Subscribe to Updates
Get the latest creative news from FooBar about art, design and business.
- ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?
- ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್ ಲೈನ್ ಅರ್ಜಿ ಆಹ್ವಾನ
- ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
- NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ಜು. 29ರಂದು ಔರಾದ್ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
- ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
- ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
- ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
Author: admin
ತುಮಕೂರು: ಎರಡು ಕಡೆ ವಿಧಾನಸಭೆ ಚುನಾವಣೆಯಲ್ಲಿ ಸೋತ ನನಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಟ್ಟ ರಾಷ್ಟ್ರದ ನಾಯಕರು ಹಾಗೂ ಪಕ್ಷದ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ನೂತನ ಸಂಸದ ವಿ. ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶಿವಕುಮಾರ ಸ್ವಾಮೀಜಿಯವರು ಹಾಗೂ ಆದಿಚುಂಚನಗಿರಿಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಆಶೀರ್ವಾದದಿಂದ, ಪುನಃ ನನ್ನನ್ನು ರಾಜಕೀಯವಾಗಿ ಗೆಲುವು ಸಾಧಿಸಲು ಹಾಗೂ ಜನರ ಕೆಲಸ ಮಾಡಲು ಅವಕಾಶ ಸಿಕ್ಕಿದೆ ಎಂದರು. ದೇಶದ ವ್ಯವಸ್ಥೆಯಲ್ಲಿ ಮೋದಿಯವರ ಜನ ಪರ ಕಾರ್ಯಕ್ರಮಗಳು ಹಾಗೂ ಈ ಹಿಂದಿನ ಸಂಸದ ಬಸವರಾಜ್ ಅವರ ಮಾರ್ಗದರ್ಶನದಲ್ಲಿ ಗೆಲುವು ಲಭಿಸಿದೆ ಎಂದರು. ರಾಜ್ಯದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಎರಡು ಪಕ್ಷದ ಮುಖಂಡರಿಗೆ ಧನ್ಯವಾದ ತಿಳಿಸುತ್ತೇನೆ. ಹೊರಗಿನವರು ಎಂದು ನನಗೆ ಚುನಾವಣೆ ಸಂದರ್ಭದಲ್ಲಿ ಹೇಳಿದ್ದು ಒಳ್ಳೆಯದೇ ಆಯಿತು ಎಂದರು. ಈ ರೀತಿ ಹೇಳಿದವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಮತದಾರರು ಅಂತಿಮವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು. ಇಂಡಿಯಾ ಒಕ್ಕೂಟವು ನಡೆಸಿದ ಅಪಪ್ರಚಾರ…
ಶಿವಮೊಗ್ಗ: ಬೆಳಗ್ಗೆ ಮಟನ್ ಶಾಪ್ ಗೆ ಹೋಗಿದ್ದ ಗ್ರಾಹಕ ತಾನು ಖರೀದಿ ಮಾಡಿದ ಮಟನ್ ಗೆ ಒಂದೆರಡು ಪೀಸ್ ಹೆಚ್ಚಾಗಿ ಹಾಕುವಂತೆ ಗಲಾಟೆ ಮಾಡಿದ್ದಾನೆ. ಈ ವೇಳೆ ಜಗಳ ನಡೆದು ಅಂಗಡಿಯಲ್ಲಿದ್ದ ಅಪ್ರಾಪ್ತ ಬಾಲಕ ಗ್ರಾಹಕನ ತಲೆಗೆ ಕತ್ತಿಯಿಂದ ಹೊಡೆದಿರುವ ಘಟನೆ ಶಿವಮೊಗ್ಗದ ಟಿಪ್ಪು ನಗರದ ಮಟನ್ ಸ್ಟಾಲ್ ನಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಮಟನ್ ಅಂಗಡಿಯ ಬಳಿ ಕುಡಿದು ಗಲಾಟೆ ಮಾಡಿದ ಹಿನ್ನೆಲೆ ನಡೆದ ಹಲ್ಲೆ ಮಾಡಿದ್ದಾನೆಂದು ಆರೋಪಿಸಲಾಗಿದೆ. ಶಿವಮೊಗ್ಗದ ಗಾಡಿ ಕೊಪ್ಪದ ತಾಂಡ ನಿವಾಸಿ ಮಲ್ಲೇಶ್(45) ಹಲ್ಲೆಗೊಳಗಾದ ವ್ಯಕ್ತಿ ಎನ್ನಲಾಗಿದ್ದು, ಕುಡಿದ ಮತ್ತಿನಲ್ಲಿ ಮಲ್ಲೇಶ್ ಮಟನ್ ಅಂಗಡಿಗೆ ಹೋಗಿದ್ದನು. ಅಂಗಡಿಯಲ್ಲಿದ್ದ 16 ವರ್ಷದ ಅಪ್ರಾಪ್ತ ಬಾಲಕನಿಗೆ ಮಟನ್ ಪಡೆದ ಮೇಲೆ ಇನ್ನೂ ಹೆಚ್ಚು ಹಾಕುವಂತೆ ಗಲಾಟೆ ಮಾಡಿದ್ದನು. ಈ ವೇಳೆ ಗಲಾಟೆ ತಾರಕಕ್ಕೇರಿದ್ದು, ಕೈ ಕೈ ಮಿಲಾಯಿಸಿ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಕೈಯಲ್ಲಿದ್ದ ಮಟನ್ ಕತ್ತರಿಸುವ ಕತ್ತಿಯಿಂದ ಯುವಕ ಗ್ರಾಹಕನ ತಲೆಗೆ ಹೊಡೆದಿದ್ದಾನೆ. ಹೊಡೆದ ಪರಿಣಾಮ ತಲೆಯಿಂದ…
ಏರ್ ಶೋ ಸಂದರ್ಭ ಎರಡು ಯುದ್ದ ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದು ನೆಲಕ್ಕಪ್ಪಳಿಸಿದ ಪರಿಣಾಮ, ಓರ್ವ ಪೈಲಟ್ ಸಾವನ್ನಪ್ಪಿ ಮತ್ತೋರ್ವ ತೀವ್ರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಫೋರ್ಚುಗಲ್ ನಲ್ಲಿ ನಡೆದಿದೆ. ಈ ಕುರಿತು ಭಯಾನಕ ವೀಡಿಯೋ ವೈರಲ್ ಆಗಿದ್ದು, ಅದರಲ್ಲಿ ಬೆಜಾ ಏರ್ ಶೋ ಸಂದರ್ಭದಲ್ಲಿ ಆರು ವಿಮಾನಗಳು ಹಾರಾಟ ನಡೆಸುತ್ತಿದ್ದು, ಈ ವೇಳೆ ನಿಯಂತ್ರಣ ಕಳೆದುಕೊಂಡ ಒಂದು ವಿಮಾನ ಅಡ್ಡಾದಿಡ್ಡಿ ಹಾರಲಾರಂಭಿಸಿದೆ. ನಂತರ ಹಾರಾಟದಲ್ಲಿದ್ದ ಮತ್ತೊಂದು ವಿಮಾನಕ್ಕೆ ನೇರವಾಗಿ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಎರಡು ವಿಮಾನಗಳು ನೆಲಕ್ಕೆ ಉರುಳಿವೆ. ಈ ಘಟನೆ ನಡೆದ ಬಳಿಕ ಏರ್ ಶೋ ಅನ್ನು ಸ್ಥಗಿತಗೊಳಿಸಲಾಗಿದೆ. ಈ ಭೀಕರವಾದ ಅಪಘಾತದಿಂದಾಗಿ ಒಂದು ವಿಮಾನದ ಪೈಲೆಟ್ ಸಾವನ್ನಪ್ಪಿದ್ದು ಗಂಭೀರವಾಗಿ ಗಾಯಗೊಂಡಿರುವ ಮತ್ತೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಸ್ತೆ ಮಧ್ಯೆ ಅಪಾಯಕಾರಿಯಾದ ದೈತ್ಯ ಹಾವು ನೋಡಿದ್ರೆ ಯಾರಿಗೇ ಆದ್ರೂ ಒಂದು ಸಾರಿ ಭಯ ಆದೀತು. ಅಂತೆಯೇ ಟ್ರಾಫಿಕ್ ಮಧ್ಯೆ ಏಕಾಏಕಿ ಕಾಣಿಸಿಕೊಂಡ ದೈತ್ಯ ಹಾವಿನ ವೀಡಿಯೋ ಒಂದು ವೈರಲ್ ಆಗಿದೆ. ಹೌದು, @Rainmaker1973 ಎಂಬ ಟ್ವಿಟರ್ ಖಾತೆಯಲ್ಲಿ ಈ ಬೃಹತ್ ಗಾತ್ರದ ಹಾವಿನ ವೀಡಿಯೋ ವೈರಲ್ (Anaconda Video Viral) ಆಗಿದ್ದು, ಬ್ರೆಜಿಲ್ ನ ಪೋರ್ಟೊ ವೆಲ್ಹೋ ನಗರದ ಬಳಿ ಕಂಡು ಬಂದಿರುವ ಈ ಹಾವು ಸರಿ ಸುಮಾರು ನಾಲ್ಕು ಮೀಟರ್ ಉದ್ದ ಮತ್ತು 30 ಕೆಜಿ ತೂಕವಿರಬಹುದು ಎಂದು ಅಂದಾಜಿಸಲಾಗಿದೆ. ಜೂನ್ 2ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಒಂದೇ ದಿನದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ವೈರಲ್ ವಿಡಿಯೋದಲ್ಲಿ ಹಾವು ತನ್ನಷ್ಟಕ್ಕೆ ತೆವಳುತ್ತಾ ಯಾರಿಗೂ ತೊಂದರೆ ಮಾಡದೇ ರಸ್ತೆ ದಾಟಿ ಕಾಡಿನೊಳಗೆ ಹೋಗಿರುವುದು ಕಾಣಬಹುದು. ಈ ದೈತ್ಯ ಹಾವು ಪ್ರತ್ಯಕ್ಷವಾಗುತ್ತಿದ್ದಂತೆ ಸಾಕಷ್ಟು ಜನರು ಸೇರಿದ್ದು, ಹಾವಿಗೆ ಯಾವುದೇ ತೊಂದರೆ ಮಾಡದೇ ತಮ್ಮ ಮೊಬೈಲ್ ಮೂಲಕ ಈ…
1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಹೊಡೆದು ಕೊಂದಿರುವ ಘಟನೆ ಭಾನುವಾರ ಜೊಲ್ಲಾಪುರದ ಕಲಾಂಬಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೈಲಿನ ಬಾತ್ ರೂಮ್ ನಲ್ಲಿ ಸ್ನಾನ ಮಾಡುತ್ತಿದ್ದ. ವೇಳೆ ವಾಗ್ವಾದ ನಡೆದು ಇತರ ಕೈದಿಗಳು 59 ವರ್ಷದ ಮನ್ನಾ ಅಲಿಯಾಸ್ ಮೊಹಮ್ಮದ್ ಅಲಿ ಖಾನ್ ಅಲಿಯಾಸ್ ಮನೋಜ್ ಕುಮಾರ್ ಭವರ್ಲಾಲ್ ಗುಪ್ತಾ ಮೇಲೆ ಹಲ್ಲೆಗೈದಿದ್ದಾರೆ. ಮೊಹಮ್ಮದ್ ಅಲಿ ಖಾನ್ ಸರಣಿ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಯಾಗಿದ್ದಾನೆ. ಮೊಹಮ್ಮದ್ ಅಲಿ ಖಾನ್ ಹಾಗೂ ಕೆಲ ವಿಚಾರಣಾಧೀನ ಕೈದಿಗಳ ನಡುವೆ ಇದ್ದಕ್ಕಿದ್ದಂತೆ ವಾಗ್ವಾದ ನಡೆದಿದೆ. ಈ ವೇಳೆ ಒಳಚರಂಡಿಯಲ್ಲಿಟ್ಟಿದ್ದ ಕಬ್ಬಿಣದ ರಾಡ್ ನಿಂದ ಖಾನ್ ತಲೆಗೆ ಬಲವಾಗಿ ಹೊಡೆದಿದ್ದಾರೆ. ಈ ವೇಳೆ ತೀವ್ರ ರಕ್ತಸ್ತ್ರಾವದಿಂದ ನೆಲದ ಮೇಲೆ ಕುಸಿದು ಬಿದ್ದಿದ್ದಾನೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾದರೂ ಚಿಕಿತ್ಸೆ ಫಲಕಾರಿಯಾಗದೇ ಖಾನ್ ಮೃತಪಟ್ಟಿದ್ದಾನೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ. ದಾಳಿಕೋರರನ್ನು ಪ್ರತೀಕ್ ಅಲಿಯಾಸ್…
ಬೆಂಗಳೂರು ವಿಶ್ವ ವಿದ್ಯಾನಿಲಯದ ಆವರಣದಲ್ಲಿರುವ ಬಿಸಿಎಂ(ಪುರುಷ) ಹಾಸ್ಟೆಲ್ ನಲ್ಲಿ ಕಳಪೆ ಊಟ ಸೇವಿಸಿ 10ರಿಂದ 15 ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಉಂಟಾಗಿದ್ದು, ಇದನ್ನು ಖಂಡಿಸಿ ಹಾಸ್ಟೆಲ್ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ವಿದ್ಯಾರ್ಥಿ ಗೌತಮ್ ಮಾತನಾಡಿ, ‘ಬಿಸಿಎಂ ಹಾಸ್ಟಲ್ ನಲ್ಲಿ ಕಳಪೆ ಊಟ-ಉಪಹಾರ ವಿತರಣೆಯಿಂದ ಪ್ರತಿದಿನ ಸಮಸ್ಯೆ ಸೃಷ್ಟಿಯಾಗುತ್ತಿದೆ. ರವಿವಾರ ಊಟ ಸೇವಿಸಿದ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ-ಭೇದಿ, ಹೊಟ್ಟೆನೋವು ಕಾಣಿಸಿಕೊಂಡಿದೆ. ಇನ್ನು ಕೆಲವು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಹೇಳಿದರು. ಹಾಸ್ಟೆಲ್ ನಲ್ಲಿ ಸಿಬ್ಬಂದಿಗಳು ಬೇಕಾಬಿಟ್ಟಿ ಅಡುಗೆ ಮಾಡುತ್ತಾರೆ. ಅಲ್ಲದೆ ವಿದ್ಯಾರ್ಥಿಗಳು ತಟ್ಟೆಗೆ ಹಾಕಿಕೊಂಡ ಊಟ ಕಳಪೆಯಾಗಿರುವ ಹಿನ್ನೆಲೆಯಲ್ಲಿ ಶೇ.80ರಷ್ಟು ಬಿಸಾಕುತ್ತಾರೆ. ಈ ಸಮಸ್ಯೆಯನ್ನು ನಿಲಯಪಾಲಕರ ಗಮನಕ್ಕೆ ತಂದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಬಿಸಿಎಂ ಹಾಸ್ಟಲ್ ಗೆ ಹೋಗುವ ದಾರಿಯಲ್ಲಿ ಬೀದಿ ದೀಪಗಳಿಲ್ಲದೆ ನಾಯಿಗಳ ಹಾವಳಿ ಹೆಚ್ಚಾಗಿದ್ದು ಒಂದು ತಿಂಗಳಿನಲ್ಲಿ 5 ವಿದ್ಯಾರ್ಥಿಗಳಿಗೆ ನಾಯಿ ಕಚ್ಚಿದೆ. ಹೀಗಾಗಿ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ ಎಂದು…
ಮಾಧ್ಯಮ ಕ್ಷೇತ್ರದ ದಿಗ್ಗಜ ರೂಪರ್ಟ್ ಮರ್ಡೋಕ್ ಅವರು ಶನಿವಾರ ತಮ್ಮ 93ನೇ ವಯಸ್ಸಿನಲ್ಲಿ ತಮಗಿಂತ 25 ವರ್ಷ ಕಿರಿಯರಾದ ನಿವೃತ್ತ ಕಣ ಜೀವಶಾಸ್ತ್ರಜ್ಞೆ 67 ವರ್ಷ ವಯಸ್ಸಿನ ಎಲೆನಾ ಝುಕೋವಾ ಅವರನ್ನು ವಿವಾಹವಾದರು. ಇದು ಮರ್ಡೋಕ್ ಅವರ ಐದನೇ ವಿವಾಹ. ಮೊರಗಾ ಎಂಬ ಕ್ಯಾಲಿಫೋರ್ನಿಯಾ ವೈನ್ ಯಾರ್ಡ್ ಎಸ್ಟೇಟ್ ನಲ್ಲಿ ವಿವಾಹ ನಡೆಯಿತು. ವಿವಾಹದ ಚಿತ್ರಗಳನ್ನು ಮರ್ಡೋಕ್ ಮಾಲೀಕತ್ವದ ಬ್ರಿಟನ್ ಪತ್ರಿಕೆ ‘ದ ಸನ್’ಪತ್ರಿಕೆಯಲ್ಲಿ ಪ್ರಕಟಿಸಲಾಗಿದೆ. ನವಜೋಡಿ ಫೋಟೊಗೆ ಫೋಸ್ ನೀಡುತ್ತಾ ನಗುತ್ತಿರುವ ಚಿತ್ರಗಳು ಪ್ರಕಟವಾಗಿವೆ. ಈ ವಿವಾಹ ಸಂಭ್ರಮದಲ್ಲಿ ನ್ಯೂ ಇಂಗ್ಲೆಂಡ್ ಪೇಟ್ರಿಯಾಟ್ಸ್ ಯುಎಸ್ ಫುಟ್ಬಾಲ್ ತಂಡದ ಮಾಲೀಕ ರಾಬರ್ಟ್ ಕ್ರಾಫ್ಟ್ (82) ಮತ್ತು ಅವರ 50 ವರ್ಷ ವಯಸ್ಸಿನ ಪತ್ನಿ ದಾನಾ ಬ್ಲೂಂಬರ್ಗ್ ಪಾಲ್ಗೊಂಡಿದ್ದರು ಎಂದು ವರದಿ ವಿವರಿಸಿದೆ. ಇದಕ್ಕೂ ಮುನ್ನ ಮರ್ಡೋಕ್ ನಾಲ್ಕು ಬಾರೀ ವಿವಾಹವಾಗಿದ್ದು, ಇತ್ತೀಚೆಗೆ ರೋಲಿಂಗ್ ಸ್ಟೋನ್ ಮುಖ್ಯಸ್ಥ ಮೈಕ್ ಜಾಗರ್ ಅವರ ಸುಧೀರ್ಘ ಕಾಲದ ಗೆಳತಿ ಜೆರ್ರಿ ಹಾಲ್ ಅವರನ್ನು ವಿವಾಹವಾಗಿದ್ದರು. ಕಳೆದ…
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿದ್ದ ಕ್ಯಾಬಿನ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಕೇರಳದ ಕೋಝಿಕ್ಕೋಡ್ ನಿಂದ ಬಹ್ರೇನ್ ಗೆ ತೆರಳುತ್ತಿದ್ದ ವಿಮಾನ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಅಬ್ದುಲ್ ಮುಸಾವಿರ್ ನಡುಕಂಡಿ(25) ಎಂದು ಗುರುತಿಸಲಾಗಿದೆ. ಆರೋಪಿ ಕೋಝಿಕ್ಕೋಡ್ ನಿಂದ ವಿಮಾನ ಟೇಕಾಫ್ ಆಗುವಾಗ ತಕ್ಷಣವೇ ವಿಮಾನದ ಹಿಂಭಾಗಕ್ಕೆ ತೆರಳಿ ಕ್ಯಾಬಿನ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಪೈಲಟ್ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (CSMIA) ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಹಿಂದೂ ಹೆಣ್ಣು ಮಕ್ಕಳನ್ನು ಲವ್ ಜಿಹಾದ್ ನಿಂದ ರಕ್ಷಿಸುವುದಕ್ಕಾಗಿ ಶ್ರೀರಾಮ ಸೇನೆ ಆರಂಭಿಸಿರುವ ಸಹಾಯವಾಣಿಗೆ 4 ದಿನದಲ್ಲಿ 17 ಬೆದರಿಕೆ ಕರೆಗಳು ಬಂದಿವೆ. ಮೇ29ರಂದು ಹಿಂದೂ ಯುವತಿಯರ ರಕ್ಷಣೆಗಾಗಿ ಶ್ರೀರಾಮ ಸೇನೆ ಸಹಾಯವಾಣಿಯನ್ನು ತೆರೆದಿತ್ತು. ಕೇವಲ ನಾಲ್ಕು ದಿನಗಳಲ್ಲಿ 400ಕ್ಕೂ ಹೆಚ್ಚು ಅಧಿಕ ಕರೆಗಳು ಸಹಾಯವಾಣಿಗೆ ಬಂದಿದೆ. ಈ ಬಗ್ಗೆ ಮಾತನಾಡಿರುವ ಶ್ರೀರಾಮ ಸೇನೆ ರಾಜ್ಯ ಉಪಾಧ್ಯಕ್ಷ ಗಂಗಾಧರ ಕುಲಕರ್ಣಿ, ಸಹಾಯವಾಣಿಗೆ 37 ಕರೆಗಳು ಬಂದಿವೆ. 42 ಪ್ರೋತ್ಸಾಹಕ ಕರೆಗಳಾಗಿವೆ. 52 ಲವ್ ಜಿಹಾದ್ ಸಂತ್ರಸ್ತರ ಕರೆಗಳಾಗಿವೆ. ಇವುಗಳಲ್ಲಿ ಹೊರ ರಾಜ್ಯದ ಸಂತ್ರಸ್ತರಿಂದಲೂ ಕರೆ ಬಂದಿದೆ. ಈ ನಡುವೆ ಬೆದರಿಕೆ ಕರೆಗಳು ಕೂಡ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಫೇಸ್ ಬುಕ್ ಮತ್ತು ವಾಟ್ಸಾಪ್ ನಂತಹ ಸಾಮಾಜಿಕ ಜಾಲತಾಣದಲ್ಲೂ ಸಹಾಯವಾಣಿ ಬ್ಲಾಕ್ ಮಾಡಿಸಲಾಗಿದೆ. ನಮ್ಮ ಸಹಾಯವಾಣಿ ಸರಿಯಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ವಿರೋಧಿಗಳಿಗೆ ಬೆಂಕಿ ಬಿದ್ದಿದೆ ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಟಿ20 ವಿಶ್ವಕಪ್ನ ನಾಲ್ಕನೇ ಪಂದ್ಯದಲ್ಲಿ ಸೋಮವಾರ ದಕ್ಷಿಣ ಆಫ್ರಿಕಾ ತಂಡವು ಶ್ರೀಲಂಕಾವನ್ನು ಆರು ವಿಕೆಟ್ ಗಳಿಂದ ಸುಲಭವಾಗಿ ಸೋಲಿಸಿದೆ. ನ್ಯೂಯಾರ್ಕ್ ನ ನಸ್ಸವ್ ಕೌಂಟಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ 19.1 ಓವರ್ ಗಳಲ್ಲಿ ಕೇವಲ 77 ರನ್ ಗಳಿಗೆ ಆಲೌಟ್ ಆಯಿತು. ಸುಲಭ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 16.2 ಓವರ್ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 80 ರನ್ ಗಳಿಸಿತು. ಶ್ರೀಲಂಕಾ ಪರ ಕುಶಾಲ್ ಮೆಂಡಿಸ್ (19), ಕಮಿಂದು ಮೆಂಡಿಸ್ (11), ಮತ್ತು ಮ್ಯಾಥ್ಯೂಸ್(16), ಮಾತ್ರ ಎರಡಂಕಿ ತಲುಪಿದರು. ಬಿಗಿ ಬೌಲಿಂಗ್ ದಾಳಿ ನಡೆಸಿದ ದಕ್ಷಿಣ ಆಫ್ರಿಕಾ ಪರ ನೋರ್ಜೆ ನಾಲ್ಕು ಓವರ್ ಗಳಲ್ಲಿ ಕೇವಲ 7 ರನ್ ನೀಡಿ ನಾಲ್ಕು ವಿಕೆಟ್ ಕಬಳಿಸಿದರು. ರಬಡ 21ಕ್ಕೆ 2, ಮಹಾರಾಜ್ 22ಕ್ಕೆ 2 ವಿಕೆಟ್ ಕಿತ್ತು ಎದುರಾಳಿ ತಂಡದ ಪತನಕ್ಕೆ ಕಾರಣರಾದರು. ಆಫ್ರಿಕಾ ತಂಡ ಕ್ವಿಂಟನ್ ಡಿಕಾಕ್ (20), ರೀಝಾ ಹೆಂಡ್ರಿಕ್, ಈಡನ್ ಮ್ಯಾಕ್ರಮ್ ಹಾಗೂ…