Subscribe to Updates
Get the latest creative news from FooBar about art, design and business.
- ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?
- ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್ ಲೈನ್ ಅರ್ಜಿ ಆಹ್ವಾನ
- ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
- NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ಜು. 29ರಂದು ಔರಾದ್ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
- ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
- ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
- ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
Author: admin
ಧಾರವಾಡ: ಬಿಜೆಪಿಯ ಭದ್ರಕೋಟೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕೈ- ಕಮಲ ಪಕ್ಷಗಳ ಮಧ್ಯೆ ತೀವ್ರ ಜಿದ್ದಾಜಿದ್ದಿ ಇದೆ. ಸತತ ನಾಲ್ಕು ಬಾರಿ ಗೆದ್ದಿರುವ ಪ್ರಹ್ಲಾದ್ ಜೋಶಿ ಅವರಿಗೆ ಕಾಂಗ್ರೆಸ್‌ನ ಹೊಸ ಮುಖ ವಿನೋದ್ ಅಸೂಟಿ ಭಾರೀ ಪೈಪೋಟಿ ನೀಡಿದ್ದಾರೆ. ಸದ್ಯ ಜೋಶಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಆದ್ರೆ ಈಗ ಸದ್ಯ ಜೋಶಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹೌದು ಕಾಂಗ್ರೆಸ್ ನ ಹೊಸ ಮುಖ ವಿನೋದ್ ಅಸೂಟಿ ವಿರುದ್ಧ 17242 ಮತಗಳ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಇನ್ನೂ ಕಾಂಗ್ರೆಸ್ ನಿಂದ ಕಣಕ್ಕಳಿದಿರುವ ವಿನೋದ್ ಅಸೂಟಿ 66458 ಮತಗಳಲ್ಲಿ ಇದ್ದಾರೆ. ಜೋಶಿ 83700 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನೂ 2019ರ ಲೋಕಸಭಾ ಚುನಾವಣೆಯಲ್ಲಿ ಶೇ. 70.12ರಷ್ಟು ಮತದಾನವಾಗಿತ್ತು. ಆಗ ಬಿಜೆಪಿಯಿಂದ ಪ್ರಹ್ಲಾದ್ ಜೋಶಿ 2.05 ಲಕ್ಷ ಮತಗಳ ಅಂತರದ ಗೆಲುವು ಕಂಡಿದ್ದರು. ಈ ಬಾರಿ ಶೇ.74.37ರಷ್ಟು ಮತದಾನವಾಗಿದೆ. ಆದರೆ, ಹೆಚ್ಚುವರಿ ಮತಗಳು ಯಾರ ಪರ ಇವೆ ಎಂಬುದು ಫಲಿತಾಂಶದ ಬಳಿಕ ಗೊತ್ತಾಗಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ಲೋಕಸಭಾ ಚುನಾವಣೆಯ ಫಲಿತಾಂಶ ರಣರೋಚಕವಾಗಿದೆ. ದೇಶಾದ್ಯಂತ ಮತಎಣಿಕೆ ಬಿರುಸಿನಿಂದ ನಡೆಯುತ್ತಾ ಇದ್ದು, ಯಾರ್ ಗೆಲ್ತಾರೆ? ಯಾರ್ ಸೋಲ್ತಾರೆ ಅನ್ನೋ ಕುತೂಹಲ ಮುಗಿಲು ಮುಟ್ಟಿದೆ. 543 ಲೋಕಸಭಾ ಕ್ಷೇತ್ರದಲ್ಲಿ ಇಡೀ ದೇಶದ ಕಣ್ಣು ಬಿದ್ದಿರೋದು ವಾರಣಾಸಿ ಲೋಕಸಭಾ ಕ್ಷೇತ್ರದ ಮೇಲೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸಿರುವ ವಾರಣಾಸಿ ಲೋಕಸಭಾ ಕ್ಷೇತ್ರದ ಫಲಿತಾಂಶ ಭಾರೀ ಕುತೂಹಲ ಕೆರಳಿಸಿದೆ. ಉತ್ತರಪ್ರದೇಶದಲ್ಲಿ ಸದ್ಯ ಎನ್ ಡಿಎ, ಇಂಡಿಯಾ ಮೈತ್ರಿಕೂಟ ಅಭ್ಯರ್ಥಿಗಳ ಮಧ್ಯೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ. ಸದ್ಯದ ಮಾಹಿತಿ ಪ್ರಕಾರ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ – 18629 ಬಿಜೆಪಿ ಅಭ್ಯರ್ಥಿ ನರೇಂದ್ರ ಮೋದಿ – 14540 ವಾರಣಾಸಿ ಲೋಕಸಭಾ ಕ್ಷೇತ್ರದ ಮತ ಎಣಿಕೆಯಲ್ಲಿ ಮೋದಿ ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ 4089 ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್…
ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಯಾವತ್ತಿಗೂ ತಪ್ಪಾಗೋದಿಲ್ಲ. ಎನ್ ಡಿಎ ಪಕ್ಷ ಹೆಚ್ಚು ಸ್ಥಾನಗಳಿಸಲಿದೆ. ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಸ್ಯಾಂಡಲ್ ವುಡ್ ನಟ ಚೇತನ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಚೇತನ್, 2014-2019ರಲ್ಲಿ ಇದ್ದ ಮೋದಿ ಅಲೆ ಈಗ ಇಲ್ಲ. ಮೋದಿ ಬ್ರ್ಯಾಂಡ್ ಕಡಿಮೆ ಆಗಿರಬಹುದು. ಆದ್ರೇ ಬಿಜೆಪಿಗೆ ದೊಡ್ಡ ಮಟ್ಟದ ಫಲಿತಾಂಶ ಬರಲಿದೆ ಎಂಬುದಾಗಿ ಭವಿಷ್ಯ ನುಡಿದಿದ್ದಾರೆ. ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯದ ನಂತ್ರ ಚುನಾವಣೋತ್ತರ ಸಮೀಕ್ಷೆಗಳ ವರದಿಯನ್ನು ನೋಡಿದ್ರೇ, ಎಲ್ಲಾ ಸಮೀಕ್ಷೆ ಒಂದೇ ರೀತಿಯಲ್ಲಿ ಇದೆ. ಅದರಲ್ಲಿ ಯಾವುದೇ ಗೊಂದಲಗಳಿಲ್ಲ. ಈ ಸಮೀಕ್ಷೆಗಳು ಯಾವತ್ತಿಗೂ ತಪ್ಪಾಗುವುದಿಲ್ಲ ಎಂದಿದ್ದಾರೆ. 2004ರ ಸಮೀಕ್ಷೆಯಲ್ಲಿ ದೊಡ್ಡ ಮಟ್ಟದಲ್ಲಿ ಬಿಜೆಪಿಗೆ ಸ್ಥಾನ ಬರಲಿದೆ ಎಂಬುದಾಗಿ ಹೇಳಲಾಗಿತ್ತು. ಅದರಂತೆಯೇ ಆಯ್ತು. ಈಗ ಚುನಾವಣೋತ್ತರ ಸಮೀಕ್ಷೆಯಲ್ಲಿ 2019ರ ಚುನಾವಣೆಗಿಂತ ಹೆಚ್ಚು ಸ್ಥಾನ ಬರಲಿದೆ ಅಂತ ಸಮೀಕ್ಷೆಗಳು ಹೇಳಿದ್ದಾವೆ. ಅದೇ ರೀತಿ ಫಲಿತಾಂಶ ಬರಲಿದೆ ಎಂದರು. ಲೋಕಸಭಾ ಚುನಾವಣೋತ್ತರ ಸಮೀಕ್ಷಾ ವರದಿ ಪ್ರಕಾರ 370ಕ್ಕೂ ಹೆಚ್ಚು ಸ್ಥಾನ ಎನ್…
ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ದೇಶದೆಲ್ಲೆಡೆ ಸುಗಮವಾಗಿ ನಡೆಯುತ್ತಿದ್ದು ಅಭ್ಯರ್ಥಿಗಳು ಗೆಲುವಿನ ಲೆಕ್ಕಚಾರದಲ್ಲಿ ಇದ್ದಾರೆ. ಅದರಂತೆ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಫಲಿತಾಂಶ ಹೊರ ಬೀಳಲಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಭಾರೀ ಮುನ್ನಡೆಯಲ್ಲಿದ್ದಾರೆ. ಈಗಾಗಲೇ ಮತ ಎಣಿಕೆ ಕಾರ್ಯ ಶುರುವಾಗಿದ್ದು ಚಿಕ್ಕೋಡಿಯ ಕುಡಚಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. 39,836 ಮತಳಿಂದ ಪ್ರಿಯಾಂಕಾ ಜಾರಕಿಹೊಳಿ ಜಾರಕಿಹೊಳಿ ಮುನ್ನುಗ್ಗಿತ್ತಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಆಗಿರುವ ಅಣ್ಣಾಸಾಹೇಬ ಜೊಲ್ಲೆ ಅವರು 31,303 ಪಡೆದ ಮತಗಳಿಂದ ಹಿನ್ನಡೆಯಲ್ಲಿದ್ದಾರೆ. ಪ್ರಿಯಾಂಕಾ ಜಾರಕಿಹೊಳಿ ಅವರು ಒಟ್ಟು 8,533 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಕುಡಚಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ವೇಳೆ ಪ್ರಿಯಾಂಕಾ ಜಾರಕಿಹೊಳಿ 7,000 ಮತಗಳಿಂದ ಮುನ್ನಡೆಯಲ್ಲಿದ್ದರು. ಈಗಾಗಲೇ ಮಂಡ್ಯ, ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ದೇಶದೆಲ್ಲೆಡೆ ಸುಗಮವಾಗಿ ನಡೆಯುತ್ತಿದ್ದು ಅಭ್ಯರ್ಥಿಗಳು ಗೆಲುವಿನ ಲೆಕ್ಕಚಾರದಲ್ಲಿ ಇದ್ದಾರೆ. ಅದರಂತೆ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಫಲಿತಾಂಶ ಹೊರ ಬೀಳಲಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಭಾರೀ ಮುನ್ನಡೆಯಲ್ಲಿದ್ದಾರೆ. ಈಗಾಗಲೇ ಮತ ಎಣಿಕೆ ಕಾರ್ಯ ಶುರುವಾಗಿದ್ದು ಚಿಕ್ಕೋಡಿಯ ಕುಡಚಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. 39,836 ಮತಳಿಂದ ಪ್ರಿಯಾಂಕಾ ಜಾರಕಿಹೊಳಿ ಜಾರಕಿಹೊಳಿ ಮುನ್ನುಗ್ಗಿತ್ತಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಆಗಿರುವ ಅಣ್ಣಾಸಾಹೇಬ ಜೊಲ್ಲೆ ಅವರು 31,303 ಪಡೆದ ಮತಗಳಿಂದ ಹಿನ್ನಡೆಯಲ್ಲಿದ್ದಾರೆ. ಪ್ರಿಯಾಂಕಾ ಜಾರಕಿಹೊಳಿ ಅವರು ಒಟ್ಟು 8,533 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಕುಡಚಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ವೇಳೆ ಪ್ರಿಯಾಂಕಾ ಜಾರಕಿಹೊಳಿ 7,000 ಮತಗಳಿಂದ ಮುನ್ನಡೆಯಲ್ಲಿದ್ದರು. ಈಗಾಗಲೇ ಮಂಡ್ಯ, ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬಿಜೆಪಿ ಪ್ರಾಬಲ್ಯ ಇರುವ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮಿತ್ರ ಪಕ್ಷಗಳು ಮಿಂಚಿನ ಓಟವನ್ನು ಆರಂಭಿಸಿವೆ. ಮೊದಲ ಸುತ್ತಿನ ಮತದಾನದ ಮುಕ್ತಾಯದ ವೇಳೆಗೆ ಬಿಜೆಪಿ ನೇತೃತ್ವದ ಎನ್ ಡಿಎ 293, ಕಾಂಗ್ರೆಸ್ ನೇತೃತ್ವದ ಐಎನ್ ಡಿಐಎ 214 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿವೆ. ಸಹಜವಾಗಿಯೇ ಇದು ಕುತೂಹಲ ಕೆರಳಿಸಿದೆ. ಸಿಎಂ ಆದಿತ್ಯನಾಥ್ ಉತ್ತರ ಪ್ರದೇಶದಲ್ಲಿ ಭಾರಿ ನಿರೀಕ್ಷೆ ಮೂಡಿಸಿದ್ದರು. ತಮ್ಮ ರಾಜ್ಯದಲ್ಲಿ ಪ್ರಧಾನಿ ಮೋದಿಗೆ ಭಾರಿ ದೊಡ್ಡ ಮುನ್ನಡೆ ತಂದುಕೊಡುವ ನಿರೀಕ್ಷೆ ಇತ್ತು. ಆದರೆ ಆ ಎಲ್ಲ ನಿರೀಕ್ಷೆಗಳು ಇದೀಗ ತಲೆ ಕೆಳಗಾಗುವ ಸಾಧ್ಯತೆ ಕಂಡು ಬರುತ್ತಿದೆ. ಎಸ್ ಪಿ 30, ಕಾಂಗ್ರೆಸ್ 6, ರಾಷ್ಟ್ರೀಯ ಲೋಕ ದಳ 2 ಸ್ಥಾನವನ್ನು ಪಡೆದುಕೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಸತತವಾಗಿ 10 ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಮುನ್ನಡೆ ಕಾಯ್ದುಕೊಂಡಿದ್ದಾರೆ. 10ನೇ ಸುತ್ತಿನಲ್ಲಿ 58320 ಮತಗಳಿಂದ ಭಾರೀ ಮುನ್ನಡೆ ಸೋಮಣ್ಣ- 232428 ಮತಗಳ ಮುನ್ನಡೆ ಮುದ್ದಹನುಮೇಗೌಡ (ಕಾಂಗ್ರೆಸ್)- 174108 ಮತಗಳು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ದೇಶಾದ್ಯಂತ ಲೋಕಸಭಾ ಚುನಾವಣೆಯ ಮತಎಣಿಕೆ ನಡೆಯುತ್ತಾ ಇದ್ದು, ಚುನಾವಣಾ ಫಲಿತಾಂಶ ಕುತೂಹಲ ಕೆರಳಿಸಿದೆ. ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಹಾಸನ ಚುನಾವಣೆ ರಿಸಲ್ಟ್ ಇಡೀ ದೇಶದ ಗಮನ ಸೆಳೆದಿದೆ. ಆರಂಭಿಕ ಮತಎಣಿಕೆಯ ಮಾಹಿತಿ ಪ್ರಕಾರ ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶೇಯಸ್ ಪಟೇಲ್ ಅವರು ಮುನ್ನಡೆ ಸಾಧಿಸಿದ್ದರು. ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಹಿನ್ನೆಡಯಲ್ಲಿದ್ದರು. ಇದಾದ ಬಳಿಕ ಮತ್ತೆ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಮಧ್ಯೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ. ಮೂರನೇ ಸುತ್ತಿನ ಮತಎಣಿಕೆ ಜೆಡಿಎಸ್ 105314 ಕಾಂಗ್ರೆಸ್ 102890 ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ – 2,424 ಮತಗಳಿಂದ ಮುನ್ನಡೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿ ಯದುವೀರ್ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮುನ್ನಡೆ ಸಾಧಿಸಿದ್ದಾರೆ. ಮೈಸೂರು-ಕೊಡಗು ಕ್ಷೇತ್ರ. ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ -51588 ಬಿಜೆಪಿ ಅಭ್ಯರ್ಥಿ ಯದುವೀರ್-58596 ಯದುವೀರ್ 7008 ಮತಗಳ ಮುನ್ನಡೆ ಲೋಕಸಭಾ ಶಿವಮೊಗ್ಗ ಚುನಾವಣಾ ಮತ ಎಣಿಕೆ: ಬಿಜೆಪಿ-ಬಿ.ವೈ.ರಾಘವೇಂದ್ರ-33, 780 ಕಾಂಗ್ರೆಸ್-ಗೀತಾ ಶಿವರಾಜಕುಮಾರ್-22497 ಪಕ್ಷೇತರ- ಕೆ.ಎಸ್.ಈಶ್ವರಪ್ಪ-2145 11283 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಮುನ್ನಡೆ ಸಾಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ದೇಶದಾದ್ಯಂತ ಲೋಕಸಭೆ ಚುನಾವಣೆಯ ಅತ್ಯಂತ ಪ್ರಮುಖ ಘಟ್ಟದ ಮತ ಎಣಿಕೆ ಇಂದು (ಮಂಗಳವಾರ) ಬೆಳಗ್ಗೆ 7:30ಕ್ಕೆ ಸ್ಟ್ರಾಂಗ್ ರೂಂಗಳನ್ನು ತೆರೆಯುವ ಮೂಲಕ ಆರಂಭವಾಗಿದೆ. ಬೆಳಗ್ಗೆ 8ಕ್ಕೆ ಅಂಚೆ ಮತಗಳ ಎಣಿಕೆ ಕಾರ್ಯ ಆರಂಭಿಸಲಾಗಿದೆ ಎಂದು ವರದಿ ತಿಳಿಸಿದೆ. ದೇಶದ ವಿವಿಧೆಡೆಯ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆಯಲ್ಲಿ ಮತ ಎಣಿಕೆ ನಡೆಯುತ್ತಿದೆ. ಸುಮಾರು 64.2 ಕೋಟಿ ಮತದಾರರು ನೀಡಿರುವ ತೀರ್ಪು ಸಂಜೆಯೊಳಗೆ ಸ್ಪಷ್ಟವಾಗಲಿದೆ. ಏಪ್ರಿಲ್ 19ರಿಂದ ಆರಂಭವಾಗಿದ್ದ ಲೋಕಸಭೆ ಚುನಾವಣೆಯ ಮತದಾನ ಜೂನ್ 1ರವರೆಗೂ ಜರುಗಿತ್ತು. ಹೀಗಾಗಿ ಸುದೀರ್ಘವಾಗಿ ನಡೆದ ಚುನಾವಣಾ ಪ್ರಕ್ರಿಯೆ ಎಂಬ ದಾಖಲೆಯನ್ನೂ ಬರೆದಿದೆ. ಹಲವು ಅಡೆತಡೆಗಳು, ಸಾಕಷ್ಟು ಸವಾಲುಗಳ ಮಧ್ಯೆ ಕೇಂದ್ರ ಚುನಾವಣಾ ಆಯೋಗ ಯಶಸ್ವಿಯಾಗಿ ಚುನಾವಣಾ ಪ್ರಕ್ರಿಯೆ ಮುಗಿಸಿತ್ತು. ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಹಲವು ಕಡೆಗಳಲ್ಲಿ ಮುನ್ನಡೆ ಸಾಧಿಸುತ್ತಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…