Author: admin

ಸರಗೂರು: ಶಾಸಕ ಅನಿಲ್ ಚಿಕ್ಕಮಾದು ರವರು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಸಂಘದ ನಿರ್ದೇಶಕ ಆಯ್ಕೆಯಾದ ಹಿನ್ನೆಲೆಯಲ್ಲಿ ಕೆ.ಬೆಳತ್ತೂರು ಗ್ರಾ.ಪಂ. ಸದಸ್ಯರು ಹಾಗೂ ಮುಖಂಡರು ಶಾಸಕ ಅನಿಲ್ ಚಿಕ್ಕಮಾದು ರವರ ನಿವಾಸಕ್ಕೆ ತೆರಳಿ ಹೂ ಗುಚ್ಛ ಹಾಗೂ ಸಿಹಿ ತಿನ್ನಿಸಿ ಗೌರವ ಸಲ್ಲಿಸಿದರು. ನಂತರ ಕೆ.ಬೆಳತ್ತೂರು ಗ್ರಾ.ಪಂ. ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಸದಸ್ಯ ರುದ್ರಯ್ಯ ಮಾತನಾಡಿ, ನಮ್ಮ ತಾಲೂಕಿನ ಅಭಿವೃದ್ಧಿಕಾರ ಜನಪ್ರಿಯ ಶಾಸಕ ಎಂದು ಹೆಸರು ಪಡೆದುಕೊಂಡಿರುವ ವ್ಯಕ್ತಿ.ಯಾವುದೇ ಕ್ಷೇತ್ರದಲ್ಲಿ ಚುನಾವಣಾ ಸ್ಪರ್ಧೆ ಮಾಡಿದರೂ ಅಲ್ಲಿ ಅವರು ವಿಜಯಶಾಲಿಯಾಗಿ ಬರುತ್ತಿದ್ದಾರೆ ಎಂದರು. ತಂದೆ ದಿ ಮಾಜಿ ಶಾಸಕ ಚಿಕ್ಕಮಾದು ಹಾಗೂ ದಿ ಮಾಜಿ ಸಂಸದ ಆರ್.ಧ್ರುವನಾರಾಯಣ್ ರವರ ಶಿಷ್ಯರಾಗಿ ಅವರ ಹಾದಿಯಲ್ಲಿ ಬರುವುದರಿಂದ ಬೆಳೆವಣಿಗೆ ಇನ್ನೂ ಉನ್ನತ ಮಟ್ಟಕ್ಕೆ ಅವಕಾಶ ಕಲ್ಪಿಸುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯ ರುದ್ರಯ್ಯ, ಬಿ.ಎಂ. ಪ್ರಕಾಶ್, ನಾಗೇಂದ್ರ, ಗೋಪಾಲ್ ರಾಜು,…

Read More

ತುಮಕೂರು: ಜಿಲ್ಲಾಡಳಿತದ ವತಿಯಿಂದ ಆಚರಿಸುವ ತುಮಕೂರು ದಸರಾ– 2025ರ ಅಂಗವಾಗಿ ಸೆಪ್ಟೆಂಬರ್ 27ರಂದು ಹಮ್ಮಿಕೊಂಡಿರುವ ಮಹಿಳಾ ಮತ್ತು ಮಕ್ಕಳ ದಸರಾ ಕಾರ್ಯಕ್ರಮದಡಿ ಮಹಿಳೆಯರು ಹಾಗೂ ಮಕ್ಕಳಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಮಹಿಳೆಯರಿಗೆ ರಂಗೋಲಿ ಸ್ಪರ್ಧೆ (ಚುಕ್ಕಿ ಮತ್ತು ಎಳೆ ರಂಗೋಲಿ), ಲೆಮನ್ ಅಂಡ್ ಸ್ಪೂನ್, ಲೆಗ್ ಟೈಡ್ ರೇಸ್, ಮ್ಯೂಸಿಕಲ್ ಛೇರ್, ಹಗ್ಗ–ಜಗ್ಗಾಟ, ತಾಯಿ ಮತ್ತು ಮಗುವಿನ (6 ವರ್ಷದವರೆಗೆ) ಸಾಂಪ್ರದಾಯಿಕ ಉಡುಗೆ ವೇಷಭೂಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವವರು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ, ಎಂ.ಜಿ.ರಸ್ತೆ, ತುಮಕೂರು ಇವರ ಕಚೇರಿಯಲ್ಲಿ ಸೆಪ್ಟೆಂಬರ್ 20ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9901890079, 9606599437ನ್ನು ಸಂಪರ್ಕಿಸಬಹುದಾಗಿದೆ ಎಂದು ಉಪನಿರ್ದೇಶಕ ಡಾ.ಸಿದ್ದರಾಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೀದರ್: ಜಿಲ್ಲೆಯ ತಂದೆ ಹಾಗೂ ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಕಾಲುವೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಭಾಲ್ಲಿ ತಾಲೂಕಿನ ಮೂರೂರು ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಜರುಗಿದೆ. ಬೀದರ್ ನಗರದ ಮೈಲೂರು ಬಡಾವಣೆಯ ನಿವಾಸಿಗಳಾದ ತಿಪ್ಪಣ್ಣ (ಶಿವಮೂರ್ತಿ)(45) ಅವರ ಮಕ್ಕಳಾದ ಶ್ರೀಶಾಂತ್ (9),ರಿತೀಕ್ (7) ಹಾಗೂ ರಾಕೇಶ (7 ತಿಂಗಳು) ಮೃತರು ಎಂದು ತಿಳಿದುಬಂದಿದೆ. ಮೃತ ಶಿವಮೂರ್ತಿ ಅವರ ಪತ್ನಿ ರಮಾಬಾಯಿ ಅವರು ತಮ್ಮ ನಾಲ್ಕು ಜನ ಮಕ್ಕಳೊಂದಿಗೆ ಕಾಲುವೆಗೆ ಹಾರಿದ್ದಾರೆ ಎನ್ನಲಾಗಿದೆ ತಂದೆ ಶಿವಮೂರ್ತಿ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ ಪತ್ನಿ ರಮಾಬಾಯಿ (35) ಹಾಗೂ ಮಗ ಶ್ರೀಕಾಂತ್ (7) ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೂಲತಃ ಬೀದರ್ ತಾಲೂಕಿನ ಸಂಗೊಳಗಿ ಗ್ರಾಮದವರಾದ ಶಿವಮೂರ್ತಿ ಅವರು ಹಲವು ವರ್ಷಗಳಿಂದ ಮೈಲೂರುನಲ್ಲಿ ವಾಸವಿದ್ದರು. ಮೃತ ಶಿವಮೂರ್ತಿ ಟಿ. ವಿ. ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದರು ಎಂದು ಕುಟುಂಬದ ಮೂಲಗಳಿಂದ  ತಿಳಿದು ಬಂದಿದೆ. ಸಹೋದರರ…

Read More

ಸರಗೂರು: ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂದು ನಂಬಿರುವ ಜೆಡಿಎಸ್ ಪಕ್ಷದಿಂದ ತಾಲೂಕು ಅಭಿವೃದ್ಧಿ ಸಾಧ್ಯ ಎಂದು ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ ಹೇಳಿದರು ತಾಲೂಕಿನ ಕೋತ್ತೇಗಾಲ ಗ್ರಾಪಂ ವ್ಯಾಪ್ತಿಯ ಹಲಸೂರು ಗ್ರಾಮದಲ್ಲಿ ಮಂಗಳವಾರದಂದು ಭೇಟಿ ನೀಡಿ ಮಾರಮ್ಮನ ದೇವಸ್ಥಾನದ ಅಭಿವೃದ್ಧಿಗಾಗಿ ಒಂದು ಲಕ್ಷ ರೂ.ಗಳನ್ನು ಸಹಾಯಧನ ಹಾಗೂ 25  ಕ್ವಿಂಟಾಲ್ ಅಕ್ಕಿ ಕೊಡುವುದಾಗಿ ಭರವಸೆ ನೀಡಿ ನಂತರ ಮಾತನಾಡಿದರು. ರಾಜ್ಯ ದಲ್ಲಿ ಪ್ರಾದೇಶಿಕ ಪಕ್ಷದಿಂದ ಮಾತ್ರ ಜನರ ಸಮಸ್ಯೆ, ರಾಜ್ಯ ಸಮಸ್ಯೆ ನಿವಾರಣೆ ಸಾಧ್ಯ. ಸಿಎಂ ಆಗಿದ್ದಾಗ ಕುಮಾರಸ್ವಾಮಿ ನೀಡಿದ ಅಭಿವೃದ್ಧಿ ಕಾರ್ಯಗಳು ಕೂಡ ಶ್ರೀರಕ್ಷೆ ಎಂದರು. ಕ್ಷೇತ್ರದಲ್ಲಿ ಬದಲಾವಣೆ ಬೇಕಾಗಿದೆ. ಜನರ ಸೇವೆ ಮಾಡುವ ವ್ಯಕ್ತಿಗೆ ಆದ್ಯತೆ ನೀಡಿ ಎನ್ನುವ ಜಾಗೃತಿ ಮೂಡಿಸಬೇಕಾಗಿದೆ. ಈ ಹಿಂದೆ ರಾಜಕೀಯ ಮಾಡಲು ಬರುವವರು ಜನ ಸೇವೆ ನಮ್ಮ ಗುರಿ ಎನ್ನುವ ಮಾತು ಇತ್ತು. ಈಗ ದುಷ್ಟ ರಾಜಕಾರಣಿಗಳು ಈ ಮಾತು ಹಾಳು ಮಾಡಿದ್ದಾರೆ. ಜನರಿಗೆ ಅರಿವು ಮೂಡಿಸುವುದಾಗಿ ಹೇಳಿದರು. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ…

Read More

ಬೀದರ್: ಜಿಲ್ಲೆಯ ಔರಾದ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರು ಡಿಜಿಟಲ್ ಅರೆಸ್ಟ್ 30 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ ಘಟನೆ ಸಂಬಂಧ ಬೆಂಗಳೂರು ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಸಿಬಿಐ, ಇ.ಡಿ. ಹಾಗೂ ಜಡ್ಜ್ ಹೆಸರಿನಲ್ಲಿ ವಂಚಕರು ಮಾಜಿ ಶಾಸಕರಿಂದ ಹಂತ ಹಂತವಾಗಿ 30 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡಿದ್ದಾರೆ ಆಗಸ್ಟ್ 12ರಂದು ಸಿಬಿಐ ಆಫೀಸರ್ ಎಂದು ಕರೆ ಮಾಡಿದ್ದ ಆನ್ ಲೈನ್ ವಂಚಕರು ನೀವು ನರೇಶ್ ಗೋಯಲ್ ಮನಿ ಲಾಂಡರಿಂಗ್ ಕೇಸ್ ನಲ್ಲಿ ಭಾಗಿಯಾಗಿದ್ದೀರಿ ನರೇಶ್ ಗೋಯಲ್ ಜೊತೆ ಅಕ್ರಮ ವ್ಯವಹಾರ ಮಾಡಿದ್ದೀರಿ ಎಂದು ಹೆದರಿಸಿದ್ದರು. ಆ.13ರಂದು ಸಿಬಿಐ ಡಿಸಿಪಿ ಎಂದು ಮತ್ತೋರ್ವ ಕರೆ ಮಾಡಿ, ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಿ, ಕಾಲ್ ಕಟ್ ಮಾಡಬೇಡಿ ಎಂದು ಭಯಪಡಿಸಿದ್ದ ಬಳಿಕ ಆನ್ ಲೈನ್ ನಲ್ಲಿ ಫೇಕ್ ಜಡ್ಜ್ ಮುಂದೆ ಹಾಜರುಪಡಿಸಿದ್ದ ಖದೀಮರು ಕೋರ್ಟ್ ಹಾಲ್ ರೀತಿ ಸೆಟಪ್ ಮಾಡಿ ನಂಬಿಕೆ ಹುಟ್ಟಿಸಿದ್ದರು. ನಮ್ಮದು…

Read More

ಔರಾದ್ : ಪಟ್ಟಣದಲ್ಲಿ ಅನಧಿಕೃತವಾಗಿ ಓಡಿಸುತ್ತಿರುವ ಶಾಲಾ ವಾಹನಗಳನ್ನು ಆರ್‌ಟಿಒ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಔರಾದ್ ತಾಲೂಕಿನ ಎಕಂಬಾ ಗ್ರಾಮದ ಸೇಂಟ್ ಪೌಲ್ ಪಬ್ಲಿಕ್ ಶಾಲೆಯಲ್ಲಿ 1ನೇ ತರಗತಿಯ 6 ವರ್ಷದ ಕಾವೇರಿ ಎಂಬ ಬಾಲಕಿ ಶಾಲಾ ವಾಹನದ ಚಕ್ರದಲ್ಲಿ ಸಿಲುಕಿ ಮೃತಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು, ನಿಯಮ ಗಾಳಿಗೆ ತೂರಿ ಶಾಲಾ ವಾಹನಗಳನ್ನು ಓಡಿಸುತ್ತಿರುವವರ ಮೇಲೆ ಕ್ರಮ ಜರುಗಿಸುವಂತೆ ಆರ್‌ ಟಿಒ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅನಧಿಕೃತವಾದ ಶಾಲಾ ವಾಹನಗಳನ್ನು ಆರ್‌ ಟಿಒ ಅಧಿಕಾರಿಗಳು ಇಂದು ವಶಕ್ಕೆ ಪಡೆದಿದ್ದಾರೆ. ಇನ್‌ಸ್ಪೆಕ್ಟರ್ ಹುಸೇನ್ ನದಾಫ್ ನೇತೃತ್ವದಲ್ಲಿ, ಸಿಬ್ಬಂದಿಗಳೊಂದಿಗೆ ಔರಾದ್ ಹಾಗೂ ಸಂತಪೂರ್ ನಗರದ ರಸ್ತೆಯ ಮೇಲೆ ಸಂಚರಿಸುತ್ತಿರುವ ಶಾಲಾ ವಾಹನಗಳನ್ನು ನಿಲ್ಲಿಸಿ, ಪರಿಶೀಲನೆ ನಡೆಸಿ ಕ್ರಮ ಜರುಗಿಸಿದ್ದಾರೆ. ನಂತರ ಶಾಲೆಗಳಿಗೆ ಭೇಟಿ ನೀಡಿದ ಅವರು ಇಲಾಖೆಯ ನಿಯಮ ಗಾಳಿಗೆ ತೂರಿ ಮಕ್ಕಳನ್ನು ಶಾಲೆಗೆ ಕರೆತಂದಿರುವ 6 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಇಲಾಖೆಯ ನಿಯಮ ಉಲ್ಲಂಘಿಸುವಂತಿಲ್ಲ. ತಾಲೂಕಿನಲ್ಲಿ ಅನೇಕ…

Read More

ಬೀದರ್: ಕರ್ನಾಟಕ ಸರ್ಕಾರವು ಪೊಲೀಸ್ ಇಲಾಖೆಯು, ಪೊಲೀಸ್ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅವರ ಕುಂದುಕೊರತೆಗಳನ್ನು ಪರಿಹರಿಸಲು ಮುಂದಾಗಿದೆ. ಪೊಲೀಸರು ಜನಸ್ನೇಹಿ ಪೊಲೀಸರಾಗಿ ಕೆಲಸ ಮಾಡಲು, ಸಾರ್ವಜನಿಕರು ಮತ್ತು ಪೊಲೀಸ್ ಇಲಾಖೆಯ ನಡುವೆ ವಿಶ್ವಾಸ ವೃದ್ಧಿಸಲು, ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಪೊಲೀಸ್ ಸಿಬ್ಬಂದಿಯ ಗಮನಕ್ಕೆ ತರಲು ಮತ್ತು ಪರಿಹಾರ ಕಂಡುಕೊಳ್ಳಲು ಮನೆ ಮನೆಗೆ ಪೊಲೀಸ್ ಯೋಜನೆಯನ್ನು ಜಾರಿಗೆ ಬಂದಿರುತ್ತದೆ. ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ನೀಡಿದ ನಿರ್ದೇಶನದಂತೆ ಸಂತಪೂರ ಪೊಲೀಸ್ ಠಾಣೆ ಪಿಎಸ್ ಐ ನಂದಕುಮಾರ ತಮ್ಮ ಠಾಣೆಯ ಸಿಬ್ಬಂದಿಯೊಂದಿಗೆ ತಮ್ಮ ಠಾಣಾ ವ್ಯಾಪ್ತಿಯ ಗ್ರಾಮಗಳಿಗೆ, ಓಣಿಗಳಿಗೆ ಭೇಟಿ ನೀಡಿ, ಅವರ ಕುಂದು ಕೊರತೆಗಳನ್ನು ಆಲಿಸಿ, ಮನೆ ಮನೆಗೆ ಪೊಲೀಸ್ ಯೋಜನೆ ಅನುಷ್ಠಾನದ ಕುರಿತು ಭಿತ್ತಿ ಪತ್ರವನ್ನು ಹಂಚುವ ಮೂಲಕ ಅರಿವು ಮೂಡಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಸರಗೂರು: ತಾಲೂಕಿನ ಕೆ.ಬೆಳತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸ ಬಡಾವಣೆ ಗ್ರಾಮದ ನಿವಾಸಿಯಾದ ಕೆಂಪರಾಜು ತನ್ನ ಊರಿನ ಅಂಗನವಾಡಿ ಮಕ್ಕಳಿಗೆ 18– 20 ಸಮವಸ್ತ್ರ ವಿತರಣೆ ಮಾಡಿದರು. ಇದೇ ವೇಳೆ ಮಾತನಾಡಿ, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಅಲ್ಲಿ ಬರುವ ಸವಲತ್ತುಗಳನ್ನು ಉಪಯೋಗಿಸಿಕೊಳ್ಳಿ, ಯಾರು ಖಾಸಗಿ ಶಾಲೆಗೆ ಸೇರಿಸಬೇಡಿ. ನನ್ನ ಗ್ರಾಮದ ಶಾಲೆ ಅಭಿವೃದ್ಧಿಯಾದರೆ ಇಡೀ ದೇಶವೇ ಅಭಿವೃದ್ಧಿ ಆದಂತೆ. ಎಂದು ಸಲಹೆ ನೀಡಿದರು. ಇದೇ ವೇಳೆ ಅಂಗನವಾಡಿ ಟೀಚರ್ ಆದ ನಾಗೇಂದ್ರಿ ಹಾಗೂ ಜಯಲಕ್ಷ್ಮೀ, ಮಕ್ಕಳ ಪೋಷಕರು ಹಾಗೂ ಗ್ರಾಮದ ಮುಖಂಡರು ಸಂತೋಷ ವ್ಯಕ್ತಪಡಿಸಿದರು. ವರದಿ: ಹಾದನೂರು ಚಂದ್ರ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಸರಗೂರು:  ಜೆಡಿಎಸ್ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದೇವೆ ಎಂದು ಜೆಡಿಎಸ್‌ ಮುಖಂಡ ಕೆ.ಎಂ. ಕೃಷ್ಣನಾಯಕ ತಿಳಿಸಿದರು. ತಾಲೂಕಿನ ಸಮೀಪದ ಬೀರಂಬಳ್ಳಿ ಗ್ರಾಮಕ್ಕೆ ಸೋಮವಾರದಂದು ಭೇಟಿ ನೀಡಿ ಅಂಬೇಡ್ಕರ್ ಪ್ರತಿಮೆ ಜೀರ್ಣೋದ್ಧಾರ ಮಾಡಲು ಮುಂದಾಗಿರುವ ಗ್ರಾಮಸ್ಥರಿಗೆ ಜೆಡಿಎಸ್ ಪಕ್ಷದ ಮುಖಂಡ ಕೆ.ಎಂ.ಕೃಷ್ಣನಾಯಕ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ 25 ಸಾವಿರ ಧನ ಸಹಾಯ ಮಾಡಿ ನಂತರ ಮಾತನಾಡಿದರು. ತಾಲೂಕಿನಲ್ಲಿ ಜೆಡಿಎಸ್ ಸಂಘಟಿಸುವ ನಿಟ್ಟಿನಲ್ಲಿ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡಗಳ ಸಮ್ಮುಖದಲ್ಲಿ ವಿವಿಧ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದ ಅವರು, ಕೋಟೆಗೆ ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಆಗಮಿಸಲಿದ್ದು, ಬೃಹತ್ ವೇದಿಕೆ ‘ಕಾರ್ಯಕ್ರಮ ಆಯೋಜಿಸಲಾಗುವುದು. ಕಾರ್ಯಕ್ರಮದಲ್ಲಿ ಸಾವಿರಾರು ಕಾಂಗ್ರೆಸ್ — ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದರು. ತಾ.ಪಂ., ಜಿ.ಪಂ. ಚುನಾವಣೆ ಬರುವುದರಿಂದ ಜೆಡಿಎಸ್ ಪಕ್ಷವನ್ನು ಬಲಗೊಳಿಸಲು ತಾಲೂಕಿನ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ…

Read More

ಮೈಸೂರು : ಈ ಬಾರಿ ನಾಡಹಬ್ಬ ದಸರಾದಲ್ಲಿ ಅತ್ಯಂತ ಕಿರಿಯ ಹೆಣ್ಣಾನೆಯಾದ ಹೇಮಾವತಿ (11) ಭಾಗವಹಿಸಲಿದ್ದಾಳೆ. ಜಂಬೂಸವಾರಿಯ ದಿನ ಚಿನ್ನದ ಅಂಬಾರಿ ಹೊತ್ತು ಸಾಗುವ ಗಂಡು ಆನೆಗೆ ಹೆಣ್ಣು ಆನೆಗಳು ಸಾಥ್ ನೀಡುತ್ತವೆ.; ಈ ಮೂಲಕ ಆನೆಗಳು ಚಿನ್ನದ ಅಂಬಾರಿ ಹೊತ್ತು ಸಾಗಲು ಪ್ರಮುಖ ಪಾತ್ರ ವಹಿಸುತ್ತವೆ. ಈ ಹೆಣ್ಣು ಆನೆಗಳು ಗಂಡು ಆನೆಗಳ ಜೊತೆಯಲ್ಲಿ ತಾಲೀಮು ಮಾಡುವುದರಿಂದ ಗಂಡು ಆನೆಗಳು ಗಾಬರಿಯಾಗದಂತೆ ಸರಾಗವಾಗಿ ಸಾಗಲು ಅನುವು ಮಾಡಿಕೊಡುತ್ತವೆ. ಗಜಪಡೆಯ ಭಾರ ಹೊರುವ ತಾಲೀಮಿನಲ್ಲಿ ಅಭಿಮನ್ಯು ಜೊತೆ ಹೇಮಾವತಿ ಆನೆ ಭಾಗವಹಿಸಿದೆ. ಈ ಆನೆ ಭವಿಷ್ಯದಲ್ಲಿ ಜಂಬೂಸವಾರಿಯಲ್ಲಿ ಕುಮ್ಕಿ ಆನೆಯಾಗಿ ಬಹಳ ವರ್ಷಗಳ ಕಾಲ ಕಾರ್ಯ ನಿರ್ವಹಿಸಲಿದೆ ಹಾಗೂ ಹೆಣ್ಣು ಆನೆಗಳ ಕೊರತೆ ನಿಭಾಯಿಸಲಿದೆ ಎಂಬ ನಿಟ್ಟಿನಲ್ಲಿ ಅರಣ್ಯ ಇಲಾಖೆಯವರು ಇದನ್ನು ಕರೆಸಿದ್ದಾರೆ. 2014ರಲ್ಲಿ ಕೊಡಗಿನ ಆನೆ ಶಿಬಿರದಲ್ಲಿ ಜನಿಸಿರುವ ಈ ಹೇಮಾವತಿ ಆನೆ, ಶಿಬಿರದಲ್ಲಿ ಮಾವುತರು ಹಾಗೂ ಕಾವಾಡಿಗಳ ತರಬೇತಿಯಿಂದ ಶಿಸ್ತು ಮತ್ತು ಶಾಂತ ಸ್ವಭಾವದಿಂದ ಗಮನ ಸೆಳೆದಿದೆ. ನಮ್ಮತುಮಕೂರಿನ…

Read More