Author: admin

ಕಳೆದ ಆಗಸ್ಟ್ ​ನಲ್ಲಿ ನಡೆದ ಸಾಗರೋತ್ತರ ನರ್ಸ್ ​​ಗಳ ಉದ್ಯೋಗ ಮೇಳದಲ್ಲಿ ಮೇಘಾಲಯ 27 ನರ್ಸ್​ಗಳು ಜಪಾನ್ ​ನಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಂಡಿದ್ದಾರೆ. ಈ 27 ನರ್ಸ್​​ಗಳು ಇದೀಗ ಜಪಾನಿ ಭಾಷೆಯ ತರಬೇತಿ ಕಲಿಕೆ ಪೂರ್ಣಗೊಳಿಸಿದ್ದು, ಇದೀಗ ದೂರದ ದೇಶದಲ್ಲಿ ವೃತ್ತಿಜೀವನದ ಪ್ರಯಾಣ ಆರಂಭಿಸಲು ಮುಂದಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಮ್ಮ ಹೊಸ ಭಾಷಾ ಕೌಶಲ್ಯದೊಂದಿಗೆ ಇದೀಗ ಈ ನರ್ಸ್​​ಗಳ ಜಪಾನ್​ ವಿವಿಧ ಆಸ್ಪತ್ರೆ ಮತ್ತು ಕೇರ್​ ಹೋಮ್​ಗಳಲ್ಲಿ ನೇಮಿಸಲಾಗುವುದು ಎಂದು ಮೇಘಾಲಯ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಇದರ ಜೊತೆಗೆ 14 ನರ್ಸ್​​ಗಳು ಸಿಂಗಾಪೂರ್​ ನ ಹಲವಾರು ಸಂಸ್ಥೆಗಳಿಗೆ ನೇಮಿಸಲಾಗಿದೆ. ರಾಜ್ಯ ಸರ್ಕಾರ ಪ್ರತಿ ವರ್ಷ 50 ಸಾವಿರ ಅಭ್ಯರ್ಥಿಗಳಿಗೆ ಮೇಘಾಲಯ ರಾಜ್ಯ ಕೌಶಲ್ಯ ಅಭಿವೃದ್ಧಿ ಸೊಸೈಟಿ ಅಡಿ ಕೌಶಲ್ಯ ಮೇಘಾಲಯ ಯೋಜನೆ ಭಾಗವಾಗಿ ತರಬೇತಿ ಅವಕಾಶವನ್ನು ಒದಗಿಸುತ್ತಿದೆ. ಮುಂದಿನ ವರ್ಷದಲ್ಲಿ 300 ನರ್ಸ್​​ಗಳನ್ನು ಈ ಯೋಜನೆಯ ಭಾಗವಾಗಿಸುವ ಗುರಿ ಹೊಂದಲಾಗಿದೆ. ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್​ ಸಂಗ್ಮಾ, ಈ ಉಪಕ್ರಮದಲ್ಲಿ ಭಾಗಿಯಾದ ಶಿಕ್ಷಕರು…

Read More

ಚಿಕ್ಕಮಗಳೂರು: ಪರಿಸರ ಮಾಲಿನ್ಯ ಉಂಟಾದರೆ ಮುಂಬರುವ ದಿನಗಳಲ್ಲಿ ಆಮ್ಲ ಜನಕವನ್ನು ಹಾಗೂ ಪ್ರಕೃತಿದತ್ತವಾಗಿ ಸಿಗುವುದೆಲ್ಲವನ್ನು ಕೊಂಡುಕೊಳ್ಳಬಹುದಾದ ಪರಿಸ್ಥಿತಿ ಎದುರಾಗಲಿದೆ ಎಂದು ಜಿಲ್ಲಾ ಮಾಲಿನ್ಯ ನಿಯಂತ್ರಣಾಧಿಕಾರಿ ವೈ.ಎಸ್. ರಾಧಾ ಹೇಳಿದರು. ನಗರದ ಬೈಪಾಸ್ ಸಮೀಪ ಎಂಇಎಸ್ ಎಸ್.ಎಸ್.ಆರ್. ಪ್ರಾಯೋಗಿಕ ಪ್ರೌಢಶಾಲೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ ಹಾಗೂ ಜಿಲ್ಲಾ ವಿಜ್ಞಾನ ಪರಿಷತ್ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು. ಅತಿಯಾದ ಜನಸಂಖ್ಯೆಯಿಂದಾಗಿ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಪಾರ ಪರಿಸರವನ್ನು ನಾಶ ಮಾಡಲಾಗುತ್ತಿದೆ. ಇದರಿಂದ ಉತ್ತಮವಾದ ಆಮ್ಲಜನಕ ಸಿಗುತ್ತಿಲ್ಲ. ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದರು. ವಿದ್ಯಾರ್ಥಿಗಳು ಭೂಮಿಯನ್ನು ಉಳಿಸಿಕೊಳ್ಳಬೇಕಾದರೆ ಗಿಡಗಳನ್ನು ನೆಡಬೇಕು. ನಿಮ್ಮ ಎಲ್ಲಾ ಆಚರಣೆಗಳಿಗೆ ಉಡುಗೊರೆಯಾಗಿ ಗಿಡಗಳನ್ನು ಕೊಡಿ ಮತ್ತು ಮನೆಯಂಗಳದಿ ಸಸಿ ನೆಡುವ ಮೂಲಕ ಪೋಷಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ವಿಜ್ಞಾನ ಪರಿಷತ್ ಅಧ್ಯಕ್ಷ ಸತ್ಯನಾರಾಯಣ್ ಪ್ರಾಸ್ತಾವಿಕವಾಗಿ ಮಾತನಾಡಿ,…

Read More

ಮಾಲ್ಡೀವ್ಸ್ ಸರ್ಕಾರ ಇಸ್ರೇಲಿ ಪ್ರಜೆಗಳಿಗೆ ವಿಧಿಸಿರುವ ನಿಷೇಧವನ್ನು ಇಸ್ರೇಲ್ ಟೀಕಿಸಿದ್ದು ಲಕ್ಷದ್ವೀಪ ಸೇರಿದಂತೆ ಭಾರತದ ಬೀಚ್‍ ಗಳನ್ನು ಸಂದರ್ಶಿಸುವಂತೆ ತನ್ನ ಪ್ರಜೆಗಳಿಗೆ ಸಲಹೆ ನೀಡಿದೆ. `ಮಾಲ್ದೀವ್ಸ್ ಇನ್ನು ಮುಂದೆ ಇಸ್ರೇಲಿಯನ್ನರನ್ನು ಸ್ವಾಗತಿಸುತ್ತಿಲ್ಲವಾದ್ದರಿಂದ, ಇಸ್ರೇಲಿ ಪ್ರಜೆಗಳನ್ನು ಪ್ರೀತಿಯಿಂದ ಸ್ವಾಗತಿಸುವ ಮತ್ತು ಆತಿಥ್ಯ ನೀಡುವ ಸುಂದರವಾದ ಮತ್ತು ಅದ್ಭುತವಾದ ಬೀಚ್ ‍ಗಳು ಭಾರತದಲ್ಲಿವೆ. ನಮ್ಮ ರಾಜತಾಂತ್ರಿಕರು ಭೇಟಿ ನೀಡಿದ ಸ್ಥಳಗಳನ್ನು ಆಧರಿಸಿದ ಈ ಶಿಫಾರಸುಗಳನ್ನು ಪರಿಶೀಲಿಸಿ’ ಎಂದು ಭಾರತದಲ್ಲಿನ ಇಸ್ರೇಲಿ ರಾಯಭಾರಿ ಕಚೇರಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ. ಇದರ ಜೊತೆಗೆ ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್, ಗೋವಾ ಹಾಗೂ ಕೇರಳದ ಬೀಚ್‍ ಗಳ ಚಿತ್ರವನ್ನು ಹಂಚಿಕೊಂಡಿದೆ. ‘ಮಾಲ್ದೀವ್ಸ್ ಸರಕಾರದ ನಿರ್ಧಾರಕ್ಕೆ ಧನ್ಯವಾದಗಳು. ಇದೀಗ ಇಸ್ರೇಲಿಯನ್ನರು ಲಕ್ಷದ್ವೀಪ ಸಹಿತ ಭಾರತದ ಸುಂದರ ಬೀಚ್‍ ಗಳನ್ನು ಸಂದರ್ಶಿಸಬಹುದು’ ಎಂದು ಭಾರತದಲ್ಲಿನ ಇಸ್ರೇಲ್ ಕಾನ್ಸುಲ್ ಜನರಲ್ ಕೋಬಿ ಶೊಶಾನಿ `ಎಕ್ಸ್’ ಮಾಡಿದ್ದು ಜನವರಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪದ ಪ್ರಾಕೃತಿಕ ಸೌಂದರ್ಯವನ್ನು ಶ್ಲಾಘಿಸಿದ ಪೋಸ್ಟ್ ಅನ್ನು…

Read More

ಭಾರತೀಯ ಮೂಲದ 23 ವರ್ಷದ ತೆಲುಗು ವಿದ್ಯಾರ್ಥಿನಿಯೊಬ್ಬರು ಇತ್ತೀಚೆಗೆ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಹೈದರಾಬಾದ್ ಮೂಲದ ಮತ್ತು ಸ್ಯಾನ್ ಬರ್ನಾರ್ಡಿನೊದ ಕ್ಯಾಲಿಫೋರ್ನಿಯಾ ಸ್ಟೇಟ್ ಯೂನಿವರ್ಸಿಟಿಯಲ್ಲಿ ಅಧ್ಯಯನ ಮಾಡುತ್ತಿರುವ ನಿತಿಶಾ ಕಂದುಲಾ ಮೇ 28 ರಿಂದ ನಾಪತ್ತೆಯಾಗಿದ್ದಾರೆ. ನಿತೀಶಾ ಅವರು ಕೊನೆಯ ಬಾರಿಗೆ ಲಾಸ್ ಏಂಜಲೀಸ್​ ನಲ್ಲಿ ಕಾಣಿಸಿಕೊಂಡಿದ್ದರು ಎಂದು ವಿಶ್ವವಿದ್ಯಾಲಯವು ಎಕ್ಸ್​ ನಲ್ಲಿ ಪೋಸ್ಟ್​ ಮಾಡಿದೆ. ಸ್ಥಳೀಯ ಪೊಲೀಸರು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದು, ವಿದ್ಯಾರ್ಥಿನಿಯ ಪತ್ತೆಗಾಗಿ ಸಾರ್ವಜನಿಕರಿಂದ ಸಹಾಯ ಕೋರಿದ್ದಾರೆ. ತೆಲಂಗಾಣ ಮೂಲದ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಒಂದು ತಿಂಗಳೊಳಗೆ ಇಂಥ ಮತ್ತೊಂದು ಘಟನೆ ನಡೆದಿರುವುದು ಕಳವಳ ಮೂಡಿಸಿದೆ. ತೆಲಂಗಾಣ ಮೂಲದ ರೂಪೇಶ್ ಚಂದ್ರ ಚಿಂತಾಕಿಂಡಿ ಕಳೆದ ತಿಂಗಳು ಚಿಕಾಗೋದಲ್ಲಿ ನಾಪತ್ತೆಯಾಗಿದ್ದರು. ಈ ವಿದ್ಯಾರ್ಥಿ ಬಗ್ಗೆ ಈವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನಾವು ಸೇವಿಸುವ ಆಹಾರಗಳಲ್ಲಿ ಪೌಷ್ಟಿಕಾಂಶಗಳ ಕೊರತೆ ಉಂಟಾದರೆ ಅದು ನಮ್ಮ ದೇಹದ ಅಪೌಷ್ಟಿಕತೆಗೆ ಕಾರಣವಾಗುತ್ತದೆ. ಆದ್ದರಿಂದ ನಾವು ಯಾವುದೇ ಆಹಾರ ಸೇವನೆ ಮಾಡಿದರೂ ಮೊದಲು ಅದರಲ್ಲಿರುವ ಪೌಷ್ಟಿಕ ಸತ್ವಗಳ ಮತ್ತು ಖನಿಜಾಂಶಗಳ ಕಡೆಗೆ ನಮ್ಮ ಗಮನ ಕೊಡಬೇಕು. ಮೊಟ್ಟೆಯ ಪ್ರಸ್ತಾಪದಲ್ಲೂ ಅಷ್ಟೇ. ನೋಡಲು ಚಿಕ್ಕದಿದ್ದರೂ ಮೊಟ್ಟೆಗಳಲ್ಲಿ ಅಗತ್ಯಕ್ಕಿಂತಲೂ ಹೆಚ್ಚಾದ ಪೌಷ್ಟಿಕ ಸತ್ವಗಳು ಅಡಗಿವೆ. ಸಮತೋಲನ ಆಹಾರ ಪದ್ಧತಿಯಲ್ಲಿ ಮೊಟ್ಟೆಗಳಿಗೆ ವಿಶೇಷ ಸ್ಥಾನವನ್ನು ಕೊಡಲಾಗಿದೆ. ಮೊಟ್ಟೆಗಳು ಪ್ರೋಟೀನ್ ಅಂಶದ ಉತ್ತಮ ಮೂಲಗಳು ಎಂದು ಪ್ರತಿಯೊಬ್ಬರಿಗೂ ತಿಳಿದಿದೆ. ಮೊಟ್ಟೆಗಳಲ್ಲಿ ಮನುಷ್ಯನ ಹೃದಯದ ಆರೋಗ್ಯಕ್ಕೆ ಸಹಕಾರಿಯಾಗಿರುವ ಒಳ್ಳೆಯ ಕೊಬ್ಬಿನ ಅಂಶಗಳು ಎಂದೇ ಖ್ಯಾತಿಯಾದ” ಅಪರ್ಯಾಪ್ತ ಕೊಬ್ಬಿನ ಅಂಶಗಳು” ಮತ್ತು ಬಹು ಮುಖ್ಯವಾದ ಪೌಷ್ಟಿಕಾಂಶಗಳಾದ ವಿಟಮಿನ್ ‘ ಬಿ6 ‘, ವಿಟಮಿನ್ ‘ ಬಿ12 ‘ ಮತ್ತು ವಿಟಮಿನ್ ‘ ಡಿ ‘ ಅಂಶಗಳು ಸೇರಿವೆ. ಮೊಟ್ಟೆಯು ವಿವಿಧ ಅಗತ್ಯ ಪೋಷಕಾಂಶಗಳನ್ನು ಸಹ ಹೊಂದಿರುತ್ತವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಸುದ್ದಿಗೋಷ್ಠಿಯಲ್ಲಿ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಿ‌ ಮಾತನಾಡಿ, “ಸಿದ್ದರಬೆಟ್ಟದ ಕ್ಷೇತ್ರದ ಬಾಳೆಹೊನ್ನೂರು ಖಾಸಾ ಶಾಖಾ ಮಠದ 18ನೇ ವರ್ಷದ ವಾರ್ಷಿಕೋತ್ಸವ, ಶ್ರೀಜಗದ್ಗುರು ರೇಣುಕಾಚಾರ್ಯರ, ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ ಹಾಗೂ 25ಕ್ಕೂ ಹೆಚ್ಚು ಸಾಮೂಹಿಕ ವಿವಾಹಗಳು, ಜನಾಜಾಗೃತಿ ಧರ್ಮ ಸಮಾರಂಭವನ್ನು ಆಯೋಜನೆ ಮಾಡಲಾಗಿದೆ. ಧಾರ್ಮಿಕ ಮತ್ತು ಸಮಾಜಿಕವಾಗಿ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದೇವೆ. ಮಠದ ಭಕ್ತರನ್ನು ವಿಶೇಷವಾಗಿ ಪ್ರೀತಿ ವಾತ್ಸಲ್ಯದಿಂದ ಕಾಣುವ ಉದ್ದೇಶಪೂರ್ವಕವಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ದೇಶದ ಸಂಸ್ಕೃತಿ, ಜೂ.೮ ಪುಸ್ತಕದ ದಾಸೋಹ, ತಂತ್ರಜ್ಞಾನದ ಬಳಕೆಯಿಂದ ಪುಸ್ತಕದ ಕಡೆ ಗಮನ ಹರಿಸುವುದು ಈಗಿನ ಯುವ ಪೀಳಿಗೆಯಲ್ಲಿ ಕಡಿಮೆಯಾಗಿದೆ. ಪುಸ್ತಕದ ದಾಸೋಹವನ್ನು 3 ವರ್ಷದಿಂದಲೂ ನಡೆಸಿಕೊಂಡು ಬಂದಿದ್ದು, ಪ್ರತಿ ವರ್ಷ 10ಸಾವಿರಕ್ಕೂ ಅಧಿಕ ಪುಸ್ತಕವನ್ನು ವಿತರಣೆ ಮಾಡಲಾಗಿದೆ. ಇದರಿಂದ ಬಡಕುಟುಂಬದ ಉಜ್ವಲ ಭವಿಷ್ಯಕ್ಕೆ ಕಾರಣಾವಾಗುತ್ತದೆ. ಸಿದ್ದೇಶ್ವರ ಸ್ವಾಮಿಗೆ ಬಿಲ್ಪಾರ್ಚನೆ, ರುದ್ರಾಭಿಷೇಕ, ಪಲ್ಲಕ್ಕಿ ಉತ್ಸವ, ವಾರ್ಷಿಕೋತ್ಸವದ ಧಾರ್ಮಿಕ ಸಮಾರಂಭ ನಡೆಯುತ್ತದೆ. ಸಾಮೂಹಿಕ ದೀಕ್ಷಾವನ್ನು ನೀಡಲಾಗುವುದು. ರಂಭಾಪುರಿ ಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಸಲಾಗುವುದು.…

Read More

ಸರಗೂರು: ವಿಶ್ವ ಪರಿಸರ ದಿನವನ್ನು ವಿಶ್ವಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಯನ್ನು ಉತ್ತೇಜಿಸಲು ಆಚರಿಸಲಾಗುತ್ತದೆ. ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಆಗತ್ತೂರು ಶಾಲೆಯ ದೈಹಿಕ ಶಿಕ್ಷಕ ಬಂಗಾರಯ್ಯ ತಿಳಿಸಿದರು. ತಾಲ್ಲೂಕಿನ ಸಾಗರೆ ಗ್ರಾಪಂ ವ್ಯಾಪ್ತಿಯ ಆಗತ್ತೂರು ಗ್ರಾಮದಲ್ಲಿ ಬುಧವಾರ ದಂದು ವಿಶ್ವ ಪರಿಸರ ದಿನಾಚರಣೆಯಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಹಾಗೂ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ. ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನ ಅವಲಂಬಿಸಿದೆ ಎಂದರೆ ತಪ್ಪಾಗಲಾರದು. ಆದರೆ ಇತ್ತೀಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು…

Read More

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್‌ ಗೆಲುವು ಸಾಧಿಸಿದ ಬೆನ್ನಲ್ಲೇ ಚಿಕ್ಕಬಳ್ಳಾಪುರದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. “ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ ಒಂದು ಮತದ ಮುನ್ನಡೆ ಸಾಧಿಸಿದದೂ ನಾನು ರಾಜೀನಾಮೆ ನೀಡುತ್ತೇನೆ” ಎಂದು ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದರು. ಇದೀಗ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ. ಸುಧಾಕರ್‌ ಜಯ ಗಳಿಸಿದ್ದು, ಇದರ ಬೆನ್ನಲ್ಲೇ ಮಂಗಳವಾರ ರಾತ್ರಿ ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಪ್ರದೀಪ್‌ ಈಶ್ವರ್‌ ಮನೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಜೂನ್ 9ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ದೇಶದ ರಾಜಕೀಯದಲ್ಲಿ ಕಿಂಗ್ ಮೇಕರ್ ಪಟ್ಟದಲ್ಲಿರುವ ಚಂದ್ರಬಾಬು ನಾಯ್ಡು ಇದೀಗ ಜೂನ್ 9 ರಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿ(TDP) ಪಕ್ಷ 158 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಅಧಿಕಾರರೂಡ ಜಗನ್ ಮೋಹನ್ ರೆಡ್ಡಿ ವೈಎಸ್ಆರ್(YSR) ಕಾಂಗ್ರೆಸ್ ನೆಲಕಚ್ಚಿದೆ. NDA ಮೈತ್ರಿಕೂಟ ಪಕ್ಷವಾದ ಟಿಡಿಪಿ 133, ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ 21 ಹಾಗೂ ಬಿಜೆಪಿ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಕಳೆದ ಬಾರಿ ಭರ್ಜರಿ ಬಹುಮತದೊಂದಿಗೆ ಸರ್ಕಾರ ರಚಿಸಿದ್ದ ಜಗನ್ ರೆಡ್ಡಿ ನೇತೃತ್ವದ YSRCP ಪಕ್ಷ ಕೇವಲ 15 ಸ್ಥಾನಗಳಿಗೆ ಕುಸಿದಿದೆ. ಒಟ್ಟು 178 ಸ್ಥಾನಗಳ ಪೈಕಿ ಅಭೂತಪೂರ್ವ ಗೆಲುವು ಕಂಡಿರುವ ಟಿಡಿಪಿ ಯಾವುದೇ ಅಡೆತಡೆ ಇಲ್ಲದೆ ಸರ್ಕಾರ ರಚಿಸಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

2024 ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಫಲಿತಾಂಶ ಹೊರಬಿದ್ದ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರ ಸ್ಥಾನ ಗಟ್ಟಿಯಾಗಿದೆಯೇ? ಹೀಗೊಂದು ಚರ್ಚೆ ಪಕ್ಷದ ಪಾಳಯದಲ್ಲಿ ಹುಟ್ಟಿಕೊಂಡಿದ್ದು, ಹೌದು‌ ಎನ್ನುತ್ತಿದೆ ಮೂಲಗಳು. ಹಾಗಾದ್ರೆ, ಚುನಾವಣೆಯ ಫಲಿತಾಂಶ ವಿಜಯೇಂದ್ರರ ಸ್ಥಾನವನ್ನು ಗಟ್ಟಿಗೊಳಿಸಿದ್ದೇಗೆ? ವಿಜಯೇಂದ್ರ ನಿಜಕ್ಕೂ ಮಾಡಿದ್ದೇನು?. ರಾಜ್ಯದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಿದೆ. ರಾಜ್ಯದಲ್ಲಿ ಬಿಜೆಪಿ ವಿಪಕ್ಷ ಸ್ಥಾನದಲ್ಲಿ ಕುಳಿತಿದ್ರೂ ಸಹ 28 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಲ್ಲಿ ಗೆದ್ದು ಬೀಗುವ ಮೂಲಕ, ಕಾಂಗ್ರೆಸ್​ ಪಕ್ಷವನ್ನು ಕಟ್ಟಿಹಾಕುವಲ್ಲಿ ಕೇಸರಿ ಪಡೆ ಸಫಲವಾಗಿದೆ. ಇನ್ನು ಇಂತಹ ಪ್ರದರ್ಶನ ಮಾಡಲು ಪಕ್ಷಕ್ಕೆ ಸಾರಥಿ ಬಹಳ ಮುಖ್ಯ. ಆ ಸಾರಥಿಯ ಸ್ಥಾನದಲ್ಲಿ ಕುಳಿತಿರುವ ಬಿ.ವೈ. ವಿಜಯೇಂದ್ರ ಅದರಲ್ಲಿ ಸಕ್ಸಸ್​ ಆಗಿದ್ದಾರೆ. ಕಳೆದ ಆರೇಳು ತಿಂಗಳಿಂದ ಬಿಜೆಪಿ ಸಾರಥ್ಯ ವಹಿಸಿಕೊಂಡಿರುವ ಬಿ.ವೈ. ವಿಜಯೇಂದ್ರ, ಹೈಕಮಾಂಡ್​ನ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ. ಪಕ್ಷ ಸಂಘಟನೆ ಮಾಡಿ ಪಕ್ಷಕ್ಕೆ ಲೋಕ ಕದನದಲ್ಲಿ ಬಿಜೆಪಿ ಪರ ವಾತಾವರಣ ಸೃಷ್ಠಿಸಿದ್ದಾರೆ. ಕಾಂಗ್ರೆಸ್ ಕಳೆದ…

Read More