Subscribe to Updates
Get the latest creative news from FooBar about art, design and business.
- ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?
- ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್ ಲೈನ್ ಅರ್ಜಿ ಆಹ್ವಾನ
- ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
- NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ಜು. 29ರಂದು ಔರಾದ್ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
- ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
- ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
- ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
Author: admin
ಇಡೀ ವಿಶ್ವವೇ ಕುತೂಹಲದಿಂದ ಎದುರು ನೋಡ್ತಿದ್ದ ಭಾರತ ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಮಿತ್ರಪಕ್ಷಗಳ ಜೊರೆ ಸೇರಿ ಬಿಜೆಪಿ 3ನೇ ಬಾರಿ ಅಧಿಕಾರಕ್ಕೇರಲು ಸರ್ವ ಸನ್ನದ್ಧವಾಗಿದೆ. ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್ಡಿಎ, ಪ್ರಧಾನಿ ನರೇಂದ್ರ ಮೋದಿ ಅವರ ಲೆಕ್ಕಾಚಾರಗಳು ಹಾಗೂ ಮತದಾನೋತ್ತರ ಸಮೀಕ್ಷೆಗಳ ಭವಿಷ್ಯವನ್ನು ಮತದಾರ ಪ್ರಭು ತಲೆಕೆಳಗೆ ಮಾಡಿದ್ದಾನೆ. ಐತಿಹಾಸಿಕ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವಷ್ಟು ಸರಳ ಬಹುಮತವನ್ನು ಎನ್ಡಿಎ ಪಡೆದಿದೆ. 400 ಕ್ಷೇತ್ರಗಳನ್ನು ಗೆಲ್ಲುವ ಪ್ರಧಾನಿ ಮೋದಿಯ ಕನಸು ಭಗ್ನವಾಗಿದೆ. 543 ಸಂಖ್ಯಾಬಲದ ಲೋಕಸಭೆಯಲ್ಲಿ ಅಧಿಕಾರ ಹಿಡಿಯಲು 272 ಸ್ಥಾನಗಳ ಬೇಕು. ಬಿಜೆಪಿಯಾಗಲಿ, ಕಾಂಗ್ರೆಸ್ ಆಗಲಿ ಸ್ಪಷ್ಟ ಬಹುಮತ ಪಡೆದಿಲ್ಲ. ಆದರೆ ಎನ್ಡಿಎಗೆ ಸರಳ ಬಹುಮತ ಸಿಕ್ಕಿದೆ. ಎನ್ಡಿಎ 293, ಇಂಡಿಯಾ ಒಕ್ಕೂಟ 233 ಹಾಗೂ ಇತರೆ 17 ಕ್ಷೇತ್ರಗಳಲ್ಲಿ ಗೆಲುವು ಸಿಕ್ಕಿದೆ. 2014.. 2019ರಲ್ಲಿ ಪ್ರಚಂಡ ಜಯಗಳಿಸಿದ್ದ ಕೇಸರಿ ಪಡೆ 2024ರ ಚುನಾವಣೆಯಲ್ಲಿ ನಿರೀಕ್ಷಿಸಿದಷ್ಟು ದೊಡ್ಡಮಟ್ಟದ ಗೆಲುವು ಸಿಕ್ಕಿಲ್ಲ. ಕಳೆದ 2 ಬಾರಿ ಕೊಟ್ಟಷ್ಟು ಖುಷಿಯನ್ನು…
ನಟ ಪ್ರಕಾಶ್ ರಾಜ್ ಅವರು ಮೊದಲಿನಿಂದಲೂ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಆ ಬಗ್ಗೆ ಪ್ರಕಾಶ್ ರಾಜ್ ಪ್ರತಿಕ್ರಿಯಿಸಿದ್ದಾರೆ. ಈ ಬಾರಿ ಬಿಜೆಪಿಯ ಎನ್ ಡಿಎ 400ಕ್ಕೂ ಹೆಚ್ಚು ಸೀಟ್ ಪಡೆಯುತ್ತದೆ ಎಂದು ಬಹುತೇಕರು ಹೇಳಿದ್ದರು. ಬಿಜೆಪಿ ನಾಯಕರು ಇದನ್ನು ಆಗಾಗ ಪುನರುಚ್ಚರಿಸಿದ್ದರು. ಆದರೆ ಆ ರೀತಿ ಆಗಿಲ್ಲ. ಅದೇ ವಿಚಾರವನ್ನು ಇಟ್ಟುಕೊಂಡು ಪ್ರಕಾಶ್ ರಾಜ್ ಅವರು ಈಗ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿರುವ ನಟ ಪ್ರಕಾಶ್ ರಾಜ್, ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಯುವತಿಯೊಬ್ಬಳ ‘ಅಬ್ಕಿ ಬಾರ್ 400 ಪಾರ್’ ಘೋಷಣೆಯನ್ನು ಹಂಚಿಕೊಂಡು ಪ್ರಧಾನಿಯ ಕಾಲೆಳೆದಿದ್ದಾರೆ. ಪ್ರಕಾಶ್ ರಾಜ್ ಸಾಮಾಜಿಕ ಜಾಲತಾಣದಲ್ಲಿ, ‘ಚಕ್ರವರ್ತಿ ನಗ್ನನಾಗಿದ್ದಾನೆ. ಈಗ ಬೇರೊಬ್ಬರ ಬೆಂಬಲದಲ್ಲಿ ನಡೆಯಲು ಒತ್ತಾಯಿಸುತ್ತಿದ್ದಾನೆ. ಅವರ ಅಂಹಕಾರವನ್ನು ಪಂಕ್ಚರ್ ಮಾಡಿದ್ದಕ್ಕಾಗಿ ಮತ್ತು ಅವರ ಸ್ಥಾನವನ್ನು ತೋರಿಸಿದ್ದಕ್ಕಾಗಿ ಭಾರತ ಮತ್ತು ಜವಾಬ್ದಾರಿಯುತ ನಾಗರಿಕ ಸಮಾಜಕ್ಕೆ ಧನ್ಯವಾದಗಳು. ನಾವು ನಮ್ಮ ಪರವಾಗಿ ಚೆನ್ನಾಗಿ ಹೋರಾಡಿದ್ದೇವೆ. ನಾವು ಮುಂದುವರೆಯುತ್ತೇವೆ’…
ಶಿವಮೊಗ್ಗದ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಅವರ ಸೋಲಿನ ಬಳಿಕ ಕುಮಾರ್ ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸೋಲು-ಗೆಲುವಿನ ನಡುವೆಯೇ ಬಂಗಾರಪ್ಪ ಕುಟುಂಬದ ಅಸಮಾಧಾನ ಮತ್ತೆ ಭುಗಿಲೆದ್ದಿದೆ. ಮಧು ಬಂಗಾರಪ್ಪ ಹಾಗೂ ಗೀತಾ ಶಿವರಾಜ್ ಕುಮಾರ್ ಅವರಿಗೆ ತಿರುಗೇಟು ಕೊಟ್ಟ ಕುಮಾರ್ ಬಂಗಾರಪ್ಪ, ಶಿವಣ್ಣನಿಗೂ ಟಾಂಗ್ ಕೊಟ್ಟಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಶಾಸಕ ಕುಮಾರ ಬಂಗಾರಪ್ಪ, ಗೀತಾ ಶಿವರಾಜ್ ಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. ಕುಮಾರ್ ಬಂಗಾರಪ್ಪ ಸೋಶಿಯಲ್ ಮೀಡಿಯಾ ಪೋಸ್ಟ್ ಸಂಚಲನ ಮೂಡಿಸಿದೆ. ಕರ್ನಾಟಕ ಕಂಡ ಧೀಮಂತ ರಾಜಕಾರಣಿ, ಬಡವರ ಬಂಧು ಎಂಬ ಸಾರ್ಥಕ ಬಿರುದಾವಳಿಯನ್ನು ತಮ್ಮ ಹೆಸರಿನೊಡನೆ ನಡೆಸಿಕೊಂಡು ಬದುಕಿದವರು ಸಾರೆಕೊಪ್ಪ ಬಂಗಾರಪ್ಪ. ಹಿಂದುಳಿದ ವರ್ಗಗಳಿಗೆ ಆಶಾಕಿರಣವಾಗಿದ್ದ. ಒಬ್ಬ ಧಿರೋದ್ದಾತ ನಾಯಕನನ್ನು ನನ್ನ ತಮ್ಮ ಹಾಗೂ ತಂಗಿ ತಮ್ಮ ಸ್ವಾರ್ಥ ಸಾಧನೆಗಾಗಿ, ಕೇವಲ ಒಂದು ಲೋಕಸಭಾ ಕ್ಷೇತ್ರಕ್ಕೆ ಅಂದರೆ ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತಗೊಳಿಸಿದ್ದು ಇವರ ಸಂಕುಚಿತ…
ಭಾರೀ ನಿರೀಕ್ಷೆ ಹುಟ್ಟಿಸಿದ್ದ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟ ಆಗಿದೆ. ಕರ್ನಾಟಕದಲ್ಲಿ ಕಳೆದ 20 ವರ್ಷಗಳಲ್ಲಿ ಕಾಂಗ್ರೆಸ್ ಅಭೂತಪೂರ್ವ ಸಾಧನೆ ತೋರಿದೆ. ಉತ್ತರದಲ್ಲಿ ಖರ್ಗೆ ಖದರ್ ತೋರಿದ್ದಾರೆ. ಆದ್ರೆ ಕಾಂಗ್ರೆಸ್ ಡಬಲ್ ಡಿಜಿಟ್ ನಿರೀಕ್ಷೆ ಹುಸಿಯಾಗಿದೆ. ಪ್ರಮುಖ ನಾಯಕರು ಹಾಗೂ ಅವರ ಮಕ್ಕಳಿಗೆ ಸೋಲಿನ ಆಘಾತವಾಗಿದೆ. ಅದರಲ್ಲಿ ಲೋಕಸಭಾ ಚುನಾವಣೆಯಲ್ಲಿ ಗಮನ ಸೆಳೆದ ಕ್ಷೇತ್ರದಲ್ಲಿ ಬೆಳಗಾವಿ ಒಂದು. ಇಲ್ಲಿ ಕಣಕ್ಕಿಳಿದಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಗೆಲುವಿನ ನಿರೀಕ್ಷೆಯಲ್ಲಿದ್ದರು. ಆದ್ರೆ ಬೆಳಗಾವಿಯ ಮನೆ ಮಗನಿಗೆ ಮತದಾರರು ಕೈ ಕೊಟ್ಟಿದ್ದಾರೆ. ಕ್ಷೇತ್ರಕ್ಕೆ ವಲಸಿಗರಾದ್ರೂ ಅನುಭವಿ ಜಗದೀಶ್ ಶೆಟ್ಟರ್ಗೆ ಮಣೆ ಹಾಕಿದ್ದರು. ಮಗನ ಸೋಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಆಘಾತ ತಂದಿದೆ. ಮತ್ತೊಂದೆಡೆ ಬಾಗಲಕೋಟೆ ಕ್ಷೇತ್ರದಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್ ಈ ಬಾರಿ ಸಚಿವ ಶಿವಾನಂದ ಪಾಟೀಲ್ ಪುತ್ರಿ ಹೊಸ ಮುಖ ಸಂಯಕ್ತಾ ಪಾಟೀಲ್ ರನ್ನು ಕಣಕ್ಕಿಳಿಸಿತ್ತು. ಬಂಡಾಯದ ಬಿಸಿ ಹಾಗೂ ಇನ್ನಿತರ ಕಾರಣಗಳಿಂದ ಸಂಯುಕ್ತ ಪಾಟೀಲ್ಗೆ ಸೋಲಾಗಿದೆ.…
ಪಾಟ್ನಾ: ಹಲವು ವರ್ಷಗಳ ಸಂಘರ್ಷದ ಬಳಿಕ ಎಲ್ಜೆಪಿ (ರಾಮ್ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್ ನಿರ್ಣಾಯಕ ಗೆಲುವು ಸಾಧಿಸಿದ್ದು, 2020ರ ಅಕ್ಟೋಬರ್ನಲ್ಲಿ ಮೃತಪಟ್ಟ ರಾಮ್ ವಿಲಾಸ್ ಪಾಸ್ವಾನ್ ಅವರ ನೈಜ ರಾಜಕೀಯ ಉತ್ತರಾಧಿಕಾರಿ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ಎನ್ ಡಿಎ ಮೈತ್ರಿಕೂಟದ ಘಟಕ ಪಕ್ಷವಾಗಿ ಸ್ಪರ್ಧಿಸಿದ್ದ ಎಲ್ಲ ಐದು ಕ್ಷೇತ್ರಗಳಲ್ಲಿ ಇವರ ಪಕ್ಷ ಗೆಲುವು ಸಾಧಿಸಿದೆ. ತಮ್ಮ ಪಕ್ಷದ ಶೇಕಡ 100ರಷ್ಟು ಗೆಲುವಿನ ಸಾಧನೆಯನ್ನು ಮುಂದುವರಿಸಿರುವ ಜತೆಗೆ ಬಿಹಾರದ ರಾಜಕೀಯ ರಂಗದಲ್ಲಿ ಹೊಸ ದಲಿತ ಐಕಾನ್ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. 2019ರ ಚುನಾವಣೆಯಲ್ಲಿ ಕೂಡಾ ರಾಮ್ವಿಲಾಸ್ ಪಾಸ್ವಾನ್ ನೇತೃತ್ವದಲ್ಲಿ ಎಲ್ಜೆಪಿ, ಎನ್ ಡಿಎ ಸೀಟು ಹೊಂದಾಣಿಕೆಯಡಿ ಹಂಚಿಕೆಯಾಗಿದ್ದ ಎಲ್ಲ ಆರು ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಚಿರಾಗ್ ಪಕ್ಷಕ್ಕೆ ಐದು ಸ್ಥಾನಗಳನ್ನು ಈ ಬಾರಿ ಹಂಚಿಕೆ ಮಾಡಿ ಅವರ ಎದುರಾಳಿ ಹಾಗೂ ಚಿಕ್ಕಪ್ಪ ಪಶುಪತಿ ಕುಮಾರ್ ಪರಸ್ ನೇತೃತ್ವದ ರಾಷ್ಟ್ರೀಯ ಲೋಕ ಜಯಶಕ್ತಿ ಪಕ್ಷಕ್ಕೆ ಯಾವುದೇ ಕ್ಷೇತ್ರವನ್ನು ನೀಡದಿರುವುದು ರಾಜಕೀಯ ಪಂಡಿತರಲ್ಲಿ ಅಚ್ಚರಿ ಮೂಡಿಸಿತ್ತು. ಆದರೆ ಈಗ…
ಸತತ ಮೂರನೇ ಬಾರಿಗೆ ರಾಷ್ಟ್ರ ರಾಜಧಾನಿಯ ಎಲ್ಲ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಮತ ವಿಭಜನೆಯನ್ನು ತಡೆಯುವ ಉದ್ದೇಶದಿಂದ ಆಮ್ ಆದ್ಮಿ ಪಾರ್ಟಿ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸ್ಥಾನ ಹೊಂದಾಣಿಕೆ ಮಾಡಿಕೊಂಡರೂ ಬಿಜೆಪಿಯ ಓಟಕ್ಕೆ ಬ್ರೇಕ್ ಹಾಕುವಲ್ಲಿ ವಿಫಲವಾಗಿವೆ. 2019ರ ಲೋಕಸಭಾ ಚುನಾವಣೆಯಲ್ಲಿ ಗಳಿಸಿದ ಮತಗಳಿಗೆ ಹೋಲಿಸಿದರೆ ಶೇಕಡ 2.4ರಷ್ಟು ಕಡಿಮೆ ಮತಗಳನ್ನು ಪಡೆದರೂ, 54.3% ಮತ ಗಳಿಸುವ ಮೂಲಕ ದಿಲ್ಲಿ ತನ್ನ ಭದ್ರಕೋಟೆ ಎನ್ನುವುದನ್ನು ಸಾಬೀತುಪಡಿಸಿದೆ. ಆಮ್ ಆದ್ಮಿ ಪಾರ್ಟಿ ಮತ್ತು ಕಾಂಗ್ರೆಸ್ ಒಟ್ಟು 43.2% ಮತ ಗಳಿಸಿವೆ. ಮನೋಜ್ ತಿವಾರಿ ಅವರನ್ನು ಹೊರತುಪಡಿಸಿ ಉಳಿದೆಲ್ಲ ಹಾಲಿ ಸಂಸದರಿಗೆ ಕೊಕ್ ನೀಡಿದರೂ, ಹೊಸ ಮುಖಗಳು ಪಕ್ಷವನ್ನು ಗೆಲುವಿನ ದಡ ಸೇರಿಸುವಲ್ಲಿ ಸಫಲರಾಗಿದ್ದಾರೆ. ಕನ್ಹಯ್ಯ ಕುಮಾರ್ ಅವರನ್ನು ಮನೋಜ್ ತಿವಾರಿ 1.37 ಲಕ್ಷ ಮತಗಳಿಂದ ಪರಾಭವಗೊಳಿಸಿದ್ದು, ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದ ಬಾನ್ಸುರಿ ಸ್ವರಾಜ್, ಎಎಪಿಯ ಸೋಮನಾಥ್ ಭಾರ್ತಿ ಅವರನ್ನು 78 ಸಾವಿರ ಮತಗಳಿಂದ ಸೋಲಿಸಿದ್ದಾರೆ.…
ಲೋಕಸಭಾ ಚುನಾವಣೆ ಮುಗಿದಿದ್ದು, ಫಲಿತಾಂಶ ಕೂಡ ಹೊರಬಿದ್ದಿದೆ. ಆದರೆ ಅದನ್ನು ಅರಗಿಸಿಕೊಳ್ಳಬೇಕಿದೆ. ಏಕೆಂದರೆ ಮತದಾರ ಪ್ರಭುಗಳ ನೀಡಿದ ತೀರ್ಮಾನ ಇಡೀ ದೇಶದ ರಾಜಕೀಯದಲ್ಲೇ ಭಾರೀ ಸಂಚಲನ ಸೃಷ್ಟಿಸಿದೆ. ನಮ್ಮ ಕರ್ನಾಟಕ ರಾಜ್ಯದ ಚಿತ್ರಣ ನೋಡುವದಾದರೆ ರಾಜ್ಯದಲ್ಲಿ ಬಿಜೆಪಿ 17, ಕಾಂಗ್ರೆಸ್ 9 ಹಾಗೂ ಜೆಡಿಎಸ್ 2 ಸ್ಥಾನಗಳನ್ನು ಪಡೆದು ಗೆಲುವಿನ ನಗೆ ಬೀರಿವೆ. ಆದರೀಗ ಈ ನಡುವೆ 4 ವಿಧಾನಸಭಾ ಸ್ಥಾನಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ರಾಜ್ಯದಲ್ಲಿ ಸಕ್ರಿಯ ರಾಜಕಾರಣದಲ್ಲಿ ತೊಡಗಿದ್ದು, ಇದೀಗ ರಾಷ್ಟ್ರ ರಾಜಕಾರಣದಲ್ಲಿ ಮಿಂಚಲು ರೆಡಿಯಾಗಿರುವ ಹೆಚ್.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಇ.ತುಕರಾಂ ಮತ್ತು ಕೋಟಾ ಶ್ರೀನಿವಾಸ್ ಪೂಜಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಹೀಗಾಗಿ ಇವರ ಸ್ಥಾನಗಳು ಮುಂದೆ ತೆರವಾಗಲಿದ್ದು, ಈ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಅವರು ಪ್ರತಿನಿಧಿಷಿದ್ದ ಚೆನ್ನಪಟ್ಟಣ, ಬೊಮ್ಮಾಯಿ ಅವರ ಕ್ಷೇತ್ರ ಶಿಗ್ಗಾವಿ, ತುಕರಾಂ ಅವರ ಸಂಡೂರು ಕ್ಷೇತ್ರ ಹಾಗೂ ಸರಳ ರಾಜಕಾರಣಿಯಾದ ಕೋಟ…
ತುಮಕೂರು: ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿ ವಿ.ಸೋಮಣ್ಣ ಅವರಿಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಪ್ರಮಾಣ ಪತ್ರವನ್ನು ವಿತರಿಸಿದರು. ತುಮಕೂರು ಲೋಕಸಭಾ ಕ್ಷೇತ್ರ ವಿವರ: * ಗೆಲುವು : ವಿ.ಸೋಮಣ್ಣ ( ಬಿಜೆಪಿ ಅಭ್ಯರ್ಥಿ) * ಸೋಲು : ಎಸ್.ಪಿ.ಮುದ್ದಹನುಮೇಗೌಡ (ಕಾಂಗ್ರೆಸ್ ಅಭ್ಯರ್ಥಿ) * ವಿ.ಸೋಮಣ್ಣ, ಬಿಜೆಪಿ ಅಭ್ಯರ್ಥಿ – 7,20,946 ಪಡೆದ ಮತಗಳು * ಎಸ್.ಪಿ.ಮುದ್ದಹನುಮೆಗೌಡ, ಕಾಂಗ್ರೆಸ್ ಅಭ್ಯರ್ಥಿ, 5,45,352 ಪಡೆದ ಮತಗಳು * ಒಟ್ಟು1,75,594 ಮತಗಳ ಅಂತರದಲ್ಲಿ ಗೆದ್ದ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ. ಸತತವಾಗಿ ಎಣಿಕೆಯ ಎಲ್ಲಾ 18 ಸುತ್ತಗಳಲ್ಲಿಯೂ ಮುನ್ನಡೆ ಕಾಯ್ದುಕೊಂಡಿದ್ದ ವಿ.ಸೋಮಣ್ಣ.
ತುಮಕೂರು: ನಗರದ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಸಂಜೆ ಪದವಿ ಕಾಲೇಜು ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಬಿ.ವಿ.ಎ ವಿದ್ಯಾರ್ಥಿಗಳಿಂದ ಚಿತ್ರಕಲಾ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಸರ್ಕಾರಿ ಚಿತ್ರಕಲಾ ಪದವಿ ಕಾಲೇಜು ಪ್ರಾಂಶುಪಾಲ ಸಿ.ಸಿ.ಬಾರಕೇರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿಶ್ವ ಮಾನವ ಸಭಾಂಗಣದಲ್ಲಿ ಬುಧವಾರ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ನಾಡಿನ ಹಿರಿಯ ಚಿತ್ರಕಲಾವಿದ ಪಿ.ಎಸ್.ಗ್ರಾಮ್ ಪುರೋಹಿತ್ ನೆರವೇರಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಚಿತ್ರಕಲಾ ಪದವಿ ಕಾಲೇಜು ಪ್ರಾಂಶುಪಾಲ ಸಿ.ಸಿ.ಬಾರಕೇರ ವಹಿಸಿವರು. ಮುಖ್ಯ ಅತಿಥಿಗಳಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ತರನ್ನುಂ ನಿಖತ್.ಎಸ್, ವಿಶ್ವವಿದ್ಯಾ ನಿಲಯ ಕಲಾ ಕಾಲೇಜಿನ ಪ್ರಾಂಶುಪಾಲರಾದ ಬಿ.ಕರಿಯಣ್ಣ ಹಾಗೂ ಅತಿಥಿಗಳಾಗಿ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಜಿ.ಎಲ್.ನಟರಾಜು, ಕಾಳಜಿ ಫೌಂಡೇಶನ್ ನಿರ್ದೇಶಕ ಎಂ.ಎಸ್. ಗಣೇಶ್ ಮಾರನಹಳ್ಳಿ, ಕಾಳಜಿ ಫೌಂಡೇಶನ್…
31 ವರ್ಷದ ಮಹಿಳೆಯೊಬ್ಬರು ಸಲ್ಲಿಸಿದ್ದ ರಿಟ್ ಅರ್ಜಿ ಮಾನ್ಯ ಮಾಡಿದೆ ಹೈಕೋರ್ಟ್. ಕೊಲೆ ಪ್ರಕರಣವೊಂದರಲ್ಲಿ ಸಜಾಬಂಧಿಯಾಗಿರುವ ಅವರ ಪತಿಯನ್ನು 30 ದಿನ ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ಜೈಲು ಅಧೀಕ್ಷಕರಿಗೆ ಆದೇಶಿಸಿದೆ. ಯಾಕೆ ಗೊತ್ತೆ ? ಸಂತಾನ ಭಾಗ್ಯ ಪಡೆಯುವುದಕ್ಕಾಗಿ 31 ವರ್ಷದ ಮಹಿಳೆಯೊಬ್ಬರು ಸಲ್ಲಿಸಿದ್ದ ರಿಟ್ ಅರ್ಜಿ ಮಾನ್ಯ ಮಾಡಿದೆ ಹೈಕೋರ್ಟ್. ಆನಂದ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋಲಾರದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ 2019ರಲ್ಲಿ ಆದೇಶಿಸಿತ್ತು. ಈ ಶಿಕ್ಷೆಯನ್ನು ಹೈಕೋರ್ಟ್ 2023ರಲ್ಲಿ 10 ವರ್ಷಕ್ಕೆ ಇಳಿಸಿತ್ತು. ಜೈಲಿಗೆ ಹೋಗುವ ಮುನ್ನ ಆನಂದ್ ಮತ್ತು ಅರ್ಜಿದಾರಾಗಿರುವ ಪತ್ನಿ ಪರಸ್ಪರ ಪ್ರೀತಿಸುತ್ತಿದ್ದರು. ಜೈಲಿಗೆ ಹೋದ ಮೇಲೂ ಅವರ ಪ್ರೀತಿ ಮುಂದುವರಿದಿತ್ತು. ಇಬ್ಬರೂ ಮದುವೆಯಾಗಲು ನಿಶ್ಚಯಿಸಿದ್ದರು. ಈ ಸಂಬಂಧ ಆನಂದ್ ಪ್ರಿಯತಮೆ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ್ದ ಹೈಕೋರ್ಟ್ 2023ರ ಮಾರ್ಚ್ ತಿಂಗಳಲ್ಲಿ, ಮದುವೆಯಾಗಲು ಆನಂದ್ ಅವರಿಗೆ 80 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆ ಮಾಡಲು ಆದೇಶಿಸಿತ್ತು. ಈಗ ಸಂತಾನ ಭಾಗ್ಯ…