Author: admin

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರ ಸ್ವಾಮಿ ಸುಮಾರು 30,000 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಹುತೇಕ ಗೆಲುವಿನ ಕಡೆಗೆ ನಾಗಾಲೋಟವನ್ನು ಮುಂದುವರಿಸಿದ್ದಾರೆ. ಮತ್ತೊಂದು ಕಡೆ ಬಿಜೆಪಿಗೆ ಸೆಡ್ಡು ಹೊಡೆದು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದ ಬಿಜೆಪಿಯ ಮಾಜಿ ನಾಯಕ ಕೆ.ಎಂ.ಈಶ್ವರಪ್ಪ ದೊಡ್ಡ ಹಿನ್ನಡೆ ಅನುಭವಿಸಿದ್ದಾರೆ. ಕೇವಲ 1,250 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ. ಬಿಜೆಪಿ ವಿರುದ್ಧ ಸಿಡಿದೆದ್ದು ಈ ಸಲ ಬಿಜೆಪಿಗೆ ಪಾಠ ಕಲಿಸುತ್ತೇನೆಂದು ಸವಾಲು ಹಾಕಿಕೊಂಡು ಈಶ್ವರಪ್ಪ ಸ್ಪರ್ಧೆ ಮಾಡಿದ್ದನ್ನು ಸ್ಮರಿಸಬಹುದು. ಜಗದೀಶ್ ಶೆಟ್ಟರ್ ಅಳಿವು ಉಳಿವಿನ ಹೋರಾಟವಾಗಿತ್ತು. ಅವರು ಬೆಳಗಾವಿಯಲ್ಲಿ ಮುನ್ನಡೆ ಸಾಧಿಸಿಕೊಂಡಿದ್ದಾರೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಅವರು ವಿಧಾನ ಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. ಬಳಿಕ ಕಾಂಗ್ರೆಸ್ ಜೊತೆಗಿನ ಸಖ್ಯ ಸಾಕು ಅಂತ ಮತ್ತೆ ಬಿಜೆಪಿ ಸೇರಿಕೊಂಡಿದ್ದನ್ನು ಸ್ಮರಿಸಬಹುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ತುಮಕೂರು:  ಜಿಲ್ಲೆಯ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್ ಹಾಗೂ ಸಾಮಾನ್ಯ ವೀಕ್ಷಕರಾದ ಕೆ.ವಾಸವ ಮತ್ತು  ಮತಎಣಿಕೆ ವೀಕ್ಷಕರಾದ  ಸಿಮ್ಮಿ ನಾಹಿದ್ ಅವರ ಸಮ್ಮುಖದಲ್ಲಿ  ಸ್ಟ್ರಾಂಗ್ ರೂಂ ಬಾಗಿಲು ತೆರೆಯಲಾಯಿತು. ಇಬ್ಬರು ನಾಯಕರ ಭವಿಷ್ಯದ ಲೋಕಸಭೆ ಮತ ಎಣಿಕೆಗೆ ಕೌಂಟ್ ಡೌನ್ ಆರಂಭವಾಗಿದೆ. ಬೆಳಗ್ಗೆ 8 ಗಂಟೆಗೆ ಸ್ಟ್ರಾಂಗ್ ರೂಮ್ ಓಪನ್ ಮೊದಲು ಅಂಚೆ ಮತ ಏಣಿಕೆ ಮಾಡಲಾಯಿತು. ತುಮಕೂರು ವಿವಿ ವಿಜ್ಞಾನ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಎರಡು ಕಡೆ ಮತ ಎಣಿಕೆ ನಡೆಯುತ್ತಿದೆ. ವಿವಿ ವಿಜ್ಞಾನ ಕಾಲೇಜಿನಲ್ಲಿ ಚಿಕ್ಕನಾಯಕನಹಳ್ಳಿ, ತಿಪಟೂರು,ತುರುವೇಕೆರೆ, ಮಧುಗಿರಿ ತಾಲ್ಲೂಕಿನ ಮತ ಎಣಿಕೆಯಾಗುತ್ತಿದೆ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ತುಮಕೂರು ನಗರ, ಗ್ರಾಮಾಂತರ ಕೊರಟಗೆರೆ, ಗುಬ್ಬಿ ತಾಲ್ಲೂಕಿನ ಮತ ಎಣಿಕೆಯಾಗುತ್ತಿದೆ. ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೂ 14 ‌ಮತ ಎಣಿಕೆ ಟೇಬಲ್ ಗಳಂತೆ ಒಟ್ಟು  112 ಟೇಬಲ್ ನಲ್ಲಿ ಮತ ಎಣಿಕೆ ನಡೆಸಲಾಗುತ್ತಿದೆ. * 448 ಸಿಬ್ಬಂದಿಯಿಂದ ನಡೆಯಲಿರುವ ಮತ ಎಣಿಕೆ ಕಾರ್ಯ *  ಪ್ರತ್ಯೇಕ 18…

Read More

NEET UG 2024 ಮೇ 5 ರಂದು ನಡೆಯಿತು ಇದರಲ್ಲಿ 24 ಲಕ್ಷಕ್ಕೂ ಹೆಚ್ಚು ಅರ್ಜಿದಾರರಿದ್ದರು. ಅದರ ಉತ್ತರದ ಕೀಯನ್ನು ಮೇ 29 ರಂದು ನೀಡಲಾಯಿತು ಮತ್ತು ತಾತ್ಕಾಲಿಕ NEET ಯುಜಿ ಉತ್ತರ ಕೀಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಮೆಡಿಕಲ್​ ಅರ್ಜಿದಾರರಿಗೆ ಮೇ 31 ರವರೆಗೆ ಅವಕಾಶ ನೀಡಲಾಯಿತು. ಇದೀಗ ಜೂನ್ 14 ರಂದು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಪದವಿಪೂರ್ವ (NEET UG) 2024 ಫಲಿತಾಂಶವನ್ನು ಘೋಷಿಸಲು ನಿರ್ಧರಿಸಿದೆ. NTA ಫಲಿತಾಂಶಗಳ ಜೊತೆಗೆ ಕಟ್–ಆಫ್ ಅಂಕಗಳನ್ನು ಬಹಿರಂಗಪಡಿಸುತ್ತದೆ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಪರಿಶೀಲಿಸುವಾಗ ತಮ್ಮ NEET ಪ್ರವೇಶ ಕಾರ್ಡ್ ಅನ್ನು ಇಟ್ಟುಕೊಳ್ಳಬೇಕಾಗುತ್ತದೆ. ಸ್ಕೋರ್‌ ಗಳನ್ನು ನೀವು ಚೆಕ್ ಮಾಡಲು ನಿಮ್ಮ ಐಡಿ ಇರಲೇಬೇಕು. ಯಾಕೆಂದರೆ ನಿಮ್ಮ ರೋಲ್​ ನಂಬರ್​ ಅಗತ್ಯ ಇದೆ. ಪರೀಕ್ಷಾ ಕೇಂದ್ರ ಮತ್ತು ಇತರ ವಿವರಗಳಂತಹ ಸಂಗತಿಗಳು ಮಾನ್ಯವಾಗಿದೆಯೇ ಎಂದು ಪರಿಶೀಲಿಸಲು ವಿದ್ಯಾರ್ಥಿಗಳು ತಮ್ಮ ಸ್ಕೋರ್‌ ಕಾರ್ಡ್‌ಗಳನ್ನು ತಮ್ಮ ಪ್ರವೇಶ ಕಾರ್ಡ್‌ಗಳಿಗೆ ಹೋಲಿಕೆ ಮಾಡಿಕೊಂಡು…

Read More

ಸತತವಾಗಿ ಚಿನ್ನ ಕುಸಿಯುತ್ತಿದ್ದು ಈ ಮೂಲಕ ಭಾರೀ ಇಳಿಕೆ ಕಾಣುತ್ತಿದೆ. ಚಿನ್ನ ಕೊಳ್ಳುವವರಿಗೆ ಇಂದು ತುಸು ಸಮಾಧಾನದ ಸುದ್ದಿ ಹೊರ ಬಿದ್ದಿದೆ. ಇಂದು (ಸೋಮವಾರ) 1 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ ಕ್ರಮವಾಗಿ ₹ 40 ಮತ್ತು ₹ 44 ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ ನ 22 ಕ್ಯಾರಟ್ ಚಿನ್ನದ ಬೆಲೆ 66,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ ​ಗೆ 66,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ ಗೆ 9,300 ರುಪಾಯಿಯಲ್ಲಿ ಇದೆ. ಕಳೆದ 1 ವಾರದಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಕೆ ಕಾಣಲು ಆರಂಭ ಆಯಿತು. ಕೆಲವು ದಿನಗಳ ಹಿಂದೆ ಚಿನ್ನ ಮತ್ತಷ್ಟು ಕುಸಿತ ಕಂಡು ಈಗ ಹೊಸ ಹೊಸ ದಾಖಲೆ ಬರೆಯುತ್ತಿದೆ.…

Read More

ತುಮಕೂರು:  ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಹಗಲು ಹೊತ್ತಿನಲ್ಲಿ ರೋಗಗಳನ್ನು ಹರಡುವಂತಹ ಸೊಳ್ಳೆಗಳ ಕಡಿತದಿಂದ ಮಕ್ಕಳಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುವ ಕಾರಣ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ–ಕಾಲೇಜುಗಳ ಕೊಠಡಿಗಳನ್ನು ಪರಿಶೀಲಿಸಿ ಸ್ವಚ್ಛತೆ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕಾಗಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ವೀಡಿಯೋ ಕಾನ್ಪೆರೆನ್ಸ್ ಸಭಾಂಗಣದಲ್ಲಿ  ನಡೆದ ‘ಮುಂಗಾರು ಹಾಗೂ ಬರ ನಿರ್ವಹಣೆಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಸ್ಪತ್ರೆಗಳ ಶಸ್ತ್ರಚಿಕಿತ್ಸೆ ಕೊಠಡಿಗಳು ಸೇರಿದಂತೆ ಆಸ್ಪತ್ರೆ ಆವರಣ ಸ್ವಚ್ಛತೆ ಕುರಿತಂತೆ ಕೈಗೊಂಡ ಕ್ರಮಗಳ ಬಗ್ಗೆ  ಮಾಹಿತಿ ಪಡೆದ ಅವರು, ಪಾವಗಡದಲ್ಲಿ ನಡೆದಂತಹ ಪ್ರಕರಣ ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.  ಜಿಲ್ಲೆಯ ಕುಡಿಯುವ ನೀರಿನ ಮೂಲಗಳ ಪರೀಕ್ಷೆ ನಡೆಸಲಾಗಿದ್ದು, ಕುಡಿಯುವ ನೀರಿನ ಪರೀಕ್ಷೆಯಲ್ಲಿ ನೀರಿನ  ಅಶುದ್ಧತೆ ಬಗ್ಗೆ ವರದಿ ಬಂದ ತಕ್ಷಣ ಸಾರ್ವಜನಿಕರಿಗೆ ಅಶುದ್ಧ ಕುಡಿಯುವ ನೀರು ಪೂರೈಕೆಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಸೂಚಿಸಿದರಲ್ಲದೆ, ಪರ್ಯಾಯವಾಗಿ ಶುದ್ಧ…

Read More

ಈಗ ಎಲ್ಲಿ ನೋಡಿದ್ರೂ ಯುಪಿಐ ಪೇಮೆಂಟ್ ಹೆಚ್ಚು. ಎಲ್ಲರ ಮೊಬೈಲ್‌ ನಲ್ಲಿ ಈ ಗೂಗಲ್‌ ಪೇ (Google Pay) ಇದ್ದೇ ಇರುತ್ತೆ. ಆದರೆ, ನಾಳೆಯಿಂದ ಇಲ್ಲಿ ಈ ಗೂಗಲ್‌ ಪೇ ಕೆಲಸ ಮಾಡಲ್ಲ! ಹೌದಾ ? ಹೌದು, USನಲ್ಲಿ Google Pay ತನ್ನ ಸೇವೆಯನ್ನು ಸ್ಥಗಿತಗೊಳಿಸುತ್ತದೆ. ಟೆಕ್ ದೈತ್ಯ ತನ್ನ ಬ್ಲಾಗ್‌ ನಲ್ಲಿ ಜೂನ್ 4 ರವರೆಗೆ ಅಮೆರಿಕನ್ನರು ಹಣ ವರ್ಗಾವಣೆ ಅಪ್ಲಿಕೇಶನ್ ಅನ್ನು ಬಳಸಲು ಸಾಧ್ಯವಾಗುತ್ತದೆ. ಜೂನ್ 4ರ ನಂತರ Google ತನ್ನ Google Pay ಅಪ್ಲಿಕೇಶನ್‌ನ US ಆವೃತ್ತಿಯನ್ನು ಮುಚ್ಚುತ್ತದೆ. ನಾಳೆಯಿಂದ ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಗೂಗಲ್ ಪೇ ಸೇವೆ ಸ್ಥಗಿತಗೊಳ್ಳುತ್ತಿದೆ. ಇದರ ಬದಲಾಗಿ Google Wallet ಆಯಪ್ ಸೇವೆ ಆರಂಭಗೊಂಡಿದೆ. Google Pay ಬಳಕೆದಾರರು ಗೂಗಲ್ ವಾಲೆಟ್ ಬಳಸುವಂತೆ ಸೂಚಿಸಲಾಗಿದೆ. ಗೂಗಲ್‌ ಪೇ ಆಯಪ್ ಕಾರ್ಯಾಚರಣೆಯಲ್ಲಿ ಇನ್ನಷ್ಟು ಸರಳ ಫೀಚರ್‌ ಗಳನ್ನು ಅಳವಡಿಸುವ ಹಿನ್ನೆಲೆಯಲ್ಲಿ Google Pay ಸ್ಥಗಿತಗೊಳಿಸಲಾಗುತ್ತಿದೆ ಎಂದು ಕಂಪನಿ ಮಾಹಿತಿ ನೀಡಿದೆ. ಗೂಗಲ್‌…

Read More

” ಜೂ.1ರ ನಂತರ ವಾಹನ ಚಾಲನಾ ತರಬೇತಿ ಕೇಂದ್ರಗಳೇ ಡಿ.ಎಲ್‌. ನೀಡುತ್ತವೆ. ಡಿ.ಎಲ್‌ ಗಾಗಿ ಸಾರ್ವಜನಿಕರು ಆರ್‌ ಟಿಒ ಕಚೇರಿಗಳಿಗೆ ಹೋಗಬೇಕಿಲ್ಲಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿಹರಿದಾಡುತ್ತಿದೆ. ಕೆಲ ಮಾಧ್ಯಮಗಳಲ್ಲೂಈ ಸುದ್ದಿ ಪ್ರಕಟವಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟತೆಯಿಲ್ಲ. ಖಾಸಗಿ ವ್ಯಕ್ತಿಗಳು, ಸ್ವಯಂಸೇವಾ ಸಂಸ್ಥೆಗಳು, ಕಾರ್ಪೊರೇಟ್‌ ಕಂಪನಿಗಳು, ವಾಹನ ಉತ್ಪಾದನಾ ಕಂಪನಿಗಳು ಅಥವಾ ಯಾವುದೇ ಕಂಪನಿಯೂ ವಾಹನ ಚಾಲನಾ ತರಬೇತಿ ಹಾಗೂ ಚಾಲನಾ ಪರೀಕ್ಷಾ ಕೇಂದ್ರವನ್ನು ಆರಂಭಿಸಬಹುದು. ಒಂದು ಕಂಪನಿಯು ರಾಜ್ಯವೊಂದರಲ್ಲಿಗರಿಷ್ಠ ಐದು ಕೇಂದ್ರಗಳನ್ನಷ್ಟೇ ತೆರೆಯಬಹುದು. ಕೇಂದ್ರಗಳನ್ನು ತೆರೆಯಲು ಕಡ್ಡಾಯವಾಗಿ ಕೆಲ ಮೂಲಸೌಕರ್ಯಗಳನ್ನು ಹೊಂದಿರಬೇಕೆಂದು ಸಚಿವಾಲಯ ಷರತ್ತು ವಿಧಿಸಿದೆ. ಚಾಲನಾ ತರಬೇತಿ ಕೇಂದ್ರಗಳು ಚಾಲನಾ ಪರೀಕ್ಷೆಯಲ್ಲಿಉತ್ತೀರ್ಣರಾದವರಿಗೆ ಪ್ರಮಾಣಪತ್ರವನ್ನಷ್ಟೇ ನೀಡುತ್ತವೆ. ಆ ಪ್ರಮಾಣಪತ್ರಗಳ ಆಧಾರದಲ್ಲಿಆರ್‌ ಟಿಒ ಕಚೇರಿಗಳಲ್ಲಿ ಡಿ.ಎಲ್‌. ನೀಡಲಾಗುತ್ತದೆ. ಡಿ.ಎಲ್‌. ನೀಡಿಕೆ ವಿಚಾರದಲ್ಲಿ ಆರ್‌ ಟಿಒಗೆ ಇರುವ ಅಧಿಕಾರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ,” ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಹೊಸ ಆದೇಶದ ಪ್ರಕಾರ, ಮಾನ್ಯತೆ ಪಡೆದ ಚಾಲನಾ ತರಬೇತಿ ಕೇಂದ್ರಗಳೇ ಚಾಲನಾ…

Read More

ಕೊರಟಗೆರೆ: ಸರಳ ಸಜ್ಜನ ರಾಜಕಾರಣಿ, ನೇರವಾದಿ, ಮಾಜಿ ಶಾಸಕ ಆರ್.ನಾರಾಯಣ್ ರವರ ಪರಮಾಪ್ತ ಶಿಷ್ಯ ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಜಿ.ಎಲ್.ಹನುಮಂತರಾಯಪ್ಪ ನವರು ಹೃದಯಘಾತ ದಿಂದ ಇಂದು ಬೆಳಗ್ಗೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂರು ಬಾರಿ ಬೂದಗವಿ ಗ್ರಾಮ ಪಂಚಾಯಿತಿ ಸದಸ್ಯರಾಗಿ ಸೇವೆ, ಒಂದು ಬಾರಿ ತಾಲ್ಲೂಕು ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಬೆಂಡೋಣಿ ವಿ ಎಸ್ ಎಸ್ ಎನ್ ಮಾಜಿ ನಿರ್ದೇಶಕರಾಗಿಯು ಸೇವೆ ಸಲ್ಲಿಸಿದ್ದಾರೆ. ಸುಮಾರು 30 ವರ್ಷಗಳ ಕಾಲ ಕಾಂಗ್ರೆಸ್ ಪಕ್ಕದಲ್ಲಿ ತೊಡಗಿ ಜನರ ಸೇವೆ ಮಾಡಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪ ಹೊತ್ತ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಜುಲೈ 3ರವರೆಗೆ ವಿಸ್ತರಿಸಿದೆ. ಪ್ರಕರಣದ ಕುರಿತು ವಿಚಾರಣೆ ನಡೆಸಿದ ಸಿಬಿಐ ಮತ್ತು ಇ.ಡಿಯ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು, ವಿಚಾರಣೆಯನ್ನು ಮುಂದೂಡಿದ್ದಾರೆ. ಪ್ರಕರಣ ಸಂಬಂಧ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಕವಿತಾ ಅವರು ಮೇ 15ರಂದು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕವಿತಾ ಅವರ ಜಾಮೀನು ಅರ್ಜಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇ.ಡಿ) ಈಚೆಗೆ ದೆಹಲಿ ಹೈಕೋರ್ಟ್‌ನಲ್ಲಿ ವಿರೋಧಿಸಿದ್ದವು. ಸಿಬಿಐ ಮತ್ತು ಇಡಿ ‘ಕವಿತಾ ಅವರು ಹೆಚ್ಚು ಪ್ರಭಾವಿ ಮತ್ತು ಶಕ್ತಿಯುತರಾಗಿದ್ದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು’ ಎಂದು ಹೇಳಿದ್ದವು. ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಈವರೆಗೆ ದೆಹಲಿ ಮುಖ್ಯಮಂತ್ರಿ…

Read More

ಒಡಿಶಾ: ಮನೆಯಲ್ಲಿ ಒಬ್ಬಳೇ ಇದ್ದ ಏಳು ವರ್ಷದ ಬಾಲಕಿಯ ಮೇಲೆ ದುರ್ಷಕರ್ಮಿಯೊಬ್ಬ ಅತ್ಯಾಚಾರವೆಸಗಿ ಬಳಿಕ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರ ನಡೆದ ಕೊನೆ ಹಂತದ ಲೋಕಸಭಾ ಚುನಾವಣೆಗೆ ಮತದಾನ ಮಾಡಲು ಪೋಷಕರು ಮತಗಟ್ಟೆಗೆ ತೆರಳಿದ್ದರು. ಈ ವೇಳೆ ಬಾಲಕಿಯೊಬ್ಬಳೇ ಮನೆಯಿದ್ದ ವಿಷಯ ತಿಳಿದ 23 ವರ್ಷದ ಆರೋಪಿ ಆಕೆಯನ್ನು ನದಿಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಬಳಿಕ ಕತ್ತು ಹಿಸುಕಿ ಹತ್ಯೆಗೈದಿದ್ದಾನೆ. ಮನೆಯಲ್ಲಿ ಇಲ್ಲದ ಬಾಲಕಿಗಾಗಿ ಪೋಷಕರು ಹುಡುಕಾಟ ನಡೆಸಿದ್ದಾರೆ. ಭಾನುವಾರ ಬಾಲಕಿಯ ಶವ ನದಿ ಸಮೀಪ ಪತ್ತೆಯಾಗಿದ್ದು ಕೂಡಲೇ ಗ್ರಾಮಸ್ಥರು ಪೊಲೀಸರು ಮಾಹಿತಿ ನೀಡಿದ್ದಾರೆ ಹಾಗೂ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 376ಎಬಿ (ಅತ್ಯಾಚಾರ) ಮತ್ತು 302(ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More