂಗಸ್ವಾಮಿ ಅವರು ಕೆಜೆಪಿ ಅಭ್ಯರ್ಥಿಯಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೊಡೆ ತಟ್ಟಿದ್ದರು. ಆದರೆ ಕೆಲವೇ ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ ಅವರ ವಿರುದ್ಧ ಸೋಲುಂಡಿದ್ದರು. ವರುಣ ಕ್ಷೇತ್ರದ ಬಿಜೆಪಿಯಲ್ಲಿ ಹಿಡಿತ ಹೊಂದಿದ್ದ ಸಿದ್ದಲಿಂಗಸ್ವಾಮಿ ಅವರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದರು. ಕಾಪುಸಿ ಕರ್ನಾಟಕ ಪ್ರವಾಸೋಧ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಇಂದು ಮೈಸೂರಿನ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ಅಷ್ಟೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಕಾಪು ಅವರ ಆರೋಗ್ಯ ವಿಚಾರಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಭಾರೀ ಕುತೂಹಲ ಕೆರಳಿಸಿದ್ದ ಎನ್ ಡಿಎ ನಾಯಕರ ಸಭೆ ಮುಕ್ತಾಯಗೊಂಡಿದೆ. ಎನ್ ಡಿಎ ನಾಯಕನಾಗಿ ನರೇಂದ್ರ ಮೋದಿ 3ನೇ ಬಾರಿಗೆ ಆಯ್ಕೆಯಾಗಿದ್ದಾರೆ. ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಟಿಡಿಪಿ ಹಾಗೂ ಜೆಡಿಯು ಸೇರಿದಂತೆ ಎಲ್ಲಾ ಮಿತ್ರ ಪಕ್ಷಗಳು ಒಪ್ಪಿಗೆ ಸೂಚಿಸಿವೆ. ಮೋದಿ ಅವರು ಜೂನ್ 7 ರಂದು ಸಂಜೆ 5ಕ್ಕೆ ರಾಷ್ಟ್ರಭವನಕ್ಕೆ ತೆರಳಲಿದ್ದಾರೆ. ಅಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಈ ವೇಳೆ ಮೋದಿ ಅವರಿಗೆ ಎನ್ ಡಿಎ ನಾಯಕರು ಸಾಥ್ ನೀಡಲಿದ್ದಾರೆ. ಮೋದಿ ಅಧ್ಯಕ್ಷತೆಯಲ್ಲಿ ನಡೆದ ಎನ್ ಡಿಎ ಸಭೆಯಲ್ಲಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ಮುಖ್ಯಸ್ಥ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಎಲ್‌ ಜೆಪಿ(ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಅಮಿತ್ ಶಾ ಸೇರಿದಂತೆ…

Read More

ದೇಶದಲ್ಲಿ ಎನ್ ಡಿಎ ಅಧಿಕಾರಕ್ಕೆ ಬರಲಿದ್ದು, ಮತ್ತೊಮ್ಮೆ‌ ನರೇಂದ್ರ ಮೋದಿ ಅವರೇ ಪ್ರಧಾನಿ ಆಗುತ್ತಾರೆ. ಎಲ್ಲವನ್ನೂ ತಾಳ್ಮೆಯಿಂದ ಕಾದು ನೋಡಿ ಎಂದು ಮೈಸೂರು-ಕೊಡಗು ನೂತನ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿಶ್ವಾಸ ವ್ಯಕ್ತಪಡಿಸಿದರು. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನೂತನ ಸಂಸದರಾದ ಬಳಿಕ ಮೊದಲ ಬಾರಿಗೆ ಯದುವಂಶದ ಗುರುಗಳಾದ ಪರಕಾಲಶ್ರೀಗಳನ್ನ ಭೇಟಿ ಮಾಡಿದರು. ಜಗನ್ಮೋಹನ ಅರಮನೆ ಸಮೀಪ ಇರುವ ಪರಕಾಲ ಮಠಕ್ಕೆ ಭೇಟಿ ನೀಡಿ, ಮೈಸೂರು ರಾಜವಂಶಸ್ಥರ ರಾಜಗುರುಗಳ ಆಶೀರ್ವಾದ ಪಡೆದರು. ಅರಮನೆಯ ಪ್ರತಿ ಕಾರ್ಯದಲ್ಲೂ ಪರಕಾಲ ಮಠದ ಉಪಸ್ಥಿತಿ ಇರುತ್ತದೆ. ಅವರ ಉಪಸ್ಥಿತಿಯಲ್ಲಿಯೇ ಅರಮನೆ ಕಾರ್ಯವೈಖರಿಗಳು ಕಾರ್ಯಾರಂಭ ಮಾಡುತ್ತವೆ. ನಂತರ ಮಾತನಾಡಿದ ನೂತನ ಸಂಸದ ಯದುವೀರ್, ದೆಹಲಿಗೆ ಬರುವಂತೆ ಈಗಾಗಲೇ ಆಹ್ವಾನ ನೀಡಿದ್ದಾರೆ. ದೆಹಲಿಗೆ ತೆರಳಿ ಎಂಪಿ ಪ್ರಮಾಣ ವಚನ ಸ್ವೀಕರಿಸುವೆ. ಎನ್ ಡಿಎ ಹಾಗೂ ಐಎನ್ ಡಿಐಎ ಪ್ರತ್ಯೇಕ ಸಭೆಗಳ ವಿಚಾರ, ಯಾವುದೇ ಸಭೆ ನಡೆದರೂ ಅಂತಿಮವಾಗಿ ಎನ್ ಡಿಎ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.…

Read More

543 ಲೋಕಸಭಾ ಸೀಟುಗಳ ಪೈಕಿ 291ರಲ್ಲಿ ಬಿಜೆಪಿ ನೇತೃತ್ವದ ‘ಎನ್‌ ಡಿಎ’ ಮೈತ್ರಿಕೂಟ ಗೆಲುವು ಸಾಧಿಸಿದ್ದು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಮೋದಿಗೆ ವಿದೇಶಿ ನಾಯಕರು ಶುಭ ಹಾರೈಸಿದ್ದಾರೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಶ್ರೀಲಂಕಾ ನಾಯಕ ಮಹಿಂದ ರಾಜಪಕ್ಸೆ, ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್‌ ಮುಯಿಜು, ನೇಪಾಳದ ಪ್ರಧಾನಿ ಪುಷ್ಪಕಮಲ್‌ ದಹಲ್‌ ಪ್ರಚಂಡ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಶುಭ ಕೋರಿದ್ದಾರೆ. ‘ಹೊಸ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದಕ್ಕೆ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು. ನಿಮ್ಮ ಅಧಿಕಾರವಧಿಯಲ್ಲಿ ದೇಶ ಮತ್ತಷ್ಟು ಅಭಿವೃದ್ಧಿ ಸಾಧಿಸಲಿ’ ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಹಿಂದೆ ಮೋದಿ ಮತ್ತು ಮೆಲೋನಿ ಜೋಡಿ ಸಾಮಾಜಿಕ ಜಾಲತಾಣದಲ್ಲಿ ತಮಾಷೆಯಾಗಿ ಬಹಳ ವೈರಲ್ ಆಗಿತ್ತು. ಈಗ ಮತ್ತೆ ಆ ಟ್ರೆಂಡ್ ಮುನ್ನಲೆಗೆ ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 9 ಮಂದಿ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರಿನ ಸುಜಾತ (52), ಪದ್ಮಿನಿ ಹೆಗಡೆ (35), ಚಿತ್ರಾ (48), ಸಿಂಧು (45), ವೆಂಕಟೇಶ್‌ ಪ್ರಸಾದ್‌ (52), ಅನಿತಾ (61), ಆಶಾ ಸುಧಾಕರ (72), ಪದ್ಮನಾಭನ್ ಕೆಪಿಎಸ್‌ (50) ವಿನಾಯಕ್ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ 18, ಪುಣೆಯಿಂದ ಒಬ್ಬರು ಜೊತೆ ಟ್ರೆಕ್ಕಿಂಗ್‌ ಗೈಡ್‌ಗಳಾಗಿ ಉತ್ತರ ಕಾಶಿಯ ಮೂವರು ನಿವಾಸಿಗಳು ತೆರಳಿದ್ದರು. ಉತ್ತರಾಖಂಡದ ಸಹಸ್ತ್ರ ತಾಲ್‌ನಲ್ಲಿ ಸಿಲುಕಿದ್ದ ಚಾರಣಿಗರ ಪೈಕಿ ಸೌಮ್ಯಾ, ವಿನಯ, ಶಿವಜ್ಯೋತಿ, ಸುಧಾಕರ್‌, ಸ್ಮೃತಿ, ಸೀನಾ ಅವರನ್ನು ರಕ್ಷಣೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ. 13 ಜನರ ಸ್ಥಿತಿ ಗಂಭೀರವಾಗಿದ್ದು ವಾಯು ಪಡೆಯಿಂದ ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬಿಜೆಪಿ ಕೇಂದ್ರದಲ್ಲಿ ಸತತ ಮೂರನೇ ಸರ್ಕಾರವನ್ನು ರಚಿಸುವ ಬಗ್ಗೆ ಸಕಲ ತಯಾರಿಗಳು ನಡೆಯುತ್ತಿವೆ. ಹಳೆ ಸರ್ಕಾರ ವಿಸರ್ಜಿಸಿ ಮಿತ್ರ ಪಕ್ಷಗಳೊಂದಿಗೆ ಹೊಸ ಸರ್ಕಾರ ರಚನೆ ಪ್ರಧಾನಿ ಮೋದಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ವೇಳೆ ನರೇಂದ್ರ ಮೋದಿ ಮತ್ತೆ ಜೂನ್ 8ಕ್ಕೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಾರಿ ಚುನಾವಣಾ ಫಲಿತಾಂಶ ಬದಲಾವಣೆಗೆ ಮುಸ್ಲಿಂ ಮತದಾರರೇ ಹೆಚ್ಚಿನ ಪ್ರಾಬಲ್ಯ ಗಳಿಸಿದ್ದಾರೆ ಎನ್ನಲಾಗಿದೆ. ಈ ಬಾರಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಸಂಸದರ ಆಯ್ಕೆಯಾಗಿರುವ ಪ್ರಮಾಣವೂ ಹೆಚ್ಚಾಗಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿರುವ 543 ಸ್ಥಾನಗಳಲ್ಲಿ 15 ಮುಸ್ಲಿಂ ಅಭ್ಯರ್ಥಿಗಳು ಗೆದ್ದಿದ್ದು, ಇವರು ಲೋಕಸಭೆಗೆ ಪ್ರವೇಶಿಸಲಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿಯನ್ನು ಸೋಲಿಸಿ ಸಂಸತ್​ ಪ್ರವೇಶಿಸಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 78 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದರು. ಅವರಲ್ಲಿ 15 ಮಂದಿ ಆಯ್ಕೆಯಾಗಿದ್ದಾರೆ.…

Read More

ರಾಜ್ಯಾದ್ಯಂತ ಶಕ್ತಿ ಯೋಜನೆಯಲ್ಲಿ ಹೊಸ ನಿಯಮ ಜಾರಿ ತರಲಾಗಿದೆ. ಹೌದು, KSRTC ನಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಗೆ ಕೊನೆಗೂ ಹೊಸ ನಿಯಮಗಳನ್ನು ತರಲಾಗಿದೆ. ಕರ್ನಾಟಕ ರಾಜ್ಯ ಸಾರಿಗೆ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಇತ್ತೀಚೆಗೆ ಹೊಸ ಆದೇಶವನ್ನು ಹೊರಡಿಸಿದ್ದು, ಅದರ ಪ್ರಕಾರ ಉಚಿತ ಟಿಕೆಟ್‌ ನೊಂದಿಗೆ ಬಸ್ ‌ನಲ್ಲಿ ಪ್ರಯಾಣಿಸುವ ಮಹಿಳೆಯರು ಟಿಕೆಟ್ ಕಳೆದುಕೊಂಡರೆ ದಂಡ ವಿಧಿಸಲಾಗುತ್ತದೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ವಿತರಿಸುವ ಪಿಂಕ್ ಟಿಕೆಟ್‌ ಕಳೆದುಹೋದರೆ, ಬಸ್ ಕಂಡಕ್ಟರ್‌ನಿಂದ ಟಿಕೆಟ್‌ ಗೆ ಹತ್ತು ರೂಪಾಯಿ ದಂಡ ವಿಧಿಸಲಾಗುತ್ತದೆ. ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಉಚಿತ ಟಿಕೆಟ್‌ ವಿತರಣೆಯ ಸಂದರ್ಭದಲ್ಲಿ ನಿರ್ವಾಹಕರು ಬಳಸುವ ಟಿಕೆಟ್ ವಿತರಣಾ ಯಂತ್ರವನ್ನು ಹಸ್ತಾಂತರಿಸುವ ಸಮಯದಲ್ಲಿ ಪ್ರಯಾಣಿಕರಿಗೆ ಟಿಕೆಟ್ ಅನ್ನು ಹಸ್ತಚಾಲಿತವಾಗಿ ವಿತರಿಸಬೇಕು. ಆದರೆ ಆ ಟಿಕೆಟ್‌ ಗಳಲ್ಲಿ ಘಟಕ, ವಿಭಾಗ, ಮತ್ತು ವೇಳಾಪಟ್ಟಿಯ ಆಯ್ಕೆಗಳಲ್ಲಿ ಸ್ಥಳವನ್ನು ಖಾಲಿ ಬಿಡಲಾಗಿದೆ. ಇವೆಲ್ಲವನ್ನೂ ನಿರ್ವಾಹಕರು ಭರ್ತಿ ಮಾಡಿ ಅವರ ಸಹಿ ನಂತರ ಮಹಿಳೆಯರಿಗೆ ಪಿಂಕ್ ಟಿಕೆಟ್…

Read More

ಇನ್‌ ಫೋಸಿಸ್‌ ಕಂಪನಿಯಲ್ಲಿ ಸಾಫ್ಟ್‌ ವೇರ್‌ ಎಂಜಿನಿಯರ್‌ ಮಗ, ತಂದೆ- ತಾಯಿಯ ಜಗಳ ಬಿಡಿಸಲು ಹೋಗಿ ಕೊಲೆಯಾಗಿದ್ದಾನೆ ಎಂದು ವರದಿ ತಿಳಿಸಿದೆ. ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ ನಿನ್ನೆ ಜೂನ್ 5 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಯಶವಂತ್(23) ತಂದೆಯಿಂದಲೇ ಕೊಲೆಯಾಗಿದ್ದಾನೆ ಎನ್ನಲಾಗಿದ್ದು, ಸರ್ಜಾಪುರ ಸಮೀಪದ ಮ್ಯಾಟ್ರಿಕ್ಸ್ ಎಂಬ ಕಂಪನಿಯಲ್ಲಿ ಯಶವಂತ್‌ ಸಾಫ್ಟ್‌ ವೇರ್ ಇಂಜಿನಿಯರ್ ಆಗಿದ್ದ. ಮೃತನ ಅಜ್ಜಿ ಕಾಯಿಲೆ ಬಿದ್ದು ಹಾಸಿಗೆ ಹಿಡಿದಿದ್ದು, ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಅಪ್ಪ ಅಮ್ಮನ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಜಗಳ ಬಿಡಿಸಲು ಹೋದ ಮಗನನ್ನು ಹೆದರಿಸಲು ತಂದೆ ಅಡುಗೆ ಮನೆಯಿಂದ ಚಾಕು ತಂದು ಇರಿಯಲು ಹೋಗಿದ್ದಾನೆ. ಚಾಕು ಯುವಕನ ಎದೆಗೆ ಆಳವಾಗಿ ನಾಟಿ ಪ್ರಾಣ ಹೋಗಿದೆ ಎನ್ನಲಾಗಿದೆ. ಯಶವಂತ ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಎಂಜಿನಿಯರ್ ವೃತ್ತಿ ಮಾಡುತ್ತ, ತಂದೆ ಮಾಡಿದ್ದ ಸಾಲ ಸಹ ತೀರಿಸುತ್ತಿದ್ದ.…

Read More

‘ಲಿವಿಂಗ್ ಟುಗೆದರ್’ ಎಂಬಂತೆ ಜೀವನ ನಡೆಸುತ್ತಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ಜೂ.೫ರಂದು ವರದಿಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಜೋಡಿ, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಪ್ರಭು(38), ಲಕ್ಕಮ್ಮ(30) ಮೃತರು ಎಂದು ಗುರುತಿಸಲಾಗಿದೆ. ಪ್ರಭು ಡ್ರೈವರ್ ಕೆಲಸ ಮಾಡುತ್ತಿದ್ದ ಮತ್ತು ಲಕ್ಕಮ್ಮ ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕಳೆದ ಕೆಲ ವರ್ಷಗಳ ಹಿಂದೆ ಒಬ್ಬರಿಗೊಬ್ಬರು ಪರಿಚಿಯವಾಗಿತ್ತು. ಹೀಗಾಗಿ ಇಬ್ಬರು ಒಂದೇ ಮನೆಯಲ್ಲಿ ಸಹಜೀವನ ನಡೆಸುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ಸ್ಥಳೀಯರು ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಕೊಳೆತ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More