Author: admin

ಬೆಂಗಳೂರು: ರಾಜಧಾನಿಯ ಕಸ ವಿಲೇವಾರಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಈಗ ‘ಕಸದ ಕಿಚ್ಚು’ ಹತ್ತಿಕೊಂಡಿದೆ. ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ಸಾಗಿಸುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ. “ಬಿಜೆಪಿ ನಾಯಕರು ಬ್ಲ್ಯಾಕ್‌ ಮೇಲ್ ತಂತ್ರ ಬಿಡದಿದ್ದರೆ, ಅವರ ಮನೆ ಮುಂದೆ ಹಾಗೂ ಬಿಜೆಪಿ ಕಚೇರಿ ಮುಂದೆಯೇ ಕಸ ಹಾಕಿಸಬೇಕಾಗುತ್ತದೆ” ಎಂದು ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಘಟನೆಯ ಹಿನ್ನೆಲೆ: ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ವೈಜ್ಞಾನಿಕವಾಗಿ ಸಾಗಿಸಲಾಗುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಶಾಸಕರು ಮತ್ತು ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಬಿಜೆಪಿ ನಾಯಕರ ವಿರುದ್ಧ ಕೆಂಡಾಮಂಡಲವಾದರು. “ಬಿಜೆಪಿಯ ಎಲ್ಲಾ ಶಾಸಕರು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ. ತಮ್ಮ ಕ್ಷೇತ್ರಕ್ಕೆ ಅನುದಾನ ಬೇಕು ಎಂಬ ಕಾರಣಕ್ಕೆ ಅಪಘಾತದ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಗೌರವದಿಂದ ಇದ್ದರೆ ಸರಿ, ಇಲ್ಲದಿದ್ದರೆ ಕರುಣೆ ತೋರಿಸುವುದಿಲ್ಲ” ಎಂದು ಕಿಡಿಕಾರಿದರು. “ಕಸವನ್ನು ಎಲ್ಲಾದರೂ ಒಂದು ಕಡೆ ಹಾಕಲೇಬೇಕಲ್ಲವೇ? ಅಲ್ಲೂ ಬೇಡ,…

Read More

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮವನ್ನು ಜೆಡಿಎಸ್ ತೀವ್ರವಾಗಿ ಖಂಡಿಸಿದೆ. ಸರ್ಕಾರದ ಈ ನಡೆಯು ಅದರ “ಹೇಡಿತನಕ್ಕೆ ಸಾಕ್ಷಿ” ಎಂದು ಜೆಡಿಎಸ್ ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಕಿಡಿಕಾರಿದೆ. ಪತ್ರಕರ್ತರ ಕಂಡರೆ ನಡುಕವೇ?: “ಪ್ರಶ್ನೆ ಕೇಳುವ ಪತ್ರಕರ್ತರನ್ನು ಕಂಡರೆ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಇಷ್ಟೊಂದು ನಡುಕವೇ?” ಎಂದು ಜೆಡಿಎಸ್ ಪ್ರಶ್ನಿಸಿದೆ. ಸಚಿವರು ಮತ್ತು ಶಾಸಕರ ಭ್ರಷ್ಟಾಚಾರವನ್ನು ಪ್ರಶ್ನಿಸಿದರೆ ಸರ್ಕಾರಕ್ಕೆ ಭಯವೇಕೆ ಎಂದು ಲೇವಡಿ ಮಾಡಿದೆ. ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧ: ಮಾಧ್ಯಮಗಳ ಧ್ವನಿಯನ್ನು ಅಡಗಿಸುವುದು ಪ್ರಜಾಪ್ರಭುತ್ವದ ಆಶಯಗಳ ಮೇಲೆ ನಡೆಯುತ್ತಿರುವ ಪ್ರಹಾರವಾಗಿದೆ. ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿದ್ದು, ಅವುಗಳ ಸ್ವಾತಂತ್ರ್ಯ ಕಸಿದುಕೊಳ್ಳುವುದು ಸರಿಯಲ್ಲ ಎಂದು ಜೆಡಿಎಸ್ ಹೇಳಿದೆ. ಹಗರಣಗಳ ಭಯ: ಸರ್ಕಾರದ ಹಗರಣಗಳು, ಕಮಿಷನ್ ದಂಧೆ ಮತ್ತು ವರ್ಗಾವಣೆ ಅಕ್ರಮಗಳು ಬಯಲಾಗುತ್ತವೆ ಎಂಬ ಆತಂಕದಿಂದ ಸರ್ಕಾರ ಇಂತಹ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಲಾಗಿದೆ. ಸಿದ್ದರಾಮಯ್ಯ ಅವರಿಗೆ ಪ್ರಶ್ನೆ: ಸಂವಿಧಾನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವ…

Read More

ಬೆಂಗಳೂರು: ಶಕ್ತಿಸೌಧವಾದ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ ನಡೆಯನ್ನು “ನಾಲಾಯಕ್ ಮತ್ತು ಅಯೋಗ್ಯ” ಎಂದು ಅವರು ಟೀಕಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿರುವುದು ಪ್ರಜಾಪ್ರಭುತ್ವದ ವಿರೋಧಿ ನಡೆಯಾಗಿದೆ. ಬೆಳಗಾವಿ ಅಧಿವೇಶನದಲ್ಲಿ ದ್ವೇಷ ಭಾಷಣ ಕಾಯ್ದೆ ತಂದಾಗಿನಿಂದಲೇ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವವನ್ನು ಅಣಕಿಸಲು ಶುರುಮಾಡಿದೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ. ಭದ್ರತಾ ಲೋಪದ ನೆಪ: ಇತ್ತೀಚೆಗೆ ಸಚಿವರ ಕಚೇರಿಯಲ್ಲಿ ನಡೆದ ಕಳ್ಳತನ ಮತ್ತು ಭದ್ರತಾ ಲೋಪವನ್ನು ನೆಪವಾಗಿಟ್ಟುಕೊಂಡು ಮಾಧ್ಯಮಗಳನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸುತ್ತಿದೆ. ಸತ್ಯವನ್ನು ಹೊರಗೆಳೆಯುವ ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವುದನ್ನು ನಾವು ಒಪ್ಪುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸರ್ಕಾರದ ವಿರುದ್ಧ ವಾಗ್ದಾಳಿ: “ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವರಿಗೆ ಪುರಾವೆ ಇಲ್ಲ ಎಂದ ಸರ್ಕಾರ ಇದು. ಅಂತಹ ದೇಶದ್ರೋಹಿ ಘೋಷಣೆಗಳನ್ನು ತಡೆಯಲಾಗದ ಈ ಅಯೋಗ್ಯ ಸರ್ಕಾರ, ಈಗ ಮಾಧ್ಯಮಗಳ ಮೇಲೆ ಸವಾರಿ ಮಾಡುತ್ತಿದೆ” ಎಂದು…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ‘ಕಮಿಷನ್’ ಆರೋಪಗಳ ವಿಚಾರವಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗುತ್ತಿಗೆದಾರರ ಸಂಘ ಮಾಡಿರುವ ಭ್ರಷ್ಟಾಚಾರದ ಆರೋಪಗಳು ಸುಳ್ಳಾಗಿದ್ದರೆ, ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡಲಿ ಎಂದು ಅವರು ಸವಾಲು ಹಾಕಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಮಿಷನ್ ಆರೋಪ ಬಂದಾಗ ಯಾವುದೇ ಸಾಕ್ಷ್ಯ ಕೇಳದ ಕಾಂಗ್ರೆಸ್ ನಾಯಕರು, ಈಗ ತಮ್ಮ ಮೇಲೆ ಆರೋಪ ಬಂದಾಗ ಸಾಕ್ಷಿ ಕೇಳುತ್ತಿರುವುದು ಏಕೆ? ಎಂದು  ಅವರು ಪ್ರಶ್ನಿಸಿದರು. ಕಸದ ಟೆಂಡರ್ ಪಡೆಯಲು 7%, ಬಿಲ್ ಬಿಡುಗಡೆಗೆ 7% ಮತ್ತು ವಿಶೇಷ ಎಲ್‌ ಒಸಿ ಪಡೆಯಲು 7% ಹೀಗೆ ಒಟ್ಟು 21% ಕಮಿಷನ್ ನೀಡಬೇಕಾದ ಪರಿಸ್ಥಿತಿ ಇದೆ ಎಂದು ಅಶೋಕ್ ಗಂಭೀರವಾಗಿ ಆರೋಪಿಸಿದರು. ರಾಜ್ಯದ ಪ್ರಮುಖ ಟೆಂಡರ್‌ ಗಳು ನೆರೆಯ ಆಂಧ್ರಪ್ರದೇಶದ ಗುತ್ತಿಗೆದಾರರ ಪಾಲಾಗುತ್ತಿವೆ. ಕೆಕೆಆರ್‌ಡಿಬಿ ಕಾಮಗಾರಿಗಳನ್ನು…

Read More

ಚಿತ್ರದುರ್ಗ: ಪೊಲೀಸ್ ಠಾಣೆಗಳು ಕೇವಲ ಬಣ್ಣದ ಪೇಂಟಿಂಗ್, ಬ್ಯಾನರ್‍ ಗಳಿಂದ ಮಕ್ಕಳ ಸ್ನೇಹಿಯಾಗಲು ಸಾಧ್ಯವಿಲ್ಲ. ಅಧಿಕಾರಿಗಳು ಸಂಕಷ್ಟದಲ್ಲಿರುವ ಮಕ್ಕಳನ್ನು ಕಂಡಾಗ ತಮ್ಮದೇ ಮಗು ಎಂಬ ಭಾವನೆಯಿಂದ ಸ್ಪಂದಿಸಿದಾಗ ಮಾತ್ರ ವ್ಯವಸ್ಥೆ ಸುಧಾರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ಕೆ.ಟಿ. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಜಿಲ್ಲೆಯ ಎಸ್‍ ಜೆಪಿಯು ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಜೆ.ಜೆ.ಕಾಯ್ದೆ ಹಾಗೂ ಮಿಷನ್ ವಾತ್ಸಲ್ಯ ಯೋಜನೆಗಳ ಕುರಿತು ಏರ್ಪಡಿಸಿದ ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪೊಲೀಸ್ ಇಲಾಖೆಯಲ್ಲಿ ಸಮವಸ್ತ್ರ ಮತ್ತು ದಂಡ ಅಧಿಕಾರ ಸೂಚಿಸುತ್ತವೆ. ಆದರೆ, ಮಗುವಿನ ಪ್ರಕರಣಗಳನ್ನು ನಿರ್ವಹಿಸುವಾಗ ಅಧಿಕಾರಕ್ಕಿಂತ ಹೆಚ್ಚಾಗಿ ಸಂವೇದನಾಶೀಲತೆ ಮತ್ತು ಮಾನವೀಯತೆ…

Read More

ಊರು: ಸುರಪುರವೆಂಬ ಹಳ್ಳಿ, ಮಿತ್ರರ ಹೆಸರು: ಸೋಮ, ಭೀಮ, ವರ್ಗ: ಸ್ವಲ್ಪ ಮಧ್ಯಮ ವರ್ಗದ ಬಡತನದ ಜೀವನ, ಮಾತಿಗೆ ಸೇರುವ ಜಾಗ: ಊರ ಹೊರಗಿನ ಅರಳಿ ಕಟ್ಟೆ. ಭೀಮ:- (ಅರಳಿಕಟ್ಟೆ ಮೇಲೆ ಕುಳಿತು, ಎಲೆ ಅಡಿಕೆ ಜಗಿಯುತ್ತಾ, ಸೋಮ ಬರುವಿಕೆಯನ್ನು ಕಂಡು) ಓಹೋಹೋ ಬಾರಪ್ಪ ಸೋಮ, ಊಟ ಆಯ್ತನಪ್ಪ… ಸೋಮ:- ಹು ಭೀಮು ಊಟ ಆಯ್ತು, ನಿಂದು ಆಯ್ತನಪ್ಪ ಭೀಮ:- ಹು ಸೋಮು ನಂದು ಆಯ್ತು, ಈ ಬದಿ ಕುಂತುಕೋ, ಅಲ್ಲಿ ನಾಯಿ ಕಸ ಮಾಡದೆ. ಸೋಮ:- ಹೂ ಕಣೋ ಭೀಮು ನಾನು ನೋಡ್ಲೇ ಇಲ್ಲ ನೋಡು ಮತ್ತೆ, ನೀನು ಹೇಳದೇ ಹೋಗಿದ್ದರೆ, ಅದರ ಮೇಲೆನೇ ಕುಂತ್ಕೋತಿದ್ದೆ. ಭೀಮ:-  ನೀನು ಇಂಗೆ ಮಾಡ್ತಿಯ ಅಂತ ನಂಗೆ ಮುಂದಾಗೆ ಗೊತ್ತಿತ್ತು ನೋಡು ಅದ್ಕೆ ಅಂಗೆ ಹೇಳ್ದೆ. ಸೋಮ:- ಅದೆಂಗಲಾ ಮುಂದಾಗೆ ಗೊತ್ತಿತ್ತು? ಭೀಮ:- ಅದು ಅಂಗೆಯಾ, ನಮ್ಮ ತಾತ ಭವಿಷ್ಯ ಹೇಳ್ತಿದ್ದ ನೋಡು ಅದು ಅಂಗೆ ನನ್ ತಲೆಗೆ ಬಟ್ಟಿ ಇಳ್ಕೊಂಬುಟೈತೆ. ಸೋಮ:- …

Read More

ಬಳ್ಳಾರಿ:  ಹೆಚ್‌ ಐವಿ ಪೀಡಿತ ವ್ಯಕ್ತಿಗಳೊಂದಿಗೆ ಮಾನವೀಯತೆಯಿಂದ ವರ್ತಿಸಿ ಅವರ ಮನೋಬಲವನ್ನು ಹೆಚ್ಚಿಸಬೇಕು ಎಂದು ಹೆಚ್‌ ಐವಿ ಜಿಲ್ಲಾ ಮೇಲ್ವಿಚಾರಕ ಗಿರೀಶ್ ಅವರು ಹೇಳಿದರು. ನಗರದ ಸರಳಾದೇವಿ ಸತೀಶ್ಚಂದ್ರ ಅಗರ್‌ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕ ವತಿಯಿಂದ ಏಡ್ಸ್ ತಡೆ, ಹಾರೈಕೆ ಬೆಂಬಲ ಹಾಗೂ ಚಿಕಿತ್ಸೆ ಮತ್ತು ಸೇವೆಗಳ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿ ಅವರು ಮಾತನಾಡಿದರು. ಏಡ್ಸ್ ಹರಡಲು ಪ್ರಮುಖ ಕಾರಣಗಳು ಮತ್ತು ಏಡ್ಸ್ ಹರಡದಂತೆ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಇಂದಿನ ಯುವ ಪೀಳಿಗೆಯಾದ ವಿದ್ಯಾರ್ಥಿಗಳು ವಿಶೇಷ ಜಾಗೃತಿ ಹೊಂದಬೇಕು ಎಂದರು. 18 ವರ್ಷ ತುಂಬಿದವರು ರಕ್ತದಾನ ಮಾಡಿದರೆ ಅವರ ಆರೋಗ್ಯ ಅವರ ಆಯಸ್ಸು, ನೆನಪಿನ ಶಕ್ತಿ ವೃದ್ಧಿಸುತ್ತದೆ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಆರೋಗ್ಯಕ್ಕೆ ಅನುಗುಣವಾಗಿ ರಕ್ತದಾನ ಮಾಡಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಪ್ರೊ.ಇಸ್ಮಾಯಿಲ್ ಮಕಂದಾರ್, ಉಪನ್ಯಾಸಕರಾದ ಡಾ.ದಸ್ತಗಿರಿಸಾಬ್, ಬಸಪ್ಪ.ಕೆ., ಮಾರೆಪ್ಪ,…

Read More

ಕಾರವಾರ:  ಜೀತ ಪದ್ದತಿ ನಿಷೇಧ ಕಾಯ್ದೆಯು 1976 ರಲ್ಲಿ ಜಾರಿಗೆ ಬಂದು 50 ವರ್ಷ ಕಳೆದರೂ ಸಹ ದೇಶದಲ್ಲಿ ಜೀತ ಪದ್ದತಿ ಇನ್ನೂ ಕಂಡುಬರುತ್ತಿದ್ದು, ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ನೆಮ್ಮಲ್ಲರ ಜವಾಬ್ದಾರಿಯಾಗಿದ್ದು, ಜೀತ ಪದ್ದತಿಯಲ್ಲಿ ತೋಡಗಿಕೊಂಡು ಸಂಕಷ್ಟಕ್ಕೆ ಒಳಗಾದ ಜನರಿಗೆ ನ್ಯಾಯ ಒದಗಿಸಲು ಎಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ದಿವ್ಯಶ್ರೀ ಸಿ.ಎಂ. ಹೇಳಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕಾರ್ಮಿಕ ಇಲಾಖೆ ಸಹಯೋಗದಲ್ಲಿ, ಜೀತ ಪದ್ದತಿ ನಿರ್ಮೂಲನಾ ದಿನಾಚರಣೆಯ ಪ್ರಯುಕ್ತ ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಹಾಗೂ ಪ್ರತಿಜ್ಞಾ ವಿಧಿ ಭೋದಿಸಿ ಮಾತನಾಡಿದರು. ಬಡತನ, ಶಿಕ್ಷಣ, ನಿರುದ್ಯೋಗ, ಸಾಲದ ಸುಳಿವು, ಜಾತಿ ಪದ್ದತಿ, ಕಾನೂನಿನ ಅರಿವುವಿಲ್ಲದೇ ಇರುವುದರಿಂದ ಜೀತ ಪದ್ದತಿಯ ಶೋಷಣೆಗೆ ಒಳಗಾಗುತ್ತಿದ್ದು, ಜೀತ ಪದ್ದತಿಗೆ ಒಳಗಾದವರನ್ನು ರಕ್ಷಿಸಿ ಅವರಿಗೆ ಆರ್ಥಿಕ ನೆರವು, ವಸತಿ , ಕೌಶಲ್ಯಾಭಿವೃದ್ದಿ ತರಬೇತಿ, ಅವರ…

Read More

ಬೀದರ್: ಜಿಲ್ಲೆಯ ಅನಾಥ ಹಾಗೂ ಪಾಲನೆ–ಪೋಷಣೆಯಿಂದ ವಂಚಿತರಾದ ಮಕ್ಕಳಿಗೆ ಕೌಟುಂಬಿಕ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ‘ಪೋಷಕತ್ವ ಯೋಜನೆ’ (Foster Care Scheme) ಅತ್ಯಂತ ಪರಿಣಾಮಕಾರಿಯಾಗಿದೆ. ಈ ಯೋಜನೆಯ ಲಾಭ ಅರ್ಹ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ಬೀದರ್ ಜಿಲ್ಲೆಯ ಕೋಸಂ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಿಗಾಗಿ ವಿಶೇಷ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಬೀದರ್, ಬೋಸ್ಕೋ ಬೆಂಗಳೂರು ಮತ್ತು ಡಾನ್ ಬಾಸ್ಕೋ ಬೀದರ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ ಡಾನ್ ಬೋಸ್ಕೋ ಪೋಷಕತ್ವ ಯೋಜನೆಯ ಸಂಯೋಜಕ ರಮೇಶ್ , ಜೈವಿಕ ಕುಟುಂಬವಲ್ಲದ ಬೇರೊಂದು ಕುಟುಂಬಕ್ಕೆ ಮಗುವನ್ನು ತಾತ್ಕಾಲಿಕವಾಗಿ (ಗರಿಷ್ಠ 2 ವರ್ಷ ಅಥವಾ ವಿಸ್ತರಿಸಲ್ಪಟ್ಟ ಅವಧಿ) ಪಾಲನೆಗಾಗಿ ನೀಡಲಾಗುತ್ತದೆ. ಬಾಲ ನ್ಯಾಯ ಕಾಯ್ದೆ 2005ರ ಕಲಂ 44ರ ಪ್ರಕಾರ ಈ ಯೋಜನೆಯಡಿ ಮಗುವಿನ ರಕ್ಷಣೆ ಮತ್ತು ಪೋಷಣೆಗೆ ಅವಕಾಶವಿದೆ. : ಅನಾಥ ಅಥವಾ ಕುಟುಂಬದ ಕಾಳಜಿಯಿಂದ ವಂಚಿತರಾದ ಮಕ್ಕಳಿಗೆ ಸಂಸ್ಥೆಗಳಿಗಿಂತ ಹೆಚ್ಚಾಗಿ…

Read More

ಕಾರವಾರ: ವಂದೇ ಮಾತರಂ ಗೀತೆಯು 150 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ ಎಫ್) ಆಯೋಜಿಸಿರುವ ‘ವಂದೇ ಮಾತರಂ ಕೋಸ್ಟ್ಸಲ್ ಸೈಕ್ಲೋಥಾನ್ -2026- ರ್ಯಾಲಿಯ ಪಶ್ಚಿಮ ಕರಾವಳಿ ಸೈಕ್ಲೋಥಾನ್ ತಂಡವು ಸೋಮವಾರ ಕಾರವಾರ ಪ್ರವೇಶಿಸಿದ್ದು, ಈ ರ್ಯಾಲಿಗೆ ಮಾಜಾಳಿ ಚೆಕ್ ಪೋಸ್ಟ್ ನಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಈ ರ್ಯಾಲಿಯಲ್ಲಿ ಸುಮಾರು 50 ರಷ್ಟು ಮಹಿಳಾ ಸಿಬ್ಬಂದಿ ಸೇರಿದಂತೆ 120 ಸಿ.ಐ.ಎಸ್.ಎಫ್ ಸಿಬ್ಬಂದಿ ಭಾಗವಹಿಸಿದ್ದು, ಈ ತಂಡವು ಜ.28 ರಂದು ಗುಜರಾತ್ ಲಖ್ಪತ್ ಕೋಟೆಯಿಂದ ತಮ್ಮ ರ್ಯಾಲಿಯನ್ನು ಪ್ರಾರಂಭಿಸಿದ್ದು, ಸೋಮವಾರ ಮಡಗಾಂವ್–ಕಾಣಕೋಣ–ಮಾಜಾಳಿ ಮೂಲಕ ಕಾರವಾರ ಪ್ರವೇಶಿಸಿದ್ದು, ಸಿ.ಎಸ್.ಎಸ್.ಎಫ್. ಕೈಗಾದ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು, ಎನ್.ಸಿ.ಸಿ ವಿದ್ಯಾರ್ಥಿಗಳು, ಪೊಲೀಸ್ ಬ್ಯಾಂಡ್ ಮತ್ತು ಸ್ಥಳೀಯ ಜಾನಪದ ಕಲಾತಂಡಗಳ ಮೆರವಣಿಗೆಯ ಮೂಲಕ ಅವರನ್ನು ಸ್ವಾಗತಿಸಲಾಯಿತು. ಸೈಕ್ಲೋಥಾನ್ ತಂಡದಲ್ಲಿದ್ದ ಸಿ.ಐ.ಎಸ್.ಎಫ್ ಸಿಬ್ಬಂದಿಯನ್ನು ಗೋಟ್ನೆಭಾಗ್ ಕ್ರಾಸ್ನಲ್ಲಿ ಮೀನುಗಾರ ಮಹಿಳೆಯರು ತಿಲಕವಿಟ್ಟು, ಪುಷ್ಪವೃಷ್ಠಿ ಮಾಡಿ ಸ್ವಾಗತಿಸಿದರು. ಸಿ.ಐ.ಎಸ್.ಎಫ್. ಘಟಕ ಎನ್.ಪಿ.ಸಿ. ಕೈಗಾದ ಸೀನಿಯರ್ ಕಮಾಂಡೆಂಟ್ ಅಜಯ್…

Read More